Heeraben Modi | ಅಮ್ಮ ಎಷ್ಟು ಅಸಾಧಾರಣಳೋ, ಅಷ್ಟೇ ಸರಳ… ಶತಾಯುಷಿ ತಾಯಿ ಬಗ್ಗೆ ಮೋದಿ ಬರೆದಿದ್ದ ಹೃದಯಸ್ಪರ್ಶಿ ಲೇಖನ - Vistara News

ದೇಶ

Heeraben Modi | ಅಮ್ಮ ಎಷ್ಟು ಅಸಾಧಾರಣಳೋ, ಅಷ್ಟೇ ಸರಳ… ಶತಾಯುಷಿ ತಾಯಿ ಬಗ್ಗೆ ಮೋದಿ ಬರೆದಿದ್ದ ಹೃದಯಸ್ಪರ್ಶಿ ಲೇಖನ

ಹೀರಾಬೆನ್‌ ಅವರು ಶತಾಯುಷಿಯಾದ ಸಂದರ್ಭ, ಪ್ರಧಾನಿ ಮೋದಿಯವರು ತಾಯಿಯ ಸರಳ ಸ್ವಭಾವ, ಕಷ್ಟ ಸಹಿಷ್ಣುತೆ, ತ್ಯಾಗ, ಅವರ ಜೀವನದಲ್ಲಿ ಉಂಡ ಕಡುಬಡತನದ ದಿನಗಳು, ಮಕ್ಕಳನ್ನು ಬೆಳೆಸಲು ತಾಯಿ (Heeraben Modi ) ಪಟ್ಟ ಬವಣೆ ಎಲ್ಲವನ್ನೂ ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದರು. (Heeraben Modi) ಲೇಖನದ ಸಾರಾಂಶ ಇಲ್ಲಿದೆ.

VISTARANEWS.COM


on

heeraben
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿ ನಗರ: ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ನಗರದಲ್ಲಿ ಅಗಲಿದ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆಯಲ್ಲಿ ಶುಕ್ರವಾರ ಭಾಗವಹಿಸಿದ್ದಾರೆ. ಮೊದಲಿನಿಂದಲೂ ನರೇಂದ್ರ ಮೋದಿ ಅವರಿಗೆ ಅಮ್ಮ ಎಂದರೆ ಪ್ರೀತಿ ಮತ್ತು ಹೆಮ್ಮೆ. ಪ್ರತಿ ವರ್ಷ ತಾಯಿಯ ಜನ್ಮ ದಿನದಂದು ಎಲ್ಲಿದ್ದರೂ, ತಪ್ಪದೆ ಮನೆಗೆ ಬಂದು ಭೇಟಿಯಾಗಿ ಆಶೀರ್ವಾದವನ್ನು ಪಡೆಯುತ್ತಿದ್ದರು. ತಾಯಿಯ ತ್ಯಾಗ, ಸರಳ ಜೀವನ, ಆದರ್ಶಗಳ ಬಗ್ಗೆ ಮೋದಿಯವರು ಹಲವಾರು ಬಾರಿ ಸ್ಮರಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಹೀರಾಬೆನ್‌ ಅವರಿಗೆ ನೂರು ವರ್ಷ ತುಂಬಿದಾಗ ಹೃದಯಸ್ಪರ್ಶಿಯಾಗಿ ಸುದೀರ್ಘ ಲೇಖನವನ್ನು ತಮ್ಮ ಬ್ಲಾಗ್‌ನಲ್ಲಿ (Heeraben Modi )ಬರೆದಿದ್ದರು.

ಇಡೀ ದೇಶದ ಸಮಸ್ತ ತಾಯಂದಿರ ಹೃದಯ ವೈಶಾಲ್ಯತೆಯನ್ನು ಆಗ ಮೋದಿಯವರು ಸಮೀಕರಿಸಿದ್ದರು. ನಿಮ್ಮ ತಾಯಿ ಕೂಡ ನನ್ನ ತಾಯಿಯ ಹಾಗೆ ಎಂಬುದು ನನಗೆ ಖಾತರಿ ಇದೆ ಎನ್ನುವ ಮೂಲಕ ಎಲ್ಲ ತಾಯಂದರಿಗೂ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದರು. ಈ ಮೂಲಕ “ಮಾತೃ ದೇವೊಭವʼದ ಆದರ್ಶವನ್ನು ಸಾರಿದ್ದರು. ದೇಶಕ್ಕೆ ಪ್ರಧಾನಿಯಾದರೂ, ತಾಯಿಗೆ ಮಗನಲ್ಲವೇ. ಭಾರತೀಯರು ತಾಯಿಗೆ “ಮಾತೃ ದೇವೋಭವʼ ಎಂದು ಎಲ್ಲರಿಗಿಂತ ಮಿಗಿಲಾದ ಉನ್ನತ ಹಾಗೂ ಪೂಜ್ಯ ಸ್ಥಾನಮಾನವನ್ನು ಮತ್ತು ಶ್ರೇಷ್ಠ ಮೌಲ್ಯವನ್ನು ಪ್ರಾಚೀನ ಕಾಲದಿಂದಲೇ ನೀಡಿದ್ದಾರೆ. ತಾಯಿಯಲ್ಲಿ ದೇವರನ್ನು ಕಾಣುವುದು ಭಾರತದ ಸಂಸ್ಕೃತಿಯೂ ಹೌದು.

ತಾಯಿ ಹೀರಾಬೆನ್‌ ಶತಾಯುಷಿಯಾದಾಗ ಪ್ರಧಾನಿ ಮೋದಿ ಬರೆದ ಲೇಖನದ ಸಾರಾಂಶ:

ನನ್ನಲ್ಲಿರುವ ಒಳ್ಳೆಯತನಕ್ಕೆ ಹೆತ್ತವರೇ ಕಾರಣ

ನನ್ನ ಅಮ್ಮ ಶ್ರೀಮತಿ ಹೀರಾಬಾ ನೂರನೇ ವರ್ಷಕ್ಕೆ ಕಾಲಿಡುತ್ತಿರುವುದನ್ನು ಹಂಚಿಕೊಳ್ಳಲು ನನಗೆ ಅತ್ಯಂತ ಸಂತೋಷವಾಗುತ್ತಿದೆ. ಇದು ಅವರ ಜನ್ಮ ಶತಮಾನೋತ್ಸವ ವರ್ಷ. ನನ್ನ ತಂದೆ ಬದುಕಿದ್ದರೆ ಅವರೂ ಕಳೆದ ವಾರ ನೂರನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ತಾಯಿಯ ಶತಮಾನೋತ್ಸವ ವರ್ಷ ಆರಂಭವಾಗುತ್ತಿರುವುದರಿಂದ ಮತ್ತು ನನ್ನ ತಂದೆಯವರು ಶತಮಾನೋತ್ಸವವನ್ನು ಪೂರ್ಣಗೊಳಿಸುತ್ತಿದ್ದರಿಂದ 2022 ಒಂದು ವಿಶೇಷ ವರ್ಷ.

ಕಳೆದ ವಾರವಷ್ಟೇ, ನನ್ನ ಸೋದರ ಸಂಬಂಧಿಯು ಗಾಂಧಿನಗರದಲ್ಲಿರುವ ನನ್ನ ತಾಯಿಯ ಕೆಲವು ವೀಡಿಯೊಗಳನ್ನು ಕಳುಹಿಸಿದ್ದರು. ಕೆಲವು ಯುವಕರು ಮನೆಗೆ ಬಂದಿದ್ದರು, ತಂದೆಯ ಭಾವಚಿತ್ರವನ್ನು ಕುರ್ಚಿಯ ಮೇಲೆ ಇಡಲಾಗಿತ್ತು, ಕೀರ್ತನೆ ನಡೆಯುತ್ತಿತ್ತು ಮತ್ತು ತಾಯಿ ಮಂಜೀರ ನುಡಿಸುತ್ತಾ ಭಜನೆಯಲ್ಲಿ ಮಗ್ನರಾಗಿದ್ದರು. ಅಮ್ಮ ಇನ್ನೂ ಹಾಗೆಯೇ ಇದ್ದಾರೆ – ವಯೋಸಹಜತೆಯಿಂದ ದೈಹಿಕವಾಗಿ ಕ್ಷೀಣಿಸಿರಬಹುದು, ಆದರೆ ಮಾನಸಿಕವಾಗಿ ಆಕೆ ಎಂದಿನಂತೆಯೇ ಚುರುಕಾಗಿದ್ದಾರೆ.

ನಮ್ಮ ಕುಟುಂಬದಲ್ಲಿ ಹುಟ್ಟುಹಬ್ಬವನ್ನು ಆಚರಿಸುವ ಪದ್ಧತಿ ಇರಲಿಲ್ಲ. ಆದರೆ, ನನ್ನ ತಂದೆಯ ಜನ್ಮದಿನದಂದು ಅವರ ನೆನಪಿಗಾಗಿ ಯುವ ಪೀಳಿಗೆಯ ಮಕ್ಕಳು 100 ಗಿಡಗಳನ್ನು ನೆಟ್ಟರು.

ನನ್ನ ಜೀವನದಲ್ಲಿ ನಡೆದ ಒಳ್ಳೆಯದಕ್ಕೆ ಮತ್ತು ನನ್ನಲ್ಲಿರುವ ಒಳ್ಳೆಯತನಕ್ಕೆ ನನ್ನ ಹೆತ್ತವರೇ ಕಾರಣ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಇಂದು, ದೆಹಲಿಯಲ್ಲಿ ಕುಳಿತಿರುವ ನನಗೆ ಹಿಂದಿನ ನೆನಪುಗಳು ತುಂಬಿ ಬರುತ್ತವೆ.

ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ, ಎಲ್ಲಾ ತಾಯಂದಿರಂತೆ!. ನಾನು ನನ್ನ ತಾಯಿಯ ಬಗ್ಗೆ ಬರೆಯುವಾಗ, ನಿಮ್ಮಲ್ಲಿ ಅನೇಕರಿಗೆ ನಿಮ್ಮ ತಾಯಂದಿರ ಬಗ್ಗೆ ಹೇಳಿದಂತೆಯೂ ಆಗಬಹುದು ಎಂದು ನನಗೆ ಖಾತ್ರಿಯಿದೆ. ಇದನ್ನು ಓದುವಾಗ, ನೀವು ನಿಮ್ಮ ಸ್ವಂತ ತಾಯಿಯ ಚಿತ್ರವನ್ನೇ ನೋಡಬಹುದು.

ಬಾಲ್ಯದಲ್ಲೇ ಅಮ್ಮನನ್ನು ಕಳೆದುಕೊಂಡಿದ್ದ ಹೀರಾಬೆನ್‌

ನನ್ನ ತಾಯಿ ಗುಜರಾತ್‌ನ ಮೆಹ್ಸಾನಾದ ವಿಸ್ನಗರದಲ್ಲಿ ಜನಿಸಿದರು, ಇದು ನನ್ನ ತವರು ವಡ್ನಾಗರಕ್ಕೆ ಬಹಳ ಹತ್ತಿರದಲ್ಲಿದೆ. ಆಕೆಗೆ ಸ್ವಂತ ತಾಯಿಯ ವಾತ್ಸಲ್ಯ ಸಿಗಲಿಲ್ಲ. ನನ್ನ ತಾಯಿಯು ಎಳೆವಯಸ್ಸಿನಲ್ಲಿಯೇ ನನ್ನ ಅಜ್ಜಿಯನ್ನು ಸ್ಪ್ಯಾನಿಷ್ ಫ್ಲೂ ಸಾಂಕ್ರಾಮಿಕ ರೋಗದಿಂದಾಗಿ ಕಳೆದುಕೊಂಡರು. ಆಕೆಗೆ ನನ್ನ ಅಜ್ಜಿಯ ಮುಖವಾಗಲಿ, ಅವಳ ಮಡಿಲಿನ ನೆಮ್ಮದಿಯಾಗಲಿ ನೆನಪಿಲ್ಲ. ಬಾಲ್ಯವನ್ನು ತನ್ನ ತಾಯಿಯಿಲ್ಲದೆ ಕಳೆದರು. ನಾವೆಲ್ಲರೂ ಮಾಡುವಂತೆ ಅವರು ತನ್ನ ತಾಯಿಯ ಮೇಲೆ ಕೋಪತಾಪ ತೋರಿಸಲು ಸಾಧ್ಯವಾಗಲಿಲ್ಲ. ನಮ್ಮೆಲ್ಲರಂತೆ ಅವರಿಗೆ ತನ್ನ ತಾಯಿಯ ಮಡಿಲಿನಲ್ಲಿ ಮಲಗಲಾಗಲಿಲ್ಲ. ಶಾಲೆಗೆ ಹೋಗಿ ಓದು ಬರಹ ಕಲಿಯಲೂ ಆಗಲಿಲ್ಲ. ಆಕೆಯ ಬಾಲ್ಯವು ಬಡತನ ಮತ್ತು ಕಷ್ಟದಿಂದ ಕೂಡಿತ್ತು.

ಇಂದಿಗೆ ಹೋಲಿಸಿದರೆ ಅಮ್ಮನ ಬಾಲ್ಯ ಅತ್ಯಂತ ಕಷ್ಟಕರವಾಗಿತ್ತು. ಬಹುಶಃ, ದೇವರು ಆಕೆಗೆ ನೀಡಿದ್ದು ಇದನ್ನೇ ಅನ್ನಿಸುತ್ತದೆ. ಇದು ದೇವರ ಇಚ್ಛೆ ಎಂದು ತಾಯಿಯೂ ನಂಬುತ್ತಾರೆ. ಆದರೆ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡು, ತಾಯಿಯ ಮುಖವನ್ನೂ ನೋಡಲಾಗಲಿಲ್ಲವಲ್ಲ ಎಂಬ ಕೊರಗು ಆಕೆಗೆ ನೋವು ನೀಡುತ್ತಲೇ ಇದೆ.
ಈ ಹೆಣಗಾಟಗಳಿಂದಾಗಿ ತಾಯಿಯು ಬಾಲ್ಯವನ್ನು ಅನುಭವಿಸಲಾಗಲಿಲ್ಲ, ಆಕೆಯು ತನ್ನ ವಯಸ್ಸಿಗೆ ಮೀರಿ ಬೆಳೆಯುವಂತೆ ಮಾಡಿತು. ಕುಟುಂಬದಲ್ಲಿ ಹಿರಿಯ ಮಗುವಾಗಿದ್ದ ಅವರು ಮದುವೆಯ ನಂತರ ಹಿರಿಯ ಸೊಸೆಯಾದರು. ಆಕೆಯ ಬಾಲ್ಯದಲ್ಲಿ, ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು ಮತ್ತು ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಮದುವೆಯ ನಂತರವೂ ಆಕೆ ಈ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದರು. ದುರ್ಭರವಾದ ಜವಾಬ್ದಾರಿಗಳು ಮತ್ತು ದೈನಂದಿನ ಹೋರಾಟಗಳ ಹೊರತಾಗಿಯೂ, ತಾಯಿ ಇಡೀ ಕುಟುಂಬವನ್ನು ಸಹನೆ ಮತ್ತು ಸ್ಥೈರ್ಯದಿಂದ ಒಟ್ಟಿಗೆ ಹಿಡಿದಿಟ್ಟರು.

ಮಳೆಗೆ ಸೋರುತ್ತಿದ್ದ ಪುಟ್ಟ ಗುಡಿಸಲೇ ಮನೆ

ಅಮ್ಮನ ಬಾಲ್ಯ ಅತ್ಯಂತ ಕಷ್ಟಕರವಾಗಿತ್ತು. ಬಹುಶಃ, ದೇವರು ಆಕೆಗೆ ನೀಡಿದ್ದು ಇದನ್ನೇ ಅನ್ನಿಸುತ್ತದೆ. ಇದು ದೇವರ ಇಚ್ಛೆ ಎಂದು ತಾಯಿಯೂ ನಂಬುತ್ತಾರೆ. ಆದರೆ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡು, ತಾಯಿಯ ಮುಖವನ್ನೂ ನೋಡಲಾಗಲಿಲ್ಲವಲ್ಲ ಎಂಬ ಕೊರಗು ಆಕೆಗೆ ನೋವು ನೀಡುತ್ತಲೇ ಇದೆ.
ಈ ಹೆಣಗಾಟಗಳಿಂದಾಗಿ ತಾಯಿಯು ಬಾಲ್ಯವನ್ನು ಅನುಭವಿಸಲಾಗಲಿಲ್ಲ, ಆಕೆಯು ತನ್ನ ವಯಸ್ಸಿಗೆ ಮೀರಿ ಬೆಳೆಯುವಂತೆ ಮಾಡಿತು. ಕುಟುಂಬದಲ್ಲಿ ಹಿರಿಯ ಮಗುವಾಗಿದ್ದ ಅವರು ಮದುವೆಯ ನಂತರ ಹಿರಿಯ ಸೊಸೆಯಾದರು. ಆಕೆಯ ಬಾಲ್ಯದಲ್ಲಿ, ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು ಮತ್ತು ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಮದುವೆಯ ನಂತರವೂ ಆಕೆ ಈ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದರು. ದುರ್ಭರವಾದ ಜವಾಬ್ದಾರಿಗಳು ಮತ್ತು ದೈನಂದಿನ ಹೋರಾಟಗಳ ಹೊರತಾಗಿಯೂ, ತಾಯಿ ಇಡೀ ಕುಟುಂಬವನ್ನು ಸಹನೆ ಮತ್ತು ಸ್ಥೈರ್ಯದಿಂದ ಒಟ್ಟಿಗೆ ಹಿಡಿದಿಟ್ಟರು.

ವಡ್ನಾಗರದಲ್ಲಿ, ನಮ್ಮ ಕುಟುಂಬವು ಶೌಚಾಲಯ ಅಥವಾ ಸ್ನಾನದ ಮನೆಯಂತಹ ಐಷಾರಾಮಗಳಿರಲಿ, ಕಿಟಕಿಯೂ ಇಲ್ಲದ ಪುಟ್ಟ ಮನೆಯಲ್ಲಿ ವಾಸಿಸುತ್ತಿತ್ತು. ಮಣ್ಣಿನ ಗೋಡೆಗಳು ಮತ್ತು ಮಣ್ಣಿನ ಹೆಂಚುಗಳ ಛಾವಣಿಯಿದ್ದ ಒಂದು ಕೋಣೆಯನ್ನೇ ನಾವು ನಮ್ಮ ಮನೆ ಎಂದು ಕರೆಯುತ್ತಿದ್ದೆವು. ನಾವೆಲ್ಲರೂ-ನನ್ನ ಹೆತ್ತವರು, ನನ್ನ ಒಡಹುಟ್ಟಿದವರು ಮತ್ತು ನಾನು ಅದರಲ್ಲಿಯೇ ಇದ್ದೆವು.

ಬೆಳಗ್ಗೆ ನಾಲ್ಕು ಗಂಟೆಗೆ ದಿನಚರಿ ಶುರು

ಗಡಿಯಾರದ ಗಂಟೆ ಬಾರಿಸಿದಂತೆ, ನನ್ನ ತಂದೆ ಬೆಳಗ್ಗೆ ನಾಲ್ಕು ಗಂಟೆಗೆ ಕೆಲಸಕ್ಕೆ ಹೋಗುತ್ತಿದ್ದರು. ಅವರ ಹೆಜ್ಜೆ ಸಪ್ಪಳವು ಅಕ್ಕಪಕ್ಕದವರಿಗೆ ಈಗ ನಾಲ್ಕು ಗಂಟೆಯಾಗಿದೆ ಮತ್ತು ದಾಮೋದರ್ ಕಾಕಾ ಕೆಲಸಕ್ಕೆ ಹೋಗುತ್ತಿದ್ದಾರೆ ಎಂದು ಹೇಳುತ್ತಿದ್ದವು. ತನ್ನ ಪುಟ್ಟ ಚಹಾ ಅಂಗಡಿಯನ್ನು ತೆರೆಯುವ ಮೊದಲು ಸ್ಥಳೀಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವುದು ಅವರ ಮತ್ತೊಂದು ದೈನಂದಿನ ಆಚರಣೆಯಾಗಿತ್ತು.

ತಾಯಿಯೂ ಅಷ್ಟೇ ಸಮಯಪಾಲನೆ ಮಾಡುತ್ತಿದ್ದರು. ಅವರು ಕೂಡ ನನ್ನ ತಂದೆಯೊಂದಿಗೆ ಏಳುತ್ತಿದ್ದರು ಮತ್ತು ಬೆಳಗ್ಗೆಯೇ ಅನೇಕ ಕೆಲಸಗಳನ್ನು ಮುಗಿಸುತ್ತಿದ್ದರು. ಕಾಳುಗಳನ್ನು ಅರೆಯುವುದರಿಂದ ಹಿಡಿದು ಅಕ್ಕಿ ಮತ್ತು ಬೇಳೆಯನ್ನು ಜರಡಿ ಹಿಡಿಯುವವರೆಗೆ ತಾಯಿಗೆ ಯಾರದೇ ನೆರವಿರಲಿಲ್ಲ. ಕೆಲಸ ಮಾಡುವಾಗ ಆಕೆ ತನ್ನ ನೆಚ್ಚಿನ ಭಜನೆ ಮತ್ತು ಸ್ತೋತ್ರಗಳನ್ನು ಗುನುಗುತ್ತಿದ್ದರು. 

ಕೆಲ ಮನೆಗಳಲ್ಲಿ ಪಾತ್ರೆ ತೊಳೆಯುತ್ತಿದ್ದ ಅಮ್ಮ

ಮನೆಯ ಖರ್ಚನ್ನು ನಿಭಾಯಿಸಲು ತಾಯಿ ಕೆಲವು ಮನೆಗಳಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದರು. ನಮ್ಮ ಅಲ್ಪ ಆದಾಯಕ್ಕೆ ಪೂರಕವಾಗಿ ಚರಖಾದಲ್ಲಿ ನೂಲುತ್ತಿದ್ದರು. ಹತ್ತಿ ಬಿಡಿಸುವುದರಿಂದ ಹಿಡಿದು ನೂಲುವವರೆಗೆ ಎಲ್ಲವನ್ನೂ ಮಾಡುತ್ತಿದ್ದರು. ಇಂತಹ ಕಷ್ಟದ ಕೆಲಸದ ನಡುವೆಯೂ ಹತ್ತಿಗಿಡದ ಮುಳ್ಳು ನಮಗೆ ಚುಚ್ಚದಂತೆ ಕಾಳಜಿ ವಹಿಸುತ್ತಿದ್ದರು.

ಮಳೆಗಾಲದಲ್ಲಿ ಸೋರುತ್ತಿದ್ದ ಛಾವಣಿ

ತಾಯಿ ಇತರರ ಮೇಲೆ ಅವಲಂಬಿತರಾಗುತ್ತಿರಲಿಲ್ಲ ಅಥವಾ ಇತರರನ್ನು ತನ್ನ ಕೆಲಸ ಮಾಡುವಂತೆ ಕೇಳುತ್ತಿರಲಿಲ್ಲ. ಮುಂಗಾರು ಮಳೆಯು ನಮ್ಮ ಮಣ್ಣಿನ ಮನೆಗೆ ಅದರದೇ ಆದ ಸಮಸ್ಯೆಗಳನ್ನು ತರುತ್ತಿತ್ತು. ಆದಾಗ್ಯೂ, ನಮಗೆ ತೊಂದರೆಗಳು ಆದಷ್ಟು ಕಡಿಮೆಯಾಗುವಂತೆ ತಾಯಿ ನೋಡಿಕೊಳ್ಳುತ್ತಿದ್ದರು. ಜೂನ್ ತಿಂಗಳ ಬಿಸಿಲಿನಲ್ಲಿ, ಅವಳು ನಮ್ಮ ಮಣ್ಣಿನ ಮನೆಯ ಛಾವಣಿಯ ಮೇಲೆ ಹತ್ತಿ ಹೆಂಚುಗಳನ್ನು ಸರಿಪಡಿಸುತ್ತಿದ್ದಳು. ಆದರೆ, ಆಕೆಯ ಈ ಎಲ್ಲ ಪ್ರಯತ್ನಗಳ ಹೊರತಾಗಿಯೂ, ನಮ್ಮ ಮನೆಯು ಮಳೆಯ ಆರ್ಭಟವನ್ನು ತಡೆದುಕೊಳ್ಳಲಾರದಷ್ಟು ಹಳೆಯದಾಗಿತ್ತು.

ಮನೆಗೆಲಸದಲ್ಲಿ ಒಪ್ಪ ಓರಣ

ತಾಯಿ ಮನೆಯನ್ನು ಒಪ್ಪವಾಗಿಡಲು ಇಷ್ಟಪಡುತ್ತಿದ್ದರು ಮತ್ತು ಅದನ್ನು ಸ್ವಚ್ಛಗೊಳಿಸಲು ಮತ್ತು ಸುಂದರಗೊಳಿಸಲು ಸಾಕಷ್ಟು ಸಮಯವನ್ನು ಕಳೆಯುತ್ತಿದ್ದರು. ಹಸುವಿನ ಸಗಣಿಯಿಂದ ನೆಲವನ್ನು ಸಾರಿಸುತ್ತಿದ್ದರು. ಹಸುವಿನ ಸಗಣಿಯ ಬೆರಣಿಯನ್ನು ಉರಿಸಿದಾಗ ಹೆಚ್ಚಿನ ಹೊಗೆ ಬರುತ್ತಿತ್ತು. ತಾಯಿ ನಮ್ಮ ಕಿಟಕಿಗಳಿಲ್ಲದ ಮನೆಯಲ್ಲಿ ಅದರಲ್ಲಿಯೇ ಅಡುಗೆ ಮಾಡುತ್ತಿದ್ದರು! ಗೋಡೆಗಳು ಮಸಿಯಿಂದ ಕಪ್ಪಾಗುತ್ತಿದ್ದವು ಮತ್ತು ಅವುಗಳಿಗೆ ಹೊಸ ಸುಣ್ಣ ಹೊಡೆಯುವ ಅಗತ್ಯವಿರುತ್ತಿತ್ತು. ಇದನ್ನೂ ತಾಯಿ ಕೆಲವು ತಿಂಗಳಿಗೊಮ್ಮೆ ಸ್ವತಃ ಮಾಡುತ್ತಿದ್ದರು. ಇದು ನಮ್ಮ ಪಾಳುಬಿದ್ದ ಮನೆಗೆ ತಾಜಾತನದ ಪರಿಮಳವನ್ನು ನೀಡುತ್ತಿತ್ತು. ಮನೆಯನ್ನು ಅಲಂಕರಿಸಲು ಸಾಕಷ್ಟು ಚಿಕ್ಕ ಮಣ್ಣಿನ ಬಟ್ಟಲುಗಳನ್ನೂ ಮಾಡುತ್ತಿದ್ದರು ಮತ್ತು ಮನೆಯ ಹಳೆಯ ವಸ್ತುಗಳನ್ನು ಮರುಬಳಕೆ ಮಾಡುವಲ್ಲಿ ಪ್ರಸಿದ್ಧವಾದ ಭಾರತೀಯ ಅಭ್ಯಾಸದಲ್ಲಿ ಅಮ್ಮ ಚಾಂಪಿಯನ್ ಆಗಿದ್ದರು.

ಅಮ್ಮನ ಮತ್ತೊಂದು ವಿಶಿಷ್ಟ ಅಭ್ಯಾಸ ನನಗೆ ನೆನಪಿದೆ. ಆಕೆ ಹಳೆಯ ಕಾಗದವನ್ನು ನೀರಿನಲ್ಲಿ ಅದ್ದಿ ಹುಣಸೆ ಬೀಜಗಳೊಂದಿಗೆ ಅಂಟಿನಂತಹ ಪೇಸ್ಟ್ ಅನ್ನು ತಯಾರಿಸುತ್ತಿದ್ದರು. ಈ ಪೇಸ್ಟ್‌ನಿಂದ ಗೋಡೆಗಳ ಮೇಲೆ ಕನ್ನಡಿಯ ತುಂಡುಗಳನ್ನು ಅಂಟಿಸಿ ಸುಂದರವಾದ ಚಿತ್ರಗಳನ್ನು ಮಾಡುತ್ತಿದ್ದರು. ಬಾಗಿಲಿಗೆ ನೇತು ಹಾಕಲು ಮಾರುಕಟ್ಟೆಯಿಂದ ಸಣ್ಣ ಪುಟ್ಟ ಅಲಂಕಾರಿಕ ವಸ್ತುಗಳನ್ನು ತರುತ್ತಿದ್ದರು.

ಹಾಸಿಗೆ ಸ್ವಚ್ಛವಾಗಿರಬೇಕು, ಸುಕ್ಕು, ಧೂಳು ಇರಕೂಡದು

ಹಾಸಿಗೆ ಸ್ವಚ್ಛವಾಗಿರಬೇಕು ಮತ್ತು ಸರಿಯಾಗಿ ಹಾಸಿರಬೇಕು ಎಂದು ತಾಯಿ ತುಂಬಾ ಗಮನಿಸುತ್ತಿದ್ದರು. ಹಾಸಿಗೆಯ ಮೇಲಿನ ಧೂಳನ್ನು ಸಹ ಅವರು ಸಹಿಸುತ್ತಿರಲಿಲ್ಲ. ಸ್ವಲ್ಪವೇ ಸುಕ್ಕು ಕಂಡರೂ ಅದನ್ನು ಕೊಡವಿ ಮತ್ತೆ ಹಾಸುತ್ತಿದ್ದರು. ಈ ಅಭ್ಯಾಸದ ಬಗ್ಗೆ ನಾವೆಲ್ಲರೂ ಬಹಳ ಎಚ್ಚರದಿಂದ ಇದ್ದೆವು. ಇಂದಿಗೂ, ಈ ವಯಸ್ಸಿನಲ್ಲೂ, ತನ್ನ ಹಾಸಿಗೆಯ ಮೇಲೆ ಒಂದೇ ಒಂದು ಸುಕ್ಕುಇರಬಾರದು ಎಂದು ನಮ್ಮ ತಾಯಿ ಬಯಸುತ್ತಾರೆ.

ಅಮ್ಮನ ಶುಚಿತ್ವದ ಮೇಲಿನ ಉಪಕಥೆಗಳ ಬಗ್ಗೆ ನಾನು ರಿಮ್ಗಟ್ಟಲೆ ಬರೆಯಬಲ್ಲೆ. ಅವರು ಇನ್ನೊಂದು ಗುಣವನ್ನು ಹೊಂದಿದ್ದರು – ಸ್ವಚ್ಛತೆ ಮತ್ತು ನೈರ್ಮಲ್ಯದಲ್ಲಿ ತೊಡಗಿರುವವರಿಗೆ ತುಂಬಾ ಗೌರವ ನೀಡುತ್ತಿದ್ದರು. ನನಗೆ ನೆನಪಿದೆ, ವಡ್ನಾಗರದಲ್ಲಿರುವ ನಮ್ಮ ಮನೆಯ ಪಕ್ಕದ ಚರಂಡಿಯನ್ನು ಸ್ವಚ್ಛಗೊಳಿಸಲು ಯಾರಾದರೂ ಬಂದಾಗ, ತಾಯಿ ಅವರಿಗೆ ಚಹಾ ನೀಡದೆ ಕಳುಹಿಸುತ್ತಿರಲಿಲ್ಲ.

ಪಶು-ಪಕ್ಷಿಗಳ ಬಗ್ಗೆ ವಾತ್ಸಲ್ಯ

ನಾನು ಯಾವಾಗಲೂ ನೆನಪಿಸಿಕೊಳ್ಳುವ ತಾಯಿಯ ಮತ್ತೊಂದು ಅಭ್ಯಾಸವೆಂದರೆ ಇತರ ಜೀವಿಗಳ ಬಗ್ಗೆ ಅವರ ವಿಶೇಷ ವಾತ್ಸಲ್ಯ. ಪ್ರತಿ ಬೇಸಿಗೆಯಲ್ಲಿ, ಅವರು ಪಕ್ಷಿಗಳಿಗೆ ನೀರಿನ ಪಾತ್ರೆಗಳನ್ನು ಇಡುತ್ತಿದ್ದರು. ನಮ್ಮ ಮನೆಯ ಸುತ್ತ ಮುತ್ತಲಿನ ಬೀದಿನಾಯಿಗಳು ಎಂದಿಗೂ ಹಸಿವಿನಿಂದ ಇರದಂತೆ ನೋಡಿಕೊಳ್ಳುತ್ತಿದ್ದರು.
ನನ್ನ ತಂದೆ ಚಹಾ ಅಂಗಡಿಯಿಂದ ತರುತ್ತಿದ್ದ ಹಾಲಿನ ಕೆನೆಯಿಂದ ತಾಯಿ ರುಚಿಕರವಾದ ತುಪ್ಪವನ್ನು ಮಾಡುತ್ತಿದ್ದರು. ಈ ತುಪ್ಪ ಕೇವಲ ನಮ್ಮ ಬಳಕೆಗೆ ಮಾತ್ರವಾಗಿರಲಿಲ್ಲ. ನಮ್ಮ ನೆರೆಹೊರೆಯಲ್ಲಿರುವ ಹಸುಗಳಿಗೂ ಅದರ ಪಾಲು ಸಿಗುತ್ತಿತ್ತು. ತಾಯಿ ಹಸುಗಳಿಗೆ ಪ್ರತಿದಿನ ರೊಟ್ಟಿ ತಿನ್ನಿಸುತ್ತಿದ್ದರು. ಒಣ ರೊಟ್ಟಿಗಳ ಮೇಲೆ ಮನೆಯಲ್ಲಿ ಮಾಡಿದ ತುಪ್ಪ ಮತ್ತು ಪ್ರೀತಿಯನ್ನು ಸುರಿದು ಅವುಗಳಿಗೆ ನೀಡುತ್ತಿದ್ದರು.

ಒಂದು ಅಗುಳೂ ವ್ಯರ್ಥಮಾಡುತ್ತಿರಲಿಲ್ಲ

ಒಂದು ಅಗಳು ಆಹಾರವನ್ನೂ ವ್ಯರ್ಥ ಮಾಡಬಾರದು ಎಂದು ತಾಯಿ ಹೇಳುತ್ತಿದ್ದರು. ನಮ್ಮ ನೆರೆಹೊರೆಯಲ್ಲಿ ಮದುವೆಗಳು ನಡೆದಾಗ ಯಾವುದೇ ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ನಮಗೆ ನೆನಪಿಸುತ್ತಿದ್ದರು. ಮನೆಯಲ್ಲಿ – ನೀವು ತಿನ್ನಬಹುದಾದಷ್ಟನ್ನು ಮಾತ್ರ ಹಾಕಿಸಿಕೊಳ್ಳಿ- ಎಂಬ ಸ್ಪಷ್ಟವಾದ ನಿಯಮವಿತ್ತು
ಇಂದಿಗೂ ತಾಯಿ ತಟ್ಟೆಯಲ್ಲಿ ಎಷ್ಟು ತಿನ್ನಲು ಸಾಧ್ಯವೋ ಅಷ್ಟು ಮಾತ್ರ ಹಾಕಿಸಿಕೊಳ್ಳುತ್ತಾರೆ ಮತ್ತು ಒಂದು ತುತ್ತು ಕೂಡ ವ್ಯರ್ಥ ಮಾಡುವುದಿಲ್ಲ. ಸಮಯಕ್ಕೆ ಸರಿಯಾಗಿ ತಿನ್ನುತ್ತಾರೆ ಮತ್ತು ಆಹಾರವು ಸರಿಯಾಗಿ ಜೀರ್ಣವಾಗಲು ಅಗಿದು ತಿನ್ನುತ್ತಾರೆ.

ಎಲ್ಲರೊಡನೆ ಸಂತಸದಿಂದ ಬಾಳಿದವರು

ತಾಯಿ ಇತರರ ಸಂತೋಷದಲ್ಲಿ ತನ್ನ ಸಂತೋಷವನ್ನು ಕಂಡುಕೊಳ್ಳುತ್ತಾರೆ. ನಮ್ಮ ಮನೆ ಚಿಕ್ಕದಾಗಿರಬಹುದು, ಆದರೆ ಅವರು ತುಂಬಾ ವಿಶಾಲ ಹೃದಯದವರು. ನನ್ನ ತಂದೆಯ ಆಪ್ತ ಸ್ನೇಹಿತರೊಬ್ಬರು ಹತ್ತಿರದ ಹಳ್ಳಿಯಲ್ಲಿದ್ದರು. ಅವರ ಅಕಾಲಿಕ ಮರಣದ ನಂತರ, ನನ್ನ ತಂದೆ ತನ್ನ ಸ್ನೇಹಿತನ ಮಗ ಅಬ್ಬಾಸ್ ನನ್ನು ನಮ್ಮ ಮನೆಗೆ ಕರೆತಂದರು. ಅವನು ನಮ್ಮಲ್ಲಿಯೇ ಇದ್ದು ಓದು ಮುಗಿಸಿದ. ತಾಯಿಯು ನಮ್ಮೆಲ್ಲರಂತೆಯೇ ಅಬ್ಬಾಸ್ ಬಗ್ಗೆಯೂ ಪ್ರೀತಿ ಮತ್ತು ಕಾಳಜಿಯನ್ನು ಹೊಂದಿದ್ದರು. ಪ್ರತಿ ವರ್ಷ ಈದ್ನಂದು ಅವನ ನೆಚ್ಚಿನ ಖಾದ್ಯಗಳನ್ನು ತಯಾರಿಸುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ನೆರೆಹೊರೆಯ ಮಕ್ಕಳು ನಮ್ಮ ಮನೆಗೆ ಬಂದು ಅಮ್ಮನ ವಿಶೇಷ ಅಡುಗೆಯನ್ನು ಸವಿಯುವುದು ಮಾಮೂಲಿಯಾಗಿತ್ತು.

ತಪ್ಪದೆ ಮತ ಚಲಾಯಿಸುತ್ತಾರೆ

ತಾಯಿಯು ಯಾವಾಗಲೂ ನಾಗರಿಕಳಾಗಿ ತನ್ನ ಕರ್ತವ್ಯಗಳ ಬಗ್ಗೆ ಬಹಳ ಜಾಗೃತರಾಗಿರುತ್ತಾರೆ. ಚುನಾವಣೆಗಳು ಪ್ರಾರಂಭವಾದಾಗಿನಿಂದ, ಅವರು ಪಂಚಾಯತಿಯಿಂದ ಸಂಸತ್ತಿನವರೆಗೆ ಪ್ರತಿ ಚುನಾವಣೆಯಲ್ಲೂ ಮತ ಚಲಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದರು.

ಇಂದಿಗೂ ತಾಯಿ ಹೆಸರಿನಲ್ಲಿ ಆಸ್ತಿ ಇಲ್ಲ

ಜೀವನದಲ್ಲಿ ಅಮ್ಮ ಯಾವುದರ ಬಗ್ಗೆಯೂ ದೂರುವುದನ್ನು ನಾನು ಕೇಳಿಲ್ಲ. ಅವರು ಯಾರ ಬಗ್ಗೆಯೂ ದೂರುವುದಿಲ್ಲ ಅಥವಾ ಯಾರಿಂದಲೂ ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದಿಲ್ಲ.

ಇಂದಿಗೂ ತಾಯಿಯ ಹೆಸರಿನಲ್ಲಿ ಯಾವುದೇ ಆಸ್ತಿ ಇಲ್ಲ. ಆಕೆ ಚಿನ್ನದ ಆಭರಣಗಳನ್ನು ಧರಿಸಿರುವುದನ್ನು ನಾನು ನೋಡಿಲ್ಲ ಮತ್ತು ಅವರಿಗೆ ಅದರಲ್ಲಿ ಆಸಕ್ತಿಯೂ ಇಲ್ಲ. ಮೊದಲಿನಂತೆಯೇ, ಅವರು ತನ್ನ ಸಣ್ಣ ಕೋಣೆಯಲ್ಲಿ ಅತ್ಯಂತ ಸರಳವಾದ ಜೀವನವನ್ನು ಮುಂದುವರಿಸಿದ್ದಾರೆ.

ತಾಯಿಗೆ ದೇವರಲ್ಲಿ ಅಪಾರವಾದ ನಂಬಿಕೆ ಇದೆ, ಆದರೆ ಅದೇ ಸಮಯದಲ್ಲಿ, ಅವರು ಮೂಢನಂಬಿಕೆಗಳಿಂದ ದೂರವಿದ್ದಾರೆ ಮತ್ತು ಅದೇ ಗುಣಗಳನ್ನು ನಮ್ಮಲ್ಲಿ ತುಂಬಿದ್ದಾರೆ. ಅವರು ಸಾಂಪ್ರದಾಯಿಕವಾಗಿ ಕಬೀರಪಂಥಿಯಾಗಿದ್ದಾರೆ ಮತ್ತು ಅವರ ದೈನಂದಿನ ಪ್ರಾರ್ಥನೆಗಳಲ್ಲಿ ಆ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ. ಅವರು ತಮ್ಮ ಮಣಿಮಾಲೆಯೊಂದಿಗೆ ಜಪ ಮಾಡುತ್ತಾ ಸಾಕಷ್ಟು ಸಮಯವನ್ನು ಕಳೆಯುತ್ತಾರೆ. ವಯಸ್ಸಾಗಿದ್ದರೂ, ತಾಯಿಗೆ ಉತ್ತಮ ಜ್ಞಾಪಕ ಶಕ್ತಿ ಇದೆ. ಅವರು ದಶಕಗಳ ಹಿಂದಿನ ಘಟನೆಗಳನ್ನು ಸ್ಪಷ್ಟವಾಗಿ ನೆನಪಿಸಿಕೊಳ್ಳುತ್ತಾರೆ. ಕೆಲವು ಸಂಬಂಧಿಕರು ಅವರನ್ನು ಭೇಟಿ ಮಾಡಿದಾಗ, ಅವರು ತಕ್ಷಣವೇ ಅವರ ಅಜ್ಜಿಯರ ಹೆಸರನ್ನು ನೆನಪಿಸಿಕೊಳ್ಳುತ್ತಾರೆ.

ಮೋದಿ ಮನೆ ಬಿಟ್ಟಾಗ ಮೊಸರು, ಬೆಲ್ಲ ನೀಡಿದ್ದ ಅಮ್ಮ

ನಾನು ಮನೆ ಬಿಟ್ಟು ಹೊರಡಲು ನಿರ್ಧರಿಸಿದಾಗ, ನಾನು ಅವರಿಗೆ ಹೇಳುವ ಮೊದಲೇ ನನ್ನ ನಿರ್ಧಾರವನ್ನು ತಾಯಿ ಗ್ರಹಿಸಿದ್ದರು. ನಾನು ಹೊರಗೆ ಹೋಗಿ ಜಗತ್ತನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ ಎಂದು ನಾನು ಆಗಾಗ್ಗೆ ನನ್ನ ಹೆತ್ತವರಿಗೆ ಹೇಳುತ್ತಿದ್ದೆ. ನಾನು ಅವರಿಗೆ ಸ್ವಾಮಿ ವಿವೇಕಾನಂದರ ಬಗ್ಗೆ ಹೇಳುತ್ತಿದ್ದೆ ಮತ್ತು ನಾನು ರಾಮಕೃಷ್ಣ ಮಿಷನ್ ಮಠಕ್ಕೆ ಭೇಟಿ ನೀಡಬೇಕು ಎಂದು ಹೇಳುತ್ತಿದ್ದೆ. ಇದು ಹಲವು ದಿನಗಳ ಕಾಲ ನಡೆದಿತ್ತು.

ಅಂತಿಮವಾಗಿ, ನಾನು ಮನೆ ಬಿಟ್ಟು ಹೊರಡುವ ನನ್ನ ಆಸೆಯನ್ನು ಬಿಚ್ಚಿಟ್ಟೆ ಮತ್ತು ಅವರ ಆಶೀರ್ವಾದವನ್ನು ಕೇಳಿದೆ. ನನ್ನ ತಂದೆ ತುಂಬಾ ನಿರಾಶೆಗೊಂಡರು ಮತ್ತು ಕಿರಿಕಿರಿಯಿಂದ “ನಿನ್ನಿಷ್ಟ” ಎಂದರು. ಅವರ ಆಶೀರ್ವಾದವಿಲ್ಲದೆ ನಾನು ಮನೆ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದೆ. ಆದರೆ, ಅಮ್ಮ ನನ್ನ ಆಸೆಗಳನ್ನು ಅರ್ಥಮಾಡಿಕೊಂಡು, “ನಿನ್ನ ಮನಸ್ಸು ಹೇಳಿದಂತೆ ಮಾಡು”ಎಂದು ಆಶೀರ್ವದಿಸಿದರು, ನನ್ನ ತಂದೆಯನ್ನು ಸಮಾಧಾನಪಡಿಸಲು, ಅವರು ನನ್ನ ಜಾತಕವನ್ನು ಜ್ಯೋತಿಷಿಗೆ ತೋರಿಸಲು ಕೇಳಿದರು. ನನ್ನ ತಂದೆ ಜ್ಯೋತಿಷ್ಯ ತಿಳಿದ ಸಂಬಂಧಿಕರ ಬಳಿ ಹೋದರು. ನನ್ನ ಜಾತಕವನ್ನು ಅಧ್ಯಯನ ಮಾಡಿದ ನಂತರ, “ಅವನ ಹಾದಿ ವಿಭಿನ್ನವಾಗಿದೆ. ದೇವರು ಅವನಿಗಾಗಿ ಆರಿಸಿರುವ ಮಾರ್ಗದಲ್ಲಿ ಮಾತ್ರ ಅವನು ಹೋಗುತ್ತಾನೆ.” ಎಂದು ಅವರು ಹೇಳಿದರು.

ಕೆಲವು ಗಂಟೆಗಳ ನಂತರ, ನಾನು ಮನೆಯಿಂದ ಹೊರಟೆ. ಅಷ್ಟೊತ್ತಿಗಾಗಲೇ ನನ್ನ ತಂದೆ ಕೂಡ ನನ್ನ ನಿರ್ಧಾರವನ್ನು ಒಪ್ಪಿ ಆಶೀರ್ವಾದ ಮಾಡಿದ್ದರು. ಹೊರಡುವ ಮೊದಲು, ಅಮ್ಮ ನನಗೆ ಮೊಸರು ಮತ್ತು ಬೆಲ್ಲವನ್ನು ಉಣಿಸಿದರು, ಒಂದು ಮಂಗಳಕರ ಹೊಸ ಆರಂಭಕ್ಕಾಗಿ. ಇನ್ನು ಮುಂದೆ ನನ್ನ ಜೀವನವು ತುಂಬಾ ವಿಭಿನ್ನವಾಗಿರುತ್ತದೆ ಎಂದು ಅವರು ತಿಳಿದಿದ್ದರು. ತಾಯಂದಿರು ತಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ಅತ್ಯಂತ ಪ್ರವೀಣರಾಗಿರುತ್ತಾರೆ. ಆದರೆ ಅವರ ಮಗು ಮನೆ ಬಿಟ್ಟು ಹೊರಟಾಗ ಅವರಿಗೆ ಕಷ್ಟವಾಗುತ್ತದೆ. ತಾಯಿ ಕಣ್ಣೀರು ಹಾಕಿದರು. ಆದರೆ ನನ್ನ ಭವಿಷ್ಯಕ್ಕಾಗಿ ಅವರ ಅಪಾರ ಆಶೀರ್ವಾದವಿತ್ತು.

ಸಿಎಂ ಆದಾಗ ಲಂಚ ತೆಗೆದುಕೊಳ್ಳಬಾರದು ಎಂದಿದ್ದ ತಾಯಿ

ಗುಜರಾತಿನ ಮುಖ್ಯಮಂತ್ರಿ ನಾನೇ ಎಂದು ನಿರ್ಧರಿಸಿದಾಗ ನಾನು ರಾಜ್ಯದಲ್ಲಿ ಇರಲಿಲ್ಲ ಎಂದು ನನಗೆ ನೆನಪಿದೆ. ನಾನು ಗುಜರಾತಿಗೆ ಹೋದ ಕೂಡಲೇ, ನಾನು ನೇರವಾಗಿ ತಾಯಿಯನ್ನು ಭೇಟಿ ಮಾಡಲು ಹೋದೆ. ಅವರು ಅತ್ಯಂತ ಭಾವಪರವಶಳಾಗಿದ್ದರು ಮತ್ತು ನಾನು ಮತ್ತೆ ಅವಳೊಂದಿಗೆ ಇರುತ್ತೇನೆಯೇ ಎಂದು ವಿಚಾರಿಸಿದರು. ಆದರೆ ಅವರಿಗೆ ನನ್ನ ಉತ್ತರ ಗೊತ್ತಿತ್ತು! “ಸರ್ಕಾರದಲ್ಲಿ ನಿಮ್ಮ ಕೆಲಸ ಏನೆಂದು ನನಗೆ ಅರ್ಥವಾಗುವುದಿಲ್ಲ, ಆದರೆ ನೀವು ಎಂದಿಗೂ ಲಂಚ ತೆಗೆದುಕೊಳ್ಳಬಾರದು ಎಂಬುದು ನನ್ನ ಬಯಕೆ.” ಎಂದು ತಾಯಿ ಹೇಳಿದ್ದರು.
ದೆಹಲಿಗೆ ತೆರಳಿದ ನಂತರ, ಅವರೊಂದಿಗಿನ ನನ್ನ ಭೇಟಿಗಳು ಮೊದಲಿಗಿಂತ ಕಡಿಮೆಯಾಗಿವೆ. ಕೆಲವೊಮ್ಮೆ ನಾನು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ನಾನು ಸ್ವಲ್ಪ ಕಾಲ ತಾಯಿಯನ್ನು ಭೇಟಿ ಮಾಡುತ್ತೇನೆ. ನಾನು ಮೊದಲಿನಂತೆ ಅವರನ್ನು ಭೇಟಿಯಾಗಲು ಆಗುವುದಿಲ್ಲ. ಆದಾಗ್ಯೂ, ನನ್ನ ಅನುಪಸ್ಥಿತಿಯ ಬಗ್ಗೆ ನಾನು ತಾಯಿಯಿಂದ ಯಾವುದೇ ಅಸಮಾಧಾನವನ್ನು ಕೇಳಿಲ್ಲ. ಅವರ ಪ್ರೀತಿ ಮತ್ತು ವಾತ್ಸಲ್ಯ ಹಾಗೆಯೇ ಇದೆ; ಅವರ ಆಶೀರ್ವಾದ ಹಾಗೆಯೇ ಇರುತ್ತದೆ.

ಹೀರಾಬೆನ್‌ ಅವರಿಗೂ ಮೋದಿ ಎಂದರೆ ಬಲು ಮಮತೆ. “ದೇಶಕ್ಕೆ ಏನು ಬೇಕೋ, ಅದನ್ನು ನನ್ನ ಮಗ ಮಾಡುತ್ತಾನೆʼʼ ಎಂದಿದ್ದರು ಆ ತಾಯಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

Ram Mandir: ಶ್ರೀರಾಮ ಮಂದಿರಕ್ಕೆ ಭೇಟಿ ನೀಡುಲೆಂದು ಪಾಕಿಸ್ತಾನದ ಸಿಂಧಿ ಸಮುದಾಯದ 200 ಜನರ ನಿಯೋಗ ಇಂದು ಅಯೋಧ್ಯೆಗೆ ಬರಲಿದೆ. ಈ ಬಗ್ಗೆ ದೇಗುಲದ ಟ್ರಸ್ಟ್‌ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸಿಂಧಿ ಸಮುದಾಯ ಒಂದು ತಿಂಗಳು ಭಾರತದಲ್ಲಿ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದು, ರಸ್ತೆ ಮೂಲಕ ಪ್ರಯಾಗರಾಜ್‌ನಿಂದ ಅಯೋಧ್ಯೆಗೆ ಬರಲಿದೆ. ಇವರ ಜೊತೆಗೆ ಭಾರತ ಸಿಂಧಿ ಸಮುದಾಯದ 150ಕ್ಕೂ ಹೆಚ್ಚು ಜನ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ

VISTARANEWS.COM


on

Ram Mandir
Koo

ಉತ್ತರಪ್ರದೇಶ:ಶ್ರೀರಾಮ ಮಂದಿರ(Ram Mandir)ಕ್ಕೆ ಭೇಟಿ ನೀಡುಲೆಂದು ಪಾಕಿಸ್ತಾನದ ಸಿಂಧಿ ಸಮುದಾಯದ 200 ಜನರ ನಿಯೋಗ ಇಂದು ಅಯೋಧ್ಯೆ(Ayodhya)ಗೆ ಬರಲಿದೆ. ಈ ಬಗ್ಗೆ ದೇಗುಲದ ಟ್ರಸ್ಟ್‌ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸಿಂಧಿ ಸಮುದಾಯ ಒಂದು ತಿಂಗಳು ಭಾರತದಲ್ಲಿ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದು, ರಸ್ತೆ ಮೂಲಕ ಪ್ರಯಾಗರಾಜ್‌ನಿಂದ ಅಯೋಧ್ಯೆಗೆ ಬರಲಿದೆ. ಇವರ ಜೊತೆಗೆ ಭಾರತ ಸಿಂಧಿ ಸಮುದಾಯದ 150ಕ್ಕೂ ಹೆಚ್ಚು ಜನ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಈ ಪವಾಸಿ ತಂಡವನ್ನು ಸ್ವಾಗತಿಸಲಿದ್ದಾರೆ. ರಾಮ್‌ ಕೀ ಪೈದಿಯಲ್ಲಿ ಇದಕ್ಕೆಂದೇ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಯಾಗ್‌ರಾಜ್‌ನಿಂ ಈ ಪ್ರವಾಸಿಗರ ತಂಡ ಬಸ್‌ ಮೂಲಕ ಅಯೋಧ್ಯೆ ತಲುಪಲಿದೆ. ಭರತ್‌ ಕುಂಡ, ಗುಪ್ತಾರ್‌ ಘಾಟ್‌, ರೂಪನ್‌ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ಕೊಡಲಾಗುತ್ತದೆ ಎಂದು ರಾಷ್ಟ್ರೀಯ ಸಿಂಧಿ ವಿಕಾಸ್‌ ಪರಿಷತ್‌ನ ಸದಸ್ಯ ವಿಶ್ವ ಪ್ರಕಾಶ್‌ ರೂಪನ್‌ ಹೇಳಿದ್ದಾರೆ.

ಸಿಂಧಿ ಯಾತ್ರಿಕರಿಗೆ ವಿಶೇಷ ವ್ಯವಸ್ಥೆ

ಅಯೋಧ್ಯೆಗೆ ಆಗಮಿಸುತ್ತಿರುವ ಪಾಕಿಸ್ತಾನದಿಂದ ಭಾರತಕ್ಕೆ ಬರುತ್ತಿರುವ ಸಿಂಧಿ ಸಮುದಾಯದ ಯಾತ್ರಿಕರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಯಾತ್ರಿಕರಿಗೆಂದೇ ಅಯೋಧ್ಯೆಯ ಉದಾಸಿನ್‌ ರಿಷಿ ಆಶ್ರಮ ಮತ್ತು ಶಬರಿ ರಸೋಯಿ ಆಶ್ರಮಗಳಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ ರಾಮ್‌ ಕೀ ಪೈದಿಯಲ್ಲಿ ನಡೆಯಲಿರುವ ಸರಯೂ ಆರತಿಯಲ್ಲಿ ಎಲ್ಲಾ ಯಾತ್ರಿಕರು ಭಾಗಿಯಾಗಲಿದ್ದಾರೆ. ಆ ಸಂದರ್ಭದಲ್ಲಿ ಚಂಪತ್‌ ರೈ ಸಿಂಧಿ ಯಾತ್ರಿಕರನ್ನು ಸ್ವಾಗತಿಸಲಿದ್ದಾರೆ.

ಅಲ್ಲದೇ ಅಯೋಧ್ಯೆಯ ಸಿಂಧಿ ಧಾಮ್‌ ಆಶ್ರಮದಲ್ಲಿ ಪಾಕ್‌ ಸಿಂಧಿ ಯಾತ್ರಿಕರಿಗೆಂದೇ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಲಿರುವ ಸಿಂಧಿ ಸಮುದಾಯದ ಯಾತ್ರಿಕರೂ ಭಾಗಿಯಾಗಿ ಪಾಕ್‌ ಯಾತ್ರಿಕರನ್ನು ಬರಮಾಡಿಕೊಳ್ಳಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸಂತ ಸದಾ ರಾಮ ದರ್ಬಾರ್‌ ಮಠದ ಪೀಠಾಧಿಪತಿ ಯುಧಿಷ್ಠಿರ ಲಾಲ್‌ ಕೂಡ ಸಾಥ್‌ ನೀಡಲಿದ್ದಾರೆ. ಇಂದು ರಾತ್ರಿ ಸಿಂಧಿ ಪ್ರವಾಸಿಗರು ಲಕ್ನೋಗೆ ತೆರಳಿ ಅಲ್ಲಿಂದ ರಾಯ್‌ಪುರಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

 ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಬಾಲಕ ರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ನೆರವೇರಿದೆ. ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಮಾರಂಭ ಜನವರಿ 22ರಂದು ನಡೆಯಿತು. ಅದಾದ ಬಳಿಕ ಜನವರಿ 23ರಿಂದ ಈ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಮಾಡುತ್ತಿದ್ದಾರೆ. ಸದ್ಯ ರಾಮ ಮಂದಿರದಲ್ಲಿ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಕ್ತರಿಗೆ ದೇವರ ದರ್ಶನ ಭಾಗ್ಯ ಲಭಿಸಲಿದೆ. ಆರಂಭದಲ್ಲಿ ದೇಗುಲದ ಬಾಗಿಲನ್ನು ಬೆಳಗ್ಗೆ 7 ಗಂಟೆಗೆ ತೆರೆಯಲಾಗುತ್ತಿತ್ತು. ಬಳಿಕ ಪ್ರವಾಸಿಗರ ನೂಕು ನುಗ್ಗಲು ಗಮನಿಸಿ ದರ್ಶನದ ಸಮಯವನ್ನು ಹೆಚ್ಚಿಸಲಾಗಿತ್ತು. ಈ ಮಧ್ಯೆ ಮಧ್ಯಾಹ್ನ 12:30ರಿಂದ 1:30ರ ವರೆಗೆ ಬಾಲಕ ರಾಮನಿಗೆ ವಿಶ್ರಾಂತಿ ಸಮಯವಾಗಿರುವುದರಿಂದ ಈ ವೇಳೆ ಭಕ್ತರಿಗೆ ದರ್ಶನ ಲಭಿಸುವುದಿಲ್ಲ.

Continue Reading

ದೇಶ

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Triple Talaq: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ ಅನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಸಲ್ಲೊಂದು ಇಲ್ಲೊಂದು ಇಂತಹ ಪ್ರಕರಣ ವರದಿಯಾಗುತ್ತಲೇ ಇರುತ್ತದೆ. ಅದಕ್ಕೆ ಇಲ್ಲಿದೆ ಉತ್ತಮ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಸದ್ಯ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Triple Talaq
Koo

ಲಕ್ನೋ: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ (Triple Talaq) ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಕಾನೂನು ಕಣ್ಣು ತಪ್ಪಿಸಿ ಹಲವರು ಇನ್ನೂ ಈ ಅನಾಚಾರವನ್ನು ಮುಂದುವರಿಸುತ್ತಿದ್ದಾರೆ ಎನ್ನುವುದಕ್ಕೆ ಇಲ್ಲಿದೆ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ.

ಏಪ್ರಿಲ್‌ 29ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ಈ ಘಟನೆ ನಡೆದಿದೆ.

ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಅನಿರೀಕ್ಷಿತ ಆಘಾತದಿಂದ ತಬ್ಬಿಬ್ಬಾದ ಅಫ್ಸಾನಾ ಕೂಡಲೇ ರೈಲ್ವೇ ಪೊಲೀಸರನ್ನು ಸಂಪರ್ಕಿಸಿದ್ದರು. ಪೊಲೀಸರು ಅವರನ್ನು ಕಾನ್ಪುರ್ ದೆಹತ್‌ನ ಪುಖ್ರಾಯನ್‌ಗೆ ಕಳುಹಿಸಿದರು. ಅಲ್ಲಿಂದ ಅವರು ಭೋಪಾಲ್‌ಗೆ ರೈಲು ಹತ್ತಿದ್ದರು. ಕೊನೆಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಮೊಹಮ್ಮದ್ ಅರ್ಷದ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಭೋಪಾಲ್‌ನ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್‌ ಎಂಜಿನಿಯರ್‌ ಆಗಿರುವ ಅರ್ಷದ್‌ ಈ ವರ್ಷದ ಜನವರಿ 12ರಂದು ರಾಜಸ್ಥಾನದ ಕೋಟದ ಅಫ್ಸಾನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮ್ಯಾಟ್ರಿಮೋನಿ ಜಾಹೀರಾತು ಮೂಲಕ ಪದವೀಧರೆಯಾದ ಅಫ್ಸಾನಾ ಮತ್ತು ಅರ್ಷದ್‌ ಪರಸ್ಪರ ಪರಿಚಿತರಾಗಿದ್ದರು. ದಂಪತಿ ಕಳೆದ ವಾರ ಪುಖ್ರಾಯನ್‌ನಲ್ಲಿರುವ ಅರ್ಷದ್‌ನ ಪೂರ್ವಜರ ಮನೆಗೆ ಭೇಟಿ ನೀಡಿದಾಗ ಅಫ್ಸಾನಾ ಅವರಿಗೆ ಆಘಾತಕಾರಿ ಸತ್ಯವೊಂದು ತಿಳಿಯಿತು. ಅರ್ಷದ್‌ಗೆ ಅದಾಗಲೇ ಮದುವೆಯಾಗಿತ್ತು ಎನ್ನುವುದು ಅಫ್ಸಾನಾ ಅವರಿಗೆ ಆಗಷ್ಟೇ ತಿಳಿದು ಬಂದಿತ್ತು.

ಈ ಬಗ್ಗೆ ಅಫ್ಸಾನಾ ಪ್ರಶ್ನಿಸಿದಾಗ ಕಿರುಕುಳ ಆರಂಭವಾಗಿತ್ತು. ಅರ್ಷದ್‌ ಮತ್ತು ಆತನ ತಾಯಿ ವರದಕ್ಷಿಣೆ ನೀಡುವಂತೆ ಪೀಡಿಸತೊಡಗಿದರು ಎಂದು ಅಫ್ಸಾನಾ ದೂರಿನಲ್ಲಿ ತಿಳಿಸಿದ್ದಾರೆ. ಕೊನೆಗೆ ರೈಲಿನಲ್ಲಿ ಆತ ತ್ರಿವಳಿ ತಲಾಕ್‌ ಕೊಟ್ಟು ನಾಪತ್ತೆಯಾಗಿದ್ದಾನೆ ಎಂದು ಅಫ್ಸಾನಾ ವಿವರಿಸಿದ್ದಾರೆ.

ಇದನ್ನೂ ಓದಿ: Triple Talaq: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತ್ರಿವಳಿ ತಲಾಕ್ ನೀಡಿದ ದುರುಳ; ವರದಕ್ಷಿಣೆ ಆಸೆಗೆ ನೀಚ ಕೃತ್ಯ

ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ

ಸದ್ಯ ಈ ವಿಚಾರ ಸದ್ದು ಮಾಡುತ್ತಿದೆ. ಅಫ್ಸಾನಾ ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಿ ತನಗೆ ನೆರವಾಗಬೇಕು ಎಂದು ಕೋರಿದ್ದಾರೆ. ಹೀಗೆ ತ್ರಿವಳಿ ತಲಾಕ್‌ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಸರ್ಕಲ್‌ ಆಫೀಸರ್‌ ಪ್ರಿಯಾ ಸಿಂಗ್‌ ಈ ಬಗ್ಗೆ ಮಾತನಾಡಿ, ʼʼಅಫ್ಸಾನಾ ಅವರ ದೂರಿನ ಮೇರೆಗೆ ಅರ್ಷಾದ್‌, ಆತನ ಮಾವ ಅಖೀಲ್‌, ತಂದೆ ನಫೀಸುಲ್ ಹಸನ್ ಮತ್ತು ತಾಯಿ ಪರ್ವೀನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೆತ್ತಿಕೊಳ್ಳಲಾಗಿದೆʼʼ ಎಂದು ತಿಳಿಸಿದ್ದಾರೆ.

Continue Reading

ದೇಶ

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Lalu Prasad Yadav: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

VISTARANEWS.COM


on

Lalu Prasad Yadav
Koo

ಪಾಟ್ನಾ: ಬಿಹಾರದ ಸಾರನ್‌ ಲೋಕಸಭಾ ಕ್ಷೇತ್ರ(Saran)ದಲ್ಲಿ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ವರ್ಸಸ್‌ ಲಾಲೂ ಪುತ್ರಿ ಪರಸ್ಪರ ಮುಖಾಮುಖಿಯಾಗಿ ಕಣಕ್ಕಿದಿದ್ದಾರೆ. ಅರೆ.. ಇದೇನಿದು ಎಂದೇ ಕ್ಷೇತ್ರದಲ್ಲಿ ಅಪ್ಪ-ಮಗಳು ಇಬ್ಬರು ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರಾ ಎಂದು ಅಚ್ಚರಿ ಆಗೋದಂತೂ ನಿಜ. ಆದರೆ ನಿಜಾಂಶ ಏನೆಂದರೆ ಆರ್‌ಜೆಡಿ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ(RJP) ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

ಯಾರು ಈ ಲಾಲೂ ಪ್ರಸಾದ್‌ ಯಾದವ್‌?

ಸ್ಥಳೀಯ ರೈತನಾಗಿರುವ ಲಾಲೂ ಪ್ರಸಾದ್‌ ಯಾದವ್‌, ಸಾರನ್‌ ಜಿಲ್ಲೆಯವರಾಗಿದ್ದು, ಏಪ್ರಿಲ್‌ 26ರಂದು ಆರ್‌ಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. 2022ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯ ಸಂದರ್ಭದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಸ್ಪರ್ದಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೂ ಅಲ್ಲದೇ 2017ರಲ್ಲಿ ಮಾಜಿ ಲೋಕಸಭಾ ಸ್ಪೀಕರ್‌ ಮೀರಾ ಕುಮಾರ್‌ ಮತ್ತು ರಾಮನಾಥ್‌ ಕೋವಿಂದ್‌ ಕಣದಲ್ಲಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಅವರ ನಾಮಪತ್ರವನ್ನು ತಿರಸ್ಕರಿಸಲಾಯಿತು.

ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಸಾರನ್‌ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಅನೇಕ ಬಾರಿ ಸ್ಪರ್ಧಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿರುದ್ಧವೂ ಸ್ಪರ್ಧಿಸಿದ್ದೆ. ಈ ಬಾರಿ ಅವರ ಪುತ್ರಿ ರೋಹಿಣಿ ಆಚಾರ್ಯ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ನಾನು ಬದುಕಲು ಕೃಷಿ ಮಾಡುತ್ತಿದ್ದೇನೆ. ಅದರ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಕೊಂಡಿದ್ದೇನೆ. ನಾನು ಪಂಚಾಯತ್‌ನಿಂದ ಅಧ್ಯಕ್ಷೀಯ ಚುನಾವಣೆವರೆಗೂ ಅದೃಷ್ಟಪರೀಕ್ಷೆಗೆ ನಡೆಸಿದ್ದೇನೆ. ನಾನು ಗೆದ್ದೇ ಗೆಲ್ಲುತ್ತೇನೆ. ಸಾರನ್‌ ಕ್ಷೇತ್ರದ ಜನ ನನ್ನ ಜೊತೆಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

ಇನ್ನು ಕೇವಲ ಪ್ರಚಾರಕ್ಕಾಗಿ, ಮತ ವಿಭಜನೆಗಾಗಿ ಸ್ಪರ್ಧೆ ಎಂಬ ಟೀಕೆಗೆ ಟಾಂಗ್‌ ಕೊಟ್ಟ ಯಾದವ್‌, ನಾನು ಇಂತಹ ಟೀಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನನ್ನ ಪ್ರತಿಸ್ಪರ್ಧಿಗಳು. ಅವರಿಂದ ಇಂತಹ ಹೇಳಿಕೆಗಳು ಬರುವುದು ಸಹಜ. ಇಂತಹ ಟೀಕೆಗಳಿಗೆ ನಾನು ಕುಗ್ಗಲ್ಲ. ನಾನು ಕೇವಲ ನನ್ನ ಮತದಾರರಿಗಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು. ಇನ್ನು ಲಾಲೂ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಬಳಿ 5 ಲಕ್ಷ ರೂ ಮತ್ತು ತಮ್ಮ ಪತ್ನಿ ಬಳಿ 2 ಲಕ್ಷ ರೂ. ನಗದು, 17.60 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಹಾಗೂ ತಮ್ಮ ಪತ್ನಿ ಬಳಿ 5.20 ಲಕ್ಷ ರೂ ಮೌಲ್ಯದ ಚರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

Viral News: ಆಧುನಿಕ ಯುಗ, ವೈಜ್ಞಾನಿಕ ಯುಗದಲ್ಲಿ ನಾವಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಇದೇ ವೇಳೆ ಕೆಲವೊಮ್ಮೆ ಮೂಢ ನಂಬಿಕೆ ಆಚರಣೆ ನಾವು ತಲೆ ತಗ್ಗಿಸುವಂತೆ ಮಾಡುತ್ತದೆ. ಅದಕ್ಕೆ ;ಜ್ವಲಂತ ಉದಾಹರಣೆ ಇಲ್ಲಿದೆ. ಹಾವು ಕಚ್ಚಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಗುಣಮುಖನಾಗಲೆಂದು ಆತನ ದೇಹವನ್ನು ಎರಡು ದಿನಗಳ ಕಾಲ ಗಂಗಾ ನದಿಯಲ್ಲಿ ನೇತಾಡಿಸಲಾಗಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral News
Koo

ಲಕ್ನೋ: ವೈಜ್ಞಾನಿಕವಾಗಿ ನಮ್ಮ ದೇಶ ಸಾಕಷ್ಟು ಮುಂದುವರಿದಿದೆ. ಕೋಟ್ಯಂತರ ಕಿ.ಮೀ. ದೂರ ಇರುವ ಚಂದ್ರನಲ್ಲಿಗೆ ರಾಕೆಟ್‌ ಕಳಿಸುದ್ದೇವೆ. ಭೂ ಗರ್ಭದಲ್ಲಿ ಏನೇನಿದೆ ಎನ್ನುವುದನ್ನು ಶೋಧಿಸಿದ್ದೇವೆ. ಹಾಗಿದ್ದರೂ ಕೆಲವೆಡೆ ಇನ್ನೂ ಮೂಢ ನಂಬಿಕೆ ಎನ್ನುವುದು ತಾಂಡವವಾಡುತ್ತಿದೆ ಎನ್ನುವುದು ವಿಷಾಧನೀಯ. ನಂಬಿಕೆ ಮತ್ತು ಮೂಢ ನಂಬಿಕೆ ಎನ್ನುವುದರ ನಡುವಿನ ಗೆರೆ ತೀರಾ ತೆಳುವಾದುದು. ಯಾರದೋ ಮಾತು ನಂಬಿ, ಅಸಾಧ್ಯವಾದುದನ್ನು ಸಾಧ್ಯವೆಂದು ನಂಬಿ ಮೌಢ್ಯ ಆಚರಣೆಯಲ್ಲಿ ತೊಡಗಿರುವವರು ಈಗಲೂ ಇದ್ದಾರೆ. ಇಷ್ಟೆಲ್ಲ ಯಾಕೆ ಹೇಳುತ್ತಿದ್ದೇವೆ ಎಂದರೆ ಉತ್ತರ ಪ್ರದೇಶದಲ್ಲಿ ಹಾವು ಕಚ್ಚಿದ ಯುವಕ ಗುಣಮುಖನಾಗಲೆಂದು ಎರಡು ದಿನಗಳ ಕಾಲ ಗಂಗಾ ನದಿಯಲ್ಲಿ ಆತನನ್ನು ನೇತಾಡಿಸಲಾಗಿದೆ. ಶರೀರದಲ್ಲಿರುವ ವಿಷ ಇಳಿದು ಆತ ಜೀವಂತವಾಗಿ ಎದ್ದು ಬರುತ್ತಾನೆ ಎನ್ನುವ ಮೂಢ ನಂಬಿಕೆಯೇ ಇದಕ್ಕೆ ಕಾರಣ (Viral News).

ಘಟನೆ ಹಿನ್ನೆಲೆ

ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಜೈರಾಮ್‌ಪುರ ಕುಡೇನಾ ಗ್ರಾಮದ, 20 ವರ್ಷದ ಮೋಹಿತ್‌ ಕುಮಾರ್‌ಗೆ ವಿಷದ ಹಾವು ಕಚ್ಚಿತ್ತು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಚಿಕಿತ್ಸೆ ಮುಂದುವರಿಸಿದರೂ ಆರೋಗ್ಯ ಸುಧಾರಿಸಿರಲಿಲ್ಲ. ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ವೈದ್ಯರೂ ಕೈ ಚೆಲ್ಲಿದ್ದರು. ಕೊನೆಗೆ ಆತನ ಕುಟುಂಬ ಸ್ಥಳೀಯ ಚಿಕಿತ್ಸಕನ ಮೊರೆ ಹೋಯಿತು. ಆತ ಸೂಚಿಸಿದ ವಿಧಾನವೇ ಈ ಗಂಗಾ ಚಿಕಿತ್ಸೆ.

ಯುವಕನ ಶರೀರವನ್ನು ಹಗ್ಗದಲ್ಲಿ ಕಟ್ಟಿ ಗಂಗಾ ನದಿಯಲ್ಲಿ ನೇತಾಡಿಸುವಂತೆ ಸ್ಥಳೀಯ ಚಿಕಿತ್ಸಕ ಸಲಹೆ ನೀಡಿದ್ದ. ಇದರಿಂದ ಯುವಕನ ಶರೀರದೊಳಕ್ಕೆ ಸೇರಿದ್ದ ವಿಷವೆಲ್ಲ ಇಳಿದು ಹೋಗಿ ಆತ ಮೊದಲಿನಂತಾಗುತ್ತಾನೆ ಎಂದು ತಿಳಿಸಿದ್ದ. ಅದರಂತೆ ಕುಟುಂಬಸ್ಥರು ಹರಿಯುವ ನದಿಯಲ್ಲಿ ಮೋಹಿತ್‌ ಕುಮಾರ್‌ನ ಶರೀರವನ್ನು ಅರ್ಧ ಮುಳುಗುವಂತೆ ನೇತಾಡಿಸಿದ್ದರು. ಸುಮಾರು ಎರಡು ದಿನಗಳ ಕಾಲ ಈ ʼಚಿಕಿತ್ಸೆʼ ಮುಂದುವರಿದಿತ್ತು. ಸದ್ಯ ಆತ ಮೃತಪಟ್ಟಿದ್ದಾನೆ. ಈ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿದೆ.

ನೆಟ್ಟಿಗರು ಹೇಳಿದ್ದೇನು?

ವಿಡಿಯೊ ನೋಡಿದ ನೆಟ್ಟಿಗರಿಗೆ ತಮ್ಮ ಕಣ್ಣುಗಳನ್ನೇ ನಂಬಲಾಗಲಿಲ್ಲ. ಅನೇಕರು ಈ ಶಾಕ್‌ನಿಂದ ಇನ್ನೂ ಹೊರ ಬಂದಿಲ್ಲ. ಈ ಆಚರಣೆಯ ಹಿಂದಿನ ವೈಜ್ಞಾನಿಕತೆಯನ್ನು ಹಲವರು ಪ್ರಶ್ನಿಸಿದ್ದಾರೆ. ʼʼವಿಜ್ಞಾನಮುಕ್ತ ಭಾರತಕ್ಕೆ ಸ್ವಾಗತʼʼ ಎಂದು ಒಬ್ಬರು ವ್ಯಂಗ್ಯವಾಡಿದ್ದಾರೆ. ʼʼಹಾವಿನ ವಿಷ ಹೇಗೆ ಶರೀರಕ್ಕೆ ಸೇರಿಕೊಳ್ಳುತ್ತದೆ ಮತ್ತು ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದನ್ನು ಶಾಲೆಗಳ ಪಠ್ಯದಲ್ಲಿ ಸೇರಿಸಬೇಕು. ಇದರಿಂದ ಇಂತಹ ಅನಾಚಾರಗಳನ್ನು ನಿಯಂತ್ರಿಸಬಹುದುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಅತ್ಯಂತ ನಾಚೆಕೆಗೇಡಿನ ಸಂಗತಿ. ಇದನ್ನು ಸೂಚಿಸಿದ ಸ್ಥಳೀಯ ಚಿಕಿತ್ಸಿಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼʼ ಎಂದು ಮತ್ತೊಬ್ಬರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್‌ ತೊಲಗಲಿ ಎಂದು ಮಗನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ತಾಯಿ, ಬಾಲಕ ಸಾವು; Video ಇದೆ

ಕೆಲವು ದಿನಗಳ ಹಿಂದೆಯೂ ಇಂತಹದ್ದೆ ಘಟನೆ ನಡೆದಿತ್ತು. ಮಹಿಳೆಯೊಬ್ಬಳು ತನ್ನ ಕ್ಯಾನ್ಸರ್‌ ಪೀಡಿತ 4 ವರ್ಷದ ಮಗ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ಮುಳುಗಿಸಿದ್ದಳು. ಈ ವೇಳೆ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದ.

Continue Reading
Advertisement
Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ8 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ23 mins ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ24 mins ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Ram Mandir
ದೇಶ43 mins ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ43 mins ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ54 mins ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ1 hour ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್1 hour ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ1 hour ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ1 hour ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌