Siddeshwar swamiji | ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಶ್ರೀ ಚಿತಾಭಸ್ಮ ವಿಲೀನ - Vistara News

ಪ್ರಮುಖ ಸುದ್ದಿ

Siddeshwar swamiji | ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಶ್ರೀ ಚಿತಾಭಸ್ಮ ವಿಲೀನ

ಸಿದ್ದೇಶ್ವರ ಶ್ರೀಗಳ ಇಚ್ಛೆಯಂತೆ ಅವರ ಚಿತಾಭಸ್ಮವನ್ನು ಭಾನುವಾರ ಬೆಳಗ್ಗೆ ಕೂಡಲಸಂಗಮದ ತ್ರಿವೇಣಿಸಂಗಮದಲ್ಲಿ ನದಿಗೆ ವಿಸರ್ಜಿಸಲಾಯಿತು.

VISTARANEWS.COM


on

siddeswara swamiji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೂಡಲಸಂಗಮ: ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಭಾನುವಾರ ಬೆಳಗ್ಗೆ ವಿಸರ್ಜಿಸಲಾಯಿತು.

ಸಿದ್ದೇಶ್ವರರ ಚಿತಾಭಸ್ಮವನ್ನು ಸ್ವಾಮೀಜಿಗಳು ನದಿಗೆ ವಿಸರ್ಜಿಸಿದರು. ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸೇರಿದಂತೆ ಹಲವಾರು ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.

ಶ್ರೀಗಳಿಗೆ ಬಸವಣ್ಣನ ಐಕ್ಯಸ್ಥಳ,ಕೂಡಲಸಂಗಮದ ಬಗ್ಗೆ ಅಪಾರ ಒಲವಿತ್ತು. ಇಲ್ಲಿಯೆ ಚಿತಾಭಸ್ಮ ಬಿಡಬೇಕು ಎಂದು ಅವರ ಇಚ್ಚೆಯಾಗಿತ್ತು. ಎಲ್ಲವೂ ಅವರ ಇಚ್ಛೆಯಂತೆ ನಡೆದಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

K Vasantha Bangera: ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

K Vasantha Bangera
Koo

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಅವರು (K Vasantha Bangera) ಬುಧವಾರ ಸಂಜೆ ನಿಧನರಾದರು. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರು, ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು.

ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಅವರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು 1946ರ ಜನವರಿ 15ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮುಗಿಸಿದ ಅವರು ಮುಲ್ಕಿ, ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. ಇನ್ನು 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ | EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Continue Reading

ದೇಶ

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Jan Aushadhi: ರೈಲು ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕರ ಸ್ನೇಹಿಯಾಗಿ ರೂಪಿಸಲು ರೈಲ್ವೆ ಇಲಾಖೆಯು ಚಿಂತನೆ ನಡೆಸಿದೆ. ಅದರಲ್ಲೂ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ನಿರ್ಮಿಸಲಾಗಿದ್ದು, ಕಡಿಮೆ ಬೆಲೆಗೆ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ಈಗ ರೈಲು ನಿಲ್ದಾಣಗಳಲ್ಲೂ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ರೈಲ್ವೆ ಇಲಾಖೆಯು ಚಿಂತನೆ ನಡೆಸಿದೆ.

VISTARANEWS.COM


on

Jan Aushadhi
Koo

ನವದೆಹಲಿ: ರೈಲುಗಳಲ್ಲಿ ಪ್ರಯಾಣ ಮಾಡುವಾಗ ಊಟ, ತಿಂಡಿ, ಪಾನೀಯಗಳ ಪೂರೈಕೆಯಾಗುತ್ತದೆ. ಆದರೆ, ತುರ್ತು ಸಂದರ್ಭಗಳಲ್ಲಿ ರೈಲು ನಿಲ್ದಾಣಗಳಲ್ಲಿ ಮೆಡಿಕಲ್‌ ಶಾಪ್‌ಗಳು ಸಿಗದೆ, ಔಷಧ ಸಿಗದೆ ರೈಲು ಪ್ರಯಾಣಿಕರು ತೊಂದರೆ ಅನುಭವಿಸುತ್ತಾರೆ. ದಿಢೀರನೆ ಜ್ವರ, ತಲೆನೋವು ಕಾಣಿಸಿಕೊಂಡರೆ ಔಷಧಗಳಿಗಾಗಿ ಪರದಾಡಬೇಕಾಗುತ್ತದೆ. ಇದನ್ನು ಮನಗಂಡಿರುವ ಕೇಂದ್ರ ಸರ್ಕಾರವು, ದೇಶಾದ್ಯಂತ ರೈಲು ನಿಲ್ದಾಣಗಳಲ್ಲಿ (Railway Stations) 100 ಜನೌಷಧಿ ಕೇಂದ್ರಗಳನ್ನು (Jan Aushadhi Kendra) ಸ್ಥಾಪಿಸಲು ತೀರ್ಮಾನಿಸಿದೆ. ಇದರಿಂದ ರೈಲ್ವೆ ಪ್ರಯಾಣಿಕರಿಗೆ ಭಾರಿ ಅನುಕೂಲವಾಗಲಿದೆ.

ಹೌದು, ರೈಲು ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕರ ಸ್ನೇಹಿಯಾಗಿ ರೂಪಿಸಲು ರೈಲ್ವೆ ಇಲಾಖೆಯು ಚಿಂತನೆ ನಡೆಸಿದೆ. ಅದರಲ್ಲೂ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ನಿರ್ಮಿಸಲಾಗಿದ್ದು, ಕಡಿಮೆ ಬೆಲೆಗೆ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ರೈಲು ನಿಲ್ದಾಣಗಳಲ್ಲೂ ಜನೌಷಧಿ ಕೇಂದ್ರಗಳನ್ನು ನಿರ್ಮಿಸುವುದರಿಂದ ಪ್ರಯಾಣಿಕರಿಗೆ ಸುಲಭವಾಗಿ ರೈಲು ನಿಲ್ದಾಣಗಳಲ್ಲಿ ಔಷಧ ಸಿಗುವ ಜತೆಗೆ ಹಣವೂ ಉಳಿತಾಯವಾಗಲಿದೆ.

50 ರೈಲು ನಿಲ್ದಾಣಗಳ ನಿಗದಿ

“ಆರಂಭಿಕ ಹಂತದಲ್ಲಿ ದೇಶಾದ್ಯಂತ 100ಕ್ಕೂ ಅಧಿಕ ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿರುವ ರೈಲ್ವೆ ಇಲಾಖೆಯು ಈಗಾಗಲೇ 50 ರೈಲು ನಿಲ್ದಾಣಗಳನ್ನು ಗುರುತಿಸಿದೆ. ರೈಲು ನಿಲ್ದಾಣದಲ್ಲಿ ಒಂದು ಜನೌಷಧಿ ಕೇಂದ್ರವನ್ನು ಸ್ಥಾಪಿಸಲು ಸುಮಾರು 12.53 ಲಕ್ಷ ರೂ. ಬೇಕಾಗುತ್ತದೆ. ಇನ್ನೂ 61 ರೈಲು ನಿಲ್ದಾಣಗಳನ್ನು ನಿಗದಿಪಡಿಸಬೇಕಿದೆ. ಮೊದಲು ರೈಲು ನಿಲ್ದಾಣಗಳನ್ನು ಗುರುತಿಸಿ, ಬಳಿಕ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವವರಿಗೆ ಪರವಾನಗಿ ನೀಡಲಾಗುತ್ತದೆ” ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

“ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವುದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಹಾಗೂ ರೈಲು ನಿಲ್ದಾಣಕ್ಕೆ ಭೇಟಿ ನೀಡುವವರಿಗೆ ಕಡಿಮೆ ಬೆಲೆಗೆ ಔಷಧಗಳು ಸಿಗುತ್ತವೆ. ಹಾಗೆಯೇ, ಜನರಿಗೆ ಗುಣಮಟ್ಟದ ಔಷಧಗಳು ದೊರೆಯುವ ಜತೆಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯಮಿಗಳು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತದೆ” ಎಂದು ಅಧಿಕಾರಿಯು ತಿಳಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ದೇಶದಲ್ಲಿ 10 ಸಾವಿರಕ್ಕೂ ಅಧಿಕ ಜನೌಷಧಿ ಕೇಂದ್ರಗಳಿದ್ದು, ಸಾವಿರಾರು ಔಷಧಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Continue Reading

ಚಿಕ್ಕಮಗಳೂರು

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy King of Blackmail and DK Shivakumar is back
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರು “ಕಿಂಗ್ ಆಫ್ ಬ್ಲ್ಯಾಕ್‌ಮೇಲ್” ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ರೆಸ್ಟ್‌ ಮಾಡಲು ಬಂದಿದ್ದೇನೆ

ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ದೇಶ

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Narendra Modi: ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ ಎಂದು ರಾಹುಲ್‌ ಗಾಂಧಿ ವಿರುದ್ಧ ನರೇಂದ್ರ ಮೋದಿ ಅವರು ತೆಲಂಗಾಣದ ರ‍್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ಹೈದರಾಬಾದ್:‌ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ಹಲವು ನಾಯಕರ ಭಾಷಣಗಳು, ಆರೋಪಗಳು, ವಾಗ್ದಾಳಿಗಳು ತೀಕ್ಷ್ಣ ಸ್ವರೂಪ ಪಡೆದಿವೆ. ಇನ್ನು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೂ ಮುಕೇಶ್‌ ಅಂಬಾನಿ (Mukesh Ambani), ಗೌತಮ್‌ ಅದಾನಿ (Gautam Adani) ಹೆಸರು ಪ್ರಸ್ತಾಪಿಸಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ, ಮೋದಿ ಈಗ ಅಂಬಾನಿ, ಅದಾನಿ ಹೆಸರು ಹೇಳಿಕೊಂಡೇ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. “ಚುನಾವಣೆಗಾಗಿ ಕಾಂಗ್ರೆಸ್‌ಗೆ ಅಂಬಾನಿ ಹಾಗೂ ಅದಾನಿಯಿಂದ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ” ಎಂದು ತಿರುಗುಬಾಣ ಬಿಟ್ಟಿದ್ದಾರೆ.

ತೆಲಂಗಾಣದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಹುಲ್‌ ಗಾಂಧಿ ಅವರಿಗೆ ತಿರುಗೇಟು ನೀಡಿದರು. “ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದೇ ಕಾರಣಕ್ಕಾಗಿ ರಾಹುಲ್‌ ಗಾಂಧಿ ಅವರು ಅಂಬಾನಿ, ಅದಾನಿ ಬಗ್ಗೆ ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದರು.

“ಕಳೆದ ಐದು ವರ್ಷಗಳಿಂದ ರಾಹುಲ್‌ ಗಾಂಧಿ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರು. ರಾಫೆಲ್‌ ವಿಚಾರವಾಗಿ ಮಾಡಿದ ಆರೋಪವು ನೆಲಕಚ್ಚಿತು. ಅದಾದ ಬಳಿಕ ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಪರೋಕ್ಷ ಆರೋಪ ಶುರುವಿಟ್ಟುಕೊಂಡರು. ಅದಾದ ಬಳಿಕ ಅಂಬಾನಿ-ಅದಾನಿ ಎಂದು ನೇರವಾಗಿ ಆರೋಪ ಮಾಡಿದರು. ಆದರೆ, ಚುನಾವಣೆ ಘೋಷಣೆಯಾಗುತ್ತಲೇ ರಾಹುಲ್‌ ಗಾಂಧಿ ಅವರು ಅಂಬಾನಿ ಹಾಗೂ ಅದಾನಿ ಹೆಸರೇ ಎತ್ತುತ್ತಿಲ್ಲ. ರಾಹುಲ್‌ ಗಾಂಧಿ ಏಕೆ ಈಗ ರಾತ್ರೋರಾತ್ರಿ ಬದಲಾದರು? ಏಕೆ ಅವರು ಅಂಬಾನಿ-ಅದಾನಿ ಹೆಸರು ಹೇಳುತ್ತಿಲ್ಲ” ಎಂದು ಪ್ರಶ್ನಿಸಿದರು.

ಅಂಬಾನಿ-ಅದಾನಿ ಹೆಸರಿಟ್ಟುಕೊಂಡು ಟೀಕೆ ಮಾಡುತ್ತಿದ್ದ ರಾಹುಲ್‌ ಗಾಂಧಿ ಅವರಿಗೆ ಈಗ ಮೋದಿ ಅವರು ಉದ್ಯಮಿಗಳ ಹೆಸರು ಪ್ರಸ್ತಾಪಿಸಿಯೇ ಟೀಕಿಸಿದ್ದಾರೆ. “ನರೇಂದ್ರ ಮೋದಿ ಅವರು ಕೆಲವು ಉದ್ಯಮಿಗಳಿಗೆ ಮಾತ್ರ ನೆರವು ನೀಡುತ್ತಾರೆ. ಅವರಿಗಾಗಿಯೇ ಅವರು ಆಡಳಿತ ಮಾಡುತ್ತಾರೆ. ಕೇಂದ್ರ ಸರ್ಕಾರದ ಹಣವು ಅಂಬಾನಿ-ಅದಾನಿಗೆ ಮಾತ್ರ ಹೋಗುತ್ತದೆ. ಬಡವರಿಗೆ ಮೋದಿ ಸರ್ಕಾರದಿಂದ ಯಾವುದೇ ಉಪಯೋಗವಿಲ್ಲ” ಎಂದು ರಾಹುಲ್‌ ಗಾಂಧಿ ಆರೋಪಿಸುತ್ತಿದ್ದರು.

ಇದನ್ನೂ ಓದಿ: PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Continue Reading
Advertisement
Neeraj Chopra
ಕ್ರೀಡೆ23 seconds ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ10 mins ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

K Vasantha Bangera
ಪ್ರಮುಖ ಸುದ್ದಿ20 mins ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ1 hour ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್1 hour ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ1 hour ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Prajwal Revanna Case HD Kumaraswamy King of Blackmail and DK Shivakumar is back
ಚಿಕ್ಕಮಗಳೂರು1 hour ago

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Hoskote News
ಕರ್ನಾಟಕ1 hour ago

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Heavy Rain
ತುಮಕೂರು1 hour ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Fried Oil
ಆರೋಗ್ಯ2 hours ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ22 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌