Santro Ravi case | ಸ್ಯಾಂಟ್ರೋ ರವಿ ಈಗ ಕೈದಿ ನಂಬರ್‌ 18894: ಜೈಲರ್‌ ಮಹೇಶ್‌ ಬೆಂಗಳೂರಿಗೆ ಶಿಫ್ಟ್‌ - Vistara News

ಕರ್ನಾಟಕ

Santro Ravi case | ಸ್ಯಾಂಟ್ರೋ ರವಿ ಈಗ ಕೈದಿ ನಂಬರ್‌ 18894: ಜೈಲರ್‌ ಮಹೇಶ್‌ ಬೆಂಗಳೂರಿಗೆ ಶಿಫ್ಟ್‌

ಸ್ಯಾಂಟ್ರೋ ರವಿ (Santro Ravi case) ಮೈಸೂರು ಕೇಂದ್ರೀಯ ಕಾರಾಗೃಹ ಸೇರುತ್ತಿದ್ದಂತೆಯೇ ಅಲ್ಲಿನ ಜೈಲರ್‌ ಮಹೇಶ್‌ ಕುಮಾರ್‌ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಲಾಗಿದೆ. ಯಾಕೆಂದರೆ..

VISTARANEWS.COM


on

Santro jailor transfer
ಮಹೇಶ್‌ ಕುಮಾರ್‌ ಮೈಸೂರು ಕಾರಾಗೃಹ ಜೈಲರ್‌ ಆಗಿ ನೇಮಕವಾದಾಗ ಸ್ಯಾಂಟ್ರೋ ರವಿ ಹಾಕಿಕೊಂಡದ್ದ ಸ್ಟೇಟಸ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಗುಜರಾತ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ಕುಖ್ಯಾತ ಕ್ರಿಮಿನಲ್‌ ಸ್ಯಾಂಟ್ರೋ ರವಿ‌ (Santro Ravi case) ಈಗ ಮೈಸೂರು ಕೇಂದ್ರೀಯ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾನೆ. ಆತನಿಗೆ ಕೈದಿ ನಂಬರ್‌ 18894 ನೀಡಲಾಗಿದೆ. ಆತ ಪೊಲೀಸರಿಂದ ತಲೆಮರೆಸಿಕೊಂಡು ತಿರುಗಾಡಲು ಸಹಕಾರ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಸಹಚರರಾದ ರಾಮ್‌ಜೀಗೆ ೧೮೮96 ಹಾಗೂ ಸತೀಶ್ ಕುಮಾರ್‌ಗೆ ೧೮೮95 ಸಂಖ್ಯೆಯನ್ನು ನೀಡಲಾಗಿದೆ. ಕಳೆದ ಶನಿವಾರದಂದು ಇವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ಅವರಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಪೊಲೀಸರು ಅವರನ್ನು ಮರಳಿ ಪೊಲೀಸ್‌ ಕಸ್ಟಡಿಗೆ ಕೇಳಿದ್ದರು. ಆಗ ನಿರಾಕರಿಸಿದ್ದ ನ್ಯಾಯಾಧೀಶರು ಸೋಮವಾರ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರು.

ಆರೋಪಿಗಳನ್ನು ಹೆಚ್ಚುವರಿ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ಒಪ್ಪಿಸುವಂತೆ ಸೋಮವಾರ ಕೋರ್ಟ್‌ಗೆ ಮನವಿ ಸಲ್ಲಿಸಲಿದ್ದಾರೆ. ಕೋರ್ಟ್‌ ಯಾವ ತೀರ್ಮಾನ ತೆಗೆದುಕೊಳ್ಳ್ಳುತ್ತದೆ ಎಂದು ಕಾದು ನೋಡಬೇಕಾಗಿದೆ.

ಜೈಲರ್‌ ವರ್ಗಾವಣೆ
ಈ ನಡುವೆ, ಸ್ಯಾಂಟ್ರೋ ರವಿ ಜೈಲು ಸೇರುತ್ತಿದ್ದಂತೆಯೇ ಕಾರಾಗೃಹ ಅಧೀಕ್ಷಕ ಮಹೇಶ್ ಕುಮಾರ್ ಎಸ್.ಜಿಗಣಿ ಅವರು ಕರ್ತವ್ಯಕ್ಕೆ ಗೈರುರಾಜರಾಗಿದ್ದಾರೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಜೈಲರ್‌ ಮಹೇಶ್‌ ಕುಮಾರ್

ಮಹೇಶ್‌ ಕುಮಾರ್‌ ಮೈಸೂರು ಜೈಲಿಗೆ ವರ್ಗಾವಣೆಯಾಗಿ ಬರುವಲ್ಲಿ ಸ್ಯಾಂಟ್ರೋ ರವಿ ಕೈವಾಡವಿದೆ ಎಂದು ಹೇಳಲಾಗಿದೆ. ಈ ಹಿಂದೆ ಮಹೇಶ್‌ ಕುಮಾರ್‌ ಮೈಸೂರು ಜಿಲ್ಲೆಗೆ ವರ್ಗಾವಣೆಯಾಗಿ ಬಂದ ಸಂದರ್ಭದಲ್ಲಿ ಸ್ಯಾಂಟ್ರೋ ರವಿ ಈ ವರ್ಗಾವಣೆಯನ್ನು ತಾನೇ ಮಾಡಿಸಿದ್ದು ಎಂಬರ್ಥದಲ್ಲಿ ಸ್ಟೇಟಸ್‌ ಹಾಕಿಕೊಂಡಿದ್ದ.

ಮಹೇಶ್‌ ಕುಮಾರ್‌ ವರ್ಗಾವಣೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರ ಅವರು ಹೊರಡಿಸಿರುವ ಆದೇಶವನ್ನು ಸ್ಯಾಂಟ್ರೋ ರವಿ ಹಾಕಿಕೊಂಡಿದ್ದ. ಆತನದೇ ಶಿಫಾರಸಿನ ಮೇರೆಗೆ ನಡೆದ ವರ್ಗಾವಣೆ ಇದಾಗಿದೆ ಎಂಬ ಸಂಶಯ ಮೊದಲಿನಿಂದಲೂ ದಟ್ಟವಾಗಿತ್ತು. ಹೀಗಾಗಿ ಆತ ಮೈಸೂರು ಜೈಲಿನಲ್ಲಿದ್ದರೆ ಸ್ಯಾಂಟ್ರೋ ರವಿಗೆ ರಾಜಾತಿಥ್ಯ ನೀಡಬಹುದು ಎಂಬ ಆತಂಕವೂ ಇತ್ತು.

ಇದನ್ನೂ ಓದಿ | Santro Ravi Case | ಸ್ಯಾಂಟ್ರೋ ರವಿಗೆ ತಲೆಮರೆಸಿಕೊಳ್ಳಲು ಹಣ ಕೊಟ್ಟು ಸಹಕರಿಸಿದ್ದು ಲೀಸ್‌ ಅಧಿಕಾರಿಗಳೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

Bengaluru News: ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಆರೋಪಿಸಿದ್ದಾರೆ.

VISTARANEWS.COM


on

former MLC Arun Shahapur latest Statement
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ (Congress Party) ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ದುರಾಡಳಿತದ ಮೂಲಕ ಶಿಕ್ಷಣ (Education) ಕ್ಷೇತ್ರವನ್ನು ಹಾಳುಗೆಡವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ (Bengaluru News) ಆರೋಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಟೀಕಿಸಿದ ಅವರು, 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

10ನೇ ತರಗತಿ ಪರೀಕ್ಷೆ ಬರೆದ 9 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕದಲ್ಲಿದ್ದಾರೆ. ಕೆಎಸ್‍ಇಎಪಿ ಮೂಲಕ ಪರೀಕ್ಷೆ ನಡೆಸಿದ್ದಾರೆ. ಯಶಸ್ವಿ ಪರೀಕ್ಷೆ ನಡೆಸಿದ್ದಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಅತ್ಯಂತ ಕೆಟ್ಟ ಪರೀಕ್ಷೆ ನಡೆದಿದ್ದರೆ ಅದು ಮಧು ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂದು ಟೀಕಿಸಿದರು.

ಸೂತ್ರದ ಗೊಂಬೆಯಾಗಿದ್ದ ಶಿಕ್ಷಣ ಸಚಿವರು

ಪಠ್ಯಪುಸ್ತಕದಲ್ಲಿನ ಪಾಠಗಳನ್ನು ಕಿತ್ತು ಹಾಕುವುದಾಗಿ ಹೇಳುವ ಮೂಲಕ ಈ ಸರ್ಕಾರ ಕಾರ್ಯಾರಂಭ ಮಾಡಿದೆ. ಶಿಕ್ಷಣ, ಪಠ್ಯದ ವಿಚಾರ ಶಿಕ್ಷಣ ತಜ್ಞರ ಮಟ್ಟದಲ್ಲಿ, ಇಲಾಖೆ ಮಟ್ಟದಲ್ಲಿ ನಿರ್ಧಾರವಾಗುತ್ತಿತ್ತು. ಆದರೆ, ಕಳೆದ ವರ್ಷ ಅದು ಕ್ಯಾಬಿನೆಟ್‍ನಲ್ಲಿ ನಿರ್ಧಾರವಾಗಿದೆ. ಇವರು ಕನ್ನಡದ 10 ಪಾಠ, ಸಮಾಜ ವಿಜ್ಞಾನದ 10 ಪಾಠಗಳನ್ನು ತೆಗೆದುಹಾಕಿ ಮೊಟ್ಟ ಮೊದಲ ಬಾರಿಗೆ ರಾಜಕೀಯಕರಣಗೊಳಿಸುವ ಕಾರ್ಯಕ್ಕೆ ಈಗಿನ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕೈ ಹಾಕಿದ್ದರು. ಶಿಕ್ಷಣ ಸಚಿವರು ಸೂತ್ರದ ಗೊಂಬೆಯಾಗಿದ್ದರು ಎಂದು ಅರುಣ್ ಶಹಾಪುರ ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಇವತ್ತು ಇಡೀ ಕರ್ನಾಟಕದಲ್ಲಿ ಚುನಾವಣಾ ಚಾಣಕ್ಯರ ಕಪಿಮುಷ್ಟಿಗೆ ಸಿಲುಕಿದೆ. ಚುನಾವಣಾ ಚಾಣಕ್ಯರೇ ಕಾಂಗ್ರೆಸ್ಸಿನ ನೀತಿ ನಿರೂಪಿಸುತ್ತಿದ್ದಾರೆ. ಪಾಠಗಳು ಯಾವುದೇ ಶಾಲೆಯಲ್ಲಿ ಮಕ್ಕಳ ವರೆಗೆ ತಲುಪಲಿಲ್ಲ. ಎನ್‍ಇಪಿ ಜಾರಿ ಇಲ್ಲ ಎಂಬ ಗೊಂದಲಗಳಿಗೆ ಕೈಹಾಕಿದ್ದರು. ಕೊನೆಗೆ ಪರೀಕ್ಷೆಯು ಪ್ರಹಸನ ಎಂಬಂತೆ ನಡೆದಿದೆ ಎಂದು ತಿಳಿಸಿದರು. 5ನೇ ತರಗತಿ, 8ನೇ ತರಗತಿ, 9ನೇ ತರಗತಿ, 11ನೇ ತರಗತಿ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ವಿಚಾರ ದಿನವೂ ಬೆಳಿಗ್ಗೆ ಪಾಲಕರಿಗೆ ತಲೆನೋವಾಗಿ ಪರಿಗಣಮಿಸಿತ್ತು ಎಂದರು.

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಈ ಪರೀಕ್ಷೆಗಳ ಬಗ್ಗೆ ಈಗಲೂ ದೃಢ ನಿಲುವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ. 10ನೇ ತರಗತಿ ಹಾಗೂ ಪಿಯುಸಿಗೆ 3 ಪರೀಕ್ಷೆ (10- 1,2,3), (ಪಿಯು- 1,2,3) ಮಾಡಲು ಹೊರಟವರು ಮಕ್ಕಳ, ಪಾಲಕರ ಒತ್ತಡ, ಗೊಂದಲವನ್ನು ಯೋಚಿಸಿಲ್ಲ. ಯಾವ ಪರೀಕ್ಷೆ, ಪರೀಕ್ಷೆ ಬರೆದವರು ಯಾರು, ಯಾರಿಂದ ಮೌಲ್ಯಮಾಪನ ಎಂಬ ದೊಡ್ಡ ಗೊಂದಲಕ್ಕೆ ಇದು ಕಾರಣವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಗೂ ಈ ಕುರಿತು ಸ್ಪಷ್ಟತೆ ಇಲ್ಲ. 3 ಪರೀಕ್ಷೆ ಇವರೇನು ಪುಕ್ಕಟೆ ಮಾಡುತ್ತಾರಾ ಎಂದರು.

ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ?

ಒಂದು ಪರೀಕ್ಷೆಗೆ ರೂ. 410, 2 ಪರೀಕ್ಷೆಗೆ 510, 3 ಆದರೆ 710 ರೂ. ಪಾವತಿಸಬೇಕು. ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ? ಪ್ರತಿಯೊಂದು 10ನೇ ಪರೀಕ್ಷೆ ನಡೆಯುವ ಕೇಂದ್ರಕ್ಕೆ ವೆಬ್ ಕಾಸ್ಟಿಂಗ್ ಅಳವಡಿಸಲು ಆದೇಶ ಮಾಡಿ ಒತ್ತಡ ಹೇರುವ ಹಾಗೂ ಯಾಕಾದರೂ ಪರೀಕ್ಷಾ ಕೇಂದ್ರ ಮಾಡಿದ್ದೇವೋ ಎಂದು ಯೋಚಿಸುವ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಿತ್ತು ಎಂದು ದೂರಿದರು.

ಪರೀಕ್ಷೆ ಸಂದರ್ಭದಲ್ಲಿ ಎಲ್ಲಿ ತಮ್ಮ ನೌಕರಿಗೆ ಕುತ್ತಾಗುವುದೋ ಎಂಬ ಆತಂಕ ಶಿಕ್ಷಕರಲ್ಲಿತ್ತು. ವೆಬ್ ಕಾಸ್ಟಿಂಗ್ ಬಗ್ಗೆ ಯಾವುದೇ ಶಿಕ್ಷಕರಿಗೆ ಪರಿಕಲ್ಪನೆ ಇರಲಿಲ್ಲ. ತರಬೇತಿ, ಮಾಹಿತಿಯೂ ಇರಲಿಲ್ಲ ಎಂದರು.

10ನೇ ತರಗತಿ ಪರೀಕ್ಷೆ ಎಂದರೆ ಮಕ್ಕಳನ್ನು ಭಯದ ವಾತಾವರಣದಲ್ಲಿ ಇಡಲಾಯಿತು. 10ನೇ ತರಗತಿ ಪರೀಕ್ಷೆಯಲ್ಲಿ ನೈಜ ಮೌಲ್ಯಮಾಪನ ಮಾಡಿದ್ದರೆ ಫಲಿತಾಂಶ ಪಾತಾಳಕ್ಕೆ ಕುಸಿಯಲಿದೆ ಎಂಬುದು ಅವರಿಗೆ ಅರ್ಥವಾಯಿತು. ಇಡೀ ರಾಜ್ಯದ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಡಯಟ್ ಮತ್ತು ಇಲಾಖೆಯನ್ನು ಕತ್ತಲಲ್ಲಿ ಇಡಲಾಯಿತು. ಇವರು ಸ್ಥಾಪಿಸಿದ ಕೆಎಸ್‍ಇಇ ಮೂಲಕ ಉತ್ತೀರ್ಣ ಅಂಕವನ್ನು 35ರಿಂದ 25ಕ್ಕೆ ಇಳಿಸಿದ್ದಾರೆ. ಇದು ಶಿಕ್ಷಣ ಕ್ಷೇತ್ರ ಹಾಳು ಮಾಡಿದ ಈ ಸರ್ಕಾರದ ಸಾಧನೆ ಎಂದು ಟೀಕಿಸಿದರು.

ಇದನ್ನೂ ಓದಿ: Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್, ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಇದ್ದರು.

Continue Reading

ರಾಜಕೀಯ

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released: ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

HD Revanna Released first reaction after release will be acquitted of all charges
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ರೇವಣ್ಣ ಅವರು ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಿವಾಸಕ್ಕೆ ತೆರಳಿದ್ದು, ಅವರನ್ನು ಕಂಡ ಕೂಡಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಬ್ಬಿಕೊಂಡು ಸ್ವಾಗತಿಸಿದರು. ಇನ್ನು ಕುಟುಂಬಸ್ಥರನ್ನು ಕಂಡಕೂಡಲೇ ರೇವಣ್ಣ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಹನ್ನೊಂದು ದಿನಗಳ ಹಿಂದೆ ಇದೇ ದೇವೇಗೌಡರ ಮನೆಯಲ್ಲಿ ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಸೀದಾ ಅಲ್ಲಿಗೇ ಎಚ್‌.ಡಿ. ರೇವಣ್ಣ ಬಂದಿದ್ದಾರೆ. ಇದಕ್ಕಿಂತ ಮುಂಚಿತವಾಗಿ ಎಚ್‌.ಡಿ. ದೇವೇಗೌಡರು ಮನೆಯಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದ್ದರು. ರೇವಣ್ಣ ಮನೆಗೆ ಎಂಟ್ರಿ ಆದ ತಕ್ಷಣ ಅವರನ್ನು ತಬ್ಬಿಕೊಂಡ ಕುಮಾರಸ್ವಾಮಿ ಸಂತೈಸಿದರು. ಅಲ್ಲಿಂದ ಸೀದಾ ಒಳಗೆ ಹೋದ ರೇವಣ್ಣ ಅವರು ಎಚ್‌.ಡಿ. ದೇವೇಗೌಡರ ಕೋಣೆಗೆ ಎಂಟ್ರಿ ಕೊಟ್ಟರು.
ದೇವೇಗೌಡರನ್ನು ನೋಡಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು ಎನ್ನಲಾಗಿದೆ. ಜತೆಗೆ ತಾಯಿ ಚನ್ನಮ್ಮ ಅವರ ಆಶೀರ್ವಾದವನ್ನೂ ಈ ವೇಳೆ ರೇವಣ್ಣ ಪಡೆದುಕೊಂಡರು.

ಭವಾನಿ ರೇವಣ್ಣ ನೆಗ್ಲೆಟ್‌?

ಎಚ್‌.ಡಿ. ರೇವಣ್ಣ ಅವರಿಗೆ ಸೋಮವಾರ ಸಂಜೆಯೇ ಬೇಲ್‌ ಸಿಕ್ಕರೂ ಭವಾನಿ ರೇವಣ್ಣ ಅವರ ಸುದ್ದಿಯೇ ಇಲ್ಲವಾಘಿದೆ. ಇನ್ನು ಪದ್ಮನಾಭ ನಗರದ ದೇವೇಗೌಡರ ನಿವಾಸಕ್ಕೂ ಅವರು ಆಗಮಿಸಲಿಲ್ಲ. ರೇವಣ್ಣ ಜೈಲಿಗೆ ಹೋದಾಗಲೂ ನೋಡಲು ಹೋಗಲಿಲ್ಲ. ರೇವಣ್ಣ ಎಸ್ಐಟಿ ಕಸ್ಟಡಿಯಲ್ಲಿ ಇದ್ದಾಗಲೂ ಬರಲಿಲ್ಲ. ಬಿಡುಗಡೆ ಆಗಿ ದೇವೇಗೌಡರ ನಿವಾಸಕ್ಕೆ ರೇವಣ್ಣ ಬಂದರೂ ಅತ್ತ ಕಡೆ ಸುಳಿಯದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತರ ಕಾಯ್ದುಕೊಂಡರಾ ಭವಾನಿ ಹಾಗೂ ಸೂರಜ್ ರೇವಣ್ಣ?

ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಅಂತರ ಕಾಯ್ದುಕೊಂಡರಾ ಎಂಬ ಪ್ರಶ್ನೆ ಮೂಡುತ್ತಿದೆ. ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಗ್ಗೆ ಅಸಹನೆಯಾ? ಇಲ್ಲವೇ ಪ್ರಜ್ವಲ್ ಕೇಸ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೀಗೆ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ದೇವೇಗೌಡರ ಜತೆ ಊಟಕ್ಕೆ ಕುಳಿತ ಮಕ್ಕಳು; ಕಂಪ್ಲೇಂಟ್‌ ಹೇಳಿದರಾ ರೇವಣ್ಣ?

ಮನೆಗೆ ಧಾವಿಸಿದ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಮೊದಲಿಗೆ ಬೆಳಗ್ಗೆ ಮನೆಯಲ್ಲಿ ಮಾಡಿಸಲಾಗಿದ್ದ ದೇವರ ಪೂಜೆಯ ಪ್ರಸಾದವನ್ನು ಕೊಡಲಾಯಿತು. ಬಳಿಕ ಎಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತರು. ಊಟದ ಸಮಯದಲ್ಲಿ ರೇವಣ್ಣ ಅವರು ಎಸ್‌ಐಟಿ ವಶ ಹಾಗೂ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಹೇಳಿಕೊಂಡಿದ್ದಾರೆನ್ನಲಾಗಿದೆ.

ಎಸ್ಐಟಿ ಅಧಿಕಾರಿಗಳು ತನಿಖೆ ನೆಪದಲ್ಲಿ ಏನೆಲ್ಲ ಪ್ರಶ್ನೆಗಳನ್ನು ಕೇಳಿದರು? ಯಾವ ಮಾದರಿಯ ಪ್ರಶ್ನೆಗಳು ಇದ್ದವು? ಯಾವೆಲ್ಲ ಒತ್ತಡವನ್ನು ನೀಡಿದರು? ಎಂಬಿತ್ಯಾದಿ ವಿಷಯಗಳ ಬಗ್ಗೆ ಎಚ್‌.ಡಿ. ರೇವಣ್ಣ ಅವರು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಷಡ್ಯಂತ್ರದ ಬಗ್ಗೆ ಚರ್ಚೆ?

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನಿಷ್ಪಕ್ಷಪಾತ ತನಿಖೆಯನ್ನು ನಡೆಸಲಾಗುತ್ತಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯವಾಗಿ ಏನೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂಬ ಬಗ್ಗೆ ಈಗಾಗಲೇ ಆರೋಪ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವನ್ನು ರೇವಣ್ಣ ಮುಂದೆ ಪ್ರಸ್ತಾಪ ಮಾಡಿದ್ದಾರೆನ್ನಲಾಗಿದೆ. ಅಲ್ಲದೆ, ರಾಜಕೀಯ ಷಡ್ಯಂತ್ರದ ಜತೆಗೆ ಮುಂದಿನ ನಡೆ ಏನು ಎಂಬ ಬಗ್ಗೆಯೂ ತಂದೆ ಮತ್ತು ಮಕ್ಕಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಜೆಡಿಎಸ್‌ ಶಾಸಕರು, ಮುಖಂಡರ ಜತೆ ರೇವಣ್ಣ ಚರ್ಚೆ

ಈ ವೇಳೆ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಜೆಡಿಎಸ್‌ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಕೆ ಆರ್ ಪೇಟೆ ಶಾಸಕ ಎಚ್.ಡಿ. ಮಂಜುನಾಥ್, ಮಾಗಡಿ ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಹಲವರು ಆಗಮಿಸಿದ್ದಾರೆ. ಇನ್ನು ಎಚ್‌.ಡಿ. ರೇವಣ್ಣ ಸಹ ಕೆಲವು ಪ್ರಮುಖರ ಜತೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

Continue Reading

ಕರ್ನಾಟಕ

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Stabbing Case: ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಸೆವೆನ್ ಹಿಲ್ಸ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಘಟನೆ ನಡೆದಿದೆ. ಬಾರ್‌ನಲ್ಲಿ ಭುಜ ತಗುಲಿದ್ದಕ್ಕೆ ನಡೆದ ಗಲಾಟೆತಯಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರು ಯುವಕರು ಚಾಕುವಿನಿಂದ ಇರಿದಿದ್ದಾರೆ.

VISTARANEWS.COM


on

Stabbing Case
Koo

ಚಿಕ್ಕಬಳ್ಳಾಪುರ: ಬಾರ್‌ನೊಳಗೆ ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್ ತೆಗೆದ ಯುವಕರು, ವ್ಯಕ್ತಿಯೊಬ್ಬರಿಗೆ ಮನಸೋ ಇಚ್ಛೆ ಇರಿದಿರುವ ಘಟನೆ (Stabbing Case) ಜಿಲ್ಲೆಯ ಗೌರಿಬಿದನೂರು ನಗರದ ಸೆವೆನ್ ಹಿಲ್ಸ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ತರಕಾರಿ ವ್ಯಾಪಾರಿ ರಮೇಶ್ ಎಂಬುವವರ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ಚಾಲಕ ಮಣಿಕಂಠ ಹಾಗೂ ಸ್ನೇಹಿತ ಪವನ್‌ ಹಲ್ಲೆ ಆರೋಪಿಗಳು. ಬಾರ್‌ನಲ್ಲಿ ಭುಜ ತಗುಲಿದ್ದಕ್ಕೆ ರಮೇಶ್‌ ಹಾಗೂ ಯುವಕರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಈ ವೇಳೆ ಆರೋಪಿಗಳು ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ವ್ಯಾಪಾರಿಗೆ ಗಂಭೀರ ಗಾಯಗಳಾಗಿವೆ. ರಮೇಶ್‌ಗೆ ಬೆಂಗಳೂರಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಟಾ ಏಸ್-ಬೈಕ್ ನಡುವೆ ಅಪಘಾತ; ಸವಾರ ಸಾವು

ಚಿಕ್ಕಬಳ್ಳಾಪುರ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಚೇಳೂರಿನ ಹೊರವಲಯದಲ್ಲಿ ನಡೆದಿದೆ. ಚೇಳೂರು ಮೂಲದ ಪವನ್ ಕುಮಾರ್ (35) ಮೃತ. ಟಾಟಾ ಏಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Love Failure

ದೊಡ್ಡಬಳ್ಳಾಪುರ: ಪ್ರೀತಿಸಿದ ಹುಡುಗಿ (Love Failure) ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ (23) ಮೃತಪಟ್ಟಿದ್ದಾನೆ.

ಬಾಲಾಜಿಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಯುವತಿಯೊಬ್ಬಳು ಪರಿಚಯವಾಗಿದ್ದಳು. ಕನಕಪುರ ಮೂಲದ ಯುವತಿ ಜತೆಗೆ ಪರಿಚಯವು ಪ್ರೀತಿಗೆ ತಿರುಗಿತ್ತು. ಪ್ರೀತಿ- ಪ್ರೇ‌ಮದ ಗುಂಗಿನಲ್ಲಿ ಇಬ್ಬರು ಒಟ್ಟೊಟ್ಟಿಗೆ ಸುತ್ತಾಡಿದ್ದಾರೆ. ಎಲ್ಲ ಕಡೆ ಜತೆಯಾಗಿ ಸುತ್ತಾಡಿ ಕೊನೆಗೆ ಬೇರೊಬ್ಬನ ಜತೆ ಲವ್‌ನಲ್ಲಿರುವುದಾಗಿ ಹೇಳಿ ಕೈಕೊಟ್ಟಿದ್ದಾಳೆ ಎಂಬ ಆರೋಪವಿದೆ.

ಯುವತಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮದುವೆ ಮಾಡಿಕೊಳ್ಳೋಣ ಅಂದಿದ್ದಕ್ಕೆ ಮನೆಯಲ್ಲಿ ಒಪ್ಪಲ್ಲ ಎಂದಿದ್ದಾಳಂತೆ. ಜತೆಗೆ ಬೇರೆ ಯುವಕನ ಜತೆ ಲವ್‌ನಲ್ಲಿರುವುದಾಗಿ ಹೇಳಿದ್ದಳಂತೆ. ಈ ಕಾರಣಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

ಆಮೆಜಾನ್‌ನಲ್ಲಿ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಾಜಿ ಬಡ ಕುಟುಂಬಕ್ಕೆ ಆಧಾರವಾಗಿದ್ದ. ಆದರೆ ಇದೀಗ ಮಗನ ದುರಂತ ಅಂತ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಮೃತ ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
former MLC Arun Shahapur latest Statement
ಬೆಂಗಳೂರು20 seconds ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

HD Revanna Released first reaction after release will be acquitted of all charges
ರಾಜಕೀಯ15 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ16 mins ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Billboard Collapse
ಪ್ರಮುಖ ಸುದ್ದಿ37 mins ago

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

Stabbing Case
ಕರ್ನಾಟಕ39 mins ago

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Ooty Tour
ಪ್ರವಾಸ42 mins ago

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

WhatsApp Update
ತಂತ್ರಜ್ಞಾನ50 mins ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Spoken Language
Latest57 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ1 hour ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ15 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20246 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ7 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು8 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ14 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌