Horoscope Today |‌ ಆರು ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today |‌ ಆರು ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ಷಷ್ಠಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

rashi bhavishya today in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (13-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ಷಷ್ಠಿ 18:16 ವಾರ: ಶುಕ್ರವಾರ
ನಕ್ಷತ್ರ: ಉತ್ತರಾ 16:34 ಯೋಗ: ಶೋಭನ 12:43
ಕರಣ: ವಣಿಜ 18:16 ಇಂದಿನ ವಿಶೇಷ: ವಿಶ್ವ ರೇಡಿಯೋ ದಿನ.
ಅಮೃತಕಾಲ: ಬೆಳಗ್ಗೆ 08 ಗಂಟೆ 44 ನಿಮಿಷದಿಂದ 10 ಗಂಟೆ 29 ನಿಮಿಷದವರೆಗೆ.

ಸೂರ್ಯೋದಯ: 06 : 45    ಸೂರ್ಯಾಸ್ತ: 0೬ : 11

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ನಿಮ್ಮ ಸುಲಭದ ಕೆಲಸ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ನೀಡುತ್ತದೆ. ಆರೋಗ್ಯ ಪರಿಪೂರ್ಣ, ಹಣಕಾಸು ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾರೆ, ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಅವರ ಕೋಪ ಮತ್ತು ಮಾತುಗಳನ್ನು ನೀವು ಸರಿಯಾಗಿ ಅರ್ಥಮಾಡಿಕೊಳ್ಳುವುದು ಉತ್ತಮ.  ಹಳೆ ಸ್ನೇಹಿತರೊಂದಿಗೆ ಭೇಟಿ, ಮಾತನಾಡಲು ಯೋಚಿಸಬಹುದು. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಣೀಯ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ  ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ವಾಹನ ಚಾಲನೆ ಮಾಡುವಾಗ ಜಾಗ್ರತೆ ಅವಶ್ಯಕ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಮನದ ಬಯಕೆ ಈಡೇರುವ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಭೂಮಿ ಸಂಬಂಧಿ ವ್ಯವಹಾರ ನಡೆಯುವ ಸಾಧ್ಯತೆ. ಅದು ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿ ಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಉದ್ಯೋಗಿಗಳಿಗೆ ನಿಧಾನಗತಿಯಿಂದಾಗಿ ಸ್ವಲ್ಪ ಒತ್ತಡ ತರುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೇನಿಸುವುದು. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಅನಿವಾರ್ಯ ಕಾರಣಗಳಿಂದ ನೀವು ಖರ್ಚು ಮಾಡುವ ಸಾಧ್ಯತೆ. ಇದರಿಂದಾಗಿ ಮನಸ್ಸಿಗೆ ಕೊಂಚ ಬೇಸರ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಹೆಚ್ಚಿನ ಸಮಯವನ್ನು ವಿನಿಯೋಗಿಸಬೇಡಿ. ಆರೋಗ್ಯ ಪರಿಪೂರ್ಣ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ತುಲಾ: ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಸಾಧ್ಯತೆ. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡುವಂತೆ ಮಾಡಬಹುದು. ಅದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣ, ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು, ಆರ್ಥಿಕ ಸ್ಥಿತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದದ್ದನ್ನೆಲ್ಲ ಮಾಡುತ್ತಾರೆ. ಇಂದು ಪ್ರೀತಿಯಲ್ಲಿ ನಿಮ್ಮದು ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಕನಸೊಂದನ್ನು ಈಡೇರಿಸುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಹಣಕಾಸು ಹೂಡಿಕೆ ಬಗೆಗೆ ಆಲೋಚನೆ ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ನಿಮ್ಮ ಆಪ್ತರೊಂದಿಗೆ ಖಾಸಗಿ ವಿಷಯ ಹಂಚಿಕೊಳ್ಳುವ ಸಾಧ್ಯತೆ. ಆದರೆ ಗೌಪ್ಯ ವಿಷಯಗಳು ಗೌಪ್ಯವಾಗಿದ್ದರೆ ಚೆನ್ನ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು. ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ನಿಮ್ಮ ಅಪಾರ ವಿಶ್ವಾಸ ನಿಮಗೆ ಯಶಸ್ಸು ತಂದುಕೊಡಲಿದೆ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟಾಗುವ ಸಾಧ್ಯತೆ. ನೀವು ಅತೀ ಉದಾರಿಯಾಗಿದ್ದಲ್ಲಿ, ನಿಮ್ಮ ನಿಕಟ ಜನರು ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಸ್ನೇಹಿತರೊಬ್ಬರೊಂದಿಗೆ ಇಂದು ಸಮಯವನ್ನು ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವೃಥಾ ಗಾಳಿಯಲ್ಲಿ ಗೋಪುರ ಕಟ್ಟಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ. ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Weekly Horoscope | ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ ಎಂದು ಕಾಂಗ್ರೆಸ್‌ ಮಾಜಿ ನಾಯಕ ಆಚಾರ ಪ್ರಮೋದ್‌ ಕೃಷ್ಣಂ ಹೇಳಿದರು.

VISTARANEWS.COM


on

Acharya Pramod Krishnam
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ (Rahul Gandhi) ಗಾಂಧಿ ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಅವರು ಕಾಂಗ್ರೆಸ್‌ ಜತೆಗೆ ಇಂಡಿಯಾ ಒಕ್ಕೂಟವನ್ನೂ (INDIA Bloc) ಸಂಸತ್‌ನಲ್ಲಿ ಪ್ರತಿನಿಧಿಸಲಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್‌ನಂತೆ ಪ್ರತಿಪಕ್ಷಗಳನ್ನೂ ರಾಹುಲ್‌ ಗಾಂಧಿ ನಿರ್ನಾಮ ಮಾಡಲಿದ್ದಾರೆ” ಎಂದು ಅವರು ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಯೊಂದಿಗೆ ಆಚಾರ್ಯ ಪ್ರಮೋದ್‌ ಕೃಷ್ಣಂ ಮಾತನಾಡಿದರು. “ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ” ಎಂದು ಹೇಳಿದರು. ಸಂಸತ್‌ನಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಜೈ ಪ್ಯಾಲೆಸ್ತೀನ್‌ ಎಂದು ಅಸಾದುದ್ದೀನ್‌ ಓವೈಸಿ ಘೋಷಣೆ ಕೂಗಿದ ಕುರಿತು ಪ್ರತಿಕ್ರಿಯಿಸಿದ ಅವರು, “ಇದು ಭಾರತ ಸಂಸತ್ತು. ಭಾರತದ ಸಂಸತ್‌ನಲ್ಲಿ ಹಾಗೆ ಘೋಷಣೆ ಕೂಗುವುದು ಸರಿಯಲ್ಲ. ಅವರು ಕೂಡಲೇ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಇವರನ್ನು ಕೆಲವು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು. ಇದಾದ ಬಳಿಕ ನರೇಂದ್ರ ಮೋದಿ ಅವರು ಕಲ್ಕಿ ದೇವಾಲಯಕ್ಕೆ ಭೇಟಿ ನೀಡಿ, ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಹೊಗಳಿದ್ದರು.

“ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕಾಗಿ ಹೋರಾಡಿದರು. ಇದಕ್ಕೂ ಮೊದಲಿನ ಸರ್ಕಾರಗಳು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಅವಕಾಶ ಕೊಡಲಿಲ್ಲ. ಕಾನೂನು ಹೋರಾಟವನ್ನೂ ಪ್ರಮೋದ್‌ ಕೃಷ್ಣಂ ಅವರು ಮಾಡಬೇಕಾಯಿತು. ಕಲ್ಕಿ ಮಂದಿರ ನಿರ್ಮಾಣವಾದರೆ ಕಾನೂನು ಸುವ್ಯಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಲ್ಕಿ ಮಂದಿರ ನಿರ್ಮಾಣಕ್ಕಶಂಕುಸ್ತಾಪನೆ ನೆರವೇರಿಸಲಾಗುತ್ತದೆ” ಎಂದು ಪ್ರತಿಪಕ್ಷಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ: Parliament Session 2024: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಹುಲ್‌ ಗಾಂಧಿ ಮಾಡಿದ್ದೇನು ಗೊತ್ತಾ? ವೈರಲಾಯ್ತು ವಿಡಿಯೋ

Continue Reading

Latest

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Viral Video: ಆನ್‌ಲೈನ್‌ ಮೂಲಕ ಫುಡ್ ತರಿಸಿಕೊಂಡು ತಿನ್ನುವುದು ಈಗ ಸರ್ವೆಸಾಮಾನ್ಯವಾಗಿ ಬಿಟ್ಟಿದೆ. ಫುಡ್ ಡೆಲಿವರಿ ಬಾಯ್ ಮಾಡಿದ ದುಷ್ಕೃತ್ಯದ ವಿಡಿಯೊವೊಂದು ಈಗ ಎಲ್ಲೆಡೆ ವೈರಲ್ ಆಗಿದೆ. ಜೊಮ್ಯಾಟೊ ಡೆಲಿವರಿ ಬಾಯ್ ಆರ್ಡರ್ ಅನ್ನು ಮನೆಗೆ ತಲುಪಿಸಲು ಮನೆಯ ಬಾಗಿಲಿಗೆ ಬಂದಿದ್ದಾನೆ. ನಂತರ ಆತ ಆರ್ಡರ್ ನೀಡಿ ಮರಳುವಾಗ ಮನೆಯ ಬಾಗಿಲಿ ಬಳಿ ಇದ್ದ ಆಹಾರದ ಪ್ಯಾಕೆಟ್ ಒಂದನ್ನು ಗಮನಿಸಿದ್ದಾನೆ. ಮನೆಯವರು ಒಳಗೆ ಹೋದ ತಕ್ಷಣ ಅದನ್ನು ಎತ್ತಿಕೊಂಡು ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಯಾವುದೇ ಆನ್‌ಲೈನ್ ಆ್ಯಪ್‌ಗಳಲ್ಲಿ ನೀವು ಯಾವುದೇ ವಸ್ತುಗಳನ್ನು ಆರ್ಡರ್ ಮಾಡಿದರೂ ಅದನ್ನು ಅವರು ಮನೆ ಬಾಗಿಲಿಗೆ ತಂದು ನೀಡುತ್ತಾರೆ ನಿಜ. ಆದರೆ ಕೆಲವೊಮ್ಮೆ ಡೆಲಿವರಿ ಬಾಯ್ಸ್ ನಿಂದ ಕೆಲವು ದುರ್ಘಟನೆಗಳು ನಡೆಯುತ್ತಿರುವುದನ್ನು ನೀವು ಕೇಳಿರಬಹುದು. ಹಾಗಾಗಿ ಡೆಲಿವರಿ ಬಾಯ್ಸ್ ಬಗ್ಗೆ ಎಚ್ಚರಿಕೆಯಿಂದಿರಿ. ಯಾಕೆಂದರೆ ಅಂತಹದೊಂದು ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಜೊಮ್ಯಾಟೊ ಡೆಲಿವರಿ ಬಾಯ್ ಮಾಡಿದ ಕಳ್ಳತನದ ಕೃತ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಜೂನ್ 25ರಂದು ಜೊಮ್ಯಾಟೊ ಡೆಲಿವರಿ ಬಾಯ್ ಆರ್ಡರ್ ಅನ್ನು ಮನೆಗೆ ತಲುಪಿಸಲು ಮನೆಯ ಬಾಗಿಲಿಗೆ ಬಂದಿದ್ದಾನೆ. ನಂತರ ಆತ ಆರ್ಡರ್ ನೀಡಿ ಮರಳುವಾಗ ಮನೆಯ ಬಾಗಿಲಿ ಬಳಿ ಇದ್ದ ಆಹಾರದ ಪ್ಯಾಕೆಟ್ ಒಂದನ್ನು ಗಮನಿಸಿದ್ದಾನೆ. ಮನೆಯವರು ಒಳಗೆ ಹೋದ ತಕ್ಷಣ ಅದನ್ನು ಎತ್ತಿಕೊಂಡು ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪತ್ರಕರ್ತ ಆದಿತ್ಯ ಕಾಲ್ರಾ ಎಂಬುವವರು ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಕಾಮೆಂಟ್ ಮಾಡಿದ್ದಾರೆ. ಇದನ್ನು ಗಮನಿಸಿದ ಜೊಮ್ಯಾಟೊ ಕೇರ್ ಈ ಬಗ್ಗೆ ಕ್ಷಮೆ ಯಾಚಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. “ಇದು ಸಂಭವಿಸಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಅಂತಹ ವಿಷಯಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಮತ್ತು ಅಂತಹ ಘಟನೆಗಳಿಗೆ ಕಾರಣವಾದವರ ವಿರುದ್ಧ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜೊಮ್ಯಾಟೊ ಕೇರ್ ಭರವಸೆ ನೀಡಿದ್ದಾರೆ. ಹಾಗೇ ಇದಕ್ಕೆ ಸಂಬಂಧಪಟ್ಟ ವಿವರಗಳನ್ನು ಕಳುಹಿಸಿ, ಇದರಿಂದ ನಾವು ತ್ವರಿತವಾಗಿ ತನಿಖೆ ಮಾಡಬಹುದು ಎಂಬುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

Viral Video

ಜೊಮ್ಯಾಟೊ ಡೆಲಿವರಿ ಬಾಯ್ಸ್ ನ ಕಳ್ಳತನದ ಪ್ರಕರಣ ಇದೇ ಮೊದಲಲ್ಲ. ಇದಕ್ಕೂ ಮೊದಲು ಜೊಮ್ಯಾಟೊ ಡೆಲಿವರಿ ಬಾಯ್ ಒಬ್ಬ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾಯುತ್ತಿರುವಾಗ ಗ್ರಾಹಕರು ಆರ್ಡರ್ ಮಾಡಿದ ಬಾಕ್ಸ್ ನಿಂದ ಫುಡ್ ತೆಗೆದು ತಿಂದಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಿಂದ ಜೊಮ್ಯಾಟೊ ಆಹಾರ ಸುರಕ್ಷತಾ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಕಳವಳ ಉಂಟಾಗಿತ್ತು. ಹಾಗಾಗಿ ಜೊಮ್ಯಾಟೊದಿಂದ ವಸ್ತುಗಳನ್ನು ಆರ್ಡರ್ ಮಾಡುವಾಗ ಗ್ರಾಹಕರು ಬಹಳ ಎಚ್ಚರಿಕೆ ಇರುವುದು ಉತ್ತಮ. ಇಲ್ಲವಾದರೆ ಇದರಿಂದ ನೀವು ಸಮಸ್ಯೆ ಎದುರಿಸಬೇಕಾಗುತ್ತದೆ.

Continue Reading

Latest

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Viral Video : ಪ್ರೀತಿಸಿದ ಹುಡುಗಿಯ ಮನಮೆಚ್ಚಿಸುವುದಕ್ಕಾಗಿ ಹುಡುಗರು ಏನೆಲ್ಲಾ ಸರ್ಕಸ್ ಮಾಡುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ತನ್ನನ್ನು ನೋಡಲು ಬರುವ ಪ್ರೇಯಸಿಯನ್ನು ಪ್ರಿಯಕರನೊಬ್ಬ ಸ್ವಾಗತಿಸಿದ ಪರಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೊ ನೋಡಿ ಕೆಲ ಹುಡುಗಿಯರು ಮನಸ್ಸಿನಲ್ಲಿಯೇ ʼನನಗೂ ಒಬ್ಬ ಗೆಳೆಯಬೇಕುʼ…. ಎಂಬ ಹಾಡು ಗುನುಗುವಂತೆ ಆಗಿದೆ. ತನ್ನನ್ನು ನೋಡಲ್ಛಿಸಿದ ಪ್ರೇಯಸಿಗಾಗಿ ಶ್ರೀಮಂತ ಉದ್ಯಮಿಯೊಬ್ಬ ಹೆಲಿಕಾಪ್ಟರ್ ಕಳುಹಿಸಿದ್ದು ಅಲ್ಲದೇ, ಆಕೆ ಇಳಿಯಲು ಕಾರ್ಪೆಟ್ ಬದಲು ಹಣದ ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ!

VISTARANEWS.COM


on

Viral Video
Koo

ದುಬೈ: ಹಣ ಜೀವನದಲ್ಲಿ ತುಂಬಾ ಮೌಲ್ಯಯುತವಾದುದು. ಹಾಗಾಗಿ ಹಣವನ್ನು ಖರ್ಚು ಮಾಡಲು ಜನರು ಮೀನಾಮೇಷ ಎಣಿಸುತ್ತಾರೆ. ಆದರೆ ಕೆಲವು ಹುಡುಗರು ಮಾತ್ರ ತಮ್ಮ ಹುಡುಗಿಗಾಗಿ ಏನು ಮಾಡಲು ಕೂಡ ಸಿದ್ಧರಿರುತ್ತಾರೆ. ಇದಕ್ಕೆ ನಿರ್ದಶನ ಎಂಬಂತೆ ಇಲ್ಲೊಂದು ಘಟನೆ ನಡೆದಿದ್ದು, ತನ್ನ ಪ್ರೇಯಸಿಗಾಗಿ ಪ್ರಿಯಕರನೊಬ್ಬ ಹಣದ ಹೊಳೆಯನ್ನೇ ಹರಿಸಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ವಿಡಿಯೊದಲ್ಲಿ ಶ್ರೀಮಂತ ಉದ್ಯಮಿಯೊಬ್ಬ ಪ್ರೇಯಸಿಯನ್ನು ಹೆಲಿಕಾಪ್ಟರ್ ಮೂಲಕ ಕರೆಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಆಕೆ ಹೆಲಿಕಾಪ್ಟರ್‌ನಿಂದ ಇಳಿಯಲು ಕಾರ್ಪೆಟ್ ಬದಲು ಹಣದ ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ. ಆ ಯುವತಿ ಹಣದ ಕಂತಿನ ಮೇಲೆ ರಾಣಿಯಂತೆ ಅವನ ಕೈ ಹಿಡಿದುಕೊಂಡು ನಡೆದುಬರುತ್ತಿದ್ದಾಳೆ. ಕಂತೆ ಕಂತೆ ಹಣ ನೋಡಿದರೆ ಯಾರಿಗೆ ತಾನೆ ದಂಗಾವುದಿಲ್ಲ ಹೇಳಿ. ಹಾಗಾಗಿ ಜನರು ಇದನ್ನು ಕಂಡು ಜನರು ಹೌಹಾರಿದ್ದಾರೆ.

ಆ ಐಷರಾಮಿ ಉದ್ಯಮಿ ದುಬೈನ ಸರ್ಗಿ ಕೊಸೆಂಕೋ ಎಂಬುದಾಗಿ ತಿಳಿದುಬಂದಿದೆ. ಈತ ತನ್ನ ಇನ್ ಸ್ಟಾಗ್ರಾಂನಲ್ಲಿ ಇದನ್ನು ಪೋಸ್ಟ್ ಮಾಡಿದ್ದಾನೆ. ಜನರು ಉದ್ಯಮಿಯ ಐಷಾರಾಮಿ ಜೀವನ ಕಂಡು ದಂಗಾಗಿದ್ದಾರೆ. ವರದಿ ಪ್ರಕಾರ, ಯುವತಿ ಹಾಗೂ ಸರ್ಗಿ ಕೊಸೆಂಕೋ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಯುವತಿಗೆ ತನ್ನ ಪ್ರಿಯತಮನನ್ನು ನೋಡುವ ಆಸೆಯಾಗಿ ಆತನಿಗೆ ಕಾಲ್ ಮಾಡಿ ವಿಚಾರ ತಿಳಿಸಿದ್ದಾಳೆ. ಆಗ ಆತ ಆಕೆಯನ್ನು ಕರೆದುಕೊಂಡು ಬರಲು ತನ್ನ ಹೆಲಿಕಾಪ್ಟರ್ ಕಳುಹಿಸಿದ್ದಲ್ಲದೇ ಮನೆಗೆ ಬಂದ ಆಕೆಗೆ ಹೆಲಿಕಾಪ್ಟರ್ ನಿಂದ ಇಳಿಯಲು ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ. ಅಷ್ಟೇ ಅಲ್ಲದೇ ಈ ಹಣದ ಮೆಟ್ಟಿಲು ಆತನ ಮನೆಯ ತನಕ ಹಾಕಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಜನರು ಆಶ್ಚರ್ಯಚಕಿತರಾಗಿದ್ದು, ನಮಗೆ ಆ ಕಂತೆ ಕಂತೆ ನೋಟು ಬೇಡ. ಅದರ ಅಕ್ಕಪಕ್ಕ ಬಿದ್ದಿರುವ ನೋಟುಗಳು ಸಿಕ್ಕರೆ ಸಾಕು, ನೆಮ್ಮದಿಯ ಜೀವನ ಕಟ್ಟಿಕೊಳ್ಳುವುದಾಗಿ ಆಸೆ ವ್ಯಕ್ತಪಡಿಸಿದ್ದಾರೆ.

Continue Reading

ವಾಣಿಜ್ಯ

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

5G Spectrum: ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. ಇದರೊಂದಿಗೆ 5ಜಿ ತರಂಗಗಳ ಹರಾಜು ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಸರ್ಕಾರಕ್ಕೆ 11,300 ಕೋಟಿ ರೂ. ಆದಾಯ ಲಭಿಸಿದೆ.

VISTARANEWS.COM


on

5G Spectrum
Koo

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ 5ಜಿ ತರಂಗಗಳ ಹರಾಜು (5G Spectrum) ಪ್ರಕ್ರಿಯೆ ಭಾನುವಾರ ಮುಕ್ತಾಯಗೊಂಡಿದೆ. ಕೇಂದ್ರ ಸರ್ಕಾರವು (Central Government) 11,300 ಕೋಟಿ ರೂಪಾಯಿಗೆ 5ಜಿ ತರಂಗ ಹರಾಜು ಮಾಡಿದ್ದು, ದೇಶದ ಪ್ರಮುಖ ಖಾಸಗಿ ಟೆಲಾಕಾಂ ಕಂಪನಿಯಾದ ಭಾರ್ತಿ ಏರ್‌ಟೆಲ್‌ (Bharti Airtel) 6,857 ಕೋಟಿ ರೂ.ಗೆ ತರಂಗಗಳನ್ನು ಖರೀದಿಸುವ (5G Spectrum Auctions) ಮೂಲಕ ಹರಾಜಿನಲ್ಲಿ ಬೃಹತ್‌ ಬಿಡ್ಡರ್‌ ಎನಿಸಿದೆ.

ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. “ಗ್ರಾಹಕರಿಗೆ ಅತ್ಯುತ್ತಮ, ಅತ್ಯಾಧುನಿಕ ಹಾಗೂ ಕ್ಷಿಪ್ರಗತಿಯ ಸೇವೆಗಳನ್ನು ಒದಗಿಸುವ ದಿಸೆಯಲ್ಲಿ ಭಾರ್ತಿ ಏರ್‌ಟೆಲ್‌ ಕಂಪನಿಯು 5ಜಿ ತರಂಗಗಳನ್ನು ಖರೀದಿಸಿದೆ. ಇದರಿಂದ ದೇಶದ ಮೂಲೆ ಮೂಲೆಗಳಿಗೂ 5ಜಿ ಸೇವೆಯನ್ನು ವಿಸ್ತರಿಸುವ ನಮ್ಮ ಉದ್ದೇಶಕ್ಕೆ ಈಗ ಬಲ ಬಂದಂತಾಗಿದೆ” ಎಂದು ಹರಾಜು ಪ್ರಕ್ರಿಯೆ ಮುಗಿದ ಬಳಿಕ ಕಂಪನಿಯ ಎಂಡಿ ಹಾಗೂ ಸಿಇಒ ಗೋಪಾಲ್‌ ವಿಠಲ್‌ ಮಾಹಿತಿ ನೀಡಿದ್ದಾರೆ.

ತರಂಗಗಳ ಹರಾಜು ಮೊತ್ತ ಕುಸಿತ

ತರಂಗಗಳ ಹರಾಜು ಪ್ರಕ್ರಿಯೆಗೆ 2022ಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಮೊತ್ತ ಲಭಿಸಿದೆ. 2022ರಲ್ಲಿ 72,097 ಎಂಎಚ್‌ಝಡ್‌ ರೇಡಿಯೊ ತರಂಗಗಳ ಮಾರಾಟದಿಂದ 1.5 ಲಕ್ಷ ಕೋಟಿ ರೂ. ಆದಾಯ ಲಭಿಸಿತ್ತು. ಆ ವರ್ಷದಲ್ಲಿ ಕೇಂದ್ರ ಸರ್ಕಾರವು ಮೊದಲ ಬಾರಿಗೆ 5ಜಿ ತರಂಗಗಳ ಹರಾಜು ನಡೆಸಿತ್ತು. ಆ ವರ್ಷ ಸರ್ಕಾರವು ತರಂಗಗಳ ಹರಾಜಿನಿಂದ ದಾಖಲೆ ಮೊತ್ತದ ಆದಾಯ ಗಳಿಸಿತ್ತು. ಮುಕೇಶ್‌ ಅಂಬಾನಿ ಅವರ ಜಿಯೋ ಒಂದೇ ಸುಮಾರು 88 ಸಾವಿರ ಕೋಟಿ ರೂ. ಕೊಟ್ಟು 5ಜಿ ತರಂಗಗಳನ್ನು ಖರೀದಿಸಿತ್ತು.

ಎರಡನೇ ದಿನದ (ಬುಧವಾರ-ಜೂನ್‌ 26) ಹರಾಜಿನಲ್ಲಿ ಕೇಂದ್ರ ಸರ್ಕಾರವು ಸುಮಾರು 96,238 ಕೋಟಿ ರೂ. ಮೌಲ್ಯದ ತರಂಗಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು. ಆದರೆ, ಸರ್ಕಾರದ ಗುರಿಯಲ್ಲಿ ಶೇ.12ರಷ್ಟು ಗುರಿ ಮಾತ್ರ ಸಾಧಿಸಲಾಯಿತು ಎಂದು ತಿಳಿದುಬಂದಿದೆ. ದೇಶದಲ್ಲಿ ಜಿಯೋ, ಏರ್‌ಟೆಲ್‌ ಸೇರಿ ಹಲವು ಟೆಲಿಕಾಮ್‌ ಕಂಪನಿಗಳು 5 ಜಿ ಸೇವೆಗಳನ್ನು ಒದಗಿಸುತ್ತಿವೆ. ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆಯು ಲಭ್ಯವಿದೆ. ಈಗಾಗಲೇ ಕೇಂದ್ರ ಸರ್ಕಾರವು 6ಜಿ ಅಳವಡಿಕೆಗೆ ಚಿಂತನೆ ನಡೆಸಿದೆ.

ಇದನ್ನೂ ಓದಿ: 5G India: ಭಾರತದ 5ಜಿ ವೇಗಕ್ಕೆ ಸಾಟಿ ಇಲ್ಲ; ನಮ್ಮ ಸ್ಪೀಡ್‌ ಮುಂದೆ ಜಪಾನ್‌, ಬ್ರಿಟನ್‌ ಕೂಡ ಹಿಂದೆ!

Continue Reading
Advertisement
Acharya Pramod Krishnam
ದೇಶ24 mins ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest37 mins ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ44 mins ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest46 mins ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ48 mins ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್52 mins ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ54 mins ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Rain News
ಕರ್ನಾಟಕ57 mins ago

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Money Guide
ಮನಿ-ಗೈಡ್1 hour ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ1 hour ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌