Scoot Airlines: ಸಂಜೆ ಹೊರಡಬೇಕಿದ್ದ ವಿಮಾನ 35 ಪ್ರಯಾಣಿಕರನ್ನು ಬಿಟ್ಟು ಮಧ್ಯಾಹ್ನವೇ ಹೊರಟುಹೋಯ್ತು; ಯಾಕೆ ಈ ಅರ್ಜೆಂಟ್​​? - Vistara News

ದೇಶ

Scoot Airlines: ಸಂಜೆ ಹೊರಡಬೇಕಿದ್ದ ವಿಮಾನ 35 ಪ್ರಯಾಣಿಕರನ್ನು ಬಿಟ್ಟು ಮಧ್ಯಾಹ್ನವೇ ಹೊರಟುಹೋಯ್ತು; ಯಾಕೆ ಈ ಅರ್ಜೆಂಟ್​​?

ಗೆ ವಿಮಾನ ಮುಂಚಿತವಾಗಿ ಟೇಕ್​ಆಫ್​ ಆಗಿದ್ದು ವಿವಾದ ಸೃಷ್ಟಿಯಾಗುತ್ತಿದ್ದಂತೆ ಅಮೃತ್​​ಸರ ವಿಮಾನ ನಿಲ್ದಾಣದ ನಿರ್ದೇಶಕ ವಿ.ಕೆ.ಸೇಠ್​ ಹೇಳಿಕೆ ನೀಡಿದ್ದಾರೆ. ‘ಈ ವಿಮಾನಕ್ಕೆ ಟಿಕೆಟ್ ಬುಕ್​ ಮಾಡಿದ್ದ ಪ್ರಯಾಣಿಕರಿಗೆಲ್ಲ ಮಾಹಿತಿ ನೀಡಿದ್ದೆವು ಎಂದು ಹೇಳಿದ್ದಾರೆ.

VISTARANEWS.COM


on

Scoot Airlines flight takes off Leave 35 passengers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಂಜಾಬ್​​ನ ಅಮೃತ್​ಸರದಿಂದ ಸಿಂಗಾಪುರಕ್ಕೆ ಹೊರಟಿದ್ದ ಸ್ಕೂಟ್​ ಏರ್​​ಲೈನ್ಸ್​​ಗೆ ಸೇರಿದ ವಿಮಾನವೊಂದು ಮಹಾ ಎಡವಟ್ಟು ಮಾಡಿದೆ. ನಿಗದಿತ ಸಮಯಕ್ಕಿಂತಲೂ ಸುಮಾರು ಮೂರ್ನಾಲ್ಕು ತಾಸು ಮುಂಚಿತವಾಗಿ ಟೇಕ್​ಆಫ್​ ಆಗಿದೆ. ಇದರ ಪರಿಣಾಮ ಸುಮಾರು 35 ಪ್ರಯಾಣಿಕರು ವಿಮಾನ ತಪ್ಪಿಸಿಕೊಳ್ಳುವಂತಾಯ್ತು. ವಿಮಾನ ಹೀಗೆ ಅವಧಿ ಪೂರ್ವ ಹೊರಟು ಹೋಗಿದ್ದೇಕೆ ಎಂಬ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ತನಿಖೆ ಕೈಗೆತ್ತಿಕೊಂಡಿದೆ.

ಅಮೃತ್​​ಸರ ವಿಮಾನ ನಿಲ್ದಾಣದಿಂದ ಈ ವಿಮಾನ ಬುಧವಾರ ಸಂಜೆ 7.55ಕ್ಕೆ ಹೊರಡಬೇಕಿತ್ತು. ಆದರೆ ಮಧ್ಯಾಹ್ನ 3ಗಂಟೆಗೇ ಟೇಕ್​ಆಫ್​ ಆಗಿದೆ. ವಿಮಾನ ತಪ್ಪಿಸಿಕೊಂಡ 35 ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಏರ್​ಪೋರ್ಟ್​ ಹೊರಗಡೆ ಪ್ರತಿಭಟನೆ ನಡೆಸಿದರು. ಅಲ್ಲಿದ್ದ ಅಧಿಕಾರಿಗಳಿಗೆ ದೂರನ್ನೂ ಕೊಟ್ಟಿದ್ದಾರೆ.

ಹೀಗೆ ವಿಮಾನ ಮುಂಚಿತವಾಗಿ ಟೇಕ್​ಆಫ್​ ಆಗಿದ್ದು ವಿವಾದ ಸೃಷ್ಟಿಯಾಗುತ್ತಿದ್ದಂತೆ ಅಮೃತ್​​ಸರ ವಿಮಾನ ನಿಲ್ದಾಣದ ನಿರ್ದೇಶಕ ವಿ.ಕೆ.ಸೇಠ್​ ಹೇಳಿಕೆ ನೀಡಿದ್ದಾರೆ. ‘ಈ ವಿಮಾನಕ್ಕೆ ಟಿಕೆಟ್ ಬುಕ್​ ಮಾಡಿದ್ದ ಪ್ರಯಾಣಿಕರಿಗೆಲ್ಲ, ಅದರ ಸಮಯ ಬದಲಾದ ಬಗ್ಗೆ ಇಮೇಲ್​ ಮೂಲಕ ಮಾಹಿತಿ ನೀಡಲಾಗಿತ್ತು. ಏಜೆಂಟ್​​ಗಳಿಗೂ ತಿಳಿಸಲಾಗಿತ್ತು. ಆದರೆ ಇಲ್ಲಿ ಏಜೆಂಟ್​​ಗಳು ಎಡವಿದ್ದಾರೆ. ಯಾರೆಲ್ಲ ಏಜೆಂಟ್​​​​ಗಳ ಮೂಲಕ ಟಿಕೆಟ್​ ಬುಕ್​ ಮಾಡಿದ್ದರೋ, ಅವರಿಗೆ ಏಜೆಂಟ್​​ಗಳು ಮಾಹಿತಿ ನೀಡಿರಲಿಲ್ಲ. ಹೀಗಾಗಿ ಆ ಪ್ರಯಾಣಿಕರು ವಿಮಾನ ತಪ್ಪಿಸಿಕೊಂಡರು’ ಎಂದು ಹೇಳಿದ್ದಾರೆ. ಆದರೆ ಹೀಗೆ ವಿಮಾನ ಅರ್ಜೆಂಟ್​ ಆಗಿ, ಮುಂಚಿತವಾಗಿಯೇ ಹೊರಡಲು ಕಾರಣ ಏನು ಗೊತ್ತಾಗಲಿಲ್ಲ.

ಕಳೆದ ವಾರ ಅಂದರೆ ಜನವರಿ 9ರಂದು ಬೆಂಗಳೂರು-ದೆಹಲಿ ಗೋ ಫಸ್ಟ್​ ವಿಮಾನವೊಂದು ಹೀಗೇ ಮಾಡಿತ್ತು. ಬೆಂಗಳೂರು ಏರ್​ಪೋರ್ಟ್​​ನಿಂದ ನಿಗದಿತ ಸಮಯಕ್ಕೂ ಪೂರ್ವ ಟೇಕ್​ ಆಫ್​ ಆಗಿತ್ತು. ಅಂದು 55 ಪ್ರಯಾಣಿಕರಿಗೆ ವಿಮಾನ ತಪ್ಪಿತ್ತು. ಹಲವರು ಟ್ವಿಟರ್​ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಘಟನೆ ಸಂಬಂಧ ಗೋಏರ್​ ಏರ್​​ಲೈನ್ಸ್​ಗೆ DGCA ಶೋಕಾಸ್​ ನೋಟಿಸ್​ ನೀಡಿದೆ.

ಇದನ್ನೂ ಓದಿ: Cockroach In Meal | ವಿಮಾನದಲ್ಲಿ ಕೊಟ್ಟ ಊಟದಲ್ಲಿ ಜಿರಳೆ ಪತ್ತೆ, ಇದಕ್ಕೆ ಏರ್‌ಲೈನ್ಸ್‌ ಏನು ಹೇಳತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

Mann Ki Baat: ʼಮನ್​ ಕಿ ಬಾತ್​ʼನ 112ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಜತೆಗೆ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದರು. ಮಾತ್ರವಲ್ಲ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು.

VISTARANEWS.COM


on

Mann Ki Baat
Koo

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024)ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪ್ರೋತ್ಸಾಹಿಸುವಂತೆ ದೇಶವಾಸಿಗಳಲ್ಲಿ ಮನವಿ ಮಾಡಿದರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್​ ಕಿ ಬಾತ್​ʼ (Mann Ki Baat)ನ 112ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಈ ಕರೆ ನೀಡಿದರು.

“ಇದೀಗ ಇಡೀ ಜಗತ್ತಿನ ಕಣ್ಣು ಪ್ಯಾರಿಸ್ ಒಲಿಂಪಿಕ್ಸ್‌ನತ್ತ ನೆಟ್ಟಿದೆ. ನಮ್ಮ ಕ್ರೀಡಾಪಟುಗಳಿಗೆ ಜಾಗತಿಕ ವೇದಿಕೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಮತ್ತು ದೇಶಕ್ಕಾಗಿ ಗಮನಾರ್ಹ ಕೊಡುಗೆ ನೀಡಲು ಒಲಿಂಪಿಕ್ಸ್ ಅವಕಾಶ ಒದಗಿಸುತ್ತದೆ. ನೀವೂ ಸಹ ನಮ್ಮ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಮತ್ತು ಭಾರತವನ್ನು ಹುರಿದುಂಬಿಸಿ” ಎಂದು ಅವರು ಹೇಳಿದರು.

ಇದೇ ವೇಳೆ ಅವರು ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ (International Mathematics Olympiad)ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು. “ಕೆಲವು ದಿನಗಳ ಹಿಂದೆ ನಡೆದ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಆ ಮೂಲಕ 4 ಚಿನ್ನದ ಪದಕ ಮತ್ತು 1 ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. 100ಕ್ಕೂ ಹೆಚ್ಚು ದೇಶಗಳ ಸ್ಪರ್ಧಿಗಳು ಈ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿದ್ದರು. ನಮ್ಮ ತಂಡ ಅಗ್ರ 5ರಲ್ಲಿ ಸ್ಥಾನ ಪಡೆದುಕೊಂಡಿದೆʼʼ ಎಂದು ಮೋದಿ ಹೆಮ್ಮೆಯಿಂದ ಹೇಳಿದರು.

ʼʼಪುಣೆಯ ಆದಿತ್ಯ ವೆಂಕಟ ಗಣೇಶ್, ಪುಣೆಯ ಸಿದ್ಧಾರ್ಥ್ ಚೋಪ್ರಾ, ದೆಹಲಿಯ ಅರ್ಜುನ್ ಗುಪ್ತಾ, ಗ್ರೇಟರ್ ನೋಯ್ಡಾದ ಕನವ್ ತಲ್ವಾರ್, ಮುಂಬೈಯ ರುಶಿಲ್ ಮಾಥುರ್ ಮತ್ತು ಗುವಾಹಟಿಯ ಆನಂದ ಭಾದುರಿ ಈ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿದ್ದಾರೆʼʼ ಎಂದು ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದರು.

ʼಮನ್ ಕಿ ಬಾತ್ʼ ಸಂಚಿಕೆಯಲ್ಲಿ ಭಾಗವಹಿಸುವಂತೆ ಅವರು ಇತ್ತೀಚೆಗೆ ಈ ಯುವ ಸಾಧಕರನ್ನು ವಿಶೇಷವಾಗಿ ಆಹ್ವಾನಿಸಿದ್ದರು. ತಮ್ಮ ಅನುಭವಗಳನ್ನು ದೇಶದೊಂದಿಗೆ ಹಂಚಿಕೊಳ್ಳುವಂತೆ ಮೋದಿ ಕೇಳಿಕೊಂಡಿದ್ದರು. ಗಣಿತದಲ್ಲಿನ ತಮ್ಮ ಆಸಕ್ತಿಯೇ ಸಾಧನೆಗೆ ಮುಖ್ಯ ಕಾರಣ ಎಂದು ವಿದ್ಯಾರ್ಥಿಗಳು ತಿಳಿಸಿದರು.

ವಿದ್ಯಾರ್ಥಿಗಳು ಹೇಳಿದ್ದೇನು?

ಪುಣೆಯ ಆದಿತ್ಯ ಮತ್ತು ಸಿದ್ಧಾರ್ಥ್ ತಮ್ಮ ಗಣಿತ ಶಿಕ್ಷಕ ಪ್ರಕಾಶ್ ಅವರ ಕೊಡುಗೆಯನ್ನು ನೆನೆದರು. ಅವರಿಂದಲೇ ತಮ್ಮ ಗೆಲುವು ಸಾಧ್ಯವಾಯಿತು ಎಂದರು. ಅರ್ಜುನ್ ಗುಪ್ತಾ ಪ್ರಧಾನಿ ಅವರೊಂದಿಗೆ ಮಾತನಾಡಲು ಹೆಮ್ಮೆ ವ್ಯಕ್ತಪಡಿಸಿದರು. ಗಣಿತವು ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಇದು ಜೀವನದ ಪ್ರತಿಯೊಂದು ಅಂಶಕ್ಕೂ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಕನವ್ ತಲ್ವಾರ್ ಪೋಷಕರು ಮತ್ತು ಸಹೋದರಿ ನೆರವಿನಿಂದ ಯಶಸ್ಸು ಪಡೆದಿರುವುದಾಗಿ ನುಡಿದರು. ಕಳೆದ ವರ್ಷ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾದ ಅನುಭವವನ್ನು ಹಂಚಿಕೊಂಡು, ಈ ಬಾರಿ ಹೇಗಾದರೂ ಸ್ಥಾನ ಪಡೆಯಬೇಕೆಂಬ ಛಲದಲ್ಲಿ ಶ್ರಮ ಹಾಕಿದ್ದನ್ನು ವಿವರಿಸಿದರು. ಗಣಿತವು ತಾರ್ಕಿಕ ಚಿಂತನೆಯನ್ನು ಮಾತ್ರವಲ್ಲ ಸೃಜನಶೀಲತೆಯನ್ನೂ ಹೆಚ್ಚಿಸುತ್ತದೆ. ಸಮಸ್ಯೆ ಪರಿಹರಿಸುವಾಗ ಔಟ್‌ ಆಫ್‌ ಬಾಕ್ಸ್‌ ಯೋಚಿಸಲು ಸಹಾಯ ಮಾಡುತ್ತದೆ ಎನ್ನುವ ಅಭಿಮತ ರುಶಿಲ್ ಮಾಥುರ್‌ ಅವರದ್ದು. ಎರಡನೇ ಬಾರಿ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿರುವುದಕ್ಕೆ ಆನಂದ ಭಾದುರಿ ಹೆಮ್ಮೆ ವ್ಯಕ್ತಪಡಿಸಿದರು.

ಸಿದ್ದಗಂಗಾ ಮಠದಲ್ಲಿ ʼಮನ್ ಕೀ ಬಾತ್ʼ ಪ್ರಸಾರಕ್ಕೆ ವ್ಯವಸ್ಥೆ

ತುಮಕೂರು: ಕ್ಯಾತ್ಸಂದ್ರ ಬಳಿಯಿರುವ ಸಿದ್ದಗಂಗಾ ಮಠದಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಯಿತು. ಬೃಹತ್ ಎಲ್‌ಇಡಿ ಪರದೆಗಳನ್ನ ಅಳವಡಿಸಲಾಗಿದ್ದು, ಸುಮಾರು ಹತ್ತು ಸಾವಿರ ಮಕ್ಕಳು ವೀಕ್ಷಿಸಿದರು. ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Continue Reading

ವೈರಲ್ ನ್ಯೂಸ್

Viral News: ರೈಲ್ವೇ ಪೊಲೀಸ್‌ ಸಿಬ್ಬಂದಿಯ ಹೊಡೆತಕ್ಕೆ ಯುವಕನ ಕರುಳೇ ಹೊರಬಂತು! ಶಾಕಿಂಗ್‌ Video ಇಲ್ಲಿದೆ

Viral News: ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕರ್ಮಭೂಮಿ ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು, ಕರುಳು ಕಿತ್ತು ಬಂದಿದೆ. ಗಾಯಗೊಂಡ ವ್ಯಕ್ತಿಯನ್ನು ಗಧಾ ಗ್ರಾಮದ ಮೊಹಮ್ಮದ್ ಗುಲಾಬ್ ಅವರ ಪುತ್ರ 25 ವರ್ಷದ ಮೊಹಮ್ಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮೊಹಮ್ಮದ್ ಫುರ್ಕಾನ್‌ನನ್ನು ಪುಪ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Viral News
Koo

ಪಾಟ್ನಾ: ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣ (Janakpur Road railway station)ದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕರ್ಮಭೂಮಿ ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ (Government Railway Police) ಸಿಬ್ಬಂದಿ ಹಲ್ಲೆ ನಡೆಸಿದ್ದು, ಕರುಳು ಕಿತ್ತು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸುವ ವಿಡಿಯೊ ಸದ್ಯ ವೈರಲ್‌ ಆಗಿದ್ದು, ಜಿಆರ್‌ಪಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ (Viral News).

ಗಾಯಗೊಂಡ ವ್ಯಕ್ತಿಯನ್ನು ಗಧಾ ಗ್ರಾಮದ ಮೊಹಮ್ಮದ್ ಗುಲಾಬ್ ಅವರ ಪುತ್ರ 25 ವರ್ಷದ ಮೊಹಮ್ಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮೊಹಮ್ಮದ್ ಫುರ್ಕಾನ್‌ನನ್ನು ಪುಪ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡ ಫುರ್ಕಾನ್ ಅನ್ನು ಹೊತ್ತೊಯ್ಯುತ್ತಿರುವುದು ಮತ್ತು ಜನರ ಗುಂಪು ಅವರನ್ನು ಹಿಂಬಾಲಿಸುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಜತೆಗೆ “ಪೊಲೀಸರು ಅವನನ್ನು ಎಷ್ಟು ಕೆಟ್ಟದಾಗಿ ಥಳಿಸಿದ್ದಾರೆ ಎನ್ನುವುದನ್ನು ನೋಡಿ” ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೇಳಬಹುದು. ಮೊಹಮ್ಮದ್ ಫುರ್ಕಾನ್‌ ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮುಂಬೈಗೆ ಹೋಗುತ್ತಿದ್ದ ತನ್ನ ಚಿಕ್ಕಮ್ಮನನ್ನು ಬೀಳ್ಕೊಡಲು ಆಗಮಿಸಿದ್ದ ವೇಳೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಘಟನೆ ವಿವರ

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಫುರ್ಕಾನ್‌ನ ಹೊಟ್ಟೆಯ ಮೇಲೆ ಜಿಆರ್‌ಪಿ ಸಿಬ್ಬಂದಿ ಕೋಲಿನಿಂದ ಹಲವು ಬಾರಿ ಹೊಡೆದಿದ್ದಾನೆ. ಇದರಿಂದಾಗಿ ಹೊಟ್ಟೆ ಒಡೆದು ಕರುಳು ಹೊರಗೆ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ʼʼನನ್ನ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆ ನಡೆದಿದೆ. ನೋವಾಗುತ್ತಿದೆ ಎಂದು ಪದೇ ಪದೆ ಹೇಳುತ್ತಿದ್ದರೂ ಜಿಆರ್‌ಪಿ ಸಿಬ್ಬಂದಿ ಕೋಲಿನಿಂದ ಹೊಡೆಯುತ್ತಲೇ ಇದ್ದರುʼʼ ಎಂದು ಮೊಹಮ್ಮದ್ ಫುರ್ಕಾನ್‌ ತಿಳಿಸಿದ್ದಾನೆ.

ಹೊರಬಂದ ಕರುಳು

ಫುರ್ಕಾನ್‌ ಸುಮಾರು ಎರಡು ವರ್ಷಗಳ ಹಿಂದೆ ಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ. ಶಸ್ತ್ರಚಿಕಿತ್ಸೆಗೊಳಗಾದ ಭಾಗದ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತನ ಹೊಟ್ಟೆ ಎಡಭಾಗ ತೆರೆದುಕೊಂಡಿತು ಮತ್ತು ಅದರಿಂದ ಕರುಳು ಹೊರಬಂದಿದೆ ಎಂದು ಮೂಲಗಳು ತಿಳಿಸಿವೆ.

ಜಿಆರ್‌ಪಿ ಸಿಬ್ಬಂದಿ ವಿರುದ್ಧ ಆಕ್ರೋಶ

ಘಟನೆ ಬೆಳಕಿಗೆ ಬಂದ ಬಳಿಕ ಜಿಆರ್‌ಪಿ ಸಿಬ್ಬಂದಿಯ ಅನಾಗರಿಕ ವರ್ತನೆಯಿಂದ ಕೋಪಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಜನಕ್‌ಪುರ ರಸ್ತೆ ನಿಲ್ದಾಣವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತ ಗುಂಪು ಸ್ಟೇಷನ್‌ ಸೂಪರಿಟೆಂಡೆಂಟ್‌ ಕಚೇರಿಯ ಮುಖ್ಯ ದ್ವಾರದ ಕಬ್ಬಿಣದ ಗ್ರಿಲ್ ಮತ್ತು ಗಾಜಿನ ಗೇಟ್ ಮುರಿದು ಒಳಗೆ ಪ್ರವೇಶಿಸಿ ಗಲಾಟೆ ಮಾಡಿದೆ. ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಸೀಟುಗಳಿಗಾಗಿ ಪ್ರಯಾಣಿಕರ ನಡುವೆ ಜಗಳ ಕಂಡು ಬಂದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗಳೆಂದು ಗುರುತಿಸಲಾದ ಪ್ರಣಿ ದಯಾನಂದ್ ಪಾಸ್ವಾನ್ ಮತ್ತು ಗೋರೆಲಾಲ್ ಚೌಕಿ ಎಂದಿಬ್ಬರನ್ನು ಅಮಾನತುಗೊಳಿಸಲಾಗಿದ್ದು, ಜಗಳದಲ್ಲಿ ಭಾಗಿಯಾಗಿದ್ದ ಹಲವು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Continue Reading

ಉದ್ಯೋಗ

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

RRB Recruitment 2024: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್‌ 29. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

VISTARANEWS.COM


on

RRB Recruitment 2024
Koo

ಬೆಂಗಳೂರು: ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ (Railway Recruitment Board) ಗುಡ್‌ನ್ಯೂಸ್‌ ನೀಡಿದೆ. ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ (RRB Recruitment 2024). ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್‌ 29 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೆಮಿಲ್‌ ಮೇಲ್ವಿಚಾರಕ / ಸಂಶೋಧನೆ ಮತ್ತು ಮೆಟಲರ್ಜಿಕಲ್ ಮೇಲ್ವಿಚಾರಕ / ಸಂಶೋಧನೆ (Chemical Supervisor / Research and Metallurgical Supervisor / Research)- 17 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ ಟೆಕ್ನಾಲಜಿ, ಮೆಟಲರ್ಜಿ ಎಂಜಿನಿಯರಿಂಗ್‌ನಲ್ಲಿ ಪದವಿ.
ಕಿರಿಯ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಅಸಿಸ್ಟೆಂಟ್ (Junior Engineer, Depot Material Superintendent and Chemical & Metallurgical Assistant)- 7,934 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಬಿ.ಎಸ್‌ಸಿ, ಪದವಿ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಯುರ್‌ & ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳಾ ಅಭ್ಯರ್ಥಿಗಳು / ತೃತೀಯ ಲಿಂಗಿಗಳು / ಅಲ್ಪಸಂಖ್ಯಾತರು / ಇಬಿಸಿ ವಿಭಾಗದ ಅಭ್ಯರ್ಥಿಗಳು 250 ರೂ. ಮತ್ತು ಇತರ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ.

RRB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.rrbapply.gov.in/)
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್‌ ನಂಬರ್‌: Helpline No: 9592001188, 01725653333ಕ್ಕೆ ಕರೆ ಮಾಡಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ದೇಶ

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Delhi Floods: ರಾಷ್ಟ್ರ ರಾಜಧಾನಿ ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ಮೃತಪಟ್ಟಿದ್ದಾರೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ದುರಂತ ಸಂಭವಿಸಿದೆ. ಇದೀಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

VISTARANEWS.COM


on

Delhi Floods
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ಸ್ಥಿತಿ (Delhi Floods) ಉಂಟಾಗಿದೆ. ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ (Rau’s IAS Coaching Institute) ನೀರು ನುಗ್ಗಿ ಅನಾಹುತ ಸಂಭವಿಸಿದ್ದು, ಮೃತರ ಸಂಖ್ಯೆ 3ಕ್ಕೆ ಏರಿದೆ.

ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ ಇಲ್ಲಿನ ರಾವ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿದೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ.

ಬೇಸ್‌ಮೆಂಟ್‌ನಲ್ಲಿ ಸಂಸ್ಥೆಯ ಲೈಬ್ರರಿ ಇದ್ದು, ಇಲ್ಲಿ ಸುಮಾರು 150-180 ವಿದ್ಯಾರ್ಥಿಗಳು ಕೂರಲು ವ್ಯವಸ್ಥೆ ಮಾಡಲಾಗಿದೆ. ಲೈಬ್ರರಿಯಲ್ಲಿ ಕುಳಿತು ಓದುತ್ತಿರುವಾಗ ಚರಂಡಿ ಮೋರಿಯ ತಡೆಗೋಡೆ ಒಡೆದು ಮಳೆ ನೀರು ನುಗ್ಗಿದ ಹಿನ್ನಲೆ ದುರ್ಘಟನೆ ಸಮಭವಿಸಿದೆ. “ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೋಚಿಂಗ್‌ ಸೆಂಟರ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದೆ. ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಹೊರಬರಲು ಆಗದೆ, ಮೇಲಿನ ಮಹಡಿಗೂ ಹೋಗಲು ಆಗದೆ ನೀರಿನಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಇದರಿಂದಾಗಿ ಮೂವರು ವಿದ್ಯಾರ್ಥಿಗಳ ಸಾವುಂಟಾಗಿದೆ. ಕೂಡಲೇ ಎನ್‌ಡಿಆರ್‌ಎಫ್‌ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ” ಎಂದು ಸೆಂಟ್ರಲ್‌ ದೆಹಲಿ ಡಿಸಿಪಿ ಎಂ. ಹರ್ಷವರ್ಧನ್‌ ತಿಳಿಸಿದ್ದಾರೆ.

ಪ್ರತಿಭಟನೆ

ಇದೀಗ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಮುನ್ಸಿಪಾಲ್‌ ಕಾರ್ಪೋರೇಷನ್‌ ಆಫ್‌ ದಿಲ್ಲಿ (MCD)ಯನ್ನು ನಿಯಂತ್ರಿಸುವ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ಮೇಲೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. “ಇದು ಸರ್ಕಾರ ಮತ್ತು ಪುರಸಭೆಯ ವೈಫಲ್ಯ. ಇದು ಈ ದೇಶದ ಅತ್ಯಂತ ಸಂವೇದನಾರಹಿತ ಸರ್ಕಾರ. ಇದು ವಿದ್ಯಾರ್ಥಿಗಳ ಸಾವಲ್ಲ, ಕೊಲೆ” ಎಂದು ಬಿಜೆಪಿ ವಕ್ತಾರ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ. ಇನ್ನು ಈ ಆರೋಪಕ್ಕೆ ತಿರುಗೇಟು ನೀಡಿದ ಆಪ್‌, ʼʼಇದಕ್ಕೆ ಬಿಜೆಪಿ ಕೂಡ ಉತ್ತರಿಸಬೇಕು. ಕಳೆದ 15 ವರ್ಷಗಳಿಂದ ಈ ಪ್ರದೇಶದಲ್ಲಿ ಬಿಜೆಪಿ ಕೌನ್ಸಿಲರ್‌ಗಳಿದ್ದರು. ಅವರೇಕೆ ಚರಂಡಿಯನ್ನು ದುರಸ್ತಿ ಮಾಡಲಿಲ್ಲ? ಎಲ್ಲ ಚರಂಡಿಗಳನ್ನು ಒಂದು ವರ್ಷದಲ್ಲಿ ಮಾಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ರಾಜಕೀಯ ಮಾಡಬಾರದು” ಎಂದು ಹೇಳಿದೆ.

ಇನ್ನು ಹಲವು ವಿದ್ಯಾರ್ಥಿಗಳು ಶನಿವಾರ ರಾತ್ರಿಯಿಂದಲೇ ಸಂಸ್ಥೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯ ಹೊರಗಿನ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. “ಎಂಸಿಡಿ ಇದು ವಿಪತ್ತು ಎಂದು ಹೇಳುತ್ತದೆ. ಆದರೆ ಇದು ಸಂಪೂರ್ಣ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತ. ಅರ್ಧ ಗಂಟೆ ಮಳೆ ಬಂದರೆ ಸಾಕು ಮೊಣಕಾಲುವರೆಗೆ ನೀರು ನಿಲ್ಲುತ್ತದೆ. ಅಸಮರ್ಪಕ ಒಳಚರಂಡಿಯಿಂದಾಗಿ ಇದು ಸಂಭವಿಸುತ್ತಿದೆ. ಚರಂಡಿಯನ್ನು ಸ್ವಚ್ಛಗೊಳಿಸಬೇಕು 10-12 ದಿನಗಳಿಂದ ಕೌನ್ಸಿಲರ್‌ಗೆ ಮನವಿ ಸಲ್ಲಿಸುತ್ತಿದ್ದೇನೆ ಎಂದು ಮಾಲೀಕರು ತಿಳಿಸಿದ್ದಾರೆ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ಸುದ್ದಿ ಸಂಸ್ಥೆ ಎಎನ್ಐಗೆ ಹೇಳಿದ್ದಾರೆ.

ಇದನ್ನೂ ಓದಿ: Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

“ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದು ನಮ್ಮ ಮೊದಲ ಬೇಡಿಕೆ. ಘಟನೆಯಿಂದಾದ ಸಾವುಗಳು ಮತ್ತು ಗಾಯಾಳುಗಳ ನಿಜವಾದ ಸಂಖ್ಯೆಯನ್ನು ಬಹಿರಂಗಪಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಸದ್ಯ ಘಟನಾ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Continue Reading
Advertisement
Viral Video
ವೈರಲ್ ನ್ಯೂಸ್58 seconds ago

Viral Video: ಶೇ. 100ರಷ್ಟು ಆದಾಯ ತೆರಿಗೆಯನ್ನು ಹೀಗೂ ಉಳಿಸಬಹುದಂತೆ ನೋಡಿ!

Union Budget 2024
ಕರ್ನಾಟಕ5 mins ago

Union Budget 2024: ವಾರ್ಷಿಕ 7.5 ಲಕ್ಷ ವೇತನ ಪಡೆಯುವವರಿಗೆ ಯಾವುದೇ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್

Paris Olympics Badminton
ಕ್ರೀಡೆ6 mins ago

Paris Olympics Badminton: ಗೆಲುವಿನ ಶುಭಾರಂಭ ಮಾಡಿದ ಪಿ.ವಿ. ಸಿಂಧು

Health Tips
ಪ್ರಮುಖ ಸುದ್ದಿ6 mins ago

Health Tips : ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ 5 ವಿಧದ ಸೂಪ್ ಸೇವಿಸಿ

Naveen Sajju debuts movie titled first look out
ಸಿನಿಮಾ18 mins ago

Naveen Sajju: ಗುಡ್‌ ನ್ಯೂಸ್‌ ಕೊಟ್ಟ ʻಚುಕ್ಕಿತಾರೆ ಸೀರಿಯಲ್‌ʼ ನಟ ನವೀನ್‌ ಸಜ್ಜು: ಶುಭ ಕೋರಿದ ಫ್ಯಾನ್ಸ್‌!

Assault case
ಚಿಕ್ಕೋಡಿ26 mins ago

Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

Mann Ki Baat
ದೇಶ29 mins ago

Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

valmiki corporation scam satyanarayana varma
ಕ್ರೈಂ31 mins ago

Valmiki Corporation Scam: 10 ಕೆಜಿ ಚಿನ್ನದ ಗಟ್ಟಿ ಮನೆಯಲ್ಲಿಟ್ಟಿದ್ದ ವಾಲ್ಮೀಕಿ ನಿಗಮ ಹಗರಣದ ಆರೋಪಿ! ಇನ್ನೂ 5 ಕಿಲೋ ಗಾಯಬ್

ಕ್ರೀಡೆ36 mins ago

Paris Olympics boxing: ಎದುರಾಳಿಗೆ ಪವರ್​ ಪಂಚ್​ ನೀಡಿ ಪ್ರೀ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಬಾಕ್ಸರ್ ಪ್ರೀತಿ ಪವಾರ್

Actor Darshan Ganesh Rao Visits Renukaswamy Family and spport In Chitradurga
ಸ್ಯಾಂಡಲ್ ವುಡ್60 mins ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ19 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ24 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

ಟ್ರೆಂಡಿಂಗ್‌