Shani Gochar 2023 | ಮಕರದಿಂದ ಕುಂಭಕ್ಕೆ ಶನಿ ಸಂಚಾರ; ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು? ಪರಿಹಾರವೇನು? - Vistara News

ಪ್ರಮುಖ ಸುದ್ದಿ

Shani Gochar 2023 | ಮಕರದಿಂದ ಕುಂಭಕ್ಕೆ ಶನಿ ಸಂಚಾರ; ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು? ಪರಿಹಾರವೇನು?

ಇಂದು ಶನಿಯು ಮಕರ ರಾಶಿಯಿಂದ ಕುಂಭ ರಾಶಿಗೆ ಸಂಚರಿಸಲಿದ್ದಾನೆ (Shani Gochar 2023). ಶನಿಯ ಈ ಸಂಚಾರದಿಂದ ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ, ದೋಷಗಳಿಗೆ ಪರಿಹಾರವೇನು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Shani Gochar 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಚಾರ್ಯ ಶ್ರೀ ವಿಠ್ಠಲ ಭಟ್ಟ ಕೆಕ್ಕಾರು
ಶನಿ ಕರ್ಮಫಲದಾತ (Shani Gochar 2023). ಅತ್ಯಂತ ನಿಧಾನವಾಗಿ ಸಂಚರಿಸುವ ಗ್ರಹ. ಚಂದ್ರನಿಗೆ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಹೋಗಲು ಎರಡೂವರೆ ದಿನ ಸಾಕಾದರೆ ಶನಿಗೆ ಎರಡೂ ವರೆ ವರ್ಷ ಬೇಕಾಗುತ್ತದೆ. ಹೀಗಾಗಿ ಶನೈಶ್ಚರ ಎಂದು ಕರೆಯುತ್ತಾರೆ. ಇಲ್ಲಿ ʼಶನೈಹಿʼ ಎಂದರೆ ನಿಧಾನವಾಗಿ “ಚರತಿʼ ಎಂದರೆ ಚಲಿಸುವವನು “ಶನೈಹಿ ಚರತಿ ಯಃʼ ಎಂದರೆ “ಶನೈಶ್ಚರʼ ಎಂದು. ಕೆಲವರು ಶನೈಶ್ವರ ಎಂದು ಕರೆಯುತ್ತಾರೆ, ಇದು ತಪ್ಪು.

ತನ್ನ ಸ್ವಂತ ಮನೆಯಲ್ಲಿ ಅಂದರೆ ಮಕರ ರಾಶಿಯಲ್ಲಿದ್ದ ಶನಿಯು ಜನವರಿ 17 ರಂದು ಅಂದರೆ ಇಂದು ಕುಂಭ ರಾಶಿಗೆ ಹೋಗುತ್ತಾನೆ (Shani Gochar 2023). ಧನಿಷ್ಠ ನಕ್ಷತ್ರದಲ್ಲಿ ಈ ಸಂಚಾರ ನಡೆಯುತ್ತಿದೆ. 2025ರ ಏಪ್ರಿಲ್‌ 30 ರವರೆಗೆ ಕುಂಭ ರಾಶಿಯಲ್ಲಿಯೇ ಇನ್ನು ಶನಿ ಇರುತ್ತಾನೆ.

ಈ ಸಂಚಾರದಿಂದ ದ್ವಾದಶ ರಾಶಿಗಳ ಮೇಲೆ ಪರಿಣಾಮ ಇದ್ದೇ ಇರುತ್ತದೆ. ಜನ್ಮ ಲಗ್ನ, ಜನ್ಮ ರಾಶಿಯನ್ನು ನೋಡಿಕೊಂಡು ಯಾವ ರಾಶಿಯ ಮೇಲೆ ಏನು ಪರಿಣಾಮ ಎಂದು ಹೇಳಬಹುದು. ಈ ಸಂಚಾರದಿಂದ ಶನಿಯು ತನ್ನ ಸ್ವಂತ ಮನೆಯಿಂದ ಮತ್ತೊಂದು ಸ್ವಂತ ಮನೆಗೆ ಹೋಗುತ್ತಿರುವುದರಿಂದ ಒಟ್ಟಾರೆಯಾಗಿ ಜನರು ಹೆಚ್ಚು ಆಲಸ್ಯ ಮಾಡುತ್ತಾರೆ. ಕಷ್ಟ ಪಟ್ಟು ದುಡಿಯುವುದಿಲ್ಲ. ವಿಲಾಸಿಯಾಗುತ್ತಾರೆ, ಮನರಂಜನೆಗೆ ಹೆಚ್ಚಿನ ಸಮಯ ನೀಡುತ್ತಾರೆ. ಯಾರ ಕೈಕೆಳಗೂ ಕೆಲಸ ಮಾಡಲು ಇಷ್ಟಪಡದೇ ಇರುವುದರಿಂದ ಸ್ಟಾರ್ಟ್‌ಅಪ್‌ಗಳ ಸಂಖ್ಯೆ ಜಾಸ್ತಿಯಾಗುತ್ತದೆ.

ಇನ್ನು ಆಡಳಿತಕ್ಕೆ ಸಂಬಂಧಿಸಿದ ಗ್ರಹಗಳಲ್ಲಿ ರವಿಯ ಜತೆಗೆ ಶನಿಯೂ ಇದ್ದಾನೆ. ಹೀಗಾಗಿ ಶನಿಯು ತನ್ನ ಸ್ವಂತ ಮನೆಯಲ್ಲಿರುವುದರಿಂದ ರಾಜಕೀಯದಲ್ಲಿ ಒಲೈಕೆ ರಾಜಕಾರಣ ಮಾಡುವವರಿಗೆ, ಎಲ್ಲ ವರ್ಗದ ಹಿತ ಕಾಪಾಡುವವರಿಗೆ ಹೆಚ್ಚಿನ ಲಾಭವಾಗಲಿದೆ.

ಶನಿಯ ಈ ಸಂಚಾರದಿಂದ ದ್ವಾದಶ ರಾಶಿಗಳ ಮೇಲೆ ಯಾವೆಲ್ಲಾ ಪರಿಣಾಮಗಳಾಗಲಿವೆ, ಪರಿಹಾರವೇನು ನೋಡೋಣ;

ಮೇಷ: ಹನ್ನೊಂದನೇಯ ಮನೆಯಲ್ಲಿ ಶನಿ ಇರುತ್ತಾನೆ. ಇದು ಲಾಭದ ಸ್ಥಾನ. ಈ ರಾಶಿಯವರಿಗೆ ಶನಿ ಸಂಚಾರದಿಂದ ಉದ್ಯೋಗದಲ್ಲಿ ಸಫಲತೆ ದೊರೆಯಲಿದೆ. ಮಕ್ಕಳ ವಿಚಾರದಲ್ಲಿ ಕೂಡ ವಿಶೇಷ ಬದಲಾವಣೆಯಾಗಲಿದೆ. ಆರಂಭಿಸಿರುವ ಕೆಲಸದ ಮೇಲೆ ಈ ಶನಿ ಸಂಚಾರ ಪ್ರಭಾವ ಬೀರಲಿದೆ.
ಪರಿಹಾರ: ನಿತ್ಯ ಶನೈಶ್ಚರ ಅಷ್ಟೋತ್ತರ ಪಠಣ ಮಾಡುವುದರಿಂದ ದೋಷಗಳಿದ್ದಲ್ಲಿ ನಿವಾರಿಸಿಕೊಳ್ಳಬಹುದು.

ವೃಷಭ: ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಬದಲಾವಣೆಗಳಾಗಲಿವೆ. ಉದ್ಯೋಗದಲ್ಲಿ ಬದಲಾವಣೆ ಕಾಣಬಹುದು. ಬಯಸಿದ ಉದ್ಯೋಗ ಸಿಗುವ ಸಾಧ್ಯತೆ. ರಾಜಕೀಯದಲ್ಲಿ ಅಭಿವೃದ್ಧಿಯಾಗುವ ಅವಕಾಶ ಹೆಚ್ಚು.
ಪರಿಹಾರ: ಶನಿವಾರಕ್ಕೊಮ್ಮೆ ಶನೈಶ್ಚರ ಆಲಯದಲ್ಲಿ 28 ಪ್ರದಕ್ಷಿಣೆ ಹಾಕಿ.

ಮಿಥುನ: ಅಷ್ಟಮ ಶನಿಯಿಂದ ಮುಕ್ತಿ ಪಡೆಯುವಿರಿ. ಈ ರಾಶಿಯವರಿಗೆ ಆರೋಗ್ಯ ವೃದ್ಧಿಯಾಗಲಿದೆ. ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ.
ಪರಿಹಾರ: ಪ್ರತಿ ಶನಿವಾರ ಅನ್ನದಾನ ಮಾಡಿ.

ಕಟಕ: ಆರೋಗ್ಯದ ವಿಚಾರದಲ್ಲಿ ಜಾಗೃತರಾಗಿರಬೇಕು. ಕುಟುಂಬದಲ್ಲಿ ಮನಸ್ತಾಪ ಸಂಭವಿಸಬಹುದು. ಸಾಲ ಆದಷ್ಟು ಕಡಿಮೆ ಮಾಡಿ. ಹೊಸ ವ್ಯವಹಾರಗಳಿಂದ ದೂರ ಇರಿ.
ಪರಿಹಾರ: ಪ್ರತಿ ದಿನ ಶನಿ ಅಷ್ಟೋತ್ತರ ಪಠಣ ಮಾಡಿ. ದಶರಥಕೃತ ಶನಿಸ್ತೋತ್ರ ಪಠಣ ಮಾಡಿ. ಶನಿವಾರ ಕಡ್ಡಾಯವಾಗಿ ಶನಿ ದೇವಾಲಯಕ್ಕೆ ಭೇಟಿ ನೀಡಿ.

ಸಿಂಹ: ಅವಿವಾಹಿತರಿಗೆ ವಿವಾಹದ ಯೋಗವಿದೆ. ವಿವಾಹಿತರಿಗೆ ದಾಂಪತ್ಯದಲ್ಲಿ ಕಲಹ ಸಾಧ್ಯತೆ. ವಿದೇಶ ಪ್ರಯಾಣದ ಅನುಕೂಲವಿದೆ. ಕೆಲಸದಲ್ಲಿ ಆಲಸಿಯಾಗುವ ಸಾಧ್ಯತೆ ಹೆಚ್ಚು. ಕೆಟ್ಟವರ ಸ್ನೇಹವಾಗುವ ಸಾಧ್ಯತೆ ಹೆಚ್ಚು ಎಚ್ಚರಿಕೆಯಿಂದಿರಿ.
ಪರಿಹಾರ: ಶನಿವಾರ ನೀಲಿ ಬಣ್ಣದ ಹೂವುಗಳಿಂದ ಶನೈಶ್ಚರನಿಗೆ ಪೂಜೆ ಮಾಡಿ.

ಕನ್ಯಾ: ಕೆಲಸದಲ್ಲಿ ಅಭಿವೃದ್ಧಿ ಸಾಧ್ಯ. ಕಳೆದುಕೊಂಡಿದ್ದನ್ನು ಪಡೆದುಕೊಳ್ಳುತ್ತೀರಿ. ಹೊಸ ಸಾಧನೆಗೆ ಅವಕಾಶಗಳಿವೆ. ಶತ್ರುಗಳೂ ಮಿತ್ರರಾಗುವ ಸಂಭವವಿದೆ.
ಪರಿಹಾರ: ಶನೈಶ್ಚರನಿಗೆ ಬುಧ ಅಥವಾ ಗುರುವಾರ ಫಲ ಪಂಚಾಮೃತ ಅಭಿಷೇಕ ಮಾಡಿ.

ತುಲಾ: ಅಪಾಯ ಇರುವ ಕೆಲಸ ಒಪ್ಪಿಕೊಳ್ಳಬೇಡಿ. ಕೆಲಸ ಬಿಡುವ ವಿಚಾರವನ್ನು ಕೈ ಬಿಡಿ. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಅತಿಯಾದ ನಂಬಿಕೆ ಯಾರ ಮೇಲೂ ಸಲ್ಲದು.
ಪರಿಹಾರ: ಗಾಣದ ಎಳ್ಳೆಣ್ಣೆ, ಕರಿ ಎಳ್ಳು ದಾನ ಮಾಡಿ. ಶನೈಶ್ಚರ ಪೂಜೆ, ಪ್ರದಕ್ಷಿಣೆ ಹಾಕಿ. ಶನಿ ಶಾಂತಿ ಮಾಡಿಸಿ.

ವೃಶ್ಚಿಕ: ಆರೋಗ್ಯದ ವಿಚಾರದಲ್ಲಿ ಹುಷಾರಾಗಿರಿ. ತಾಯಿ ಆರೋಗ್ಯದ ವಿಚಾರದಲ್ಲಿ ಗಮನವಿರಲಿ. ಉದ್ಯೋಗದ ವಿಚಾರದಲ್ಲಿ ಎಚ್ಚರ. ತಾಳ್ಮೆಯಿಂದ ಇರುವ ಕೆಲಸ ಮಾಡಿ.
ಪರಿಹಾರ: ಪ್ರತಿದಿನ ಶನಿ ಅಷ್ಟೋತ್ತರ ಪಠಣ ಮಾಡಿ. ಶನೈಶ್ಚರ ದೇವಸ್ಥಾನದಲ್ಲಿ ಪೂಜೆ ಮಾಡಿ, ಪ್ರದಕ್ಷಿಣೆ ಹಾಕಿ.

ಧನು: ಏಳು ವರೆ ವರ್ಷದಿಂದ ಕಳೆದುಕೊಂಡಿದ್ದನ್ನು ಪಡೆಯುವ ಭಾಗ್ಯ. ಹೊಸ ಪ್ರಯತ್ನಕ್ಕೆ ಯಶಸ್ಸು ಸಿಗುವ ಸಾಧ್ಯತೆ. ಪಿತ್ರಾರ್ಜಿತ ಆಸ್ತಿಯ ವಿಚಾರವಾಗಿ ವಿಶೇಷ ಗಮನವಿರಲಿ.
ಪರಿಹಾರ: ಶನೈಶ್ಚರ ದೇವಸ್ಥಾನದಲ್ಲಿ ಕಬ್ಬಿಣ ದಾನ ಮಾಡಿ.

ಮಕರ: ಹಣಕಾಸು, ಕುಟುಂಬ ವಿಚಾರದಲ್ಲಿ ಕಲಹ ಸಾಧ್ಯತೆ ಇದೆ. ಸಾಲ ಮಾಡುವುದು ಬೇಡ. ಜಾಗ, ಚಿನ್ನ ಮಾರಾಟದ ವಿಷಯದಲ್ಲಿ ಹುಷಾರಾಗಿರಿ.
ಪರಿಹಾರ : ಎಂಟು ಶನಿವಾರ ಕರಿ ಎಳ್ಳು ದಾನ ಮಾಡಿ.

ಕುಂಭ: ಆಲಸಿಯಾಗುವ ಸಾಧ್ಯತೆ ಹೆಚ್ಚು. ಪ್ರಾಮುಖ್ಯತೆ ವೃದ್ಧಿಯಾಗಿ ಅಹಂಕಾರ ಬರುವ ಸಾಧ್ಯತೆ. ಆರೋಗ್ಯದ ವಿಚಾರದ ಬಗ್ಗೆ ಗಮನವಿರಲಿ . ಬೇಜವಬ್ದಾರಿತನದಿಂದ ಕೆಲವನ್ನು ಕಳೆದುಕೊಳ್ಳುವ ಸಾಧ್ಯತೆ. ಐಷಾರಾಮಿ ಬದುಕಿನಿಂದ ಖರ್ಚು.
ಪರಿಹಾರ: ಕಬ್ಬಿಣದ ಬಾಣಲಿಯಲ್ಲಿ ಎಳ್ಳೆಣ್ಣೆ ಹಾಕಿ ಮುಖ ನೋಡಿ ದೀಪ ಹಚ್ಚುವುದು, ದಾನ ಮಾಡುವುದು.

ಮೀನ: ಎರಡು ವರ್ಷದಲ್ಲಿ ಕಳೆದುಕೊಳ್ಳುವುದು ಹೆಚ್ಚು. ವಿದೇಶ ಪ್ರಯಾಣದ ಸಾಧ್ಯತೆ. ಹೊಸ ನಿರ್ಧಾರಗಳ ಬಗ್ಗೆ ಎಚ್ಚರವಿರಲಿ. ಮುಂದಿನ ಎರಡು ವರ್ಷಗಳು ಕಠಿಣವಾಗಿರಲಿವೆ. ನ್ಯಾಯ ನಿಷ್ಠೆಯಿಂದ ಬದುಕಿ. ವ್ಯಾಪಾರದಲ್ಲಿ ತುಂಬಾ ನಷ್ಟ ಸಾಧ್ಯತೆ.
ಪರಿಹಾರ: ಪ್ರತಿ ಶನಿವಾರ ಬಡವರಿಗೆ, ವೃದ್ಧರಿಗೆ ಅನ್ನದಾನ ಮಾಡಿ. ನಿರಾಶ್ರಿತರಿಗೆ ಕಂಬಳಿ, ರಗ್ಗು ದಾನ ಮಾಡುವುದು.

ಇದನ್ನೂ ಓದಿ | Shani Gochar 2023 | ನಾಳೆ ಮಕರದಿಂದ ಕುಂಭಕ್ಕೆ ಶನಿ ಸಂಚಾರ; ಪುಣ್ಯ ಕಾಲ ಯಾವಾಗ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Prajwal Revanna Case: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಭವಾನಿ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಆರೋಪ ಇವರ ಮೇಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ, ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೊ ಮಾಡಿ ಹರಿಬಿಟ್ಟ ಬೆನ್ನಲ್ಲೇ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್‌.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್‌ ಕೇಸ್‌ನಲ್ಲಿ ಈಗಾಗಲೇ ಮಾಜಿ ಸಚಿವ ರೇವಣ್ಣ ಅವರಿಗೆ ಬೇಲ್‌ ಸಿಕ್ಕಿದೆ. ಈ ನಡುವೆ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಚಾಮರಾಜನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೂ ನೋಟಿಸ್‌ ನೀಡಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಮೊದಲ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಎರಡನೇ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಭವಾನಿ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಮಗ ಪ್ರಜ್ವಲ್‌ ಪ್ರಜ್ವಲ್‌ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲು ವಕೀಲರು ಮನವಿ ಮಾಡಿದ್ದಾರೆ. ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ನಾಳೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಮೇ 31ಕ್ಕೆ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ಆಗಮನ

Prajwal revanna Case

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

Continue Reading

ದೇಶ

Hemchand Manjhi: ಕಳೆದ ತಿಂಗಳು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ; ಏಕೆ?

Hemchand Manjhi: ನಾರಾಯಣಪುರ ಜಿಲ್ಲೆಯ ಛೋಟೆಡೊಂಗರ್‌ ಗ್ರಾಮದವರಾದ ಹೇಮಚಂದ್‌ ಮಾಂಝಿ ಅವರು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಔಷಧ ಪದ್ಧತಿ (ಆಯುರ್ವೇದ, ಸಿದ್ಧ, ಹೋಮಿಯೋಪತಿ, ಯುನಾನಿ) ಮೂಲಕ ಜನರ ರೋಗಗಳನ್ನು ನಿವಾರಣೆ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿತ್ತು.

VISTARANEWS.COM


on

Hemchand Manjhi
Koo

ರಾಯ್‌ಪುರ:‌ ದೇಶದಲ್ಲಿ ಮತ್ತೆ ಪ್ರಶಸ್ತಿ ವಾಪ್ಸಿ ಅಭಿಯಾನ ಆರಂಭವಾಗಿದೆ. ಛತ್ತೀಸ್‌ಗಢದ ಪ್ರಮುಖ ಆಯುರ್ವೇದ ವೈದ್ಯ ಹೇಮಚಂದ್‌ ಮಾಂಝಿ (Hemchand Manjhi) ಅವರು ಕಳೆದ ತಿಂಗಳಷ್ಟೇ ಸ್ವೀಕರಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು (Padma Shri Award) ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಲು ತೀರ್ಮಾನಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರದಲ್ಲಿ ಮಾವೋವಾದಿಗಳು (Naxalites) ಅವರಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಲು ಅವರು ತೀರ್ಮಾನಿಸಿದ್ದಾರೆ.

ನಾರಾಯಣಪುರ ಜಿಲ್ಲೆಯ ಛೋಟೆಡೊಂಗರ್‌ ಗ್ರಾಮದವರಾದ ಹೇಮಚಂದ್‌ ಮಾಂಝಿ ಅವರು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಔಷಧ ಪದ್ಧತಿ (ಆಯುರ್ವೇದ, ಸಿದ್ಧ, ಹೋಮಿಯೋಪತಿ, ಯುನಾನಿ) ಮೂಲಕ ಜನರ ರೋಗಗಳನ್ನು ನಿವಾರಣೆ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿತ್ತು. ಕಳೆದ ಏಪ್ರಿಲ್‌ನಲ್ಲಿಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಮಚಂದ್‌ ಮಾಂಝಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಆದರೀಗ, ಒಂದೇ ತಿಂಗಳಲ್ಲಿ ಹೇಮಚಂದ್‌ ಮಾಂಝಿ ಅವರು ಪ್ರಶಸ್ತಿ ಹಿಂತಿರುಗಿಸುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿ ವಾಪಸ್‌ಗೆ ಕಾರಣವೇನು?

ನಾರಾಯಣಪುರ ಜಿಲ್ಲೆಯ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿಯಾಗಿದೆ. ಇತ್ತೀಚೆಗೆ ಚಮೇಲಿ ಹಾಗೂ ಗೌರ್‌ದಂಡ್‌ ಗ್ರಾಮಗಳಲ್ಲಿ ಎರಡು ಮೊಬೈಲ್‌ ಟವರ್‌ಗಳಿಗೆ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲ, ಹೇಮಚಂದ್‌ ಮಾಂಝಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುತ್ತಿರುವ ಬ್ಯಾನರ್‌ಗಳನ್ನು ನಕ್ಸಲರು ಎಲ್ಲೆಡೆ ಅಳವಡಿಸಿದ್ದಾರೆ. ಹೇಮಚಂದ್‌ ಮಾಂಝಿ ಅವರ ವಿರುದ್ಧ ಘೋಷಣೆ ಇರುವ ಬ್ಯಾನರ್‌ಗಳನ್ನು ಕೂಡ ಹಾಕಿದ್ದಾರೆ. ಇದರಿಂದಾಗಿ ಮನನೊಂದು ಹೇಮಚಂದ್‌ ಮಾಂಝಿ ಅವರು ಪ್ರಶಸ್ತಿ ವಾಪಸ್‌ ನೀಡುವ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೇಮಚಂದ್‌ ಮಾಂಝಿಗೆ ಜೀವ ಬೆದರಿಕೆ

ಮಾವೋವಾದಿಗಳು ಹೇಮಚಂದ್‌ ಮಾಂಝಿ ಅವರಿಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ. “ನನಗೆ ಹೇಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿತು ಎಂಬುದು ನಕ್ಸಲರ ಪ್ರಶ್ನೆಯಾಗಿದೆ. ನಾನು ಕಳೆದ ಹಲವು ದಶಕಗಳಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧಗಳನ್ನು ಜನರಿಗೆ ನೀಡುವ ಮೂಲಕ ಅವರ ಸೇವೆ ಮಾಡಿದ್ದೇನೆ. ಕ್ಯಾನ್ಸರ್‌ಗೂ ಔಷಧ ನೀಡಿದ್ದೇನೆ. ಇದನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದೆಯೇ ಹೊರತು, ನಾನಾಗೇ ಕೇಳಿ ಪಡೆದಿಲ್ಲ. ಇದಕ್ಕೂ ಮೊದಲು ನಕ್ಸಲರು ನನ್ನ ಸಂಬಂಧಿಯನ್ನು ಹತ್ಯೆ ಮಾಡಿದ್ದರು. ಈಗ ಇಡೀ ಕುಟುಂಬವು ಭಯದಲ್ಲಿಯೇ ಕಾಲ ಕಳೆಯುತ್ತಿದೆ. ಹಾಗಾಗಿ, ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಲು ತೀರ್ಮಾನಿಸಿದ್ದೇನೆ” ಎಂದು ಹೇಮಚಂದ್ ಮಾಂಝಿ ತಿಳಿಸಿದ್ದಾರೆ.

ಇದನ್ನೂ ಓದಿ: ಖೇಲ್‌ರತ್ನ, ಅರ್ಜುನ ಪ್ರಶಸ್ತಿ ವಾಪಸ್​ ಮಾಡುವ ನಿರ್ಧಾರ ಘೋಷಿಸಿ ಮೋದಿಗೆ ಪತ್ರ ಬರೆದ ವಿನೇಶ್‌ ಫೋಗಟ್

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Rahul Gandhi: ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಕೆಲವೇ ಕ್ಷಣಗಳಲ್ಲಿ ವೇದಿಕೆಯು ಎರಡು ಬಾರಿ ಕುಸಿದ ಕಾರಣ ಜನರಲ್ಲೂ ಕೆಲ ಕಾಲ ಆತಂಕ ಮೂಡಿತ್ತು.

VISTARANEWS.COM


on

Rahul Gandhi
Koo

ಪಟನಾ: ಲೋಕಸಭೆ ಚುನಾವಣೆಯ (Lok Sabha Election 2024) ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಹಾಗಾಗಿ, ಕೊನೆಯ ಹಂತದ ಚುನಾವಣೆಗಾಗಿ ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದೇ ರೀತಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಕಾಂಗ್ರೆಸ್‌ ನಾಯಕ ಪಾರಾಗಿದ್ದಾರೆ.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವೇದಿಕೆ ಕುಸಿದ ವಿಡಿಯೊ ಇಲ್ಲಿದೆ

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.

ಬಿಹಾರದಲ್ಲಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಒಗ್ಗೂಡಿ ಚುನಾವಣೆ ಕಣಕ್ಕಿಳಿದಿವೆ. ಆರ್‌ಜೆಡಿಯು 26 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ 9, ಸಿಪಿಐ (ಎಂಎಲ್) ಹಾಗೂ ಸಿಪಿಎಂ ಪಕ್ಷಗಳು ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿದಿವೆ. ನಾಲ್ಕೂ ಪಕ್ಷಗಳು ಒಗ್ಗೂಡಿ ಎನ್‌ಡಿಎ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯಲು ತೀರ್ಮಾನಿಸಿವೆ. ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ ಮೀಸಾ ಭಾರ್ತಿ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

Lok Sabha Election: Stage Collapses At Rahul Gandhi’s Bihar Poll Rally With Misa Bharti

Continue Reading

ಕರ್ನಾಟಕ

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Prajwal Revanna Video: ವಿದೇಶದಲ್ಲಿದ್ದುಕೊಂಡೇ ಪ್ರಜ್ವಲ್‌ ರೇವಣ್ಣ ವಿಡಿಯೊ ಬಿಡುಗಡೆ ಮಾಡಿದ್ದಾರೆ. “ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ” ಎಂದಿದ್ದಾರೆ. ಇದಕ್ಕೆ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Prajwal Revanna Video
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಲೇ ವಿದೇಶಕ್ಕೆ ತೆರಳಿ, ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ (Prajwal Revanna Video) ಮೂಲಕ ಪ್ರತ್ಯಕ್ಷರಾಗಿದ್ದಾರೆ. ವಿದೇಶದಿಂದಲೇ ವಿಡಿಯೊ ಬಿಡುಗಡೆ ಮಾಡಿರುವ ಪ್ರಜ್ವಲ್‌ ರೇವಣ್ಣ, “ನಾನು ಎಲ್ಲೂ ತಲೆಮರೆಸಿಕೊಂಡಿಲ್ಲ. ಮೇ 31ರಂದು ಬೆಳಗ್ಗೆ ಬಂದು ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತೇನೆ. ನೆಲದ ಕಾನೂನು ಗೌರವಿಸಿ, ದೋಷಮುಕ್ತನಾಗಿ ಹೊರಬರುವ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಪ್ರತಿಕ್ರಿಯಿಸಿದ್ದು, “ಪ್ರಜ್ವಲ್‌ ರೇವಣ್ಣನನ್ನು ನೋಡಿ ಸಮಾಧಾನ ಅಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣದ ಕುರಿತು ಎಸ್‌ಟಿ ತನಿಖೆ ನಡೆಸುತ್ತಿದೆ, ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡೋಣ. ಪ್ರಜ್ವಲ್‌ ರೇವಣ್ಣನನ್ನು ನೋಡಿ ನನಗೆ ಈಗ ಸಮಾಧಾನ ಆಗಿದೆ. ಪ್ರಕರಣದ ಬಗ್ಗೆ ಎಚ್.ಡಿ.ದೇವೇಗೌಡರು ಮಾತನಾಡಿದ್ದಾರೆ. ದೇವೇಗೌಡರು ಪ್ರಜ್ವಲ್ ರೇವಣ್ಣಗೆ ಮನವಿ ಹಾಗೂ ಎಚ್ಚರಿಕೆ ಕೊಟ್ಟಿದ್ದರು. ಅದರಂತೆ ಈಗ ಭಾರತಕ್ಕೆ ವಾಪಸ್‌ ಆಗುವುದಾಗಿ ಪ್ರಜ್ವಲ್‌ ರೇವಣ್ಣ ಹೇಳಿದ್ದಾನೆ. ಎಸ್‌ಐಟಿ ವಿಚಾರಣೆ ಬಳಿಕ ಏನಾಗುತ್ತದೆ ಎಂಬುದನ್ನು ನೋಡೋಣ” ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

Continue Reading
Advertisement
Prajwal Revanna Case
ಪ್ರಮುಖ ಸುದ್ದಿ19 mins ago

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Hemchand Manjhi
ದೇಶ36 mins ago

Hemchand Manjhi: ಕಳೆದ ತಿಂಗಳು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ; ಏಕೆ?

Prajwal Revanna Case
ಕರ್ನಾಟಕ1 hour ago

Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Karnataka Weather Forecast
ಮಳೆ1 hour ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

HairStyle Craze
ಫ್ಯಾಷನ್2 hours ago

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

Lok Sabha Election 2024
ಕರ್ನಾಟಕ2 hours ago

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Prajwal Revanna Video
ಕರ್ನಾಟಕ2 hours ago

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Mouthwashes
ಆರೋಗ್ಯ2 hours ago

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

Surya Prakash Maayi director dies
ಕಾಲಿವುಡ್2 hours ago

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌