Political turning points | 2022ರಲ್ಲಿ ಗಮನ ಸೆಳೆದ 10 ರಾಜಕೀಯ ಟರ್ನಿಂಗ್‌ ಪಾಯಿಂಟ್ಸ್ - Vistara News

New year 2023

Political turning points | 2022ರಲ್ಲಿ ಗಮನ ಸೆಳೆದ 10 ರಾಜಕೀಯ ಟರ್ನಿಂಗ್‌ ಪಾಯಿಂಟ್ಸ್

ಉತ್ತರಪ್ರದೇಶ, ಗುಜರಾತ್‌ ಸೇರಿದಂತೆ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆ, ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ, ಆಪ್‌ ರಾಷ್ಟ್ರೀಯ ಪಕ್ಷ ಹೀಗೆ ಹಲವಾರು (Political turning points) ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ 2022 ಸಾಕ್ಷಿಯಾಗಿದೆ.

VISTARANEWS.COM


on

party
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

೨೦೨೨ರಲ್ಲಿ ಬಹುತೇಕ ಕೋವಿಡ್‌ ಮುಕ್ತ ಗಾಳಿಯನ್ನು ಜನ ಉಸಿರಾಡಿದ ವರ್ಷ. ಭಾರತದ ರಾಜಕಾರಣ ಕೂಡ ಮೂಲ ಸ್ವರೂಪಕ್ಕೆ ಬದಲಾಗಿತ್ತು. (Political turning points ) ಬಂಡಾಯದಿಂದ ಯೂ-ಟರ್ನ್‌ ತನಕ, ಮೆಗಾ ರೋಡ್‌ ಶೋ ತನಕ 2022ರಲ್ಲಿ ರಂಗೇರಿತ್ತು.

ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಾರಥ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ತವರು ಗುಜರಾತ್‌ನಲ್ಲೂ ಪಕ್ಷ ಐತಿಹಾಸಿಕ ವಿಜಯ ಪತಾಕೆ ಹಾರಿಸಿತು. ರ‍್ಯಾಲಿಗಳು, ರೋಡ್‌ ಶೋಗಳಿಂದ ರಾಜಕೀಯ ವಿದ್ಯಮಾನಗಳ ಭರಾಟೆ ಕಂಡು ಬಂದಿತ್ತು. 2022ರಲ್ಲಿ ಗಮನ ಸೆಳೆದ 10 ಘಟನಾವಳಿಗಳು ಇಂತಿವೆ.

gujarath election result2
BJP Poaching AAP

ಚುನಾವಣೆಗಳ ವರ್ಷ: ಈ ವರ್ಷ ಗೋವಾ, ಉತ್ತರಾಖಂಡ್‌, ಪಂಜಾಬ್‌, ಮಣಿಪುರ, ಉತ್ತರಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್‌ ಮತ್ತು ದಿಲ್ಲಿ ಮಹಾ ನಗರಪಾಲಿಕೆಗೆ (ಎಂಸಿಡಿ) ಚುನಾವಣೆ ನಡೆಯಿತು. ಈ ಚುನಾವಣೆಗಳಲ್ಲಿ ಬಿಜೆಪಿಯ ಪ್ರಾಬಲ್ಯ ಐದು ರಾಜ್ಯಗಳಲ್ಲಿನ ಜಯಭೇರಿಯೊಂದಿಗೆ ಮುಂದುವರಿಯಿತು. ಗೋವಾ, ಉತ್ತರಾಖಂಡ್‌, ಮಣಿಪುರ, ಉತ್ತರಪ್ರದೇಶ ಮತ್ತು ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷ ಜಯ ಗಳಿಸಿತು. ಕಾಂಗ್ರೆಸ್‌ ಕೇವಲ ಹಿಮಾಚಲ ಪ್ರದೇಶದಲ್ಲಿ ಮಾತ್ರ ಜಯ ಗಳಿಸಿತು. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಗೆದ್ದು ಅಚ್ಚರಿಯ ಫಲಿತಾಂಶ ನೀಡಿತು. ಆಪ್‌ನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಇದು ಮಹತ್ವದ್ದಾಗಿತ್ತು. ಉತ್ತರಪ್ರದೇಶ ಮತ್ತು ಗುಜರಾತ್‌ನಲ್ಲಿ ಬಿಜೆಪಿಯ ಭರ್ಜರಿ ಗೆಲುವು ದಾಖಲೆಗಳನ್ನು ಸೃಷ್ಟಿಸಿದೆ. ಉತ್ತರಪ್ರದೇಶದಲ್ಲಿ 37 ವರ್ಷಗಳ ಬಳಿಕ ಆಡಳಿತಾರೂಢ ಪಕ್ಷ ಮರಳಿ ಅಧಿಕಾರಕ್ಕೇರಿದಂತಾಗಿದೆ. ಆಪ್‌ ಗುಜರಾತ್‌ ಅನ್ನು ಪ್ರವೇಶಿಸಿದ್ದು, 5 ಸೀಟುಗಳನ್ನು ಗೆದ್ದಿತ್ತು. ಗುಜರಾತ್‌ನಲ್ಲಿ ಬಿಜೆಪಿ 182 ಸೀಟುಗಳಲ್ಲಿ 152 ಅನ್ನು ಗೆದ್ದು ತನ್ನದೇ ಹಳೆ ದಾಖಲೆಯನ್ನು ಮುರಿಯಿತು. ರಾಜ್ಯದಲ್ಲಿ ಏಳನೇ ಬಾರಿಗೆ ಅಧಿಕಾರಕ್ಕೇರಿತು. ಆಮ್‌ ಆದ್ಮಿ ದಿಲ್ಲಿ ಪಾಲಿಕೆ ಚುನಾವಣೆಯಲ್ಲಿ 15 ವರ್ಷಗಳ ಬಿಜೆಪಿ ಪ್ರಾಬಲ್ಯವನ್ನು ಅಳಿಸಿತು.

ಆಪ್‌ ಸಚಿವರ ವಿವಾದ: ಆಮ್‌ ಆದ್ಮಿ ಪಕ್ಷದ ಕೆಲವು ಸಚಿವರು ವರ್ಷ ಪೂರ್ತಿ ನಕಾರಾತ್ಮಕ ಕಾರಣಗಳಿಂದ ಸುದ್ದಿಯಲ್ಲಿದ್ದರು. ಪ್ರಾಮಾಣಿಕರ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದ್ದ ಪಕ್ಷದಲ್ಲಿ ದಿಲ್ಲಿ ಸಚಿವರುಗಳ ಮುಖವಾಡ ಬಯಲಾಗಿತ್ತು. ಭ್ರಷ್ಟಾಚಾರ ಕೇಸ್‌ಗಳಲ್ಲಿ ದಿಲ್ಲಿ ಸಚಿವ ಮನೀಶ್‌ ಸಿಸೋಡಿಯಾ ಮತ್ತು ಸತ್ಯೇಂದ್ರನಾಥ್‌ ಜೈನ್‌ ಕಾನೂನು ಕ್ರಮ ಎದುರಿಸಬೇಕಾಯಿತು. ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರನಾಥ್‌ ಮೇ30ರಿಂದ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಜೈಲಿನಲ್ಲಿ ಇದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

mallikarjuna kharge

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೀಯ ಚುನಾವಣೆ ಭಾರಿ ಸುದ್ದಿಯಾಯಿತು. ಏಕೆಂದರೆ 25 ವರ್ಷಗಳ ಬಳಿಕ ಇದು ನಡೆದಿತ್ತು. ವಂಶಾಡಳಿತದ ಅಪಖ್ಯಾತಿ ಹಿನ್ನೆಲೆಯೂ ಇತ್ತು. ಈ ಸಲವೂ ಚುನಾವಣೆ ವಿವಾದದಿಂದ ಹೊರತಾಗಿರಲಿಲ್ಲ. ಅಶೋಕ್‌ ಗೆಹ್ಲೋಟ್‌ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕಿತ್ತು. ಆದರೆ ರಾಜಸ್ಥಾನ ಸಿಎಂ ಹುದ್ದೆಯನ್ನು ಸಚಿನ್‌ ಪೈಲಟ್‌ ಅವರಿಗೆ ಹಸ್ತಾಂತರಿಸಲು ಒಪ್ಪಿರಲಿಲ್ಲ. ಇದು ಪಕ್ಷದ ರಾಜಸ್ಥಾನ ಘಟಕದಲ್ಲಿ ಬಂಡಾಯದ ಹೊಗೆಯನ್ನು ಸೃಷ್ಟಿಸಿತ್ತು. ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡುವುದರೊಂದಿಗೆ ಬಂಡಾಯ ತಣ್ಣಗಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು 7,897 ಹಾಗೂ ಶಶಿ ತರೂರ್‌ 1,072 ಮತಗಳನ್ನು ಪಡೆದಿದ್ದರು.

ಭಾರತ್‌ ಜೋಡೊ ಯಾತ್ರಾ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಳಿವಿನಂಚಿನಲ್ಲಿರುವ ಪಕ್ಷಕ್ಕೆ ಕಾಯಕಲ್ಪ ನೀಡಲು ಭಾರತ್‌ ಜೋಡೊ ಪಾದ ಯಾತ್ರೆಯನ್ನು ಕೈಗೊಂಡರು. ಈಗ 100 ದಿನಗಳನ್ನು ಪೂರ್ಣಗೊಳಿಸಿದೆ. ಇದು ಬ್ರಾಂಡ್‌ ರಾಹುಲ್‌ ರಿಲಾಂಚ್‌ ಯಾತ್ರೆ ಎಂದು ಬಿಜೆಪಿ ಟೀಕಿಸಿದೆ. ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದ ತನಕ 3,570 ಕಿ.ಮೀ ದೂರದ ಯಾತ್ರೆ 150 ದಿನಗಳ ಕಾಲ ನಡೆಯುತ್ತಿದೆ. ಈಗ ದಿಲ್ಲಿಯಲ್ಲಿ ಮುಂದುವರಿದಿದೆ.

ಎನ್‌ಡಿಎ ತೊರೆದು ಮಹಾಘಟಬಂಧನ್‌ ಸೇರಿದ ನಿತೀಶ್‌ ಕುಮಾರ್

ಬಿಜಾರ ಸಿಎಂ ಮತ್ತು ಸಂಯುಕ್ತ ಜನತಾ ದಳ ನಾಯಕ ನಿತೀಶ್‌ ಕುಮಾರ್‌ ಅವರು ಎನ್‌ಡಿಎ ತೊರೆದು ಆಗಸ್ಟ್‌ನಲ್ಲಿ ಮಹಾ ಘಟಬಂಧನ್‌ಗೆ ಸೇರ್ಪಡೆಯಾದರು. ಆರ್‌ಜೆಡಿ ಬೆಂಬಲ ಪಡೆದು ಸರ್ಕಾರ ರಚಿಸಿದರು. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಮಹತ್ವದ ಯೂ ಟರ್ನ್‌ ತೆಗೆದುಕೊಂಡಿದ್ದಾರೆ. ಪರೋಕ್ಷವಾಗಿ ತೇಜಸ್ವಿ ಯಾದವ್‌ ತಮ್ಮ ಉತ್ತರಾಧಿಕಾರಿ ಎಂದೂ ಹೇಳಿದ್ದಾರೆ.

ಶಿವ ಸೇನಾ

ಶಿವಸೇನಾ ಪಕ್ಷಕ್ಕೆ 2022 ಭಾರಿ ಬಿಕ್ಕಟ್ಟಿನ ವರ್ಷವಾಗಿತ್ತು. ಪಕ್ಷ ಎರಡಾಗಿ ಹೋಳಾಯಿತು. ಏಕನಾಥ್‌ ಶಿಂಧೆ ನೇತೃತ್ವದ ಬಣ ಬಂಡಾಯವೆದ್ದಿತು. ನಾಟಕೀಯ ಸನ್ನಿವೇಶದಲ್ಲಿ ಬಿಜೆಪಿ ಜತೆ ಈ ಬಣ ಕೈಜೋಡಿಸಿತು. ಅಘಾಡಿ ಪಕ್ಷದ ಸರ್ಕಾರ ಪತನವಾಯಿತು. ಏಕನಾಥ್‌ ಶಿಂಧೆ ಸಿಎಂ ಆದರು.

ಮುಲಾಯಂ ಸಿಂಗ್‌ ಯಾದವ್

‌ಸಮಾಜವಾದಿ ಪಕ್ಷದ ಸ್ಥಾಪಕ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಈ ವರ್ಷ ಅಕ್ಟೋಬರ್‌ 10ರಂದು ನಿಧನರಾದರು. ಮೂರು ಬಾರಿ ಅವರು ಸಿಎಂ ಆಗಿದ್ದರು.

ನ್ಯಾಷನಲ್‌ ಹೆರಾಲ್ಡ್‌ ಕೇಸ್

Rahul Gandhi On India China

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ 2022ರಲ್ಲಿ ಗಾಂಧಿ ಕುಟುಂಬವನ್ನು ಕಾಡಲು ಆರಂಭಿಸಿತು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್‌ ಗಾಂಧಿ ಮೊದಲ ಬಾರಿಗೆ ಜಾರಿ ನಿರ್ದೇಶನಾಲಯದ ಎದುರು ಪ್ರಕರಣಕ್ಕೆ ಸಂಬಂಧಿಸಿ ಹಾಜರಾದರು. ರಾಹುಲ್ ಗಾಂಧಿ ಐದು ಬಾರಿ ವಿಚಾರಣೆ ಎದುರಿಸಿದರು.

ಕೇಂದ್ರ ತನಿಖಾ ಸಂಸ್ಥೆಗಳು

ಕೇಂದ್ರೀಯ ತನಿಖಾ ಸಂಸ್ಥೆಗಳು ಭಾರಿ ಸಕ್ರಿಯವಾಗಿದ್ದ ವರ್ಷವಿದು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ವರ್ಷ ಪೂರ್ತಿ ಸುದ್ದಿಯಲ್ಲಿತ್ತು. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮನೀಶ್‌ ಸಿಸೋಡಿಯಾ, ಡಿಕೆ ಶಿವಕುಮಾರ್‌ ಮೊದಲಾದವರು ವಿಚಾರಣೆ ಎದುರಿಸಿದರು. ಶಿವಸೇನಾ ಸಂಸದ ಸಂಜಯ್‌ ರಾವತ್‌, ಆಪ್‌ ಸಚಿವ ಸತ್ಯೇಂದ್ರನಾಥ್‌, ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್‌ ದೇಶ್‌ ಮುಖ್‌, ನವಾಬ್‌ ಮಲಿಕ್ ಅರೆಸ್ಟ್‌ ಆದರು.‌

ರಾಷ್ಟ್ರೀಯ ಪಕ್ಷವಾದ ಆಮ್‌ ಆದ್ಮಿ ಪಾರ್ಟಿ

BJP Poaching AAP

ಅರವಿಂದ್‌ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಾರ್ಟಿ ಈ ವರ್ಷ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿತು.

ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ 13% ಮತಗಳನ್ನು ಪಡೆದ ಬಳಿಕ ಆಮ್‌ ಆದ್ಮಿಗೆ ಈ ಹೆಗ್ಗಳಿಕೆ ಲಭಿಸಿದೆ. ಐದು ಸೀಟುಗಳನ್ನೂ ಪಕ್ಷ ಗೆದ್ದುಕೊಂಡಿದೆ. ಮತ್ತಷ್ಟು ರಾಜ್ಯಗಳಲ್ಲಿ ವಿಸ್ತರಿಸಲು ಉದ್ದೇಶಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
Mumbai Girl
ದೇಶ5 mins ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ13 mins ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ33 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ43 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ54 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ1 hour ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್2 hours ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ3 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ3 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌