ʼಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದರೆ ನಾನು ಆಗೋದ್ರಲ್ಲಿ ತಪ್ಪೇನಿದೆ?'; ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿಕೆ - Vistara News

ದಾವಣಗೆರೆ

ʼಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದರೆ ನಾನು ಆಗೋದ್ರಲ್ಲಿ ತಪ್ಪೇನಿದೆ?’; ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿಕೆ

ಸಿಎಂ ಕುರ್ಚಿಯ ಮೇಲೆ ಕೂರುವ ಆಕಾಂಕ್ಷೆ ತನಗೂ ಇದೆ ಹಾಗೂ ತನ್ನ ತಂದೆಗೂ ಎಂದು ಕಾಂಗ್ರಸ್‌ ಮಾಜಿ ಸಚಿವ ಎಸ್‌.ಎಸ್.‌ ಮಲ್ಲಿಕಾರ್ಜುನ್‌ ಹೇಳಿಕೆ ನೀಡಿದ್ದಾರೆ.

VISTARANEWS.COM


on

SS MALLIKARJUN
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಕಾಂಗ್ರೆಸ್‌ ಪಕ್ಷದ ಮಾಜಿ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ರಾಜ್ಯ ರಾಜಕಾರಣದ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ಯಾರು ಈ ಬಾರಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಎಸ್‌ ಎಸ್‌ ಮಲ್ಲಿಕಾರ್ಜುನ್‌ ʼನನಗೂ ಕೂಡ ಸಿಎಂ ಕುರ್ಚಿಯ ಮೇಲೆ ಕೂರುವ ಆಕಾಂಕ್ಷೆ ಇದೆ. ಬಸವರಾಜ್‌ ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದರೆ ನಾನೂ ಆಗೊದ್ರಲ್ಲಿ ತಪ್ಪೇನಿದೆ?ʼ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಪಟ್ಟದ ಆಸೆ ಹೊಂದಿರುವುದನ್ನು ವ್ಯಕ್ತ ಪಡಿಸಿದ ಎಸ್‌ ಎಸ್‌ ಮಲ್ಲಿಕಾರ್ಜುವ್‌ ʼನಮ್ಮ ತಂದೆಗೂ ಸಿಎಂ ಆಗುವ ಆಸೆ ಇದೆʼ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಎಸ್‌ ಎಸ್‌ ಮಲ್ಲಿಕಾರ್ಜುನ್ ʼಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಹೈಕ್ಲಾಸ್‌ ಇದೆ. ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಇಬ್ಬರೂ ಹೊಂದಾಣಿಕಯಲ್ಲಿದ್ದಾರೆ. ಹಾಗಾಗಿ ಪಕ್ಷದಲ್ಲಿ ಯಾವುದೇ ಚಿಂತೆಯಿಲ್ಲ. ಸಿದ್ದರಾಮಯ್ಯ ಪಕ್ಷದ ಹಿರಿಯರು ಆದ್ದರಿಂದ ಅವರನ್ನೇ ಸಿಎಂ ಮಾಡ್ತೀವಿ. ಅವರು ಮತ್ತೆ ಸಿಎಂ ಆಗೊದ್ರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಹೈಕಮಾಂಡ್‌ ನೀಡುವ ನಿರ್ಧಾರ ಅಂತಿಮ. ಅದನ್ನು ನಾವು ಪಾಲಿಸುತ್ತೇವೆʼ ಎಂದು ತಿಳಿಸಿದರು.

ಈಶ್ವರಪ್ಪ ರಾಜೀನಾಮೆ ವಿಚಾರ:

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತೆ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಸಚಿವ ಈಶ್ವರಪ್ಪ ರಾಜಿನಾಮೆ ಘೋಷಿದಿದ್ದಾರೆ.

ಬಿಜೆಪಿ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬಾಕಿ ಉಳಿದ ಫೈಲ್‌ಗಳಿಗೆ ಸಹಿ ಮಾಡಿ ತಮ್ಮ ಸ್ಥಾನಕ್ಕೆ ರಾಜಿನಾಮೆ ‌ಕೊಡುವುದು ಖಾತ್ರಿಯಾಗಿದೆ. ಈ ಬಗ್ಗೆ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಪ್ರತಿಕ್ರಿಯಿಸಿ ʼಈಶ್ವರಪ್ಪ ಅನ್ಯಾಯವಾಗಿ ಒಂದು ಜೀವ ಬಲಿ ಕೊಟ್ಟಿದ್ದಾರೆ. ಯಾವುದೇ ಸೂಕ್ತ ನಿರ್ದೇಶನ ಇಲ್ಲದೇ ಕಾಮಗಾರಿ ಮಾಡಲು ಹೇಗೆ ಸಾಧ್ಯ? ಕಾಮಗಾರಿ ಮಾಡಿಸಿ ಹಣ ಪಾವತಿ ಮಾಡಲು 40% ಕಮಿಷನ್ ಕೇಳಿದ್ರೆ ಗುತ್ತಿಗೆದಾರ ಎಲ್ಲಿ ಹೋಗಬೇಕು ಹೇಳಿ?ʼ ಎಂದು ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Rain news : ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ (Karnataka Weather Forecast) ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯೊಂದಿಗೆ (Heavy Rain) ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಜೂನ್‌ 7ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬುಧವಾರ ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದೆ. ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30-40 ಕಿಮೀ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ನಿನ್ನೆ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ನಿನ್ನೆ ಮಂಗಳವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ಬಸವಕಲ್ಯಾಣ: ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Davanagere Election Result 2024: ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ಗೆ ಗೆಲುವು

Davanagere Election Result 2024: ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಯಾರು ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್‌, ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ.ವಿನಯ್‌ ಕುಮಾರ್‌ ಅವರು ಕಣಕ್ಕಿಳಿದಿದ್ದು, ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿತ್ತು. ಈಗ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Davangere Election Result 2024
Koo

ದಾವಣಗೆರೆ: ಬೆಣ್ಣೆ ದೋಸೆಗೆ ಹೆಸರುವಾಸಿಯಾಗಿರವ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ (Davanagere Election Result 2024) ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವು ಸಾಧಿಸಿದ್ದಾರೆ. ಆ ಮೂಲಕ ದಾವಣಗೆರೆ ಜಿಲ್ಲೆಯ ಮೇಲೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬವು ಸಂಪೂರ್ಣ ಹಿಡಿತ ಸಧಿಸಿದಂತಾಗಿದೆ. ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್‌ ಅವರು ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಭಾರಿ ಹಿನ್ನಡೆಯಾದಂತಾಗಿದೆ.

ಜಿ.ಎಂ.ಸಿದ್ದೇಶ್ವರ್‌ ಅವರು ಅನಾರೋಗ್ಯದ ಮಧ್ಯೆಯೂ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ನರೇಂದ್ರ ಮೋದಿ ಅವರ ಅಲೆಯು ಕೂಡ ಕ್ಷೇತ್ರದಲ್ಲಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಧ್ಯಸ್ಥಿಕೆಯಿಂದಾಗಿ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಭಿನ್ನಮತವು ಶಮನವಾಗಿತ್ತು. ಹಾಗಾಗಿ, ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲುವು ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೂ ಕ್ಷೇತ್ರದಲ್ಲಿ ಕಮಲ ಪಾಳಯಕ್ಕೆ ಹಿನ್ನಡೆಯಾದಂತಾಗಿದೆ.

ದಾವಣಗೆರೆ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ವರ್ಚಸ್ಸಿದೆ. ಇವರ ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಚಿವರೂ ಆಗಿದ್ದಾರೆ. ಲಿಂಗಾಯತ ಮತಗಳ ಮೇಲೆ ಇವರ ಕುಟುಂಬದ ಹಿಡಿತವಿದೆ. ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಕಳೆದ ಒಂದು ವರ್ಷದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಜನರಿಗೆ ಹತ್ತಿರವಾಗಿದ್ದರು. ಮಾವ, ಪತಿಯ ಬಲದಿಂದ, ಸಮಾಜ ಸೇವೆ, ಕಾಂಗ್ರೆಸ್‌ ಗ್ಯಾರಂಟಿಗಳ ಫಲವಾಗಿ ಪ್ರಭಾ ಮಲ್ಲಿಕಾರ್ಜುನ್‌ ಅವರು ಮುನ್ನಡೆಯ ವಿಶ್ವಾಸದಲ್ಲಿದ್ದರು. ಆದರೆ, ಜಿ.ಬಿ.ವಿನಯ್‌ ಕುಮಾರ್‌ ಅವರು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿರುವುದು ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ತುಸು ಹಿನ್ನಡೆ ಎಂದೇ ಹೇಳಲಾಗುತ್ತಿತ್ತು. ಇದೆಲ್ಲವನ್ನೂ ಮೀರಿ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವು ಸಾಧಿಸಿದ್ದಾರೆ.

2019, 2014ರ ಫಲಿತಾಂಶ ಏನಾಗಿತ್ತು?

2019ರಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್‌ ಅವರು ಕಾಂಗ್ರೆಸ್‌ನ ಎಚ್‌.ಬಿ.ಮಂಜಪ್ಪ ಅವರ ವಿರುದ್ಧ ಸುಮಾರು 1.69 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಕಳೆದ 4 ಲೋಕಸಭೆ ಚುನಾವಣೆಗಳಲ್ಲೂ ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿದ್ದಾರೆ. 2004, 2009 ಹಾಗೂ 2014ರಲ್ಲೂ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ

Continue Reading

ಮಳೆ

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Heavy Rain Warning: ರಾಜ್ಯಾದ್ಯಂತ (Karnataka Weather forecast) ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Yellow Alert) ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Waring) ನೀಡಲಾಗಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Minister Of Parliament
Latest19 mins ago

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

Uttarakhand Trekking Tragedy
ಪ್ರಮುಖ ಸುದ್ದಿ20 mins ago

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

India Bloc Meeting
ದೇಶ28 mins ago

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India vs Ireland
ಕ್ರೀಡೆ51 mins ago

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

Water Supply Cut
ಕರ್ನಾಟಕ56 mins ago

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Lowest Margin of Wins
ದೇಶ1 hour ago

Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

Rahul Dravid
ಕ್ರೀಡೆ1 hour ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ2 hours ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Operation London Cafe movie will be released very soon
ಕರ್ನಾಟಕ2 hours ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ2 hours ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌