Sankranti 2023 | ʻಸಂಕ್ರಾಂತಿ ತಕಥೈʻ ಹಾಡಿನಲ್ಲಿ ಸ್ಯಾಂಡಲ್‌ವುಡ್‌ , ಟಾಲಿವುಡ್‌ ಸಮಾಗಮ! - Vistara News

ಟಾಲಿವುಡ್

Sankranti 2023 | ʻಸಂಕ್ರಾಂತಿ ತಕಥೈʻ ಹಾಡಿನಲ್ಲಿ ಸ್ಯಾಂಡಲ್‌ವುಡ್‌ , ಟಾಲಿವುಡ್‌ ಸಮಾಗಮ!

ಸಂಕ್ರಾಂತಿ ಹಬ್ಬಕ್ಕೆಂದೇ ವಿಶೇಷವಾಗಿ ರಚಿಸಲಾದ ‘ಸಂಕ್ರಾಂತಿ ತಕಥೈ’ ವಿಡಿಯೊ ಸಾಂಗ್ (Sankranti 2023) ಬಿಡುಗಡೆಯಾಗಿದೆ.

VISTARANEWS.COM


on

Sankranti 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಒಂದಿಷ್ಟು ಸಂಗೀತ ಪ್ರಿಯ ಮನಸ್ಸುಗಳು ಹಾಗೂ ಸ್ಯಾಂಡಲ್‌ವುಡ್‌ , ಟಾಲಿವುಡ್‌ ತಾರೆಯರು ಒಟ್ಟಿಗೆ ಸೇರಿ ಸಂಕ್ರಾಂತಿಗೆಂದು ಹೊಸ ಸಾಂಗ್ ರಚಿಸಿ, ಬಿಡುಗಡೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆಂದೇ ವಿಶೇಷವಾಗಿ ರಚಿಸಲಾದ ‘ಸಂಕ್ರಾಂತಿ ತಕಥೈ’ ವಿಡಿಯೊ ಸಾಂಗ್ (Sankranti 2023) ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಹರ್ಷಿಕಾ ಪೂಣಚ್ಚ, ರಾಧಿಕಾ ನಾರಾಯಣ್, ಪೃಥ್ವಿ ಅಂಬಾರ್ ಹಾಗೂ ತೆಲುಗಿನ ಮಾನಸ್ ನಗುಲಪಲ್ಲಿ, ಕೀರ್ತಿ ಭಟ್, ನಿಖಿಲ್ ಮಲಿಯಕ್ಕಳ್ ಹೆಜ್ಜೆ ಹಾಕಿದ್ದಾರೆ.

ಖ್ಯಾತ ನಟ ಡಾ. ರಮೇಶ್ ಅರವಿಂದ್ ಸ್ಪೆಷಲ್ ಅಪಿಯರೆನ್ಸ್ ಇರುವ ಈ ಹಾಡು ಬಿಡುಗಡೆಯಾಗಿ ಸಂಕ್ರಾಂತಿ ಹಬ್ಬದ ರಂಗು ಹೆಚ್ಚಿಸಿದೆ. ರೆಡ್ ಸೀಡರ್ ಎಂಟಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಹಾಡು ಬಿಡುಗಡೆಯಾಗಿ ನೋಡುಗರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ | Makar Sankranti 2023 | ಮಕರ ಸಂಕ್ರಾಂತಿ ಈ ರಾಶಿಯ ಜನರಿಗೆ ತರಲಿದೆ ಶುಭ; ಆರ್ಥಿಕ ಲಾಭ

ತೆಲುಗಿನ ಖ್ಯಾತ ಹಾಗೂ ಹಿರಿಯ ನೃತ್ಯ ನಿರ್ದೇಶಕಿ ಆನಿ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ‘ಸಂಕ್ರಾಂತಿ ತಕಥೈ’ ಹಾಡು ಮೂಡಿ ಬಂದಿದೆ. ಗಾಯಕಿ ಹಾಗೂ ‘ಎದೆ ತುಂಬಿ ಹಾಡುವೆನು’ ಖ್ಯಾತಿಯ ಲಕ್ಷ್ಮೀ ಹೊಯ್ಸಳ್ ಹಾಗೂ ಶ್ರೀನಿವಾಸ್ ನಾಯಕ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಮಲಯಾಳಂ ಸಂಗೀತ ನಿರ್ದೇಶಕ ಅನೂಪ್ ಮೆನನ್ ಸಂಗೀತ ನಿರ್ದೇಶನ ಹಾಡಿಗಿದ್ದು, ಅನೂಪ್ ಮೆನನ್ ಹಾಗೂ ಲಕ್ಷ್ಮೀ ಹೊಯ್ಸಳ್ ಹಾಡಿಗೆ ದನಿಯಾಗಿದ್ದಾರೆ.

ಶರದ್ ಗುಮಾಸ್ತೆ ಅವರ ರೆಡ್ ಸೀಡರ್ ಎಂಟಟೈನ್ಮೆಂಟ್ ಬ್ಯಾನರ್ ಅಡಿ ‘ಸಂಕ್ರಾಂತಿ ತಕಥೈ’ ಹಾಡನ್ನು ನಿರ್ಮಾಣ ಮಾಡಿದ್ದು, ಜಯ್ ಸಿರಿಕೊಂಡ ಛಾಯಾಗ್ರಹಣ, ಪ್ರಭು ಸಂಕಲನ ಹಾಡಿಗಿದೆ.

ಇದನ್ನೂ ಓದಿ | Kantara Movie | ಕಿರುತೆರೆಯಲ್ಲಿ ಕಾಂತಾರ: ಡೇಟ್‌ ರಿವೀಲ್‌, ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಸಿನಿಮಾ ಅಬ್ಬರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಒಟಿಟಿ

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava: ‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ.

VISTARANEWS.COM


on

Bujji and Bhairava Prabhas animated show raises
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಟಾಲಿವುಡ್

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

Nivetha Pethuraj: ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

VISTARANEWS.COM


on

Nivetha Pethuraj heated argument video with cops
Koo

ಬೆಂಗಳೂರು: ಬಹುಭಾಷಾ ನಟಿ ನಿವೇತಾ ಪೇತುರಾಜ್ (Nivetha Pethuraj) ಅವರು ಹೈದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಾರಿನ ಟ್ರಂಕ್‌ ಓಪನ್‌ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದು ಮಾತ್ರವಲ್ಲದೆ, ಈ ದೃಶ್ಯವನ್ನು ಚಿತ್ರೀಕರಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿವೇತಾ ಪೇತುರಾಜ್ ಪೊಲೀಸರೊಂದಿನ ವಾಗ್ವಾದದ ವಿಡಿಯೊ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರಿನಲ್ಲಿ ಹೋಗುತ್ತಿದ್ದ ನಿವೇತಾ ಅವರನ್ನು ತಡೆದ ಪೊಲೀಸರು ಕಾರಿನ ಡಿಕ್ಕಿ ಓಪನ್‌ ಮಾಡುವಂತೆ ಹೇಳಿದ್ದಾರೆ. ತೆರೆಯಲು ನಿರಾಕರಿಸಿದ ನಟಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಡಾಕ್ಯುಮೆಂಟ್‌ಗಳೆಲ್ಲಾ ಸರಿಯಾಗಿವೆ, ದಯವಿಟ್ಟು ಅರ್ಥಮಾಡಿಕೊಳ್ಳಿ ನಾನು ಡಿಕ್ಕಿ ತೆರೆಯಲ್ಲ. ಎಂದು ಹೇಳುತ್ತಾರೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್‌ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಇದು ಪ್ರಚಾರದ ಗಿಮಿಕ್‌ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವಿಡಿಯೊ ಫೇಕ್‌ ಇರಬಬಹುದು ಶೂಟಿಂಗ್‌ ದೃಶ್ಯ ಇರಬಹುದುʼಎಂದು ಕಮೆಂಟ್‌ ಮಾಡಿದ್ದಾರೆ. ಪೊಲೀಸರು ಕಾಲಿಗೆ ಕ್ರಾಕ್ಸ್‌ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ, ನಟಿ ತಮಿಳಿನ ʻಸೊಪ್ಪಣ್ಣ ಸುಂದರಿʼಯ ತೆಲುಗು ರಿಮೇಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೊ ಈ ಸಿನಿಮಾದೇ ಆಗಿರಬಹದು ಎಂದು ಹಲವರು ಊಹಿಸಿದ್ದಾರೆ.

Continue Reading

ಟಾಲಿವುಡ್

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

VISTARANEWS.COM


on

Maharaja trailer released Vijay Sethupathi has a secret
Koo

ಬೆಂಗಳೂರು: ನಟ ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʻಮಹಾರಾಜʼ ಟ್ರೈಲರ್‌ (Maharaja Trailer) ಬಿಡುಗಡೆಯಾಗಿದೆ. ನಿಥಿಲನ್ ಸಾಮಿನಾಥನ್ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ಮತ್ತು ಅನುರಾಗ್ ಕಶ್ಯಪ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟ್ರೈಲರ್‌ನಲ್ಲಿ ನೋಡಿದಾಗ ವಿಜಯ್ ಕ್ಷೌರಿಕ ಪಾತ್ರ ನಿಭಾಯಿಸಿದ್ದಾರೆ. ನಾಪತ್ತೆಯಾದ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ಟ್ರೈಲರ್‌ನಲ್ಲಿ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಚಿನ್ನ, ಹಣ,ಸಹೋದರಿ, ಹೆಂಡತಿ , ಮಗು ಯಾವುದು ಅಲ್ಲ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

ಇದನ್ನೂ ಓದಿ: Air India Maharaja : ಏರ್‌ ಇಂಡಿಯಾ ರಿಬ್ರಾಂಡಿಂಗ್‌, ಮಹಾರಾಜ ನೇಪಥ್ಯಕ್ಕೆ?

ಮಹಾರಾಜ ಚಿತ್ರದಲ್ಲಿ ಮಮತಾ ಮೋಹನ್‌ದಾಸ್, ನಟರಾಜ್ , ಭಾರತಿರಾಜ, ಅಭಿರಾಮಿ, ಸಿಂಗಂಪುಲಿ ಮತ್ತು ಕಲ್ಕಿ ಕೂಡ ನಟಿಸಿದ್ದಾರೆ. ಪ್ಯಾಶನ್ ಸ್ಟುಡಿಯೋಸ್ ಮತ್ತು ದಿ ರೂಟ್ ಅಡಿಯಲ್ಲಿ ಸುಧನ್ ಸುಂದರಂ ಮತ್ತು ಜಗದೀಶ್ ಪಳನಿಸಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಹಾರಾಜ ಚಿತ್ರದ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

ಈ ಹಿಂದೆ ನಟ ಈ ಸಿನಿಮಾ ಕುರಿತು ಮಾತನಾಡಿ ʻʻʻ50ನೇ ಸಿನಿಮಾವನ್ನು ನಿರೀಕ್ಷಿಸಿರಲಿಲ್ಲ. ಇದು ಮೈಲಿಗಲ್ಲಿನಂತಿದೆ. ನಾವು ಎಷ್ಟು ದೂರ ಬಂದಿದ್ದೇವೆ ಎಂಬುದದಕ್ಕೆ ಒಂದು ಭರವಸೆ ಇದು. ಒಳ್ಳೆಯ ಅನುಭವ ನೀಡಿದ ಎಲ್ಲಾ ನಿರ್ದೇಶಕರು ಮತ್ತು ಕಲಾವಿದರಿಗೆ ಧನ್ಯವಾದಗಳು” ಎಂದಿದ್ದರು.

“ನಾನ್ ಮಹಾನ್ ಅಲ್ಲಾ ಚಿತ್ರದ ಡಬ್ಬಿಂಗ್ ಮುಗಿದ ನಂತರ, ಅರುಲ್ದಾಸ್ ಅಣ್ಣನ್ ಮತ್ತು ನಾನು ಪರಸ್ಪರರ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡೆವು. ಇದ್ದಕ್ಕಿದ್ದಂತೆ ಒಂದು ದಿನ ಎರಡು ಮಿಸ್ಡ್ ಕಾಲ್‌ಗಳಿದ್ದವು. ನಾವು ಮತ್ತೆ ಕರೆ ಮಾಡಿದಾಗ, ನಮ್ಮ ಸ್ನೇಹಿತ ಸೀನು ರಾಮಸಾಮಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ, ಯಾವುದೇ ಪಾತ್ರ ಕೊಟ್ಟರೂ ಸಿನಿಮಾ ಮಾಡು ಎಂದು ಹೇಳಿದ್ದರು. ಆಮೇಲೆ ಹೋಗಿ ಸೀನು ರಾಮಸಾಮಿ ಸರ್ ಅವರನ್ನು ನೋಡಿದೆ. ಆ ನಂತರ ನಡೆದಿದ್ದೆಲ್ಲ ಇತಿಹಾಸ, ಈಗ ಈ ಹಂತ ತಲುಪಿದ್ದೇನೆ. ತುಂಬಾ ಧನ್ಯವಾದಗಳು ಅರುಲ್ದಾಸ್. ಧನ್ಯವಾದಗಳು ಸೀನು ಸರ್. ಈ ಕ್ಷಣಕ್ಕೆ ಧನ್ಯವಾದಗಳುʼʼ ಎಂದು ಹೇಳಿಕೊಂಡಿದ್ದರು.

Continue Reading

South Cinema

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

Nandamuri Balakrishna: ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ಆದರೀಗ ನಟಿ ಅಂಜಲಿ ಈ ಪ್ರಕರಣ ಬಗ್ಗೆ ಮೌನ ಮುರಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬಾಲಯ್ಯ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ನಡೆದ ಘಟನೆ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದು ಈ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದಾರೆ ನಟಿ.

VISTARANEWS.COM


on

Nandamuri Balakrishna pushed incident Anjali breaks silence
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ಆದರೀಗ ನಟಿ ಅಂಜಲಿ ಈ ಪ್ರಕರಣ ಬಗ್ಗೆ ಮೌನ ಮುರಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬಾಲಯ್ಯ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ನಡೆದ ಘಟನೆ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದು ಈ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದಾರೆ ನಟಿ.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದಾರೆ, “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Nandamuri Balakrishna: ಕುಡಿದು ಬಂದು ವೇದಿಕೆ ಮೇಲೆ ನಟಿ ಅಂಜಲಿಯನ್ನು ತಳ್ಳಿದ್ರಾ ಬಾಲಯ್ಯ?

ಆಗಿದ್ದೇನು?

. ‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಬಾಲಕೃಷ್ಣ ‘ಅಖಂಡ’ ಮತ್ತು ‘ವೀರಸಿಂಹ ರೆಡ್ಡಿ’ಯಂತಹ ಹಿಟ್‌ ಸಿನಿಮಾಗಳಿಂದ ಸುದ್ದಿ ಮಾಡುತ್ತಿದ್ದಾರೆ. ‘ಅಖಂಡ 2’ ಗಾಗಿ ನಿರ್ದೇಶಕ ಬೋಯಪತಿ ಶ್ರೀನು ಅವರೊಂದಿಗೆ ಕೈಜೋಡಿಸಲು ಯೋಜಿಸುತ್ತಿದ್ದಾರೆ.

Continue Reading
Advertisement
LPG Price Cut
ವಾಣಿಜ್ಯ2 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ9 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್13 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ37 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು37 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ56 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ1 hour ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ2 hours ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ3 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌