Salon On Fire | ಮನಿ ಕಿರಿಕ್‌: ತಮ್ಮನ ಮೇಲಿನ ಸಿಟ್ಟಿಗೆ ಅಕ್ಕನ ಸೆಲೂನ್‌ಗೆ ಬೆಂಕಿ ಇಟ್ಟರು; ಕಂಬಿ ಹಿಂದೆ ಬಂದಿಯಾದರು - Vistara News

ಕರ್ನಾಟಕ

Salon On Fire | ಮನಿ ಕಿರಿಕ್‌: ತಮ್ಮನ ಮೇಲಿನ ಸಿಟ್ಟಿಗೆ ಅಕ್ಕನ ಸೆಲೂನ್‌ಗೆ ಬೆಂಕಿ ಇಟ್ಟರು; ಕಂಬಿ ಹಿಂದೆ ಬಂದಿಯಾದರು

ತಮ್ಮನ ಮೇಲಿನ ಸಿಟ್ಟಿಗೆ ರಿವೆಂಜ್ ತೀರಿಸಿಕೊಳ್ಳಲು ಕಿಡಿಗೇಡಿಗಳು ಅಕ್ಕನ ಸೆಲೂನ್‌ಗೆ ಬೆಂಕಿ ಇಟ್ಟ (Salon On Fire) ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಹೊಸ ವರ್ಷದಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಈಗ ಬಂಧಿಸಿದ್ದಾರೆ.

VISTARANEWS.COM


on

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಕೃತ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್‌ (ಬೆಂಗಳೂರು ಗ್ರಾಮಾಂತರ): ಇಲ್ಲಿನ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಚಂದಾಪುರ ಸರ್ಕಲ್‌ನಲ್ಲಿದ್ದ ವಿಶ್ ಫ್ಯಾಮಿಲಿ ಸೆಲೂನ್‌ಗೆ ಬೆಂಕಿ ಹಚ್ಚಿ (Salon On Fire) ಪರಾರಿ ಆಗಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Salon On Fire

ಹೊಸೂರು ಮೂಲದ ಬೇಬಿ ರಾಣಿ ಎಂಬುವವರಿಗೆ ಸೇರಿದ ಸೆಲೂನ್‌ಗೆ ಕಿಡಿಗೇಡಿಗಳು ಹೊಸ ವರ್ಷದಂದು ಬಾಗಿಲು ಒಡೆದು ಬೆಂಕಿ ಇಟ್ಟಿದ್ದರು. ಕಿಡಿಗೇಡಿಗಳ ಕೃತ್ಯದಿಂದಾಗಿ ವಿಶ್‌ ಫ್ಯಾಮಿಲಿ ಸೆಲೂನ್ ಸಂಪೂರ್ಣ ಸುಟ್ಟು ಕರಕಲಾಗಿ, 60 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿ ಆಗಿದ್ದವು.

Salon On Fire
ಸಲೂನ್‌ ಒಳ ನುಗ್ಗಿದ್ದ ಶಿವಕುಮಾರ್‌ ಹಾಗೂ ಸಹಚರರು

ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಕೃತ್ಯ
ಮೊದಲ ಮಹಡಿಯಲ್ಲಿದ್ದ ಬೋಟಿಕ್ ಸೆಲೂನ್‌ಗೆ ಬೆಂಕಿ ಹಚ್ಚಲು ಹೊಸ ವರ್ಷದ ರಾತ್ರಿಯನ್ನೇ ಆರೋಪಿಗಳು ಹೊಂಚು ಹಾಕಿದ್ದರು. ಅಕ್ಕ ಪಕ್ಕದವರಿಗೆ ತಿಳಿಯಬಾರದೆಂದು ನಾಲ್ವರು ಕಿರಾತಕರು ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದರು. ಹೊಸ ವರ್ಷದ ಸೆಲೆಬ್ರೇಷನ್ ನೆಪದಲ್ಲಿ ಪಟಾಕಿ ಸಿಡಿಸಿದರು. ಪಟಾಕಿ ಶಬ್ದದ ನಡುವೆ ಸೆಲೂನ್‌ ಗಾಜು ಪುಡಿ ಪುಡಿ ಮಾಡಿದರು. ಬಳಿಕ ಬಾಗಿಲು ಒಡೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿ ಆಗಿದ್ದರು. ನ್ಯೂ ಇಯರ್ ದಿನ ಕಿಡಿಗೇಡಿಗಳು ನಡೆಸಿದ್ದ ದುಷ್ಕೃತ್ಯ ಎಲ್ಲವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದವು.

Salon On Fire
ರಿವೆಂಜ್‌ ತೀರಿಸಿಕೊಂಡ ಪುಪ್ಪಾ

ಹಣಕ್ಕಾಗಿ ರಿವೆಂಜ್‌
ಬೇಬಿ ರಾಣಿಯ ತಮ್ಮನಿಗೆ ಪುಷ್ಪಾ ಎಂಬಾಕೆ ಮೂರು ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ ರಾಣಿ ತಮ್ಮ ಹಣ ವಾಪಸ್ ಕೊಡುವುದನ್ನು ವಿಳಂಬ ಮಾಡಿದ್ದರು. ಪದೆಪದೇ ಹಣ ವಾಪಸ್‌ ಕೊಡುವಂತೆ ಒತ್ತಾಯಿಸಿದ್ದರೂ ಆತ ನಿರ್ಲಕ್ಷ್ಯಸಿದ್ದ ಎನ್ನಲಾಗಿದೆ. ಹೀಗಾಗಿ ತಮ್ಮನ ಮೇಲಿನ ಸಿಟ್ಟಿಗೆ ಅಕ್ಕನ ಬೋಟಿಕ್‌ ಸೆಲೂನ್‌ಗೆ ಬೆಂಕಿ ಹಚ್ಚಿ ರಿವೆಂಜ್‌ ತೀರಿಸಿಕೊಳ್ಳಲು ಸಂಚು ರೂಪಿಸಿದ್ದರು.

ಅಕ್ರಮ ಸಂಬಂಧ ಹೊಂದಿದ್ದ ಪುಷ್ಪಾ- ಶಿವಕುಮಾರ್‌
ಶಿವಕುಮಾರ್ ಎಂಬಾತನೊಂದಿಗೆ ಪುಷ್ಪಾ ಅಕ್ರಮ ಸಂಬಂಧ ಹೊಂದಿದ್ದಳು. ಹೀಗಾಗಿ ಬೇಬಿ ರಾಣಿ ತಮ್ಮ ಕೊಟ್ಟ ಹಣ ವಾಪಸ್‌ ಕೊಡದಿರುವುದನ್ನು ತಿಳಿಸಿದ್ದಳು. ಹೀಗಾಗಿ ಸೇಡು ತೀರಿಸಿಕೊಳ್ಳಲು ಮುಂದಾಗಿ ಶಿವಕುಮಾರ್‌ಗೆ ಡೀಲ್‌ ಕೊಟ್ಟಳು. ಶಿವಕುಮಾರ್ ಹಾಗೂ ಮೂವರು ಸಹಚರರು ಸೇರಿ ಹೊಸ ವರ್ಷದಂದು ಸೆಲೂನ್‌ಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದರು. ಸದ್ಯ ತನಿಖೆ ನಡೆಸಿದ ಸೂರ್ಯನಗರ ಪೊಲೀಸರು ಶಿವಕುಮಾರ್‌ ಸೇರಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತಲೆಮರೆಸಿಕೊಂಡಿರುವ ಪುಷ್ಪಾಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ | Boy drowned | ತಾಯಿ ಜತೆಗೆ ಹೋಗಿದ್ದ ಬಾಲಕ ಆಟವಾಡುತ್ತಾ ಹೊಳೆ ನೀರಿಗೆ ಬಿದ್ದು ಮೃತ್ಯು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Election Results 2024: ಮೋದಿ ಜನಪ್ರಿಯತೆ ಕಡಿಮೆ ಆಗಿದೆ, ಕಾಂಗ್ರೆಸ್‌ ವೋಟ್‌ ಶೇರ್ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Karnataka Election Results 2024: ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ವೋಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ಇದರಿಂದ ಎಲ್ಲೂ ಮೋದಿ ಅಲೆ ಇರಲಿಲ್ಲ ಎಂಬುವುದು ತಿಳಿಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Karnataka Election Results 2024
Koo

ಬೆಂಗಳೂರು: ರಾಜ್ಯದಲ್ಲಿ ನಾವು 15 ರಿಂದ 20 ಕಡೆ ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆಯಂತೆ ಫಲಿತಾಂಶ (Karnataka Election Results 2024) ಬರಲಿಲ್ಲ. ಈ ಬಾರಿ ರಾಜ್ಯದಲ್ಲಿ 9 ಕಡೆ ಗೆಲುವು ಸಿಕ್ಕಿದೆ. ಕಳೆದ ಬಾರಿ ಕಾಂಗ್ರೆಸ್‌ ಒಂದು ಸೀಟ್‌ ಮಾತ್ರ ಗೆದ್ದಿತ್ತು. ಈ ಬಾರಿ 2019ಕ್ಕಿಂತ ನಮ್ಮ ಓಟಿಂಗ್ ಶೇರ್ ಜಾಸ್ತಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ಓಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ದೇಶದಲ್ಲಿ ಕಾಂಗ್ರೆಸ್‌ಗೆ ಶೇ. 3 ರಷ್ಟು ಓಟಿಂಗ್ ಜಾಸ್ತಿ ಆಗಿದೆ. ಬಿಜೆಪಿ 2019ರಲ್ಲಿ 303 ಗೆದ್ದಿತ್ತು. ಈಗ, 246 ಗೆದ್ದಿದೆ. ಬಿಜೆಪಿ ಅತಿ ದೊಡ್ಡ ಪಾರ್ಟಿ ಆಗಿ ಬಂದಿದೆ. ಆದರೆ, ಎಲ್ಲೂ ಮೋದಿ ಅಲೆ ಇರಲಿಲ್ಲ. ಮೋದಿಯವರ ಜನಪ್ರಿಯತೆ ಕಡಿಮೆ ಆಗಿದೆ ಎಂದು ಸಿಎಂ ಹೇಳಿದರು.

ಯಾರು ಸರ್ಕಾರ ರಚಿಸುತ್ತಾರೋ ಗೊತ್ತಿಲ್ಲ

ಯಾರು ಸರ್ಕಾರ ರಚಿಸುತ್ತಾರೋ ಅಂತ ನನಗೆ ಗೊತ್ತಿಲ್ಲ ಆದರೆ ಬಿಜೆಪಿಗೆ ಮೆಜಾರಿಟಿ ಸೀಟ್ ಅಂತೂ ಬಂದಿಲ್ಲ.
ಮೋದಿ ಸೋಲುತ್ತೇವೆ ಅಂತ ಗೊತ್ತಾಗಿ ಧರ್ಮದ ಆಧಾರದ ಮೇಲೆ ಮತ ಕೇಳಲು ಶುರು ಮಾಡಿದರು. ಕೋಮುವಾದದ ಮೇಲೆ ಮತ ಕೇಳಿದ್ದು ವರ್ಕ್‌ಔಟ್‌ ಆಗಿಲ್ಲ, ಎನ್‌ಡಿಎಗೆ 60 ಸ್ಥಾನ ಕಡಿಮೆ ಆಗಿವೆ

ನರೇಂದ್ರ ಮೋದಿ ಪ್ರಧಾನಿ ಆಗಲು ನೈತಿಕ ಹಕ್ಕಿಲ್ಲ. ಇ.ಡಿ. ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸಲಾಯಿತು. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದೆ, ಅಲ್ಲಿ ಎಸ್‌ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಒಟ್ಟಾರೆ ಬಿಜೆಪಿಗೆ ದೊಡ್ಡ ಹಿನ್ನಡೆ ಆಗಿದೆ.

ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ದೇಶದಲ್ಲಿ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಮಾಡಿದ ಯಾತ್ರೆಯಿಂದ ಇಂಡಿ ಮೈತ್ರಿ ಕೂಟಕ್ಕೆ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಎರಡೂ ಕಡೆ ಗೆಲುವು ಸಾಧಿಸಿದ್ದಾರೆ, ಹೀಗಾಗಿ ಅವರಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ತಿಳಿಸುವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಿಕೊಳ್ಳಲು ಜನರು ಮತದಾನ ಮಾಡಿದ್ದಾರೆ. ನಮಗೆ ಗೆಲುವು ಆಗಿಲ್ಲ ನಿಜ, ಆದರೆ ಶೇಕಡಾವಾರು ಮತ ಪ್ರಮಾಣ ಜಾಸ್ತಿ ಆಗಿದೆ ಎಂದು ತಿಳಿಸಿದರು.

ಹಳೆ ಮೈಸೂರು ಹಿನ್ನಡೆಗೆ ಕಾರಣ ತಿಳಿಸಿದ ಸಿಎಂ, ಎರಡು ಪಾರ್ಟಿ ಒಂದಾಗಿ ಚುನಾವಣೆ ಮಾಡಿದರು. ಹೀಗಾಗಿ ನಮ್ಮ ನಿರೀಕ್ಷೆಯಂತೆ ಗೆಲುವು ಸಾಧಿಸಿಲ್ಲ. ನಾವು ಗೆದ್ದೇ ಬಿಟ್ಟಿದ್ದೀವಿ ಅಂತ ಹೇಳಿಲ್ಲ. ನಾವು ಗೆದ್ದಿಲ್ಲ ಎಂದು ಒಪ್ಪಿಕೊಂಡಿದ್ದೇವೆ. ಪ್ರಧಾನಿಯಾಗಿದ್ದವರು ಯಾರು ಯಾರ ಹೆಸರಲ್ಲಿ ಓಟು ಕೇಳಿದರು ಎಂದು ಪ್ರಶ್ನಿಸಿದರು.

ಗ್ಯಾರಂಟಿ ವರ್ಕೌಟ್ ಆಗಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ವರ್ಕ್ ಆಗಿದೆಯೋ, ಇಲ್ಲವೋ ಎನ್ನುವುದನ್ನು ವಿಶ್ಲೇಷಣೆ ಮಾಡಬೇಕು. ಮೇಲ್ನೋಟಕ್ಕೆ ವರ್ಕೌಟ್ ಆಗಿದೆ ಎಂಬುವುದು ತಿಳಿಯುತ್ತದೆ ಎಂದು ಹೇಳಿದರು.

ಮತದಾನ ಮತ್ತು ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಮೊದಲಿಗೆ ಕರ್ನಾಟಕ ಮತ್ತು ದೇಶದ ಮತದಾರರಿಗೆ ಧನ್ಯವಾದ ಹೇಳಲು ಬಯಸುವೆ. ಹಾಗೆಯೇ ರಾಜ್ಯದಿಂದ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ತಿಳಿಸುವೆ ಎಂದು ಹೇಳಿದರು.

ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ

ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು.

ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ ಎಂದರು.

ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.

ಇದನ್ನೂ ಓದಿ | Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಬಿಜೆಪಿ ಜನಪ್ರಿಯತೆ ಕುಸಿದಿದೆ

ಇಡೀ ದೇಶದಲ್ಲಿ ರಾಜ್ಯದಲ್ಲಿ 2019ಕ್ಕಿಂತ ಬಿಜೆಪಿ ಪ್ರಭಾವ ವಿಪರೀತ ಕುಸಿದಿದೆ ಎಂದು ಸಿಎಂ ವಿವರಿಸಿದರು. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೆ ಎನ್ನುವುದು ಅನಿಶ್ಚಿತವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಎಂ.ಸಿ. ಸುಧಾಕರ್, ಎಂಎಲ್‌ಸಿ ಸಲೀಂ ಅಹ್ಮದ್, ಗೋವಿಂದರಾಜು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Train services: ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

Train services: ಎಂಜಿನಿಯರಿಂಗ್‌ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಕಾರಣ ದೇಶಾದ್ಯಂತ ರೈಲುಗಳ ಓಡಾಟದಲ್ಲಿ ಮಾರ್ಗ ಬಾದಲಾವಣೆ, ಮರು ವೇಳಾಪಟ್ಟಿ ನಿಗದಿ ಮಾಡಲಾಗಿದೆ.

VISTARANEWS.COM


on

By

Train services
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸೇಲಂ ವಿಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಕೆಲ ರೈಲುಗಳ ಮಾರ್ಗ ಬದಲಾವಣೆ (Train services) ಮಾಡಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ಜೂನ್ 05, 06 ಮತ್ತು 13 ರಂದು ಎರ್ನಾಕುಲಂನಿಂದ ಹೊರಡುವ ರೈಲು (ರೈಲು ಸಂಖ್ಯೆ 12678) ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಇನ್ನೂ ಜೂನ್ 05, 06 ಮತ್ತು 13 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಜೂನ್ 05, 12 ಮತ್ತು 19 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಚರಿಸುವ ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 20 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ರೈಲುಗಳ ಮರು ವೇಳಾಪಟ್ಟಿ:

ಕನ ಸೊಲಿಮ್ – ಮಜೊರ್ಡಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ರೈಲುಗಳನ್ನು ಮರು ನಿಗದಿಪಡಿಸಲಾಗುವುದು.

1.ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ – ಹಜರತ್ ನಿಜಾಮುದ್ದೀನ್ ಎಕ್‌ಪ್ರೆಸ್‌ ಜೂನ್ 10ರಂದು ವಾಸ್ಕೋ-ಡ-ಗಾಮಾದಿಂದ 2 ಗಂಟೆ (120 ನಿಮಿಷ) ತಡವಾಗಿ ಹೊರಡಲಿದೆ.

2.ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌಸ್‌ನಗರ ಎಕ್ಸ್ ಪ್ರೆಸ್ ಜೂನ್ 09ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ವಾಸ್ಕೋ-ಡ-ಗಾಮಾದಲ್ಲಿ 1 ಗಂಟೆ 30 ನಿಮಿಷ (90 ನಿಮಿಷಗಳ) ತಡವಾಗಿ ಹೊರಡಲಿದೆ. ಜತೆಗೆ ಮಾರ್ಗದಲ್ಲಿ 1 ಗಂಟೆ 45 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shorapur Election Result 2024: ಸುರಪುರದಲ್ಲಿ ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ಗೆ ಜಯ

Shorapur Election Result 2024: ರಾಜಾ ವೆಂಕಟಪ್ಪ ನಾಯಕ ಅವರು ಇದೇ ವರ್ಷದ ಫೆಬ್ರವರಿ 25ರಂದು ನಿಧನರಾದ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಮೇ 7ರಂದು ಸುರಪುರದಲ್ಲಿ ಉಪ ಚುನಾವಣೆ ನಡೆದಿತ್ತು. ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಹಿನ್ನೆಲೆಯಲ್ಲಿ ಉಂಟಾಗಿದ್ದ ಅನುಕಂಪದ ಅಲೆ, ಅವರ ಕುರಿತು ಕ್ಷೇತ್ರದ ಜನರಿಗೆ ಇದ್ದ ಅಭಿಮಾನದ ಫಲವಾಗಿ ರಾಜಾ ವೇಣುಗೋಪಾಲ ನಾಯಕ್‌ ಅವರು ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Shorapur Election Result 2024
Koo

ಸುರಪುರ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಕ್ಷೇತ್ರದ ಫಲಿತಾಂಶ (Shorapur Election Result 2024) ಪ್ರಕಟವಾಗಿದ್ದು, ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ (Raja Venugopal Naik) ಅವರು ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿಯಂತೆ ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ ಅವರು 1,14,886 ಮತಗಳನ್ನು ಪಡೆದರೆ, ಬಿಜೆಪಿಯ ರಾಜುಗೌಡ (Raju Gowda) (ನರಸಿಂಹ ನಾಯಕ್) ಅವರು 96,566 ಮತಗಳನ್ನು ಪಡೆದು ಸೋಲುಂಡರು.

ವೇಣುಗೋಪಾಲ ನಾಯಕ್‌ ಅವರ ತಂದೆ ರಾಜಾ ವೆಂಕಟಪ್ಪ ಅವರು ಸುರಪುರ ಶಾಸಕರಾಗಿದ್ದರು. ಅವರು ಇದೇ ವರ್ಷದ ಫೆಬ್ರವರಿ 25ರಂದು ನಿಧನರಾದ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಮೇ 7ರಂದು ಸುರಪುರದಲ್ಲಿ ಉಪ ಚುನಾವಣೆ ನಡೆದಿತ್ತು. ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಹಿನ್ನೆಲೆಯಲ್ಲಿ ಉಂಟಾಗಿದ್ದ ಅನುಕಂಪದ ಅಲೆ, ಅವರ ಕುರಿತು ಕ್ಷೇತ್ರದ ಜನರಿಗೆ ಇದ್ದ ಅಭಿಮಾನದ ಫಲವಾಗಿ ರಾಜಾ ವೇಣುಗೋಪಾಲ ನಾಯಕ್‌ ಅವರಿಗೆ ಗೆಲುವು ದಕ್ಕಿದೆ ಎಂದೇ ಹೇಳಲಾಗುತ್ತಿದೆ.

Election Results 2024

2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ್‌ ಅವರ ತಂದೆ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರು ರಾಜು ಗೌಡ ವಿರುದ್ಧ ‌25 ಸಾವಿರ ಮತಗಳ ಅಂತರದಲ್ಲಿ ಗೆಲುವ ಸಾಧಿಸಿದ್ದರು. ರಾಜಾ ವೆಂಕಟಪ್ಪ ನಾಯಕ ಅವರು 1,13,559 ಮತಗಳನ್ನು ಪಡೆದಿದ್ದರೆ, ರಾಜುಗೌಡ ಅವರು 88,336 ಮತಗಳನ್ನು ಮಾತ್ರ ಪಡೆಯಲು ಶಕ್ತರಾಗಿದ್ದರು. ಇದಕ್ಕೂ ಮೊದಲು ರಾಜು ಗೌಡ ಅವರು ಸುರಪುರ ಕ್ಷೇತ್ರದ ಶಾಸಕರಾಗಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ರಾಜು ಗೌಡ ಅವರು ರಾಜಾ ವೆಂಕಟಪ್ಪ ನಾಯಕ ಅವರ ವಿರುದ್ಧ ಸುಮಾರು 22 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ರಾಜು ಗೌಡ ಅವರು 1,04,426 ಮತಗಳನ್ನು ಪಡೆದಿದ್ದರು. ರಾಜಾ ವೆಂಕಟಪ್ಪ ನಾಯಕ ಅವರು 81,858 ಮತ ಪಡೆದಿದ್ದರು. ರಾಜಾ ವೆಂಕಟಪ್ಪ ನಾಯಕ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದು, ಸುರಪುರ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Narendra Modi : ವಾರಾಣಸಿಯಲ್ಲೂ ಮೋದಿ ಜನಪ್ರಿಯತೆ ಮಸುಕು; ಗೆಲುವಿನ ಅಂತರ ಕೇವಲ 1.5 ಲಕ್ಷ ಮತಗಳು

Continue Reading
Advertisement
Narendra Modi Election Live
ದೇಶ1 min ago

Narendra Modi Election Live: ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Karnataka weather Forecast
ಮಳೆ6 mins ago

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Narendra Modi Election
ದೇಶ19 mins ago

Narendra Modi Election: 3ನೇ ಸಲ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ; ರಿಸಲ್ಟ್ ಬಳಿಕ ಮೋದಿ ಭಾವುಕ ಪೋಸ್ಟ್

AP Election Results 2024
ದೇಶ34 mins ago

AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

Venu Swamy Wrong Prediction on Jagan in AP Polls
ಟಾಲಿವುಡ್35 mins ago

Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

Karnataka Election Results 2024
ಕರ್ನಾಟಕ35 mins ago

Karnataka Election Results 2024: ಮೋದಿ ಜನಪ್ರಿಯತೆ ಕಡಿಮೆ ಆಗಿದೆ, ಕಾಂಗ್ರೆಸ್‌ ವೋಟ್‌ ಶೇರ್ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Train services
ಬೆಂಗಳೂರು36 mins ago

Train services: ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

BJP Vote Share
ಪ್ರಮುಖ ಸುದ್ದಿ37 mins ago

BJP Vote Share : ಬಿಜೆಪಿ ಶೇಕಡಾವಾರು ಮತ ಏರಿದರೂ 36 ಸೀಟುಗಳು ನಷ್ಟ !

Election Results 2024 NDA 400
ಪ್ರಮುಖ ಸುದ್ದಿ37 mins ago

Election Results 2024: 400 ಸೀಟ್‌ ಗಳಿಸುವ ಎನ್‌ಡಿಎ ಕನಸು ನುಚ್ಚು ನೂರಾದದ್ದು ಹೇಗೆ?

Election Results 2024
ಕ್ರೀಡೆ56 mins ago

Election Results 2024: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ ಪುತ್ರನಿಗೆ ಭರ್ಜರಿ ಜಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ13 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌