New year 2023 | ಹೊಸ ವರ್ಷದಲ್ಲಿ ವಿವಿಧ ದೇಶಗಳ ವಿಚಿತ್ರ ಆಚರಣೆಗಳು: ಇಲ್ಲಿನ ಮಂದಿಗೆ ಚಡ್ಡಿಬಣ್ಣವೂ ಮುಖ್ಯ! - Vistara News

New year 2023

New year 2023 | ಹೊಸ ವರ್ಷದಲ್ಲಿ ವಿವಿಧ ದೇಶಗಳ ವಿಚಿತ್ರ ಆಚರಣೆಗಳು: ಇಲ್ಲಿನ ಮಂದಿಗೆ ಚಡ್ಡಿಬಣ್ಣವೂ ಮುಖ್ಯ!

ಪ್ರತಿಯೊಂದು ದೇಶದಲ್ಲೂ ಇಂತಹ ಚಿತ್ರವಿಚಿತ್ರವಾದ ಆಚರಣೆಗಳು ಹೊಸವರ್ಷದ ಹೆಸರಿನಲ್ಲಿ ನಡೆಯುತ್ತವೆ. ನಮಗೆ ವರ್ಷಪೂರ್ತಿ ಒಳ್ಳೆಯದಾಗಲಿ ಎಂಬ ಆಶಾಭಾವನೆಯಿಂದ ಪಾಸಿಟಿವ್‌ ಮನಃಸ್ಥಿತಿಯಿಂದ ಜನರು ಈಗಲೂ ಆಚರಿಸುತ್ತಾರೆ ಕೂಡಾ.

VISTARANEWS.COM


on

new year
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

೨೦೨೩ ಇನ್ನೇನು ಬರಲಿದೆ. ಪ್ರತಿವರ್ಷದಂತೆ ಈ ವರ್ಷವೂ ಪ್ರತಿಯೊಬ್ಬರ ಬದುಕಿನಲ್ಲೂ ಒಂದಷ್ಟು ಖುಷಿಗಳನ್ನೂ, ಒಂದಿಷ್ಟು ಕಷ್ಟಗಳನ್ನೂ ಸಮಾನವಾಗಿ ಹಂಚಿಹೋಗುತ್ತದೆ, ನಿಜ. ಆದರೆ, ನಾವೆಲ್ಲರೂ ಹೊಸವರ್ಷ ಹೊಸ ಅದೃಷ್ಟಗಳನ್ನೂ, ಯಶಸ್ಸನ್ನೂ ತರಲಿ ಎಂದೇ ಬಯಸುತ್ತೇವೆ. ಅದಕ್ಕಾಗಿ ಇವುಗಳ ಹೆಸರಿನಲ್ಲಿ ಒಂದಿಷ್ಟು ನಂಬಿಕೆಗಳೂ ಆಚರಣೆಗಳೂ ಕೂಡಾ ನಡೆಯುತ್ತವೆ.

ನಿಮಗೆ ಗೊತ್ತೇ? ಈಗಲೂ ಹೊಸವರ್ಷದ ದಿನ ಬೀನ್ಸು, ನೂಡಲ್ಸ್‌ ಹಾಗೂ ವೃತ್ತಾಕಾರದ ತಿನಿಸುಗಳು ಹಾಗೂ ಸಿಹಿತಿಂಡಿಗಳನ್ನು ತಿಂದರೆ ಹೊಸವರ್ಷ ಖಂಡಿತ ಒಳ್ಳೆಯದನ್ನೇ ಸಿಹಿಯಾಗಿ ಉಣಬಡಿಸುತ್ತದೆ ಎಂಬ ನಂಬಿಕೆ ಪ್ರಪಂಚದಾದ್ಯಂತ ಇದೆಯಂತೆ! ಇಷ್ಟೇ ಏಕೆ. ಪ್ರತಿಯೊಂದು ದೇಶದಲ್ಲೂ ಇಂತಹ ಚಿತ್ರವಿಚಿತ್ರವಾದ ಆಚರಣೆಗಳು ಹೊಸವರ್ಷದ ಹೆಸರಿನಲ್ಲಿ ನಡೆಯುತ್ತವೆ. ನಮಗೆ ವರ್ಷಪೂರ್ತಿ ಒಳ್ಳೆಯದಾಗಲಿ ಎಂಬ ಆಶಾಬಾವನೆಯಿಂದ ಪಾಸಿಟಿವ್‌ ಮನಃಸ್ಥಿತಿಯಿಂದ ಜನರು ಈಗಲೂ ಆಚರಿಸುತ್ತಾರೆ ಕೂಡಾ. ವಿವಿಧ ದೇಶಗಳ ಅಂತಹ ಕೆಲವು ವಿಚಿತ್ರ ನಂಬಿಕೆ, ಆಚರಣೆಗಳನ್ನು ಇಲ್ಲಿ ನೋಡೋಣ.

೧. ಪ್ರಪಂಚದಲ್ಲಿ ಬಹಳಷ್ಟು ಮಂದಿಯಲ್ಲಿ ಹೀಗೊಂದು ನಂಬಿಕೆಯಿದೆಯಂತೆ. ಕಪ್ಪುಕಣ್ಣಿನ ಅಲಸಂಡೆ ಬೀಜದ ಜೊತೆಗೆ ಅನ್ನ ಹಾಗೂ ಹಂದಿ ಮಾಂಸವನ್ನು ಸೇರಿಸಿ ಅಡುಗೆ ಮಾಡಿ ತಿಂದರೆ, ಅದೃಷ್ಟವೂ, ನೆಮ್ಮದಿಯೂ ವರ್ಷಪೂರ್ತಿ ನಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು. ಈ ಅಲಸಂಡೆ ಬೀಜವನ್ನು ನಾಣ್ಯದಂತೆ ಪರಿಗಣನೆ ಮಾಡುತ್ತಿದ್ದು ಇದು ಶುಭ ಸೂಚಕವಂತೆ. ಹಂದಿಮಾಂಸ ಅದೃಷ್ಟದ ಸಂಕೇತವಂತೆ!

new year

೨. ಫಿಲಿಪೈನ್ಸ್‌ನಲ್ಲಿ ೧೨ ಬಗೆಯ ವೃತ್ತಾಕಾರದ ಹಣ್ಣುಗಳನ್ನು ಹೊಸವರ್ಷದ ದಿನ ತಿಂದರೆ ವರ್ಷವಿಡೀ ನಮ್ಮ ಇಚ್ಛೆಗಳೆಲ್ಲ ಫಲಪ್ರದವಾಗುತ್ತದೆ ಎಂಬ ನಂಬಿಕೆಯಿದೆಯಂತೆ! ಅಷ್ಟೇ ಅಲ್ಲ, ಚುಕ್ಕೆ ಚುಕ್ಕೆಗಳಿರುವ ಬಟ್ಟೆಗಳನ್ನು ಹೊಸವರ್ಷದ ದಿನ ಪಾರ್ಟಿಗೆ ತೊಟ್ಟರೆ ಶುಭದಾಯಕ ಎಂಬ ನಂಬಿಕೆಯೂ ಇಲ್ಲಿದೆ.

೩. ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವಾರ್‌ನಲ್ಲಿ ಪ್ರತಿ ವರ್ಷವೂ ನ್ಯೂ ಈಯರ್‌ ಈವ್‌ನಲ್ಲಿ ಬಾಲ್‌ ಡ್ರಾಪ್‌ ನೋಡಲು ಭಾರೀ ಜನಸ್ತೋಮವೇ ಸೇರುತ್ತದೆ. ಯಾಕೆಂದರೆ, ಅಲ್ಲಿರುವ ಚೆಂಡು ಸರಿಯಾಗಿ ೧೨ ಗಂಟೆ ಬಡಿಯುವಾಗ ಕೆಳಗೆ ಬರುವುದನ್ನು ಎದುರು ನೋಡುವ ಕೆಲಸ ಈ ಜನಸ್ತೋಮದ್ದು. ೧೯೦೭ರಿಂದ ಶುರುವಾದ ಈ ಆಚರಣೆಯಲ್ಲಿ ಮೊದಲು ಕೇವಲ ಕಬ್ಬಿಣದ ಹಾಗೂ ಮರದ ಬಾಲ್‌ ಬಳಕೆಯಾಗಿತ್ತು. ಈಗ ೧೨ ಅಡಿ ಎತ್ತರದ ೧೧,೮೭೫ ಪೌಂಡ್‌ನ ೩೨,೨೫೬ ಎಲ್‌ಇಡಿ ಲೈಟ್‌ಗಳಿಂದ ಮಾಡಲ್ಪಟ್ಟ ಪ್ರತಿ ವರ್ಷವೂ ವಿವಿಧ ಲೈಟ್‌ ವಿನ್ಯಾಸದೊಂದಿಗೆ ಹೊಸವರ್ಷಕ್ಕೆ ರೆಡಿಯಾಗುವ ಇದು ವಿಶ್ವವಿಖ್ಯಾತಿಯನ್ನು ಹೊಂದಿದೆ.

new year

೪. ಬ್ರೆಜಿಲ್‌ ಮಂದಿಗೆ ಹೊಸವರ್ಷಕ್ಕೆ ಹೊಸ ಬಟ್ಟೆ ಆಯ್ಕೆ ಮಾಡುವುದುದ ಸುಲಭ. ಯಾಕೆಂದರೆ ಇಲ್ಲಿನ ಮಂದಿ ಹೊಸವರ್ಷಕ್ಕೆ ಬಿಳಿಬಟ್ಟೆಯನ್ನೇ ಧರಿಸುತ್ತಾರೆ. ಬಿಳಿ ಬಣ್ಣ ವರ್ಷಪೂರ್ತಿ ಶಾತಿ ನೆಮ್ಮದಿಯನ್ನೇ ತರುತ್ತದೆ ಎಂಬ ನಂಬಿಕೆ ಇಲ್ಲಿಯ ಮಂದಿಯದ್ದು. ಅಷ್ಟೇ ಅಲ್ಲ ಇಲ್ಲಿನ ಮಂದಿ ಸಮುದ್ರ ತೀರಕ್ಕೆ ತೆರಳಿ ಏಳು ಅಲೆಗಳನ್ನು ಜಂಪ್‌ ಮಾಡುತ್ತಾ ದಾಟಿದರೆ ಶುಭದಾಯಕ ಎಂಬ ನಂಬಿಕೆ. ಏಳು ಅಲೆಗಳನ್ನು ದಾಟುವಾಗ ಏಳು ಬಯಕೆಗಳನ್ನು ಮನಸ್ಸಿನಲ್ಲೇ ಹೇಳಿಕೊಂಡರೆ ಅದು ಆ ವರ್ಷ ಪೂರ್ಣಗೊಳ್ಳುತ್ತದೆ ಎಂಬುದೂ ಅವರ ನಂಬಿಕೆ.

೫. ಇನ್ನು ಲ್ಯಾಟಿನ್‌ ಅಮೆರಿಕಾದಂತಹ ಕೆಲವು ದೇಶಗಳಲ್ಲಿ ತಾವು ಹೊಸವರ್ಷದ ದಿನ ಹಾಕುವ ಒಳಚಡ್ಡಿಯ ಬಣ್ಣದ ಬಗ್ಗೆ ಹೆಚ್ಚು ಜಾಗರೂಕರಾಗಿರುತ್ತಾರಂತೆ. ಯಾಕೆಂದರೆ ಬಣ್ಣ ಅದೃಷ್ಟವನ್ನು ನಿರ್ಧರಿಸುತ್ತದೆ ಎಂಬ ನಂಬಿಕೆ ಇವರದ್ದು. ಹಳದಿ ಬಣ್ಣದ್ದು ಅದೃಷ್ಟವನ್ನೂ, ಬಿಳಿ ಬಣ್ಣದ್ದು ವರ್ಷಪೂರ್ತಿ ಶಾಂತಿ ನೆಮ್ಮದಿಯನ್ನೂ, ಕೆಂಪು ಬಣ್ಣ ಪ್ರೀತಿಯನ್ನೂ ತರುತ್ತದೆ ಎಂಬ ನಂಬಿಕೆ ಇವರದ್ದು.

೬. ಇನ್ನೂ ಕೆಲವು ದೇಶಗಳಲ್ಲಿ ಸರಿಯಾಗಿ ೧೨ ದ್ರಾಕ್ಷಿಗಳನ್ನು ತಿಂದರೆ, ೧೨ ತಿಂಗಳುಗಳಲ್ಲಿ ಒಳ್ಳೆಯದೇ ಆಗುತ್ತದೆ ಎಂಬ ನಂಬಿಕೆ. ಇನ್ನೂ ಕೆಲವೆಡೆ, ಮೀನು ತಿನ್ನುವುದು ಹೊಸವರ್ಷಕ್ಕೆ ಒಳ್ಳೆಯದಂತೆ. ಸರಿಯಾದ ಗುರಿಯತ್ತ ಈಜುವ ಮೀನಿನಂತೆ ನಾವು ಮೀನು ತಿಂದರೆ ನಿರ್ಧಿಷ್ಟ ಗುರಿಯತ್ತ ಸಾಗುತ್ತೇವೆ ಎಂಬ ನಂಬಿಕೆ ಇವರದ್ದು.

new year

೭. ಐರಿಷ್‌ ಮಂದಿ ಅಲ್ಲಿನ ಒಂದು ಜಾತಿಯ ಮರದ ಗೆಲ್ಲನ್ನು ಡಿಸೆಂಬರ್‌ ೩೧ರ ರಾತ್ರಿ ತಲೆದಿಂಬಿನಡಿ ಇಟ್ಟು ಮಲಗಿದರೆ ಮುಂದೆ ಜೀವನ ಸಂಗಾತಿಯಾಗುವ ವ್ಯಕ್ತಿ ಕನಸಿನಲ್ಲಿ ಬರುತ್ತಾನೆ/ಳೆ ಎಂಬ ನಂಬಿಕೆಯಿದೆ. ಜರ್ಮನಿ, ಇಂಗ್ಲೆಂಡ್‌ ಹಾಗೂ ಹಲವು ದೇಶಗಳಲ್ಲಿ ಪ್ರೀತಿಸುವ ವ್ಯಕ್ತಿಗೆ ಹೊಸವರ್ಷಕ್ಕೆ ಸರಿಯಾಗಿ ಕಿಸ್‌ ಮಾಡಬೇಕು ಎಂಬುದನ್ನು ಚಾಚೂ ತಪ್ಪದೆ ಮಾಡುತ್ತಾರೆ.

೮. ಗ್ರೀಸ್‌ ದೇಶದ ಮಂದಿ ತಮ್ಮ ಮನೆಯ ಬಾಗಿಲನ್ನು ಹೊಸವರ್ಷಕ್ಕೆ ಈರುಳ್ಳಿಯಿಂದ ಅಲಂಕರಿಸುತ್ತಾರೆ. ಇದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತವಂತೆ.

೯. ಜರ್ಮನಿ ಹಾಗೂ ಆಸ್ಟ್ರಿಯಾದಲ್ಲಿ ಅದೃಷ್ಟದ ಬೊಂಬೆಗಳನ್ನು ಹೊಸವರ್ಷಕ್ಕೆ ಖರೀದಿಸುವ ಸಂಪ್ರದಾಯವಿದೆ. ಹಂದಿ, ಅಣಬೆಯ ಗೊಂಬೆಗಳು ಇಲ್ಲಿನ ಮಾರುಕಟ್ಟೆಯಲ್ಲಿ ಸಿಗುತ್ತವೆ.

೧೦. ಬೆಲ್ಜಿಯಂನ ಮಂದಿ ಹಸವರ್ಷದ ದಿನ ಬೇಗ ಎದ್ದು ತಮ್ಮ ದನಕರು, ಎಮ್ಮೆ, ನಾಯಿ, ಕುದುರೆ, ಹಂದಿ, ಕೋಳಿಗಳಿಗೆಲ್ಲಾ ಶುಭಾಶಯ ಹೇಳುತ್ತಾರೆ. ಪಶುಪಾಲನೆಯನ್ನೇ ಮುಖ್ಯ ಉದ್ಯೋಗವಾಗಿ ನಂಬಿರುವ ಇಲ್ಲಿನ ಮಂದಿಗೆ ತಮ್ಮ ವೃತ್ತಿ ಶುಭಫಲವನ್ನೇ ತರಲಿ ಎಂಬ ಬಯಕೆಯಿಂದ ಹೀಗೆ ಮಾಡುತ್ತಾರಂತೆ.

೧೧. ಜಪಾನಿನಲ್ಲಿ ಉದ್ದದ ತಿಂಡಿಯನ್ನು ತಿನ್ನಬೇಕು ಎಂಬ ನಂಬಿಕೆಯಂತೆ. ಹೀಗಾಗಿ ಇಲ್ಲಿನ ಮಂದಿ ತೊಶಿಕೋಶಿ ಸೋಬಾ ಎಂಬ ಉದ್ದದ ನೂಡಲ್‌ಗಳನ್ನು ಹೊಸವರ್ಷದ ಸಂದರ್ಭ ಆಯ್ಕೆ ಮಾಡುತ್ತಾರೆ.

ಇದನ್ನೂ ಓದಿ | ‌New Year 2023 | ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿ, ಬೆಂಗಳೂರಿನಲ್ಲಿ ಸಕಲ ಸಿದ್ಧತೆ, ಬಂದೋಬಸ್ತ್

೧೨. ಡೆನ್ಮಾರ್ಕ್‌ನಲ್ಲಿ ಪಾತ್ರೆಗಳನ್ನು ಒಡೆಯುವುದು ಶುಭಸೂಚಕವಂತೆ. ಎಲ್ಲರ ಮನೆಯ ಮುಂದೆ ಹೊಸವರ್ಷದ ದಿನ ಒಡೆದ ಪಿಂಗಾಣಿ ಪಾತ್ರೆಗಳನ್ನು ನೋಡಬಹುದು. ಹೆಚ್ಚು ಪಾತ್ರೆ ಒಡೆದ ಮನೆಯಿದ್ದರೆ ಅದಕ್ಕೆ ಹೆಚ್ಚು ಅದೃಷ್ಟ ಎಂದು ಅರ್ಥವಂತೆ!

new year

೧೩. ಟರ್ಕಿಯಲ್ಲಿ ದಾಳಿಂಬೆ ಹಣ್ಣನ್ನು ತಿನ್ನುವುದು ಒಳ್ಳೆಯದೆಂದು ನಂಬಿಕೆ. ಅವರ ಪಾಲಿಗೆ ದಾಳಿಂಬೆ ಸಮೃದ್ಧಿಯ ಸಂಕೇತ. ಹಾಗಾಗಿ ಎಲ್ಲರೂ ಅವರವರ ಮನೆಮುಂದೆ ದಾಳಿಂಬೆಯನ್ನು ನಾವು ತೆಂಗಿನಕಾಯಿ ಒಡೆದಂತೆ ಒಡೆಯುತ್ತಾರೆ.

೧೪. ಪೋರ್ತೋರಿಕೋನಲ್ಲಿ ಒಂದು ಬಕೆಟ್‌ ನೀರನ್ನು ತಮ್ಮ ಮನೆಯ ಕಿಟಕಿಯಿಂದ ಹೊರಚೆಲ್ಲುತ್ತಾರೆ. ಇದು ಕೆಟ್ಟ ಶಕ್ತಿಘಲನ್ನು ಮನೆಯಿಂದಾಚೆ ಕಳಿಸುತ್ತೇವೆ ಎಂಬ ನಂಬಿಕೆ. ಜೊತೆಗೆ ಮನೆ ಮುಂದೆ ಸಕ್ಕರೆಯನ್ನು ಚೆಲ್ಲುವ ಮೂಲಕ ಒಳ್ಳೆಯ ಶಕ್ತಿ ಮನೆಯೊಳಗೆ ಬರಲಿ ಎಂದು ನಂಬುತ್ತಾರಂತೆ.

೧೫. ೧೯೦೦ರಿಂದಲೇ ಹಲವು ದೇಶಗಳಲ್ಲಿ ಹೊಸವರ್ಷದ ದಿನ ಎಷ್ಟೇ ಚಳಿಯಿದ್ದರೂ ಸಮುದ್ರಸ್ನಾನ ಮಾಡುವ ಪದ್ಧತಿಯೂ ಇದೆ. ಪೋಲಾರ್‌ ಬೇರ್‌ ಪ್ಲಂಜ್‌ ಎಂದು ಇದಕ್ಕೆ ಕರೆಯುತ್ತಾರೆ.

ಇದನ್ನೂ ಓದಿ | New Year 2023 | ಹೊಸ ವರ್ಷಾಚರಣೆಗೆ ನಂದಿ ಗಿರಿಧಾಮ, ಮುತ್ತತ್ತಿ, ಬಲಮುರಿ ಸೇರಿ ಇನ್ನಷ್ಟು ಕಡೆ ಪ್ರವೇಶ ನಿರ್ಬಂಧ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
Drowned in water
ಹಾಸನ19 mins ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

HD DeveGowda Wont celebrate 92nd birthday
ರಾಜಕೀಯ22 mins ago

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

hd revanna case
ಕ್ರೈಂ26 mins ago

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

Murder case
ದಾವಣಗೆರೆ36 mins ago

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Amruthadhaare Serial bhoomika in birthday chaya singh
ಕಿರುತೆರೆ38 mins ago

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Theft in two houses in Kudligi taluk
ವಿಜಯನಗರ41 mins ago

Theft Case: ಕೂಡ್ಲಿಗಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

Prajwal Revanna Case Lawyer DevarajeGowda sent to police custody for another day
ಕ್ರೈಂ50 mins ago

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Lok Sabha Election 2024
Lok Sabha Election 202460 mins ago

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

isis link ummer abdul rehman mariyam
ಕ್ರೈಂ1 hour ago

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Murder case in davangere
ದಾವಣಗೆರೆ1 hour ago

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌