ವಿಸ್ತಾರ Explainer | ನೇಪಾಳದಲ್ಲಿ ಪದೇಪದೆ ವಿಮಾನ ದುರಂತ ಸಂಭವಿಸುವುದೇಕೆ? ಇದುವರೆಗಿನ ಭೀಕರ ದುರಂತ ಯಾವವು? - Vistara News

ಪ್ರಮುಖ ಸುದ್ದಿ

ವಿಸ್ತಾರ Explainer | ನೇಪಾಳದಲ್ಲಿ ಪದೇಪದೆ ವಿಮಾನ ದುರಂತ ಸಂಭವಿಸುವುದೇಕೆ? ಇದುವರೆಗಿನ ಭೀಕರ ದುರಂತ ಯಾವವು?

ನೇಪಾಳಕ್ಕೂ, ವಿಮಾನ ದುರಂತಗಳಿಗೂ ಇನ್ನಿಲ್ಲದ ನಂಟಿದೆ. ಕಳೆದ ಮೂರು ದಶಕಗಳಲ್ಲಿ ಸಂಭವಿಸಿದ ವಿಮಾನ ದುರಂತಗಳನ್ನು ನೋಡಿದರೆ ಈ ಮಾತು ನಿಜವೆನಿಸುತ್ತದೆ.

VISTARANEWS.COM


on

Nepal Plane Crash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ ವೇ ಬಳಿಯ ಕಣಿವೆಯಲ್ಲಿ ವಿಮಾನ ಪತನವಾಗಿದ್ದು, ಐವರು ಭಾರತೀಯರು ಸೇರಿ ವಿಮಾನದಲ್ಲಿದ್ದ ಎಲ್ಲ 72 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದುವರೆಗೆ 40ಕ್ಕೂ ಅಧಿಕ ಶವಗಳು ಸಿಕ್ಕಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದೊಂದೇ ಅಲ್ಲ, ನೇಪಾಳದಲ್ಲಿ ಆಗಾಗ ವಿಮಾನ ಪತನಗಳು ಸಂಭವಿಸುತ್ತಲೇ ಇರುತ್ತವೆ. ನೂರಾರು ಜನ ದುರಂತಕ್ಕೆ ಬಲಿಯಾಗುತ್ತಲೇ ಇರುತ್ತಾರೆ. ಹಾಗಾದರೆ, ನೇಪಾಳದಲ್ಲಿಯೇ ಏಕೆ ಹೆಚ್ಚಿನ ವಿಮಾನಗಳು ಪತನವಾಗುತ್ತವೆ? ಇದಕ್ಕೆ ಕಾರಣಗಳೇನು? ಇದುವರೆಗೆ ಸಂಭವಿಸಿದ ಪ್ರಮುಖ ವಿಮಾನ ದುರಂತಗಳು ಯಾವವು ಎಂಬುದರ ಸಂಕ್ಷಿಪ್ತ ಮಾಹಿತಿಯೇ ಇಂದಿನ ವಿಸ್ತಾರ Explainer.

ವಿಮಾನ ಪತನಕ್ಕೆ ಕಾರಣಗಳೇನು?
ನೇಪಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಮಾನ ದುರಂತ ಸಂಭವಿಸಲು ಹತ್ತಾರು ಕಾರಣಗಳಿವೆ. ನೇಪಾಳವು ಪರ್ವತ ಭೂಪ್ರದೇಶವಾದ ಕಾರಣ ವಿಮಾನಗಳ ಹಾರಾಟ, ಲ್ಯಾಂಡಿಂಗ್‌ಗೆ ಕಷ್ಟವಾಗುತ್ತದೆ. ಶಿಖರಗಳ ಬಳಿಯೇ ವಿಮಾನ ನಿಲ್ದಾಣಗಳು ಇರುವುದರಿಂದ ಟೇಕ್‌ಆಫ್‌ ಹಾಗೂ ಲ್ಯಾಂಡ್‌ ಆಗುವಾಗ ಹೆಚ್ಚಿನ ದುರಂತಗಳು ಸಂಭವಿಸುತ್ತಿವೆ. ಇನ್ನು ನೇಪಾಳ ಸರ್ಕಾರ ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಗಳು ಹೊಸ ಹೊಸ ವಿಮಾನಗಳ ಮೇಲೆ ಹೂಡಿಕೆ ಮಾಡದಿರುವುದು, ಮೂಲ ಸೌಕರ್ಯಗಳ ಕೊರತೆ ಹಾಗೂ ವಿಮಾನಯಾನ ಕ್ಷೇತ್ರದ ಮೇಲೆ ಸರಿಯಾದ ನಿಯಂತ್ರಣ ಇರದ ಕಾರಣ ಹೆಚ್ಚಿನ ದುರಂತಗಳು ಸಂಭವಿಸುತ್ತಿವೆ ಎಂದು ವರದಿಗಳು ತಿಳಿಸಿವೆ.

2022ರಲ್ಲಿ ಸಂಭವಿಸಿದ ವಿಮಾನ ದುರಂತ.

ನೇಪಾಳ ಏರ್‌ಲೈನ್ಸ್‌ಗೆ ಐರೋಪ್ಯ ಒಕ್ಕೂಟ ನಿಷೇಧ
ನೇಪಾಳ ಮೂಲದ ಏರ್‌ಲೈನ್ಸ್‌ಗಳ ವಿಮಾನಗಳ ಹಾರಾಟವನ್ನೇ ಐರೋಪ್ಯ ಒಕ್ಕೂಟ ನಿಷೇಧಿಸಿದೆ. 2008ರಿಂದ 2012ರ ಅವಧಿಯಲ್ಲಿ ನೇಪಾಳ ವಿಮಾನಗಳ ಪತನ ಹೆಚ್ಚಾದ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಐರೋಪ್ಯ ಒಕ್ಕೂಟವು ನೇಪಾಳ ವಿಮಾನಗಳು ಸದಸ್ಯ ರಾಷ್ಟ್ರಗಳ ವಾಯುಮಾರ್ಗವನ್ನು ಬಳಸುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. 2013ರಿಂದಲೂ ನೇಪಾಳ ವಿಮಾನಗಳ ಹಾರಾಟವನ್ನು ನಿಷೇಧಿಸಿದ್ದು, ಈಗಲೂ ನಿರ್ಬಂಧ ಜಾರಿಯಲ್ಲಿದೆ. ನೇಪಾಳಕ್ಕೆ ಇದು ಹಿನ್ನಡೆಯಾಗಿದ್ದು, ನಿರ್ಬಂಧಿದ ಹೊರಬರಲು ಹಲವು ಪ್ರಯತ್ನ ನಡೆಸಿದರೂ ಸಾಧ್ಯವಾಗಿಲ್ಲ.

30 ವರ್ಷದಲ್ಲಿ 27 ವಿಮಾನ ದುರಂತ
ನೇಪಾಳದಲ್ಲಿ ಕಳೆದ ಮೂರು ದಶಕಗಳಲ್ಲಿ ಭೀಕರ ದುರಂತಗಳು ಸಂಭವಿಸಿವೆ. 30 ವರ್ಷಗಳಲ್ಲಿ 27 ವಿಮಾನಗಳು ಪತನಗೊಂಡಿವೆ. ಅದರಲ್ಲೂ, 2008ರಿಂದ 2012ರ ಅವಧಿಯಲ್ಲಿ ವರ್ಷಕ್ಕೆ ಸರಾಸರಿ ಎರಡು ವಿಮಾನ ದುರಂತಗಳು ಸಂಭವಿಸಿವೆ. ಕಳೆದ 10 ವರ್ಷದಲ್ಲಿಯೂ ಸರಾಸರಿ ವರ್ಷಕ್ಕೆ ಎರಡರಂತೆ 20 ವಿಮಾನಗಳು ಪತನಗೊಂಡಿವೆ. ಹಾಗಾಗಿ, ನೇಪಾಳದ ವಿಮಾನಯಾನ ಸಂಸ್ಥೆಗಳ ವಿಮಾನಗಳು ಎಂದರೆ ಜನರಿಗೆ ಭಯ ಉಂಟಾಗುತ್ತದೆ. ಇದಕ್ಕಾಗಿ ಐರೋಪ್ಯ ಒಕ್ಕೂಟವು ನಿರ್ಬಂಧ ವಿಧಿಸಿದೆ.

ನೇಪಾಳ ಕಂಡ ಭೀಕರ ದುರಂತಗಳು
2022, ಮೇ 29, 22 ಜನ ಸಾವು:
ನೇಪಾಳದ ತಾರಾ ಏರ್‌ ಸಂಸ್ಥೆಯ ವಿಮಾನ ಮುಸ್ತಾಂಗ್‌ ಜಿಲ್ಲೆಯಲ್ಲಿ ಪತನಗೊಂಡು 22 ಜನ ಮೃತಪಟ್ಟಿದ್ದರು. ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಪತನಗೊಂಡಿತ್ತು.

2018, ಮಾರ್ಚ್‌ 12, 51 ಮಂದಿ ಬಲಿ: ಕಾಠ್ಮಂಡು ವಿಮಾನ ನಿಲ್ದಾಣದ ಬಳಿ ಅಮೆರಿಕ-ಬಾಂಗ್ಲಾ ವಿಮಾನಯಾನ ಸಂಸ್ಥೆಯ ವಿಮಾನ ಪತನವಾಗಿ 51 ಜನ ಮೃತಪಟ್ಟಿದ್ದರು.

2012ರಲ್ಲಿ ಪತನಗೊಂಡಿದ್ದ ಸೀತಾ ಏರ್‌ಲೈನ್ಸ್‌ ವಿಮಾನ.

2016, ಫೆಬ್ರವರಿ 24, 2016, 23 ಜನರ ಮರಣ: ತಾರಾ ಏರ್‌ಲೈನ್ಸ್‌ ವಿಮಾನವು ಇದೇ ಪೋಖರಾ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿದ ಎಂಟೇ ನಿಮಿಷಕ್ಕೆ ಪತನಗೊಂಡು 23 ನಾಗರಿಕರು ಮರಣ ಹೊಂದಿದ್ದರು.

1992, ಸೆಪ್ಟೆಂಬರ್‌ 28, 167 ಜನ ಸಾವು: ನೇಪಾಳ ಇತಿಹಾಸದಲ್ಲಿಯೇ ಕಾಠ್ಮಂಡು ಏರ್‌ಪೋರ್ಟ್‌ ಬಳಿ ಸಂಭವಿಸಿದ ದುರಂತವು ಭೀಕರ ದುರಂತ ಎನಿಸಿದೆ. ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ನ ವಿಮಾನವು ಶಿಖರವೊಂದಕ್ಕೆ ಡಿಕ್ಕಿಯಾಗಿ ವಿಮಾನದಲ್ಲಿದ್ದ ಎಲ್ಲ 167 ಜನ ಬಲಿಯಾಗಿದ್ದರು.

ಇದನ್ನೂ ಓದಿ | Nepal Plane Crash | ನೇಪಾಳದಲ್ಲಿ 72 ಜನರಿದ್ದ ವಿಮಾನ ಪತನ; ಹಲವರು ಮೃತಪಟ್ಟಿರುವ ಶಂಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stabbing Case : ಪಾರ್ಕಿಂಗ್ ವಿಚಾರದಲ್ಲಿ ಜಗಳ; ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದ ನಟಿ ಅನುಷ್ಕಾ ಶೆಟ್ಟಿಯ ಮಾವ

Stabbing Case : ಘಟನೆಯಲ್ಲಿ ಸದಾಶಿವ ಪೈ ಅವರ ಕೈ ಗೆ ಗಾಯವಾಗಿದ್ದು ಅವರು ಪುತ್ತೂರಿನ ಸರಕಾರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರು ಗುಣಶೇಖರ್ ಅವರ ತಲೆಗೂ ಹೊಡೆದಿದ್ದಾರೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ.

VISTARANEWS.COM


on

stabbing Case
Koo

ಪುತ್ತೂರು (ದಕ್ಷಿಣ ಕನ್ನಡ): ಇಲ್ಲಿನ ಕೋರ್ಟ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಿಚಾರದಲ್ಲಿ ನಡೆದ ಗಲಾಟೆ ತಾರಕ್ಕೇರಿದ ಹಿನ್ನೆಲೆಯಲ್ಲಿ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಮಾವ ಉರಮಾಲು ಗುಣಶೇಖ‌ರ್ ಶೆಟ್ಟಿ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (Stabbing Case) ಇರಿದಿದ್ದಾರೆ. ಅವರೊಂದಿಗೆ ಗಲಾಟೆ ಮಾಡಿರುವ ಸದಾಶಿವ ಪೈ ಎಂಬುವರ ಕೈಗೆ ಗಾಯವಾಗಿದೆ.

ಘಟನೆಯಲ್ಲಿ ಸದಾಶಿವ ಪೈ ಅವರ ಕೈ ಗೆ ಗಾಯವಾಗಿದ್ದು ಅವರು ಪುತ್ತೂರಿನ ಸರಕಾರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರು ಗುಣಶೇಖರ್ ಅವರ ತಲೆಗೂ ಹೊಡೆದಿದ್ದಾರೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ.

ಕೋರ್ಟ್ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿರುವ ವಿಚಾದಲ್ಲಿ ಗಲಾಟೆ ಆರಂಭವಾಗಿತ್ತು. ಕಾರಿಗೆ ಇನ್ನೊಂದು ಕಾರು ಅಡ್ಡಲಾಗಿ ನಿಲ್ಲಿಸಲಾಗಿದೆ ಎಂಬುವ ವಿಚಾರದಲ್ಲಿ ಗುಣಶೇಖರ್ ಮತ್ತು ಸದಾಶಿವ ಪೈ ನಡುವೆ ಗಲಾಟೆ ಆರಂಭಗೊಂಡಿದೆ. ಈ ವೇಳೆ ಕೈಕೈ ಮಿಲಾಯಿಸಿದ್ದು ಗುಣಶೇಖರ್ ಅವರು ಚಾಕು ತೆಗೆದು ಇರಿದಿದ್ದಾರೆ. ಗಾಯಗೊಂಡ ಸದಾಶಿವ ಪೈ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದಾರೆ. ಗುಣಶೇಖರ್ ಅವರೂ ಪ್ರತಿದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

ಕಿರಿದಾಗಿರುವ ಕೋರ್ಟ್‌ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ಇದೆ. ಈ ರಸ್ತೆಯಲ್ಲಿನ ಅಂಗಡಿಯೊಂದರ ಮುಂದೆ ಈ ಇಬ್ಬರ ನಡುವೆ ವಾಹನ ಪಾರ್ಕ್ ಮಾಡಿದ ವಿಚಾರವಾಗಿ ಗಲಾಟೆ ಆಗಿದೆ. ಈ ವೇಳೆ ಗುಣಶೇಖರ್ ಸದಾಶಿವ ಪೈ ಅವರಿಗೆ ಚೂರಿಯಿಂದ ಇರಿದಿದ್ದಾರೆ. ಚೂರಿ ಇರಿತದಿಂದ ತಪ್ಪಿಸಿಕೊಳ್ಳಲು ಕೈ ಅಡ್ಡ ಹಿಡಿದಿದ್ದ ಸದಾಶಿವ ಪೈ ಕೈಗೆ ಗಾಯವಾಗಿದೆ. ಸದಾಶಿವ ಪೈ ಪುತ್ತೂರಿನ ದರ್ಬೆ ನಿವಾಸಿಯಾಗಿದ್ದು, ಪುತ್ತೂರಿನ ಮುಕ್ರಂಪಾಡಿಯ ಆನಂದಾಶ್ರಮದಲ್ಲಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಗುಣಶೇಖರ್ ಶೆಟ್ಟಿ ಉರಮಾಲ್ ನಿವಾಸಿ. ಇಬ್ಬರೂ ಕೂಡಾ 60ರ ಆಸುಪಾಸಿನಲ್ಲಿ ಇರುವ ವ್ಯಕ್ತಿಗಳಾಗಿದ್ದು, ಪಾರ್ಕಿಂಗ್ ವಿಚಾರದಲ್ಲಿ ಕೈ ಕೈ ಮಿಲಾಯಿಸಿದ್ದು ಅಚ್ಚರಿ ಮೂಡಿಸಿದೆ.

14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.

14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೀಡೆ

PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

PNG vs AFG: ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿದೆ.

VISTARANEWS.COM


on

PNG vs AFG
Koo

ಟ್ರಿನಿಡಾಡ್‌: ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿದೆ.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

ಚೇಸಿಂಗ್​ ವೇಳೆ ಆಫ್ಘಾನ್ ಕೂಡ ಆರಂಭಿಕ ಆಘಾತ ಎದುರಿಸಿತು. ಆರಂಭಿಕರಾದ ಇಬ್ರಾಹಿಂ ಜದ್ರಾನ್(0) ಮತ್ತು ರಹಮಾನುಲ್ಲಾ ಗುರ್ಬಾಜ್(11) ವಿಕೆಟ್ ಬೇಗನೆ​ ಕಳೆದುಕೊಂಡಿತು. ಆದರೆ, ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಗುಲ್ಬದಿನ್ ನೈಬ್​ ಅಜೇಯ 49 ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೇವಲ ಒಂದು ರನ್​ ಹಿನ್ನಡೆಯಲ್ಲಿ ಅರ್ಧಶತಕ ಬಾರಿಸುವ ಅವಕಾಶ ಕಳೆದುಕೊಂಡರು.

ಇದನ್ನೂ ಓದಿ T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ಪರ ಕಿಪ್ಲಿನ್ ಡೋರಿಗಾ(27) ಹೊರತು ಪಡಿಸಿ ಉಳಿದೆಲ್ಲರು ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ವಿಫಲರಾದರು. ಡೋರಿಗಾ ಅವರ ಸಣ್ಣ ಮಟ್ಟಿನ ಬ್ಯಾಟಿಂಗ್​ ಹೋರಾಟದಿಂದ ತಂಡದ ಮೊತ್ತ ಕನಿಷ್ಠ 100 ಸನಿಹಕ್ಕೆ ಬಂದಿತು. ಕಳೆದ 2 ಪಂದ್ಯಗಳಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿದ್ದ ಫಜಲ್ಹಕ್ ಫಾರೂಕಿ ಅವರ ಘಾತಕ ಬೌಲಿಂಗ್​ ದಾಳಿ ಈ ಪಂದ್ಯದಲ್ಲಿಯೂ ಮುಂದುವರಿಯಿತು. ಈ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 16 ರನ್​ ವೆಚ್ಚದಲ್ಲಿ 3 ವಿಕೆಟ್​ ಕಿತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಉಳಿದಂತೆ ನವೀನ್​ ಉಲ್ ಹಕ್​ 4 ರನ್​ಗೆ 2 ವಿಕೆಟ್​ ಪಡೆದರು.​


ಇಂಗ್ಲೆಂಡ್​ಗೆ ಭರ್ಜರಿ ಗೆಲುವು


ತಡರಾತ್ರಿ ನಡೆದ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್​ ತಂಡದ ಒಮಾನ್​ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿ ಸೂಪರ್​-8 ಪ್ರವೇಶದ ಆಸೆಯನ್ನು ಜೀವಂತವಿರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಒಮಾನ್​ ಕೇವಲ 47 ರನ್​ಗೆ ಆಲೌಟ್​ ಆಯಿತು. ಈ ಸಣ್ಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ ಕೇವಲ 3.1 ಓವರ್​ಗಳಲ್ಲಿ ಅಂದರೆ 19 ಎಸೆತಗಳಲ್ಲಿ 2 ವಿಕೆಟ್​ಗೆ 50 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

Continue Reading

ಪ್ರಮುಖ ಸುದ್ದಿ

BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

BS Yediyurappa : ಗುರುವಾರ ಅವರ ಬಂಧನಕ್ಕೆ ಜಾಮೀನು ರಹಿತ ವಾರಂಟ್​ ಅನ್ನು ಬೆಂಗಳೂರಿನ ನ್ಯಾಯಾಲಯ ಹೊರಡಿಸಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲು ಕಾಯುತ್ತಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯೂ ಶುಕ್ರವಾರ ವಿಚಾರಣೆಗೆ ಬರಲಿದೆ. ಇದು ಕೂಡ ಪ್ರಕರಣದ ಭವಿಷ್ಯವನ್ನು ನಿರ್ಧರಿಸಲಿದೆ.

VISTARANEWS.COM


on

B S yediyurappa
Koo

ಬೆಂಗಳೂರು: ಪೋಕ್ಸೋ ಪ್ರಕರಣಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ (BS Yediyurappa) ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ಶುಕ್ರವಾರ (ಇಂದು) ವಿಚಾರಣೆಗೆ ಬರಲಿದೆ. ಒಂದು ವೇಳೆ ಅವರು ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡರೆ ಯಡಿಯೂರಪ್ಪ ಅವರು ಬಂಧನಕ್ಕೆ ಒಳಗಾಗುವುದು ಖಚಿತ. ಯಾಕೆಂದರೆ ಗುರುವಾರ ಅವರ ಬಂಧನಕ್ಕೆ ಜಾಮೀನು ರಹಿತ ವಾರಂಟ್​ ಅನ್ನು ಬೆಂಗಳೂರಿನ ನ್ಯಾಯಾಲಯ ಹೊರಡಿಸಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲು ಕಾಯುತ್ತಿದ್ದಾರೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯೂ ಶುಕ್ರವಾರ ವಿಚಾರಣೆಗೆ ಬರಲಿದೆ. ಇದು ಕೂಡ ಪ್ರಕರಣದ ಭವಿಷ್ಯವನ್ನು ನಿರ್ಧರಿಸಲಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಬಂಧನಕ್ಕೆ ಕಾಯುತ್ತಿದ್ದಾರೆ. ಹೀಗಾಗಿ ಅವರು ಪೋಸ್ಕೋ ಪ್ರಕರಣದಡಿ ಬಂಧನದ ಆತಂಕ ಎದುರಿಸುತ್ತಿದ್ದಾರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ನ್ಯಾಯಾಲಯದಿಂದ ಬಂಧನ ವಾರಂಟ್​ ಪಡೆದುಕೊಂಡಿದ್ದಾರೆ. ಹೀಗಾಗಿ ಪೊಲೀಸರು ಯಡಿಯೂರಪ್ಪ ಅವರನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಗಳು ಶುಕ್ರವಾರ ವಿಚಾರಣೆಗೆ ಬರಲಿರುವ ಕಾರಣ ಪ್ರಕರಣ ಕುತೂಹಲ ಮೂಡಿಸಿದೆ. ಅರ್ಜಿ ತಿರಸ್ಕೃತಗೊಂಡರೆ ಮಾಜಿ ಸಿಎಂಗೆ ಮತ್ತೆ ಸಂಕಷ್ಟ ಎದುರಾಗಲಿದೆ.

ಸಾಕ್ಷ್ಯ ನಾಶದ ಆರೋಪವೂ ಇದೆ

ಈ ಪ್ರಕರಣದಲ್ಲಿ ಬಿ.ಎಸ್​ ಯಡಿಯೂರಪ್ಪ ಅವರ ಆಪ್ತರ ಮೇಲೆ ಸಾಕ್ಷಿಗಳನ್ನು ನಾಶಪಡಿಸಿದ ಆರೋಪವೂ ಇದೆ. ಅರುಣ್ ಹಾಗೂ ರುದ್ರೇಶ್​ ಹಾಗೂ ಮರಿಸ್ವಾಮಿ ಎಂಬುವರನ್ನೂ ಪ್ರಕರಣದ ಆರೋಪಿಗಳನ್ನಾಗಿ ತನಿಖಾ ತಂಡ ಗುರುತಿಸಿದೆ. ಸಾಕ್ಷಿಗಳನ್ನು ನಾಶ ಮಾಡಿರುವುದು, ಪ್ರಭಾವ ಬೀರಿದ ಹಿನ್ನೆಲೆಯಲ್ಲಿ ಅವರನ್ನು ಸಿಆರ್​ಪಿಸಿ 41 ರ ಅಡಿಯಲ್ಲಿ ಆರೋಪಿಗಳನ್ನಾಗಿ ಪರಿಗಣಿಸಿ ನೋಟಿಸ್ ನೀಡಲಾಗಿದೆ.

ದೂರು ನೀಡಿದ ತಕ್ಷಣ ಬಾಲಕಿಯ ತಾಯಿಯನ್ನು ಕರೆಸಿಕೊಂಡಿದ್ದ ಯಡಿಯೂರಪ್ಪ ಅವರು ಹಣದ ಆಮಿಷ ಒಡ್ಡಿದ್ದರು. ಈ ದೃಶ್ಯಗಳನ್ನು ತಾಯಿ ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ಅದನ್ನು ಗಮನಿಸಿದ್ದ ಬಿಎಸ್​​ವೈ ಆಪ್ತರು ಮೊಬೈಲ್ ಕಸಿದು ದೃಶ್ಯಗಳನ್ನು ಡಿಲೀಟ್ ಮಾಡಿದ್ದರು. ಅದೇ ರೀತಿ ತಾಯಿ ಮಗಳನ್ನು ಕಾರಿನಲ್ಲಿ ಕೂರಿಸಿ ಅವರ ಮನೆಗೆ ಬಿಟ್ಟಿದ್ದರು. ಈ ನಡುವೆ ಅವರು ಹಣದ ಆಮಿಷ, ಜೀವ ಬೆದರಿಕೆ ಒಡ್ಡಿದ್ದರು. ಇವೆಲ್ಲರೂ ದೂರಿನಲ್ಲಿ ದಾಖಲಾಗಿರುವ ಕಾರಣ ಎಲ್ಲರಿಗೂ ಸಮಸ್ಯೆ ಉಂಟಾಗಿದೆ.

ಇದನ್ನೂ ಓದಿ: 7th pay commission : ಸಂಪುಟದಲ್ಲಿ ಚರ್ಚೆಯಾಗದ 7ನೇ ವೇತನ ಆಯೋಗ ಶಿಫಾರಸು; ಸರ್ಕಾರಿ ನೌಕರರ ಸಂಘಗಳ ಆಕ್ರೋಶ

ನ್ಯಾಯಾಲಯದಿಂದ ವಾರಂಟ್ ಪಡೆದ ತಕ್ಷಣ ಸಿಐಡಿ ಡಿಜಿಪಿ ಎಂ ಎ ಸಲೀಮ್ ಅವರು ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಹೈಕೋರ್ಟ್​ನಲ್ಲಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ಭವಿಷ್ಯವನ್ನು ಪರಿಗಣಿಸಿ ಮುಂದಿನ ಪ್ರಕ್ರಿಯೆ ನಡೆಸಲು ಮುಂದಾಗಿದ್ದಾರೆ. ಒಂದು ವೇಳೆ ಅರ್ಜಿ ತಿರಸ್ಕೃತಗೊಂಡರೆ ಮಾಜಿ ಸಿಎಂ ಬಂಧನಕ್ಕಾಗಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಕುರಿತು ಸಿದ್ಧತೆ ನಡೆಸಿಕೊಂಡಿದ್ದಾರೆ.

ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ

ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯವು ಮಾಜಿ ಸಿಎಂ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿತ್ತು. ಹೀಗಾಗಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತು. ಗುರುವಾರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಅವರು ಬಂದಿರಲಿಲ್ಲ. ಅಲ್ಲದೆ ಸಿಐಡಿ ನೋಟಿಸ್​ಗೆ ಪ್ರತಿಕ್ರಿಯಿಸಿ 17ಕ್ಕೆ ಬರುವುದಾಗಿ ಹೇಳಿದ್ದರು.

ಕಳೆದ ವರ್ಷ ಮಾರ್ಚ್ ನಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈಗೆ ಬಂಧನ ಭೀತಿ ಎದುರಾಗಿದೆ. ಬಿಎಸ್ ವೈ ಅವರ ಬಂಧನವನ್ನು ಯಾವುದೇ ಕ್ಷಣದಲ್ಲಿಯಾದರೂ ಮಾಡಬಹುದು ಎನ್ನಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್‌ 14ರಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ನಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಫೆಬ್ರವರಿ 2ರಂದು ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಪ್ರಕರಣವನ್ನು ಸಿಐಡಿ ತನಿಖೆ ಮಾಡಲು ಡಿಜಿಪಿ ಅಲೋಕ್‌ ಮೋಹನ್‌ ಆದೇಶಿಸಿದ್ದರು.

ದೂರು ನೀಡಿದ ಮಹಿಳೆ ಸುಮಾರು 53 ಗಣ್ಯರ ವಿರುದ್ಧ ದೂರು ನೀಡಿದ್ದರು. ಹೀಗಾಗಿ, ಇದು ಸುಳ್ಳು ದೂರು ಆಗಿರಬಹುದು ಎಂಬ ವಾದಗಳು ಕೇಳಿಬಂದಿದ್ದವು. ಇದೇ ಕಾರಣಕ್ಕೆ ಈ ಪ್ರಕರಣವನ್ನು ಬಿಎಸ್‌ ಯಡಿಯೂರಪ್ಪ ಕಡೆಗಣಿಸಿದ್ದರು.

Continue Reading

ಪ್ರಮುಖ ಸುದ್ದಿ

7th pay commission : ಸಂಪುಟದಲ್ಲಿ ಚರ್ಚೆಯಾಗದ 7ನೇ ವೇತನ ಆಯೋಗ ಶಿಫಾರಸು; ಸರ್ಕಾರಿ ನೌಕರರ ಸಂಘಗಳ ಆಕ್ರೋಶ

7th pay commission: ಈ ಕುರಿತು ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಸಂಘದ ಅಧ್ಯಕ್ಷರಾದ ರಮೇಶ್​ ಸಂಗಾ, 7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರ ಉದಾಸೀನ ಧೋರಣೆ ತಳೆಯುತ್ತಿರುವುದು ಸ್ಪಷ್ಟ. ಇದೇ ನಿಲುವು ಮುಂದುವರಿದರೆ ನೌಕರರ ಸಂಘವು ಪ್ರತಿ ಭಟನೆಯನ್ನು ಆಯೋಜಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ (7th pay commission ) ಶಿಫಾರಸು ಜಾರಿಗೊಳಿಸುವ ಕುರಿತು ಯಾವುದೇ ನಿರ್ಣಯ ಕೈಗೊಳ್ಳದಿರುವುದು ಸರ್ಕಾರಿ ನೌಕರರ ಸಂಘಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ನಿರ್ಣಯ ಕೈಗೊಳ್ಳದಿರುವುದು ರಾಜ್ಯ ಸರ್ಕಾರದ ಸಮಸ್ತ ಸರ್ಕಾರಿ ನೌಕರರಿಗೆ ಬೇಸರವನ್ನುಂಟು ಮಾಡಿದೆ ಎಂಬುದಾಗಿ ಸಚಿವಾಲಯದ ನೌಕರರ ಸಂಘ ಹೇಳಿದೆ. ಆಯೋಗದ ಶಿಫಾರಸಿನ ಜಾರಿ ಕುರಿತು ನಿರೀಕ್ಷೆಯಲ್ಲಿದ್ದ ನಮಗೆ ನಿರಾಸೆಯಾಗಿದೆ ಎಂದು ಅದು ಹೇಳಿದೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಸಂಘದ ಅಧ್ಯಕ್ಷರಾದ ರಮೇಶ್​ ಸಂಗಾ, 7ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರ ಉದಾಸೀನ ಧೋರಣೆ ತಳೆಯುತ್ತಿರುವುದು ಸ್ಪಷ್ಟ. ಇದೇ ನಿಲುವು ಮುಂದುವರಿದರೆ ನೌಕರರ ಸಂಘವು ಪ್ರತಿ ಭಟನೆಯನ್ನು ಆಯೋಜಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡುವಂತೆ ಸಚಿವಾಲಯದ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿದ್ದೆವು. ಈ ವೇಳೆ ಅವರು ಚುನಾವಣೆ ಮುಗಿದ ಬಳಿಕ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಚುನಾವಣೆ ಮುಗಿದ ಬಳಿಕ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವ ನಂಬಿಕೆ ಇರಿಸಿಕೊಂಡಿದ್ದೆವು. ಅದು ಹುಸಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

ಈಗಾಗಲೇ ವೇತನ ಆಯೋಗವು ಶಿಫಾರಸು ಮಾಡಿರುವ ಶೇ. 27.5 ಫಿಟ್ಮೆಂಟಿಗೆ, ಶೇಕಡಾ 2.5ರಷ್ಟು ಸೇರ್ಪಡೆಗೊಳಿಸಿ ಒಟ್ಟು ಶೇಕಡಾ 30ರಷ್ಟು ಫಿಟ್ಮೆಂಟ್​ನೊಂದಿಗೆ ವೇತನ ಹೆಚ್ಚಳ ಮಾಡುವುದು ನಮ್ಮ ಬೇಡಿಕೆ ಎಂಬುದಾಗಿ ಸಂಗಾ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ನೌಕರರಿಗೆ ನಿರಾಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜೂನ್‌ 13) ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ (7th Pay Commission) ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದಾಗಿ, ಏಳನೇ ವೇತನ ಆಯೋಗದ ಜಾರಿ ಕುರಿತು ಭಾರಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇದರಿಂದ ನಿರಾಸೆಯಾದಂತಾಗಿದೆ.

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದ್ದರು.

Continue Reading
Advertisement
Actor Darshan case support by women fan and she cry
ಸ್ಯಾಂಡಲ್ ವುಡ್21 mins ago

Actor Darshan : Boss ನಿಮ್ಮನ್ನ ಈ ರೀತಿ ನೋಡೊಕೆ ಆಗ್ತಿಲ್ಲ; ಬಿಕ್ಕಿ ಬಿಕ್ಕಿ ಅತ್ತ ದರ್ಶನ್​ ಮಹಿಳಾ ಅಭಿಮಾನಿ!

stabbing Case
ಪ್ರಮುಖ ಸುದ್ದಿ26 mins ago

Stabbing Case : ಪಾರ್ಕಿಂಗ್ ವಿಚಾರದಲ್ಲಿ ಜಗಳ; ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದ ನಟಿ ಅನುಷ್ಕಾ ಶೆಟ್ಟಿಯ ಮಾವ

PNG vs AFG
ಕ್ರೀಡೆ37 mins ago

PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

BMW Motorrad
ಆಟೋಮೊಬೈಲ್39 mins ago

BMW Motorrad: ಐಷಾರಾಮಿ BMW R 1300 GS ಬೈಕ್‌ ಬಿಡುಗಡೆ; ಬೆಲೆ ಎಷ್ಟು? ವೈಶಿಷ್ಟ್ಯಗಳೇನು? ಇಲ್ಲಿದೆ ವಿವರ

Actor Darshan his brother-in-law homeless
ಸ್ಯಾಂಡಲ್ ವುಡ್52 mins ago

Actor Darshan: ಸೋದರ ಮಾವಂದಿರನ್ನೇ ಬೀದಿಪಾಲು ಮಾಡಿದ್ದ ದರ್ಶನ್​, ಒಂದೊಂದಾಗಿ ಹೊರಬರುತ್ತಿದೆ ‘ದಾಸ’ನ ದುರ್ಬುದ್ಧಿ !

B S yediyurappa
ಪ್ರಮುಖ ಸುದ್ದಿ56 mins ago

BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

Nataša Stanković
ಕ್ರೀಡೆ1 hour ago

Nataša Stanković: ವಿಚ್ಛೇದನದ ವದಂತಿಗಳ ನಡುವೆ ಮತ್ತೊಂದು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Actor Darshan warn darshan previous
ಸ್ಯಾಂಡಲ್ ವುಡ್1 hour ago

Actor Darshan: ಇದು ರೌಡಿಸಂ ಸೆಂಟರ್‌ ಅಲ್ಲ; ನಿಜ ಆಗ್ತಾ ಇದೆಯಾ ಅಂದು ಜಗ್ಗೇಶ್‌ ನುಡಿದಿದ್ದ ಭವಿಷ್ಯ?

7th Pay Commission
ಪ್ರಮುಖ ಸುದ್ದಿ2 hours ago

7th pay commission : ಸಂಪುಟದಲ್ಲಿ ಚರ್ಚೆಯಾಗದ 7ನೇ ವೇತನ ಆಯೋಗ ಶಿಫಾರಸು; ಸರ್ಕಾರಿ ನೌಕರರ ಸಂಘಗಳ ಆಕ್ರೋಶ

Heavy Rainfall
ದೇಶ2 hours ago

Heavy Rainfall: ಸಿಕ್ಕಿಂನಲ್ಲಿ ಭಾರೀ ಮಳೆ, ಪ್ರವಾಹ: 6 ಮಂದಿ ಸಾವು, ಭೂಕುಸಿತದಿಂದ ಸಂಪರ್ಕ ಕಡಿತ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌