Wrestlers Protest | ಲೈಂಗಿಕ ಕಿರುಕುಳ ಪ್ರಕರಣ; 7 ಸದಸ್ಯರ ತನಿಖಾ ಸಮಿತಿ ರಚಿಸಿದ ಐಒಎ - Vistara News

ಕ್ರೀಡೆ

Wrestlers Protest | ಲೈಂಗಿಕ ಕಿರುಕುಳ ಪ್ರಕರಣ; 7 ಸದಸ್ಯರ ತನಿಖಾ ಸಮಿತಿ ರಚಿಸಿದ ಐಒಎ

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಸಮಿತಿ ರಚಿಸಿದೆ.

VISTARANEWS.COM


on

Wrestlers Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಲು (Wrestlers Protest) ಭಾರತೀಯ ಒಲಿಂಪಿಕ್ ಅಸೋಸಿಯೇಷನ್ 7 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ಈ ವಿಚಾರವನ್ನು ಐಒಎ ಅಧ್ಯಕ್ಷೆ ಪಿ.ಟಿ ಉಷಾ ಖಚಿತ ಪಡಿಸಿದ್ದಾರೆ.

ಮೇರಿ ಕೋಮ್​, ಡೋಲಾ ಬ್ಯಾನರ್ಜಿ, ಅಲಕಾನಂದ ಅಶೋಕ್, ಯೋಗೇಶ್ವರ್ ದತ್, ಸಹದೇವ್ ಯಾದವ್ ಮತ್ತು ಇಬ್ಬರು ವಕೀಲರ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಐಒಎ ಅಧ್ಯಕ್ಷೆ ಪಿ.ಟಿ ಉಷಾ ಮತ್ತು ಜಂಟಿ ಕಾರ್ಯದರ್ಶಿ ಕಲ್ಯಾಣ್ ಚೌಬೆ ಅವರೊಂದಿಗೆ ಅಭಿನವ್ ಬಿಂದ್ರಾ ಮತ್ತು ಯೋಗೇಶ್ವರ್ ಮುಂತಾದವರು ಭಾಗವಹಿಸಿದ್ದ ಐಒಎ ತುರ್ತು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ಕುಸ್ತಿಯಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ನಾನು ತೀವ್ರ ಕಳವಳಗೊಂಡಿದ್ದೇನೆ ಮತ್ತು ವಿಚಲಿತನಾಗಿದ್ದೇನೆ. ಕುಸ್ತಿ ಪಟುಗಳು ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಐಒಎ ಅಧ್ಯಕ್ಷೆ ಪಿ.ಟಿ ಉಷಾ ಹೇಳಿದರು.

ಇದಕ್ಕೂ ಮುನ್ನ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ಗೆ ತೆರಳಿದ ಪ್ರತಿಭಟನಾನಿರತ ಕುಸ್ತಿಪಟುಗಳು, ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧದ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸುವಂತೆ ಒತ್ತಾಯಿಸಿ ಪತ್ರ ಬರೆದಿದ್ದರು. ಇದೀಗ ಕುಸ್ತಿಪಟುಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಐಒಎ ತನಿಖೆ ನಡೆಸಲು ಸಮಿತಿ ರಚಿಸಿದೆ.

ಟೋಕಿಯೊ ಒಲಿಂಪಿಕ್ಸ್​ ಪದಕ ವಿಜೇತರಾದ ರವಿ ದಹಿಯಾ ಮತ್ತು ಬಜರಂಗ್ ಪುನಿಯಾ ರಿಯೊ ಗೇಮ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಸೇರಿದಂತೆ ಐವರು ಕುಸ್ತಿಪಟುಗಳು ಪತ್ರಕ್ಕೆ ಸಹಿ ಹಾಕುವ ಮೂಲಕ ಐಒಎ ಅಧ್ಯಕ್ಷೆ ಪಿ.ಟಿ ಉಷಾ ಅವರಿಗೆ ಮನವಿ ಮಾಡಿದ್ದರು. ಪತ್ರದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಭಾರತ ಕುಸ್ತಿ ಫೆಡರೇಷನ್ ವಿಸರ್ಜಿಸಬೇಕು ಮತ್ತು ಅದರ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಕುಸ್ತಿಪಟುಗಳು ಬೇಡಿಕೆ ಇರಿಸಿದ್ದರು. ಜತೆಗೆ ರಾಷ್ಟ್ರೀಯ ಒಕ್ಕೂಟದ ವ್ಯವಹಾರಗಳನ್ನು ನಡೆಸಲು ಕುಸ್ತಿಪಟುಗಳೊಂದಿಗೆ ಸಮಾಲೋಚಿಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಅವರು ಒತ್ತಾಯಿಸಿದ್ದರು.

ಈ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದ್ದಂತೆ ಇದೀಗ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಈ ಆರೋಪದ ಬಗ್ಗೆ ತನಿಖೆ ನಡೆಸಲು ಮುಂದಾಗಿದೆ. ಇನ್ನಾದರೂ ಕುಸ್ತಿ ಪಟುಗಳು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಲಿದ್ದಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ | Wrestlers’ Protest | ಪ್ರತಿಭಟನಾ ನಿರತ ಕುಸ್ತಿ ಪಟುಗಳ ವಿರುದ್ಧ ಎಫ್​ಐಆರ್​?​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

IND vs PAK: ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಪಾಕಿಸ್ತಾನ ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಮಾಡಬಹುದು.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಎರಡೂ ದೇಶಗಳ ಅಭಿಮಾನಿಗಳು ರೋಚಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ತುದಿಗಾಲಲ್ಲಿ ನಿಂತಿರುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭ್ಯಾಸದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಟೀಮ್​ ಇಂಡಿಯಾ(Team India) ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಇಂದಿನ ಪಂದ್ಯದಲ್ಲಿ ಆಡಲಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಭುಜಕ್ಕೆ ಚೆಂಡಯ ತಗುಲಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್​ ಮೊಟಕುಗೊಳಿಸಿದ್ದ ರೋಹಿತ್​, ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಶನಿವಾರ ಅಭ್ಯಾಸ ನಡೆಸುವ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಈ ವೇಳೆ ರೋಹಿತ್​ ಅವರು ಪಾಕ್​ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಚಿಂತಿಸುವ ಅಗತ್ಯವಿಲ್ಲ. ರೋಹಿತ್​ ಫಿಟ್​ ಆಗಿದ್ದು ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ. ಈ ವಿಚಾರವನ್ನು ರೋಹಿತ್ ಶನಿವಾರ ರಾತ್ರಿ ನಡೆದ​ ಸುದ್ದಿಗೋಷ್ಠಿಯಲ್ಲಿ ಖಚಿತಪಡಿಸಿದರು.

ಪಾಕ್​ಗೆ ಮಾಡು ಇಲ್ಲವೇ ಮಡಿ ಪಂದ್ಯ


ಆತಿಥೇಯ ಅಮೆರಿಕ ವಿರುದ್ಧ ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ ಪಾಕಿಸ್ತಾನ ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಮಾಡಬಹುದು. ನಿರೀಕ್ಷಿತ ಬೌನ್ಸರ್​ ಪುಡಿದೇಳುವ ನಾಸ್ಸೌ ಪಿಚ್​ನಲ್ಲಿ ಆಡುವುದು ಕೂಡ ಉಭಯ ತಂಡಗಳಿಗೆ ಸವಾಲಿನಿಂದ ಕೂಡಿರಲಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಆಡಬೇಕಿದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ


ಭಾರತ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೈನಾಮನ್​ ಖ್ಯಾತಿಯ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಯೋಜನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಕಂಡು ಬಾರದು. ಕೊಹ್ಲಿ ಮತ್ತು ರೋಹಿತ್​ ಅವರೇ ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್/ ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading

ಕ್ರೀಡೆ

WI vs UGA: ಉಂಗಾಡ ವಿರುದ್ಧ 134 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್​

WI vs UGA: ಉಗಾಂಡ ಪರ ಎರಡಂಕಿ ಮೊತ್ತ ದಾಟಿದ್ದು ಕೇವಲ ಒಬ್ಬ ಬ್ಯಾಟರ್​ ಮಾತ್ರ. 9ನೇ ಕ್ರಮಾಂಕದಲ್ಲಿ ಆಡಲಿಳಿದ ಜುಮಾ ಮಿಯಾಗಿ ಅಜೇಯ 13 ರನ್​ ಬಾರಿಸಿದರು. ಉಳಿದೆಲ್ಲರು ಒಂದಂಕಿಗೆ ಸೀಮಿತರಾದರು

VISTARANEWS.COM


on

WI vs UGA
Koo

ಗಯಾನಾ: ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಆತಿಥೇಯ ವೆಸ್ಟ್​ ಇಂಡೀಸ್(WI vs UGA)​ ತಂಡ ಉಗಾಂಡ ವಿರುದ್ಧ ಭರ್ಜರಿ 134 ರನ್​ಗಳ ಗೆಲುವು ದಾಖಲಿಸಿದೆ. ಉಗಾಂಡ ಕೇವಲ 39 ರನ್​ಗಳಿಗೆ ಆಲೌಟ್​ ಆಯಿತು. ಇದು ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ದಾಖಲಾದ ಕನಿಷ್ಠ ಮೊತ್ತದ 2ನೇ ನಿದರ್ಶನ. ಇದಕ್ಕೂ ಮುನ್ನ 2014ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನೆದರ್ಲೆಂಡ್ಸ್​ 39 ರನ್​ಗೆ ಆಲೌಟ್​ ಆಗಿತ್ತು.

ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಏಕಪಕ್ಷೀಯವಾಗಿ ಸಾಗಿದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ವೆಸ್ಟ್​ ಇಂಡೀಸ್​ 5 ವಿಕೆಟ್​ಗೆ 173 ರನ್​ ಬಾರಿಸಿತು. ಗುರಿ ಬೆನ್ನಟ್ಟಿದ ಉಂಗಾಡ, ಅಕೀಲ್​ ಹೊಸೈನ್​ ಅವರ ಘಾತಕ ಬೌಲಿಂಗ್​ ದಾಳಿಗೆ ತರಗೆಲೆಯಂತೆ ಉದುರಿ ಕೇವಲ 39 ರನ್​ ಗಳಿಗೆ ಸರ್ವಪತನ ಕಂಡಿತು. ಹೊಸೈನ್ 4 ಓವರ್​ ಬೌಲಿಂಗ್​ ನಡೆಸಿ ಕೇವಲ 11 ರನ್​ ವೆಚ್ಚದಲ್ಲಿ 5 ವಿಕೆಟ್​ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಉಗಾಂಡ ಪರ ಎರಡಂಕಿ ಮೊತ್ತ ದಾಟಿದ್ದು ಕೇವಲ ಒಬ್ಬ ಬ್ಯಾಟರ್​ ಮಾತ್ರ. 9ನೇ ಕ್ರಮಾಂಕದಲ್ಲಿ ಆಡಲಿಳಿದ ಜುಮಾ ಮಿಯಾಗಿ ಅಜೇಯ 13 ರನ್​ ಬಾರಿಸಿದರು. ಉಳಿದೆಲ್ಲರು ಒಂದಂಕಿಗೆ ಸೀಮಿತರಾದರು. ಮೂರು ಮಂದಿ ಶೂನ್ಯ ಸಂಕಟಕ್ಕೆ ಸಿಲುಕಿದರು.

ಇದನ್ನೂ ಓದಿ AUS vs ENG: ಆಸೀಸ್​ ಬ್ಯಾಟಿಂಗ್​ ಆರ್ಭಟಕ್ಕೆ ಮಣಿದ ಹಾಲಿ ಚಾಂಪಿಯನ್​ ಇಂಗ್ಲೆಂಡ್​

ಮೊದಲು ಬ್ಯಾಟಿಂಗ್​ ನಡೆಸಿದ ವೆಸ್ಟ್​ ಇಂಡೀಸ್​ ಪರ ಆರಂಭಿಕ ಆಟಗಾರ ಬ್ರಾಂಡನ್ ಕಿಂಗ್(13) ಹೊರತುಪಡಿಸಿ ಉಳಿದೆಲ್ಲ ಬ್ಯಾಟರ್​ಗಳು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ಗಮನಸೆಳೆದರು. ಜಾನ್ಸನ್ ಚಾರ್ಲ್ಸ್ 4 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 44 ರನ್​ ಬಾರಿಸಿ ತಂಡದ ಪರ ಅತ್ಯಧಿಕ ರನ್​ ಬಾರಿಸಿದ ಆಟಗಾರ ಎನಿಸಿಕೊಂಡರು. ಉಳಿದಂತೆ ಆಲ್​ರೌಂಡರ್​ ಆ್ಯಂಡ್ರೆ ರಸೆಲ್​ ಅಜೇಯ 30 ರನ್​ ಬಾರಿಸಿದರು. ನಾಯಕ ಪೋವೆಲ್​(23), ನಿಕೋಲಸ್​ ಪೂರನ್​(22), ಶೆರ್ಫೇನ್ ರುದರ್ಫೋರ್ಡ್(22) ರನ್​ಗಳ ಕೊಡುಗೆ ನೀಡಿದರು.

ಇದನ್ನೂ ಓದಿ

‘ಸಿ’ ಗುಂಪಿನಲ್ಲಿರುವ ವೆಸ್ಟ್​ ಇಂಡೀಸ್​ ತಂಡ ಸತತ 2 ಗೆಲುವು ದಾಖಲಿಸಿ ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿದೆ. ಅಫಘಾನಿಸ್ತಾನ ಮೊದಲ ಸ್ಥಾನದಲ್ಲಿದೆ. ಉಭಯ ತಂಡಗಳು ಇನ್ನೊಂದು ಪಂದ್ಯ ಗೆದ್ದರೆ ಸೂಪರ್​-8 ಹಂತಕ್ಕೇರಲಿದೆ. ಇದೇ ಗ್ರೂಪ್​ನಲ್ಲಿರುವ ನ್ಯೂಜಿಲ್ಯಾಂಡ್​ ಕಳೆದ ಪಂದ್ಯದಲ್ಲಿ ಆಫ್ಘಾನ್​ ವಿರುದ್ಧ ಹೀನಾಯ ಸೋಲು ಕಂಡು ಕೊನೆಯ ಸ್ಥಾನದಲ್ಲಿದೆ.

ಟಿ20 ವಿಶ್ವಕಪ್​ನಲ್ಲಿ ಕನಿಷ್ಠ ಮೊತ್ತದ ಪಂದ್ಯಗಳು

39 ರನ್​ಗೆ ಶೀಲಂಕಾ ವಿರುದ್ಧ ನೆದರ್ಲೆಂಡ್ಸ್​ ಆಲೌಟ್​(2014)

39 ರನ್​ಗೆ ವೆಸ್ಟ್​ ಇಂಡೀಸ್ ವಿರುದ್ಧ ಉಗಾಂಡ ಆಲೌಟ್​(2024)

44 ರನ್​ಗೆ ಶ್ರೀಲಂಕಾ ವಿರುದ್ಧ ನೆದರ್ಲೆಂಡ್ಸ್​ ಆಲೌಟ್(2021)

55 ರನ್​ಗೆ ಇಂಗ್ಲೆಂಡ್​ ವಿರುದ್ಧ ವೆಸ್ಟ್​ ಇಂಡೀಸ್​ ಆಲೌಟ್​(2021)

Continue Reading

ಕ್ರೀಡೆ

AUS vs ENG: ಆಸೀಸ್​ ಬ್ಯಾಟಿಂಗ್​ ಆರ್ಭಟಕ್ಕೆ ಮಣಿದ ಹಾಲಿ ಚಾಂಪಿಯನ್​ ಇಂಗ್ಲೆಂಡ್​

AUS vs ENG: ಚೇಸಿಂಗ್​ ವೇಳೆ ಆರಂಭಿ ಆಟಗಾರರಾದ ಫಿಲ್ ಸಾಲ್ಟ್​ ಮತ್ತು ನಾಯಕ ಜಾಸ್​ ಬಟ್ಲರ್​ ಬಿರುಸಿನ ಬ್ಯಾಟಿಂಗ್​ ಮೂಲಕ ಓವರ್​ಗೆ 10ರ ಸರಾಸರಿಯಲ್ಲಿ ರನ್​ ಗಳಿಸುತ್ತಾ ಉತ್ತಮ ಆರಂಭ ಒದಗಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಆ್ಯಡಂ ಜಂಪಾ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು.

VISTARANEWS.COM


on

AUS vs ENG
Koo

ಬಾರ್ಬಡಾಸ್​: ಶನಿವಾರ ತಡರಾತ್ರಿ ನಡೆದ ‘ಬಿ’ ಗುಂಪಿನ ಟಿ20 ವಿಶ್ವಕಪ್(T20 World Cup 2024) ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್(AUS vs ENG)​ ತಂಡ ಆಸ್ಟ್ರೇಲಿಯಾ(Australia vs England) ವಿರುದ್ಧ 36 ರನ್​ಗಳ ಸೋಲಿಗೆ ತುತ್ತಾಯಿತು. ಆಸೀಸ್​ ಪರ 2 ವಿಕೆಟ್​ ಕಿತ್ತ ಸ್ಪಿನ್ನರ್​ ಆ್ಯಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದು ಆಸೀಸ್​​ಗೆ ಒಲಿದ ಸತತ ಎರಡನೇ ಗೆಲುವು.

ಇಲ್ಲಿನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ಸಂಘಟಿತ ಬ್ಯಾಟಿಂಗ್​ ನಡೆಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 201 ರನ್​ ಬಾರಿಸಿತು. ಇದು ಈ ಆವೃತ್ತಿಯಲ್ಲಿ 200ರ ಗಡಿ ದಾಟಿದ ಮೊದಲ ಪಂದ್ಯ. ಬೃಹತ್​ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಗೆಲುವಿ ಸಾಧಿಸುವಲ್ಲಿ ವಿಫಲವಾಯಿತು. 6 ವಿಕೆಟ್​ಗೆ 165 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಚೇಸಿಂಗ್​ ವೇಳೆ ಆರಂಭಿ ಆಟಗಾರರಾದ ಫಿಲ್ ಸಾಲ್ಟ್​ ಮತ್ತು ನಾಯಕ ಜಾಸ್​ ಬಟ್ಲರ್​ ಬಿರುಸಿನ ಬ್ಯಾಟಿಂಗ್​ ಮೂಲಕ ಓವರ್​ಗೆ 10ರ ಸರಾಸರಿಯಲ್ಲಿ ರನ್​ ಗಳಿಸುತ್ತಾ ಉತ್ತಮ ಆರಂಭ ಒದಗಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಆ್ಯಡಂ ಜಂಪಾ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು. ಉಭಯ ಆಟಗಾರರ ವಿಕೆಟ್​ ಕಿತ್ತು ಆಸೀಸ್​ಗೆ ಮುನ್ನಡೆ ತಂದುಕೊಟ್ಟರು. ಸಾಲ್ಟ್ ಮತ್ತು ಬಟ್ಲರ್​ ಮೊದಲ ವಿಕೆಟ್​ಗೆ 73 ರನ್​ ರಾಶಿ ಹಾಕಿತು. ಬಟ್ಲರ್​ 42 ರನ್​ ಗಳಿಸಿದರೆ, ಸಾಲ್ಟ್​ 37 ರನ್​ ಗಳಿಸಿದರು.

ಇದನ್ನೂ ಓದಿ IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಬಂದ ವಿಲ್​ ಜಾಕ್ಸ್​(10),ಜಾನಿ ಬೇರ್​ಸ್ಟೋ(7), ಬ್ಯಾಟಿಂಗ್​ ವೈಫಲ್ಯ ಕಾಣುವ ಜತೆಗೆ ಹಲವು ಬಾಲ್​ ತಿಂದರು. ಇದು ಸೋಲಿಗೆ ಪ್ರಮುಖ ಕಾರಣವಾಯಿತು. ಹ್ಯಾರಿ ಬ್ರೂಕ್​ ಅಜೇಯ 20 ಮತ್ತು ಮೊಯಿನ್​ ಅಲಿ 25 ರನ್​ ಬಾರಿಸಿದರು. ಆಸೀಸ್​ ಪರ ಜಾಂಪಾ ಮತ್ತು ಕಮಿನ್ಸ್​ ತಲಾ 2 ವಿಕೆಟ್​ ಕಿತ್ತರು.

ಆಸೀಸ್​ ಸಂಘಟಿತ ಬ್ಯಾಟಿಂಗ್​ ಪ್ರದರ್ಶನ


ಮೊದಲು ಬ್ಯಾಟಿಂಗ್​ ನಡೆಸಿದ ಆಸೀಸ್​ ಪರ ಅಗ್ರ 5 ಬ್ಯಾಟರ್​ಗಳು ಕೂಡ ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಈ ಪೈಕಿ ನಾಲ್ಕು ಮಂದಿ ಬ್ಯಾಟರ್​ಗಳು 30 ಪ್ಲಸ್​ ಮೊತ್ತ ಕಲೆಹಾಕಿ ತಂಡದ ಬೃಹತ್​ ಮೊತ್ತಕ್ಕೆ ನೆರವಾದರು. ಎಡಗೈ ಬ್ಯಾಟರ್​ಗಳಾದ ಟ್ರಾವಿಸ್​ ಹೆಡ್​ ಮತ್ತು ಡೇವಿಡ್​ ವಾರ್ನರ್​ ಸೇರಿಕೊಂಡು ಮೊದಲ ವಿಕೆಟ್​ಗೆ ಕೇವಲ 4.6 ಓವರ್​ಗಳಲ್ಲಿ 70 ರನ್​ ಒಟ್ಟುಗೂಡಿಸಿದರು. ಹೆಡ್​ 18 ಎಸೆತಗಳಿಂದ 34 ರನ್(2 ಬೌಂಡರಿ, 3 ಸಿಕ್ಸರ್​)​, ಡೇವಿಡ್​ ವಾರ್ನರ್​ 39 ರನ್​(4 ಸಿಕ್ಸರ್​, 2 ಬೌಂಡರಿ), ನಾಯಕ ಮಿಚೆಲ್​ ಮಾರ್ಷ್​ 35 ರನ್​ (ತಲಾ 2 ಸಿಕ್ಸರ್​ ಮತ್ತು ಬೌಂಡರಿ), ಮಾರ್ಕಸ್​ ಸ್ಟೋಯಿನಿಸ್ ಕೇವಲ 17 ಎಸೆತಗಳಿಂದ​ 30 ರನ್ ಬಾರಿಸಿದರು. ಕಳೆದ ಪಂದ್ಯದಲ್ಲಿ ಶೂನ್ಯ ಸುತ್ತಿದ್ದ ಗ್ಲೆನ್​ ಮ್ಯಾಕ್ಸ್​ವೆಲ್​ ಈ ಪಂದ್ಯದಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್​ ಬಾರಿಸಿ 28 ರನ್​ ಗಳಿಸಿದರು.​

Continue Reading

ಪ್ರಮುಖ ಸುದ್ದಿ

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

IND vs PAK: ನಾಸ್ಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್​ನಲ್ಲಿ ಹಲವು ಬಿರುಕು ಇರುವುದರಿಂದ ಇದು ಬೌಲರ್​ಗಳಿಗೆ ಯೋಗ್ಯವಾಗಿದೆ. ಆದರೆ ಬ್ಯಾಟರ್​ಗಳು ರನ್​ ಗಳಿಸಲು ಪರದಾಡುವ ಜತೆಗೆ ಗಾಯಗೊಳ್ಳುವ ಸಾಧ್ಯತೆಯೂ ಅಧಿಕವಾಗಿದೆ. ಇಲ್ಲಿ ಇದುವರೆಗೆ ನಡೆದ ಎಲ್ಲ ಪಂದ್ಯಗಳು ಕೂಡ ಕನಿಷ್ಠ ಮೊತ್ತದ ಪಂದ್ಯಗಳಾಗಿವೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಹೈವೋಲ್ಟೇಜ್​ ಪಂದ್ಯ ಇಂದು ರಾತ್ರಿ ನಡೆಯಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿರುವ ಅಭಿಮಾನಿಗಳಿಗೆ ಹವಾಮಾನ ಇಲಾಖೆ ನಿರಾಸೆಯ ಸುದ್ದಿಯೊಂದು ನೀಡಿದೆ. ಪಂದ್ಯಕ್ಕೆ ಮಳೆ ಭೀತಿ ಇದೆ ಎಂದು ತಿಳಿಸಿದೆ.

ಶೇ.51ರಷ್ಟು ಮಳೆ ಸಾಧ್ಯತೆ

ಭಾರತದಲ್ಲಿ ರಾತ್ರಿ ಪಂದ್ಯ ಪ್ರಸಾರಗೊಂಡರೂ ಕೂಡ ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಬೆಳಗ್ಗೆ ನಡೆಯಲಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಬೆಳಗ್ಗೆ 11 ಸುಮಾರಿಗೆ ಶೇ. 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುತ್ತದೆ. ಏಕೆಂದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇಲ್ಲ.

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇದನ್ನೂ ಓದಿ IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

ಪಿಚ್​ ರಿಪೋರ್ಟ್​


ನಾಸ್ಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್​ನಲ್ಲಿ ಹಲವು ಬಿರುಕು ಇರುವುದರಿಂದ ಇದು ಬೌಲರ್​ಗಳಿಗೆ ಯೋಗ್ಯವಾಗಿದೆ. ಆದರೆ ಬ್ಯಾಟರ್​ಗಳು ರನ್​ ಗಳಿಸಲು ಪರದಾಡುವ ಜತೆಗೆ ಗಾಯಗೊಳ್ಳುವ ಸಾಧ್ಯತೆಯೂ ಅಧಿಕವಾಗಿದೆ. ಇಲ್ಲಿ ಇದುವರೆಗೆ ನಡೆದ ಎಲ್ಲ ಪಂದ್ಯಗಳು ಕೂಡ ಕನಿಷ್ಠ ಮೊತ್ತದ ಪಂದ್ಯಗಳಾಗಿವೆ. ಪಿಚ್​ ಬಗ್ಗೆ ಈಗಾಗಲೇ ಹಲವು ತಂಡಗಳ ಆಟಗಾರರು ಅಸಮಾಧಾನ ಹೊರಹಾಕಿದ್ದಾರೆ.

ಬಲಾಬಲ

ಒಟ್ಟು 7 ಬಾರಿ ಇತ್ತಂಡಗಳು ಟಿ20 ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯ ಗೆದ್ದರೆ, ಪಾಕಿಸ್ತಾನ ಒಂದು ಪಂದ್ಯ ಗೆದ್ದಿದೆ. ಭಾರತಕ್ಕೆ ಸೋಲು ಎದುರಾದದ್ದು 2021ರಲ್ಲಿ ದುಬೈನಲ್ಲಿ ನಡೆದಿದ್ದ ಟೂರ್ನಿಯಲ್ಲಿ. ವಿರಾಟ್​ ಕೊಹ್ಲಿ ಸಾರಥ್ಯದ ಟೀಮ್​ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. ಒಟ್ಟಾರೆಯಾಗಿ ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದ್ದರೂ ಕೂಡ ಪಾಕ್​ ಸವಾಲನ್ನು ಅಷ್ಟು ಹಗುರವಾಗಿ ಕಡೆಗಣಿಸುವಂತಿಲ್ಲ.

ಸಂಭ್ಯಾವ್ಯ ತಂಡಗಳು


ಭಾರತ:
 ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್​ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.

Continue Reading
Advertisement
Pawan Kalyan Thammudu Re release
ಟಾಲಿವುಡ್3 mins ago

Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

IND vs PAK
ಕ್ರೀಡೆ7 mins ago

IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

Modi 3.0 Cabinet
ದೇಶ8 mins ago

Modi 3.0 Cabinet: ಮೋದಿ ಪ್ರಮಾಣವಚನ; ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ ಸಾಧ್ಯತೆ

ರಾಜಮಾರ್ಗ ಅಂಕಣ ramoji rao
ಅಂಕಣ9 mins ago

ರಾಜಮಾರ್ಗ ಅಂಕಣ: ಮನರಂಜನೆಯ ಮಹಾ ದೊರೆ, ಕನಸುಗಾರನ ನಿರ್ಗಮನ

WI vs UGA
ಕ್ರೀಡೆ43 mins ago

WI vs UGA: ಉಂಗಾಡ ವಿರುದ್ಧ 134 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್​

Modi 3.0 Cabinet
Lok Sabha Election 202456 mins ago

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪೇಜಾವರ ಶ್ರೀ

Israel-Hamas Conflict
ವಿದೇಶ58 mins ago

Israel-Hamas Conflict: ಹಮಾಸ್‌ ಉಗ್ರರ ಸೆರೆಯಲ್ಲಿದ್ದ ನಾಲ್ವರ ರಕ್ಷಣೆ; 265 ದಿನಗಳ ನರಕಯಾತನೆ ಬಳಿಕ ತಾಯ್ನಾಡಿಗೆ ವಾಪಾಸ್‌

Uttarakaanda Movie in bhavana menon
ಸ್ಯಾಂಡಲ್ ವುಡ್1 hour ago

Uttarakaanda Movie: ‘ಉತ್ತರಕಾಂಡ’ದ ವೀರವ್ವ ಪಾತ್ರದಲ್ಲಿ ಭಾವನಾ‌ ಮೆನನ್!

AUS vs ENG
ಕ್ರೀಡೆ1 hour ago

AUS vs ENG: ಆಸೀಸ್​ ಬ್ಯಾಟಿಂಗ್​ ಆರ್ಭಟಕ್ಕೆ ಮಣಿದ ಹಾಲಿ ಚಾಂಪಿಯನ್​ ಇಂಗ್ಲೆಂಡ್​

Robbery Case
ಬೆಂಗಳೂರು2 hours ago

Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌