Imran Khan | ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್, ಅವರ ಪಕ್ಷದ ನಾಯಕರ ವಿರುದ್ಧ ಅರೆಸ್ಟ್ ವಾರಂಟ್! - Vistara News

ಪ್ರಮುಖ ಸುದ್ದಿ

Imran Khan | ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್, ಅವರ ಪಕ್ಷದ ನಾಯಕರ ವಿರುದ್ಧ ಅರೆಸ್ಟ್ ವಾರಂಟ್!

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ನಾಯಕರಾದ, ಮಾಜಿ ಪಿಎಂ ಇಮ್ರಾನ್ ಖಾನ್(Imran Khan) ಹಾಗೂ ಅವರ ಸಹಚರ ನಾಯಕರು ನಿರಂತರಾಗಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದರು.

VISTARANEWS.COM


on

imran khan @ arrest warrant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್: ನಿಂದನೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಹಾಗೂ ಅವರ ಪಕ್ಷದ ಪ್ರಮುಖ ನಾಯಕರ ವಿರುದ್ಧ ಚುನಾವಣಾ ಆಯೋಗವು ಅರೆಸ್ಟ್ ವಾರಂಟ್ ಹೊರಡಿಸಿದೆ. ಪಾಕಿಸ್ತಾನ ಚುನಾವಣಾ ಆಯೋಗ ಮತ್ತು ಅದರ ಆಯುಕ್ತ ಸಿಕಂದರ್ ಸುಲ್ತಾನಾ ರಾಜಾ ವಿರುದ್ದ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆಯೋಗವು ಪ್ರಕರಣ ದಾಖಲಿಸಿದೆ.

ನಿಸಾರ್ ದುರಾನಿ ನೇತೃತ್ವದ ನಾಲ್ಕು ಸದಸ್ಯರ ಚುನಾವಣಾ ಆಯೋಗ ಪೀಠವು ಮಾಜಿ ಪಿಎಂ ಇಮ್ರಾನ್ ಖಾನ್ ಹಾಗೂ ಅವರ ಸಹವರ್ತಿಗಳಾದ ಫವಾದ್ ಚೌಧರಿ, ಅಸಾದ್ ಉಮರ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದೆ. ಪಾಕಿಸ್ತಾನ ಮುಸ್ಲಿಮ್ ಲೀಗ್-ನವಾಜ್(ಪಿಎಂಎಲ್-ಎನ್) ಪರವಾಗಿ ಆಯೋಗ ವರ್ತಿಸುತ್ತಿದೆ ಎಂದು ಇಮ್ರಾನ್ ಖಾನ್ ಹಾಗೂ ಅವರ ಪಕ್ಷದ ನಾಯಕರು ಸತತ ಟೀಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಆಯೋಗವು ಕಳೆದ ವರ್ಷದ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನೋಟಿಸ್ ನೀಡಿತ್ತು.

ಮಂಗಳವಾರ ನಡೆದ ವಿಚಾರಣೆ ವೇಳೆ, ಭೌತಿಕ ಹಾಜರಾತಿಗೆ ವಿನಾಯ್ತಿ ನೀಡಬೇಕೆಂಬ ಇಮ್ರಾನ್ ಪಕ್ಷದ ನಾಯಕರ ಮನವಿಯನ್ನು ತಿರಸ್ಕರಿಸಿರುವ ಆಯೋಗವು, ಅರೆಸ್ಟ್ ವಾರಂಟ್ ಜತೆಗೆ 50 ಸಾವಿರ ರೂ. ಮೌಲ್ಯದ ಸೆಕ್ಯುರಿಟಿ ಬಾಂಡ್‌ ನೀಡುವಂತೆಯೂ ಸೂಚಿಸಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿದೆ.

ಇದನ್ನೂ ಓದಿ | Imran Khan | ಚುನಾವಣೆಗೆ ಆಗ್ರಹಿಸಿ ದೀರ್ಘ ನಡಿಗೆ ಆರಂಭಿಸಿದ ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sunil Chhetri: ಭಾರತದ ಕಾಲ್ಚೆಂಡಿನ ಮಾಂತ್ರಿಕ ಸುನೀಲ್ ಚೆಟ್ರಿ ಸಾಧನೆಯೇ ರೋಚಕ

Sunil Chhetri: ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಚೆಟ್ರಿ 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ

VISTARANEWS.COM


on

Sunil Chhetri
Koo

ಬೆಂಗಳೂರು: ಭಾರತದಲ್ಲಿ ಆಳವಾಗಿ ಬೇರೂರಿರುವ ಕ್ರಿಕೆಟ್, ಕ್ರಿಕೆಟಿಗರೆಂದರೆ ದೇವರು ಎಂದು ಪೂಜಿಸಲ್ಪಡುವ ಜಾಯಮಾನದಲ್ಲಿ ಒಬ್ಬ ಫುಟ್ಬಾಲ್ ಆಟಗಾರ (Indian Football player) 20 ವರ್ಷಗಳಿಂದ ದೇಶಕ್ಕಾಗಿ ಆಡುತ್ತಾನೆ ಅಂದರೆ ನಂಬಲು ಕಷ್ಟ ಆಗಬಹುದು. ಫುಟ್ಬಾಲಿಗೆ ಕೆಲವು ಶ್ರೀಮಂತ ಕ್ಲಬ್ ಬಿಟ್ಟರೆ ಬೇರೆ ಯಾವ ಸಪೋರ್ಟ್ ಕೂಡ ಇಲ್ಲದ ಸನ್ನಿವೇಶದಲ್ಲಿ ಕೂಡ ಈ ದೈತ್ಯ ಪ್ರತಿಭೆಯ ಆಟಗಾರ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಾನೆ ಅಂದರೆ ಅದು ನಿಜವಾಗಿಯೂ ಅದ್ಭುತ! ಭಾರತೀಯ ಫುಟ್ಬಾಲ್ ತಂಡದ (Indian Football team) ಕ್ಯಾಪ್ಟನ್ ಆಗಿ ಭಾರತದಲ್ಲಿ ಫುಟ್ಬಾಲ್ ಕ್ರೇಜನ್ನು ಜೀವಂತವಾಗಿ ಉಳಿಸಿದ ಲೆಜೆಂಡ್ ಮಿಂಚು ಹರಿಸುವ ಫಾರ್ವರ್ಡ್ ಆಟಗಾರ ಸುನೀಲ್ ಚೆಟ್ರಿ (Sunil Chhetri) ಕೊನೆಗೂ ತನ್ನ ನೆಚ್ಚಿನ ಫುಟ್ಬಾಲ್​ ಆಟಕ್ಕೆ ವಿದಾಯ(Sunil Chhetri Announces Retirement) ಹೇಳಲು ನಿರ್ಧರಿಸಿದ್ದಾರೆ.


ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಅವರ ನಿವೃತ್ತಿಯ ನಿರ್ಧಾರ ಕೇಳಿ ಅನೇಕರು ಬೇಸರಗೊಂಡರೂ ಕೂಡ ಅವರ ಸಾಧನೆಗೆ ಸಲಾಂ ಎಂದಿದ್ದಾರೆ. ಚೆಟ್ರಿ ಕುರಿತ ಸಾರಸ್ಯರ ಸಂಗತಿ ಇಂತಿದೆ.


2021 ರಲ್ಲಿ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಸುನೀಲ್​ ಚೆಟ್ರಿ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ – ಖೇಲ್ ರತ್ನ ಪ್ರಶಸ್ತಿಯನ್ನು ನೀಡಿತು. ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಮತ್ತು ಏಕೈಕ ಫುಟ್ಬಾಲ್ ಆಟಗಾರ. ನೀರಜ್ ಚೋಪ್ರಾ ಮತ್ತು ಮಿಥಾಲಿ ರಾಜ್ ಸೇರಿದಂತೆ ಇತರ ಪ್ರಸಿದ್ಧ ಕ್ರೀಡಾಪಟುಗಳೊಂದಿಗೆ ಅವರು ಈ ಗೌರವವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ Sunil Chhetri: ಕ್ಲಬ್​ ತೊರೆದು ದೇಶದ ಪರ ಆಡಲು ನಿರ್ಧರಿಸಿದ ಸುನೀಲ್​ ಚೆಟ್ರಿಗೆ ಮೆಚ್ಚುಗೆ

sunil chhetri khel ratna award


2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

sunil chhetri 2005


ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ


ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!


18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್​ಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ಇದನ್ನೂ ಓದಿ Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ


ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್. ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ.


1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಈ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು.

Continue Reading

ದೇಶ

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

Fire Accident: ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ.

VISTARANEWS.COM


on

Fire Accident
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ (Delhi BJP Office) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಅಗ್ನಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೊಗೆ ಆವರಿಸಿದ ಕಾರಣ ಜನರಿಗೆ ಆತಂಕ ಎದುರಾಗಿದೆ ಎಂದು ತಿಳಿದುಬಂದಿದೆ.

ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಕೆಲ ತಿಂಗಳ ಹಿಂದೆ ಮಧ್ಯಪ್ರದೇಶ ವಿಧಾನಸೌಧದ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಭೋಪಾಲ್‌ನ ಅರೇರಾ ಹಿಲ್‌ನಲ್ಲಿರುವ ವಲ್ಲಭ ಭವನ ರಾಜ್ಯ ಸಚಿವಾಲಯದ ಕಟ್ಟಡದಲ್ಲಿ (State Secretariat) ಏಕಾಏಕಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 10-15 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿದ್ದವು. ಅಗ್ನಿಯ ಕೆನ್ನಾಲಗೆಗೆ ಹಲವು ಕಡತಗಳು ಭಸ್ಮವಾಗಿವೆ ಎಂದು ತಿಳಿದುಬಂದಿತ್ತು.

ಕೆಲವು ದಿನಗಳ ಹಿಂದೆ ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ 11 ಜನರು ಮೃತಪಟ್ಟಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು. ಅಗ್ನಿಶಾಮಕ ದಳದ ಪ್ರಕಾರ ಎರಡು ಬಣ್ಣ ಮತ್ತು ರಾಸಾಯನಿಕ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

Continue Reading

ಪ್ರಮುಖ ಸುದ್ದಿ

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

BMW X3: ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಮ್​​ ದರದಂತೆ ರೂ. 74,90,000ಗಳಾಗಿದೆ. ಇದು ಲಾಂಚಿಂಗ್ ಬೆಲೆಯಾಗಿದ್ದು ಮುಂದೆ ಬೆಲೆಯಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಬಿಎಂಡಬ್ಲ್ಯು ಎಕ್ಸ್ 3 ಎಕ್ಸ್ ಡ್ರೈವ್ 20 ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರು ಬ್ರೂಕ್ಲಿನ್ ಗ್ರೇ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ.

VISTARANEWS.COM


on

BMW X3 xDrive20d
Koo

ಬೆಂಗಳೂರು: ಬಿಎಂಡಬ್ಲ್ಯು ಎಕ್ಸ್3 (BMW X3) ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಗಿದೆ. ಯಶಸ್ವಿ ಎಸ್​​ಯುವಿಯಾದ ಬಿಎಂಡಬ್ಲ್ಯು ಎಕ್ಸ್ 3 ನ ಈ ವಿಶೇಷ ಆವೃತ್ತಿಯು ಇಂದಿನಿಂದ ಎಲ್ಲಾ ಬಿಎಂಡಬ್ಲ್ಯು ಇಂಡಿಯಾ ಡೀಲರ್ ಶಿಪ್ ಗಳು ಮತ್ತು ಬಿಎಂಡಬ್ಲ್ಯು ಆನ್ ಲೈನ್ ಶಾಪ್ ಗಳಲ್ಲಿ ಡೀಸೆಲ್ ವೇರಿಯೆಂಟ್​ಗಳಲ್ಲಿ ಲಭ್ಯವಿದೆ.

ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಮ್​​ ದರದಂತೆ ರೂ. 74,90,000ಗಳಾಗಿದೆ. ಇದು ಲಾಂಚಿಂಗ್ ಬೆಲೆಯಾಗಿದ್ದು ಮುಂದೆ ಬೆಲೆಯಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಬಿಎಂಡಬ್ಲ್ಯು ಎಕ್ಸ್ 3 ಎಕ್ಸ್ ಡ್ರೈವ್ 20 ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರು ಬ್ರೂಕ್ಲಿನ್ ಗ್ರೇ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ. ಲೆದರ್ ವೆರ್ನಾಸ್ಕಾ ಅಪ್​ಹೋಲ್​​ಸ್ಟೆರಿಯನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಮೋಚಾ & ಬ್ಲ್ಯಾಕ್ ವಿತ್ ಕಾಂಟ್ರಾಸ್ಟ್ ಸ್ಟಿಚಿಂಗ್ ಕೂಡ ಹೊಂದಿರುತ್ತದೆ.

ಬಿಎಂಡಬ್ಲ್ಯು ಇಂಡಿಯಾ ಫೈನಾನ್ಷಿಯಲ್ ಸರ್ವೀಸಸ್ ಗೆ ಧನ್ಯವಾದಗಳು, ಕಸ್ಟಮೈಸ್ ಮಾಡಿದ ಮತ್ತು ಹೊಂದಿಕೊಳ್ಳುವ ಹಣಕಾಸು ಪರಿಹಾರಗಳನ್ನು ವೈಯಕ್ತಿಕ ಅವಶ್ಯಕತೆಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ. ಬಿಎಂಡಬ್ಲ್ಯು 360 ಫೈನಾನ್ಸ್ ಪ್ಲಾನ್ ನೊಂದಿಗೆ ಗ್ರಾಹಕರು ಉತ್ತಮ ಮೌಲ್ಯ ಮತ್ತು ಸಂಪೂರ್ಣ ಮನಸ್ಸಿನ ಶಾಂತಿಯನ್ನು ಆನಂದಿಸುತ್ತಾರೆ. ಇದು ಆಕರ್ಷಕ ಮಾಸಿಕ ಕಂತುಗಳು, ಐದು ವರ್ಷಗಳವರೆಗೆ ಭರವಸೆಯ ಬೈ-ಬ್ಯಾಕ್ ಆಯ್ಕೆ, ಹೊಂದಿಕೊಳ್ಳುವ ಟರ್ಮ್-ಎಂಡ್ ಅವಕಾಶಗಳು ಮತ್ತು ಹೊಸ ಬಿಎಂಡಬ್ಲ್ಯುಗೆ ಅಪ್ಗ್ರೇಡ್ ಮಾಡುವ ಆಯ್ಕೆಗಳನ್ನು ಒಳಗೊಂಡಿದೆ.

ಟರ್ಬೊ ಎಂಜಿನ್​

ಬಿಎಂಡಬ್ಲ್ಯು ಟ್ವಿನ್ ಪವರ್ ಟರ್ಬೊ ತಂತ್ರಜ್ಞಾನ ಹೊಂದಿದೆ. ಡೀಸೆಲ್ ಎಂಜಿನ್ ಗರಿಷ್ಠ ದಕ್ಷತೆಯನ್ನು ಹೊಂದಿರುತ್ತದೆ. ಕಡಿಮೆ ಎಂಜಿನ್ ವೇಗದಲ್ಲಿಯೂ ಆಟೊಮ್ಯಾಟಿಕ್​ ಪ್ರತಿಕ್ರಿಯೆ ನೀಡುತ್ತದೆ. ಎರಡು ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ 1,750 – 2,500 ಆರ್ ಪಿಎಂನಲ್ಲಿ 140 ಕಿಲೋವ್ಯಾಟ್ / 190 ಬಿಹೆಚ್ ಪಿ ಮತ್ತು 400 ಎನ್ಎಂ ಗರಿಷ್ಠ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು 0-100 ಕಿ.ಮೀ ವೇಗವನ್ನು ಕೇವಲ 7.9 ಸೆಕೆಂಡುಗಳಲ್ಲಿ ಕ್ರಮಿಸುತ್ತದೆ.

ಇದನ್ನೂ ಓದಿ: Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

ಅತ್ಯುತ್ತಮ ದರ್ಜೆಯ ತಂತ್ರಜ್ಞಾನವು ಆಟೋಮೋಟಿವ್ ಕ್ಷೇತ್ರದಲ್ಲಿ ಹೊಸತನದ ಗಡಿಯನ್ನು ಮೀರುತ್ತದೆ. ಬಿಎಂಡಬ್ಲ್ಯು ಗೆಸ್ಚರ್ ಕಂಟ್ರೋಲ್ ಮತ್ತು ವೈರ್ ಲೆಸ್ ಆ್ಯಪಲ್​ ಕಾರ್ ಪ್ಲೇಯರ್​ ಮತ್ತು ಆಂಡ್ರಾಯ್ಡ್ ಆಟೋ ವ್ಯವಸ್ಥೆಯನ್ನು ಇದು ಹೊಂದಿದೆ. ಬಿಎಂಡಬ್ಲ್ಯು ಆಪರೇಟಿಂಗ್ ಸಿಸ್ಟಮ್ 7.0 ನಲ್ಲಿ ಚಾಲನೆಯಲ್ಲಿರುವ ಬಿಎಂಡಬ್ಲ್ಯು ಲೈವ್ ಕಾಕ್ ಪಿಟ್ ಪ್ರೊಫೆಷನಲ್ 3 ಡಿ ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಸ್ಟೀರಿಂಗ್ ವೀಲ್​​ ಹಿಂದೆ ಹೆಚ್ಚಿನ ರೆಸಲ್ಯೂಶನ್ 12.3 ಸ್ಕ್ರೀನ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಕಂಟ್ರೋಲ್ ಡಿಸ್ ಪ್ಲೇಯನ್ನು ಹೊಂದಿದೆ. ಇದು ಬಿಎಂಡಬ್ಲ್ಯು ಗೆಸ್ಚರ್ ಕಂಟ್ರೋಲ್ ನೊಂದಿಗೆ ಕೆಲಸ ಮಾಡುತ್ತದೆ. ಇದು ಹಲವಾರು ಕಾರ್ಯಗಳ ನಿಯಂತ್ರಣಕ್ಕಾಗಿ ಆರು ಪೂರ್ವನಿರ್ಧರಿತ ಕೈ ಚಲನೆಗಳನ್ನು ಹೊಂದಿದೆ. ಬಿಎಂಡಬ್ಲ್ಯು ಹೆಡ್-ಅಪ್ ಡಿಸ್​ಪ್ಲೇ ಮಾಹಿತಿಯನ್ನೂ ಹೊಂದಿತ್ತು.

ತಾಂತ್ರಿಕ ಮಾಹಿತಿಗಳು ಹೀಗಿವೆ

ಎಂಟು-ಸ್ಪೀಡ್ ಆಟೋಮ್ಯಾಟಿಕ್ ಸ್ಟೆಪ್ಟ್ರಾನಿಕ್ ಸ್ಪೋರ್ಟ್ ಟ್ರಾನ್ಸ್ ಮಿಷನ್ ನಯವಾದ ಗೇರ್​ಶಿಫ್ಟ್​ ಕಾರ್ಯವನ್ನು ಮಾಡುತ್ತದೆ. ಯಾವುದೇ ಸಮಯದಲ್ಲಿ, ಯಾವುದೇ ಗೇರ್​ನಲ್ಲಿ ಟ್ರಾನ್ಸ್​​​ಮಿಷನ್​​ ಎಂಜಿನ್​ನೊಂದಿಗೆ ಸಂಪೂರ್ಣ ಹೊಂದಾಣಿಕೆಯಾಗುತ್ತದೆ. ಇದು ಅದರ ಪೂರ್ಣ ಶಕ್ತಿ ಮತ್ತು ದಕ್ಷತೆ ಪಡೆಯಲು ನೆರವು ನೀಡುತ್ತದೆ.

ಅಡಾಪ್ಟಿವ್ ಸಸ್ಪೆಂಷನ್ ತನ್ನ ವೈಯಕ್ತಿಕ ಎಲೆಕ್ಟ್ರಾನಿಕ್ ನಿಯಂತ್ರಿತ ಡ್ಯಾಂಪರ್ ಗಳೊಂದಿಗೆ ರಸ್ತೆ ಪರಿಸ್ಥಿತಿಗಳು ಮತ್ತು ವೈಯಕ್ತಿಕ ಚಾಲನಾ ಶೈಲಿ ಎರಡಕ್ಕೂ ಹೊಂದಿಕೊಳ್ಳುತ್ತದೆ, ಆ ಮೂಲಕ ಅಸಾಧಾರಣ ನಿಖರತೆ ಕೊಡುತ್ತದೆ. ಡ್ರೈವ್ ಮತ್ತು ಹ್ಯಾಂಡ್ಲಿಂಗ್ ಡೈನಾಮಿಕ್ಸ್ ಅನ್ನು ಹೆಚ್ಚಿಸುತ್ತದೆ. ಇದು ಸ್ಟೀರಿಂಗ್ ವೀಲ್ ಪ್ಯಾಡಲ್ ಶಿಫ್ಟರ್ ಗಳು, ಬ್ರೇಕಿಂಗ್ ಫಂಕ್ಷನ್ ನೊಂದಿಗೆ ಕ್ರೂಸ್ ಕಂಟ್ರೋಲ್ ಮತ್ತು ಎಲೆಕ್ಟ್ರಾನಿಕ್ ಡಿಫರೆನ್ಷಿಯಲ್ ಲಾಕ್. ಆಟೋಮ್ಯಾಟಿಕ್ ಡಿಫರೆನ್ಷಿಯಲ್ ಬ್ರೇಕ್ (ಎಡಿಬಿ) ಗಳೊಂದಿಗೆ ಲಭ್ಯವಿದೆ. ಬಿಎಂಡಬ್ಲ್ಯು ಪರ್ಫಾಮೆನ್ಸ್ ಕಂಟ್ರೋಲ್ ಬ್ರೇಕಿಂಗ್ ಮೂಲಕ ಕಾರಿನ ಸ್ಥಿರತೆ ಹೆಚ್ಚಿಸುತ್ತದೆ.

ಇಂಟಲಿಜೆಂಟ್​ ಆಲ್-ವೀಲ್ ಡ್ರೈವ್ ವ್ಯವಸ್ಥೆಯಾದ ಬಿಎಂಡಬ್ಲ್ಯು ಎಕ್ಸ್ ಡ್ರೈವ್, ಚಾಲನಾ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ. ಎಲೆಕ್ಟ್ರಾನಿಕ್ ನಿಯಂತ್ರಿತ ಸ್ವಯಂಚಾಲಿತ ಡಿಫರೆನ್ಷಿಯಲ್ ಬ್ರೇಕ್ ಗಳು / ಲಾಕ್ ಗಳು (ಎಡಿಬಿ-ಎಕ್ಸ್), ಡೈನಾಮಿಕ್ ಟ್ರಾಕ್ಷನ್ ಕಂಟ್ರೊಲ್​ ಕೂಡ ಹೊಂದಿದೆ.

ಡ್ರೈವ್ ಅಸಿಸ್ಟ್​ ವ್ಯವಸ್ಥೆ

ಚಾಲಕ ಸಹಾಯ ವ್ಯವಸ್ಥೆಗಳ ಹರಡುವಿಕೆ ಹಿಂದೆಂದಿಗಿಂತಲೂ ಹೆಚ್ಚು ವ್ಯಾಪಕ. ಬಿಎಂಡಬ್ಲ್ಯು ಡ್ರೈವಿಂಗ್ ಅಸಿಸ್ಟೆಂಟ್ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಅನ್ನು ಒದಗಿಸುತ್ತದೆ. ಲೇನ್ ಬದಲಾವಣೆಗಳು, ಮುಂಭಾಗದ ಘರ್ಷಣೆಗಳು ಮತ್ತು ಹಿಂಭಾಗದ ಘರ್ಷಣೆಗಳ ಬಗ್ಗೆ ಚಾಲಕನನ್ನು ಎಚ್ಚರಿಸಲು ಸಹಾಯ ಮಾಡುತ್ತದೆ. 360 ಕ್ಯಾಮೆರಾ ಹೊಂದಿರುವ ಪಾರ್ಕಿಂಗ್ ಅಸಿಸ್ಟೆಂಟ್ ಪ್ಲಸ್ ವೇಗವರ್ಧನೆ, ಬ್ರೇಕಿಂಗ್ ಮತ್ತು ಅತ್ಯುತ್ತಮ ಪಾರ್ಕಿಂಗ್ ವ್ಯವಸ್ಥೆ ಹೊಂದಿದೆ.

ಬಿಎಂಡಬ್ಲ್ಯು ಎಫಿಶಿಯೆಂಟ್ ಡೈನಾಮಿಕ್ಸ್ ನಲ್ಲಿ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್, ಆಟೋ ಸ್ಟಾರ್ಟ್-ಸ್ಟಾಪ್, ಬ್ರೇಕ್-ಎನರ್ಜಿ ರಿಜನರೇಷನ್, ಆಕ್ಟಿವ್ ಏರ್ ಸ್ಟ್ರೀಮ್ ಕಿಡ್ನಿ ಗ್ರಿಲ್, ಎಲೆಕ್ಟ್ರಾನಿಕ್ ಪವರ್ ಸ್ಟೀರಿಂಗ್, 50:50 ತೂಕ ಡಿಸ್ಟ್ರಿಬ್ಯೂಷನ್​, ಕಂಫರ್ಟ್ / ಇಕೋ ಪ್ರೊ / ಸ್ಪೋರ್ಟ್ ನಂತಹ ವಿವಿಧ ಡ್ರೈವಿಂಗ್ ಮೋಡ್ ಗಳಿವೆ. ಡ್ರೈವಿಂಗ್ ಎಕ್ಸ್ ಪೀರಿಯನ್ಸ್ ಕಂಟ್ರೋಲ್ ಸ್ವಿಚ್ ಮತ್ತು ಇತರ ಅನೇಕ ನವೀನ ತಂತ್ರಜ್ಞಾನಗಳನ್ನು ಒಳಗೊಂಡಿದೆ.

ಸುರಕ್ಷತಾ ಫೀಚರ್​ಗಳು

ಬಿಎಂಡಬ್ಲ್ಯು ಸುರಕ್ಷತಾ ತಂತ್ರಜ್ಞಾನಗಳಲ್ಲಿ ಆರು ಏರ್ ಬ್ಯಾಗ್ ಗಳು, ಬ್ರೇಕ್ ಅಸಿಸ್ಟ್ ನೊಂದಿಗೆ ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್), ಅಟೆನ್ಸಿನೆಸ್ ಅಸಿಸ್ಟೆನ್ಸ್, ಡೈನಾಮಿಕ್ ಟ್ರಾಕ್ಷನ್ ಕಂಟ್ರೋಲ್ (ಡಿಟಿಸಿ), ಕಾರ್ನರಿಂಗ್ ಬ್ರೇಕ್ ಕಂಟ್ರೋಲ್ (ಸಿಬಿಸಿ), ಆಟೋ ಹೋಲ್ಡ್ ನೊಂದಿಗೆ ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಸೈಡ್-ಇಂಪ್ಯಾಕ್ಟ್ ಪ್ರೊಟೆಕ್ಷನ್, ಎಲೆಕ್ಟ್ರಾನಿಕ್ ವೆಹಿಕಲ್ ಇಮೊಬೈಲೈಜರ್ ಮತ್ತು ಕ್ರ್ಯಾಶ್ ಸೆನ್ಸಾರ್, ಡೈನಾಮಿಕ್ ಬ್ರೇಕಿಂಗ್ ಲೈಟ್ ಗಳು, ಐಎಸ್ ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಿಂಗ್ ಸೇರಿದಂತೆ ಹಲವಾರು ಸುರಕ್ಷತಾ ಫೀಚರ್​ಗಳಿವೆ.

Continue Reading

ದೇಶ

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Sita Temple: ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಇದನ್ನು ಮೋದಿ ಸಾಕಾರಗೊಳಿಸಲಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Sita Temple
Koo

ಪಟನಾ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ (Ram Mandir) ನಿರ್ಮಾಣ ಮಾಡಲಾಗಿದ್ದು, ಕಳೆದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಾರ್ಪಣೆ ಮಾಡಿದ್ದಾರೆ. ಕೋಟ್ಯಂತರ ಜನ ರಾಮಮಂದಿರಕ್ಕೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಇದರ ಬೆನ್ನಲ್ಲೇ, “ಬಿಹಾರದ ಸೀತಾಮಡಿಯಲ್ಲಿ (Sitamarhi) ಬಿಜೆಪಿಯು ಸೀತೆಗಾಗಿ ಮಂದಿರ (Sita Temple) ನಿರ್ಮಿಸಲಾಗುವುದು” ಎಂದು ಕೇಂದ್ರ ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

“ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ರಾಮಮಂದಿರ ನಿರ್ಮಾಣ ಮಾಡಲು ಅಧಿಕಾರದಲ್ಲಿದ್ದವರು ದೂರದಲ್ಲೇ ಉಳಿದರು. ಆದರೆ, ಮೋದಿ ಅವರ ಕಾಲದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಯಿತು. ಈಗ ಸೀತೆಗಾಗಿ ಯಾರಾದರೂ ರಾಮಮಂದಿರ ನಿರ್ಮಾಣ ಮಾಡಿದರೆ, ಅದು ನರೇಂದ್ರ ಮೋದಿ ಅವರು ಮಾತ್ರ” ಎಂದು ಬಿಹಾರದ ಸೀತಾಮಡಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಅಮಿತ್ ಶಾ ಹೇಳಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ವಿರುದ್ಧ ಅಮಿತ್‌ ಶಾ ವಾಗ್ದಾಳಿ ನಡೆಸಿದರು. “ಲಾಲು ಪ್ರಸಾದ್ ಯಾದವ್‌ ಅವರು ಪವರ್‌ ಪಾಲಿಟಿಕ್ಸ್‌ನಿಂದಾಗಿ ಕಾಂಗ್ರೆಸ್‌ ಜತೆ ಸಂಖ್ಯ ಬೆಳೆಸಿದರು. ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಪುತ್ರನನ್ನು ಸಿಎಂ ಮಾಡಬೇಕು ಎಂಬ ಏಕಮಾತ್ರ ಉದ್ದೇಶದಿಂದ ಅವರು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡರು” ಎಂದು ಟೀಕಿಸಿದರು.

ಹಿಂದು ಗ್ರಂಥಗಳ ಪ್ರಕಾರ, ರಾಜ ಜನಕನು ಸೀತಾಮಡಿಯ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಮಡಿಕೆಯೊಂದರಿಂದ ಭಗವಾನ್‌ ರಾಮನ ಪತ್ನಿ ಸೀತೆ ಉದ್ಭವಿಸಿದರು ಎಂದು ಹೇಳಲಾಗುತ್ತಿದೆ. ಹಾಗಾಗಿ, ಸೀತಾಮಡಿಯನ್ನು ಪವಿತ್ರ ಸ್ಥಾನ ಎಂದೇ ಹೇಳಲಾಗುತ್ತಿದೆ. ಸೀತಾಮಡಿಯು ಲೋಕಸಭೆ ಕ್ಷೇತ್ರವೂ ಆಗಿದೆ.

ಕೆಲ ದಿನಗಳ ಹಿಂದಷ್ಟೇ ರಾಮಮಂದಿರ ಕುರಿತು ನರೇಂದ್ರ ಮೋದಿ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂಬುದಾಗಿ ಮನವಿ ಮಾಡಿದ್ದರು.

ಇದನ್ನೂ ಓದಿ: PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Continue Reading
Advertisement
Sunil Chhetri
ಕ್ರೀಡೆ5 mins ago

Sunil Chhetri: ಭಾರತದ ಕಾಲ್ಚೆಂಡಿನ ಮಾಂತ್ರಿಕ ಸುನೀಲ್ ಚೆಟ್ರಿ ಸಾಧನೆಯೇ ರೋಚಕ

Fire Accident
ದೇಶ5 mins ago

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

XVU300
ಆಟೋಮೊಬೈಲ್8 mins ago

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Namrata Gowda Holiday Look in Red Ruffle Layered Maxi Dress
ಫ್ಯಾಷನ್13 mins ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್13 mins ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Karnataka Weather Forecast
ಮಳೆ26 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ41 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ42 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್48 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ52 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ26 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ3 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

ಟ್ರೆಂಡಿಂಗ್‌