Chikkamagaluru News | ಮನೆಯ ಎದುರು ನಿಲ್ಲಿಸುತ್ತಿದ್ದ ಬೈಕ್‌ ಕದಿಯುತ್ತಿದ್ದವನ ಬಂಧನ - Vistara News

ಕ್ರೈಂ

Chikkamagaluru News | ಮನೆಯ ಎದುರು ನಿಲ್ಲಿಸುತ್ತಿದ್ದ ಬೈಕ್‌ ಕದಿಯುತ್ತಿದ್ದವನ ಬಂಧನ

ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳನ್ನು ಕದ್ದೊಯ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕುಖ್ಯಾತ ಬೈಕ್ ಕಳ್ಳನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Bike thief kadur police station
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳನ್ನು ರಾತ್ರೋರಾತ್ರಿ ಎಗರಿಸಿ ಕಡಿಮೆ ಬೆಲೆಗೆ ಮಾರುತ್ತಿದ್ದ ಕುಖ್ಯಾತ ಬೈಕ್ ಕಳ್ಳನನ್ನು ಚಿಕ್ಕಮಗಳೂರು (Chikkamagaluru News ) ಜಿಲ್ಲೆ ಕಡೂರು ಪೊಲೀಸರು ಬಂಧಿಸಿದ್ದಾರೆ.

ಕಡೂರು ತಾಲೂಕಿನ ಶೆಟ್ಟಿಹಳ್ಳಿ ನಿವಾಸ್ ಮೋಹನ್ ಕುಮಾರ್ ಬಂಧಿತ ಆರೋಪಿ. ಈತನಿಂದ ಸುಮಾರು 4 ಲಕ್ಷ ರೂ. ಮೌಲ್ಯದ 11 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಡೂರು ತಾಲೂಕಿನಲ್ಲಿ ತೀವ್ರವಾಗಿ ಬೈಕ್ ಕಳ್ಳತನವಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು. ಖಚಿತ ಮಾಹಿತಿಗೆ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕಡೂರು ಪೊಲೀಸರ ಎದುರು ಆರೋಪಿ ಮೋಹನ್ ತಪ್ಪೊಪ್ಪಿಕೊಂಡಿದ್ದಾನೆ.

ತನಿಖೆಯ ವೇಳೆ, ಕಡೂರು ಅಷ್ಟೇ ಅಲ್ಲದೆ ಬೆಂಗಳೂರು, ತುಮಕೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಬೈಕ್‍ಗಳನ್ನು ಕದ್ದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕಡೂರು ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ‌Talk War | ಸಿ.ಟಿ. ರವಿ ಕಳ್ಳಭಟ್ಟಿ ಕುಡಿದು ಮಾತಾಡುತ್ತಿದ್ದಾರೆ ಎಂದ ಬಿ.ಕೆ. ಹರಿಪ್ರಸಾದ್;‌ ನಾನು ಕೊತ್ವಾಲ್‌ ಶಿಷ್ಯ ಅಲ್ಲ ಎಂದ ರವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Karnataka Rain : ನಿನ್ನೆ ಭಾನುವಾರ ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದ. ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದರು. ಆದರೆ ಸೋಮವಾರದಂದು ಗಾಯಾಳು ಒಬ್ಬ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ (Belgavi News) ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ವಿಠ್ಠಲ ತಳವಾರ ಮೃತ ದುರ್ದೈವಿ.

ಸೋಮನಾಥ್ ಮುಚ್ಚಂಡಿಕರ್, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಈ ಮೂವರು ಯುವಕರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಧರೆಗುರುಳಿ ಬೈಕ್‌ ಮೇಲೆ ಬಿದ್ದಿತ್ತು.

ಮರ ಬಿದ್ದ ರಭಸಕ್ಕೆ ಸೋಮನಾಥ್ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡಿದ್ದ ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಿಠ್ಠಲ್‌ ತಳವಾರ್‌ ತಲೆಗೂ ಗಂಭೀರ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಸಾವು ಬದುಕಿನ ನಡುವೆ ಹೋರಾಡಿದ ವಿಠ್ಠಲ್‌ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.

ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡು ಸ್ವಪ್ನಿಲ್ ದೇಸಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Terror Attack: ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಮೂಲಕ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಚಾಲಕ ದಾಸನೂ ರಾಜ್‌ಬಾಗ್, ಭಯೋತ್ಪಾದಕರು ತನ್ನ ಮೇಲೆ ಬುಲೆಟ್‌ಗಳನ್ನು ಹಾರಿಸಿದಾಗ ಅಪಾರ ಧೈರ್ಯ ತಂದುಕೊಂಡು ಬಸ್ಸನ್ನು ವೇಗವಾಗಿ ಚಲಾಯಿಸಿ ಅಲ್ಲಿಂದ ಪಾರಾಗಲು ಯತ್ನಿಸಿದ.

VISTARANEWS.COM


on

reasi terror attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror Attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಸತ್ತಿದ್ದಾರೆ. ಕ್ರೂರಿ ಭಯೋತ್ಪಾದಕರು (Terrorists) ಪುಟ್ಟ ಮಗುವೆಂದೂ ನೋಡದೆ ಗುಂಡು ಹಾರಿಸಿ ಕೊಂದಿದ್ದಾರೆ. ಈ ನಡುವೆ, ಉಗ್ರರು ಮೈಕೈ ತುಂಬೆಲ್ಲಾ ಗುಂಡು (bullets) ಜಡಿದರೂ ಪ್ರಯಾಣಿಕರನ್ನು (tourists) ಉಳಿಸಲು ಚಾಲಕ (Bus driver) ಯತ್ನಿಸಿದ್ದಾನೆ ಎಂದು ಗೊತ್ತಾಗಿದೆ.

ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಮೂಲಕ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಚಾಲಕ ದಾಸನೂ ರಾಜ್‌ಬಾಗ್, ಭಯೋತ್ಪಾದಕರು ತನ್ನ ಮೇಲೆ ಬುಲೆಟ್‌ಗಳನ್ನು ಹಾರಿಸಿದಾಗ ಅಪಾರ ಧೈರ್ಯ ತಂದುಕೊಂಡು ಬಸ್ಸನ್ನು ವೇಗವಾಗಿ ಚಲಾಯಿಸಿ ಅಲ್ಲಿಂದ ಪಾರಾಗಲು ಯತ್ನಿಸಿದ. ಆದರೆ ಮೈಗೆ ಗುಂಡು ಬಿದ್ದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿತ್ತು. ಘಟನೆಯಲ್ಲಿ ಚಾಲಕನೂ ಮೃತಪಟ್ಟಿದ್ದಾನೆ.

ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಹತ್ತು ಮಂದಿ ಈ ದಾಳಿಯಲ್ಲಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಸ್ಥಳಕ್ಕೆ ತಲುಪಿ ಪೊಲೀಸರಿಗೆ ಸಹಾಯ ಮಾಡುತ್ತಿದೆ. ಭಾನುವಾರದ ದಾಳಿಯ ನಂತರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದಕರನ್ನು ಹುಡುಕಲು ಭದ್ರತಾ ಪಡೆಗಳು ಡ್ರೋನ್‌ಗಳನ್ನು ಬಳಸುತ್ತಿವೆ.

ರಿಯಾಸಿ ದಾಳಿಯ ನಂತರ, ಭಾರತೀಯ ಸೇನೆಯ ಹತ್ತಿರದ ನೆಲೆಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು. ಭದ್ರತಾ ಕ್ರಮಗಳನ್ನು ಬಲಪಡಿಸಲು ವಿವಿಧ ಸ್ಥಳಗಳಿಂದ ಪಡೆಗಳನ್ನು ಕಳುಹಿಸಲಾಗಿದೆ. ಸದ್ಯ ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭಾನುವಾರವೇ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಸೌಲಭ್ಯಗಳಿಗೆ ತ್ವರಿತವಾಗಿ ಸಾಗಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಪ್ರದೇಶವನ್ನು ಸುತ್ತುವರೆದು ತನಿಖೆ ಪ್ರಾರಂಭಿಸಿದರು.

“ಶಿವ್ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದ ಪ್ರಯಾಣಿಕರ ಬಸ್‌ನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಿಂದಾಗಿ ಬಸ್ ಚಾಲಕನ ಸಮತೋಲನ ತಪ್ಪಿ ಬಸ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಪ್ರಯಾಣಿಕರ ಗುರುತು ಇನ್ನೂ ದೃಢಪಟ್ಟಿಲ್ಲ. ಅವರು ಸ್ಥಳೀಯರಲ್ಲ. ಶಿವ ಖೋರಿ ದೇವಾಲಯವನ್ನು ಭದ್ರಪಡಿಸಲಾಗಿದೆ” ಎಂದು ರಿಯಾಸಿಯ ಎಸ್‌ಎಸ್‌ಪಿ ಮೋಹಿತಾ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಕೇಳಿಕೊಂಡಿದ್ದಾರೆ. “ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿಯ ಘಟನೆಯಿಂದ ಆಳವಾದ ನೋವಾಗಿದೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಡಿಜಿಪಿ ಜೊತೆ ಘಟನೆಯ ಬಗ್ಗೆ ವಿಚಾರಿಸಿದ್ದೇನೆ. ಈ ಭೀಕರ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ದಾಳಿಕೋರರು ಕಾನೂನಿನ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಲ್ಲಾ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಘಟನೆಯನ್ನು ‘ಹೇಡಿತನ’ ಎಂದು ಕರೆದಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಆತಂಕಕಾರಿ ಭದ್ರತಾ ಪರಿಸ್ಥಿತಿಯ ನೈಜ ಚಿತ್ರಣವನ್ನು ಈ ಘಟನೆ ತೆರೆದಿಡುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Continue Reading

ಕ್ರೈಂ

Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

Assault Case: ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್‌ನಲ್ಲಿ ನಿನ್ನೆ ಸಂಜೆ ನಡೆದಿದೆ. ಆಂಬ್ಯುಲೆನ್ಸ್‌ ಅತಿ ವೇಗವಾಗಿ ಓಡಿಸ್ತಿದೀಯಾ ಎಂದು ಕೆಣಕಿ ಕಾರಿನಲ್ಲಿದ್ದ ನಾಲ್ವರಿಂದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕನ ಬಟ್ಟೆ ಹರಿದುಹಾಕಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

VISTARANEWS.COM


on

road rage assault case
ಆಂಬ್ಯುಲೆನ್ಸ್‌ ತಡೆದು ಹಲ್ಲೆ ನಡೆಸಿದ ಪುಂಡರು
Koo

ಬೆಂಗಳೂರು: ರೋಡ್‌ ರೇಜ್‌ (Road Rage) ಆಯ್ತು, ರಸ್ತೆಯಲ್ಲೇ ಹಲ್ಲೆ ಆಯ್ತು. ಇದೀಗ ಪುಂಡರು ತುರ್ತು ಚಿಕಿತ್ಸೆಗೆ (Emergency) ತೆರಳುತ್ತಿದ್ದ ಆಂಬ್ಯುಲೆನ್ಸ್‌ (Ambulance) ಅನ್ನೂ ಬಿಟ್ಟಿಲ್ಲ. ಸೈರನ್‌ ಹಾಕಿಕೊಂಡು ಧಾವಿಸುತ್ತಿದ್ದ ಆಂಬ್ಯುಲೆನ್ಸನ್ನೂ ಚೇಸ್‌ ಮಾಡಿ, ಅಡ್ಡಗಟ್ಟಿ, ಉಸಿರಾಟದ ತೊಂದರೆ ಇರೋ ಮಗುವಿದೆ ಬಿಟ್ಬಿಡಿ ಎಂದು ಬೇಡಿಕೊಂಡರೂ ಕೇಳದೆ ಡ್ರೈವರ್‌ ಮೇಲೆ ಹಲ್ಲೆ (Assault Case) ನಡೆಸಿದ್ದಾರೆ.

ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್‌ನಲ್ಲಿ ನಿನ್ನೆ ಸಂಜೆ ನಡೆದಿದೆ. ಆಂಬ್ಯುಲೆನ್ಸ್‌ ಅತಿ ವೇಗವಾಗಿ ಓಡಿಸ್ತಿದೀಯಾ ಎಂದು ಕೆಣಕಿ ಕಾರಿನಲ್ಲಿದ್ದ ನಾಲ್ವರಿಂದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕನ ಬಟ್ಟೆ ಹರಿದುಹಾಕಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬ್ಯುಲೆನ್ಸ್ ಬರುತ್ತಿತ್ತು. ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗಾಗಿ, ಆಕ್ಸಿಜನ್ ಹಾಕಿಸಿ ಕರೆ ತರಲಾಗುತ್ತಿತ್ತು. KA01 MJ9996 ನಂಬರಿನ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ವಿನಾಕಾರಣ ಆಂಬ್ಯುಲೆನ್ಸ್‌ ಚಾಲಕನನ್ನು ಕೆಣಕಿದ್ದಾರೆ. ಐದಾರು ಕಿಲೋಮೀಟರ್ ಚೇಸ್ ಮಾಡಿಕೊಂಡು ಬಂದು, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಅಡ್ಡಗಟ್ಟಿ ಏಕಾಏಕಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಮಗುವಿನ ಕಂಡಿಷನ್ ಕ್ರಿಟಿಕಲ್ ಇದೆ, ಬಿಟ್ಬಿಡಿ ಎಂದು ಮಗುವಿನ ಪೋಷಕರು ಕೈ ಮುಗಿದರೂ ಕ್ರೂರಿ ಪುಂಡರು ಬಿಡಲಿಲ್ಲ. ಚಾಲಕನಿಗೆ ಥಳಿಸಿ ಆಂಬ್ಯುಲೆನ್ಸ್ ಕೀ ಕಿತ್ತುಕೊಂಡು ಗಲಾಟೆ ಮಾಡಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಗಲಾಟೆ ತಡೆದು ಆಂಬ್ಯುಲೆನ್ಸ್ ಅನ್ನು ಆಸ್ಪತ್ರೆಗೆ ಕಳಿಸಿದ್ದಾರೆ. ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿ ಇಂದು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಬಳಿ ಆಂಬ್ಯೂಲೆನ್ಸ್ ಚಾಲಕರು ಪ್ರತಿಭಟಿಸುವ ಸಾಧ್ಯತೆ ಇದೆ.

ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿಯಾಗಿ (Road Accident) ಸ್ಥಳದಲ್ಲೆ ಓರ್ವ ಮೃತಪಟ್ಟರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಡೊಂಗರಗಾಂವ್ ಬಳಿ ಘಟನೆ ನಡೆದಿದೆ. ಹರಕಂಚಿ ಗ್ರಾಮದ ಕೂಲಿ ಕಾರ್ಮಿಕ ಶಿವಪ್ಪ ಸ್ಥಳದಲ್ಲೆ ಮೃತಪಟ್ಟ ದುರ್ದೈವಿ.

ಹರಕಂಚಿ ಗ್ರಾಮದಿಂದ ಕೂಲಿ ಕೆಲಸಕ್ಕೆಂದು ಹುಮನಬಾದ್ ಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ ವಾಹನವೊಂದಕ್ಕೆ ಓವರ್‌ಟೆಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆದ ರಭಸಕ್ಕೆ ಶಿವಪ್ಪ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕಮಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಟೆಂಪೋವನ್ನು ತೆರವು ಮಾಡಿದ್ದಾರೆ.

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

Continue Reading

ಪ್ರಮುಖ ಸುದ್ದಿ

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Stabbing in Mangalore : ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ.

VISTARANEWS.COM


on

Stabbing in Mangalore:
Koo

ಮಂಗಳೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ (Stabbing in Mangalore) ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ಸಂಭವಿಸಿದೆ.

ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

Continue Reading
Advertisement
Sonakshi Sinha to marry boyfriend Zaheer Iqbal on June 23
ಬಾಲಿವುಡ್44 seconds ago

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Reasi Terror Attack
ದೇಶ4 mins ago

Reasi Terror Attack : ಜಮ್ಮು – ಕಾಶ್ಮೀರ ಬಸ್ ದಾಳಿಯ ಹೊಣೆ ಹೊತ್ತುಕೊಂಡ ಪಾಕ್ ಲಷ್ಕರ್ ಬೆಂಬಲಿತ ಉಗ್ರ ಸಂಘಟನೆ

Viral Video
ವೈರಲ್ ನ್ಯೂಸ್33 mins ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

gold rate today bipasha
ಚಿನ್ನದ ದರ39 mins ago

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

IND vs PAK
ಕ್ರೀಡೆ49 mins ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ50 mins ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Nandamuri Balakrishna BB4 new film announced
ಟಾಲಿವುಡ್1 hour ago

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

IND VS PAK
ಕ್ರೀಡೆ1 hour ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು1 hour ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ1 hour ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌