Anganawadi Workers protest | ಕೊರೆವ ಚಳಿಯಲ್ಲೂ ಅಹೋರಾತ್ರಿ ಪ್ರತಿಭಟನೆ; ಕುಸಿದುಬಿದ್ದ ಅಂಗನವಾಡಿ ಕಾರ್ಯಕರ್ತೆ - Vistara News

ಕರ್ನಾಟಕ

Anganawadi Workers protest | ಕೊರೆವ ಚಳಿಯಲ್ಲೂ ಅಹೋರಾತ್ರಿ ಪ್ರತಿಭಟನೆ; ಕುಸಿದುಬಿದ್ದ ಅಂಗನವಾಡಿ ಕಾರ್ಯಕರ್ತೆ

ಸೇವೆ ಕಾಯಂ, ಗ್ರಾಚ್ಯುಟಿ ಹಣ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು (Anganwadi Workers protest) ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಗಡ ನಡುಗಿಸುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದ ಘಟನೆಯು ನಡೆದಿದೆ.

VISTARANEWS.COM


on

ಅಂಗನವಾಡಿ ಕಾರ್ಯಕರ್ತೆಯರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು (Anganwadi Workers protest) ಬೀದಿಗಿಳಿದಿದ್ದು, ಕೊರೆವ ಚಳಿಯನ್ನು ಲೆಕ್ಕಿಸದೆ ಮಕ್ಕಳ ಸಮೇತ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಜಮಾಯಿಸಿದ್ದು, ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Anganwadi Workers protest
Anganwadi Workers protest

ಇತ್ತ ಚಳಿಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಎಂಬುವವರು ಕುಸಿದು ಬಿದ್ದ ಘಟನೆಯು ತಡರಾತ್ರಿ ನಡೆದಿದೆ. ಹೊಸನಗರ ಮೂಲದ ಕಾರ್ಯಕರ್ತೆ ಶಾಲಿನಿಗೆ ಶುಗರ್‌ ಲೆವೆಲ್‌ ಕಡಿಮೆ ಆಗಿದ್ದು ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದರು. ಈ ವೇಳೆ ಆಂಬ್ಯುಲೆನ್ಸ್ ಸಿಗದೆ ಪರದಾಡಬೇಕಾಯಿತು. ಬಳಿಕ ಪೊಲೀಸರ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.

ಬೇಡಿಕೆಗಳು ಏನೇನು?
*ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂ ಮಾಡಬೇಕು.
*ರಾಷ್ಟ್ರೀಯ ಶಿಕ್ಷಣ ಯೋಜನೆಯಾದ NEP ಅನ್ನು ರಾಜ್ಯದಲ್ಲಿ ಜಾರಿ ಮಾಡಿದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಿ ಶಾಲಾ ಶಿಕ್ಷಕರ ಸ್ಥಾನಮಾನ ನೀಡಬೇಕು.
*ಮಿನಿ ಅಂಗನವಾಡಿ ಕೇಂದ್ರಗಳನ್ನು ತಕ್ಷಣ ಮೇಲ್ದರ್ಜೆಗೆ ಏರಿಸಬೇಕು.
*ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ನೀಡಿ ಪೆನ್‌ಷನ್ ಜಾರಿ ಮಾಡಬೇಕು.
*ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರೋಗ್ಯ ವಿಮೆಯಾದ ಇ.ಎಸ್.ಐ ಜಾರಿ ಮಾಡಬೇಕು.

ಇದನ್ನೂ ಓದಿ | Murugha mutt | ಮಠಕ್ಕೆ ಉಸ್ತುವಾರಿ ಸ್ವಾಮೀಜಿ ನೇಮಿಸಲು ಜೈಲು ಸೇರಿದ ಮುರುಘಾ ಶ್ರೀಗಳಿಗೆ ಹಕ್ಕಿದೆಯೇ ಎಂದು ಕೇಳಿದ ಹೈಕೋರ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

KRS Dam: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಸೋಮವಾರ ಬೆಳಗ್ಗೆ ಹಾಗೂ ಮೈಸೂರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.

VISTARANEWS.COM


on

KRS Dam
Koo

ಮಂಡ್ಯ/ಮೈಸೂರು: ರಾಜ್ಯ ಉತ್ತಮ ಮಳೆಯಿಂದ ಕೃಷ್ಣರಾಜಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಜಲಾಶಯ ಭರ್ತಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎರಡೂ ಜಲಾಶಯಗಳಿಗೆ (KRS Dam) ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಅವರು ತೆರಳಿ ಬಾಗಿನ ಅರ್ಪಿಸಲಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ 3ನೇ ಬಾರಿಗೆ ಬಾಗಿನ ಅರ್ಪಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಮಂತ್ರಿಮಂಡಲದ ಅನೇಕರು ಭಾಗಿಯಾಗಲಿದ್ದಾರೆ. ಮೈಸೂರಿನಿಂದ ಕೆಆರ್‌ಎಸ್‌ಗೆ ಸಿಎಂ ತೆರಳಲಿದ್ದು, ಪೂಜೆ ಮುಗಿಸಿ ಮಧ್ಯಾಹ್ನ 1.30ಕ್ಕೆ ನಿರ್ಗಮಿಸಲಿದ್ದಾರೆ. ಕೆಆರ್‌ಎಸ್ ಬಾಗಿನ ಕಾರ್ಯಕ್ರಮ‌ ಮುಗಿದ ನಂತರ ಕಬಿನಿ ಡ್ಯಾಂ ತೆರಳಿ ಬಾಗಿನ ಅರ್ಪಿಸಲಿದ್ದಾರೆ. ಈ ಹಿಂದೆ 2013, 2014ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ್ದರು.

ನಾಳೆ ಮಧ್ಯಾಹ್ನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು: ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಜುಲೈ 29ರಂದು ಮಧ್ಯಾಹ್ನ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಣ್ಣ ನೀರಾವರಿ ಸಚಿವ ಬೋಸರಾಜು, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್, ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ.

ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
karnataka Rain

ಕೊಡಗು: ಕೊಡಗು ಜಿಲ್ಲೆಯಾದ್ಯಂತ ವರುಣನ (Karnataka Rain) ಆರ್ಭಟ ಕೊಂಚ ತಗ್ಗಿದೆ. ಮಳೆ ಕಡಿಮೆಯಾದರೂ ಮಳೆಯ ಅನಾಹುತ ನಿಂತಿಲ್ಲ. ಮಾದಪುರ ಟೌನ್ ಸಮೀಪ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಜಾಗದಲ್ಲೆ ಭೂಮಿ ಬಿರುಕು ಬಿಟ್ಟಿದೆ. ಮಳೆ ಹೆಚ್ಚಾದಲ್ಲಿ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಮಡಿಕೇರಿ ಮಾದಪುರ ಸೋಮವಾರಪೇಟೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ಗುಡ್ಡ ಕುಸಿದರೆ ಮಡಿಕೇರಿ – ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ. ಸದ್ಯ ಆತಂಕದಲ್ಲೇ ವಾಹನ ಸವಾರರು ಓಡಾಡುತ್ತಿದ್ದಾರೆ.

ಉಕ್ಕಿ ಹರಿಯುವ ನೀರಿಗೆ ಜಿಗಿದು ಯುವಕರ ಈಜಾಟ

ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನದಿ ಸೇರಿದಂತೆ ಕಾಲುವೆಗಳಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇತ್ತ ಬಾಲಕರು ಜೀವದ ಹಂಗು ತೊರೆದು, ಕಾಲುವೆಗಳಿಗೆ ಜಿಗಿಯುತ್ತಿದ್ದಾರೆ. ರಕ್ಷಣಾ ಕವಚಗಳು ಇಲ್ಲದೆ ಕಾಲುವೆಗಳಿಗೆ ಮೇಲಿಂದ ಜಿಗಿದು ಆಟವಾಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಜಲಾಶಯದ ಬಳಿ ಇರುವ ಕಾಲುವೆಗಳಲ್ಲಿ ಜಿಗಿದು ಈಜಾಡುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆಯ ನಡುವೆ ಆತಂಕದ ಹುಟ್ಟಿಸಿದ ಕಾಳಿಂಗ

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರ ನಡುವೆ ಕಾಳಿಂಗ ಸರ್ಪವೊಂದು ಪ್ರತ್ಯಕ್ಷಗೊಂಡು ಆತಂಕದ ಹುಟ್ಟಿಸಿತ್ತು. 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ. ಕಳಸದ ಸಂಸೆ ಗ್ರಾ.ಪಂ ವ್ಯಾಪ್ತಿಯ ಪಾತಿಗುಡ್ಡದಲ್ಲಿ‌ ಘಟನೆ ನಡೆದಿದೆ. ಕಾಳಿಂಗ ಸರ್ಪ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿತ್ತು. ಉರಗತಜ್ಞ ರಿಜ್ವಾನ್ ಹಾಗೂ ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ವಿಜಯನಗರದಲ್ಲಿ ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆ

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆಯಾಗಿದೆ. ವಿಜಯನಗರದ ಕೋದಂಡರಾಮ ದೇಗುಲದ ಅರ್ಧಕ್ಕೆ ನೀರು ಹರಿದು ಬಂದಿದೆ. ಸೀತೆ ಸೆರಗು, ಸುಗ್ರೀವ ಗುಹೆಯ ಬಳಿಯೂ ಜಲಾವೃತಗೊಂಡಿದೆ. ನದಿ ಪಾತ್ರಕ್ಕೆ ತೆರಳದಂತೆ ಸ್ಥಳೀಯ ಆಡಳಿತ ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆಯೇ ಸ್ನಾನಘಟ್ಟಗಳು, ಪುರಂದರ ದಾಸರ ಮಂಟಪಗಳು ಮುಳುಗಿದೆ.

ಇದನ್ನೂ ಓದಿ: Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

ಇತ್ತ ತುಂಗಭದ್ರಾ ನದಿಯ ನೀರು ತುಂಬಿ ಐತಿಹಾಸಿಕ ಮದಲಘಟ್ಟ ಆಂಜನೇಯ ದೇಗುಲದ ಬಳಿ ಹರಿದಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮದಲಘಟ್ಟ ಆಂಜನೇಯ ಸ್ವಾಮಿ ದೇಗುಲದಲ್ಲಿ ಇನ್ನೂ ಸ್ವಲ್ಪ ನೀರು ಹೆಚ್ಚಾದರೆ ಜಲಾವೃತ ಆಗುವ ಸಾಧ್ಯತೆ ಇದೆ.

Continue Reading

ಚಿತ್ರದುರ್ಗ

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Theft Case : ಚಿತ್ರದುರ್ಗದಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಬೊಲೆರೋ ವಾಹನವನ್ನು ಅಡ್ಡಗಟ್ಟಲು ಮುಂದಾದ ಪೊಲೀಸ್‌ ಜೀಪ್‌ ಮೇಲೆ ಕಳ್ಳರು ಕಲ್ಲು ತೂರಿ ಎಸ್ಕೇಪ್‌ ಆಗಿದ್ದರು. ಇದೀಗ ಪರಾರಿ ಆಗಿದ್ದ ಆಂಧ್ರ ಗ್ಯಾಂಗ್‌ನ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

theft case
Koo

ಚಿತ್ರದುರ್ಗ : ಪೊಲೀಸರ ಮೇಲೆ (Theft Case) ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿತ್ತು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಘಟನೆ ನಡೆದಿತ್ತು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಇದೀಗ ಒಂದೇ ವಾರದಲ್ಲಿ ಪ್ರಕರಣ ಭೇದಿಸಿದ ನಾಯಕನಹಟ್ಟಿ ಪೊಲೀಸರು, ಆಂಧ್ರ ಗ್ಯಾಂಗ್‌ನ ಓರ್ವನನ್ನು ಸೆರೆಹಿಡಿದಿದ್ದಾರೆ. ‌

ಆಂಧ್ರ ಗ್ಯಾಂಗ್‌ವೊಂದು ಕಳೆದ ಶನಿವಾರ ರಾತ್ರಿ ನಾಯಕನಹಟ್ಟಿಯಲ್ಲಿ ಹಂದಿ ಕಳ್ಳತನಕ್ಕೆ ಬಂದಿತ್ತು. ಹಂದಿ ಕಳ್ಳತನಕ್ಕೆ ಬಂದಿದ್ದ ಒರ್ವ ಶಂಕಿತ ಆರೋಪಿ ಅರೆಸ್ಟ್ ಆಗಿದ್ದ. ಆಂಧ್ರ ಮೂಲದ ಆನಂತಪುರ ನಗರದ ರಮಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುದಾಪುರ ಗ್ರಾಮದಲ್ಲಿ ಸ್ಥಳ ಮಹಜರ್ ನಡೆಸಿದ್ದಾರೆ.

ಬೊಲೆರೋ ವಾಹನದಲ್ಲಿ ಹಂದಿ ಕಳ್ಳತನಕ್ಕೆ ಬಂದಿದ್ದ 7 ಮಂದಿ ಕಳ್ಳರು ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ ಎಸ್ಕೇಪ್‌ ಆಗಿದ್ದರು. ಮಾತ್ರವಲ್ಲ ಹಿಡಿಯಲು ಬಂದ ಪೊಲೀಸರಿಗೆ ಕಲ್ಲು ತೂರಿದ್ದರು. ಈ ವೇಳೆ ಪಿಎಸ್‌ಐ ಶಿವಕುಮಾರ್ 4 ಸುತ್ತು ಏರ್ ಫೈರ್ ಮಾಡಿ, 25 ಕಿ.ಮೀ ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದರು. ಕೊನೆಗೂ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜತೆಗೆ ಕಳ್ಳತನಕ್ಕೆ ಬಳಸಿದ್ದ ಬೊಲೆರೋ ಪಿಕಪ್ ವಾಹನ ಸೀಸ್ ಮಾಡಿದ್ದಾರೆ. ಉಳಿದ 7 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಂದಿ ಕಳ್ಳರು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಕಾಲ್ಕಿತ್ತಿದ್ದರು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ಕಳ್ಳರನ್ನು ಹಿಡಿಯಲು ಪೊಲೀಸರು ಬೊಲೆರೋ ವಾಹನವನ್ನು ಅಡ್ಡ ಹಾಕಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಿದ್ದರು. ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದರು.

ಇನ್ನೂ ಕಳ್ಳರು ಕಲ್ಲು ತೂರಿದ್ದರಿಂದ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿತ್ತು. ಸುಮಾರು 7 ಮಂದಿ ಗ್ಯಾಂಗ್‌ ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದರು. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದರು.

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದರು. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು. ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬೊಲೆರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದರು. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

Bengaluru South District: ಶ್ರೀರಾಮನ ಭೂಮಿಯೆಂದೇ ಖ್ಯಾತಿ ಪಡೆದಿರುವ ಭಾರತದಲ್ಲಿ ಶ್ರೀರಾಮನ ಹೆಸರನ್ನು ಅಳಿಸಿ ಹಾಕಿದರೆ ಅದನ್ನು ಹಿಂದು ಸಮಾಜ ಎಂದಿಗೂ ಸಹಿಸುವುದಿಲ್ಲ ಹೆಸರು ಬದಲಾವಣೆಯ ನಿರ್ಧಾರ ಹಿಂಪಡೆಯದಿದ್ದರೆ, ಹಿಂದು ಸಮಾಜ ಬೀದಿಗಿಳಿಯದೆ ಎಂದು ಹಿಂದು ಜನಜಾಗೃತಿ ಸಮಿತಿ ಎಚ್ಚರಿಕೆ ನೀಡಿದೆ.

VISTARANEWS.COM


on

Bengaluru South District
Koo

ಬೆಂಗಳೂರು: 500 ವರ್ಷಗಳ ನಂತರ, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಿದ ಬಳಿಕ ದೇಶಾದ್ಯಂತ ರಾಮನದ್ದೇ ಗುಣಗಾನವಿರುವಾಗ ಕರ್ನಾಟಕದಲ್ಲಿ ಮಾತ್ರ ‘ರಾಮನಗರ’ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಶ್ರೀರಾಮನ ಭೂಮಿಯೆಂದೇ ಖ್ಯಾತಿ ಪಡೆದಿರುವ ಭಾರತದಲ್ಲಿ ಶ್ರೀರಾಮನ ಹೆಸರನ್ನು ಅಳಿಸಿ ಹಾಕಿದರೆ ಅದನ್ನು ಹಿಂದು ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಹಿಂದು ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರದ ಈ ನಿರ್ಧಾರ, ಹಿಂದುಗಳ ಗಾಯಕ್ಕೆ ಉಪ್ಪು ಸವರಿದಂತಿದೆ. ಕಾಂಗ್ರೆಸ್ ಈ ಹಿಂದೆ ಶ್ರೀರಾಮನನ್ನು ಕಾಲ್ಪನಿಕ ಎಂದಿತ್ತು, ನಂತರ ಶ್ರೀರಾಮಲಲ್ಲಾನ ಮೂರ್ತಿ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಈಗ ರಾಮನಗರದ ಹೆಸರು ಬದಲಾಯಿಸಿದೆ. ಇದರಿಂದ ಕಾಂಗ್ರೆಸ್‌ಗೆ ‘ಶ್ರೀರಾಮ’ನ ಬಗ್ಗೆ ವಿರೋಧವಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ.

ರಾಮನಗರದ ಹೆಸರನ್ನು ಬದಲಾಯಿಸಲು ನಿರ್ಧರಿಸಿದ ಕಾಂಗ್ರೆಸ್ ಪಕ್ಷವು ಮತಾಂಧ ಕ್ರೂರಿ ಔರಂಗಜೇಬನ ಹೆಸರಿರುವ ದೆಹಲಿಯ ಔರಂಗಜೇಬ ರಸ್ತೆ, ತುಘಲಕ್ ರಸ್ತೆ ಇತ್ಯಾದಿ ಆಕ್ರಮಣಕಾರಿಗಳ ಹೆಸರನ್ನು ಬದಲಾಯಿಸಲು ಪ್ರಯತ್ನಿಸಿದೆಯೇ? ಕರ್ನಾಟಕದಲ್ಲಿರುವ ಮಹಾನಗರಗಳು ಮತ್ತು ನಗರಗಳ ಇಸ್ಲಾಮಿಕ್ ಹೆಸರುಗಳನ್ನು ಬದಲಾಯಿಸಲು ರಾಜ್ಯ ಸರ್ಕಾರ ಧೈರ್ಯ ತೋರುವುದೇ? ರಾಮನಗರ ಹೆಸರು ಬದಲಾವಣೆಗೆ ಹಿಂದುಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಹೆಸರು ಬದಲಾವಣೆಯ ನಿರ್ಧಾರ ಹಿಂಪಡೆಯದಿದ್ದರೆ, ಹಿಂದು ಸಮಾಜ ಬೀದಿಗಿಳಿಯದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ರಾಮನಗರ ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜು.26ರಂದು ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿತ್ತು. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ | Income Tax : ವಿದೇಶ ಪ್ರಯಾಣಕ್ಕೆಹೊರಟವರೇ ಇಲ್ಲಿ ಕೇಳಿ; ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ ಎಂದಿದೆ ಕೇಂದ್ರ ಸರ್ಕಾರ

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದರು.

Continue Reading

ಕಲಬುರಗಿ

Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

Murder case : ಎರಡು ವಾರಗಳ ಹಿಂದೆ ಮಹಿಳೆಯೊಬ್ಬರು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಅಡವಿಟ್ಟಿದ್ದ ಚಿನ್ನಾಭರಣವನ್ನು ಕೇಳಿದ್ದಕ್ಕೆ ಮಹಿಳೆ ಕೊಲೆಯಾಗಿದ್ದು, ಇದೀಗ ಕೊಲೆಗಾರನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Murder case
Koo

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಮಹಿಳೆಯೊಬ್ಬಳ ಕೊಲೆ (Murder case) ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ರಾಜ್ ಕುಮಾರ್ ಬಂಧಿತ ಆರೋಪಿ ಆಗಿದ್ದಾನೆ.

ರಾಜ್‌ಕುಮಾರ್‌ ಊಟ ಕೊಡಿಸುವ ನೆಪದಲ್ಲಿ ಬಸ್ಸಮ್ಮ ಎಂಬಾಕೆಯನ್ನು ಕರೆದೊಯ್ದು ಕೊಲೆ ಮಾಡಿದ್ದ. ಕೊಲೆ ಬಳಿಕ ಪೆಟ್ರೋಲ್ ಹಾಕಿ ಸುಟ್ಟು ರಸ್ತೆ ಬದಿಯಲ್ಲಿ ಶವ ಹೂತಿಟ್ಟು ಎಸ್ಕೇಪ್ ಆಗಿದ್ದ. ಬಸ್ಸಮ್ಮ ಈ ರಾಜಕುಮಾರ್ ಬಳಿ ಚಿನ್ನಾಭರಣವನ್ನು ಅಡವಿಟ್ಟಿದ್ದಳು ಜತೆಗೆ ಹಣವನ್ನು ಕೊಟ್ಟಿದ್ದಳು. ಬಸ್ಸಮ್ಮ ಕೊಟ್ಟ ಚಿನ್ನವನ್ನು ರಾಜುಕುಮಾರ್‌ ಮತ್ತೊಬ್ಬರ ಬಳಿ ಅಡವಿಟ್ಟಿದ್ದ. ಕೆಲ ದಿನಗಳ ಬಳಿಕ ಬಸ್ಸಮ್ಮ, ರಾಜಕುಮಾರ್‌ಗೆ ಚಿನ್ನಾಭರಣ ಹಾಗೂ ಹಣವನ್ನು ನೀಡುವಂತೆ ಕೇಳಿದ್ದಳು.

ಆದರೆ ಬೇರೊಬ್ಬರ ಬಳಿ ಚಿನ್ನ ಅಡವಿಟ್ಟ ಕಾರಣಕ್ಕೆ ರಾಜಕುಮಾರ್‌, ಬಸ್ಸಮ್ಮಳನ್ನು ಕೊಂದು ಮುಗಿಸಲು ಸ್ಕೆಚ್‌ ಹಾಕಿದ್ದ. ಅದರಂತೆ ಜುಲೈ 14 ರಂದು ಮಾರ್ಕೆಟ್‌ನಿಂದ ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಗುರುತು ಸಿಗದಂತೆ ಸುಟ್ಟು ಹಾಕಿ ಎಸ್ಕೇಪ್ ಆಗಿದ್ದ.

ಜಮೀನಿನಲ್ಲಿ ಪತ್ತೆಯಾಗಿದ್ದ ಶವ

ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Found) ಪತ್ತೆಯಾಗಿತ್ತು. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಹಾಗಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಚಿನ್ನಾಭರಣ ಹಾಗೂ ಹಣಕಾಸು ವಿಷ್ಯಕ್ಕೆ ಹತ್ಯೆ ನಡೆದಿರುವುದು ಗೊತ್ತಾಗಿದೆ. ಮಹಾಗಾವ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

ಪೊಲೀಸ್‌ ಮನೆಯಲ್ಲಿ ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್‌

ಮೈಸೂರು: ತಡರಾತ್ರಿ ಮನೆ ಬೀಗ ಮುರಿದ ಕಳ್ಳರು (theft Case) ತಮ್ಮ ಕೈ ಚಳಕ ತೋರಿಸಿದ್ದಾರೆ. ಮೈಸೂರಿನ ಜೆ.ಪಿ ನಗರದ ಎರಡನೇ ಹಂತದಲ್ಲಿ ಘಟನೆ ನಡೆದಿದೆ. ಪೊಲೀಸರ ಮನೆಗೆ ನುಗ್ಗಿದ ಕಳ್ಳರು ಸಿನಿಮೀಯ ರೀತಿಯಲ್ಲಿ ಕದಿಯಲು ಮುಂದಾಗಿದ್ದರು. ಆದರೆ ಅವರ ಟೈಂ ಕೈಕೊಟ್ಟಿತ್ತು ಕಳ್ಳರು ಮನೆಯಲ್ಲಿರುವಾಗಲೇ ಮಾಲೀಕರು ಮನೆಗೆ ವಾಪಸ್‌ ಆಗಿದ್ದರು.

ಮನೆ ಮಾಲೀಕರನ್ನು ಕಂಡು ಗಾಬರಿಗೊಂಡ ಕಳ್ಳರು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಂದಿಗೆಲ್ಲ ಚಾಕು ತೋರಿಸಿ ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್‌ಗಳನ್ನು ಬಿಟ್ಟು ಓಡಿಹೋಗಿದ್ದಾರೆ.

ಕಳ್ಳರು ಓಡಿ ಹೋದ ಬಳಿಕ ಮನೆಯೊಳಗೆ ತೆರಳಿ ನೋಡಿದಾಗ 135 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡಸಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Decline of Vultures
ಆರೋಗ್ಯ7 mins ago

Indian Vultures : ಹದ್ದುಗಳೇ ಜೀವರಕ್ಷಕ; ಭಾರತದಲ್ಲಿ ರಣಹದ್ದುಗಳ ಸಂಖ್ಯೆ ಕುಸಿತದಿಂದ 5 ಲಕ್ಷ ಮಂದಿ ಸಾವು ಎಂದಿದೆ ಅಧ್ಯಯನ ವರದಿ

KRS Dam
ಕರ್ನಾಟಕ12 mins ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sugar Vs Jaggery In Tea
ಆರೋಗ್ಯ33 mins ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ43 mins ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

theft case
ಚಿತ್ರದುರ್ಗ49 mins ago

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Paris Olympics boxing
ಕ್ರೀಡೆ1 hour ago

Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

Unveiling of IPT 12 Cricket Trophy, Jersey by N1 Cricket Academy
ಕ್ರಿಕೆಟ್1 hour ago

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

Bengaluru South District
ಕರ್ನಾಟಕ1 hour ago

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

ಪ್ರಮುಖ ಸುದ್ದಿ1 hour ago

UPSC Coaching : ನೈತಿಕತೆಯ ಪಾಲನೆ ವಿಚಾರದಲ್ಲಿ ಶ್ರೀರಾಮನಿಗಿಂತ ಅಕ್ಬರನೇ ಶ್ರೇಷ್ಠ ಎಂದ ಯುಪಿಎಸ್​ಸಿ ಬೋಧಕಿ ಶುಭ್ರಾ ರಂಜನ್; ಕೇಸ್​ ದಾಖಲಾದ ಬಳಿಕ ಕ್ಷಮೆ ಕೋರಿಕೆ

Murder case
ಕಲಬುರಗಿ1 hour ago

Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack
ಮಳೆ2 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ5 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ23 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಟ್ರೆಂಡಿಂಗ್‌