Road Accident | ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ - Vistara News

ಕ್ರೈಂ

Road Accident | ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ವ್ಯಕ್ತಿಯೊಬ್ಬ ಕಾರಿಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು (Road Accident) ಇಬ್ಬರು ತೀವ್ರ ಗಾಯಗೊಂಡ ಘಟನೆ ನಡೆದಿದೆ. ಅಪಘಾತಕ್ಕೆ ಅವೈಜ್ಞಾನಿಕ ರಸ್ತೆ ಡಿವೈಡರ್ ಅಳವಡಿಕೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

VISTARANEWS.COM


on

sigandur Car collides
ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ (Road Accident) ಪರಿಣಾಮ ಕಾರು ಚಾಲಕನ ಸಹಿತ ವ್ಯಕ್ತಿಯೊಬ್ಬ ತೀವ್ರಗಾಗಿ ಗಾಯಗೊಂಡ ಘಟನೆ ಶುಕ್ರವಾರ (ಡಿ.೨೩) ರಾತ್ರಿ 9 ಗಂಟೆ ಸುಮಾರಿಗೆ ಸಂಭವಿಸಿದೆ.

ಹೊಸನಗರ ಪಟ್ಟಣದ ಮಾವಿನಕೊಪ್ಪದಲ್ಲಿ ಕೃಷಿ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿ ಖಾಸಗಿ ಬಸ್‌ನಿಂದ ಇಳಿದು ಕಾರಿಗೆ ಅಡ್ಡ ಬಂದ ಕಾರಣ ಚಾಲಕನಿಗೆ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ.

ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ (45) ಕಾರಿಗೆ ಅಡ್ಡ ಬಂದ ವ್ಯಕ್ತಿ. ಚಿತ್ರದುರ್ಗ ಜಿಲ್ಲೆ ಭೀಮಸಮುದ್ರ ಮೂಲಕ ಕೆಎ-16-ಸಿ-9400 ಸ್ವಿಫ್ಟ್ ಕಾರು ಸಿಗಂದೂರು ದೇವಿ ದರ್ಶನ ಮಾಡಿ ವಾಪಸಾಗುವ ವೇಳೆ ಘಟನೆ ಸಂಭವಿಸಿದೆ.

ಇದನ್ನೂ ಓದಿ | Web series | ಛಾಪಾ ಹಗರಣ ಆರೋಪಿ ತೆಲಗಿ ಬದುಕಿನ ಕಥೆ ಹೇಳುವ ಸ್ಕ್ಯಾಮ್‌ 2003 ವೆಬ್‌ ಸೀರಿಸ್‌ ತಡೆಗೆ ಕೋರ್ಟ್‌ ನಕಾರ

ಕಾರು ಚಾಲಕ ಚಂದ್ರಪ್ಪ ಅವರ ತಲೆಗೆ ಪೆಟ್ಟಾಗಿದ್ದು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಕಾರಿಗೆ ಅಡ್ಡಬಂದ ವ್ಯಕ್ತಿ ಶೇಖರ್ ಅವರ ತಲೆಗೆ ತೀವ್ರ ತರಹದ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ರವಾನಿಸಲಾಗಿದೆ.

ಅಪಘಾತಕ್ಕೆ ಅವೈಜ್ಞಾನಿಕ ರಸ್ತೆ ಡಿವೈಡರ್ ಅಳವಡಿಕೆ ಹಾಗೂ ಸೂಕ್ತ ಸೂಚನಾ ಫಲಕ ಇಲ್ಲದಿರುವುದು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Road accident | ತುಮಕೂರು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಅರ್ಚಕ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Road Accident : ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳಿ ಮನೆಗೆ ವಾಪಸ್‌ ಆಗುವಾಗ ದಂಪತಿ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಇತ್ತ ಉಡುಪಿಯಲ್ಲಿ ಏಕಾಏಕಿ ಕಾರೊಂದು ಹೊತ್ತಿ ಉರಿದಿದೆ.

VISTARANEWS.COM


on

By

Road Accident A huge tree fell on the bike Riders are serious
Koo

ಕಾರವಾರ/ಉಡುಪಿ: ಭಾರಿ ಮಳೆ ಎಫೆಕ್ಟ್‌ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಬೃಹತ್ ಮರ (Road Accident) ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಘಟನೆ ನಡೆದಿದೆ. ಅನಿಲಗೋಡ ಗ್ರಾಮದ ಸವಾರ ಬಾಬು ನಾಯ್ಕ(52), ಭಾಗೀರಥಿ ನಾಯ್ಕ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಈ ದಂಪತಿ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಏಕಾಏಕಿ ಬೃಹತ್‌ ಮರವು ಇವರಿಬ್ಬರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಕೂಡಲೇ ಸ್ಥಳೀಯರು ಹಾಗೂ ಭಟ್ಕಳದ ಬಿಜೆಪಿ ಮುಖಂಡರು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Accident Car Fire

ತಡರಾತ್ರಿ ಹೊತ್ತಿ ಉರಿದ ಕಾರು

ತಡರಾತ್ರಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಉಡುಪಿಯ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ಘಟನೆ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ರಿಡ್ಜ್ ಕಾರು ಬೆಂಕಿಗಾಹುತಿ ಆಗಿದೆ. ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕಾರಿನ ಬಾನೆಟ್‌ನಲ್ಲಿ ಹೊಗೆ ಕಂಡು ಕಾರು ಚಾಲಕ ಹೊರಬಂದಿದ್ದು, ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಮಾಲೀಕನ ಮಾಹಿತಿ ಮೇಲೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

ಹಾವೇರಿ: ಬ್ಯಾಡಗಿಯಲ್ಲಿ (Haveri Accident) ಇಂದು ಮುಂಜಾನೆ 13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ (Road Accident) ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ವಾಹನದ ಪೂಜೆಗಾಗಿ (Vehicle Puja) ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿತ್ತು.

ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು.

ಟಿಟಿ ವಾಹನ ಖರೀದಿಸಿ ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು. ಸೋಮವಾರದಿಂದ ದೇವರ ದರ್ಶನಕ್ಕೆ ಹೊರಟಿದ್ದ ಆದರ್ಶ, ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್‌ನಲ್ಲಿ ವಾಹನ ಪೂಜೆ ಮಾಡಿಸಿ ಪೂಜೆ ಪೋಟೋಗಳನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಾಹನ ಛಿದ್ರಛಿದ್ರವಾಗಿದೆಯಲ್ಲದೆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ನಂಬರ್ ಕೆಎ 51 ಡಿ3530ಗೆ ಟಿಟಿ ವಾಹನ ಸಂಖ್ಯೆ ಕೆಎ01 ಎಬಿ4760 ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಚಾಲಕ ಆದರ್ಶ ಇದಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಬಹುಶಃ ಲಾರಿ ಕಾಣಿಸಿರಲಾರದು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆದರು. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಟಿಟಿ ವಾಹನದಲ್ಲಿ 17 ಜನ ಪ್ರಯಾಣ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.

13 ಜನರ ಸಾವಿನ ಸುದ್ದಿ ಕೇಳಿ ಎಮ್ಮೆಹಟ್ಟಿ ಗ್ರಾಮದ ಜನತೆ ಶಾಕ್ ಆಗಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ವಿಶಾಲಾಕ್ಷಮ್ಮ, ಆದರ್ಶ್, ನಾಗೇಶ್, ಭಾಗ್ಯ, ಮಾನಸ, ಸುಭದ್ರತಾಯಿ ಮೂಲತಃ ಎಮ್ಮೆಹಟ್ಟಿ ಗ್ರಾಮದವರು. ಪರಶುರಾಮ್, ರೂಪ ದಂಪತಿಗಳು ಶಿವಮೊಗ್ಗ ನಗರದ ಹಾಲ್ಕೋಳ ನಿವಾಸಿಗಳು. ಮಂಜುಳಬಾಯಿ, ಮಂಜುಳ ಭದ್ರಾವತಿ ತಾಲೂಕಿನ ಕಲ್ಯಾಳ್ ಸರ್ಕಲ್‌ನವರು. ಅಂಜು ಕಡೂರು ತಾಲೂಕಿನ ಬೀರೂರು ನಿವಾಸಿ. ಪುಣ್ಯ ಬಾಯಿ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಹಾಲಿನ ಡೈರಿ ಗ್ರಾಮದ ನಿವಾಸಿ.

ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಮ್ಮೆಹಟ್ಟಿ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

POCSO Case: ಪೋಕ್ಸೊ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌; ಮುಂದೇನು?

POCSO Case: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

VISTARANEWS.COM


on

POCSO Case
Koo

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ. ಈ ನಡುವೆ, ಯಡಿಯೂರಪ್ಪ ಅವರು ಈ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಹೈಕೋರ್ಟ್‌ ಏನು ತೀರ್ಪು ನೀಡಲಿದೆ ಎಂಬುದರ ಕುರಿತು ಭಾರಿ ಕುತೂಹಲ ಮೂಡಿದೆ.

ಸಿಐಡಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯಕ್‌ ಅವರು ನ್ಯಾಯಾಲಯಕ್ಕೆ ದೋಷಾರೋ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್‌ ಶೀಟ್ ಸಲ್ಲಿಕೆ‌ ವೇಳೆ ನ್ಯಾಯಾಲಯವು ಆರೋಪ ಪಟ್ಟಿ ಸ್ವೀಕರಿಸಲು ವ್ಯಾಪ್ತಿ ಹೊಂದಿರುವ ಕುರಿತು ತಿಳಿಸುವಂತೆ ಸೂಚಿಸಿತ್ತು. ಆಗ ಎಸ್‌ಪಿಪಿ ನಾಯಕ್‌ ಅವರು ʼಪೋಕ್ಸೊ ನ್ಯಾಯಾಲಯವು ಅಪರಾಧ ಕೇಂದ್ರಿತ ನ್ಯಾಯಾಲಯ ಎಂದು ಪರಿಗಣಿಸಲ್ಪಡುತ್ತದೆ. ಜನಪ್ರತಿನಿಧಿಗಳ ನ್ಯಾಯಾಲಯವು ಆರೋಪಿ ಕೇಂದ್ರಿತ ನ್ಯಾಯಾಲಯವಾಗುತ್ತದೆ. ಹೀಗಾಗಿ, ಆರೋಪಪಟ್ಟಿಯನ್ನು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಸಲ್ಲಿಕೆ ಮಾಡುವ ಅಗತ್ಯವಿಲ್ಲ ಎಂದು ವಾದಿಸಿದ್ದರು. ಇದನ್ನು ಆಲಿಸಿದ ಪೀಠವು ಆರೋಪ ಪಟ್ಟಿ ಸ್ವೀಕರಿಸಿದ್ದು, ಅದನ್ನು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮಂಡಿಸುವಂತೆ ಆದೇಶಿಸಿದೆ.

ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ.

ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಇದನ್ನೂ ಓದಿ | Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

Continue Reading

ಕ್ರೈಂ

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Actor Darshan: ದರ್ಶನ್ ಅವರೇ ಈಗ ಅಭಿಮಾನಿಗಳಿಗೆ ಪರಪ್ಪನ ಅಗ್ರಹಾರಕ್ಕೆ ಬರಬೇಡಿ ಎಂದು ವಿಶೇಷ ಮನವಿ ಮಾಡಿದ್ದಾರೆ. ಹೀಗಿದ್ದರೂ ದರ್ಶನ್ ಭೇಟಿಗೆ ಯುವತಿವೊಬ್ಬಳು ಆಗಮಿಸಿದ್ದಳು. ಮಾಸ್ಕ್ ಧರಿಸಿ ಜೈಲು ಬಳಿ ಬಂದು , ಬಳಿಕ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಾಪಸ್ಸು ಹೋಗಿದ್ದಾರೆ.

VISTARANEWS.COM


on

Actor Darshan A young woman came to Parappa Agrahara to see Darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಅವರು ಪರಪ್ಪನ ಅಗ್ರಹಾರದಲ್ಲಿದ್ದಾರೆ. ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ. ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ.ಹೀಗಾಗಿ ದರ್ಶನ್ ಅವರೇ ಈಗ ಅಭಿಮಾನಿಗಳಿಗೆ ಪರಪ್ಪನ ಅಗ್ರಹಾರಕ್ಕೆ ಬರಬೇಡಿ ಎಂದು ವಿಶೇಷ ಮನವಿ ಮಾಡಿದ್ದಾರೆ. ಹೀಗಿದ್ದರೂ ದರ್ಶನ್ ಭೇಟಿಗೆ ಯುವತಿವೊಬ್ಬಳು ಆಗಮಿಸಿದ್ದಳು. ಮಾಸ್ಕ್ ಧರಿಸಿ ಜೈಲು ಬಳಿ ಬಂದು , ಬಳಿಕ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಾಪಸ್ಸು ಹೋಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಬಳಿ ಯುವತಿ ದರ್ಶನ್‌ ನೋಡಲು ಆಗಮಿಸಿದ್ದಳು. ಬ್ಲೂ ಕಲರ್ ಹುಂಡೈ ಕ್ರೆಟಾ ಕಾರಿನಲ್ಲಿ ಆಗಮಿಸಿದ್ದ ಯುವತಿ, ಕ್ಯಾಮೆರಾ ನೋಡುತ್ತಿದ್ದಂತೆ ವಾಪಸ್ಸು ಆಗಿದ್ದಾರೆ. ʻʻದರ್ಶನ್ ಸರ್ ನಮ್ಮ ಕುಟುಂಬದವರು. ಅವರನ್ನು ನೋಡಲು ಬಂದಿದ್ದೆ. ಜೈಲು ಅಧಿಕಾರಿಗಳು ಅವಕಾಶ ನೀಡುವುದಿಲ್ಲʼʼ ಎಂದರು ಯುವತಿ. ಹೆಸರನ್ನು ಎಲ್ಲಿಯೂ ಹೇಳಿಕೊಂಡಿಲ್ಲ.

ದರ್ಶನ್‌ನಿಂದ ವಿಶೇಷ ಮನವಿ!

ದರ್ಶನ್‌ ಹೇಳಿದ್ದು ಹೀಗೆ ʻʻಅಭಿಮಾನಿಗಳು ಯಾರು ಕೂಡ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು. ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು. ಅದರಲ್ಲೂ ನಿನ್ನೆ ವಿಶೇಷ ಚೇತನ ಯುವತಿ ಸೌಮ್ಯ ಭೇಟಿಗೆ ಆಗಮಿಸಿದ್ದು ಕೂಡ ಬೇಸರ ತಂದಿದೆʼʼಎಂದು ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

ಇತ್ತೀಚೆಗೆ ಸೌಮ್ಯ ಹೆಸರಿನ ವಿಶೇಷ ಚೇತನ ಯುವತಿ ದರ್ಶನ್ ಭೇಟಿಗೆ ಬಂದಿದ್ದರು. ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಹಠ ಮಾಡಿದ್ದರು. ಇದನ್ನು ಕೇಳಿ ದರ್ಶನ್ ಬೇಸರಗೊಂಡಿದ್ದಾರೆ. ಅನ್ನ ಆಹಾರ ಸೇವಿಸದೇ ಹಠ ಮಾಡಿದ್ದರು ಸೌಮ್ಯ. ನಟ ದರ್ಶನ್ ‌ಕೊಡಿಸಿದ್ದ ಆಟೋದಲ್ಲಿ ಪೋಷಕರ ಜತೆ ಸೌಮ್ಯ ಆಗಮಿಸಿದ್ದರು. ಸೌಮ್ಯ ಜೈಲಿನ ಬಳಿ ಆಗಮಿಸಿದ್ದ ವಿಚಾರ ತಿಳಿದು ದರ್ಶನ್ ಬೇಸರಗೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಎಂಬ ವಿಶೇಷ ಚೇತನ ಕೂಡ ಆಗಮಿಸಿದ್ದ.ತ್ರಿ ವೀಲರ್ ಬೈಕ್‌ನಲ್ಲಿ ವಿಶೇಷ ಚೇತನ ಆಗಮಿಸಿದ್ದ . ಈ ಎಲ್ಲಾ ವಿಚಾರ ತಿಳಿದು ಅಭಿಮಾನಿಗಳ ಬಳಿ ದರ್ಶನ್ ಈ ರೀತಿ ಮನವಿ ಮಾಡಿದ್ದಾರೆ.

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನ ಸೆರೆವಾಸ ಏಳನೇ ದಿನಕ್ಕೆ ಕಾಲಿಟ್ಟಿದೆ. ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ಕುಡಿದು ದರ್ಶನ್‌ ತಡವಾಗಿ ನಿದ್ರೆಗೆ ಜಾರಿದರು. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರಗೊಂಡು ಎಂದಿನಂತೆ ಬಿಸಿನೀರು ಸೇವಿಸಿದ್ದಾರೆ ದರ್ಶನ್‌. ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

Actor Darshan: ಪೊಲೀಸ್ ಕಸ್ಟಡಿಯಲ್ಲಿದ್ದಾಗ , ತಾಯಿ ಮೀನಾ ಆಗಲಿ, ತಮ್ಮ ದಿನಕರ್ ಆಗಲಿ ದರ್ಶನ್ ನೋಡಲು ಬಂದಿರಲಿಲ್ಲ. ಆ ಸಮಯದಲ್ಲಿ ಬೇಡ ಅಂತ ತಾಯಿ, ತಮ್ಮ ಸುಮ್ಮನಾಗಿದ್ರೋ ಏನೋ ಗೊತ್ತಿಲ್ಲ. ಆದರೆ ಈಗ ದರ್ಶನ್‌ ಅವರು ನ್ ತಾಯಿ ಕನವರಿಕೆ ಮಾಡ್ತಿದ್ದಾರಂತೆ. ಹೀಗಾಗಿ ತಾಯಿ ಮತ್ತು ತಮ್ಮನಿಗೆ ಮಾತ್ರ ಎಂಟ್ರಿ ಕೊಡಿ ಎಂದು ದರ್ಶನ್‌ ಮನವಿ ಮಾಡಿದ್ದಾರೆ.

VISTARANEWS.COM


on

Actor Darshan In Central Jail remembering mother and son
Koo

ಬೆಂಗಳೂರು:  ಪಟ್ಟಣಗೆರೆ ಶೆಡ್‌ನಲ್ಲಿ (Pattanagere Shed) ನಡೆದ ರೇಣುಕಾ ಸ್ವಾಮಿ ಹತ್ಯೆಯ (Renuka Swamy Murder) ವಿವರಗಳು ಇನ್ನೂ ಒಂದೊಂದಾಗಿ ಹೊರಬೀಳುತ್ತಿವೆ. ಜತೆಗೆ ನಟ ದರ್ಶನ್ ಅವರು ಜೈಲಿಗೆ ಹೋಗುತ್ತಿದ್ದಂತೆ ತಾಯಿ, ತಮ್ಮನ ನೆನಪು ಮಾಡಿಕೊಂಡಿದ್ದರಂತೆ. ದರ್ಶನ್ ಜೈಲು ಸೇರಿ ವಾರ ಕಳೆಯುತ್ತ ಬಂದಿದೆ. ಜೈಲಲ್ಲಿ ಒಂಟಿಯಾಗಿರುವ ದರ್ಶನ್‌ಗೆ ತಾಯಿ ಮತ್ತು ತಮ್ಮನ ನೆನಪಾಗಿದ್ಯಂತೆ.

ವಾರದಲ್ಲಿ ಎರಡು ಬಾರಿ ದರ್ಶನ್‌ ಅವರನ್ನು ಮಾತನಾಡಿಸಬಹುದು. ಈಗಾಗಲೇ ದರ್ಶನ್ ಪತ್ನಿ ಮತ್ತು ಪುತ್ರ ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದಾರೆ. ಇದಾದ ನಂತರ ದರ್ಶನ್ ಬೇರೆ ಯಾರನ್ನೂ ನೋಡಲು ಮನಸ್ಸು ಮಾಡ್ತಿಲ್ಲ. ಆದರೆ ತಾಯಿ,ತಮ್ಮ ಬಂದರೆ ಮಾತ್ರ ಅವಕಾಶ ನೀಡಿ ಎಂದು ಜೈಲು ಅಧಿಕಾರಿಗಳ ಬಳಿ ಕೇಳಿಕೊಂಡಿದ್ದಾರಂತೆ. ದರ್ಶನ್ ಈ ಪ್ರಕರಣಕ್ಕೂ ಮುನ್ನ ತಾಯಿ ಮತ್ತು ತಮ್ಮನಿಂದ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿತ್ತು.

ಪೊಲೀಸ್ ಕಸ್ಟಡಿಯಲ್ಲಿದ್ದಾಗ , ತಾಯಿ ಮೀನಾ ಆಗಲಿ, ತಮ್ಮ ದಿನಕರ್ ಆಗಲಿ ದರ್ಶನ್ ನೋಡಲು ಬಂದಿರಲಿಲ್ಲ. ಆ ಸಮಯದಲ್ಲಿ ಬೇಡ ಅಂತ ತಾಯಿ, ತಮ್ಮ ಸುಮ್ಮನಾಗಿದ್ರೋ ಏನೋ ಗೊತ್ತಿಲ್ಲ. ಆದರೆ ಈಗ ದರ್ಶನ್‌ ಅವರು ನ್ ತಾಯಿ ಕನವರಿಕೆ ಮಾಡ್ತಿದ್ದಾರಂತೆ. ಹೀಗಾಗಿ ತಾಯಿ ಮತ್ತು ತಮ್ಮನಿಗೆ ಮಾತ್ರ ಎಂಟ್ರಿ ಕೊಡಿ ಎಂದು ದರ್ಶನ್‌ ಮನವಿ ಮಾಡಿದ್ದಾರೆ.

Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!ಇದನ್ನೂ ಓದಿ:

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದಿದ್ದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದರು.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದ್ದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದಿದ್ದರು.

Continue Reading
Advertisement
Dhanya Ramkumar heroine in choukidaar cinema
ಸ್ಯಾಂಡಲ್ ವುಡ್5 mins ago

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Road Accident A huge tree fell on the bike Riders are serious
ಉತ್ತರ ಕನ್ನಡ7 mins ago

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Viral Video
Latest13 mins ago

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

US Presidential Election
ವಿದೇಶ14 mins ago

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

Paris olympics 2024
ಕ್ರೀಡೆ14 mins ago

Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

Viral Video
ವೈರಲ್ ನ್ಯೂಸ್19 mins ago

Viral Video: ಐಸ್‌ ಕ್ರೀಂನಲ್ಲಿ ಮನುಷ್ಯನ ಬೆರಳು! ತನಿಖೆಯಲ್ಲಿ ಬಯಲಾಯ್ತು ಭಯಾನಕ ಸತ್ಯ

Kalki 2898 AD 2
ಸಿನಿಮಾ22 mins ago

Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

Bigg Boss OTT 3 Armaan Malik both Kritika Malik and Payal Malik in bigg bos house
ಬಾಲಿವುಡ್25 mins ago

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

CM Siddaramaiah
ಕರ್ನಾಟಕ32 mins ago

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

petrol Price
ಪ್ರಮುಖ ಸುದ್ದಿ42 mins ago

Petrol Price : ಮುಂಬೈನಲ್ಲಿ ಪೆಟ್ರೋಲ್​ ಬೆಲೆ ಇಳಿಸಿದ ಮಹಾರಾಷ್ಟ್ರ ಸರ್ಕಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌