Yakub Qureshi Arrested | ಮಾಂಸ ಮಾರಾಟ ದಂಧೆ, ಉತ್ತರ ಪ್ರದೇಶ ಮಾಜಿ ಸಚಿವ ಯಾಕೂಬ್‌ ಖುರೇಷಿ, ಪುತ್ರನ ಬಂಧನ - Vistara News

ದೇಶ

Yakub Qureshi Arrested | ಮಾಂಸ ಮಾರಾಟ ದಂಧೆ, ಉತ್ತರ ಪ್ರದೇಶ ಮಾಜಿ ಸಚಿವ ಯಾಕೂಬ್‌ ಖುರೇಷಿ, ಪುತ್ರನ ಬಂಧನ

ಅಕ್ರಮವಾಗಿ ಮಾಂಸ ಮಾರಾಟದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಕಳೆದ ವರ್ಷವೇ ಯಾಕೂಬ್‌ ಖುರೇಷಿ (Yaqub Qureshi Arrested) ಅವರ ಒಡೆತನದ ಮಾಂಸದ ಕಾರ್ಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು.

VISTARANEWS.COM


on

Yaqub Qureshi Arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ/ನವದೆಹಲಿ: ಅಕ್ರಮವಾಗಿ ಮಾಂಸ ವ್ಯಾಪಾರದಲ್ಲಿ ತೊಡಗಿದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ, ಬಿಎಸ್‌ಪಿ ನಾಯಕ ಯಾಕೂಬ್‌ ಖುರೇಷಿ (Yakub Qureshi Arrested) ಹಾಗೂ ಅವರ ಪುತ್ರ ಇಮ್ರಾನ್‌ ಖುರೇಷಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಪೊಲೀಸರ ನೆರವಿನಿಂದ ಮೀರತ್‌ ಪೊಲೀಸರು ದೆಹಲಿಯ ಚಾಂದನಿ ಮಹಲ್‌ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಇಬ್ಬರೂ ಆರೋಪಿಗಳು ಚಾಂದನಿ ಮಹಲ್‌ನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಅಡಗಿದ್ದರು. ನಿಖರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಯಾಕೂಬ್‌ ಖುರೇಷಿ ಅವರು ಪರವಾನಗಿ ಇಲ್ಲದೆಯೇ ಮಾಂಸ ಮಾರಾಟ ದಂಧೆಯಲ್ಲಿ ತೊಡಗಿದ್ದು, ಆಹಾರ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್‌ ಘಟಕಗಳನ್ನು ಹೊಂದಿದ್ದಾರೆ. 2022ರ ಮಾರ್ಚ್‌ನಲ್ಲಿಯೇ ಮೀರತ್‌ ಪೊಲೀಸರು ಯಾಕೂಬ್‌ ಖುರೇಷಿ ಒಡೆತನದ ಮಾಂಸದ ಕಾರ್ಖಾನೆಗೆ ದಾಳಿ ನಡೆಸಿ, ಖುರೇಷಿ, ಅವರ ಪತ್ನಿ ಸಂಜೀದಾ ಬೇಗಂ, ಪುತ್ರರಾದ ಇಮ್ರಾನ್ ಹಾಗೂ ಫಿರೋಜ್‌ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಒಂದು ದಿನದ ಹಿಂದೆಯಷ್ಟೇ ಖುರೇಷಿ ಪುತ್ರ ಫಿರೋಜ್‌ ಪೊಲೀಸರಿಗೆ ಶರಣಾಗಿದ್ದಾನೆ. ಮಾಯಾವತಿ ಸರ್ಕಾರದಲ್ಲಿ ಖುರೇಷಿ ಸಚಿವರಾಗಿದ್ದರು.

ಇದನ್ನೂ ಓದಿ | Knife Attack | ಸ್ನೇಹಿತರಿಬ್ಬರ ಹತ್ತು ವರ್ಷಗಳ ವೈಮನಸಿಗೆ ಮತ್ತೆ ಜೀವ: ಚಾಕುವಿನಿಂದ ಇರಿದವನ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

Stock Market: ಬಾಂಬೆ ಷೇರು ಪೇಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ.

VISTARANEWS.COM


on

Stock Market
Koo

ಮುಂಬೈ: ಬಾಂಬೆ ಷೇರು ಪೇಟೆ (Stock Market)ಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ 79,000 ಅಂಕ ತಲುಪಿದ್ದ ಸೆನ್ಸೆಕ್ಸ್‌ (Sensex) ಇಂದು (ಜುಲೈ 2) ಕೂಡ ಮೇಲ್ಮುಖವಾಗಿ ಸಾಗಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ.

ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ. ಐಟಿ ಕಂಪನಿಗಳ ಲಾಭ ಮತ್ತು ಯುಎಸ್ ಫೆಡರಲ್ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬಡ್ಡಿದರ ಕಡಿತದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು ಇಂದು ಈ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ.

ಹಿಂದಿನ ಸೆಷನ್‌ನಲ್ಲಿ ಶೇ. 2ರಷ್ಟು ಏರಿಕೆ ಕಂಡಿದ್ದ ಐಟಿ ಷೇರುಗಳು ಇಂದು ಮತ್ತೆ ಶೇ. 0.7ರಷ್ಟು ಹೆಚ್ಚಳ ದಾಖಲಿಸಿವೆ. ಎಲ್ಲ 13 ಪ್ರಮುಖ ವಲಯಗಳು ಲಾಭವನ್ನು ಕಂಡವು. ಅದರಲ್ಲಿಯೂ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಕ್ರಮವಾಗಿ ಶೇ. 0.4 ಮತ್ತು ಶೇ. 0.2 ಹೆಚ್ಚಳ ಕಂಡವು.

ಈ ಮಧ್ಯೆ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ರೂಪಾಯಿ 12 ಪೈಸೆ ದುರ್ಬಲಗೊಂಡು 83.56ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಬಲವಾದ ಯುಎಸ್ ಡಾಲರ್ ಮತ್ತು ಹೆಚ್ಚಾದ ಕಚ್ಚಾ ತೈಲ ಬೆಲೆಗಳು ಇದಕ್ಕೆ ಕಾರಣ. ತೈಲ ಆಮದುದಾರರು ಮತ್ತು ವಿದೇಶಿ ಹೂಡಿಕೆದಾರರು ಯುಎಸ್ ಡಾಲರ್‌ ಹೆಚ್ಚಾಗಿ ಬಳಸುತ್ತಿದ್ದು, ಇದು ರೂಪಾಯಿ ಕುಸಿತಕ್ಕೆ ಕಾರಣವಾಗಿದೆ ಎಂದು ವಿದೇಶಿ ವಿನಿಮಯ ವ್ಯಾಪಾರಿಗಳು ವಿವರಿಸಿದ್ದಾರೆ.

ಇಂಟರ್‌ ಬ್ಯಾಂಕ್‌ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ 83.51 ಮೌಲ್ಯದೊಂದಿಗೆ ದಿನವನ್ನು ಆರಂಭಿಸಿತು. ಆದರೆ ಬಳಿಕ ಡಾಲರ್ ವಿರುದ್ಧ 83.56ಕ್ಕೆ ಇಳಿಯಿತು. ಈ ಮೂಲಕ ಸೋಮವಾರಕ್ಕಿಂತ 12 ಪೈಸೆ ಕುಸಿತ ದಾಖಲಿಸಿದೆ.

ಗುರುವಾರ (ಜೂನ್‌ 27)ದ ಆರಂಭಿಕ ವಹಿವಾಟಿನಲ್ಲಿ ಕುಸಿದ ನಂತರ ಬೆಂಚ್ ಮಾರ್ಕ್ ಸೂಚ್ಯಂಕಗಳು ಜಿಗಿದುಕೊಂಡಿದ್ದವು. ಅಂದು ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 79,000 ಗಡಿಯನ್ನು ದಾಟಿತ್ತು ಮತ್ತು ನಿಫ್ಟಿ ಬ್ಲೂ-ಚಿಪ್ ಷೇರುಗಳ ಖರೀದಿಯ ಮಧ್ಯೆ ತನ್ನ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು. ರಿಲಯನ್ಸ್‌ ಇಂಡಸ್ಟ್ರೀಸ್‌ನ ಬ್ಲೂ-ಚಿಪ್ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 339.51 ಪಾಯಿಂಟ್ಸ್ ಏರಿಕೆ ಕಂಡು 79,013.76ಕ್ಕೆ ತಲುಪಿದ್ದರೆ ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 23,966.40ಕ್ಕೆ ಮುಟ್ಟಿತ್ತು. “ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಸೆನ್ಸೆಕ್ಸ್ ಅನ್ನು 80,000 ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ಬ್ಯಾಂಕಿಂಗ್ ಮತ್ತು ಟೆಲಿಕಾಂನಂತಹ ಕ್ಷೇತ್ರಗಳಲ್ಲಿ ಬಲವಾದ ಲಾರ್ಜ್ ಕ್ಯಾಪ್‌ಗಳು ಈಗ ಏರಿಕೆ ಪ್ರವೃತ್ತಿಯನ್ನು ಮುನ್ನಡೆಸುತ್ತಿವೆ” ಎಂದು ತಜ್ಞರು ಹೇಳಿದ್ದಾರೆ. 

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

Continue Reading

ದೇಶ

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನರಿಂದ ಭೂಮಿ ಕಸಿದಿದ್ದು, ಅದಕ್ಕೆ ಪರಿಹಾರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿ ವಿರುದ್ಧ ಕಿಡಿ ಕಾರಿರುವ ಯೋಗಿ, ಮಾಧ್ಯಮ ಪ್ರಕಟಣೆ ಮೂಲಕ ಟಾಂಗ್‌ ಕೊಟ್ಟಿದ್ದಾರೆ. ಸದನದಲ್ಲಿ ರಾಹುಲ್ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು. ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ನಿರಾಶ್ರಿತರಾದ ಜನರಿಗೆ ಪರಿಹಾರವಾಗಿ 1,733 ಕೋಟಿ ರೂಪಾಯಿ ನೀಡಲಾಗಿದೆ ಎಂದು ಯೋಗಿ ಹೇಳಿದರು.

VISTARANEWS.COM


on

Yogi Adityanath
Koo

ಹೊಸದಿಲ್ಲಿ: ನಿನ್ನೆ ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹಿಂದೂ ಹಿಂಸಾವಾದಿ, ಅಯೋಧ್ಯೆ ರಾಮ ಮಂದಿರದ ಬಗೆಗಿನ ಹೇಳಿಕೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌(Yogi Adityanath) ತಿರುಗೇಟು ಕೊಟ್ಟಿದ್ದಾರೆ. ರಾಹುಲ್‌ ಗಾಂಧಿ ಸುಳ್ಳು ಮತ್ತು ತಪ್ಪಾದ ಮಾಹಿತಿ ಹರಡುವ ಮೂಲಕ ಉತ್ತರಪ್ರದೇಶಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನರಿಂದ ಭೂಮಿ ಕಸಿದಿದ್ದು, ಅದಕ್ಕೆ ಪರಿಹಾರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿ ವಿರುದ್ಧ ಕಿಡಿ ಕಾರಿರುವ ಯೋಗಿ, ಮಾಧ್ಯಮ ಪ್ರಕಟಣೆ ಮೂಲಕ ಟಾಂಗ್‌ ಕೊಟ್ಟಿದ್ದಾರೆ. ಸದನದಲ್ಲಿ ರಾಹುಲ್ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು. ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ನಿರಾಶ್ರಿತರಾದ ಜನರಿಗೆ ಪರಿಹಾರವಾಗಿ 1,733 ಕೋಟಿ ರೂಪಾಯಿ ನೀಡಲಾಗಿದೆ ಎಂದು ಯೋಗಿ ಹೇಳಿದರು.

ರಾಹುಲ್ ಗಾಂಧಿ ಮತ್ತು ಅವರ ಸಹಚರರು ಅಯೋಧ್ಯೆ ಜನರನ್ನು ಗಡಿಪಾರು ಮಾಡಿದ್ದು ಮಾತ್ರವಲ್ಲದೆ ಸರಯೂ ನದಿಯನ್ನು ರಕ್ತದಲ್ಲಿ ಮುಳುಗಿಸಿದ್ದರು. ಇಂದು, ಅಯೋಧ್ಯೆ ತನ್ನ ವೈಭವವನ್ನು ಮರುಸ್ಥಾಪಿಸುತ್ತಿರುವಾಗ ಮತ್ತು ಇಡೀ ಜಗತ್ತನ್ನು ಆಕರ್ಷಿಸುತ್ತಿರುವಾಗ, ಕಾಂಗ್ರೆಸ್ ಅದನ್ನು ಹೇಗೆ ಒಳ್ಳೆಯದು ಎಂದು ಪರಿಗಣಿಸುತ್ತದೆ? ಕಾಂಗ್ರೆಸ್ ಸುಳ್ಳಿನ ಕಂತೆ. ನಿಜ ಹೇಳಬೇಕೆಂದರೆ 1733 ಕೋಟಿ ರೂಪಾಯಿ ಅಯೋಧ್ಯೆಯ ಜನರಿಗೆ ಪರಿಹಾರವಾಗಿ ನೀಡಲಾಗಿದೆ ಎಂದಿದ್ದಾರೆ.

ರಾಮಪಥ, ಭಕ್ತಿಪಥ, ಜನ್ಮಭೂಮಿ ಪಥ ಅಥವಾ ವಿಮಾನ ನಿಲ್ದಾಣವೇ ಆಗಿರಲಿ, ಯಾರ ಜಮೀನು, ಅಂಗಡಿಗಳು ಮತ್ತು ಮನೆಗಳು ಭಾಗಿಯಾಗಿವೆಯೋ ಅವರಿಗೆ ಪರಿಹಾರ ನೀಡಲಾಗಿದೆ. ಹಿಂಬದಿಯಲ್ಲಿ ಅಂಗಡಿ ಕಟ್ಟಲು ಜಾಗ ಇದ್ದವರಿಗೆ ಅಂಗಡಿಗಳನ್ನು ನಿರ್ಮಿಸಿಕೊಟ್ಟಿದೇವೆ. ನಿವೇಶನ ಇಲ್ಲದವರಿಗೆ ಮಳಿಗೆ ನೀಡುವ ಕೆಲಸವನ್ನು ಬಹುಹಂತದ ಕಾಂಪ್ಲೆಕ್ಸ್ ನಿರ್ಮಿಸಿ ಕೊಡಲಾಗುತ್ತದೆ ಎಂದರು. ಇದು ಯುಪಿ ಮತ್ತು ಅಯೋಧ್ಯೆಯ ಮಾನಹಾನಿ ಮಾಡುವ ಸಂಚು. ಇದು ಭಾರತ ಮತ್ತು ಅಯೋಧ್ಯೆಯ ಪ್ರತಿಷ್ಠೆಯನ್ನು ಹಾಳುಮಾಡುವ ಮನಸ್ಥಿತಿಯ ಭಾಗವಾಗಿದೆ.

ಹಿಂದೂಗಳ ಬಗ್ಗೆ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರವಾಗಿ ಖಂಡಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಖಂಡನೀಯ ಹೇಳಿಕೆಗೆ ಜಗತ್ತಿನಾದ್ಯಂತ ಹರಡಿರುವ ಕೋಟ್ಯಂತರ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಹುಲ್‌ ಹೇಳಿದ್ದೇನು?

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ ದಿನ ಅದಾನಿ ಅಂಬಾನಿಯವರನ್ನು ಆಮಂತ್ರಿಸಲಾಗಿತ್ತು. ಆದರೆ, ಅಲ್ಲಿನ ಸ್ಥಳೀಯ ಜನರನ್ನು ದೂರವಿಡಲಾಗಿತ್ತು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಅಲ್ಲಿನ ಮತದಾರರು ಬಿಜೆಪಿಗೆ ಸೂಕ್ತ ಪಾಠ ಕಲಿಸಿದ್ದಾರೆ” ಎಂದು ರಾಹುಲ್ ಗಾಂಧಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಅಯೋಧ್ಯೆಯಲ್ಲಿನ ಅಭಿವೃದ್ಧಿ ನೀತಿಗಳನ್ನು ಉಲ್ಲೇಖಿಸಿದ ಗಾಂಧಿ, ಸೂಕ್ತ ಪರಿಹಾರವಿಲ್ಲದೆ ಸ್ಥಳೀಯರಿಂದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸಣ್ಣ ಅಂಗಡಿಗಳು ಮತ್ತು ಮನೆಗಳನ್ನು ನೆಲಸಮಗೊಳಿಸಲಾಯಿತು, ನಿವಾಸಿಗಳನ್ನು ಬೀದಿಗಿಳಿಸಲಾಯಿತು ಎಂದು ಆರೋಪಿಸಿದರು.

ಇದನ್ನೂ ಓದಿ: Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Continue Reading

ದೇಶ

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

Good News For Farmers: ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಖಾರಿಫ್ ಬೆಳೆಗಳ ಬಿತ್ತನೆಗೆ ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ.

VISTARANEWS.COM


on

Good News For Farmers
Koo

ನವದೆಹಲಿ: ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ.

ಖಾರಿಫ್ ಬೆಳೆಗಳ ಬಿತ್ತನೆಗೆ (ವಿಶೇಷವಾಗಿ ಭತ್ತದಂತಹ ಹೆಚ್ಚಿನ ನೀರಿನ ಆವಶ್ಯಕತೆಯಿರುವ ಬೆಳೆ) ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಮಳೆಯ ಕೊರತೆಯು ಜೂನ್‌ನಲ್ಲಿ ಸುಮಾರು ಶೇ. 32.6ಕ್ಕೆ ತಲುಪಿದ್ದರಿಂದ ವಾಯುವ್ಯ ಭಾರತದಲ್ಲಿ ಕಳೆದ ತಿಂಗಳು ಶುಷ್ಕ ವಾತಾವರಣ ಕಂಡು ಬಂದಿತ್ತು. ಹೀಗಾಗಿ ಈ ಪ್ರದೇಶವು ತೀವ್ರವಾದ ಶಾಖದ ಅಲೆಗಳಿಂದ ಸುಟ್ಟು ಹೋಗಿತ್ತು. ಅಲ್ಲದೆ 123 ವರ್ಷಗಳಲ್ಲಿ ಅತ್ಯಂತ ಬೆಚ್ಚಗಿನ ಜೂನ್ ಎನಿಸಿಕೊಂಡಿತ್ತು. ಸರಾಸರಿ ಮಾಸಿಕ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 1.65 ಡಿಗ್ರಿ ಹೆಚ್ಚು ದಾಖಲಾಗಿತ್ತು.

ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಜತೆಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಬಹುದಾದಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹರಿಯಾಣ, ಉತ್ತರಾಖಂಡಕ್ಕೆ ಎಚ್ಚರಿಕೆ

ಐಎಂಡಿ ಡಿಜಿ ಡಾ.ಎಂ.ಮೊಹಾಪಾತ್ರ ಅವರ ಪ್ರಕಾರ ಜುಲೈನಲ್ಲಿ ಸುರಿಯುವ ಧಾರಾಕಾರ ಮಳೆಯು ಪಶ್ಚಿಮ ಹಿಮಾಲಯದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಬೆಟ್ಟದ ತಪ್ಪಲಿನ ರಾಜ್ಯಗಳಲ್ಲಿ ನದಿ ಪ್ರವಾಹಕ್ಕೆ ಕಾರಣವಾಗಬಹುದು.

“ಮುನ್ಸೂಚನೆಯ ಪ್ರಕಾರ ಭಾರೀ ಮಳೆಯಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಮಳೆಯಿಂದ ಭೂಕುಸಿತದಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ. ಮಧ್ಯ ಭಾರತದ ಕೆಲವು ಭಾಗಗಳಲ್ಲಿ, ಗೋದಾವರಿ, ಮಹಾನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರು ಎಚ್ಚರಿಕೆ ವಹಿಸಬೇಕುʼʼ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ಇದರ ಹೊರತಾಗಿ ಉತ್ತರ ಪ್ರದೇಶದ ಕೆಲವು ಭಾಗಗಳಾದ ಗೋರಖ್ಪುರ, ಬಿಹಾರದ ಪಶ್ಚಿಮ ಜಿಲ್ಲೆಗಳು, ಜಾರ್ಖಂಡ್, ಮುಂತಾದ ಕೆಲವು ಭಾಗಗಳು ಮತ್ತು ಲಡಾಖ್‌ನಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಊಹಿಸಿದೆ.

ಜೂನ್‌ನಲ್ಲಿ ಮಳೆ ಕೊರತೆ

ಭಾರತವು ಜೂನ್‌ನಲ್ಲಿ ಸುಮಾರು ಶೇ. 10.9ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ. ವಾಯುವ್ಯ ಭಾರತದಲ್ಲಿ ಇದರ ಪ್ರಮಾಣ ಹೆಚ್ಚು (ಶೇ. 32.6). ಮಧ್ಯ ಭಾರತ, ಪೂರ್ವ ಮತ್ತು ಈಶಾನ್ಯ ಭಾರತ (ಸುಮಾರು ಶೇ. 13)ದಲ್ಲಿಯೂ ಮಳೆ ಕೊರತೆ ಕಂಡು ಬಂದಿದೆ. ಸದ್ಯ ನೈಋತ್ಯ ಮಾನ್ಸೂನ್ ವೇಗ ಪಡೆದುಕೊಂಡಿದ್ದು, ಮತ್ತು ಮುಂದಿನ ಎರಡು-ಮೂರು ದಿನಗಳಲ್ಲಿ ಭಾರತವನ್ನು ಆವರಿಸಲಿದೆ ಎಂದು ಐಎಂಡಿ ತಿಳಿಸಿದೆ.

ಮಳೆಯ ಕೊರತೆಯು ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳಕ್ಕೆ ಮತ್ತು ತೀವ್ರವಾದ ಶಾಖದ ಅಲೆಗಳಿಗೆ ಕಾರಣವಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ ಈ ಬೇಸಿಗೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಸುಮಾರು 20ರಿಂದ 38 ದಿನಗಳವರೆಗೆ ಉಷ್ಣಗಾಳಿ ಬೀಸಿದೆ.

ಇದನ್ನೂ ಓದಿ: Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Continue Reading

ದೇಶ

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

Pawan Kalyan: ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

VISTARANEWS.COM


on

Pawan Kalyan
Koo

ಪೀಠಾಪುರ್: ಆಂಧ್ರಪ್ರದೇಶ(Andra Pradesh) ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭೂತಪೂರ್ವ ಗೆಲುವಿನ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಪವನ್‌ ಕಲ್ಯಾಣ್‌(Pawan Kalyan) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಮ್ಮ ವೇತನ ಪಡೆಯಲು ನಿರಾಕರಿಸಿದ್ದಾರೆ.

ನಿನ್ನೆ ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇಲಾಖೆಯಲ್ಲಿ ಹಣವಿಲ್ಲ,. ಇದಕ್ಕಾಗಿಯೇ ಕಳೆದ ತಿಂಗಳ ವೇತನಕ್ಕೆ ಸಂಬಂಧಿಸಿದ ಕಡತಕ್ಕೆ ಕೆಲ ದಿನ ಸಹಿ ಹಾಕುವುದನ್ನು ತಡೆದರು. ಸಂಬಳದ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಹಿಂದಿನ ಸರ್ಕಾರ ಪಂಚಾಯಿತಿ ಹಣ ಎಲ್ಲಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಟೀಕಿಸಿದರು. ಇಲಾಖೆಯ ಹಣದ ಕೊರತೆಯ ನಡುವೆಯೂ ಅಂದಿನ ಮುಖ್ಯಮಂತ್ರಿ ರುಷಿಕೊಂಡನಲ್ಲಿ ಅರಮನೆ ನಿರ್ಮಿಸಿದ್ದರು ಎಂದು ಆರೋಪಿಸಿದರು. ಪಂಚಾಯತ್ ರಾಜ್ ಇಲಾಖೆಯಲ್ಲಿ ತಮ್ಮ ಕಡೆಯಿಂದ ಯಾವುದೇ ಭ್ರಷ್ಟಾಚಾರ ನಡೆಯುವುದಿಲ್ಲ ಎಂದು ಪವನ್ ಕಲ್ಯಾಣ್ ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದೇ ವೇಳೆ ಜನರಿಗೆ ಕುಡಿಯುವ ನೀರು ಸಮರ್ಪಕವಾಗಿ ತಲುಪಿಸುವುದೇ ನಮ್ಮ ಮೊದಲ ಆದ್ಯತೆ ಎಂದು ಪವನ್ ಕಲ್ಯಾಣ್ ಹೇಳಿದರು. ಗೋದಾವರಿ ನದಿಯ ಸಮೀಪವಿದ್ದರೂ, ಗೋದಾವರಿ ಜಿಲ್ಲೆಗಳ ಅನೇಕ ಪ್ರದೇಶಗಳು ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿವೆ ಎಂದು ಪವನ್ ಕಲ್ಯಾಣ್ ಪ್ರಸ್ತಾಪಿಸಿದರು. ಹಿಂದಿನ ಸರ್ಕಾರ ಜಲ ಜೀವನ್ ಮಿಷನ್ ನಿಧಿಯನ್ನು ಬಳಸಿಕೊಂಡಿಲ್ಲ ಎಂದು ಟೀಕಿಸಿದರು. ಮನವಿ ಮೇರೆಗೆ ಹಣ ಮಂಜೂರು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದ್ದರೂ ಹೊಂದಾಣಿಕೆ ಅನುದಾನ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು. ಮುಂದಿನ ಐದು ವರ್ಷಗಳಲ್ಲಿ ಪವಾಡಗಳ ಭರವಸೆ ನೀಡುವುದಿಲ್ಲ, ಆದರೆ ಸರ್ಕಾರವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಭರವಸೆ ನೀಡಿದರು. ಪವನ್ ಕಲ್ಯಾಣ್ ಅವರು ತಮ್ಮ ದೇಶ ಮತ್ತು ಭೂಮಿಗಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದರು, ಅವರು ರಾಜ್ಯದ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತರಾಗಿದ್ದಾರೆ ಎಂದು ಒತ್ತಿ ಹೇಳಿದರು.

ಇದನ್ನೂ ಓದಿ: MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Continue Reading
Advertisement
Virat Kohli
ಕ್ರೀಡೆ8 mins ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Stock Market
ವಾಣಿಜ್ಯ17 mins ago

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

self harming mysore
ಕ್ರೈಂ31 mins ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು43 mins ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ45 mins ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ53 mins ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Good News For Farmers
ದೇಶ58 mins ago

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

train service
ಬೆಂಗಳೂರು1 hour ago

Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

Pawan Kalyan
ದೇಶ1 hour ago

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

actor darshan crazy fans
ವೈರಲ್ ನ್ಯೂಸ್2 hours ago

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌