Viral Video | ಹಿಮವನ್ನು ಸಂಭ್ರಮಿಸುವುದೆಂದರೆ ಹೀಗೆ ನೋಡಿ! ನಾಯಿಯ ವಿಡಿಯೋಗೆ ಅಪಾರ ಮೆಚ್ಚುಗೆ - Vistara News

ವೈರಲ್ ನ್ಯೂಸ್

Viral Video | ಹಿಮವನ್ನು ಸಂಭ್ರಮಿಸುವುದೆಂದರೆ ಹೀಗೆ ನೋಡಿ! ನಾಯಿಯ ವಿಡಿಯೋಗೆ ಅಪಾರ ಮೆಚ್ಚುಗೆ

ನಾಯಿಯೊಂದು ತನ್ನ ಮೊದಲನೇ ಹಿಮ ಮಳೆಯನ್ನು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಮೆರಿಕ ಸೇರಿ ಹಲವು ರಾಷ್ಟ್ರಗಳಲ್ಲಿ ಇದು ಹಿಮ ಮಳೆಯ ಕಾಲ. ಆಗಸದಿಂದ ಸುರಿವ ಹಿಮಕ್ಕೆ ಮೈ ಒಡ್ಡಿ ಸಂಭ್ರಮಿಸುವ ಮಜವೇ ಬೇರೆ. ಈ ಹಿಮ ಮಳೆಯನ್ನು ಮೊದಲನೇ ಬಾರಿ ಕಂಡ ನಾಯಿಯೊಂದರ ಸಂಭ್ರಮದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ವೈರಲ್ (Viral Video) ಆಗಿದೆ.

ಇದನ್ನೂ ಓದಿ: Viral Video | ಮುಂದಿನ 2 ಚಕ್ರಗಳೇ ಇಲ್ಲದೆ ವೇಗವಾಗಿ ಓಡುವ ಟ್ರಕ್‌, ಇದೆಲ್ಲ ಭಾರತದಲ್ಲಿ ಮಾತ್ರ ಸಾಧ್ಯ

ಕಪ್ಪು ಬಣ್ಣದ ನಾಯಿಯೊಂದು ಆಗಸಕ್ಕೆ ಮುಖ ಮಾಡಿ ಕುಳಿತಿದೆ. ಸುರಿಯುತ್ತಿರುವ ಹಿಮವನ್ನು ಬೆರಗು ಕಣ್ಣಿನಲ್ಲಿ ನೋಡುವುದರ ಜತೆಯಲ್ಲಿ ಅದನ್ನು ಬಾಯಿಯಲ್ಲಿ ಹಿಡಿದು ರುಚಿ ನೋಡುವ ಪ್ರಯತ್ನವನ್ನೂ ಮಾಡುತ್ತಿದೆ. ಇಂತಹ ಸುಂದರ ದೃಶ್ಯವಿರುವ ವಿಡಿಯೋವನ್ನು ವಿರೇಟ್ ಡಾಗ್ಸ್ ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ಇವನ ಹೆಸರು ಕೆಲೆಕ್ಸ್. ಇದು ಇವನಿಗೆ ಮೊದಲನೇ ಹಿಮ ಮಳೆ. ಇವನು ಹಿಮವನ್ನು ಇಂಚಿಂಚಾಗಿಯೂ ಸಂಭ್ರಮಿಸಲು ಬಯಸುತ್ತಿದ್ದಾನೆ. ಹಾಗೆಯೇ ಅದರ ರುಚಿಯನ್ನೂ ನೋಡ ಬಯಸುತ್ತಿದ್ದಾನೆ” ಎಂದು ವಿಡಿಯೋಗೆ ಕ್ಯಾಪ್ಶನ್ ನೀಡಲಾಗಿದೆ. 17 ಸೆಕೆಂಡುಗಳಿಷ್ಟಿರುವ ಈ ವಿಡಿಯೋವನ್ನು 13 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. 29 ಸಾವಿರದಷ್ಟು ಮಂದಿ ಲೈಕ್ ಕ್ಲಿಕ್ಕಿಸಿದ್ದಾರೆ.


“ಏಕೋ ಗೊತ್ತಿಲ್ಲ, ಕೆಲೆಕ್ಸ್ ತುಂಬ ಮುದ್ದಾಗಿ ಕಾಣುತ್ತಿದ್ದಾನೆ” ಎಂದು ಕೆಲವರು ಹೇಳಿದರೆ, ಕೆಲೆಕ್ಸ್ ಅನ್ನು ಎತ್ತಿ ಮುದ್ದಾಡಬೇಕು ಎನಿಸುತ್ತಿದೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video | ಮನದೊಡತಿ ಮಡದಿಗೆ ಅದ್ಭುತ ಉಡುಗೊರೆ ಕೊಟ್ಟ ಪತಿ; ರಿಸೆಪ್ಷನ್​​ನಲ್ಲಿ ವಿಶೇಷ ಕ್ಷಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Rameshwaram Cafe: ವಾರದ ಹಿಂದೆ ಹೈದರಾಬಾದ್‌ನಲ್ಲಿರುವ ರಾಮೇಶ್ವರಂ ಕೆಫೆ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅವಧಿ ಮೀರಿದ 100 ಕೆ.ಜಿ. ಉದ್ದು, 10 ಕೆ.ಜಿ. ಮೊಸರು ಮತ್ತು 8 ಲೀಟರ್ ಹಾಲು ಪತ್ತೆ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮಾಲೀಕ ರಾಘವೇಂದ್ರ ರಾವ್‌ ಗ್ರಾಹಕರಲ್ಲಿ ಕ್ಷಮೆ ಕೋರಿ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಸದ್ಯ ಈ ವಿಡಿಯೊ ನೆಟ್ಟಿಗರ ಟೀಕೆಗೆ ಗುರಿಯಾಗಿದೆ. ಅದಕ್ಕೇನು ಕಾರಣ? ಇಲ್ಲಿದೆ ಉತ್ತರ.

VISTARANEWS.COM


on

Rameshwaram Cafe
Koo

ಹೈದರಾಬಾದ್‌: ಹೈಟೆಕ್​ ಮಾದರಿಯಲ್ಲಿ ಆಹಾರ ತಯಾರಿಸುವ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ತಿಂಗಳುಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡ ಸುದ್ದಿ ದೇಶಾದ್ಯಂತ ಸದ್ದು ಮಾಡಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ನಡೆದ ಬಾಂಬ್​ ದಾಳಿಯ ತನಿಖೆ ಈಗಲೂ ನಡೆಯುತ್ತಿದೆ. ಈ ಮಧ್ಯೆ ವಾರದ ಹಿಂದೆ ಹೈದರಾಬಾದ್‌ನಲ್ಲಿರುವ ರಾಮೇಶ್ವರಂ ಕೆಫೆ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅವಧಿ ಮೀರಿದ 100 ಕೆ.ಜಿ. ಉದ್ದು, 10 ಕೆ.ಜಿ. ಮೊಸರು ಮತ್ತು 8 ಲೀಟರ್ ಹಾಲು ಪತ್ತೆಯಾಗಿತ್ತು. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಕೆಫೆ ಮಾಲೀಕ ರಾಘವೇಂದ್ರ ರಾವ್‌ ಗ್ರಾಹಕರಲ್ಲಿ ಕ್ಷಮೆ ಕೋರಿ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಸದ್ಯ ಈ ವಿಡಿಯೊಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅದಕ್ಕೇನು ಕಾರಣ? ಇಲ್ಲಿದೆ ವಿವರ (Viral Video).

ರಾಘವೇಂದ್ರ ರಾವ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ. ತಮ್ಮಿಂದಾದ ತಪ್ಪನ್ನು ಒಪ್ಪಿಕೊಂಡ ಅವರು ಅದನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ʼʼನಾವು ಇಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನಷ್ಟೇ ಗ್ರಾಹಕರಿಗೆ ನೀಡುತ್ತಿದ್ದೇವೆ. ಆಹಾರ ತಯಾರಿಗೆ ಉತ್ಕೃಷ್ಟ ವಸ್ತುಗಳನ್ನು ಬಳಸಲಾಗುತ್ತಿದೆ. ಹೌದು, ನಮ್ಮಿಂದ ಕೆಲವೊಂದು ಸಣ್ಣ ಪುಟ್ಟ ತಪ್ಪುಗಳಾಗಿವೆ. ಅದಕ್ಕಾಗಿ ಕ್ಷಮೆ ಕೋರುತ್ತಿದ್ದೇನೆ. ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಹಾದಿಯಲ್ಲೇ ನಾವೂ ಸಾಗುತ್ತೇವೆ ಎಂದು ಎಲ್ಲ ಗ್ರಾಹಕರಿಗೆ ಈ ಮೂಲಕ ಭರವಸೆ ನೀಡುತ್ತಿದ್ದೇನೆʼʼ ಎಂದು ಅವರು ತಿಳಿಸಿದ್ದಾರೆ.

ಮುಂದುವರಿದು, “ನೀವು ಪರೀಕ್ಷೆಗಾಗಿ ನಮ್ಮಲ್ಲಿನ ಯಾವುದೇ ಬೇಳೆಕಾಳುಗಳು ಮತ್ತು ಮಸಾಲೆಗಳನ್ನು ತೆಗೆದುಕೊಳ್ಳಬಹುದು. ಉತ್ತಮ ಗುಣಮಟ್ಟದ್ದನ್ನೇ ಬಳಸುತ್ತಿದ್ದೇವೆ. ನಾವು ಬಳಸುವ ತರಕಾರಿ ಕೂಡ ಪ್ರೀಮಿಯಂ ಗುಣಮಟ್ಟದ್ದಾಗಿವೆ. ನಾವು ಯಾವ ರೀತಿಯ ತರಕಾರಿಗಳನ್ನು ಬಳಸುತ್ತೇವೆ ಎಂಬುದನ್ನು ತಪಾಸಣೆ ನಡೆಸುವಂತೆ ನಾನು ಆಹಾರ ಸುರಕ್ಷತಾ ಇಲಾಖೆಗೆ ಮನವಿ ಮಾಡುತ್ತೇನೆ. ನಮ್ಮಿಂದಾದ ತಪ್ಪುಗಳನ್ನು ತಿದ್ದಿದ್ದೇವೆʼʼ ಎಂದು ರಾಘವೇಂದ್ರ ರಾವ್‌ ತಿಳಿಸಿದ್ದಾರೆ.

ಟೀಕೆ ಯಾಕೆ?

ಕ್ಷಮೆ ಕೋರಿದ್ದೇನೋ ಸರಿ. ಇದರಲ್ಲೇನು ತಪ್ಪು? ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕ್ಷಮೆ ಕೋರುವಾಗ ರಾಘವೇಂದ್ರ ರಾವ್‌ ವರ್ತಿಸಿದ ರೀತಿ ಮತ್ತು ಬಾಡಿ ಲಾಂಗ್ವೇಜ್‌ಗೆ ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ಕ್ಷಮೆ ಕೋರುವ ಹಾಗಿಲ್ಲ, ಬದಲಾಗಿ ಬೆದರಿಕೆ ಹಾಕುವಂತಿದೆ. ಅವರ ಮಾತಿನ ಶೈಲಿ ಮತ್ತು ಬೆರಳನ್ನು ಮುಂದೆ ಮಾಡಿರುವ ರೀತಿ ನೋಡಿದರೆ ಅವರು ಬೆದರಿಸುವಂತೆ ಭಾಸವಾಗುತ್ತದೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ನೆಟ್ಟಿಗರ ಪ್ರತಿಕ್ರಿಯೆ

ʼʼಮಾತನಾಡುವ ರೀತಿ ಕ್ಷಮೆ ಕೋರುವ ಹಾಗೆ ಕಾಣಿಸುತ್ತಿಲ್ಲ. ರಾಮೇಶ್ವರಂ ಕೆಫೆಯಲ್ಲಿ ದೋಸೆಗೆ ಸುಮಾರು 200 ರೂ. ನಿಗದಿ ಪಡಿಸಲಾಗಿದೆ. ದರ ದುಬಾರಿಯಾದರೂ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸುತ್ತಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಇದನ್ನು ಯಾರಾದರೂ ಕ್ಷಮೆ ಕೋರುವುದು ಎಂದು ಕರೆಯುತ್ತಾರಾ? ಅವರ ಧ್ವನಿ, ಬಾಡಿ ಲಾಂಗ್ವೇಜ್‌ ನೋಡಿದರೆ ಬೆದರಿಕೆ ಹಾಕುವಂತಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಅವರು ಗ್ರಾಹಕರನ್ನು ಬೆದರಿಸುತ್ತಿದ್ದಾರೆʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ರಾಮೇಶ್ವರಂ ಕೆಫೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.

Continue Reading

ವೈರಲ್ ನ್ಯೂಸ್

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

Viral Video:ಸಮೋಸಾ ಅಂಗಡಿಯಲ್ಲಿ ಏಕಾಏಕಿ ಬೆಂಕಿ(Fire Accident )ಕಾಣಿಸಿಕೊಂಡಿತ್ತು. ಧಗಧಗನೇ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಜನ ಹರಸಾಹಸ ಪಡುತ್ತಿದ್ದರು. ಮತ್ತೆ ಕೆಲವರು ರಸ್ತೆಯಲ್ಲಿ ನಿಂತು ನೋಡುತ್ತಿದ್ದರು. ಇನ್ನು ಕೆಲವು ಮೊಬೈಲ್‌ನಲ್ಲಿ ಘಟನೆಯ ದೃಶ್ಯವನ್ನು ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲೇ ಇದ್ದ ಸಿಲಿಂಡರ್‌ಗೂ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಅಲ್ಲೇ ಇದ್ದ ಜನರಿಗೆ ಬೆಂಕಿ ಜ್ವಾಲೆ ತಗುಲಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Viral Video
Koo

ತಿರುನೆಲ್ವೆಲಿ: ಸಮೋಸ ಅಂಗಡಿ(Samosa Shop)ಯಲ್ಲಿ ಸಿಲಿಂಡರ್‌ ಸ್ಫೋಟ(Cylinder Blast)ಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುನೆಲ್ವೆಲಿ ಜಿಲ್ಲೆಯಲ ಉತ್ತರ ರಾಧಾ ರಸ್ತೆಯಲ್ಲಿರುವ ಸಮೋಸಾ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದಲ್ಲಿ ಹೋರಾಟ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಭೀಕರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ಘಟನೆ ವಿವರ:

ಸಮೋಸಾ ಅಂಗಡಿಯಲ್ಲಿ ಏಕಾಏಕಿ ಬೆಂಕಿ(Fire Accident )ಕಾಣಿಸಿಕೊಂಡಿತ್ತು. ಧಗಧಗನೇ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಜನ ಹರಸಾಹಸ ಪಡುತ್ತಿದ್ದರು. ಮತ್ತೆ ಕೆಲವರು ರಸ್ತೆಯಲ್ಲಿ ನಿಂತು ನೋಡುತ್ತಿದ್ದರು. ಇನ್ನು ಕೆಲವು ಮೊಬೈಲ್‌ನಲ್ಲಿ ಘಟನೆಯ ದೃಶ್ಯವನ್ನು ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲೇ ಇದ್ದ ಸಿಲಿಂಡರ್‌ಗೂ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಅಲ್ಲೇ ಇದ್ದ ಜನರಿಗೆ ಬೆಂಕಿ ಜ್ವಾಲೆ ತಗುಲಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ ತುತ್ತಾಗಿದ್ದಾರೆ. ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ(28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲಿಂಕ್‌ ಆಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral Video: KSRTC ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು! ಡ್ರೈವರ್‌ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

Continue Reading

ವೈರಲ್ ನ್ಯೂಸ್

Viral Video: KSRTC ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು! ಡ್ರೈವರ್‌ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

Viral Video:37 ವರ್ಷದ ಮಹಿಳೆ ವೈದ್ಯರನ್ನು ಕಾಣಲೆಂದು ತ್ರಿಶೂರ್‌ನನಿಂದ ಕೋಜಿಕ್ಕೊಡ್‌ನ ತೊಟ್ಟಿಲ್‌ಪಾಲಂಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್‌ ಪೇರಮಂಗಲಂ ಎಂಬಲ್ಲಿ ತಲುಪುತ್ತಿದ್ದಂತೆ ಮಹಿಳೆಗೆ ತೀವ್ರವಾಗಿ ಹೆರಿಗೆ ನೋವು ಕಾಣಸಿಕೊಂಡಿದೆ. ಈ ವಿಚಾರ ಬಸ್‌ ನಿರ್ವಾಹಕನ ಗಮನಕ್ಕೆ ತಂದ ತಕ್ಷಣ ಆತ ಡ್ರೈವರ್‌ಗೆ ಪರಿಸ್ಥಿತಿಯ ಗಂಭೀರತೆ ತಿಳಿಸಿದ್ದಾನೆ. ತಕ್ಷಣ ಬಸ್‌ ತಿರುಗಿಸಿದ ಡ್ರೈವರ್ ನೇರವಾಗಿ ಬಸ್ಸನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ತೆಗೆದುಕೊಂಡು ಬಂದಿದ್ದಾನೆ.

VISTARANEWS.COM


on

Viral Video
Koo

ಕೇರಳ: ಏಳು ತಿಂಗಳು ಕಳೆಯುತ್ತಿದ್ದಂತೆ ಗರ್ಭಿಣಿ(Pregnant)ಯರನ್ನು ದೂರ ಪ್ರಯಾಣಿಸದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಅದರಲ್ಲೂ ಪ್ರಸವ ದಿನ ಸಮೀಪಿಸುತ್ತಿದ್ದಂತೆ ಮನೆಯಿಂದ ಹೊರಗಡೆ ಕಾಲಿಡಲೂ ಹಿರಿಯರು ಬಿಡುವುದಿಲ್ಲ. ಅಂತಹದ್ರಲ್ಲಿ ಬಸ್‌(KSRTC Bus), ಕಾರಿನಲ್ಲ ಪ್ರಯಾಣ ಬಹಳ ದೂರದ ಮಾತಾಯ್ತು. ಈ ರೀತಿ ಮಾಡುವುದಕ್ಕೆ ಕಾರಣವೂ ಇದೆ. ಕೆಲವೊಮ್ಮೆ ಪ್ರಯಾಣ ಮಧ್ಯೆಯೆ ಹೆರಿಗೆ ಕಾಣಿಸಿಕೊಂಡು ಅವಾಂತರಗಳು ಸಂಭವಿಸಿರುವ ಘಟನೆಗಳೂ ನಡೆದಿವೆ. ಇದೀಗ ಅಂತಹದ್ದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ. ಕೆಎಸ್‌ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿಗೆ ಮಾರ್ಗ ಮಧ್ಯೆಯೇ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ಬಸ್ಸಿನಲ್ಲೇ ಹೆರಿಗೆ ಆಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

37 ವರ್ಷದ ಮಹಿಳೆ ವೈದ್ಯರನ್ನು ಕಾಣಲೆಂದು ತ್ರಿಶೂರ್‌ನನಿಂದ ಕೋಜಿಕ್ಕೊಡ್‌ನ ತೊಟ್ಟಿಲ್‌ಪಾಲಂಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್‌ ಪೇರಮಂಗಲಂ ಎಂಬಲ್ಲಿ ತಲುಪುತ್ತಿದ್ದಂತೆ ಮಹಿಳೆಗೆ ತೀವ್ರವಾಗಿ ಹೆರಿಗೆ ನೋವು ಕಾಣಸಿಕೊಂಡಿದೆ. ಈ ವಿಚಾರ ಬಸ್‌ ನಿರ್ವಾಹಕನ ಗಮನಕ್ಕೆ ತಂದ ತಕ್ಷಣ ಆತ ಡ್ರೈವರ್‌ಗೆ ಪರಿಸ್ಥಿತಿಯ ಗಂಭೀರತೆ ತಿಳಿಸಿದ್ದಾನೆ. ತಕ್ಷಣ ಬಸ್‌ ತಿರುಗಿಸಿದ ಡ್ರೈವರ್ ನೇರವಾಗಿ ಬಸ್ಸನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ತೆಗೆದುಕೊಂಡು ಬಂದಿದ್ದಾನೆ.

ಬಸ್‌ನಲ್ಲಿದ್ದ ಮಹಿಳೆಗೆ ಪ್ರಸವ ವೇದನೆ ಆರಂಭವಾಗಿದೆ ಅನ್ನೋ ವಿಚಾರವನ್ನು ಬಸ್‌ ನಲ್ಲಿದ್ದ ಪ್ರಯಾಣಿಕರೊಬ್ಬರು ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಬಸ್‌ ಬರುತ್ತಿದ್ದಂತೆ ಸ್ಟ್ರಚ್ಚರ್‌ ತೆಗೆದುಕೊಂಡು ಸಿದ್ಧವಾಗಿದ್ದ ಆಸ್ಪತ್ರೆಯ ಸಿಬ್ಬಂದಿ ಮಹಿಳೆಯನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಲು ರೆಡಿ ಆಗಿದ್ದಾರೆ. ಆದ್ರೆ ಆ ವೇಳೆಗಾಗಲೇ ಸಮಯ ಮೀರಿದ್ದ ಕಾರಣ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಮಹಿಳೆಗೆ ಬಸ್‌ ಒಳಗಡೆಯೇ ಹೆರಿಗೆ ಮಾಡಿಸಿದ್ದಾರೆ. ಬಳಿಕ ತಾಯಿ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಮಹಿಳೆಗೆ ಹೆರಿಗೆ ಮಾಡಿಸುವವರೆಗೂ ಬಸ್ ಹಾಗೂ ಪ್ರಯಾಣಿಕರು ಕಾದು ಕುಳಿತಿದ್ದು, ಪ್ರಸವದ ಬಳಿಕ ಬಸ್ ಮುಂದಕ್ಕೆ ಚಲಿಸಿದೆ. ಬಸ್‌ ನಿರ್ವಾಹಕ ಹಾಗೂ ಡ್ರೈವರ್ ಅವರ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

Continue Reading

ವೈರಲ್ ನ್ಯೂಸ್

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

ಮುಂಬಯಿ ವಿಮಾನ ನಿಲ್ದಾಣದಲ್ಲಿ ರೀಲ್ಸ್ ಮಾಡಿದ ಮಹಿಳೆಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ನೆಟ್ಟಿಗರಿಂದ ಭಾರೀ ಟೀಕೆಗೆ ಗುರಿಯಾಗಿದೆ. ಆಕೆಯ ವಿರುದ್ಧ ಕ್ರಮಕ್ಕೆ ಸಾಕಷ್ಟು ಮಂದಿ ಒತ್ತಾಯಿಸಿದ್ದಾರೆ.

VISTARANEWS.COM


on

By

Viral Video
Koo

ಸಾರ್ವಜನಿಕ ಸ್ಥಳಗಳಲ್ಲಿ (public areas) ಇತ್ತೀಚೆಗೆ ವಿಡಿಯೋ ಮಾಡುವವರ ಹಾವಳಿ ಹೆಚ್ಚಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ (Mumbai Airport) ಮಹಿಳೆಯೊಬ್ಬರು ನೃತ್ಯ ಮಾಡಿರುವ ವಿಡಿಯೋವನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕೆಲವರು ಆಕೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮೆಟ್ರೋ ರೈಲುಗಳು, ರೈಲು ಪ್ಲಾಟ್‌ಫಾರ್ಮ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜನರು ನೃತ್ಯ ಮಾಡುವ ಪ್ರವೃತ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕಿದೆ ಎನ್ನುವ ಒತ್ತಾಯಗಳೂ ಕೇಳಿ ಬರುತ್ತಿದೆ.

ಇತರ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡುವ, ಕಿರಿಕಿರಿ ಮಾಡುವ ವಿಡಿಯೋವೊಂದನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದೆ. ಬಾಲಿವುಡ್ ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡುತ್ತಿರುವ ಈ ಹೊಸ ವಿಡಿಯೋ ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಕುರುಕ್ಷೇತ್ರದ ‘ಆಪ್ ಕಾ ಆನಾ’ ಹಾಡಿನಲ್ಲಿ ಮಹಿಳೆಯೊಬ್ಬಳು ಸಲ್ವಾರ್ ಕುರ್ತಾ ಧರಿಸಿ ನೃತ್ಯ ಮಾಡಿದ್ದಾಳೆ. ಆಕೆಯ ಕೆಲವು ಭಂಗಿಗಳು ಸಾರ್ವಜನಿಕರಿಗೆ ಮುಜುಗರ ಉಂಟು ಮಾಡಿದೆ. ಅನೇಕ ಜನರು ಅವಳನ್ನು ಕುತೂಹಲದಿಂದ ನೋಡುತ್ತಿದ್ದರೆ, ಇತರರು ನೋಡಿಯೂ ನೋಡದಂತೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

”ವೈರಸ್ ವಿಮಾನ ನಿಲ್ದಾಣವನ್ನು ತಲುಪಿದೆ” ಎಂಬ ಶೀರ್ಷಿಕೆಯಡಿ @desimojito ಎಂಬ ಹೆಸರಿನ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅನೇಕರು ಆಕೆಯನ್ನು ಟೀಕಿಸಿದ್ದಾರೆ. ಇದೊಂದು ಸಾರ್ವಜನಿಕ ಉಪದ್ರವ ಎಂದು ಹೇಳಿದ್ದಾರೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕೆಲವರು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಹೆಚ್ಚುತ್ತಿರುವ ಈ ಪ್ರವೃತ್ತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದು ಶೀಘ್ರದಲ್ಲೇ ನಿಲ್ಲುವಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ.

ಒಬ್ಬ ಬಳಕೆದಾರನು ಹೀಗೆ ಬರೆದಿದ್ದಾನೆ, ಅಷ್ಟು ಗಟ್ಟಿಯಾಗಿ ನನ್ನ ಕರುಳನ್ನು ಗಂಟುಗೆ ತಿರುಗಿಸಿದೆ. ಇದು ಯಾವಾಗಲೂ ಭಯಾನಕ, ಅಸ್ಪಷ್ಟ 90ರ ಬಾಲಿವುಡ್ ಹಾಡು ಎಂದು ಹೇಳಿದ್ದು, ಮತ್ತೊಬ್ಬರು, ಮಾನವೀಯತೆ ಮತ್ತು ವಿವೇಕ ಎಲ್ಲಿಗೆ ಹೋಗುತ್ತಿದೆ?’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ‘ಇವರಂತಹ ಜನರಿಗೆ ಕಠಿಣ ಕಾನೂನು ಮತ್ತು ದಂಡದ ಅಗತ್ಯವಿದೆ. ಅವರು ಪ್ರತಿ ಸ್ಥಳವನ್ನು ಸರ್ಕಸ್ ಆಗಿ ಪರಿವರ್ತಿಸಿದ್ದಾರೆ ಎಂದು ತಿಳಿಸಿದ್ದಾರೆ.


ಮತ್ತೊಬ್ಬರು ಪ್ರಧಾನಿ ಮೋದಿ ಅವರ ಮುಂದಿನ ಅವಧಿಯಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಈ ವಿದೂಷಕರನ್ನು ನಿಷೇಧಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದು, ಇನ್ನೊಬ್ಬರು ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಇಂತಹ ಪ್ರದರ್ಶನಕ್ಕೆ ಅನುಮತಿ ಇರುವುದಿಲ್ಲ. ಜನರು ಗಂಭೀರ ವ್ಯವಹಾರಕ್ಕಾಗಿ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡುವುದು. ಟೈಮ್ ಪಾಸ್ ಮತ್ತು ಮನರಂಜನೆಗಾಗಿ ಅಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ.

ಈ ಹಿಂದೆ ಮುಂಬಯಿನಲ್ಲಿ ಚಲಿಸುತ್ತಿರುವ ಲೋಕಲ್ ರೈಲಿನೊಳಗೆ ಯುವತಿಯೊಬ್ಬಳು ಭೋಜ್‌ಪುರಿ ಹಾಡುಗಳಿಗೆ ಡ್ಯಾನ್ಸ್ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

Continue Reading
Advertisement
Prajwal revanna
ಪ್ರಮುಖ ಸುದ್ದಿ7 mins ago

Prajwal Revanna : ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗುವಾಗ ಧರಿಸಿದ್ದ ಬಟ್ಟೆ ಬ್ರಾಂಡ್ ಯಾವುದು? ಅದಕ್ಕೆಷ್ಟು ಬೆಲೆ?

contractor self harming
ಕ್ರೈಂ17 mins ago

Self Harming: ಕಂಟ್ರಾಕ್ಟರ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ, ಮತ್ತೊಂದು ಸರ್ಕಾರಿ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಯಲಿಗೆ!

Aadhaar-PAN Link
ದೇಶ31 mins ago

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Valmiki Corporation Scam
ಪ್ರಮುಖ ಸುದ್ದಿ44 mins ago

Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

RBI
ದೇಶ51 mins ago

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

Raghu Thatha Hombale Films Realease date announced
ಕಾಲಿವುಡ್51 mins ago

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Anant Ambani Shakira set to perform 2nd pre-wedding
ಬಾಲಿವುಡ್55 mins ago

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Prajwal Revanna
ಪ್ರಮುಖ ಸುದ್ದಿ59 mins ago

Prajwal Revanna : ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್​ ರೇವಣ್ಣ!

T20 World Cup 2024
ಕ್ರೀಡೆ1 hour ago

T20 World Cup 2024: ನ್ಯೂಯಾರ್ಕ್​ನಲ್ಲಿ ಕಳಪೆ ಗುಣಮಟ್ಟದ ಆಹಾರ; ಟೀಮ್​ ಇಂಡಿಯಾ ಆಟಗಾರರಿಂದ ಅಸಮಾಧಾನ

Vijayanagara News
ವಿಜಯನಗರ1 hour ago

Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌