Ayodhya | ಅಯೋಧ್ಯೆಯಲ್ಲಿ ಪ್ರವೇಶ ದ್ವಾರಗಳಿಗೆ ರಾಮಾಯಣದ ಪಾತ್ರಗಳ ನಾಮಕರಣಕ್ಕೆ ನಿರ್ಧಾರ - Vistara News

ದೇಶ

Ayodhya | ಅಯೋಧ್ಯೆಯಲ್ಲಿ ಪ್ರವೇಶ ದ್ವಾರಗಳಿಗೆ ರಾಮಾಯಣದ ಪಾತ್ರಗಳ ನಾಮಕರಣಕ್ಕೆ ನಿರ್ಧಾರ

ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆ (Ayodhya) ನಗರಕ್ಕೆ ನಿರ್ಮಿಸಲಾಗುತ್ತಿರುವ ಪ್ರವೇಶ ದ್ವಾರಗಳಿಗೆ ರಾಮಾಯಣದ ಪಾತ್ರಗಳ ಹೆಸರನ್ನು ನಾಮಕರಣ ಮಾಡುವುದಕ್ಕೆ ನಿರ್ಧರಿಸಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯನ್ನು (Ayodhya) ವಿಶ್ವ ದರ್ಜೆಯ ನಗರವನ್ನಾಗಿ ಮಾಡುವುದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕನಸಾಗಿದೆ. ಆ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ರಾಮ ಮಂದಿರದಿಂದಾಗಿ ಅತ್ಯುನ್ನತ ಪ್ರವಾಸಿ ತಾಣವಾಗಲಿರುವ ಅಯೋಧ್ಯೆಗೆ ಹಲವು ಪ್ರವೇಶ ದ್ವಾರಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳಿಗೆ ರಾಮಾಯಣದ ಪಾತ್ರಗಳ ಹೆಸರನ್ನು ಇಡುವುದಕ್ಕೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Ram mandir | ಅಯೋಧ್ಯೆಯ ರಾಮ ಮಂದಿರದಲ್ಲಿ 2024 ಜನವರಿ 14ರ ಮಕರ ಸಂಕ್ರಾಂತಿಗೆ ಶ್ರೀರಾಮ ವಿರಾಜಮಾನ

ಲಕ್ನೋ ಮಾರ್ಗದಿಂದ ಬರುವವರಿಗೆ ಮಾಡಲಾಗುತ್ತಿರುವ ಪ್ರವೇಶ ದ್ವಾರಕ್ಕೆ “ಶ್ರೀ ರಾಮ ದ್ವಾರ” ಎನ್ನುವ ಹೆಸರಿಡಲಾಗುವುದು. ಹಾಗೆಯೇ ಗೋರಖ್‌ಪುರದಿಂದ ಬರುವವರಿಗೆ ಮಾಡಲಾಗುತ್ತಿರುವ ದ್ವಾರಕ್ಕೆ “ಹನುಮ ದ್ವಾರ”, ಅಲಹಬಾದ್‌ ರಸ್ತೆಯ ದ್ವಾರಕ್ಕೆ “ಭರತ ದ್ವಾರ”, ಗೊಂಡಾ ರಸ್ತೆಯ ದ್ವಾರಕ್ಕೆ “ಲಕ್ಷ್ಮಣ ದ್ವಾರ”, ವಾರಾಣಸಿ ರಸ್ತೆಯ ದ್ವಾರಕ್ಕೆ “ಜಟಾಯು ದ್ವಾರ” ಹಾಗೂ ರಾಯ್‌ಬರೇಲಿ ರಸ್ತೆಯ ದ್ವಾರಕ್ಕೆ “ಗರುಡ ದ್ವಾರ” ಎಂದು ಹೆಸರಿಡಲಾಗುವುದು. ಈ ರೀತಿಯ ಹೆಸರನ್ನು ಇಡುವುದಕ್ಕೆ ಮುಖ್ಯಮಂತ್ರಿ ಯೋಗಿ ಅವರೇ ಸೂಚನೆ ನೀಡಿರುವುದಾಗಿ ಹೇಳಲಾಗಿದೆ.

ಈ ದ್ವಾರಗಳ ಬಳಿಯಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸಕೊಡಲಾಗುವುದು. ದೊಡ್ಡದಾದ ಪಾರ್ಕಿಂಗ್‌ ವ್ಯವಸ್ಥೆ, ಶೌಚಾಲಯಗಳು, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಸೇರಿ ಎಲ್ಲ ರೀತಿಯ ಸೌಲಭ್ಯಗಳನ್ನು ಈ ಎಲ್ಲ ದ್ವಾರಗಳ ಸಮೀಪದಲ್ಲಿಯೇ ನಿರ್ಮಿಸಿಕೊಡಲಾಗುವುದು.

ಇದನ್ನೂ ಓದಿ: Adiyogi Statue | ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಭವ್ಯ ʼಆದಿಯೋಗಿʼ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

VISTARANEWS.COM


on

pm narendra modi nomination
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ (Narendra modi nomination) ಸಲ್ಲಿಸಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಸಂದರ್ಭದಲ್ಲಿ ಅವರೊಂದಿಗೆ ಇದ್ದರು. ನಿನ್ನೆ ಪ್ರಧಾನಿ ಮೋದಿ ವಾರಾಣಸಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದವರು.

“… ನಮಗೆ ಬೆಳಿಗ್ಗೆ ಮಾಹಿತಿ ಸಿಕ್ಕಿತು. ಪಕ್ಷದ ಕಾರ್ಯಕರ್ತನಾಗಿ ನನಗೆ ವಹಿಸಿದ ಕೆಲಸಗಳನ್ನು ಮಾಡುತ್ತಿದ್ದೇನೆ. ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ…, ”ಎಂದು ಸೋಂಕರ್ ಮಾಧ್ಯಮಗಳಿಗೆ ತಿಳಿಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಪ್ರತಿಪಾದಕರು ಕೃಷಿ ವಿಜ್ಞಾನಿ, ಬಿಎಚ್‌ಯು ಮಹಿಳಾ ಮಹಾವಿದ್ಯಾಲಯದ ಮಾಜಿ ಪ್ರಾಂಶುಪಾಲರು, ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ವಾರಣಾಸಿ ಘಾಟ್‌ಗಳ ಮುಖ್ಯ ದಹನಕಾರ ಹೀಗೆ ವಿವಿಧ ಹಿನ್ನೆಲೆಗಳಿಂದ ಬಂದವರಾಗಿದ್ದರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading

Latest

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Viral Video: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಬೀದಿ ಬದಿಯ ವ್ಯಾಪಾರಿಯೊಬ್ಬ ಜನಪ್ರಿಯ ಭಾರತೀಯ ಉಪಾಹಾರ ಖಾದ್ಯವಾದ ಪರಾಠವನ್ನು ತಯಾರಿಸಲು ಡಿಸೇಲ್ ಹಾಕಿರುವುದನ್ನು ತೋರಿಸಲಾಗಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

VISTARANEWS.COM


on

By

Viral Video
Koo

ಬೀದಿ ಬದಿ ಆಹಾರದಲ್ಲಿ (street food) ಸಿಗುವ ರುಚಿ ಬೇರೆ ಯಾವ ದೊಡ್ಡ ರೆಸ್ಟೋರೆಂಟ್ ಗಳಲ್ಲೂ ಸಿಗುವುದಿಲ್ಲ. ಬೀದಿ ಬದಿ ಆಹಾರವನ್ನು ಇಷ್ಟ ಪಡುವ ಒಂದು ವರ್ಗವೇ ಇದೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇರುತ್ತದೆ. ಆದರೆ ಆರೋಗ್ಯ (health) ಕಾಪಾಡಲು, ಆಹಾರದ ಸುರಕ್ಷತೆ (Food safety), ಸ್ವಚ್ಛತೆ (clean) ಬಗ್ಗೆ ಗಮನ ಕೊಡುವವರು ಬೀದಿಬದಿ ವ್ಯಾಪಾರಿಗಳು ಯಾವ ರೀತಿ ಆಹಾರ ತಯಾರಿಸುತ್ತಾರೆ ಎಂಬುದನ್ನು ನೋಡಿ ತಿನ್ನುವುದು ಒಳ್ಳೆಯದು.

ಆರೋಗ್ಯದ ವಿಷಯದಲ್ಲಿ ಹೆಚ್ಚಿನವರು ಜಾಗ್ರತರಾಗಿರಬೇಕು. ಸ್ಥಿರವಾದ ಕೊಲೆಸ್ಟ್ರಾಲ್ ಮಟ್ಟ ಮತ್ತು ನಮ್ಮ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ನಾವು ಹೆಚ್ಚಾಗಿ ಎಣ್ಣೆಯುಕ್ತ ಆಹಾರಗಳಿಂದ ದೂರವಿರುವುದು ಒಳ್ಳೆಯದು. ಆದರೆ ಇಲ್ಲೊಂದು ವೈರಲ್ ವಿಡಿಯೋ (Viral Video) ಮಾತ್ರ ಭಯ ಹುಟ್ಟಿಸುತ್ತದೆ. ಬೀದಿ ಬದಿಯ ಆಹಾರ ಬೇಡವೇ ಬೇಡ ಎನ್ನುವಂತೆ ಮಾಡುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಬೀದಿ ಬದಿಯ ವ್ಯಾಪಾರಿಯೊಬ್ಬ ಜನಪ್ರಿಯ ಭಾರತೀಯ ಉಪಹಾರ ಖಾದ್ಯವಾದ ಪರಾಠವನ್ನು ತಯಾರಿಸಲು ಡಿಸೇಲ್ ಹಾಕಿರುವುದನ್ನು ತೋರಿಸಲಾಗಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಆತ ಪರಾಠಾ ತಯಾರಿಸಲು ಡಿಸೇಲ್ ಬಳಕೆ ಮಾಡಿರುವುದನ್ನು ವ್ಯಕ್ತಿಯೊಬ್ಬ ಆತನಿಗೆ ಗೊತ್ತಾಗದಂತೆ ಕೆಮರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.


ಡಿಸೇಲ್ ನಲ್ಲಿ ತಯಾರಿಸಿದ ಪರಾಠಾವನ್ನು ಗ್ರಾಹಕರಿಗೆ ಬಡಿಸುವ ಆತ “ಎಸ್ಕೊ ಖಕ್ರ್ ಕಚೋರಿ ಕಾ ಟೇಸ್ಟ್ ಆತಾ ಹೈ (ಇದು ಕಚೋರಿಯಂತೆ ರುಚಿಯಾಗಿದೆ) ಎನ್ನುತ್ತಾನೆ. ಪರಾಠಾವನ್ನು ಹುರಿಯಲು ಟಿನ್ ಕ್ಯಾನ್‌ನಿಂದ ಡೀಸೆಲ್ ಸುರಿಯುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು.

ಕ್ಯಾನ್ಸರ್‌ಗೆ ನಿಜವಾದ ಪಾಕವಿಧಾನ (ಪೆಟ್ರೋಲ್ ಡೀಸೆಲ್ ವಾಲಾ ಪರಾಠ) ನಾವು ಎಲ್ಲಿಗೆ ಹೋಗುತ್ತಿದ್ದೇವೆ? ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಳ್ಳಲಾಗಿದೆ. ಚಂಡೀಗಢದ ಬಬ್ಲು ಧಾಬಾ: ಈ ಡೀಸೆಲ್-ಫ್ರೈಡ್ ಪರಾಠವನ್ನು ಎಲ್ಲಿ ತಯಾರಿಸಲಾಗುತ್ತದೆ ಎಂಬುದನ್ನು ಈ ವಿಡಿಯೋ ಬಹಿರಂಗಪಡಿಸುತ್ತದೆ.
ಆನ್ ಲೈನ್ ನಲ್ಲಿ 4 ಲಕ್ಷಕ್ಕೂ ಹೆಚ್ಚು ಮಂದಿ ಇದನ್ನು ವೀಕ್ಷಿಸಿದ್ದಾರೆ. ಸಾಕಷ್ಟು ಮಂದಿ ಆತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ನನ್ನ ಹೊಸ ಅನಾರೋಗ್ಯಕರ ಅಡುಗೆ ಎಣ್ಣೆಗಳ ಪಟ್ಟಿ ಡಿಸೇಲ್ ಪೆಟ್ರೋಲ್ ಬೀಜದ ಎಣ್ಣೆಗಳು ಎಂದು ಬಳಕೆದಾರನೊಬ್ಬ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರೆ, ಇನ್ನೊಬ್ಬ ಅವನು ಶೀಘ್ರದಲ್ಲೇ ಫೆರಾರಿಯನ್ನು ಖರೀದಿಸುತ್ತಾನೆ ಮತ್ತು ಅವನ ಗ್ರಾಹಕರು ಶೀಘ್ರದಲ್ಲೇ ತಮ್ಮ ಮನೆ ಮತ್ತು ಕಾರುಗಳನ್ನು ಮಾರಾಟ ಮಾಡಲಿದ್ದಾರೆ ಕ್ಯಾನ್ಸರ್ ಚಿಕಿತ್ಸೆಗಾಗಿ ಎಂದು ಹೇಳಿದ್ದಾನೆ.

ಮತ್ತೊಬ್ಬರು ಕನಿಷ್ಠ ಅವರು ತಲೆಯ ಮೇಲೆ ಕ್ಯಾಪ್ ಧರಿಸಿದ್ದರು. ಆದ್ದರಿಂದ ಕ್ಯಾನ್ಸರ್ ಪರಾಠದಲ್ಲಿ ಕೂದಲು ಇಲ್ಲ ಹೇಳಿದ್ದು, ಡಿಸೇಲ್ ಬಳಕೆಯ ಬಗ್ಗೆ ಹಲವರು ಸಂದೇಹ ವ್ಯಕ್ತಪಡಿಸಿದ್ದಾರೆ. ಅಡುಗೆ ಮಾಡುವಾಗ ಬೆಂಕಿ ಹೊತ್ತಿಕೊಳ್ಳುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದು ಬಹುಶಃ ಕೇವಲ ಹಳೆಯ ಎಣ್ಣೆ. ಡಿಸೇಲ್ ಸುಮಾರು 200ಸಿಗೆ ಬೆಂಕಿಯನ್ನು ಹಿಡಿಯುತ್ತದೆ. ಅಡುಗೆ ಮಾಡುವಾಗ ಥಾವಾ ತಾಪಮಾನವು ಸುಲಭವಾಗಿ 250- 300ಸಿ ತಲುಪುತ್ತದೆ. ಆ ದ್ರವವು ಬೆಂಕಿಯನ್ನು ಹಿಡಿಯದಿದ್ದರೆ ಅದು ಕೇವಲ ಎಣ್ಣೆ ಎಂದು ಅರ್ಥ ಎಂದು ಮತ್ತೊಬ್ಬರು ಹೇಳಿದ್ದು, ಇದು ಡೀಸೆಲ್‌ನಂತೆ ಕಾಣುತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

ಇದು ಖಂಡಿತವಾಗಿಯೂ ಆರೋಗ್ಯಕರವಲ್ಲ. ಆದರೆ ಇದು ಡಿಸೇಲ್ ಕೂಡ ಅಲ್ಲ.. ಎಂದು ಮತ್ತೊಬ್ಬರು ಹೇಳಿದ್ದಾರೆ.
ಭಾರತದಲ್ಲಿ ಬೀದಿ ಆಹಾರಗಳಿಗೆ ಯಾವುದೇ ರೀತಿಯ ಆಹಾರ ಸುರಕ್ಷತಾ ನಿಯಮಗಳು ಇಲ್ಲವೇ? ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

Continue Reading

ದೇಶ

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಇ-ಮೇಲ್‌ ಮೂಲಕ ಮಂಗಳವಾರ ಬಾಂಬ್‌ ಕರೆ ಬಂದಿವೆ. ದೀಪ್‌ ಚಂದ್‌ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್‌ ಆಸ್ಪತ್ರೆ ಮತ್ತು ಹೆಡ್ಗೇವಾರ್‌ ಆಸ್ಪತ್ರೆಗಳಿಗೆ ಅನಾಮಧೇಯ ಇ-ಮೇಲ್‌ವೊಂದು ಬಂದಿದ್ದು, ಬಾಂಬ್‌ ಸ್ಫೋಟಿಸುವುದಾಗಿ ಸಂದೇಶ ಬಂದಿದೆ. ದಿಲ್ಲಿ ಅಗ್ನಿಶಾಮಕ ದಳ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

VISTARANEWS.COM


on

Bomb threat
Koo

ನವದೆಹಲಿ: ದಿಲ್ಲಿಯ ನಾಲ್ಕು ಆಸ್ಪತ್ರೆ(Hospitals)ಗಳಿಗೆ ಇ-ಮೇಲ್‌ ಮೂಲಕ ಮಂಗಳವಾರ ಬಾಂಬ್‌ ಕರೆ(Bomb Threat) ಬಂದಿವೆ. ದೀಪ್‌ ಚಂದ್‌ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್‌ ಆಸ್ಪತ್ರೆ ಮತ್ತು ಹೆಡ್ಗೇವಾರ್‌ ಆಸ್ಪತ್ರೆಗಳಿಗೆ ಅನಾಮಧೇಯ ಇ-ಮೇಲ್‌(E-mail)ವೊಂದು ಬಂದಿದ್ದು, ಬಾಂಬ್‌ ಸ್ಫೋಟಿಸುವುದಾಗಿ ಸಂದೇಶ ಬಂದಿದೆ. ದಿಲ್ಲಿ ಅಗ್ನಿಶಾಮಕ ದಳ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಇನ್ನು ದಿಲ್ಲಿ ಪೊಲೀಸರು ಈ ಬೆದರಿಕೆ ಇ-ಮೇಲ್‌ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದು, ನಾಲ್ಕು ಆಸ್ಪತ್ರೆಗಳಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಇನ್ನು ಆಸ್ಪತ್ರೆಗಳಲ್ಲಿ ತೀವ್ರ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ. ದಿಲ್ಲಿಯ ಎನ್‌ಸಿಆರ್‌ನ 150ಕ್ಕೂ ಅಧಿಕ ಶಾಲೆಗಳಿಗೂ ಕೆಲವು ದಿನಗಳ ಹಿಂದೆ ಹುಸಿಬಾಂಬ್‌ ಕರರೆಬಂದಿತ್ತು. ರಷ್ಯಾದ ಇ-ಮೇಲ್‌ ಸೇವೆಯನ್ನು ಬಳಸಿಕೊಂಡು ಶಾಲೆಗಳಿಗೆ ಬೆದರಿಕೆ ಮೇಲ್‌ ಕಳುಹಿಸಲಾಗಿತ್ತು ಎನ್ನಲಾಗಿದೆ.

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಕಳೆದ ವಾರ ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿತ್ತು. ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿತ್ತು.

ಶಾಲೆಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಅವುಗಳ ಮೇಲೆ ನಿಗಾ ಇರಿಸುವುದು, ಶಾಲೆಗಳ ಇ-ಮೇಲ್‌ ವಿಳಾಸಗಳನ್ನು ಪದೇಪದೆ ಪರಿಶೀಲಿಸುವುದು ಸೇರಿ ಹಲವು ಸೂಚನೆಗಳನ್ನು ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರು ಸಭೆ ನಡೆಸಿ, ಹುಸಿ ಬಾಂಬ್‌ ಬೆದರಿಕೆ ಕರೆ, ಇ-ಮೇಲ್‌ಗಳನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಿದ ಬಳಿಕ ಸೂಚನೆ ನೀಡಲಾಗಿದೆ.

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಇದನ್ನೂ ಓದಿ: Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

Continue Reading

ಪ್ರಮುಖ ಸುದ್ದಿ

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

VISTARANEWS.COM


on

pm narendra modi nomination varanasi
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು, 12 ರಾಜ್ಯಗಳ ಸಿಎಂಗಳು ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು ಅವರೊಂದಿಗೆ ಭಾಗವಹಿಸುತ್ತಿದ್ದಾರೆ.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದ ಹಿರಿಯ ನಾಯಕ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading
Advertisement
HD Revanna released from jail Revanna Go straight to HD Deve Gowda house
ಕ್ರೈಂ12 mins ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್20 mins ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ24 mins ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202430 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ38 mins ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest45 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ47 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ1 hour ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ1 hour ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್1 hour ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202430 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 hour ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ9 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ19 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ20 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌