Actor Aditya | ನಟ ಆದಿತ್ಯ ಅಭಿನಯದ ʻಟೆರರ್‌ʼ ಫಸ್ಟ್‌ ಲುಕ್‌, ಕ್ಯಾರೆಕ್ಟರ್ ಟೀಸರ್ ಔಟ್‌! - Vistara News

ಸಿನಿಮಾ

Actor Aditya | ನಟ ಆದಿತ್ಯ ಅಭಿನಯದ ʻಟೆರರ್‌ʼ ಫಸ್ಟ್‌ ಲುಕ್‌, ಕ್ಯಾರೆಕ್ಟರ್ ಟೀಸರ್ ಔಟ್‌!

ಜನವರಿಯಲ್ಲಿ ಆದಿತ್ಯ (Actor Aditya ) ಅಭಿನಯದ ʻಟೆರರ್‌ʼ ಚಿತ್ರಕ್ಕೆ ಮುಹೂರ್ತ ನಡೆಯಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ.

VISTARANEWS.COM


on

Actor Aditya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಸ್ಯಾಂಡಲ್‌ವುಡ್‌ ನಟ ಆದಿತ್ಯ (Actor Aditya ) ನಾಯಕನಾಗಿ ನಟಿಸುತ್ತಿರುವ ‘ಟೆರರ್‌’ ಫಸ್ಟ್‌ ಲುಕ್‌ ಬಿಡುಗಡೆಗೊಂಡಿದೆ. ಜತೆಗೆ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ರಿಲೀಸ್‌ ಆಗಿದೆ. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ರಂಜನ್‌ ಶಿವರಾಮ ಗೌಡ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಆದಿತ್ಯ ಅವರ ರಗಡ್‌ ಲುಕ್‌ಗೆ ಅವರ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಅಭಿನಯದ ʻAʼ ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ | Actor Prabhas | ಪ್ರಭಾಸ್‌ ನಟನೆಯ ಆದಿಪುರುಷ್‌ ಟೀಸರ್‌ ಲಾಂಚ್‌ ಮಾಡಲಿದ್ದಾರಾ ಯೋಗಿ ಆದಿತ್ಯನಾಥ್‌?

ಈ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಹೊರಹೊಮ್ಮಲಿದ್ದಾರೆ ಆದಿತ್ಯ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದ್ದಾರೆ. 

ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ ʻಟೆರರ್ʼ ಚಿತ್ರಕ್ಕಿರಲಿದೆ.

ಇದನ್ನೂ ಓದಿ | Kannada New Movie | ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ʻತೂತು ಮಡಿಕೆʼ ಖ್ಯಾತಿಯ ಚಂದ್ರ ಕೀರ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ನಟ ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ; ಕ್ರಮಕ್ಕೆ ಮುಂದಾದ ಬಿಬಿಎಂಪಿ

Actor Darshan: ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಈ ಹಿಂದೆ ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಮನೆ ತೆರವಿಗೆ ಸರ್ಕಾರದಿಂದ ಮೈಖಿಕ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ಮನೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

actor darshan yashas surya

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

actor darshan yashas surya

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

Continue Reading

ಸಿನಿಮಾ

Actor Darshan: ನನ್ನ ಗುರು ದರ್ಶನ್ ಈ ಕೃತ್ಯ ಎಸಗಿದ್ದಾರೆಂದರೆ ನಂಬಲಾಗುತ್ತಿಲ್ಲ; ರಚಿತಾ ರಾಮ್

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಪೊಲೀಸ್‌ ವಿಚಾರಣೆ ಎದುರಿಸುತ್ತಿದ್ದು, ಸೆಲೆಬ್ರಿಟಿಗಳೂ ಸೇರಿದಂತೆ ಹಲವರು ಅವರ ಪರ-ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ಸೋಷಿಯಲ್‌ ಮೀಡಿಯಾದಲ್ಲಿ ಘಟನೆ ಬಗ್ಗೆ ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Actor Darshan
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder) ನಟ ದರ್ಶನ್‌ (Actor Darshan) ಪೊಲೀಸ್‌ ವಿಚಾರಣೆ ಎದುರಿಸುತ್ತಿದ್ದು, ಸೆಲೆಬ್ರಿಟಿಗಳೂ ಸೇರಿದಂತೆ ಹಲವರು ಅವರ ಪರ-ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸ್ಯಾಂಡಲ್‌ವುಡ್‌ ನಟಿ, ದರ್ಶನ್‌ ಅವರ ʼಬುಲ್‌ಬುಲ್‌ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್‌ (Rachita Ram) ಸೋಷಿಯಲ್‌ ಮೀಡಿಯಾದಲ್ಲಿ ಘಟನೆ ಬಗ್ಗೆ ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ.

ʼʼನಮಸ್ಕಾರʼʼ ಎಂದು ತಮ್ಮ ನೋಟ್‌ ಅನ್ನು ಆರಂಭಿಸಿರುವ ಅವರು ʼʼಇದನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆʼʼ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?

ʼʼಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭವಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆʼʼ ಎಂದು ಹೇಳಿದ್ದಾರೆ.

ಮುಂದುವರಿದು, ʼʼನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆʼʼ ಎಂದು ರಚಿತಾ ರಾಮ್‌ ಬರೆದುಕೊಂಡಿದ್ದಾರೆ.

ರಚಿತಾ ರಾಮ್‌ ಮತ್ತು ದರ್ಶನ್‌ ʼಬುಲ್‌ಬುಲ್‌ʼ, ʼಅಂಬರೀಷʼ, ʼಕ್ರಾಂತಿʼ ಮುಂತಾದ ಚಿತ್ರಗಳಲ್ಲಿ ಜತೆಯಾಗಿ ನಟಿಸಿದ್ದಾರೆ. 2013ರಲ್ಲಿ ತೆರೆಕಂಡ ʼಬುಲ್‌ಬುಲ್‌ʼ ಚಿತ್ರದ ಮೂಲಕ ರಚಿತಾ ರಾಮ್‌ ಸಿನಿರಂಗಕ್ಕೆ ಪರಿಚಿತರಾಗಿದ್ದರು.

ರಮ್ಯಾ ಹೇಳಿದ್ದೇನು?

ಈ ಹಿಂದೆ ಪ್ರಕರಣದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದ ನಟಿ ರಮ್ಯಾ,  “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಹೇಳಿದ್ದರು. “ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ. ನಾನೇ ಒಂದಷ್ಟು ಟ್ರೋಲಿಗರ ವಿರುದ್ಧ ಕೇಸ್‌ ದಾಖಲಿಸಿದ್ದೇನೆ. ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಇವರು ಸಾಮಾಜಿಕ ಜಾಲತಾಣದಲ್ಲಿ ಹೀಗೇಕೆ ಸಮಯ ಹಾಳು ಮಾಡುತ್ತಿದ್ದಾರೆ? ಅವರ ಭವಿಷ್ಯದ ಮೇಲೆಯೇ ಏಕೆ ಕಲ್ಲು ಹಾಕೊಳ್ಳುತ್ತಿದ್ದಾರೆ ಎಂಬುದಾಗಿ ಅನಿಸಿದ್ದಿದೆ” ಎಂದು ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿ ಹಂಚಿಕೊಂಡಿದ್ದರು.

“ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿಗಿಂತ ಯಾರು ದೊಡ್ಡವರಲ್ಲ. ಹಾಗಾಗಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನೀವು ಯಾರನ್ನೋ ಕೊಲ್ಲಬಾರದು. ನೀವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟಿದ್ದೇ ಆದರೆ, ಒಂದು ದೂರು ದಾಖಲಿಸಿ ಅಷ್ಟೆ. ಹಾಗೆಯೇ, ಥ್ಯಾಂಕ್‌ಲೆಸ್‌ ಜಾಬ್‌ ಮಾಡುತ್ತಿರುವ ಪೊಲೀಸರ ಅವಿರತ ಶ್ರಮವನ್ನೂ ನಾವು ಸ್ಮರಿಸಬೇಕಿದೆ ಹಾಗೆಯೇ, ಯಾವುದೇ ರಾಜಕೀಯ ಒತ್ತಡಕ್ಕೆ ಸಿಲುಕದೆ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ” ಎಂದು ರಮ್ಯಾ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಜಸ್ಟಿಸ್‌ ಫಾರ್‌ ರೇಣುಕಾಸ್ವಾಮಿ, ದರ್ಶನ್‌, ಯಡಿಯೂರಪ್ಪ ಹಾಗೂ ಪ್ರಜ್ವಲ್‌ ರೇವಣ್ಣ ಎಂಬ ಹ್ಯಾಶ್‌ಟ್ಯಾಗ್‌ ಅನ್ನೂ ಬಳಸಿದ್ದರು.

ಇದನ್ನೂ ಓದಿ: Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Continue Reading

ಸಿನಿಮಾ

Deepika Padukone: ಅಧಿಕ ಸಂಭಾವನೆ ಪಡೆಯುವ ನಾಯಕಿಯರಲ್ಲಿ ಕನ್ನಡತಿ ದೀಪಿಕಾ ನಂ. 1; ಪ್ರತಿ ಚಿತ್ರಕ್ಕೆ ಇವರು ಎಷ್ಟು ಹಣ ಪಡೆಯುತ್ತಾರೆ?

Deepika Padukone: ಕನ್ನಡತಿ, ಬೆಂಗಳೂರು ಮೂಲದ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ. ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ.

VISTARANEWS.COM


on

Deepika Padukone
Koo

ಮುಂಬೈ: ಕನ್ನಡತಿ, ಬೆಂಗಳೂರು ಮೂಲದ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಗ್ಲಾಮರ್‌ ಪಾತ್ರದಲ್ಲಿಯೂ, ಡಿಗ್ಲಾಮರ್‌ ಆಗಿ ಸಹಜಾಭಿನದಲ್ಲಿಯೂ ಗಮನ ಸೆಳೆಯುತ್ತಾರೆ. ಇದೇ ಕಾರಣಕ್ಕೆ ಇಂದಿಗೂ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು ತಾತ್ಕಾಲಿಕವಾಗಿ ಸಿನಿಮಾ ಚಟುವಟಿಕೆಯಿಂದ ದೂರ ಸರಿಯಲಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ (Highest-Paid Actress) ಪೈಕಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ಪ್ರತಿ ಚಿತ್ರಕ್ಕೆ 15-30 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ ಎಂದು ವರದಿ ತಿಳಿಸಿದೆ.

ಟಾಪ್‌ ನಾಯಕಿಯರು

ಇನ್ನು ಎರಡನೇ ಸ್ಥಾನದಲ್ಲಿ ನಟಿ, ರಾಜಕಾರಣಿ ಕಂಗನಾ ರಾಣಾವತ್‌ ಇದ್ದಾರೆ. 4 ಬಾರಿಯ ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ಪ್ರತಿ ಸಿನಿಮಾಕ್ಕೆ 15-27 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ. ಮೂರನೇ ಸ್ಥಾನದಲ್ಲಿರುವ ಪ್ರಿಯಾಂಕಾ ಚೋಪ್ರಾ ಜೋನಸ್‌ 15-25 ಕೋಟಿ ರೂ. ಸಂಭಾವನೆ ಹೊಂದಿದ್ದಾರೆ ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಉಳಿದಂತೆ ಕತ್ರಿನಾ ಕೈಫ್‌ (15-25 ಕೋಟಿ ರೂ.), ಆಲಿಯಾ ಭಟ್‌ (15-20 ಕೋಟಿ ರೂ.), ಕರೀನಾ ಕಪೂರ್‌ ಖಾನ್‌ (8-18 ಕೋಟಿ ರೂ.), ಶ್ರದ್ಧಾ ಕಪೂರ್‌ (7- 15 ಕೋಟಿ ರೂ.), ವಿದ್ಯಾ ಬಾಲನ್‌ (8-14 ಕೋಟಿ ರೂ.) ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಅನುಷ್ಕಾ ಶರ್ಮಾ ಮತ್ತು ಐಶ್ವರ್ಯಾ ರೈ ಬಚ್ಚನ್‌ ಹೆಸರೂ ಇದೆ. ಅನುಷ್ಕಾ ಶರ್ಮಾ ಪ್ರತಿ ಚಿತ್ರಕ್ಕೆ 8-12 ಕೋಟಿ ರೂ.ಗೆ ಬೇಡಿಕೆ ಇಟ್ಟರೆ, ಐಶ್ವರ್ಯಾ ರೈ ಬಚ್ಚನ್‌ ಸಂಭಾವನೆ 10 ಕೋಟಿ ರೂ. ಎನ್ನಲಾಗಿದೆ. ವಿಶೇಷ ಎಂದರೆ ಟಾಪ್‌ 10 ಪಟ್ಟಿಯಲ್ಲಿ ದಕ್ಷಿಣ ಭಾರತ ಚಿತ್ರರಂಗದ ಯಾವೊಬ್ಬ ನಟಿಯ ಹೆಸರೂ ಇಲ್ಲ.

‘ಕಲ್ಕಿ 2898 ಎಡಿʼ ಚಿತ್ರದ ಮೇಲೆ ನಿರೀಕ್ಷೆ

ಸದ್ಯ ಇಡೀ ಭಾರತೀಯ ಚಿತ್ರರಂಗ ದೀಪಿಕಾ ಅಭಿನಯದ ‘ಕಲ್ಕಿ 2898 ಎಡಿʼ ಸಿನಿಮಾದ ಮೇಲೆ ಕುತೂಹಲದ ಕಣ್ಣು ನೆಟ್ಟಿದೆ. ತೆಲುಗು ಮೂಲದ ಈ ಪ್ಯಾನ್‌ ಇಂಡಿಯಾ ಚಿತ್ರ ಈ ವರ್ಷದ ಅತ್ಯಂತ ದುಬಾರಿ ಸಿನಿಮಾ ಎನಿಸಿಕೊಂಡಿದೆ. ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಜೂನ್‍ 27ರಂದು ಬಿಡುಗಡೆ ಆಗಲಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಮೇಲೆ ಒಂದಾಗಿದ್ದು, ಇತ್ತೀಚೆಗೆ ರಿಲೀಸ್‌ ಆಗಿರುವ ಟ್ರೈಲರ್‌ ಕುತೂಹಲ ಹೆಚ್ಚಿಸಿದೆ. ನಾಗ್‍ ಅಶ್ವಿನ್‍ ನಿರ್ದೇಶನದ ಈ ಸೈನ್ಸ್‌ ಫಿಕ್ಷನ್‌ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಠಾಣಿ ಮತ್ತಿತರರು ನಟಿಸಿದ್ದಾರೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Continue Reading

ಸಿನಿಮಾ

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Amala Paul: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Amala Paul
Koo

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ (Amala Paul) ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌ ಮತ್ತು ಜಗತ್‌ ದೇಸಾಯಿ ಕಳೆದ ನವೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ. ಅಮಲಾ ಪೌಲ್‌ ಮತ್ತು ಜಗನ್‌ ದೇಸಾಯಿ ದಂಪತಿ ಜೂನ್‌ 11ರಂದು ಮಗು ಜನಿಸಿರುವುದಾಗಿ ಹೇಳಿದ್ದಾರೆ. ಜತೆಗೆ ಮಗುವಿಗೆ ಇಳಯ್‌ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಇಳಯ್‌ ಎಂದರೆ ʼʼಸಂತೋಷದ ನಗುವಿನೊಂದಿಗೆ ಬೆಳಗುವ ಉತ್ಸಾಹಭರಿತ ಆತ್ಮʼʼ, ʼʼಶ್ರೇಷ್ಠ” ಮತ್ತು “ದೇವರಂತಹ” ಎಂಬ ಅರ್ಥವಿದೆ.

ʼʼನಮ್ಮ ಮಗ ಇಳಯ್‌ ಜೂನ್‌ 11ರಂದು ಜನಿಸಿದʼʼ ಎಂಬ ಕ್ಯಾಪ್ಶನ್‌ ನೀಡಿ ದಂಪತಿ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಸದ್ಯ ಸೆಲೆಬ್ರಿಟಿಗಳು, ಅಭಿಮಾನಿಗಳು ಇವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಮಲಾ ಪೌಲ್‌ ಮತ್ತು ಉದ್ಯಮಿ ಜಗತ್ ದೇಸಾಯಿ 2023ರ ನವೆಂಬರ್ 5ರಂದು ಕೇರಳದ ಕೊಚ್ಚಿಯಲ್ಲಿ ವಿವಾಹವಾಗಿದ್ದರು. ಅದಾಗಿ ಎರಡನೇ ತಿಂಗಳಿಗೆ ಅಮಲಾ ಪೌಲ್ ತಾನು ಗರ್ಭಿಣಿ ಎನ್ನುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು.

ಅಂದಹಾಗೆ ಇದು ಅಮಲಾ ಪೌಲ್‌ ಅವರಿಗೆ ಎರಡನೇ ವಿವಾಹ. ಇದಕ್ಕೂ ಮೊದಲು ನಿರ್ದೇಶಕ ಎ.ಎಲ್.ವಿಜಯ್ ಅವರೊಂದಿಗೆ ಅಮಲಾ ಪೌಲ್‌ ವಿವಾಹ 2014ರಲ್ಲಿ ಚೆನ್ನೈನಲ್ಲಿ ನೆರವೇರಿತ್ತು. ಆದರೆ ಈ ದಾಂಪತ್ಯ ಹೆಚ್ಚು ಕಾಲ ಉಳಿಯಲಿಲ್ಲ. 2017ರಲ್ಲಿ ಅಮಲಾ ಮತ್ತು ವಿಜಯ್ ವಿಚ್ಛೇದನ ಪಡೆದುಕೊಂಡಿದ್ದರು.

ಬಹುಭಾಷಾ ನಟಿ

ಮಲಯಾಳಂ ಮೂಲದ ಅಮಲಾ ಪೌಲ್‌ ದಕ್ಷಿಣ ಭಾರತದ ಎಲ್ಲ ಚಿತ್ರರಂಗದಲ್ಲಿ ಅಭಿನಯಿಸಿ ಬಹುಭಾಷಾ ನಟಿ ಎನಿಸಿಕೊಂಡೊದ್ದಾರೆ. ಅದರಲ್ಲಿಯೂ ಅವರು ಒಂದು ಕಾಲದಲ್ಲಿ ತಮಿಳು ಚಿತ್ರರಂಗದ ಟಾಪ್‌ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಸೂರ್ಯ, ಮಾಧವನ್‌, ಆರ್ಯ, ಧನುಷ್‌ ಮುಂತಾದ ಸೂಪರ್‌ ಸ್ಟಾರ್‌ಗಳೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು.

ಅಮಲಾ ಅಭಿನಯಿಸಿದ ಮೊದಲ ಚಿತ್ರ ಮಲೆಯಾಳಂನ ʼನೀಲ ತಾಮರʼ. ಇದು 2009ರಲ್ಲಿ ತೆರೆಕಂಡಿತ್ತು. ಬಳಿಕ ಕಾಲಿವುಡ್‌ಗೆ ಕಾಲಿಟ್ಟ ಅವರು 2010ರಲ್ಲಿ ಮೂರು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡರು. ಅದರಲ್ಲಿಯೂ ʼಮೈನಾʼ ಅವರಿಗೆ ಬಹು ಜನಪ್ರಿಯತೆ ತಂದುಕೊಟ್ಟಿತು. ಈ ಚಿತ್ರದಲ್ಲಿನ ನಟನೆಗಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡರು. 2012ರಲ್ಲಿ ʼಲವ್‌ ಫೈಲೂರ್‌ʼ ಸಿನಿಮಾ ಮೂಲಕ ತೆಲುಗಿಗೆ ಕಾಲಿಟ್ಟರು. 2017ರಲ್ಲಿ ಕಿಚ್ಚ ಸುದೀಪ್‌ ಅಭಿನಯದ ʼಹೆಬ್ಬುಲಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೂ ಪ್ರವೇಶಿಸಿದರು. ಕಳೆದ ವರ್ಷ ತೆರೆಕಂಡ ಹಿಂದಿಯ ʼಭೋಲಾʼ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Amala Paul: ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್!

ಇತ್ತೀಚೆಗೆ ತೆರೆಕಂಡ ಪ್ಯಾನ್‌ ಇಂಡಿಯಾ ಸಿನಿಮಾ ʼಆಡು ಜೀವಿತಂʼನಲ್ಲಿ ಅಮಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್‌ ಸುಕುಮಾರನ್‌ ನಾಯಕನಾಗಿದ್ದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಿದೆ.

Continue Reading
Advertisement
Kolar News
ಕೋಲಾರ3 mins ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Actor Darshan
ಕರ್ನಾಟಕ6 mins ago

Actor Darshan: ನಟ ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ; ಕ್ರಮಕ್ಕೆ ಮುಂದಾದ ಬಿಬಿಎಂಪಿ

Reliance Jio Down
ದೇಶ18 mins ago

Reliance Jio Down: ಕರ್ನಾಟಕ ಸೇರಿ ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಪರದಾಟ!

Self Harming
ಕೋಲಾರ33 mins ago

Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

Actor Darshan
ಸಿನಿಮಾ45 mins ago

Actor Darshan: ನನ್ನ ಗುರು ದರ್ಶನ್ ಈ ಕೃತ್ಯ ಎಸಗಿದ್ದಾರೆಂದರೆ ನಂಬಲಾಗುತ್ತಿಲ್ಲ; ರಚಿತಾ ರಾಮ್

renuka swamy murder case by vijayendra g parameshwara
ಕ್ರೈಂ56 mins ago

Renuka Swamy Murder: ರೇಣುಕಾ ಸ್ವಾಮಿ ಮನೆಗೆ ಗೃಹ ಸಚಿವ ಪರಮೇಶ್ವರ್‌, ಪ್ರತಿಪಕ್ಷ ನಾಯಕ ವಿಜಯೇಂದ್ರ ಭೇಟಿ

Igor Stimac sacked
ಕ್ರೀಡೆ1 hour ago

Igor Stimac sacked: ಭಾರತದ ಫುಟ್ಬಾಲ್​ ಕೋಚ್​ ಹುದ್ದೆಯಿಂದ ಸ್ಟಿಮಾಕ್‌ ಕಿಕ್​ ಔಟ್​; ಕಾರಣವೇನು?​

Deepika Padukone
ಸಿನಿಮಾ1 hour ago

Deepika Padukone: ಅಧಿಕ ಸಂಭಾವನೆ ಪಡೆಯುವ ನಾಯಕಿಯರಲ್ಲಿ ಕನ್ನಡತಿ ದೀಪಿಕಾ ನಂ. 1; ಪ್ರತಿ ಚಿತ್ರಕ್ಕೆ ಇವರು ಎಷ್ಟು ಹಣ ಪಡೆಯುತ್ತಾರೆ?

NIA Raid
ಕರ್ನಾಟಕ1 hour ago

NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

Job News
Latest2 hours ago

Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌