Reverse Bridge | ಈ ಸೇತುವೆ ಮೇಲೆ ಹೋದರೆ ನೀವೂ ಮಾಯ, ನಿಮ್ಮ ವಾಹನವೂ ಮಾಯ! ಹಾಗಿದ್ದರೆ ಏನಿದು ವಿಸ್ಮಯ? - Vistara News

Latest

Reverse Bridge | ಈ ಸೇತುವೆ ಮೇಲೆ ಹೋದರೆ ನೀವೂ ಮಾಯ, ನಿಮ್ಮ ವಾಹನವೂ ಮಾಯ! ಹಾಗಿದ್ದರೆ ಏನಿದು ವಿಸ್ಮಯ?

ಇದೊಂಥರಾ ಮಾಯಾ ಸೇತುವೆ. ಈ ರಸ್ತೆಯಲ್ಲಿ ನೀವು ಸಾಗುತ್ತಿದ್ದರೆ ಒಮ್ಮಿಂದೊಮ್ಮೆಗೆ ಕಣ್ಮರೆ ಆಗಿಬಿಡುತ್ತಿದ್ದೀರಿ! ಹಾಗಿದ್ದರೆ ಹೋಗಿದ್ದೆಲ್ಲಿಗೆ? ಬನ್ನಿ ನೋಡಿಕೊಂಡು ಬರೋಣ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಆಮ್‌ಸ್ಟರ್‌ಡಂ: ಅಕ್ಕ ಪಕ್ಕ ನೀರು. ಮಧ್ಯದಲ್ಲಿ ರಸ್ತೆ. ಈ ರೀತಿಯ ಸುಂದರ ಪ್ರಕೃತಿಯ ನಡುವೆ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಿಮ್ಮ ಕಾರು ಮಾಯವಾಗಿಬಿಟ್ಟರೆ? ಹೌದು. ಇಂತದ್ದೊಂದು ವಿಸ್ಮಯ ಕಾಣಸಿಗುವುದು ನೆದರ್ಲೆಂಡ್‌ನ ರಿವರ್ಸ್ ಬ್ರಿಜ್‌ನಲ್ಲಿ (Reverse Bridge).

ಇಲ್ಲಿ ವಿಶಾಲವಾದ ಎರಡು ರಸ್ತೆಗಳಿವೆ. ಅದರಲ್ಲಿ ವೇಗವಾಗಿ ವಾಹನಗಳು ಸಾಗುತ್ತವೆ ಕೂಡಾ. ಆದರೆ, ಒಂದು ದೊಡ್ಡ ನೀರಿನ ತೊರೆ ಹರಿಯುತ್ತದೆ. ವಾಹನಗಳೆಲ್ಲ ಹೋಗಿ ಆ ತೊರೆಯಲ್ಲಿ ಬಿದ್ದು ಕಣ್ಮರೆಯಾದಂತೆ ನಮಗೆ ಕಾಣಿಸುತ್ತವೆ. ತೊರೆಯ ಮೇಲೆ ಹಾಯಿ ದೋಣಿಗಳು ಹಾಯಾಗಿ ಸಾಗುತ್ತಲೇ ಇರುತ್ತವೆ!

ಇದು ಹೇಗೆ ಸಾಧ್ಯ? ಏನಿದು ವಿಸ್ಮಯ ಅಂದುಕೊಂಡಿರಾ? ಇದೊಂಥರಾ ನಿಜಕ್ಕೂ ಎಂಜಿನಿಯರಿಂಗ್‌ ವಿಸ್ಮಯವೇ. ಈ ಸೇತುವೆಯನ್ನು ಮೇಲಿನಿಂದ ನೀವು ನೋಡಿದರೆ ಸೇತುವೆ ವಾಹನಗಳನ್ನು ನುಂಗಿಕೊಳ್ಳುತ್ತಿರುವಂತೆ ಕಾಣಿಸುತ್ತದೆ. ಎಲ್ಲೆಡೆ ನೀರಿನ ಮೇಲ್ಭಾಗದಲ್ಲಿ ಸೇತುವೆ ನಿರ್ಮಿಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ, ಇಲ್ಲಿ ಸೇತುವೆಯ ಅಡಿ ಭಾಗದಲ್ಲೇ ವಾಹನಗಳು ಸಂಚರಿಸುತ್ತವೆ. ಸೇತುವೆಯ ಮೇಲೆ ನೀರು ಹರಿಯುವುದಕ್ಕೆ ಜಾಗ ಕೊಡಲಾಗಿದೆ. ಅಷ್ಟೇ ಅಲ್ಲದೆ ಚಿಕ್ಕ ಪುಟ್ಟ ದೋಣಿ, ಹಡಗುಗಳೂ ಸಹ ಈ ಸೇತುವೆಯ ಮೇಲ್ಭಾಗದಲ್ಲಿ ಸಂಚರಿಸುತ್ತವೆ. ಪ್ರಪಂಚದಲ್ಲಿಯೇ ಈ ರೀತಿ ನೀರಿನ ಕೆಳಭಾಗದಲ್ಲಿ ವಾಹನ ಚಲಿಸುವಂತೆ ಮಾಡಿರುವ ಸೇತುವೆಗಳಲ್ಲಿ ಇದೇ ದೊಡ್ಡದು.

ಇದನ್ನೂ ಓದಿ: Viral story | ಬರೋಬ್ಬರಿ 51 ವರ್ಷಗಳ ನಂತರ ಸಿಕ್ಕಿದ ಕಿಡ್ನ್ಯಾಪ್‌ ಆದ ಮಗು!

ಈ ಸೇತುವೆಯ ಸುಂದರವಾದ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಲ್ವಿನ್ ಫೂ ಹೆಸರಿನವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಸಾವಿರಾರು ಜನರು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಒಮ್ಮೆ ಈ ಸುಂದರ ಸೇತುವೆ(Reverse Bridge)ಯನ್ನು ಕಣ್ಣಾರೆ ನೋಡಬೇಕು” ಎಂದು ಕಾಮೆಂಟ್ ಮಾಡಲಾರಂಭಿಸಿದ್ದಾರೆ.
ಅಂದ ಹಾಗೆ ಈ ಸೇತುವೆಯನ್ನು 2002ರಲ್ಲಿ ಲೋಕಾರ್ಪಣೆಗೊಳಿಸಲಾಗಿದೆ. 25 ಮೀಟರ್ ಉದ್ದವಿರುವ ಈ ಸೇತುವೆಗೆ ವೇಲುವಮೆರ್ ಅಕ್ವಾಡಕ್ಟ್‌(Veluwemeer Aquaduct) ಎನ್ನುವ ಹೆಸರೂ ಇದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್​ ಮಡಿಲು ಈ ಬೆಕ್ಕಿಗೆ ಸುಪ್ಪತ್ತಿಗೆ!; ಓಡೋಡಿ ಬಂದು ತೊಡೆ ಏರಿದ ಮಾರ್ಜಾಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

VISTARANEWS.COM


on

ಪದಗ್ರಹಣ ಮಾಡಿದ ಮರುದಿನವೇ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಎಂ.ಕೆ ಸ್ಟಾಲಿನ್‌ ಅವರನ್ನು ‌ನೂತನ ಸಿಎಂ ವಿಜಯ್ ಭೇಟಿಯಾಗಿದ್ದಾರೆ. ಚೆನ್ನೈನಲ್ಲಿರುವ ಸ್ಟಾಲಿನ್‌ ಅವರ ನಿವಾಸಕ್ಕೆ ಇಂದು ಮಧ್ಯಾಹ್ನ ವಿಜಯ್‌ ಭೇಟಿ ನೀಡಿದರು. ಈ ವೇಳೆ ಉಭಯ ನಾಯಕರು ಕೆಲಕಾಲ ಮಾತುಕತೆ ನಡೆಸಿದ್ದಾರೆ.

ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಸ್ಥಾಪಿಸಿ, ಪಕ್ಷವನ್ನು ಎರಡು ವರ್ಷಗಳಲ್ಲೇ ಅಧಿಕಾರಿಕ್ಕೆ ತಂದು ಮುಖ್ಯಮಂತ್ರಿಯಾದ ವಿಜಯ್‌, ಇದೀಗ ಸೌಹಾರ್ದಯುತವಾಗಿ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆ.

ವಿಜಯ್‌ ಭೇಟಿಯ ವೇಳೆ ಮಾಜಿ ಸಿಎಂ ಸ್ಟಾಲಿನ್‌ ಅವರ ಪುತ್ರ ಹಾಗೂ ತಮಿಳುನಾಡು ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್‌ ಸಹ ಉಪಸ್ಥಿತರಿದ್ದರು.

Continue Reading

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading
Advertisement
Latest36 minutes ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌