ನಾ ನಾಯಕಿ | ಉಚಿತ ವಿದ್ಯುತ್‌ ಘೋಷಣೆಯಿಂದ ಬಿಜೆಪಿ ಹೆದರಿದೆ ಎಂದ ಸಲೀಂ ಆಹ್ಮದ್‌: ನಾ ನಾಯಕಿ ವೇದಿಕೆಯಲ್ಲಿ ಗಂಡಸರಿಗಿಲ್ಲ ಜಾಗ - Vistara News

ಕರ್ನಾಟಕ

ನಾ ನಾಯಕಿ | ಉಚಿತ ವಿದ್ಯುತ್‌ ಘೋಷಣೆಯಿಂದ ಬಿಜೆಪಿ ಹೆದರಿದೆ ಎಂದ ಸಲೀಂ ಆಹ್ಮದ್‌: ನಾ ನಾಯಕಿ ವೇದಿಕೆಯಲ್ಲಿ ಗಂಡಸರಿಗಿಲ್ಲ ಜಾಗ

ಮಹಿಳೆಯರಿಗಾಗಿಯೇ ರೂಪಿಸಲಾಗಿರುವ ಕಾರ್ಯಕ್ರಮದಲ್ಲಿ ಪುರುಷರು ವೇದಿಕೆ ಎದುರು ಇರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

bjp distrurbed after free electricity announcement says congress leader saleem ahmed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿಯವರು ಇಷ್ಟು ವರ್ಷ ಮಹಿಳೆಯರ ಕುರಿತು ಯಾವುದೇ ಮಾತನಾಡದೆ ಇದೀಗ ಘೋಷಣೆಗಳನ್ನು ಮಾಡುತ್ತಿರುವುದನ್ನು ನೋಡಿದರೆ ಕಾಂಗ್ರೆಸ್‌ನ 200 ಯುನಿಟ್‌ ಉಚಿತ ವಿದ್ಯುತ್‌ ಯೋಜನೆಗೆ ಹೆದರಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗಿಯಾಗುವ, ನಾ ನಾಯಕಿ ಸಮಾವೇಶದ ನಡುವೆ ಸಲೀಂ ಅಹ್ಮದ್‌ ಮಾತನಾಡಿದರು.

೨೦೦ ಯುನಿಟ್‌ ಕೊಡುತ್ತೀವಿ ಎಂದು ಹೇಳಿದ್ದನ್ನು ತಡೆಯಲು ಅವರಿಗೆ ಆಗುತ್ತಿಲ್ಲ. ಇಲ್ಲಿವರೆಗೆ ಏನೂ ಮಾಡದಿದ್ದ ಸರ್ಕಾರ, ಇದೀಗ ಪ್ರಿಯಾಂಕಾ ಗಾಂಧಿಯವರು ಆಗಮಿಸುತ್ತಿರುವಾಗ, ತಾವು ಮಹಿಳಾ ಪರ ಎಂದು ಹೇಳಿಕೊಳ್ಳುತ್ತಿದ್ದಾರೆ. ಪೂರ್ಣ ಪುಟ ಜಾಹೀರಾತು ನೀಡಿದ್ದಾರೆ ಎಂದರು.

ಮಹಿಳೆಯರಿಗೆ ಟಿಕೆಟ್‌ ನೀಡುವ ಕುರಿತು ಪ್ರತಿಕ್ರಿಯಿಸಿ, ಮಹಿಳೆಯರಿಗೆ ಹೆಚ್ಚು ಟಿಕೆಟ್‌ ನೀಡುವ ಕುರಿತು ಹೇಳಬಹುದು. ಆದರೆ ಇಷ್ಟೇ ನೀಡಬೇಕು ಎಂದು ಹೇಳುವ ಸಾಧ್ಯತೆ ಕಡಿಮೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಜಿ ಸಚಿವೆ ಮೋಟಮ್ಮ, ಜೂನಿಯರ್ ಇಂದಿರಾ ಗಾಂಧಿ ಅವರ ಮಾತುಗಳನ್ನು ಕೇಳಲು ಸೇರಿದ್ದೇವೆ. ಒಂದು ಕುಟುಂಬವನ್ನು ನಿರ್ವಹಿಸಲು ಸಮರ್ಥ ಆಗಿದ್ದೇವೆ. ಅದೇ ರೀತಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಮರ್ಥರಾಗಿದ್ದೇವೆ. ಆ ರೀತಿ ಪಕ್ಷ ಕಟ್ಟಲು ಟೊಂಕ ಕಟ್ಟಿ ನಿಲ್ಲಬೇಕು. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಏನು ಮಾಡಿಲ್ಲ ಹೇಳಿ? ಇಂದಿರಾ ಗಾಂಧಿ, ಮನಮೋಹನ್ ಸಿಂಗ್‌ ಅವರು ಅನೇಕ ಯೋಜನೆಗಳನ್ನು ಕೊಟ್ಟರು. ಸಂವಿಧಾನದಿಂದ ಮತದಾನ ಹಕ್ಕು, ಆಸ್ತಿ ಹಕ್ಕು, ರಾಜಕೀಯವಾಗಿ ಸ್ಥಳೀಯ ಸಂಸ್ಥೆಗಳಲ್ಲಿ 50% ಮೀಸಲಾತಿ ಕೊಟ್ಟಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು, ಇದಕ್ಕಾಗಿ ಅಂದಿನ ಸ್ತ್ರೀ ಸಂಘಗಳನ್ನು ಮಾಡಿದರು ಎಂದರು.

ಗಂಡಸರು ವೇದಿಕೆ ಮುಂದೆ
ಮಹಿಳೆಯರ ಕಾರ್ಯಕ್ರಮವಾದ್ಧರಿಂದ ವೇದಿಕೆ ಮೇಲೆ ಯಾವುದೇ ಗಂಡಸರು ಕೂರುವುದಿಲ್ಲ ಎಂದು ನಿರ್ಧರಿಸದಲಾಗಿತ್ತು. ವೇದಿಕೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಇದು ನಿಮ್ಮ ಕಾರ್ಯಕ್ರಮ. ಆಹ್ವಾನಿತ ಗಣ್ಯರು ವೇದಿಕೆ ಎದುರು ಕೂರುತ್ತಾರೆ. ಆದರೆ ಯಾವುದೇ ಗಂಡಸರು ವೇದಿಕೆ ಮೇಲೆ ಇರುವುದಿಲ್ಲ ಎಂದು ವೇದಿಕೆಯಿಂದ ಕೆಳಗಿಳಿದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ಎದುರುಗಡೆ ಆಸೀನರಾದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

Prajwal Revanna Case: ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿತ್ತು. ಈ ಬೆಡ್‌ಸ್ಪ್ರೆಡ್‌ ಅನ್ನು ಪ್ರಜ್ವಲ್‌ ಮುಂದೆ ಹಿಡಿದು ಪ್ರಶ್ನಿಸಿದಾಗ, ಸಕಾರಾತ್ಮಕ ಉತ್ತರ ದೊರೆತಿಲ್ಲ. ಈ ನಡುವೆ, ಅಶ್ಲೀಲ ವಿಡಿಯೋ ಮಾಡಿಕೊಂಡಿರಬಹುದಾದ ಮೊಬೈಲ್‌ ಕೂಡ ಪ್ರಜ್ವಲ್‌ ಬಳಿ ದೊರೆತಿಲ್ಲ.

VISTARANEWS.COM


on

prajwal revanna case bedsheet
Koo

ಬೆಂಗಳೂರು: ಅತ್ಯಾಚಾರ (Physical Abuse) ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ (‌Prajwal Revanna Case) ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದ್ದು, ಪ್ರಜ್ವಲ್‌ ಮನೆಯಲ್ಲಿ ವಶಪಡಿಸಿಕೊಳ್ಳಲಾದ ʼಸಂಶಯಾಸ್ಪದʼ ಕಲೆಗಳುಳ್ಳ ಬೆಡ್‌ಶೀಟ್‌ ಬಗ್ಗೆ ಪ್ರಶ್ನಿಸಿದೆ. ಈ ಸಂದರ್ಭದಲ್ಲಿ ಆ ಕಲೆಗಳಿಗೂ ತನಗೂ ಸಂಬಂಧವೇ ಇಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಮೇ 29ರಂದು ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್‌ ಆಗಮನಕ್ಕೂ ಒಂದು ದಿನ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದೆ. ಶೋಧದ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿತ್ತು. ಈ ಬೆಡ್‌ಸ್ಪ್ರೆಡ್‌ ಅನ್ನು ಪ್ರಜ್ವಲ್‌ ಮುಂದೆ ಹಿಡಿದು ಪ್ರಶ್ನಿಸಿದಾಗ, ಸಕಾರಾತ್ಮಕ ಉತ್ತರ ದೊರೆತಿಲ್ಲ.

ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ನಡುವೆ, ಅಶ್ಲೀಲ ವಿಡಿಯೋ ಮಾಡಿಕೊಂಡಿರಬಹುದಾದ ಮೊಬೈಲ್‌ ಕೂಡ ಪ್ರಜ್ವಲ್‌ ಬಳಿ ದೊರೆತಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ಅದು ಒಂದು ವರ್ಷದ ಹಿಂದೆಯೇ ನಾಪತ್ತೆಯಾಗಿದೆ. ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ ಎಂದು ತಿಳಿಸಿದ್ದಾರೆ ಪ್ರಜ್ವಲ್.‌ ಈ ಬಗ್ಗೆಯೂ ಹೆಚ್ಚಿನ ತನಿಖೆ ನಡೆಯಬೇಕಿದೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ‌ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಮೊದಲ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಈಗ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣದಲ್ಲಿ ಬೇಕಾಗಿರುವ ಭವಾನಿ ರೇವಣ್ಣ (Bhavani Revanna) ಇನ್ನೂ ಎಸ್‌ಐಟಿ ಕೈಗೆ ಸಿಕ್ಕಿಲ್ಲ.

ಪುರುಷತ್ವ ಪರೀಕ್ಷೆಗೆ ಕೋರ್ಟ್‌ ಸಮ್ಮತಿ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತನಿಖೆಗೆ ಅಸಹಕಾರ ನೀಡುತ್ತಿದ್ದರು. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Continue Reading

ಬೆಂಗಳೂರು

Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Electric Airport Taxi : ಪರಿಸರಕ್ಕೆ ಪೂರಕವಾಗುವ ದೃಷ್ಟಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ ನೀಡಲಾಗಿದೆ. ಎರಡು ಬಣ್ಣದ ಟ್ಯಾಕ್ಸಿಗಳಲ್ಲಿ ಒಂದು ಗುಲಾಬಿ ಟ್ಯಾಕ್ಸಿಯು ವಿಶೇಷವಾಗಿ ಮಹಿಳೆಯರಿಗಾಗಿಯೇ ಮೀಸಲಿಡಲಾಗಿದೆ. ಈ ಟ್ಯಾಕ್ಸಿಗಳನ್ನು ಮಹಿಳಾ ಚಾಲಕಿಯರೇ ಚಲಾಯಿಸಲಿದ್ದಾರೆ.

VISTARANEWS.COM


on

By

Electric airport taxis introduced at Kempegowda International Airport
Koo

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ರಿಫೆಕ್ಸ್‌ ಇವೀಲ್ಜ್‌ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳನ್ನು (Electric Airport Taxi) ಪರಿಚಯಿಸಲಾಗಿದೆ.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಒಟ್ಟು 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಬಿಐಎಎಲ್‌ನ ಸಿಇಒ ಹರಿ ಮರಾರ್, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಚಾಲನೆ ನೀಡಿದರು.

ಬಳಿಕ ಮಾತನಾಡಿದ ಬಿಐಎಎಲ್‌ನ ಸಿಇಒ ಹರಿ ಮರಾರ್, ಏರ್‌ಪೋರ್ಟ್‌ನಲ್ಲಿ ಪರಿಸರಯುಕ್ತ ವಾತಾವರಣ ನಿರ್ಮಾಣ ಮಾಡಲು ಈ ಪರಿಸರ ದಿನದಂದೇ ಬಹುತೇಕ ಇಂಧನಯುಕ್ತ ಟ್ಯಾಕ್ಸಿಗಳನ್ನು ಎಲೆಕ್ಟ್ರಿಕ್‌ ಟ್ಯಾಕ್ಸಿಗಳಾಗಿ ಪರಿವರ್ತಿಸಲಾಗಿದೆ. ಇದೀಗ 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಸೇರಿದಂತೆ ಶೇ.50 ಟ್ಯಾಕ್ಸಿಗಳು ಎಲೆಕ್ಟ್ರಿಕ್‌ ವಾಹನಗಳಾಗಿ ಪರಿವರ್ತಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲಿದ್ದೇವೆ ಎಂದರು.

ರಿಫೆಕ್ಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಜೈನ್ ಮಾತನಾಡಿ, ರಿಫೆಕ್ಸ್‌ನ ಗ್ರೀನ್, ರಿಫೆಕ್ಸ್ ಇವೀಲ಼್ ಮೂಲಕ ಏರ್‌ಪೋರ್ಟ್‌ನಲ್ಲಿ ಇವಿ ಟ್ಯಾಕ್ಸಿ ಒದಗಿಸುವ ಅವಕಾಶ ನಮಗೆ ದೊರೆತಿದೆ. ಈ ನೂತನ EV ಏರ್‌ಪೋರ್ಟ್‌ ಟ್ಯಾಕ್ಸಿಗಳನ್ನು ಪ್ರಯಾಣಿಕರು ಸುಲಭವಾಗಿ ಬುಕ್ ಮಾಡಬಹುದು. ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಲ್ಲಿ ಹಾಗೂ ಬಳಕೆದಾರ ಸ್ನೇಹಿ BLR ಪಲ್ಸ್ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಬುಕ್‌ ಮಾಡಬಹುದು.

Electric airport taxi

ಇದನ್ನೂ ಓದಿ: Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

ಇನ್ನು, ಮರುವಿನ್ಯಾಸಗೊಳಿಸಲಾದ EV ಟ್ಯಾಕ್ಸಿಗಳು ತಿಳಿನೀಲಿ ಬಣ್ಣ ಹಾಗೂ ಗುಲಾಬಿ ಬಣ್ಣ ಈ ಎರಡು ವಿಶಿಷ್ಟ ಬಣ್ಣಗಳಲ್ಲಿ ಇರಲಿವೆ. ತಿಳಿನೀಲಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಎಲ್ಲರೂ ಬಳಸಬಹುದಾಗಿದ್ದು, ಈ ಬಣ್ಣವು ಸುಸ್ಥಿರತೆಯನ್ನು ಒತ್ತಿ ಹೇಳುತ್ತದೆ. ಇನ್ನು, ಗುಲಾಬಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಮಹಿಳೆಯರಿಗಾಗಿ ಮೀಸಲಿಟ್ಟಿದ್ದು, ಈ ಟ್ಯಾಕ್ಸಿಗಳನ್ನು ಮಹಿಳಾ ಚಾಲಕಿಯರೇ ಚಲಾಯಿಸಲಿರುವುದು ವಿಶೇಷವಾಗಿದೆ.

Electric airport taxi

ತುರ್ತು ಸಂಪರ್ಕಕ್ಕೆ ಪಿಂಕ್‌ ಕಾರ್ಡ್‌

ಇನ್ನು, ಪ್ರತಿ ಪ್ರಯಾಣಿಕರಿಗೆ ಡ್ಯೂಟಿ ಮ್ಯಾನೇಜರ್, ಸ್ಥಳೀಯ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಒಳಗೊಂಡಿರುವ ಪೂರಕ “ಪಿಂಕ್ ಕಾರ್ಡ್” ಅನ್ನು ಸಹ ಒದಗಿಸಲಾಗುತ್ತದೆ. ಇದರಿಂದ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಅರೆ-ರೊಬೊಟಿಕ್ ವಿಮಾನ ಟೋಯಿಂಗ್ ವಾಹನಗಳು ಮತ್ತು EV ವಾಹನಗಳನ್ನು ಏರ್‌ಸೈಡ್ ಮತ್ತು ಲ್ಯಾಂಡ್‌ಸೈಡ್ ಎರಡೂ ಕಡೆಯಲ್ಲೂ ಅನುಷ್ಠಾನಗೊಳಿಸಲಾಗಿದೆ. ಹೀಗಾಗಿ BLR ಏರ್‌ಪೋರ್ಟ್‌ನಲ್ಲಿರುವ ಎಲ್ಲಾ ವಾಹನಗಳನ್ನು ಸಮರ್ಥನೀಯ ಆಯ್ಕೆಗಳಿಗೆ ಪರಿವರ್ತಿಸುವ ದೀರ್ಘಾವಧಿಯ ದೃಷ್ಟಿಯೊಂದಿಗೆ BIAL ಹೊಂದಾಣಿಕೆಯನ್ನು ಮುಂದುವರೆಸಿದೆ. ಕಾರ್ಯಕ್ರಮದಲ್ಲಿ ವಿಶ್ವ ಪರಿಸರ ದಿನದ ನೆನಪಿನಾರ್ಹ, ವಿಮಾನ ನಿಲ್ದಾಣದ ಕ್ಯಾಂಪಸ್‌ನಲ್ಲಿ 100 ಸಸಿಗಳನ್ನು ನೆಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Bhavani Revanna: ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಅವರನ್ನು ಎಸ್‌ಐಟಿ ಬಂಧನ ಮಾಡಿತ್ತು. ಆದರೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿ ವಾರವೇ ಕಳೆದಿದೆ. ಅಲ್ಲದೆ ಎಸ್‌ಐಟಿಯ ಎರಡು ನೊಟೀಸ್‌ಗಳಿಗೂ ಭವಾನಿ ಕ್ಯಾರೇ ಎಂದಿಲ್ಲ.

VISTARANEWS.COM


on

Bhavani Revanna
Koo

ಬೆಂಗಳೂರು: ಕೆ.ಆರ್‌ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯೊಬ್ಬರನ್ನು ಅಪಹರಣ (kidnap case) ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ  (Bhavani Revanna) ಒಂದು ವಾರದಿಂದ ತಲೆ ಮರೆಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಅಧಿಕಾರಿಗಳು ಒಂದು ದಿನ ಮಾತ್ರ ಭವಾನಿ ಮನೆಯ ಮುಂದೆ ಪಹರೆ ಕಾದಿದ್ದು, ನಂತರ ಮರೆತೇ ಬಿಟ್ಟಂತಿದೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರ ಬಂಧನ ಮಾಡಲು ಎಸ್‌ಐಟಿ ಬಲು ತರಾತುರಿಯಲ್ಲಿತ್ತು. ಅಗತ್ಯವಿಲ್ಲ ಎನಿಸಿದರೂ ರೇವಣ್ಣರನ್ನು ಕರೆದುಕೊಂಡು ಬಂದು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿ, ಜಾಮೀನು ದೊರೆಯದಂತೆ ತುಂಬಾ ಪ್ರಯತ್ನಿಸಿತ್ತು. ಈ ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರ ಹೆಚ್ಚೇನೂ ಇಲ್ಲ ಎಂದು ತಿಳಿದಿದ್ದರೂ, ಹೆಚ್ಚಿನ ವಿಚಾರಣೆಗೆ ಹೆಚ್ಚಿನ ಸಮಯ ಕಸ್ಟಡಿಗೆ ಕೊಡುವಂತೆ ನ್ಯಾಯಾಲಯವನ್ನು ಕೋರಿತ್ತು. ಆದರೆ ಭವಾನಿ ವಿಷಯದಲ್ಲಿ ಅಂಥ ತರಾತುರಿಯನ್ನು ಎಸ್‌ಐಟಿ ತೋರಿಸಿಲ್ಲ.

ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಅವರನ್ನು ಎಸ್‌ಐಟಿ ಬಂಧನ ಮಾಡಿತ್ತು. ಆದರೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿ ವಾರವೇ ಕಳೆದಿದೆ. ಅಲ್ಲದೆ ಎಸ್‌ಐಟಿಯ ಎರಡು ನೊಟೀಸ್‌ಗಳಿಗೂ ಭವಾನಿ ಕ್ಯಾರೇ ಎಂದಿಲ್ಲ. ಎರಡು ಸಲ ನೋಟೀಸ್‌ ನೀಡಿದ ಬಳಿಕ, ʼತನಿಖೆಗೆ ಬೇಕಿದ್ದರೆ ಹೊಳೆನರಸೀಪುರದ ಮನೆಗೆ ಬನ್ನಿʼ ಎಂದು ಉತ್ತರಿಸಿದ್ದರು. ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ ಅಲ್ಲಿಂದ ನಾಪತ್ತೆಯಾಗಿದ್ದರು. ಎಸ್‌ಐಟಿ ತಂಡ ಇಡೀ ದಿನ ಕಾದು ವಾಪಸಾಗಿತ್ತು. ಎಲ್ಲಿದ್ದಾರೆ ಎಂದು ಹುಡುಕುವ ಯತ್ನವನ್ನೂ ಎಸ್‌ಐಟಿ ಮಾಡಿದಂತಿಲ್ಲ.

ಇದೀಗ ಭವಾನಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ (Prajwal Revanna Case) ವಿದೇಶದಲ್ಲಿದ್ದ ಕಾರಣ ಒಂದು ತಿಂಗಳ ಕಾಲ ಬಂಧನ ಸಾಧ್ಯವಾಗಿಲಿಲ್ಲ. ಆದರೆ ಭವಾನಿ ರೇವಣ್ಣ ದೇಶದಲ್ಲಿಯೇ ತಲೆ ಮರೆಸಿಕೊಂಡಿದ್ದು, ಎಲ್ಲಿದ್ದಾರೆ ಎಂಬ ಸುಳಿವು ದೊರೆತಿಲ್ಲ. ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ಪಾತ್ರ ಇದೆ ಎಂಬುದಕ್ಕೆ ಹಲವು ದಾಖಲೆಗಳನ್ನು ಎಸ್‌ಐಟಿ ನ್ಯಾಯಾಲಯಕ್ಕೆ ನೀಡಿತ್ತು. ಆದರೆ ಬಂಧನ ಮಾಡದೇ ಇರುವ ಕುರಿತು ಕುತೂಹಲ ಹುಟ್ಟಿಕೊಂಡಿದೆ.

ಈಗಾಗಲೇ ಪ್ರಜ್ವಲ್‌ ಹಾಗೂ ರೇವಣ್ಣ ಬಂಧನದ ನಂತರ, ದೇವೇಗೌಡ ಕುಟುಂಬದ ಮೇಲೆ ದ್ವೇಷ ರಾಜಕಾರಣ ನಡೆಸಲಾಗುತ್ತಿದೆ ಎಂಬ ಅಭಿಪ್ರಾಯವನ್ನು ಹರಡಲು ಜೆಡಿಎಸ್‌ ಬಹುಪಾಲು ಯಶಸ್ವಿಯಾಗಿದೆ. ಭವಾನಿ ಬಂಧನ ಆದರೆ ಈ ಅಭಿಪ್ರಾಯಕ್ಕೆ ಇನ್ನಷ್ಟು ಪುಷ್ಟಿ ನೀಡಿದಂತಾಗುತ್ತದೆ ಎಂಬ ಕಾರಣದಿಂದ, ಭವಾನಿ ಬಂಧನಕ್ಕೆ ತಡೆ ಹಾಕಲು ಮೇಲಿನಿಂದಲೇ ಸೂಚನೆ ಬಂದಿದೆಯಾ? ಎಂದೂ ಕೂಡ ಮಾತನಾಡಿಕೊಳ್ಳಲಾಗುತ್ತಿದೆ.

ಮೂರು ಜಿಲ್ಲೆ, ನಾಲ್ಕು ತಂಡಗಳು

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ.

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Valmiki Corporation Scam: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

VISTARANEWS.COM


on

valmiki corporation scam nagendra siddaramaiah
Koo

ಬೆಂಗಳೂರು: ವಾಲ್ಮೀಕಿ ನಿಗಮದ (Valmiki Corporation Scam) ಹಗರಣಕ್ಕೆ ಸಂಬಂಧಿಸಿ ನಿನ್ನೆ ಸಚಿವ ನಾಗೇಂದ್ರ (Minister B Nagendra) ಜೊತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತುಕತೆ ನಡೆಸಿದ್ದು, ಇಂದು ರಾಜೀನಾಮೆ (Resignation) ಕೊಡಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಭೇಟಿ ವೇಳೆ, ನಾಳೆ ಈ ಕುರಿತು ಇನ್ನಷ್ಟು ಮಾತನಾಡಲು ಬರುವಂತೆ ಸಿಎಂ ತಿಳಿಸಿದ್ದು, ಇಂದು ಬಹುತೇಕ ರಾಜೀನಾಮೆಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿನ್ನೆಯೇ ಸಿಎಂ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗೇಂದ್ರ, ಸಿಎಂ ಇಂದು ಬರೋದಕ್ಕೆ ತಿಳಿಸಿದ್ದಾರೆ ಅನ್ನುತ್ತಿದ್ದಾರೆ. ಬಹುತೇಕ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ಸಿಎಂ ಸೂಚನೆ ಮೇರೆಗೆ ಇಂದು ರಾಜೀನಾಮೆ ಕೊಟ್ಟರೆ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಾಗೇಂದ್ರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವಾಲ್ಮೀಕಿ ನಿಗಮ ಆಕ್ರಮ ಹಣ ವರ್ಗಾವಣೆ ವಿಚಾರ ಕುರಿತು ಸಿಎಂ ಚರ್ಚಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅನ್ನು ಸಚಿವ ನಾಗೇಂದ್ರ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ವಾಲ್ಮೀಕಿ ನಿಗಮದ 185 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ಬಿಜೆಪಿ ನಾಗೇಂದ್ರ ವಿರುದ್ಧ ರಣಕಹಳೆ ಮೊಳಗಿಸಿದೆ. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿದೆ. ಹೀಗಾಗಿ ಏನಾದರೂ ಒಂದು ಕ್ರಮ ತೆಗೆದುಕೊಳ್ಳುವುದು ಸಿಎಂಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಾಗೇಂದ್ರರನ್ನು ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು ಎಂದು ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳೇ ಮುಗುಂ ಆಗಿದ್ದಾರೆ. ಹೀಗಾಗಿ, ಸಿಬಿಐಯಲ್ಲಿ ಎಫ್ಐಆರ್ ದಾಖಲು ಆಗುತ್ತಿದ್ದಂತೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

45 ಕೋಟಿ ರೂ. ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ವರ್ಗಾವಣೆ ಕೇಸ್ ಸಂಬಂಧಿಸಿ SITಯಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಸೀಜ್ ಮಾಡಲಾಗಿದೆ. ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಖಾತೆಗೆ ನಿಗಮದಿಂದ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ.ನಲ್ಲಿ ಬಹುಪಾಲು ಹಣ ಡ್ರಾ ಆಗಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

ಸದ್ಯ ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಎಸ್‌ಐಟಿ ಬಂಧಿಸಿದೆ. ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನವಾಗಿದೆ. ಐವರನ್ನು ಕಸ್ಟಡಿಗೆ ಪಡೆದು SIT ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Continue Reading
Advertisement
prajwal revanna case bedsheet
ಕ್ರೈಂ10 seconds ago

Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

Electric airport taxis introduced at Kempegowda International Airport
ಬೆಂಗಳೂರು9 mins ago

Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Chandrababu Naidu
ದೇಶ14 mins ago

Chandrababu Naidu: ಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Rishta Laboni Shimana passes away
ಸಿನಿಮಾ35 mins ago

Rishta Laboni Shimana: ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಶ್ತಾ ನಿಧನ

Bhavani Revanna
ಪ್ರಮುಖ ಸುದ್ದಿ50 mins ago

Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Aishwarya Arjun reception dates out
ಟಾಲಿವುಡ್56 mins ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Indonesia Open
ಕ್ರೀಡೆ57 mins ago

Indonesia Open: ಮತ್ತೆ ಮುಂದುವರಿದ ಸಿಂಧು ವೈಫಲ್ಯ; ಇಂಡೋನೇಷ್ಯಾ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲು

CBSE
ದೇಶ59 mins ago

CBSE: ಪ್ರಾಯೋಗಿಕ ಪರೀಕ್ಷೆಗಳಲ್ಲಿ ಬೇಕಾಬಿಟ್ಟಿ ಅಂಕ!ಖಾಸಗಿ ಶಾಲೆಗಳಿಗೆ ಸಿಬಿಎಸ್‌ಇ ಖಡಕ್‌ ವಾರ್ನಿಂಗ್

Uddhav Thackeray
Lok Sabha Election 20241 hour ago

Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

T20 World Cup 2024
ಕ್ರೀಡೆ1 hour ago

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌