Actor Yash | ಯಶ್ ಹೊಸ ಸಿನಿಮಾಗೆ 400 ಕೋಟಿ ರೂ. ಬಜೆಟ್‌: ಕೆವಿಎನ್ ‍ಪ್ರೊಡಕ್ಷನ್ ಬಂಡವಾಳ ಹೂಡಲಿದೆಯಂತೆ! - Vistara News

ಸಿನಿಮಾ

Actor Yash | ಯಶ್ ಹೊಸ ಸಿನಿಮಾಗೆ 400 ಕೋಟಿ ರೂ. ಬಜೆಟ್‌: ಕೆವಿಎನ್ ‍ಪ್ರೊಡಕ್ಷನ್ ಬಂಡವಾಳ ಹೂಡಲಿದೆಯಂತೆ!

ಯಶ್ (Actor Yash ) ಹುಟ್ಟು ಹಬ್ಬದ ದಿನದಂದು ಹೊಸ ಸುದ್ದಿ ಹಂಚಿಕೊಳ್ಳಲಿದ್ದಾರೆ ಎಂಬ ಗಾಸಿಪ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. 400 ಕೋಟಿ ರೂ. ವೆಚ್ಚದ ಹೊಸ ಚಿತ್ರದಲ್ಲಿ ಅವರು ನಟಿಸ್ತಾ ಇರುವುದು ನಿಜವೇ?

VISTARANEWS.COM


on

Actor Yash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ‘ಕೆಜಿಎಫ್‌’ ಸಿನಿಮಾ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಮುಂದಿನ ಯೋಜನೆಯ ಬಗ್ಗೆ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಯಶ್ ಹುಟ್ಟು ಹಬ್ಬದ ದಿನದಂದು (ಜನವರಿ ೮) ಹೊಸ ಸುದ್ದಿ ಹಂಚಿಕೊಳ್ಳಲಿದ್ದಾರೆ ಎಂಬ ಗಾಸಿಪ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಯಶ್ ಅವರ ಮುಂದಿನ ಸಿನಿಮಾ 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿದೆ ಎನ್ನಲಾಗುತ್ತಿದೆ. ತಮಿಳು ನಿರ್ದೇಶಕರೊಬ್ಬರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇವೆಲ್ಲದರ ಬಗ್ಗೆ ಯಶ್‌ ತಮ್ಮ ಜನುಮ ದಿನದಂದು ಘೋಷಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಕೆಜಿಎಫ್‌ ಯಶಸ್ಸಿನ ಬಳಿಕ ಯಶ್‌ ಬಹು ದೊಡ್ಡ ಪ್ರಾಜೆಕ್ಟ್‌ಗೆ ಸಹಿ ಹಾಕಿದ್ದಾರೆ ಎನ್ನಲಾಗಿತ್ತು. ವರದಿ ಪ್ರಕಾರ ನರ್ತನ್ ಬದಲಾಗಿ ತಮಿಳು ನಿರ್ದೇಶಕರಿಗೆ ಯಶ್ ಕಾಲ್ ಶೀಟ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ, ಈ ಕುರಿತು ಯಶ್ ಯಾವುದೇ ಸ್ಪಷ್ಟನೆಯನ್ನು ಈವರೆಗೂ ನೀಡದೇ ಇರುವುದು ಕುತೂಹಲಕ್ಕೂ ಕಾರಣವಾಗಿದೆ. ಮೂಲಗಳ ಪ್ರಕಾರ ಯಶ್ ತಮ್ಮದೇ ಸ್ವಂತ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಲಿದ್ದಾರಂತೆ. ಆ ಬ್ಯಾನರ್ ಮೂಲಕವೇ ಪತ್ನಿ ರಾಧಿಕಾ ಪಂಡಿತ್ ರೀ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಸ್ಥೆಯು ಯಶ್ ಅವರ ಮಗಳ ಹೆಸರಿನಲ್ಲಿ ಇರಲಿದೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

ಇದನ್ನೂ ಓದಿ | KGF 3 Actor Yash | ಕೆಜಿಎಫ್​ನ ರಾಕಿ ಭಾಯ್​, ಪಾಂಡ್ಯ ಬ್ರದರ್ಸ್​ ಭೇಟಿ; ಕೆಜಿಎಫ್​ 3 ಟ್ರೆಂಡಿಂಗ್​

ವರದಿ ಪ್ರಕಾರ 400 ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಸಿನಿಮಾಗೆ ಕೆವಿಎನ್ ‍ಪ್ರೊಡಕ್ಷನ್ ಬಂಡವಾಳ ಹೂಡಲಿದೆ ಎಂತಲೂ ಹೇಳಲಾಗುತ್ತಿದೆ. ಏನೇ ಇದ್ದರೂ ಹೊಸ ಅಪ್‌ಡೇಟ್‌ಗಳನ್ನು ಜನವರಿ 8ರಂದು ರಿವೀಲ್‌ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Shahrukh Khan | ಯಶ್‌ ಅಂದರೆ ʻವಾವ್‌ʼ ಎಂದ ಶಾರುಖ್‌ ಖಾನ್‌: ಟ್ವೀಟ್‌ ವೈರಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Shreyanka Patil: ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shreyanka Patil
Koo

ಬೆಂಗಳೂರು: ಟೀಮ್​ ಇಂಡಿಯಾದ ಹಾಗೂ ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್(shreyanka patil dance)​ ಹಾಕಿದ ವಿಡಿಯೊವೊಂದು ವೈರಲ್​ ಆಗಿದೆ.

ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಶ್ರೇಯಾಂಕಾ ಪಾಟೀಲ್ ಕೂಡ ಭಾಗಿಯಾಗಿದ್ದರು. ಇದೇ ವೇಳೆ ಅವರು ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿ ಮಿಂಚಿದರು. ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಕೂಡಾ ಫಿದಾ ಆಗಿದ್ದರು.

ಈ ನೃತ್ಯದ ವಿಡಿಯೊವನ್ನು ಸಮರ್ಜಿತ್ ಲಂಕೇಶ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಧನ್ಯವಾದ ಕೂಡ ತಿಳಿಸಿದ್ದಾರೆ. “ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ತುಂಬಾ ಶಕ್ತಿ ತಂದಿದ್ದಕ್ಕಾಗಿ. ಮೈದಾನದಲ್ಲಿ ಮತ್ತು ಹೊರಗೆ ಅದ್ಭುತವಾದ ಪ್ರದರ್ಶನ ತೋರಿದ್ದಕ್ಕೆ ಈ ನರ್ತಕಿಯನ್ನು ಮರೆಯಬಾರದು… ನಮ್ಮ RCB ರಾಣಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ಚಿತ್ರ ಇದಾಗಿದೆ. ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.


ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

Continue Reading

ಬಾಲಿವುಡ್

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner: ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

VISTARANEWS.COM


on

Kendall Jenner American model flaunted
Koo

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Dhruva Sarja:  ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ! ಹೆಚ್ಚಾಗಲಿದ್ಯಾ ದರ್ಶನ್‌-ಧ್ರುವ ಸಂಘರ್ಷ?

Dhruva Sarja:  ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ.

VISTARANEWS.COM


on

Dhruva Sarja KD and Darshan devil will clash on box office
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಇನ್ನು ದರ್ಶನ್‌ ಅವರ ಡೆವಿಲ್‌ ಸಿನಿಮಾ ಕ್ರಿಸ್‌ಮಸ್‌ಗೆ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್ 25 ಬುಧವಾರ ಬರುವುದರಿಂದ ಒಂದು ವಾರ ಮುಂಚೆ ಅಥವಾ ಎರಡು ದಿನ ತಡವಾಗಿ ಸಿನಿಮಾ ರಿಲೀಸ್ ಆಗಬಹುದು. ಇನ್ನು ಕೆಡಿ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಒಂದು ವಾರ ಮುಂಚಿತವಾಗಿಯೇ ಸಿನಿಮಾ ರಿಲೀಸ್‌ ಮಾಡಬಹುದು. ಒಂದು ವೇಳೆ ಎರಡೂ ಸಿನಿಮಾಗಳು ಒಟ್ಟಿಗೆ ರಿಲೀಸ್‌ ಆದರೆ ಥಿಯೇಟರ್‌ ಸಮಸ್ಯೆಯಾಗೋದಂತೂ ಖಚಿತ. ಕರ್ನಾಟಕದಲ್ಲಿ 500 ಥಿಯೇಟರ್‌ಗಳು ಇವೆ. ‘ಕೆಡಿ’ ಸಿನಿಮಾಗೆ ನಿರ್ಮಾಣ ಸಂಸ್ಥೆ ಕೆವಿಎನ್ ಸಿಕ್ಕಾಪಟ್ಟೆ ಹಣ ಸುರಿದಿದೆ. ಈ ಕಾರಣಕ್ಕೆ ಕಮ್ಮಿ ಅಂದರೂ 400 ಸ್ಕ್ರೀನ್‌ನಲ್ಲಾದರೂ ರಿಲೀಸ್ ಆಲೇಬೇಕು. ಮಾತ್ರವಲ್ಲ ಪ್ರೇಮ್‌ ಕೂಡ ಹೆಚ್ಚು ಥಿಯೇಟರ್‌ಗಳಲ್ಲಿ ಸಿನಿಮಾ ರಿಲೀಸ್‌ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

ಸ್ಯಾಂಡಲ್ ವುಡ್

Dhruva Sarja: ಕನ್ನಡ ಫಿಲ್ಮ್ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ ಎಂದಿದ್ದೇಕೆ ಧ್ರುವ ಸರ್ಜಾ?

Dhruva Sarja: ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾದ ಬಿಡುಗಡೆ ದಿನಾಂಕ, ಸಿನಿಮಾದ ಸಂಗೀತ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.  ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ? ಎಂಬುದರ ಬಗ್ಗೆ ಪ್ರೇಮ್‌ ಮಾಹಿತಿ ಹಂಚಿಕೊಂಡರು.

VISTARANEWS.COM


on

Dhruva Sarja Prem say about the theater problem
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಮತ್ತು ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ‘ಕೆಡಿ’ ಇದೇ (KD Movie) ಡಿಸೆಂಬರ್‌ಗೆ ತೆರೆ ಕಾಣಲಿದೆ. ಮೇಕಿಂಗ್ ವಿಡಿಯೊ ರಿಲೀಸ್ ಮಾಡಿ ಸಿಹಿ ಸುದ್ದಿ ಕೊಟ್ಟಿದೆ ʻಕೆಡಿʼ ಸಿನಿಮಾ ಚಿತ್ರತಂಡ. ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾದ ಬಿಡುಗಡೆ ದಿನಾಂಕ, ಸಿನಿಮಾದ ಸಂಗೀತ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.  ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ ಎಂಬುದರ ಬಗ್ಗೆ ಪ್ರೇಮ್‌ ಮಾಹಿತಿ ಹಂಚಿಕೊಂಡರು.

ಬಿಗ್‌ ಸ್ಟಾರ್ಸ್‌ಗಳು ಯಾಕೆ ವರ್ಷಕ್ಕೆ 2 ಸಿನಿಮಾ ಮಾಡಲ್ಲ?

ಇತ್ತೀಚೆಗೆ ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ನೋಡಲು ಜನ ಚಿತ್ರಮಂದಿರಗಳಲ್ಲಿ ಬರುತ್ತಿಲ್ಲ ಎಂಬ ದೂರು ಜೋರಾಗಿ ಕೇಳಿ ಬರುತ್ತಿದೆ. ಇತ್ತೀಚೆಗೆ ಫಿಲ್ಮ್‌ ಚೇಂಬರ್​ನವರು ಸಭೆ ನಡೆಸಿ, ಸ್ಟಾರ್ ನಟರು ಹೆಚ್ಚು ಹೆಚ್ಚು ಸಿನಿಮಾಗಳನ್ನು ಮಾಡುವಂತೆ ಒತ್ತಾಯಿಸಲು ನಿರ್ಣಯಿಸಿರುವ ಸುದ್ದಿ ಹರಿದಾಡಿತು. ಈ ಬಗ್ಗೆ ಪ್ರೇಮ್‌ಗೆ ಪ್ರಶ್ನೆ ಎದುರಾದಾಗ ಉತ್ತರಿಸಿದ್ದು ಹೀಗೆ.

ಪ್ರೇಮ್‌ ಮಾತನಾಡಿ ʻʻಇಂದಿನ ದಿನಮಾನದಲ್ಲಿ ಸಿನಿಮಾ ಮಾಡುವ ರೀತಿ ಬೇರೆ ಆಗಿದೆ. ಮುಂಚೆಲ್ಲ ವರ್ಷಕ್ಕೊಂದು ಸಿನಿಮಾಗಳನ್ನು ಮಾಡುತ್ತಿದ್ದರು. ಆಗ ಗ್ರಾಫಿಕ್‌ ಆಗಿರಲಿ, ತಂತ್ರಜ್ಞಾನ ಇರಲಿಲ್ಲ. ಆದರೆ ಈಗ ಕಾಂಪಿಟೇಶನ್‌ ಹೆಚ್ಚಾಗಿದೆ. ಬೇರೆ ಭಾಷೆಗಳಲ್ಲಿ ಕಾಂಪೀಟ್‌ ಮಾಡಲೇಬೇಕಾಗಿದೆ. ಕಾಂಪೀಟ್‌ ಮಾಡಬೇಕು ಎಂದರೆ ಕ್ವಾಲಿಟಿ ತುಂಬ ಮುಖ್ಯ. ಆಗ ಸಮಯ ಬೇಕೆ ಬೇಕು. ದರ್ಶನ್‌, ಧ್ರುವ ಅವರಿಗೆ ಮೂರು ಸಿನಿಮಾ ಮಾಡಿ ಎನ್ನುವುದಕ್ಕೆ ಆಗಲ್ಲ. ಈಗ ಸಿನಿಮಾ ಮಾಡಬೇಕು ಎಂದರೆ ಒಂದು ವರ್ಷ ಬೇಕೆ ಬೇಕು” ಎಂದರು.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಕನ್ನಡ ಇಂಡಸ್ಟ್ರಿಯಲ್ಲಿ ಸ್ಟಾರ್ ಅಂತ ಯಾರೂ ಇಲ್ಲ

ಇದೇ ವೇಳೆ ಧ್ರುವ ಸರ್ಜಾ ಮಾತನಾಡಿ ʻʻಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್‌ ಅಂತ ಯಾರಿಲ್ಲ. ಸಿನಿಮಾ ಚೆನ್ನಾಗಿದ್ದಾರೆ ಅವರೇ ಸ್ಟಾರ್‌. ಕ್ವಾಲಿಟಿ, ಕಂಟೆಂಟ್‌ ತುಂಬ ಮುಖ್ಯ. ಪ್ರೇಕ್ಷಕರಿಗೆ ಇಷ್ಟ ಆಗಬೇಕು ಎಂದೇ ನಾವು ಕಟೆಂಟ್‌ಗೆ ಆದ್ಯತೆ ಕೊಡುತ್ತಿದ್ದೇವೆʼʼಎಂದರು ಧ್ರುವ ಸರ್ಜಾ. ಧ್ರುವ ಸರ್ಜಾ ಸಿನಿಮಾ ಬಗ್ಗೆ ಮಾತನಾಡಿ ʻʻಮಾರ್ಟಿನ್‌ ಸಿನಿಮಾ ಅಕ್ಟೋಬರ್‌ 11ಕ್ಕೆ ರಿಲೀಸ್‌ ಆದರೆ, ಕೆಡಿ ಸಿನಿಮಾ ಡಿಸೆಂಬರ್‌ನಲ್ಲಿ ರಿಲೀಸ್‌ ಆಗುತ್ತಿದೆ. ಎರಡು ಸಿನಿಮಾಗಳ ಜಾನರ್‌ ಬೇರೆ ಬೇರೆ. ಕೆಡಿ ರೆಟ್ರೋ ಆಗಿದ್ದು, ಮಾರ್ಟಿನ್‌ ಒಳ್ಳೆ ಡ್ರಾಮ್‌ ಮತ್ತು ಕಟೆಂಟ್‌ ಸಿನಿಮಾʼʼಎಂದರು.

ಡಿಸೆಂಬರ್‌ಗೆ ಕೆಡಿ ಸಿನಿಮಾ ರಿಲೀಸ್‌

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading
Advertisement
Road Accident
ಕರ್ನಾಟಕ2 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ2 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ2 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ9 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್33 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್36 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ39 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು39 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ45 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್55 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌