Horoscope Today | ಬುಧನ ವಕ್ರಿ ಸಂಚಾರ; ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today | ಬುಧನ ವಕ್ರಿ ಸಂಚಾರ; ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಸಪ್ತಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today daily horoscope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (29-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ.

ತಿಥಿ: ಸಪ್ತಮಿ 19:16 ವಾರ: ಗುರುವಾರ
ನಕ್ಷತ್ರ: ಪೂರ್ವಭಾದ್ರ 11:42 ಯೋಗ: ವ್ಯತಿಪಾತ 11:44
ಕರಣ: ಗರಜ 07:54 ಇಂದಿನ ವಿಶೇಷ: ಶಾಕಂಬರೀ ನವರಾತ್ರಾರಂಭ, ಬುಧವಕ್ರಾರಂಭ, ಶುಕ್ರ ಸಂಚಾರ.
ಅಮೃತಕಾಲ: ಮುಂಜಾನೆ 04 ಗಂಟೆ 04 ನಿಮಿಷದಿಂದ 05 ಗಂಟೆ 36 ನಿಮಿಷದವರೆಗೆ.

ಸೂರ್ಯೋದಯ: 06 : 40    ಸೂರ್ಯಾಸ್ತ: 0೬ : 03

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲದಿಂದಾಗಿ ನೀವು ಅಂದುಕೊಂಡ ಕೆಲಸಗಳು ಆಗಲಿವೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗದ ಸ್ಥಳದಲ್ಲಿ ಹೆಚ್ಚಿನ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ. ಆರ್ಥಿಕವಾಗಿ ಸುಧಾರಣೆ ಆಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ. ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗ್ರತೆ ಇರಲಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ. ಇದು ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಆರ್ಥಿಕ ಜೀವನದಲ್ಲಿ ಇಂದು ಸಂತೋಷವಾಗಿರುವಿರಿ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಉದ್ಯೋಗಿಗಳಿಗೆ ಇಂದು ಕಿರಿಕಿರಿಯ ದಿನ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ತುಲಾ: ಆರೋಗ್ಯ ಪರಿಪೂರ್ಣ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗ ದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಹೆಚ್ಚು. ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಧನಸ್ಸು: ನಿಮ್ಮ ಮನೆಯಲ್ಲಿ ಇಂದು ಸಂತೋಷ ತುಂಬಿದ ವಾತಾವರಣ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಬೇರೆಯವರು ಗುರುತಿಸುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ವ್ಯಕ್ತವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ಅನಗತ್ಯ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Bhavani Revanna: ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಹಾಗಾಗಿ, ತಾಯಿ-ಮಗನಿಗೆ ಮೇ 31 ಮಹತ್ವದ ದಿನವಾಗಿದೆ.

VISTARANEWS.COM


on

Bhavani Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿದೆ. ಮೇ 31ರಂದು ನ್ಯಾಯಾಲಯವು ಆದೇಶ ಹೊರಡಿಸಿದ್ದು, ಅಲ್ಲಿಯವರೆಗೆ ಭವಾನಿ ರೇವಣ್ಣ ಕಾಯಬೇಕಿದೆ. ಇನ್ನು, ಮೇ 31ರಂದು ಆಗಮಿಸಲಿರುವ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನೂ ಮೇ 31ಕ್ಕೆ ನಡೆಸುವುದಾಗಿ ಕೋರ್ಟ್‌ ತಿಳಿಸಿದೆ. ಹಾಗಾಗಿ, ಮೇ 31 ತಾಯಿ-ಮಗನಿಗೆ ಪ್ರಮುಖ ದಿನವಾಗಿದೆ.

ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್‌ ತಿಳಿಸಿದೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಮೂರೂ ಅರ್ಜಿಗಳ ಕುರಿತು ಕೋರ್ಟ್‌ ನೀಡುವ ತೀರ್ಪಿನ ಎಚ್‌.ಡಿ.ರೇವಣ್ಣ ಕುಟುಂಬದ ಭವಿಷ್ಯ ನಿಂತಿದೆ.

Prajwal Revanna Case

ಇದಕ್ಕೂ ಮೊದಲು ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತು.

ನಾಳೆಯೇ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದಾರೆ. ಆದರೆ, ನಾಳೆಯೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಮೂರೂ ಪ್ರಕರಣಗಳಲ್ಲಿ ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕು. ಹಾಗಾಗಿ, ಮೇ 31ರಂದು ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿತು.

4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: Prajwal Revanna Case: ಕೆ ಆರ್‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌; ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

Continue Reading

ಕರ್ನಾಟಕ

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Prajwal Revanna Case: ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಂತಾಗಿದೆ. ಭಾರತಕ್ಕೆ ಹಾಸನ ಸಂಸದ ಬರುತ್ತಲೇ ಬಂದನಕ್ಕೀಡಾಗಬಾರದು ಎಂಬ ದೃಷ್ಟಿಯಿಂದ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮೇ 31ರಂದು ಭಾರತಕ್ಕೆ ಆಗಮಿಸುವುದಾಗಿ ಹೇಳಿದ್ದ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು, ಇದೀಗ ಬೆಂಗಳೂರಿಗೆ ಟಿಕೆಟ್‌ ಮಾಡಿರುವುದು ಕಂಡುಬಂದಿದೆ. ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್‌ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫ್ಲೈಟ್‌ ಹತ್ತಲಿದ್ದಾರೆ. ಮತ್ತೊಂದೆಡೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೇ (Bengaluru Report) ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ನಿರೀಕ್ಷಣಾ ಜಾಮೀನಿಗಾಗಿ ಪ್ರಜ್ವಲ್‌ ರೇವಣ್ಣ ಪರ ವಕೀಲರೊಬ್ಬರು ಅರ್ಜಿ (Anticipatory Bail Plea) ಸಲ್ಲಿಸಿದ್ದಾರೆ.

ಹೌದು, ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಂತಾಗಿದೆ. ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುತ್ತಲೇ ಅವರನ್ನು ಬಂಧಿಸಬಾರದು ಎಂಬ ದೃಷ್ಟಿಯಿಂದ ಅರುಣ್‌ ಅವರು ಪ್ರಜ್ವಲ್‌ ರೇವಣ್ಣ ಪರ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈಗ ನ್ಯಾಯಾಲಯವು ಅರ್ಜಿಯ ಕುರಿತು ಯಾವ ತೀರ್ಪು ನೀಡುತ್ತದೆ ಎಂಬ ಕುತೂಹಲ ಮೂಡಿದೆ.

Prajwal Revanna case

ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫ್ಲೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಮೇ 27ರಂದು ವಿಡಿಯೊದಲ್ಲಿ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ, ನಾನು ಶುಕ್ರವಾರ (ಮೇ 31) ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂಬುದಾಗಿ ಹೇಳಿದ್ದರು.

ಇದನ್ನೂ ಓದಿ: Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Continue Reading

ದೇಶ

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Arvind Kejriwal: ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ. ಇದು ಈಗ ಭಾರಿ ಸಂಚಲನ ಮೂಡಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶತಾಯ ಗತಾಯ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದಲ್ಲಿ (India Bloc) ಆರಂಭದಿಂದಲೂ ಭಿನ್ನಮತ, ಭಿನ್ನಾಭಿಪ್ರಾಯ ತಲೆದೋರುತ್ತಿವೆ. ನಿತೀಶ್‌ ಕುಮಾರ್‌ (Nitish Kumar) ಇಂಡಿಯಾ ಒಕ್ಕೂಟ ತೊರೆದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದ್ದೇ ಇದಕ್ಕೆ ನಿದರ್ಶನಗಳಾಗಿವೆ. ಇದರ ಬೆನ್ನಲ್ಲೇ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ ಜತೆಗಿನ ನಮ್ಮ ಮದುವೆಯು (ಆಪ್‌-ಕಾಂಗ್ರೆಸ್‌ ಮೈತ್ರಿ) (AAP Congress Alliance) ಶಾಶ್ವತ ಅಲ್ಲ” ಎಂದು ಹೇಳುವ ಮೂಲಕ ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.

ಇಂಡಿಯಾ ಟುಡೇ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅರವಿಂದ್‌ ಕೇಜ್ರಿವಾಲ್‌ ಅವರು ಹೀಗೆ ಹೇಳಿದ್ದಾರೆ. “ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಮಾತ್ರ ನಾವು ಮೈತ್ರಿ ಮಾಡಿಕೊಂಡಿದ್ದೇವೆ” ಎಂದು ಹೇಳಿರುವುದು ಭಾರಿ ಸಂಚಲನ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಹೇಳಿತು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ, ನಾನು ಜೈಲಿಗೆ ಹೋಗುತ್ತೇನೆ ಎಂಬುದು ಮುಖ್ಯ ವಿಷಯವಲ್ಲ. ದೇಶದ ಭವಿಷ್ಯದ ಬಗ್ಗೆ ನನಗೆ ಚಿಂತೆ ಇದೆ. ಅವರಿಗೆ ಎಷ್ಟು ದಿನ ಬೇಕೋ, ಅಷ್ಟು ದಿನ ನನ್ನನ್ನು ಜೈಲಿನಲ್ಲಿ ಇರಿಸಲಿ. ನಾವು ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ, ಹೋರಾಟ ನಿಲ್ಲಿಸಲ್ಲ” ಎಂದಿದ್ದಾರೆ. ಕೇಜ್ರಿವಾಲ್‌ ಅವರು ಜೂನ್‌ 2ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಗೆ ದೀದಿ ಗೈರು

ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದು ಕೂಡ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Continue Reading

ಪ್ರಮುಖ ಸುದ್ದಿ

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Love Jihad: ರಾಜ್ಯದ ಯಾವುದೇ ಹಿಂದು ಯುವತಿಯರಿಗೆ ಅನ್ಯ ಧರ್ಮದವರು ತೊಂದರೆ ನೀಡಿದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಶ್ರೀರಾಮ್ ಸೇನೆ ತಿಳಿಸಿದೆ.

VISTARANEWS.COM


on

Love Jihad
Koo

ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು (Love Jihad) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದು ಯುವತಿಯರ ರಕ್ಷಣೆಗೆ ಶ್ರೀ ರಾಮಸೇನೆಯಿಂದ ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯದ ಯಾವುದೇ ಹಿಂದು ಯುವತಿಯರಿಗೆ ಅನ್ಯ ಧರ್ಮದವರು ತೊಂದರೆ ನೀಡಿದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಶ್ರೀರಾಮ್ ಸೇನೆ ತಿಳಿಸಿದೆ.

ನಗರದ ಕ್ಯುಬಿಕ್ಸ್‌ ಹೋಟೆಲ್‌ನಲ್ಲಿ ಲವ್ ಜಿಹಾದ್ ಜಾಗೃತಿಗಾಗಿ ಸಹಾಯವಾಣಿಗೆ (9090443444) ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನೇಹಾ ಹಿರೇಮಠ ಕುಟುಂಬಸ್ಥರು, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶ್ರೀರಾಮಸೇನೆ ಪದಾಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದು ಹೆಣ್ಮಕ್ಕಳ ಮತಾಂತರ, ಅತ್ಯಾಚಾರ ನಡೆಯುತ್ತಿದೆ. ಘಜ್ನಿ, ಘೋರಿ, ಟಿಪ್ಪು ಸುಲ್ತಾನ್‌ವರೆಗೂ ಈ ಪ್ರಕ್ರಿಯೆ ಚಾಲನೆಯಲ್ಲಿದೆ. ಹಿಂದು ಯುವತಿಯರಿಗಾಗಿ ನಾವು ಸಹಾಯವಾಣಿ ಉದ್ಘಾಟನೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಇದ್ದರೂ ನಮಗೆ ತಿಳಿಸಬೇಕು, ನಾವು 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸುತ್ತೇವೆ. ಹಿಂದು ಹೆಣ್ಮಕ್ಕಳು ಸಾಯಬೇಡಿ, ನೀವು ಸಾಯಿಸೋ ಯೋಚನೆ ಮಾಡಬೇಕು. ನಾವು ನಿಮಗೆ ಟ್ರೇನಿಂಗ್ ಕೊಡ್ತೀವಿ, ಕ್ರೂರತನಕ್ಕೆ ಅಲ್ಲೆ ಉತ್ತರ ಕೊಡಬೇಕು. ಹಾಡಹಗಲೇ ನೇಹಾ ಕೊಲೆಯಾಗುತ್ತೆ ಅಂದ್ರೆ ಅವರಿಗೆ ಎಷ್ಟು ಟ್ರೈನಿಂಗ್ ‌ಕೊಟ್ಟಿರಬೇಕು ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕರೇ ನೀವು ಮುಸ್ಲಿಂ ಮತಗಳಿಗಾಗಿ ಜೊಲ್ಲು ಸುರಿಸಬೇಡಿ. ಮುಸ್ಲಿಂ ಯುವಕರು ನಿಮ್ಮ ಹೆಣ್ಣುಮಕ್ಕಳನ್ನೂ ಬಿಡೋದಿಲ್ಲ. ಸರ್ಕಾರ, ರಾಜಕಾರಣಿಗಳು ಫೇಲ್ ಆಗಿದ್ದಕ್ಕೆ ನಾವು ಇದಕ್ಕೆ ಮುಂದಾಗಿದ್ದೇವೆ. ಹೌದು, ಇದು ನೈತಿಕ ಪೋಲಿಸ್ ಗಿರಿ. ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಹೀಗಾಗಿ ನಾವು ನೈತಿಕ ಪೊಲೀಸ್ ಗಿರಿ ಆರಂಭಿಸಿದ್ದೇವೆ. ನಾವು ಹಿಂದು ಹೆಣ್ಣುಮಕ್ಕಳಿಗೆ ಬರೀ ತ್ರಿಶೂಲ ಮಾತ್ರ ಅಲ್ಲಾ, ಗನ್, ಲಾಂಗ್ ಮಚ್ಚು ಟ್ರೈನಿಂಗ್ ನೀಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ಹುಬ್ಬಳ್ಳಿಯಲ್ಲಿ ಮಾತ್ರವಲ್ಲದೇ ದಾವಣಗೆರೆ, ಕಲಬುರಗಿ, ಬಾಗಲಕೋಟೆ, ಬೆಂಗಳೂರು ಸೇರಿ ವಿವಿಧೆಡೆ ಲವ್‌ ಜಿಹಾದ್‌ ತಡೆಗೆ ಶ್ರೀರಾಮಸೇನಿಯ ಸಹಾಯವಾಣಿಗೆ ಏಕಕಾಲದಲ್ಲಿ ಚಾಲನೆ ನೀಡಲಾಗಿದೆ.

Continue Reading
Advertisement
Babar Azam
ವೈರಲ್ ನ್ಯೂಸ್11 mins ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್19 mins ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ19 mins ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ35 mins ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್51 mins ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Rashmika Mandanna shares why she doesn’t speak English
ಸಿನಿಮಾ54 mins ago

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Bhavani Revanna
ಕರ್ನಾಟಕ1 hour ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ1 hour ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ1 hour ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ1 hour ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌