Tunisha Sharma Funeral | ಪ್ರೇಮಪಾಶಕ್ಕೆ ಸಿಲುಕಿ ಜೀವ ಕಳೆದುಕೊಂಡ ತುನಿಶಾ ಶರ್ಮಾ ಅಂತ್ಯಕ್ರಿಯೆ, ಕುಸಿದು ಬಿದ್ದ ನಟಿಯ ತಾಯಿ - Vistara News

ದೇಶ

Tunisha Sharma Funeral | ಪ್ರೇಮಪಾಶಕ್ಕೆ ಸಿಲುಕಿ ಜೀವ ಕಳೆದುಕೊಂಡ ತುನಿಶಾ ಶರ್ಮಾ ಅಂತ್ಯಕ್ರಿಯೆ, ಕುಸಿದು ಬಿದ್ದ ನಟಿಯ ತಾಯಿ

ಮುಂಬೈನ ಶವಾಗಾರದಲ್ಲಿ ನಟಿ ತುನಿಶಾ ಶರ್ಮಾ ಅಂತ್ಯಕ್ರಿಯೆ (Tunisha Sharma Funeral) ನೆರವೇರಿದೆ. ನಟಿಯ ಚಿಕ್ಕಪ್ಪ ಅಂತಿಮ ವಿಧಿವಿಧಾನ ನೆರವೇರಿಸಿದರು. ನಟಿಯ ತಾಯಿ, ಸಹೋದರಿ, ಸಹ ನಟರು ತುನಿಶಾ ಶರ್ಮಾಗೆ ಕಣ್ಣೀರ ವಿದಾಯ ಹೇಳಿದರು.

VISTARANEWS.COM


on

Tunisha Sharma Funeral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಪ್ರೇಮಪಾಶಕ್ಕೆ ಸಿಲುಕಿ, ಅದರ ವೈಫಲ್ಯದಿಂದ ಮನನೊಂದು, ಜೀವವನ್ನೇ ಕಳೆದುಕೊಂಡ ಕಿರುತೆರೆ ನಟಿ ತುನಿಶಾ ಶರ್ಮಾ ಅಂತ್ಯಕ್ರಿಯೆಯು ಮುಂಬೈನ ಮೀರಾ ರೋಡ್‌ನ ಶವಾಗಾರದಲ್ಲಿ (Tunisha Sharma Funeral) ನೆರವೇರಿದೆ. ಪ್ರೀತಿಯ ಮಗಳಿಗೆ ಅಂತಿಮ ವಿದಾಯ ಹೇಳಲು ಆಗದೆ, ದುಃಖ ತಡೆದುಕೊಳ್ಳಲು ಆಗದೆ ಅವರ ತಾಯಿಯು ಕುಸಿದು ಬಿದ್ದಿದ್ದು ಮನಕಲಕುವಂತಿತ್ತು. ನೂರಾರು ಜನರ ಕಣ್ಣೀರು, ದುಃಖದ ಮಧ್ಯೆಯೇ ಅಗಲಿದ ನಟಿಯ ಅಂತ್ಯ ಸಂಸ್ಕಾರ ನೆರವೇರಿದ್ದು, ಹಲವು ಸಹನಟರು ಭಾಗಿಯಾಗಿದ್ದರು. ತುನಿಶಾ ಶರ್ಮಾ ಅವರ ಚಿಕ್ಕಪ್ಪ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

20 ವರ್ಷದ ತುನಿಶಾ ಶರ್ಮಾ ಅವರು ‘ಅಲಿ ಬಾಬಾ: ದಾಸ್ತಾನ್‌ ಎ ಕಾಬೂಲ್’‌ (Ali Baba: Dastaan-E-Kabul) ಟಿವಿ ಸಿರೀಸ್‌ನ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿದ್ದರು. ಆದರೆ, ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆ ವಸಾಯಿ ಎಂಬಲ್ಲಿ ಶೂಟಿಂಗ್‌ ಮಾಡುವಾಗ ಸೆಟ್‌ನ ಕೋಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಟಿವಿ ಶೋ ಸಹ ನಟ ಶಿಜಾನ್‌ ಮೊಹಮ್ಮದ್‌ ಖಾನ್‌ ಅವರನ್ನು ತುನಿಶಾ ಶರ್ಮಾ ಪ್ರೀತಿಸುತ್ತಿದ್ದರು. ಈ ಪ್ರೀತಿಯನ್ನು ಶಿಜಾನ್‌ ಖಾನ್‌ ನಿರಾಕರಿಸಿದ ಕಾರಣ ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹೇಳಿಕೆ ಬದಲಿಸುತ್ತಿರುವ ಶಿಜಾನ್‌ ಖಾನ್
ತುನಿಶಾ ಶರ್ಮಾ ಸಹ ನಟ ಶಿಜಾನ್‌ ಖಾನ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ವೇಳೆ ನಟನು ಹೇಳಿಕೆ ಬದಲಾಯಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. “ಒಂದು ಸಲ ಶ್ರದ್ಧಾ ವಾಳ್ಕರ್‌ ಕೊಲೆ ಪ್ರಕರಣವೇ ನಮ್ಮ ಪ್ರೀತಿಗೆ ಇತಿಶ್ರೀ ಹಾಡಬೇಕು ಎಂಬುದಾಗಿ ಹೇಳುತ್ತಾನೆ. ಇದಾದ ನಂತರ, ತುನಿಶಾ ಶರ್ಮಾಳೇ ನನ್ನನ್ನು ಅವಾಯ್ಡ್‌ ಮಾಡಿದಳು” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ | Tunisha Sharma Death | ತುನಿಶಾ ಶರ್ಮಾ ಮೃತಪಟ್ಟ ದಿನ ಶೂಟಿಂಗ್​​ ಸೆಟ್​​ನಲ್ಲಿ ಏನಾಯ್ತು?-ಶಿಜಾನ್​ ಅಲ್ಲೇ ಇದ್ದನಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi Live: ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರೂ ಹಾಜರಾಗಲಿದ್ದಾರೆ.

VISTARANEWS.COM


on

Narendra Modi Live
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 293 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ, ಜೆಡಿಎಸ್‌ ಸೇರಿ ಹಲವು ಮಿತ್ರಪಕ್ಷಗಳೊಂದಿಗೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಪ್ರಮಾಣವಚನ ಕಾರ್ಯಕ್ರಮದ ಲೈವ್‌ ಅನ್ನು ಇಲ್ಲಿ ವೀಕ್ಷಿಸಿ…

10 ವರ್ಷದಲ್ಲಿ ಮೋದಿ ಸಾಧನೆಗಳು

ಮೂಲ ಸೌಕರ್ಯ ಅಭಿವೃದ್ಧಿ

ಗ್ರಾಮಗಳಲ್ಲಿ ಮನೆ ಮನೆಗಳಲ್ಲಿ ಶೌಚಾಲಯ ನಿರ್ಮಾಣದಿಂದ ಹಿಡಿದು ಸಾಮಾನ್ಯ ಜನರೂ ವಿಮಾನದಲ್ಲಿ ಪ್ರಯಾಣಿಸುವ ಉಡಾನ್‌ ಯೋಜನೆತನಕ ಮೋದಿ ಆಡಳಿತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯಾಗಿದೆ. ದೇಶಾದ್ಯಂತ 11.72 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 3.5 ಕೋಟಿ ಮನೆ ನಿರ್ಮಾಣ, ಉಜ್ವಲ ಯೋಜನೆ ಅಡಿಯಲ್ಲಿ 9.6 ಕೋಟಿ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ. ಇನ್ನು ಉಡಾನ್‌ ಯೋಜನೆ ಅಡಿಯಲ್ಲಿ ದೇಶಾದ್ಯಂತ ಇದ್ದ 74 ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 141ಕ್ಕೆ ಏರಿಸಲಾಗಿದೆ. ಜನಧನ್‌ ಯೋಜನೆ ಮೂಲಕ 50 ಕೋಟಿ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ರೈಲು ನಿಲ್ದಾಣಗಳನ್ನು ಅತ್ಯಾಧುನೀಕರಣ ಮಾಡಲಾಗಿದೆ. ರೈಲುಗಳಲ್ಲಿ ಜೈವಿಕ ಶೌಚಾಲಯಗಳ ಅಳವಡಿಕೆ, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು ದೇಶದ ನರನಾಡಿಗಳಂತೆ ಕಾಣುತ್ತಿವೆ.

ಡಿಜಿಟಲ್‌ ಇಂಡಿಯಾ ಮೇನಿಯಾ

ನರೇಂದ್ರ ಮೋದಿ ಅವರು ಕಂಡ ಡಿಜಿಟಲ್‌ ಇಂಡಿಯಾ ಕನಸು ಬಹುತೇಕ ನನಸಾಗಿದೆ. ಮೊದಲೆಲ್ಲ ಯಾರಿಗಾದರೂ ಹಣ ಕಳುಹಿಸಬೇಕು ಎಂದರೆ ನೆಟ್‌ ಬ್ಯಾಂಕಿಂಗ್‌ ಮೊರೆ ಹೋಗಬೇಕಿತ್ತು. ಇಲ್ಲವೇ, ಬ್ಯಾಂಕ್‌ನಲ್ಲಿ ಕ್ಯೂ ನಿಂತು ಎನ್‌ಇಎಫ್‌ಟಿ (NEFT) ಮಾಡಬೇಕಿತ್ತು. ಆದರೆ, ಡಿಜಿಟಲ್‌ ಇಂಡಿಯಾ ಅಭಿಯಾನವು ಯಶಸ್ವಿಯಾಗಿದ್ದು, ಈಗ ಯುಪಿಐ ಮೂಲಕ ಕ್ಷಣಮಾತ್ರದಲ್ಲಿ ಹಣ ಕಳುಹಿಸಬಹುದಾಗಿದೆ. ಡಿಜಿಟಲ್‌ ಆರ್ಥಿಕತೆ ಸೃಷ್ಟಿಯಾಗಿದೆ. ಗ್ರಾಮದ ಗೂಡಂಗಡಿಗಳಿಂದ ಹಿಡಿದು ನಗರಗಳಲ್ಲಿ ತರಕಾರಿ ಮಾರುವವರೂ ಈಗ ಕ್ಯೂಆರ್‌ ಕೋಡ್‌ ಸ್ಕ್ಯಾನರ್‌ ಇಟ್ಟುಕೊಂಡಿದ್ದಾರೆ. ಸದ್ಯ, ಶೇ. 75ರಷ್ಟು ಚಿಲ್ಲರೆ ವ್ಯಾಪಾರವು ಯುಪಿಐ ಮೂಲಕವೇ ಆಗುತ್ತಿದೆ. ಕೋಟ್ಯಂತರ ಜನ, ಲಕ್ಷಾಂತರ ಕೋಟಿ ರೂಪಾಯಿಯನ್ನು ಯುಪಿಐ ಮೂಲಕವೇ ವರ್ಗಾವಣೆ ಮಾಡುತ್ತಿದ್ದಾರೆ. ಯುಪಿಐ ವ್ಯವಸ್ಥೆಯನ್ನು ಬೇರೆ ದೇಶಗಳೂ ಅಳವಡಿಸಿಕೊಂಡಿವೆ.

Digital Payment

370ನೇ ವಿಧಿ ರದ್ದು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿರುವುದು ನರೇಂದ್ರ ಮೋದಿ ಸರ್ಕಾರದ ದಿಟ್ಟ ತೀರ್ಮಾನಗಳಲ್ಲಿ ಒಂದಾಗಿದೆ. ಉಗ್ರರ ತಾಣವಾಗಿದ್ದ, ಪ್ರತ್ಯೇಕವಾದಿಗಳ ಗೂಡಾಗಿದ್ದ, ಕಲ್ಲು ತೂರಾಟಗಾರರ ಪ್ರಯೋಗ ತಾಣವಾಗಿದ್ದ ಕಾಶ್ಮೀರದಲ್ಲಿ ಈಗ ಜಿ-20 ಸಭೆ ನಡೆಯುವಂತಾಗಿದ್ದರೆ ಅದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣವಾಗಿದೆ. 2019ರ ಆಗಸ್ಟ್‌ 5ರಂದು 370ನೇ ವಿಧಿ ರದ್ದು ಬಳಿಕ ಉಗ್ರರ ಉಪಟಳ ನಿಲ್ಲದಿದ್ದರೂ ಪ್ರತ್ಯೇಕವಾದಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಕಾಶ್ಮೀರದಲ್ಲಿ ವಿದೇಶಿ ಗಣ್ಯರು ಬಂದು ಶಾಪಿಂಗ್‌ ಮಾಡುವಂತಾಗಿದೆ. ಆದರೂ, ಕೇಂದ್ರ ಸರ್ಕಾರವು ಕಾಶ್ಮೀರ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಹಿನ್ನಡೆ ಅನುಭವಿಸಿದ್ದು, ಅದರ ಕುರಿತು ಹೆಚ್ಚಿನ ಗಮನ ಹರಿಸಬೇಕಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೊನೆಯ ಹಂತಕ್ಕೆ ಬಂದಿದ್ದು, ಇದನ್ನು ಸುಗಮವಾಗಿ ಕೈಗೊಂಡ ಕೀರ್ತಿ, ಬಿಜೆಪಿ ನೀಡಿದ ಭರವಸೆಯನ್ನು ಈಡೇರಿಸಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ಪರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ದೇಶಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಂಡಿದ್ದು, ಸುಗಮವಾಗಿ ರಾಮಮಂದಿರ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದು ಕೇಂದ್ರ ಸರ್ಕಾರದ ಸಾಧನೆಯಾಗಿದೆ. ಅಷ್ಟೇ ಅಲ್ಲ, 2024ರ ಜನವರಿಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗೆ ಸರ್ಕಾರ ಸಿದ್ಧವಾಗಿದೆ. ಹಾಗೆಯೇ, ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿ ನಿರ್ಮಾಣಕ್ಕೂ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.

PM Narendra Modi

ಕೊರೊನಾ ಸಂದರ್ಭದಲ್ಲಿ ಉಚಿತವಾಗಿ ಆಹಾರ ಧಾನ್ಯ ವಿತರಣೆ

ಕೊರೊನಾ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ದೇಶದ ಕೋಟ್ಯಂತರ ಜನ ಸಂಕಷ್ಟಕ್ಕೆ ಸಿಲುಕಿದ್ದಾಗ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮೂಲಕ (PMGKAY) ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಿದ್ದು ಕೂಡ ಕೇಂದ್ರದ ಸಾಧನೆಯಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡುವ ಮೂಲಕ ಜನರ ನೆರವಿಗೆ ಕೇಂದ್ರ ಸರ್ಕಾರ ನಿಂತಿದ್ದು ಸ್ಮರಣೀಯ.

ದೇಶದ ಗಡಿ ಭದ್ರ, ಉಗ್ರರಿಗೆ ತಿರುಗೇಟು

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಗಡಿಗಳು ಮತ್ತಷ್ಟು ಭದ್ರವಾಗಿವೆ. ಉಗ್ರರ ದಾಳಿಗಳು ಬಹುತೇಕವಾಗಿ ನಿಂತುಹೋಗಿವೆ. 2016ರಲ್ಲಿ ಪಾಕಿಸ್ತಾನದ ಉಗ್ರರು ಜಮ್ಮು-ಕಾಶ್ಮೀರದ ಉರಿ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರ ಚಟುವಟಿಕೆಗಳಿಗೆ ಪ್ರತ್ಯುತ್ತರ ನೀಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ, ಕಲ್ಲು ತೂರಾಟ, ಪ್ರತ್ಯೇಕವಾದಿಗಳನ್ನು ಹೆಡೆಮುರಿಕಟ್ಟಿದ್ದು ಮೋದಿ ಸರ್ಕಾರದ ದಿಟ್ಟ ನಿರ್ಧಾರವಾಗಿದೆ.

ಎಲ್ಲರಿಗೂ ಲಸಿಕೆ ವಿತರಣೆ

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶೀಯವಾಗಿ ಕೊರೊನಾ ನಿರೋಧಕ ಲಸಿಕೆ ಉತ್ಪಾದನೆ ಜತೆಗೆ ದೇಶಾದ್ಯಂತ ಕೋಟ್ಯಂತರ ಜನರಿಗೆ ವಿತರಣೆ ಮಾಡಿದ್ದು, ಎರಡು ಲಾಕ್‌ಡೌನ್‌ ಮಾಡಿಯೂ ಆರ್ಥಿಕತೆ ದಿವಾಳಿಯಾಗದಂತೆ ನೋಡಿಕೊಂಡಿದ್ದು, ಆಮ್ಲಜನಕ ಕೊರತೆ, ವೈದ್ಯಕೀಯ ಮೂಲ ಸೌಕರ್ಯಗಳ ಕೊರತೆ ಮಧ್ಯೆಯೂ ಕೊರೊನಾ ನಿರ್ವಹಣೆ ಮಾಡಿದ್ದು ಮೋದಿ ಸರ್ಕಾರದ ಸಾಧನೆ ಎಂಬುದರಲ್ಲಿ ಎರಡು ಮಾತಿಲ್ಲ. ಕೊರೊನಾ ನಿರೋಧಕ ಲಸಿಕೆಯ 200 ಕೋಟಿಗೂ ಅಧಿಕ ಡೋಸ್‌ ವಿತರಣೆ ಮಾಡಿದ್ದು, ಬೇರೆ ರಾಷ್ಟ್ರಗಳಿಗೂ ಲಸಿಕೆ ರವಾನೆ ಮಾಡಿದ್ದು ಸಾಧನೆಯಾಗಿದೆ.

ರೈತರ ಖಾತೆಯಲ್ಲಿ ಕಾಂಚಾಣ ಝಣಝಣ

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ರೈತರಿಗೆ ವರ್ಷದಲ್ಲಿ ತಲಾ 2 ಸಾವಿರ ರೂ. ನಂತೆ ಮೂರು ಬಾರಿ 6 ಸಾವಿರ ರೂ. ನೀಡುವ ಮೂಲಕ ಕೇಂದ್ರ ಸರ್ಕಾರ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಇದರಿಂದ ದೇಶದ ಕೋಟ್ಯಂತರ ರೈತರ ಖಾತೆಗೆ ಹಣ ಜಮೆಯಾಗುತ್ತಿದ್ದು, ಯೋಜನೆ ಜಾರಿಯಲ್ಲಿ ಎಲ್ಲೂ ಲೋಪವಾಗದಂತೆ ಕೇಂದ್ರ ಸರ್ಕಾರ ನೋಡಿಕೊಂಡಿದೆ.

ವಿದೇಶಗಳಿಂದ ಭಾರತೀಯರ ರಕ್ಷಣೆ

ಮೋದಿ ಸರ್ಕಾರವು ಎರಡನೇ ಅವಧಿಯ ವೇಳೆ, ಬೇರೆ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ರಕ್ಷಿಸುವಲ್ಲಿ ಬೇರೆ ರಾಷ್ಟ್ರಗಳಿಗೂ ಮಾದರಿ ಎನಿಸಿದೆ. ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಉಪಟಳ ಆರಂಭವಾದಾಗ ಕೇಂದ್ರ ಸರ್ಕಾರವು 700 ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ. ಉಕ್ರೇನ್‌ನಲ್ಲಿ ರಷ್ಯಾ ಆಕ್ರಮಣ ಆರಂಭಿಸಿದಾಗ 23 ಸಾವಿರ ಭಾರತೀಯರನ್ನು ತಾಯ್ನಾಡಿಗೆ ಕರೆದುಕೊಂಡು ಬಂದಿದೆ. ಅಷ್ಟೇ ಏಕೆ, ಕೆಲ ದಿನಗಳ ಹಿಂದೆಯೇ ಸುಡಾನ್‌ನಲ್ಲಿ ಆಂತರಿಕ ಸಂಘರ್ಷ ಉಂಟಾದಾಗ, ‘ಆಪರೇಷನ್‌ ಕಾವೇರಿ’ ಮೂಲಕ ಕನ್ನಡಿಗರೂ ಸೇರಿ ನೂರಾರು ಭಾರತೀಯರನ್ನು ಸರ್ಕಾರ ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ.

ದೇಶದಲ್ಲಿ ಇಷ್ಟೆಲ್ಲ ಬದಲಾವಣೆಗೆ ಕಾರಣವಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಅವರು ನೆಹರು ಅವರ ದಾಖಲೆಯನ್ನು ಮುರಿಯಲು ಮತ್ತೊಂದು ಹೆಜ್ಜೆ ಮುಂದಿಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

Continue Reading

ಕ್ರೈಂ

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

ಸಿಬಿಐ ಅಧಿಕಾರಿಗಳು (Fake CBI Gang) ಎಂದು ಹೇಳಿ ನಿವೃತ್ತ ಅಧಿಕಾರಿಗೆ 85 ಲಕ್ಷ ರೂ. ವಂಚಿಸಿರುವ ಗ್ಯಾಂಗ್ ವಿರುದ್ಧ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ದೆಹಲಿಯಲ್ಲಿ ಪ್ರಕರಣ ದಾಖಲಾಗಿದೆ. ‘ರಾಣಾ ಗಾರ್ಮೆಂಟ್ಸ್’ ಹೆಸರಿನ ಕಂಪೆನಿಗೆ ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಹಣ ವರ್ಗಾವಣೆ ಆಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

VISTARANEWS.COM


on

By

Fake CBI Gang
Koo

ನವದೆಹಲಿ: ಸಿಬಿಐ, ಕಸ್ಟಮ್ಸ್, ಮಾದಕ ದ್ರವ್ಯ ಮತ್ತು ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸುತ್ತಿದ್ದ ಗ್ಯಾಂಗ್ ವೊಂದು (Fake CBI Gang) ಬಹುರಾಷ್ಟ್ರೀಯ ಕಂಪನಿಯ ನಿವೃತ್ತ ಹಿರಿಯ ಅಧಿಕಾರಿಯೊಬ್ಬರಿಗೆ (retired officer) 85 ಲಕ್ಷ ರೂ. ವಂಚಿಸಿರುವ ಕುರಿತು ಆಂಧ್ರಪ್ರದೇಶದ (andrapradesh) ವಿಶಾಖಪಟ್ಟಣಂ (Visakhapatnam) ಮತ್ತು ದೆಹಲಿಯಲ್ಲಿ (delhi) ಪ್ರಕರಣ ದಾಖಲಿಸಲಾಗಿದೆ.

ಹಣವನ್ನು ಚೆಕ್ ಮೂಲಕ ಪಡೆದ ಗ್ಯಾಂಗ್ ದೆಹಲಿಯ ಉತ್ತಮ್ ನಗರದಲ್ಲಿ ಹೆಚ್‌ಡಿಎಫ್‌ಸಿ ಖಾತೆಯನ್ನು ನಿರ್ವಹಿಸುತ್ತಿದ್ದ ‘ರಾಣಾ ಗಾರ್ಮೆಂಟ್ಸ್’ ಎಂಬ ಕಂಪನಿಗೆ ವರ್ಗಾಯಿಸಿದೆ. ವಿಶಾಖಪಟ್ಟಣಂನಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಗ್ಯಾಂಗ್ ‘ರಾಣಾ ಗಾರ್ಮೆಂಟ್ಸ್’ ನಡೆಸುತ್ತಿದ್ದ ಎಚ್‌ಡಿಎಫ್‌ಸಿ ಖಾತೆಯಿಂದ ಭಾರತದಾದ್ಯಂತ 105 ಖಾತೆಗಳಿಗೆ ಈ ಹಣವನ್ನು ವರ್ಗಾಯಿಸಿದೆ. ಈ ಕುರಿತು ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಉತ್ತಮ್ ನಗರ ಶಾಖೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭಾರತದಾದ್ಯಂತ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿರುವ ಜರ್ಮನಿಯ ಪ್ರಧಾನ ಕಚೇರಿಯ ಫಾರ್ಮಾ ಸಂಸ್ಥೆಯೊಂದರ 57 ವರ್ಷದ ನಿವೃತ್ತ ಅಸೋಸಿಯೇಟ್ ಜನರಲ್ ಮ್ಯಾನೇಜರ್ ವಂಚನೆಯ ಕುರಿತು ಪ್ರತಿಕ್ರಿಯಿಸಿದ್ದು, ನನಗೆ ಮೂರು ವರ್ಷಗಳ ಸೇವೆ ಉಳಿದಿತ್ತು. ಆದರೆ ಮಗನನ್ನು ಕಾಲೇಜಿಗೆ ಕಳುಹಿಸಲು ಸಮಯ ಬೇಕಾಗಿದ್ದರಿಂದ ಸ್ವಯಂ ನಿವೃತ್ತಿ ತೆಗೆದುಕೊಂಡೆ. ಮೇ 2ರಂದು ನಿವೃತ್ತಿ ಪರಿಹಾರ ಸಿಕ್ಕಿದೆ. ಮಗನ ವೀಸಾ ನೇಮಕಾತಿ ಮೇ 17ರಂದು ಆಗಿತ್ತು. ಆದರೆ ಮೇ 14ರಂದು, ನನ್ನ ದಾಖಲೆಗಳನ್ನು ಪರಿಶೀಲಿಸಿದ ಅನಂತರ ಹಿಂದಿರುಗಿಸುವುದಾಗಿ ಹೇಳಿ 85 ಲಕ್ಷ ರೂ.ವನ್ನು ಕಳುಹಿಸುವಂತೆ ಗ್ಯಾಂಗ್ ನನ್ನನ್ನು ವಂಚಿಸಿರುವುದಾಗಿ ಹೇಳಿದ್ದಾರೆ.

ವಿಶಾಖಪಟ್ಟಣಂ ಕ್ರೈಂ ಬ್ರಾಂಚ್ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಶಾಖಪಟ್ಟಣಂನಲ್ಲಿರುವ ಬ್ಯಾಂಕ್‌ನಲ್ಲಿ ಕೆಲವರು ಇದರಲ್ಲಿ ಭಾಗಿಯಾಗಿರಬಹುದು. ಯಾಕೆಂದರೆ ಗ್ಯಾಂಗ್‌ಗೆ ನಿವೃತ್ತಿಯ ಅನಂತರ ಅವರು ಪಡೆದ ನಿಖರವಾದ ಮೊತ್ತ ಸೇರಿದಂತೆ ಅವರ ಖಾತೆಯ ಬಗ್ಗೆ ಎಲ್ಲವೂ ತಿಳಿದಿತ್ತು. ಹತ್ತಿರದ ಹೆಚ್‌ಡಿಎಫ್‌ಸಿ ಬ್ಯಾಂಕ್‌ಗೆ ಹೋಗಿ ಚೆಕ್ ಡ್ರಾಪ್ ಮಾಡಲು ಗ್ಯಾಂಗ್ ಹೇಳಿತು ಎಂದು ನಿವೃತ್ತ ಅಧಿಕಾರಿ ದೂರಿದ್ದಾರೆ.

ಕ್ರೈಂ ಬ್ರಾಂಚ್ ವಿಶಾಖಪಟ್ಟಣಂನಲ್ಲಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಿಂದ ಹಲವಾರು ದಾಖಲೆಗಳನ್ನು ತೆಗೆದುಕೊಂಡಿದೆ. ಅವರು ಬ್ಯಾಂಕ್ ಅಧಿಕಾರಿಗಳನ್ನು ಭೇಟಿಯಾದಾಗ ಪ್ರಕರಣ ಕುರಿತು ಪ್ರತಿಕ್ರಿಯಿಸಲು ಬ್ಯಾಂಕ್ ನಿರಾಕರಿಸಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಉತ್ತಮ್ ನಗರ ಶಾಖೆಯ ಪೊಲೀಸರು ರಾಣಾ ಗಾರ್ಮೆಂಟ್ಸ್‌ ಗೆ ಭೇಟಿ ನೀಡಿದ್ದಾರೆ. ರಾಣಾ ಗಾರ್ಮೆಂಟ್ಸ್ ಮಾಲೀಕರು ಈ ಸ್ಥಳವನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ನಿವೃತ್ತ ಅಧಿಕಾರಿ ಹೇಳಿದರು.

ನಿವೃತ್ತಿ ಅಧಿಕಾರಿಯ ಬ್ಯಾಂಕ್ ಖಾತೆಗೆ ಹಣ ಜಮೆಯಾದ ಬಳಿಕ ಡಿಸಿಪಿ ಸೈಬರ್ ಕ್ರೈಮ್ ಬಾಲ್ಸಿಂಗ್ ರಜಪೂತ್ ಎಂದು ಹೇಳಿ ಒಬ್ಬ ವ್ಯಕ್ತಿ ಕರೆ ಮಾಡಿದ್ದೂ, ಹಲವಾರು ಮಾದಕ ದ್ರವ್ಯ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ತಮ್ಮ ಹೆಸರು ಬಂದಿದೆ ಮತ್ತು ಈ ಎಲ್ಲಾ ಪ್ರಕರಣಗಳಿಗೆ ಅವರ ಆಧಾರ್ ಲಿಂಕ್ ಮಾಡಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

ಎಫ್ ಐ ಆರ್ ನಲ್ಲಿ ಏನಿದೆ?

ಇನ್ನೊಬ್ಬ ಕರೆ ಮಾಡಿ ನಿಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಬೇಕಿದೆ. ಕೂಡಲೇ ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನಕಲಿ ಡಿಸಿಪಿ ಸ್ವಲ್ಪ ಹೊತ್ತು ಮಾತನಾಡಿ, ನೀವು ನಿರಪರಾಧಿಯಂತೆ ಕಾಣುತ್ತೀರಿ. ಹೀಗಾಗಿ 85 ಲಕ್ಷ ರೂ. ವನ್ನು ತನಿಖೆಗಾಗಿ ತೆಗೆದುಕೊಂಡು ಏನೂ ತಪ್ಪಿಲ್ಲ ಎಂದು ಕಂಡುಬಂದರೆ ಮರಳಿ ಕೊಡುವುದಾಗಿ ಹೇಳಿದ್ದರು. ಸ್ಕೈಪ್‌ನಲ್ಲಿ ಎರಡು ದಿನಗಳ ವಿಚಾರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮನೆಯಿಂದ ಹೊರಹೋಗಲು ಅಥವಾ ಯಾರಿಗೂ ಕರೆ ಮಾಡಲು ಅವರು ಬಿಡಲಿಲ್ಲ ಎಂದು ನಿವೃತ್ತ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ವಂಚನೆ ಬಗ್ಗೆ ಎಚ್ಚರವಿರಲಿ

ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಪತ್ತೆಯಾದ ಮಾಹಿತಿಗಳ ಬಗ್ಗೆ ವಿವರಣೆ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಪರಿಚಿತ ಸಂಖ್ಯೆಗಳಿಂದ ವಾಟ್ಸಾಪ್ ವಿಡಿಯೋ ಕರೆಗಳಿಗೆ ಉತ್ತರಿಸದಂತೆ ನಿವೃತ್ತ ಅಧಿಕಾರಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ವಿಶಾಖಪಟ್ಟಣ ಸೈಬರ್ ಪೊಲೀಸರಿಗೆ 300 ಕೋಟಿ ರೂ. ವಂಚನೆ ಮೊತ್ತದ ಕುರಿತು ದೂರುಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

Continue Reading

ದೇಶ

VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

VK Pandian: ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಲೋಕಸಭೆ ಕ್ಷೇತ್ರಗಳಲ್ಲೂ ಬಿಜೆಡಿ ಹಿನ್ನಡೆ ಅನುಭವಿಸಿದೆ. ಹಾಗಾಗಿ, ವಿ.ಕೆ.ಪಾಂಡಿಯನ್‌ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

VK Pandian
Koo

ಭುವನೇಶ್ವರ: ಒಡಿಶಾ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜು ಜನತಾದಳ ಪಕ್ಷವು (BJD) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆಪ್ತ, ಬಿಜೆಡಿ ನಾಯಕ ವಿ.ಕೆ. ಪಾಂಡಿಯನ್‌ (VK Pandian) ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಅವರಿಗೆ ವಿ.ಕೆ. ಪಾಂಡಿಯನ್‌ ಅವರೇ ಉತ್ತರಾಧಿಕಾರಿಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ವಿ.ಕೆ.ಪಾಂಡಿಯನ್‌ ಅವರು ಸಕ್ರಿಯ ರಾಜಕಾರಣದಿಂದ ದೂರ ಸರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ.

“ನವೀನ್‌ ಪಟ್ನಾಯಕ್‌ ಅವರಿಗೆ ನೆರವು ನೀಡಬೇಕು, ಅವರ ಜತೆ ನಿಲ್ಲಬೇಕು ಎಂಬ ಒಂದೇ ಕಾರಣದಿಂದ ನಾನು ರಾಜಕೀಯ ಪ್ರವೇಶಿಸಿದೆ. ಆದರೆ, ನಾನೀಗ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ. ನನ್ನ ರಾಜಕೀಯ ಪಯಣದಲ್ಲಿ ಯಾರಿಗಾದರೂ ನೋವುಂಟು ಮಾಡಿದ್ದರೆ, ಅದಕ್ಕೆ ಕ್ಷಮೆಯಾಚಿಸುತ್ತೇನೆ. ಚುನಾವಣೆ ಪ್ರಚಾರದಲ್ಲಿ ನನ್ನ ವಿರುದ್ಧ ಅಭಿಯಾನ ಶುರುವಾಗಿ, ಅದು ಪಕ್ಷದ ಸೋಲಿಗೆ ಕಾರಣವಾಗಿದ್ದರೆ ಅದಕ್ಕೂ ಕ್ಷಮೆಯಾಚಿಸುತ್ತೇನೆ. ಬಿಜು ಪರಿವಾರಕ್ಕೂ ನಾನು ಕ್ಷಮೆ ಕೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನವೀನ್ ಪಟ್ನಾಯಕ್‌ ಅವರಿಗೆ ವಿ.ಕೆ. ಪಾಂಡಿಯನ್‌ ಅವರು ತುಂಬ ಆಪ್ತರಾಗಿದ್ದರು. ನವೀನ್‌ ಪಟ್ನಾಯಕ್‌ ಅವರ ವಯಸ್ಸಿನ ಕಾರಣದಿಂದಾಗಿ ವಿ.ಕೆ.ಪಾಂಡಿಯನ್‌ ಅವರೇ ಬಿಜೆಡಿಯ ಉತ್ತರಾಧಿಕಾರಿಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ನರೇಂದ್ರ ಮೋದಿ ಅವರು ಒಡಿಶಾದಲ್ಲಿ ಚುನಾವಣೆ ಪ್ರಚಾರದ ವೇಳೆ, ಬಿಜೆಪಿ ಗೆದ್ದರೆ ಒಡಿಶಾ ಮೂಲದವರೇ ಸಿಎಂ ಆಗುತ್ತಾರೆ ಎಂದಿದ್ದರು. ವಿ.ಕೆ.ಪಾಂಡಿಯನ್‌ ಅವರು ತಮಿಳು ಮೂಲದವರಾದ ಕಾರಣ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದರು.

ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಒಡಿಶಾದ 21 ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಡಿಯು ತೀವ್ರ ಮುಖಭಂಗ ಅನುಭವಿಸಿದೆ. 21 ಕ್ಷೇತ್ರಗಳ ಪೈಕಿ ಬಿಜೆಪಿಯು 20 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್‌ 1 ಕ್ಷೇತ್ರದಲ್ಲಿ ಗೆದ್ದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಡಿ ಈ ಬಾರಿ ಒಂದೂ ಕ್ಷೇತ್ರ ಗೆದ್ದಿಲ್ಲ.

ಇದನ್ನೂ ಓದಿ: Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Continue Reading

ಉದ್ಯೋಗ

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆಗೆ ಜೂ. 13 ಕೊನೆಯ ದಿನ

Job Alert: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ. ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ (UPSC Specialist Grade III, Assistant Director Grade-II & Other Recruitment 2024). ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13. ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ ಜೂನ್‌ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪ ಅಧೀಕ್ಷಕ ಪುರಾತತ್ವ ರಸಾಯನ ಶಾಸ್ತ್ರಜ್ಞ – 4 ಹುದ್ದೆ, ವಿದ್ಯಾರ್ಹತೆ- ಪದವಿ / ಸ್ನಾತಕೋತ್ತರ ಪದವಿ (ರಸಾಯನ ಶಾಸ್ತ್ರ)
ಉಪ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ – 67 ಹುದ್ದೆ, ವಿದ್ಯಾರ್ಹತೆ- ಪಿಜಿ (ಪುರಾತತ್ವಶಾಸ್ತ್ರ / ಭಾರತೀಯ ಇತಿಹಾಸ)
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್‌ಕ್ವಾರ್ಟಸ್‌ (ನೌಕಾಪಡೆ) – 4 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್) – 6 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಮೆಡಿಸಿನ್) – 61 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ) – 39 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ) 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್) – 23 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್-3 (ಅನಸ್ತೇಶಿಯಾಲಜಿ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಕುಷ್ಠರೋಗ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಮೆಡಿಸಿನ್) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಸರ್ಜರಿ) – 7 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ರಸೂತಿ ಮತ್ತು ಜ್ಞಾನಶಾಸ್ತ್ರ) – 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ನೇತ್ರಶಾಸ್ತ್ರ) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಆರ್ಥೋಪೆಡಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 ಓಟೊ-ರೈನೋ-ಲಾರಿಂಗಲಜಿ (ಕಿವಿ, ಮೂಗು ಮತ್ತು ಗಂಟಲು) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪೀಡಿಯಾಟ್ರಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ಯಾಥಾಲಜಿ) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಸೈಕಿಯಾಟ್ರಿ) – 1 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (ಡಿಸಿಐಒ / ಟೆಕ್) 9 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸಹಾಯಕ ನಿರ್ದೇಶಕರು (ತೋಟಗಾರಿಕೆ) 4 ಹುದ್ದೆ, ವಿದ್ಯಾರ್ಹತೆ ಎಂಎಸ್‌ಸಿ ತೋಟಗಾರಿಕೆ
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಕೆಮಿಕಲ್) 5 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಭಾಗ)/ ಪಿಜಿ (ರಸಾಯನಶಾಸ್ತ್ರ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಆಹಾರ) 19 ಹುದ್ದೆ, ವಿದ್ಯಾರ್ಹತೆ: ಪದವಿ (ಫುಡ್ ಟೆಕ್ನಾಲಜಿ)/ ಪಿಜಿ ಡಿಪ್ಲೋಮಾ (ಫ್ರೂಟ್ಸ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಹೊಸೇರಿ) 12 ಹುದ್ದೆ, ವಿದ್ಯಾರ್ಹತೆ: ಪದವಿ (ಟೆಕ್ಸ್ ಟೈಲ್ ಟೆಕ್ನಾಲಜಿ ಅಥವಾ ಹೋಸಿಯರಿ ಟೆಕ್ನಾಲಜಿ ಅಥವಾ ನೈಟಿಂಗ್‌ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಲೆದರ್ & ಪಾದರಕ್ಷೆ) – 8 ಹುದ್ದೆ, ವಿದ್ಯಾರ್ಹತೆ: ಪದವಿ (ಲೆದರ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಮೆಟಲ್ ಫಿನಿಶಿಂಗ್) – 2 ಹುದ್ದೆ, ವಿದ್ಯಾರ್ಹತೆ: ಪದವಿ (ಕೆಮಿಕಲ್)
ಟೆಕ್ನಾಲಜಿ ಅಥವಾ ಕೆಮಿಕಲ್ ಎಂಜಿನಿಯರಿಂಗ್) / ಪಿಜಿ (ಕೆಮಿಸ್ಟ್ರಿ)
ಎಂಜಿನಿಯರ್ ಮತ್ತು ಹಡಗು ಸರ್ವೇಯರ್ ಕಮ್-ಡೆಪ್ಯುಟಿ ಡೈರೆಕ್ಟರ್ ಜನರಲ್ (ಟೆಕ್ನಿಕಲ್) – 2 ಹುದ್ದೆ, ವಿದ್ಯಾರ್ಹತೆ: ಮೆರೈನ್ ಎಂಜಿನಿಯರ್ ಆಫೀಸರ್ ಕ್ಲಾಸ್ -1ರ ಪ್ರಮಾಣ ಪತ್ರ
ತರಬೇತಿ ಅಧಿಕಾರಿ (ಮಹಿಳಾ ತರಬೇತಿ)- ಉಡುಪು ತಯಾರಿಕೆ – 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ತರಬೇತಿ ಅಧಿಕಾರಿ (ಮಹಿಳಾ ತರಬೇತಿ) – ಎಲೆಕ್ಟ್ರಾನಿಕ್ ಮಕಾನಿಕ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ಅಸಿಸ್ಟೆಂಟ್‌ ಫೊಫೆಸರ್‌ – 1 ಹುದ್ದೆ, ವಿದ್ಯಾರ್ಹತೆ: ಎಂ.ಸಿ.ಎಚ್. ಯುರಾಲಜಿ ಅಥವಾ ಡಿಎನ್‌ಬಿ (ಯುರಾಲಜಿ)

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿ 25 ರೂ. ಪಾವತಿಸಬೇಕು. ಮೀಸಲಾತಿ ಹೊಂದಿರುವವರಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading
Advertisement
Narendra Modi Live
ದೇಶ20 seconds ago

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Champions Trophy 2025
ಪ್ರಮುಖ ಸುದ್ದಿ18 mins ago

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Fake CBI Gang
ಕ್ರೈಂ38 mins ago

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

Kannada New Movie Chilli Chicken Official Trailer
ಸ್ಯಾಂಡಲ್ ವುಡ್52 mins ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

IND vk PAK
ಕ್ರಿಕೆಟ್52 mins ago

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

Champions Trophy 2025
ಕ್ರೀಡೆ55 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಮುಹೂರ್ತ ಫಿಕ್ಸ್​; ಪಾಕ್​ಗೆ ತೆರಳಲಿದೆಯೇ ಭಾರತ?

Killer Python
ಕ್ರೈಂ58 mins ago

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

Dupatta Selection Tips
ಫ್ಯಾಷನ್1 hour ago

Dupatta Selection Tips: ಪರ್ಫೆಕ್ಟ್ ದುಪಟ್ಟಾ ಸೆಲೆಕ್ಷನ್‌ಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

Viral Video
ಕ್ರೈಂ1 hour ago

Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

Dharwad News The monkey sat on the corpse during the funeral
ಧಾರವಾಡ1 hour ago

Dharwad News : ಅಗ್ನಿ ಸ್ಪರ್ಶ ಮಾಡುವಾಗಲೇ ಶವದ ಮೇಲೆ ಹಾರಿ ಕುಳಿತ ಮಂಗ! ಮುಂದೇನಾಯಿತು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌