Horoscope Today |‌ ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today |‌ ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

rashi bhavishya today in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (19-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ದ್ವಾದಶಿ13:17 ವಾರ: ಗುರುವಾರ
ನಕ್ಷತ್ರ: ಜೇಷ್ಠ 15:16 ಯೋಗ: ಧ್ರುವ 23:02
ಕರಣ: ತೈತುಲ 13:17 ಇಂದಿನ ವಿಶೇಷ: ಪಕ್ಷ ಪ್ರದೋಷ.
ಅಮೃತಕಾಲ: ಬೆಳಗ್ಗೆ 07 ಗಂಟೆ 16 ನಿಮಿಷದಿಂದ 08 ಗಂಟೆ 43 ನಿಮಿಷದವರೆಗೆ.

ಸೂರ್ಯೋದಯ: 06 : 46    ಸೂರ್ಯಾಸ್ತ: 0೬ : 14

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ-ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುವಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಎಂದೂ ಇರದ ಉತ್ಸಾಹ, ನೆಮ್ಮದಿ, ಸಂತೋಷ ನಿಮ್ಮದಾಗುವುದು. ಆರೋಗ್ಯ ಪರಿಪೂರ್ಣ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಹೊಂದುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಇಂದು ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ‌. ಉದ್ಯೋಗದಲ್ಲಿ ಹಲವಾರು ಯಶಸ್ಸು ನಿಮ್ಮದಾಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿವೆ. ಮಾತುಗಳಿಂದಾಗಿಯೇ ಸಂಬಂಧಿಕರ ನಡುವೆ ಬಿರುಕು ಮೂಡುವ ಸಾಧ್ಯತೆ. ನಿಮ್ಮ ವೃತ್ತಿ ಕೌಶಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಗೌರವ ದೊರೆಯಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ. ಅಲ್ಪ ಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ, ಆದಷ್ಟು ಶಾಂತವಾಗಿರಲು ಪ್ರಯತ್ನಿಸಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಇರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಇಂದು ನೀವು ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Prajwal Revanna Case: ವಿದೇಶಕ್ಕೆ ಪರಾರಿಯಾದ ಪ್ರಜ್ವಲ್‌ಗೆ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೋಟಿಸ್‌ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

ಹೊಳೆನರಸೀಪುರದ ನಿವಾಸದಲ್ಲಿ ಸ್ಥಳ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ಥಳ ಮಹಜರು ನಡೆಸಲು ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದಕ್ಕಾಗಿ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದೊಯ್ಯಲಾಗಿದೆ.

ನಾನು ಯಾರನ್ನೂ ಕರೆದುಕೊಂಡು ಬರಲು ಹೇಳಿಲ್ಲ: ಭವಾನಿ

ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಶುಕ್ರವಾರ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪುನಃ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಲಾಗಿದೆ. ಇಂದು ಮತ್ತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ತಾಯಿ

ಮಗ ಪ್ರಜ್ವಲ್‌ ರೇವಣ್ಣ ರಕ್ಷಣೆಗೆ ಯತ್ನಿಸಿ ತಾಯಿ ಭವಾನಿ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ತಾಯಿ-ಮಗನ ವಿಚಾರಣೆ ತೀವ್ರಗೊಂಡಿದೆ. ಎಷ್ಟೇ ವಿಚಾರಣೆ ನಡೆಸಿದರೂ ಇಬ್ಬರೂ ಸೂಕ್ತ ಉತ್ತರ ನೀಡುತ್ತಿಲ್ಲ. ಒಂದೇ ಕಡೆ ಇದ್ದರೂ ತಾಯಿ-ಮಗನ ಭೇಟಿ ಅವಕಾಶ ನೀಡಿಲ್ಲ.

ಇದನ್ನೂ ಓದಿ | Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಒಂದೂವರೆ ತಿಂಗಳಿನಿಂದ ಮಗನ ಮುಖ ತಾಯಿ ನೋಡಿಲ್ಲ. ನೆನ್ನೆ ಎಸ್ಐಟಿ ಕಚೇರಿಗೆ ಬಂದರೂ ಮಗನ ಮುಖ ನೋಡಲಾಗದ ಪರಿಸ್ಥಿತಿ ಇತ್ತು. ಹೀಗಾಗಿ ವಿಚಾರಣೆ ಮುಗಿಸಿ ಭವಾನಿ ರೇವಣ್ಣ‌ ವಾಪಸ್ ಆಗಿದ್ದರು.

Continue Reading

ಉದ್ಯೋಗ

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30.

VISTARANEWS.COM


on

Job Alert
Koo

ನವದೆಹಲಿ: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸೈಂಟಿಫಿಕ್‌ ಆಫೀಸರ್‌- 15 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಟೆಕ್ನಿಕಲ್‌ ಆಫೀಸರ್‌- 20 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಪದವಿ.
ನರ್ಸ್‌- 25 ಹುದ್ದೆ, ವಿದ್ಯಾರ್ಹತೆ: ನರ್ಸಿಂಗ್‌ನಲ್ಲಿ ಡಿಪ್ಲೋಮಾ / ಪದವಿ.
ಟೆಕ್ನೀಷಿಯನ್‌- 30 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ + ಸರ್ಟಿಫಿಕೇಷನ್‌

ವಯೋಮಿತಿ

ಸೈಂಟಿಫಿಕ್‌ ಆಫೀಸರ್‌: ಗರಿಷ್ಠ ವಯಸ್ಸು 35 ವರ್ಷ, ಟೆಕ್ನಿಕಲ್‌ ಆಫೀಸರ್‌: ಗರಿಷ್ಠ ವಯಸ್ಸು 30 ವರ್ಷ, ನರ್ಸ್‌: ಗರಿಷ್ಠ ವಯಸ್ಸು 32 ವರ್ಷ ಮತ್ತು ಟೆಕ್ನೀಷಿಯನ್‌: ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ದೇಶಾದ್ಯಂತ 25 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳಿವೆ. ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ.

IGCAR Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಗತ್ಯ ವಿವರಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಈಗ ಅಪ್ಲಿಕೇಷನ್‌ ಫಾರಂ ತೆರೆದುಕೊಳ್ಳುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 044 – 47749014ಕ್ಕೆ ಕರೆ ಮಾಡಿ. ಇಮೇಲ್‌ ವಿಳಾಸ: email: techsupport@i-register.co.in.

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಸಭೆ ನಡೆದಿದೆ ಎಂದು ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಇದನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ತಳ್ಳಿ ಹಾಕಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಮತ್ತೊಬ್ಬ ಸಚಿವರ ಹೆಸರು ಕೇಳಿಬಂದಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ನಡೆದಿದೆ ಎಂದು ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಆದರೆ, ತಮ್ಮ ಮೇಲಿನ ಆರೋಪಗಳನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅಲ್ಲಗಳೆದಿದ್ದು, ನನ್ನ ಕಚೇರಿಯಲ್ಲಿ ಯಾವುದೇ ಸಭೆ ನಡೆದಿಲ್ಲ, ಅಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಾಲ್ಮೀಕಿ ನಿಗಮ 187 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಪ್ರಕರಣದ ಎಂಟನೇ ಆರೋಪಿ ಪರಶುರಾಮ್‌, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಮಾಡಿದ ಆರೋಪ ಮಾಡಿದ್ದಾರೆ.

ಏನಿದು ಆರೋಪ?

ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಮೇ 24 ರಂದು ಬೆಳಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ಸಭೆ ನಡೆಸಿದ್ದಾರೆ. ಅಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ಆಗಿದೆ. ಸಭೆಯಲ್ಲಿ ಶರಣ ಪ್ರಕಾಶ್ ಪಾಟೀಲ್, ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಭಾಗವಹಿಸಿದ್ದರು. ಹೀಗಾಗಿ ಕೊಠಡಿಯ ಸಿಸಿಟಿವಿ ಫುಟೇಜ್‌ಗಳನ್ನು ತರಿಸಿಕೊಂಡು ಸಾಕ್ಷ್ಯಗಳನ್ನು ರಕ್ಷಣೆ ಮಾಡಲು ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕು ಹಾಗೂ ಜತೆಗೆ ತಾನು ದದ್ದಲ್ ಜತೆ ವಾಟ್ಸ್ಆ್ಯಪ್‌ ಚಾಟ್ ಮಾಡಿರುವುದನ್ನು ಸಹ ರಕ್ಷಣೆ ಮಾಡಬೇಕು ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿ ಮನವಿ ಮಾಡಿದ್ದಾರೆ.

ಸಭೆ ನಡೆದ ದಿನ ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ

ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಬಂಧಿತ ಆರೋಪಿ ಪರಶುರಾಮ್ ಸಭೆ ನಡೆಸಿದ್ದಾರೆಂಬ ಎಂಬ ಆರೋಪ ಬಗ್ಗೆ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿ, ಇದರ ಬಗ್ಗೆ ತನಿಖೆ ನಡೆಸಲಿ. ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇರಲಿಲ್ಲ. ವಿಕಾಸ ಸೌಧದಲ್ಲಿ ತಮಗೆ ಹಂಚಿಕೆಯಾಗಿರುವ ಕೊಠಡಿ ಸರ್ಕಾರದ ಕಚೇರಿ. ಅಲ್ಲಿಗೆ ಸಾಕಷ್ಟು ಜನ ಬರುತ್ತಾರೆ, ಹೋಗುತ್ತಾರೆ. ಬಂಧಿತ ಪರಶುರಾಮ್ ವೈದ್ಯಕೀಯ ಶಿಕ್ಷಣ ಸಚಿವರು ಅಂತ ಹೇಳಿಲ್ಲ. ಸಚಿವರ ಕಚೇರಿಯಲ್ಲಿ ಅಂತ ಹೇಳಿದ್ದಾರೆ. ಅಂದು ನಾನು ಕಚೇರಿಗೆ ಹೋಗಿಲ್ಲ. ನಮ್ಮ ಕಚೇರಿಯಲ್ಲಿ ಸಭೆ ಆಗಿರುವುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಕಚೇರಿ ಸಿಬ್ಬಂದಿಯನ್ನು ಕೇಳಿದೆ. ಆ ರೀತಿ ಯಾವುದೇ ಸಭೆ ಆಗಿಲ್ಲ ಅಂತ ಹೇಳಿದ್ದಾರೆ. ಶಾಸಕರು ಬರುತ್ತಾರೆ, ಹೋಗುತ್ತಾರೆ ಅಂತ ಸಿಬ್ಬಂದಿ ಹೇಳಿದ್ದಾರೆ. ಇದಕ್ಕೂ ನನಗೂ ಸಂಬಂಧ ಇಲ್ಲ. ಬೇಕಾದರೆ ಸಿಸಿಟಿವಿ ಫುಟೇಜ್ ಪರಿಶೀಲಿಸಲಿ, ನನ್ನ ಕಚೇರಿಯಲ್ಲಿ ಸಭೆ ಆಗಿದ್ದರೆ ತನಿಖೆ ನಡೆಯಲಿ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರ ಬರಲಿದೆ. ನಾನು ಪ್ರಾಮಾಕವಾಗಿ ಕೆಲಸ ಮಾಡುವವನು ಎಂದು ಹೇಳಿದ್ದಾರೆ.

ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂದ‌ ಶಾಸಕ ದದ್ದಲ್

ವಾಲ್ಮೀಕಿ ನಿಗಮ ಪ್ರಕರಣ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಹುತೇಕ ಎಲ್ಲ ಅರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಯಾರದ್ದೇ ಹೆಸರು ಕೇಳಿಬಂದರೂ ತನಿಖೆ ನಡೆಸುತ್ತಾರೆ. ನಮ್ಮ ಪಾತ್ರ ಇದ್ದರೂ ಕರೆಯುತ್ತಾರೆ. ಸತ್ಯಾಂಶವನ್ನು ಯಾರೂ ಮುಚ್ಚಿಡಲು ಸಾಧ್ಯವಿಲ್ಲ. ಈಗಾಗಲೇ ಸಿಬಿಐ ಎಫ್ಐ‌ಆರ್ ಮಾಡಿಕೊಂಡಿದೆ. ಎರಡು ಸಂಸ್ಥೆಗಳ ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂದು ಶಾಸಕ ಬಸನಗೌಡ ದದ್ದಲ್‌ ಹೇಳಿದರು.

ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

ಆರೋಪದಂತೆ ಸಭೆ ಆಗಿದ್ದು ನಿಜವೇ ಎಂಬ ಪ್ರಶ್ನಗೆ ಉತ್ತರಿಸಿ, ಆರೋಪಿ ಎಸ್ಐಟಿಗೆ ಏನು ಹೇಳಿಕೆ ಕೊಟ್ಟಿದ್ದಾರೆ, ಅದರಲ್ಲಿ ಸತ್ಯಾಂಶ ಇದ್ದರೆ ಕರೆಯುತ್ತಾರೆ. ನನ್ನನ್ನು ಈವರೆಗೂ ತನಿಖೆಗೆ ಕರೆದಿಲ್ಲ. ನಾನು ಪರಿಶಿಷ್ಟ ಪಂಗಡದಲ್ಲಿ ಹುಟ್ಟಿದ್ದವನು. ಇಂತಹ ದುಸ್ಸಾಹಸಗಳಿಗೆ ಕೈ ಹಾಕಲು ಸಾಧ್ಯವಿಲ್ಲ. ಎಲ್ಲವೂ ಇನ್ನೊಂದು ವಾರದೊಳಗೆ ಅಥವಾ ಐದಾರು ದಿನಗಳಲ್ಲಿ ಹೊರ ಬರಲಿದೆ. ನೀತಿ ಸಂಹಿತೆ ಜಾರಿ ಇದ್ದ ಕಾರಣ ನಾನು ಕಚೇರಿಗೆ ಹೋಗಿಲ್ಲ. ಸಭೆಗಳನ್ನು ಮಾಡಿಲ್ಲ ಎಂದು ತಿಳಿಸಿದರು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತ್ತಷ್ಟು ನಿಗಮ ಮತ್ತು ಮಂಡಳಿಗಳ ಮೇಲೆ ಅನುಮಾನ ಮೂಡಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಸುಮಾರು 1 ಸಾವಿರ ಕೋಟಿ ರೂ. ಖಾಸಗಿ ಬ್ಯಾಂಕ್‌ಗಳಲ್ಲಿ ಜಮೆ ಮಾಡಲಾಗಿದ್ದು, ನಿಗಮ, ಮಂಡಳಿಗಳ ಈ ಬ್ಯಾಂಕ್ ಖಾತೆಗಳನ್ನ ತಕ್ಷಣದಿಂದಲೇ ಸ್ಥಗಿತಗೊಳಿಸಲು ಹಣಕಾಸು ಇಲಾಖೆ ಪತ್ರ ಬರೆದಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತ್ತಷ್ಟು ನಿಗಮ ಮತ್ತು ಮಂಡಳಿಗಳ ಮೇಲೆ ಅನುಮಾನ ಮೂಡಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಸುಮಾರು 1 ಸಾವಿರ ಕೋಟಿ ರೂ. ಖಾಸಗಿ ಬ್ಯಾಂಕ್‌ಗಳಲ್ಲಿ ಜಮೆ ಮಾಡಲಾಗಿದ್ದು, ನಿಗಮ, ಮಂಡಳಿಗಳ ಈ ಬ್ಯಾಂಕ್ ಖಾತೆಗಳನ್ನ ತಕ್ಷಣದಿಂದಲೇ ಸ್ಥಗಿತಗೊಳಿಸಲು ಹಣಕಾಸು ಇಲಾಖೆ ಪತ್ರ ಬರೆದಿದೆ.

ಎಲ್ಲ ಬ್ಯಾಂಕ್‌ಗಳಿಗೆ ಪತ್ರ ಬರೆದು ಖಾತೆಗಳ ಬಗ್ಗೆ ಹೆಚ್ಚಿನ ವಿವರ ಕೇಳಿದೆ. ರಾಜ್ಯದ 25 ನಿಗಮ ಹಾಗೂ ಮಂಡಳಿಗಳಿಂದ 1 ಸಾವಿರ ಕೋಟಿಗೂ ಅಧಿಕ ಹಣ ಖಾಸಗಿ ಬ್ಯಾಂಕ್‌ನಲ್ಲಿ ಜಮೆ ಮಾಡಲಾಗಿದ್ದು, ಈ ಪೈಕಿ ಒಂದೇ ನಿಗಮ 10 ಖಾಸಗಿ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವುದು ಬೆಳಕಿಗೆ ಬಂದಿದೆ. ಈ ಎಲ್ಲ ಕಾರಣಗಳಿಂದ ಕ್ರಮಕ್ಕೆ ಮುಂದಾದ ಅಧಿಕಾರಿಗಳು ಈ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಸೂಚಿಸಿದ್ದಾರೆ.

ನಿಯಮ ಏನು ಹೇಳುತ್ತದೆ?

ಎಲ್ಲ ನಿಗಮ ಹಾಗೂ ಮಂಡಳಿಗಳು ಸರ್ಕಾರದ ಖಜಾನೆಯಲ್ಲಿಯೇ ಖಾತೆಗಳನ್ನ ತೆರೆದು ಹಣವನ್ನು ಅಲ್ಲಿಯೇ ಜಮೆ ಮಾಡಬೇಕೆಂಬ ಆದೇಶವಿದೆ. ಆದರೂ ಸರ್ಕಾರದ ಆದೇಶ ಉಲ್ಲಂಘಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂ. ಜಮೆ ಮಾಡಲಾಗಿದೆ. ಸದ್ಯ ಯಾವ ಬ್ಯಾಂಕ್‌ನಲ್ಲಿ ಎಷ್ಟು ಹಣ ಜಮೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಹಣಕಾಸು ಇಲಾಖೆ ಕೇಳಿದೆ. ಈಗಾಗಲೇ ಎಲ್ಲ ಇಲಾಖೆಗೆ ಪತ್ರ ಬರೆದು ಮಾಹಿತಿ ಸಂಗ್ರಹ ನಡೆಸುತ್ತಿದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. 88 ಕೋಟಿ ರೂ. ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Continue Reading
Advertisement
Narendra Modi
ದೇಶ4 mins ago

Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Prajwal Revanna Case
ಪ್ರಮುಖ ಸುದ್ದಿ5 mins ago

Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

AFG vs NZ
ಕ್ರಿಕೆಟ್28 mins ago

AFG vs NZ: ಅಫಘಾನಿಸ್ತಾನ ವಿರುದ್ಧ ಹೀನಾಯ ಸೋಲು ಕಂಡ ನ್ಯೂಜಿಲ್ಯಾಂಡ್​

Election Results 2024
ಕರ್ನಾಟಕ49 mins ago

Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Toyota Kirloskar Motor Inauguration of Toyota Used Car Store by TKM in New Delhi
ದೇಶ55 mins ago

Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

Niveditha Gowda chandan divorce main reason told by advocate
ಸ್ಯಾಂಡಲ್ ವುಡ್57 mins ago

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Job Alert
ಉದ್ಯೋಗ60 mins ago

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

assault case
ಬೆಂಗಳೂರು1 hour ago

Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Kumar Bangarappa attack by Shivarajkumar Supporters
ರಾಜಕೀಯ1 hour ago

Kumar Bangarappa: ಗೀತಾ ಸೋತ ಹಿನ್ನೆಲೆಯಲ್ಲಿ ಗೇಲಿ ಮಾಡಿದ್ದ ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ​ಅಭಿಮಾನಿಗಳ ಮುತ್ತಿಗೆ

Pakistan
ವಿದೇಶ1 hour ago

Pakistan: ಇಡೀ ಜಗತ್ತೇ ಮೋದಿಗೆ ಅಭಿನಂದಿಸಿದರೂ ಪಾಕಿಸ್ತಾನ ಮಾತ್ರ ಇನ್ನೂ Congratulations ಎಂದಿಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ22 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌