Honour killing: ಪ್ರೀತಿಸಿದವನನ್ನೇ ಮದುವೆಯಾದ ಮಗಳನ್ನು ಕೋರ್ಟ್ ಆವರಣದಲ್ಲಿ ಗುಂಡಿಟ್ಟು ಕೊಂದ ಅಪ್ಪ! - Vistara News

ವಿದೇಶ

Honour killing: ಪ್ರೀತಿಸಿದವನನ್ನೇ ಮದುವೆಯಾದ ಮಗಳನ್ನು ಕೋರ್ಟ್ ಆವರಣದಲ್ಲಿ ಗುಂಡಿಟ್ಟು ಕೊಂದ ಅಪ್ಪ!

ಮಗಳು ವೈದ್ಯನನ್ನು ಮದುವೆಯಾಗಿದ್ದನ್ನು ವಿರೋಧಿಸಿ ಅಮೀರ್​ ಕೋರ್ಟ್​ ಮೆಟ್ಟಿಲೇರಿದ್ದ. ಆತನೇ ಮಗಳ ತಲೆಕೆಡಿಸಿದ್ದಾನೆ ಎಂದೂ ದೂರು ಕೊಟ್ಟಿದ್ದ. ಅದಕ್ಕೆ ಪ್ರತಿಯಾಗಿ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್​ಗೆ ಆಗಮಿಸುತ್ತಿದ್ದಳು.

VISTARANEWS.COM


on

BJP leader Raju Jha Shot Dead in west bengal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾದಲ್ಲೊಂದು ಮರ್ಯಾದಾ ಹತ್ಯೆ (Honour killing) ನಡೆದಿದೆ. ಹೊಸದಾಗಿ ಮದುವೆಯಾದ ಯುವತಿಯನ್ನು ಆಕೆಯ ತಂದೆ, ಕರಾಚಿಯ ಸಿಟಿ ಕೋರ್ಟ್​ ಗೇಟ್​​ನಲ್ಲಿಯೇ ಗುಂಡಿಟ್ಟು ಕೊಂದಿದ್ದಾರೆ. ಆಕೆ 19 ವರ್ಷದ ಹುಡುಗಿ. ವೈದ್ಯನೊಬ್ಬನನ್ನು ಪ್ರೀತಿಸಿ, ಮನೆಯವರ ವಿರೋಧ ಕಟ್ಟಿಕೊಂಡೇ ಮದುವೆಯಾಗಿದ್ದಳು. ತಾವೆಲ್ಲ ವಿರೋಧಿಸಿದರೂ ಮಗಳು ಅವನನ್ನೇ ಮದುವೆಯಾದಳು ಎಂದು ಆಕ್ರೋಶಗೊಂಡ ಅಪ್ಪ ಅಮೀರ್ ಜಾನ್ ಮೆಹ್ಸೂದ್ ‘ಮರ್ಯಾದೆ’ ಹೆಸರಲ್ಲಿ ಪುತ್ರಿಗೇ ಗುಂಡಿಟ್ಟು, ಈಗ ಅರೆಸ್ಟ್​ ಆಗಿದ್ದಾನೆ.

ಪಾಕಿಸ್ತಾನದಲ್ಲಿ ಈ ಮರ್ಯಾದಾ ಹತ್ಯೆ ಹೊಸದಲ್ಲ. ಮುಸ್ಲಿಮರಲ್ಲೂ ಕೆಳಜಾತಿ ಮದುವೆಗೆ ಅಪಾರ ವಿರೋಧವಿದೆ. ಮನೆಯವರ ವಿರೋಧದ ಮಧ್ಯೆ ಮದುವೆಯಾದರೆ, ಮನೆಮಗಳಿಗೇ ಗುಂಡಿಟ್ಟು ಕೊಲ್ಲುತ್ತಾರೆ. ಹಾಗೇ, ಈ ಅಮೀರ್​ ಜಾನ್​ ಮೆಹ್ಸೂದ್​ ಕೂಡ ಅದೇ ಹಾದಿಯನ್ನೇ ತುಳಿದಿದ್ದಾನೆ.

ಇದನ್ನೂ ಓದಿ: Gokulraj Murder | ಮರ್ಯಾದಾ ಹತ್ಯೆ, ಸಂತ್ರಸ್ತ ಜೀವಂತವಾಗಿ ಕಂಡಿದ್ದ ಸ್ಥಳಕ್ಕೇ ಭೇಟಿ ನೀಡಲು ಜಡ್ಜ್‌ಗಳ ತೀರ್ಮಾನ, ಇದು ಅಪರೂಪ

ಮಗಳು ವೈದ್ಯನನ್ನು ಮದುವೆಯಾಗಿದ್ದನ್ನು ವಿರೋಧಿಸಿ ಅಮೀರ್​ ಕೋರ್ಟ್​ ಮೆಟ್ಟಿಲೇರಿದ್ದ. ಆತನೇ ಮಗಳ ತಲೆಕೆಡಿಸಿದ್ದಾನೆ ಎಂದೂ ದೂರು ಕೊಟ್ಟಿದ್ದ. ಅದಕ್ಕೆ ಪ್ರತಿಯಾಗಿ ಯುವತಿ, ‘ನಾನು ಇಷ್ಟಪಟ್ಟೇ ವೈದ್ಯನನ್ನು ವರಿಸಿದ್ದೇನೆ’ ಎಂದು ಹೇಳಿಕೆ ಕೊಡಲು ಕರಾಚಿ ನಗರ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದಳು. ಆಗ ಅಲ್ಲೇ ಇದ್ದ ಅಮೀರ್​ ಗುಂಡು ಹೊಡೆದಿದ್ದಾನೆ. ಯುವತಿಯನ್ನು ಕಾಪಾಡಲು ಹೋದ ಪೊಲೀಸ್​ ಕಾನ್​ಸ್ಟೆಬಲ್​​ಗಳಾದ ಇಮ್ರಾನ್​ ಜಾಮನ್​ ಮತ್ತು ಇನ್ನೊಬ್ಬ ವ್ಯಕ್ತಿ ವಾಜೀದ್​ ಕಲೀಂ ಕೂಡ ಗಾಯಗೊಂಡಿದ್ದಾರೆ ಎಂದು ಪಿರಾಬಾದ್ ಸ್ಟೇಶನ್​ ಅಧಿಕಾರಿ ಮುಖ್ತಿಯಾರ್ ಅಹ್ಮದ್ ಪನ್ವಾರ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Pervez Musharraf: ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Pervez Musharraf
Koo

ತಿರುವನಂತಪುರಂ: ಭಾರತ ವಿರೋಧಿಯಾಗಿದ್ದ, 1999ರಲ್ಲಿ ಕಾರ್ಗಿಲ್‌ ಯುದ್ಧಕ್ಕೆ ಕಾರಣನಾದ, ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಛೂ ಬಿಟ್ಟು ಅಶಾಂತಿಗೆ ಕಾರಣನಾದ ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ‍್ರಫ್‌ಗೆ (Pervez Musharraf) ಕೇರಳದ ಬ್ಯಾಂಕ್‌ ಆಫ್‌ ಇಂಡಿಯಾ (BOI) ನೌಕರರ ಒಕ್ಕೂಟದಲ್ಲಿ ಗೌರವ ನಮನ ಸಲ್ಲಿಸಲು ತೀರ್ಮಾನಿಸಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜುಲೈ 27ರಂದು ಕೇರಳದ ಆಲಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಕಾರ್ಯಕ್ರಮಕ್ಕೂ ಮೊದಲೇ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.

ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿಸಿತ್ತು. ಇದರಿಂದಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬ್ಯಾಂಕ್‌ಗಳ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ, ಒಕ್ಕೂಟವು ಗೌರವಕ್ಕೆ ಪಾತ್ರರಾಗುವವರ ಪಟ್ಟಿಯಿಂದ ಪರ್ವೇಜ್‌ ಮುಷರ‍್ರಫ್‌ ಹೆಸರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ಪಾಲಿ ಜಾರ್ಜ್‌ ನಗರದಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ 23ನೇ ರಾಜ್ಯ ಸಮಾವೇಶ ನಡೆದಿದೆ. ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಇದೇ ವೇಳೆ, ಕಾರ್ಗಿಲ್‌ ಯುದ್ಧದ ವಿಜಯ, ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ಅಲ್ಲದೆ, ನಟರು, ಗಾಯಕರು, ನೃತ್ಯಪಟುಗಳು, ಕ್ರೀಡಾಪಟುಗಳು, ಹೋರಾಟಗಾರರು ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದೆಲ್ಲ ಜನ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕರು ಕೂಡ ಇದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Continue Reading

ದೇಶ

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Infiltration: “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಬಾಂಗ್ಲಾದ ವ್ಲಾಗರ್‌ ಒಬ್ಬ, ಹೇಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದರ ವಿಡಿಯೊ ಪೋಸ್ಟ್‌ ಮಾಡಿದೆ. ಇದರಿಂದಾಗಿ, ಗಡಿಯಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Infiltration
Koo

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಅರಾಜಕತೆ, ನಾಗರಿಕ ದಂಗೆ ಭುಗಿಲೆದ್ದಿದೆ. ವಿವಾದಿತ ಮೀಸಲಾತಿ ವಿರುದ್ಧ ಜನ ಹಿಂಸಾಚಾರದಲ್ಲಿ ತೊಡಗಿದ್ದು, 200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವ್ಲಾಗರ್‌ (Vlogger) ಒಬ್ಬ, ಭಾರತಕ್ಕೆ ಹೇಗೆ ಅಕ್ರಮವಾಗಿ ನುಗ್ಗಬಹುದು (Infiltration) ಎಂಬುದನ್ನು ತೋರಿಸುವ ವಿಡಯೊವನ್ನು ಹರಿಬಿಟ್ಟಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಅದರಲ್ಲೂ, “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮಮತಾ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವಿಡಿಯೊ ಹರಿದಾಡುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಾಂಗ್ಲಾದೇಶದ ಗಡಿಗೆ ತೆರಳಿದ ವ್ಲಾಗರ್‌ ಒಬ್ಬನು, ಅಕ್ರಮವಾಗಿ ಹೇಗೆ ಭಾರತವನ್ನು ಪ್ರವೇಶಿಸಬಹುದು, ನುಸುಳಬಹುದು ಎಂಬುದನ್ನು ವಿಡಿಯೊ ಸಮೇತ ಪೋಸ್ಟ್‌ ಮಾಡಿದ್ದಾನೆ. ಕಾಲುವೆಯ ಪುಟ್ಟದಾದ ಪೈಪ್‌ಗಳ ಮೂಲಕ ಬಾಂಗ್ಲಾದೇಶದ ಗಡಿಯಿಂದ ಭಾರತದ ಗಡಿಯೊಳಗೆ ನುಗ್ಗಬಹುದು, ಆ ಮೂಲಕ ಸುಲಭವಾಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಬಹುದು ಎಂಬುದನ್ನು ಕೆಲ ಸ್ನೇಹಿತರೊಂದಿಗೆ ಆತ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ಇದು ಈಗ ಗಡಿಯಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆದಾಗ್ಯೂ, ಭಾರತ-ಬಾಂಗ್ಲಾ ಗಡಿಯಲ್ಲಿ ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ನಿಲ್ಲದ ಗಲಭೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶ ದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿರುವ ಮಧ್ಯೆಯೇ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಗಲಭೆ ನಿಂತಿಲ್ಲ. ಇದರಿಂದಾಗಿ ಭಾರತದ ಗಡಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಜುಲೈ 21ರಂದು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ” ಎಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಬಾಂಗ್ಲಾದೇಶದ ಅಕ್ರಮ ವಲಸೆಗಾರರಿಗೆ ಮಮತಾ ಬ್ಯಾನರ್ಜಿ ಆಶ್ರಯ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತೇನೆ ಎಂಬುದಾಗಿ ನೀಡಿದ ಹೇಳಿಕೆ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Continue Reading

ದೇಶ

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

VISTARANEWS.COM


on

Indian Army
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನಡುತ್ತಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) (ಜುಲೈ 26) ಎಚ್ಚರಿಕೆ ನೀಡಿದ್ದಾರೆ. ಇನ್ನು, ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜಮ್ಮು-ಕಾಶ್ಮೀರ (Jammu Kashmir Border) ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಸೈನಿಕರನ್ನು ನಿಯೋಜಿಸಲು ಕೇಂದ್ರ ಸರ್ಕಾರ (Central Government) ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಪಾಕ್‌ನಿಂದಲೂ ಹೆಚ್ಚುವರಿ ಸೈನಿಕರ ನಿಯೋಜನೆ

ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading
Advertisement
IND vs SL
ಕ್ರೀಡೆ21 mins ago

IND vs SL: ಗ್ಲೆನ್​ ಮ್ಯಾಕ್ಸ್​ವೆಲ್​ ಟಿ20 ವಿಶ್ವ ದಾಖಲೆ ಮುರಿದ ಸೂರ್ಯಕುಮಾರ್

Gold Rate Today
ಚಿನ್ನದ ದರ35 mins ago

Gold Rate Today: ಆಭರಣ ಖರೀದಿಸುವ ಯೋಚನೆಯಲ್ಲಿದ್ದೀರಾ? ಇಂದಿನ ಬೆಲೆ ಚೆಕ್‌ ಮಾಡಿ

Bigg Boss OTT 3 Anil Kapoor as the worst ever host of Bigg Boss
ಬಿಗ್ ಬಾಸ್39 mins ago

Bigg Boss OTT 3: ಅನಿಲ್​ ಕಪೂರ್ ʻವರ್ಸ್ಟ್‌ ನಿರೂಪಕʼ ಎಂದ ನೆಟ್ಟಿಗರು ; ಬೇಸತ್ತ ವೀಕ್ಷಕರು!

CH Vijayashankar
ಪ್ರಮುಖ ಸುದ್ದಿ52 mins ago

CH Vijayashankar: ಮೇಘಾಲಯ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

Vinay Rajkumar pepe the film A certificate
ಸ್ಯಾಂಡಲ್ ವುಡ್1 hour ago

Vinay Rajkumar: ಸೆನ್ಸಾರ್ ಪಾಸಾದ ‘ಪೆಪೆ’; ವಿನಯ್ ರಾಜ್ ಕುಮಾರ್ ಚಿತ್ರಕ್ಕೆ A’ ಸರ್ಟಿಫಿಕೇಟ್!

INDW vs SLW Final
ಪ್ರಮುಖ ಸುದ್ದಿ1 hour ago

INDW vs SLW Final: ಇಂದು ಭಾರತ-ಲಂಕಾ ಏಷ್ಯಾ ಕಪ್​ ಫೈನಲ್​; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ಹರ್ಮನ್​ಪ್ರೀತ್​​ ಪಡೆ  

Suzuki India
ಆಟೋಮೊಬೈಲ್1 hour ago

4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

rowdysheeters police firing
ಕ್ರೈಂ1 hour ago

Police Firing: ಕೈ ಕಟ್‌ ಮಾಡಿದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

ಪ್ರಮುಖ ಸುದ್ದಿ2 hours ago

Olympic Games Paris: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಸ್ಪರ್ಧೆಗಳ ವಿವರ

Bigg Boss Marathi 5 premiere ritesh deshmukh co star shubhankar tawde
ಬಿಗ್ ಬಾಸ್2 hours ago

Bigg Boss Marathi 5: ಶುರುವಾಯ್ತು ಮರಾಠಿ ಬಿಗ್​ಬಾಸ್ 5; ಈ ಬಾರಿ ರಿತೇಶ್ ದೇಶ್​ಮುಖ್ ನಿರೂಪಕ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ20 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ21 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌