Air Pollution : ವಾಹನಗಳ ಹೊಗೆಯಿಂದ ಮನುಷ್ಯನ ಮೆದುಳಿನ ಮೇಲೆ ಎಫೆಕ್ಟ್! ಕಾರ್ಯ ಕುಂಠಿತ - Vistara News

ವಿದೇಶ

Air Pollution : ವಾಹನಗಳ ಹೊಗೆಯಿಂದ ಮನುಷ್ಯನ ಮೆದುಳಿನ ಮೇಲೆ ಎಫೆಕ್ಟ್! ಕಾರ್ಯ ಕುಂಠಿತ

ವಾಹನಗಳ ಹೊಗೆ (Air Pollution) ಸೇವಿಸುವುದರಿಂದ ಮನುಷ್ಯನ ಮೆದುಳಿನ ಕಾರ್ಯಚಟುವಟಿಕೆಯು ಕಡಿಮೆಯಾಗುತ್ತದೆ ಎನ್ನುವುದನ್ನು ಬ್ರಿಟಿಷ್‌ ಕೊಲಂಬಿಯಾ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು ಅಧ್ಯಯನ ವರದಿ ಮೂಲಕ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆನಡಾ: ವಾಹನಗಳಿಲ್ಲದೆ ಮನುಷ್ಯನ ಜೀವನವಿಲ್ಲ. ಈಗಂತೂ ಮನೆಗೆ ಒಂದು, ಎರಡು ಅಥವಾ ಮೂರು ವಾಹನಗಳಿರುವುದು ಕೂಡ ಸಾಮಾನ್ಯವೆನಿಸಿಕೊಂಡುಬಿಟ್ಟಿದೆ. ಹೀಗಿರುವಾಗ ವಾಯು ಮಾಲಿನ್ಯವೂ (Air Pollution) ಹೆಚ್ಚಾಗಿಯೇ ಆಗುತ್ತದೆ. ಈ ವಾಹನಗಳು ಹೊರಸೂಸುವ ಇಂಗಾಲದ ಡೈ ಆಕ್ಸೈಡ್‌ನಿಂದ ಮನುಷ್ಯನ ಮೆದುಳಿನ ಕಾರ್ಯಚಟುವಟಿಕೆಯೇ ದುರ್ಬಲಗೊಳ್ಳುತ್ತದೆ ಎನ್ನುವ ಅಂಶ ವರದಿಯೊಂದರಿಂದ ಹೊರಬಿದ್ದಿದೆ.

ಇದನ್ನೂ ಓದಿ: 10 Most polluted cities | ಟಾಪ್‌ 10 ಮಾಲಿನ್ಯಭರಿತ ನಗರಗಳಲ್ಲಿ ದಿಲ್ಲಿ ನಂ.1, ಪಟ್ಟಿಯಲ್ಲಿ ಇಲ್ಲ ಬೆಂಗಳೂರು

ಬ್ರಿಟಿಷ್‌ ಕೊಲಂಬಿಯಾ ವಿಶ್ವವಿದ್ಯಾನಿಲಯ (UBC) ಮತ್ತು ವಿಕ್ಟೋರಿಯಾ ವಿಶ್ವವಿದ್ಯಾನಿಲಯದ ಸಂಶೋಧಕರು ಅಧ್ಯಯನ ನಡೆಸಿ ಈ ರೀತಿಯ ವರದಿ ಸಿದ್ಧಪಡಿಸಿದ್ದಾರೆ. ಈ ವರದಿಯು ಜರ್ನಲ್‌ ಒಂದರಲ್ಲಿ ಪ್ರಕಟವಾಗಿದೆ. ವಾಹನಗಳಿಂದ ಉಂಟಾಗುವ ಸಾಮಾನ್ಯ ಮಟ್ಟದ ಮಾಲಿನ್ಯವು ಕೂಡ ಮಾನವನ ಮೆದುಳಿನ ಕಾರ್ಯವನ್ನು ಕೆಲವೇ ಗಂಟೆಗಳಲ್ಲಿ ದುರ್ಬಲಗೊಳಿಸುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಮನುಷ್ಯರು ಡೀಸೆಲ್‌ ವಾಹನಗಳ ಹೊಗೆಯನ್ನು ಎರಡು ಗಂಟೆಗಳ ಕಾಲ ಸೇವಿಸುವುದರಿಂದ ಮೆದುಳಿನ ಕ್ರಿಯಾತ್ಮಕ ಸಂಪರ್ಕದಲ್ಲಿ ಇಳಿಕೆ ಉಂಟಾಗುತ್ತದೆ. ಈ ಅಂಶವನ್ನು ತಿಳಿಯುವುದಕ್ಕೆಂದು 25 ಯುವಕರನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಯುವಕರನ್ನು ಡೀಸೆಲ್‌ ವಾಹನಗಳ ಹೊಗೆ ಇರುವ ಸ್ಥಳ ಹಾಗೂ ಶುದ್ಧ ಗಾಳಿ ಇರುವ ಸ್ಥಳದಲ್ಲಿ ಬೇರೆ ಬೇರೆ ಸಮಯದಲ್ಲಿ ಇರಿಸಲಾಗಿತ್ತು. ಅವರನ್ನು ಆ ಸ್ಥಳಗಳಿಗೆ ಕರೆದುಕೊಂಡು ಹೋಗುವುದಕ್ಕೂ ಮೊದಲು ಮತ್ತು ಅಲ್ಲಿಂದ ವಾಪಸು ಕರೆದುಕೊಂಡು ಬಂದ ತಕ್ಷಣ ಅವರ ಮೆದುಳಿನ ಚಟುವಟಿಕೆಯನ್ನು ಕ್ರಿಯಾತ್ಮಕ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್(ಎಫ್‌ಎಂಆರ್‌ಐ) ಬಳಸಿ ಅಳತೆ ಮಾಡಲಾಗಿದೆ. ಅದರಲ್ಲಿ ಡೀಸೆಲ್‌ ಹೊಗೆ ಸೇವಿಸಿದಾಗ ಅವರ ಮೆದುಳಿನ ಕಾರ್ಯಚಟುವಟಿಕೆ ಇಳಿಕೆಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: Pollution Awareness | ಶಾಲೆಯಲ್ಲಿ ಟೀಚರ್‌ ಆದ ಆರ್‌ಟಿಓ ಅಧಿಕಾರಿಗಳು; ಮಕ್ಕಳಿಗೆ ವಾಯುಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ

ಈ ಅಧ್ಯಯನದಲ್ಲಿ ಭಾಗಿಯಾಗಿದ್ದ ಹಿರಿಯ ಲೇಖಕ, ಯುಬಿಸಿಯ ಪ್ರೊಫೆಸರ್ ಡಾ. ಕ್ರಿಸ್ ಕಾರ್ಲ್‌ಸ್ಟನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, “ಈ ರೀತಿಯ ಅಧ್ಯಯನವು ವಿಶ್ವದಲ್ಲೇ ಮೊದಲನೆಯದು, ವಾಯು ಮಾಲಿನ್ಯವು ಮನುಷ್ಯನ ಮೇಲೆ ಬೀರುವ ದುಷ್ಪರಿಣಾಮಕ್ಕೆ ಇದು ಪುರಾವೆಯಾಗಿದೆ. ದೀರ್ಘಕಾಲ ಡೀಸೆಲ್‌ ವಾಹನಗಳ ಹೊಗೆ ಸೇವಿಸುವುದರಿಂದ ದೊಡ್ಡ ದೊಡ್ಡ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿವೆ” ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Akshata Murty: ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ, ಅವರ ಹಿಂದೆ ನಿಂತಿದ್ದ ಪತ್ನಿ ಅಕ್ಷತಾ ಮೂರ್ತಿ ಅವರು ಧರಿಸಿದ್ದ ಡ್ರೆಸ್‌ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Akshata Murty
Koo

ಲಂಡನ್:‌ ಬ್ರಿಟನ್‌ ಸಾರ್ವತ್ರಿಕ ಚುನಾವಣೆಯ (Britain Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ರಾಜೀನಾಮೆ ನೀಡಿ, ವಿದಾಯದ ಭಾಷಣ ಮಾಡುವಾಗ ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಅವರು ಧರಿಸಿದ್ದ ಡ್ರೆಸ್‌ ಹಾಗೂ ಅದರ ಮೌಲ್ಯದ ಕುರಿತು ಭಾರಿ ಚರ್ಚೆ ಶುರುವಾಗಿದೆ.

ಚುನಾವಣೆಯಲ್ಲಿ ಹಿನ್ನಡೆಯಾಗುತ್ತಲೇ ದೇಶದ ಜನರನ್ನು ಉದ್ದೇಶಿಸಿ ರಿಷಿ ಸುನಕ್‌ ಮಾತನಾಡಿದರು. “ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ” ಎಂದು ಅವರು ಹೇಳಿದರು. ಇದೇ ವೇಳೆ, ಅವರ ಹಿಂದೆ ಅಕ್ಷತಾ ಮೂರ್ತಿ ಅವರು ನಿಂತಿದ್ದರು. ಅಷ್ಟೇ ಅಲ್ಲ, ಅಕ್ಷತಾ ಮೂರ್ತಿ ಅವರು ಧರಿಸಿದ್ದ, ಇಂಡಿಯನ್‌ ಲೇಬಲ್‌ನ ಡ್ರೆಸ್‌ ಕುರಿತು ಭಾರಿ ಚರ್ಚೆಯಾಗುತ್ತಿದೆ. ಬ್ರಿಟನ್‌ ರಾಷ್ಟ್ರಧ್ವಜದಲ್ಲಿರುವ ನೀಲಿ, ಕೆಂಪು ಹಾಗೂ ವೈಟ್‌ ಪಟ್ಟಿಗಳು ಇರುವ, ಹೈ ನೆಕ್ಡ್‌ ಆಗಿರುವ ಡ್ರೆಸ್‌ಅನ್ನು ಅಕ್ಷತಾ ಮೂರ್ತಿ ಧರಿಸಿದ್ದು, ಇದರ ಬೆಲೆ 42 ಸಾವಿರ ರೂ. ಇದೆ ಎಂದು ತಿಳಿದುಬಂದಿದೆ.

ಬ್ರಿಟನ್‌ ಪ್ರಧಾನಿಯಾಗಿ ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಆಯ್ಕೆಯಾಗಿದ್ದಾರೆ. ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ದೇಶದ ಜನರ ಸೇವೆ ಮಾಡುವುದೇ ನಮಗೆ ಭಾಗ್ಯವಾಗಿದೆ. ನೀವು ಲೇಬರ್‌ ಪಕ್ಷಕ್ಕೆ ಮತ ಹಾಕಿದ್ದೀರೋ, ಬಿಟ್ಟಿದ್ದೀರೋ ಅದು ಬೇಕಾಗಿಲ್ಲ. ದೇಶದ ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ರಾಜಕೀಯ ಎಂದರೆ ಉತ್ತಮ ಆಡಳಿತ ನೀಡುವುದು, ರಾಜಕೀಯವನ್ನು ಸಕಾರಾತ್ಮಕ ಸಂಗತಿಗಾಗಿ ಬಳಸಿಕೊಳ್ಳುತ್ತೇವೆ. ಮತಗಳನ್ನು ನೀಡಿ ಗೆಲ್ಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು. ಕೀರ್‌ ಸ್ಟಾರ್ಮರ್‌ ಅವರು ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅವರ ಆಡಳಿತವನ್ನೂ ಹೊಗಳಿದ್ದು ವಿಶೇಷವಾಗಿತ್ತು.

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Continue Reading

ವಿದೇಶ

Porn Passport: ಪೋರ್ನ್ ಪಾಸ್‌ಪೋರ್ಟ್! ಅಶ್ಲೀಲ ವಿಡಿಯೊ ವೀಕ್ಷಿಸಲು ಇದು ಕಡ್ಡಾಯ!!

ಆನ್‌ಲೈನ್‌ನಲ್ಲಿ ಪೋರ್ನ್ (Porn Passport) ವೀಕ್ಷಿಸಲು ಬಯಸುವ ವಯಸ್ಕರು ವೆಬ್‌ಸೈಟ್‌ಗಳಿಗೆ ಮಾಸಿಕ ಪಾಸ್ ಪಡೆಯಬೇಕಾಗುತ್ತದೆ. ಅವರು ತಮ್ಮ ಅಧಿಕೃತ ಡಿಜಿಟಲ್ ಐಡಿ ಬಳಸಿಕೊಂಡು ಇದನ್ನು ಪಡೆಯಬಹುದು. ಇದಕ್ಕಾಗಿ ಬಳಕೆದಾರರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಬೀಟಾ ಡಿಜಿಟಲ್ ವಾಲೆಟ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ. ಏನಿದು ಪೋರ್ನ್‌ ಪಾಸ್‌ಪೋರ್ಟ್‌? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Porn Passport
Koo

ಸ್ಪೇನ್‌ನಲ್ಲಿ (Spain) ಅಧಿಕೃತವಾಗಿ ಈಗ ಪೋರ್ನ್‌ ಪಾಸ್ ಪೋರ್ಟ್ (Porn Passport) ಅನ್ನು ಪರಿಚಯಿಸಲಾಗಿದೆ. ಡಿಜಿಟಲ್ ವ್ಯಾಲೆಟ್ ಬೀಟಾ (Digital Wallet Beta) ಅಥವಾ ಕಾರ್ಟೆರಾ ಡಿಜಿಟಲ್ ಬೀಟಾ (Cartera Digital Beta) ಎಂದು ಕರೆಯಲ್ಪಡುವ ಈ ಅಪ್ಲಿಕೇಶನ್‌ಗೆ ಮಕ್ಕಳು ಪ್ರವೇಶಿಸದಂತೆ ರಕ್ಷಿಸುತ್ತದೆ. ಅಶ್ಲೀಲ ಪಾಸ್‌ಪೋರ್ಟ್ ಅಂದರೆ ಏನು, ಅದು ಹೇಗೆ ಕೆಲಸ ಮಾಡುತ್ತದೆ ಎನ್ನುವ ಮಾಹಿತಿ ಇಲ್ಲಿದೆ.

ಆನ್‌ಲೈನ್‌ನಲ್ಲಿ ಪೋರ್ನ್ ವೀಕ್ಷಿಸಲು ಬಯಸುವ ವಯಸ್ಕರು ವೆಬ್‌ಸೈಟ್‌ಗಳಿಗೆ ಮಾಸಿಕ ಪಾಸ್ ಪಡೆಯಬೇಕಾಗುತ್ತದೆ. ಅವರು ತಮ್ಮ ಅಧಿಕೃತ ಡಿಜಿಟಲ್ ಐಡಿ ಬಳಸಿಕೊಂಡು ಇದನ್ನು ಪಡೆಯಬೇಕಾಗುತ್ತದೆ. ಇದಕ್ಕಾಗಿ ಬಳಕೆದಾರರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಬೀಟಾ ಡಿಜಿಟಲ್ ವಾಲೆಟ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ.

ಅಪ್ಲಿಕೇಶನ್ ಬಳಕೆದಾರರ ಗುರುತು, ಅವನು ಅಥವಾ ಅವಳು 18 ವರ್ಷಕ್ಕಿಂತ ಮೇಲ್ಪಟ್ಟವರು ಎಂಬುದನ್ನು ಪರಿಶೀಲಿಸಲು ಎಲೆಕ್ಟ್ರಾನಿಕ್ ಡಿಎನ್‌ಐ ಅಥವಾ ಡಿಜಿಟಲ್ ಪ್ರಮಾಣಪತ್ರವನ್ನು ಬಳಸಿ ಬಳಕೆದಾರರು ತಮ್ಮನ್ನು ತಾವು ಗುರುತಿಸಿಕೊಳ್ಳಬೇಕಾಗುತ್ತದೆ. ವ್ಯಕ್ತಿಯ ಗುರುತನ್ನು ಪರಿಶೀಲಿಸಲು ಐಡಿ ಕಾರ್ಡ್, ಆರೋಗ್ಯ ಅಥವಾ ನಿವಾಸ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅಥವಾ ಪಾಸ್‌ಪೋರ್ಟ್ ಅನ್ನು ಬಳಸಬಹುದು.

ಅಪ್ಲಿಕೇಶನ್ ಮೊಬೈಲ್ ಫೋನ್ ವ್ಯಾಲೆಟ್‌ನಂತೆ ಕಾರ್ಯನಿರ್ವಹಿಸುತ್ತದೆ. ವಯಸ್ಕರ ಪ್ಲಾಟ್‌ಫಾರ್ಮ್‌ಗೆ ಪ್ರವೇಶವು ಸ್ಕ್ಯಾನ್ ಮಾಡಬೇಕಾದ ಕ್ಯೂ ಆರ್ ಕೋಡ್ ಅನ್ನು ಒಳಗೊಂಡಿರುತ್ತದೆ. ಪರಿಶೀಲನೆಯ ಅನಂತರ ಬಳಕೆದಾರರು 30 ಕ್ರೆಡಿಟ್‌ಗಳನ್ನು ಸ್ವೀಕರಿಸುತ್ತಾರೆ. ಇದನ್ನು ಒಂದು ತಿಂಗಳವರೆಗೆ ವಯಸ್ಕರ ವಿಷಯವನ್ನು ವೀಕ್ಷಿಸಲು ಬಳಸಬಹುದು. ಹೆಚ್ಚಿನ ವಿಷಯದ ಅಗತ್ಯವಿರುವವರು ಹೆಚ್ಚುವರಿ ಕ್ರೆಡಿಟ್‌ ಗಳಿಗೆ ವಿನಂತಿಸಬಹುದು.

ಬಳಕೆದಾರರ ಡೇಟಾವನ್ನು ಇರಿಸಿಕೊಳ್ಳುವ ವೆಬ್ ಪುಟಗಳನ್ನು ನಿಲ್ಲಿಸಲು ಮಾಸಿಕ ಪಾಸ್ ಅನ್ನು ನವೀಕರಿಸುವುದು ಅವಶ್ಯಕ. ಸ್ಪೇನ್‌ನಲ್ಲಿ ವಯಸ್ಕರ ಪ್ಲಾಟ್‌ಫಾರ್ಮ್‌ಗಳು ಮಾತ್ರ ಈ ಪರಿಶೀಲನೆಯನ್ನು ಹೊಂದಿರುತ್ತವೆ.

ಸ್ಪೇನ್‌ನ ಡಿಜಿಟಲ್ ರೂಪಾಂತರ ಸಚಿವಾಲಯವು ಸಾಮಾಜಿಕ ನೆಟ್‌ವರ್ಕ್‌ಗಳು ಮತ್ತು ತ್ವರಿತ ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳ ಸಹಕಾರವನ್ನು ಕೋರಿದೆ. ಸ್ಪೇನ್‌ನ ರಾಷ್ಟ್ರೀಯ ಸೈಬರ್‌ಸೆಕ್ಯುರಿಟಿ ಇನ್‌ಸ್ಟಿಟ್ಯೂಟ್ (INCIBE) ಸ್ಪ್ಯಾನಿಷ್ ನ್ಯಾಯವ್ಯಾಪ್ತಿಯ ಹೊರಗಿನ ವೆಬ್ ಪುಟಗಳಿಗೆ ಪ್ರವೇಶವನ್ನು ಸಹ ನಿರ್ವಹಿಸುತ್ತದೆ.ಇದನ್ನು ಪ್ರವೇಶಿಸಲು ಬಯಸುವವರ ವಯಸ್ಸನ್ನು ಬ್ರೌಸರ್‌ಗಳು ಪರಿಶೀಲಿಸುತ್ತದೆ.

ಯಾಕೆ ಈ ಪಾಸ್ ಪೋರ್ಟ್?

ಮಕ್ಕಳು ಪೋರ್ನ್ ವೆಬ್‌ಸೈಟ್‌ ಪ್ರವೇಶಿಸುವುದನ್ನು ತಡೆಯುವುದು ಇದರ ಹಿಂದಿನ ಮುಖ್ಯ ಉದ್ದೇಶವಾಗಿದೆ. ಎಂಟು ಮತ್ತು ಒಂಬತ್ತು ವಯಸ್ಸಿನ ನಡುವಿನ ಮಕ್ಕಳು ಅಶ್ಲೀಲತೆಯನ್ನು ಮೊದಲು ನೋಡಲು ಆರಂಭಿಸುತ್ತಾರೆ ಎಂದು ಅಂಕಿ ಅಂಶಗಳು ತೋರಿಸಿವೆ. 11 ಮತ್ತು 13 ರ ನಡುವಿನ ಅರ್ಧದಷ್ಟು ಮಕ್ಕಳು ಅಶ್ಲೀಲತೆಯನ್ನು ವೀಕ್ಷಿಸುತ್ತಾರೆ. ಮಕ್ಕಳಲ್ಲಿ ಅಶ್ಲೀಲ ಚಟವನ್ನು ತಡೆಯಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿರುವ ಅಸೋಸಿಯೇಷನ್‌ಗಳು ಅನೇಕ ​​​​ವರ್ಷಗಳಿಂದ ಇದರ ನಿಯಂತ್ರಣಕ್ಕೆ ಒತ್ತಾಯಿಸುತ್ತ ಬಂದಿದ್ದವು.


ಪೋರ್ನ್ ನೋಡುವ ಅಪ್ರಾಪ್ತ ವಯಸ್ಕರು ಹೆಚ್ಚಾಗಿ ಲೈಂಗಿಕ ದಾಳಿಗಳನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮಕ್ಕಳಿಂದ ನಡೆಸಲ್ಪಡುವ ಲೈಂಗಿಕ ದೌರ್ಜನ್ಯಗಳಲ್ಲಿ ಶೇ. 16ರಷ್ಟು ಹೆಚ್ಚಳವಾಗಿದೆ. 2027ರ ಅಕ್ಟೋಬರ್‌ನಲ್ಲಿ ಜಾರಿಗೆ ಬರುವ ಇಯು ಕಾನೂನಿಗಿಂತ ಮೊದಲೇ ಸ್ಪೇನ್ ಇದನ್ನು ಜಾರಿಗೊಳಿಸಿದೆ. ಇಯು ಕಾನೂನು ಕೂಡ ವೆಬ್‌ಸೈಟ್‌ಗಳು ಅಪ್ರಾಪ್ತ ವಯಸ್ಕರು ಅಶ್ಲೀಲತೆಯನ್ನು ಪ್ರವೇಶಿಸುವುದನ್ನು ತಡೆಯುತ್ತದೆ. ಸ್ಪೇನ್‌ನ ಅಶ್ಲೀಲ ಪಾಸ್‌ಪೋರ್ಟ್ ಇಯು ನ ಡಿಜಿಟಲ್ ಗುರುತಿನ ವ್ಯವಸ್ಥೆಗಿಂತ ಭಿನ್ನವಾಗಿದೆ.

ಇದನ್ನೂ ಓದಿ: UK Election: ಯುಕೆ ಎಲೆಕ್ಷನ್‌ನಲ್ಲಿ ಹೀನಾಯ ಸೋಲು; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅರ್ಧದಷ್ಟು ಯುವಕರು ಇದನ್ನು ನೋಡುತ್ತಾರೆ. ಇದು ನಮ್ಮ ಹದಿಹರೆಯದವರ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸಮಾನತೆಯಂತಹ ವಿಷಯದ ಬಗ್ಗೆ ಅವರು ಹೊಂದಿರಬಹುದಾದ ಭವಿಷ್ಯದ ನಡವಳಿಕೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಸ್ಪೇನ್‌ನ ಪ್ರಧಾನಮಂತ್ರಿ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.

ವಯಸ್ಕರ ವಿಷಯಕ್ಕೆ ಕಿರಿಯರ ಪ್ರವೇಶದ ಕುರಿತು ನಾವು ನೋಡುವ ಡೇಟಾ ಮತ್ತು ಅದರ ಸಂಭವನೀಯ ಪರಿಣಾಮಗಳು ಈ ಉಪಕರಣವನ್ನು ಸಾಧ್ಯವಾದಷ್ಟು ಬೇಗ ಅಭಿವೃದ್ಧಿಪಡಿಸಲು ನಮಗೆ ಕಾರಣವಾಗಿವೆ. ಇದಕ್ಕಾಗಿಯೇ ನಾವು ಸಾಕಷ್ಟು ಮುಂಚಿತವಾಗಿ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿದೆವು. ಎಲ್ಲ ಪ್ಲ್ಯಾಟ್‌ಫಾರ್ಮ್‌ಗಳನ್ನು ಸಹ ಹಾಗೆ ಮಾಡಲು ಕೇಳುತ್ತಿದ್ದೇವೆ. ಮಕ್ಕಳ ಮನಸ್ಸನ್ನು ಕಲುಷಿತಗೊಳ್ಳಂತೆ ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು.

Continue Reading

ಪ್ರಮುಖ ಸುದ್ದಿ

Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Keir Starmer: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟಿದೆ. ಹಾಗಾಗಿ, ಕೀರ್‌ ಸ್ಟಾರ್ಮರ್‌ ಅವರು ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

Keir Starmer
Koo

ಲಂಡನ್: ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ ಲೇಬರ್‌ ಪಕ್ಷವು (Labour Party) ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್‌ ಸ್ಟಾರ್ಮರ್‌ ಅವರು ಬ್ರಿಟನ್‌ ಪ್ರಧಾನಿಯಾಗಿ (Britain PM) ಆಯ್ಕೆಯಾಗಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ 61 ವರ್ಷದ ಕೀರ್‌ ಸ್ಟಾರ್ಮರ್‌ (Keir Starmer) ಅವರು ಬ್ರಿಟನ್‌ ಅರಸ ಕಿಂಗ್‌ ಚಾರ್ಲ್ಸ್‌ III (King Charles III) ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸುವ ಕುರಿತು ಮನವಿ ಮಾಡಿದರು. ಕಿಂಗ್‌ ಚಾರ್ಲ್ಸ್‌ III ಅವರು ಅನುಮೋದನೆ ನೀಡುತ್ತಲೇ ಅಧಿಕೃತವಾಗಿ ಕೀರ್‌ ಸ್ಟಾರ್ಮರ್‌ ಅವರು ಬ್ರಿಟನ್‌ ಪ್ರಧಾನಿ ಎನಿಸಿದ್ದಾರೆ.

ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ದೇಶದ ಜನರ ಸೇವೆ ಮಾಡುವುದೇ ನಮಗೆ ಭಾಗ್ಯವಾಗಿದೆ. ನೀವು ಲೇಬರ್‌ ಪಕ್ಷಕ್ಕೆ ಮತ ಹಾಕಿದ್ದೀರೋ, ಬಿಟ್ಟಿದ್ದೀರೋ ಅದು ಬೇಕಾಗಿಲ್ಲ. ದೇಶದ ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ರಾಜಕೀಯ ಎಂದರೆ ಉತ್ತಮ ಆಡಳಿತ ನೀಡುವುದು, ರಾಜಕೀಯವನ್ನು ಸಕಾರಾತ್ಮಕ ಸಂಗತಿಗಾಗಿ ಬಳಸಿಕೊಳ್ಳುತ್ತೇವೆ. ಮತಗಳನ್ನು ನೀಡಿ ಗೆಲ್ಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು. ಕೀರ್‌ ಸ್ಟಾರ್ಮರ್‌ ಅವರು ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅವರ ಆಡಳಿತವನ್ನೂ ಹೊಗಳಿದ್ದು ವಿಶೇಷವಾಗಿತ್ತು.

ನರೇಂದ್ರ ಮೋದಿ ಅಭಿನಂದನೆ

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟಿದೆ. ಕನ್ಸರ್ವೇಟಿವ್‌ ಪಕ್ಷವು ಮುಖಭಂಗ ಅನುಭವಿಸಿದ್ದು, ಕೇವಲ 81 ಸ್ಥಾನಗಳನ್ನು ಪಡೆದಿದೆ. ಫಲಿತಾಂಶ ಪ್ರಕಟವಾಗುತ್ತಲೇ ರಿಷಿ ಸುನಕ್‌ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಭಾರತದ ಬಗ್ಗೆ ಸ್ಟಾರ್ಮರ್‌ ನಿಲುವೇನು?

ಜಾಗತಿಕ ಭದ್ರತೆ, ಹವಾಮಾನ ಭದ್ರತೆ ಮತ್ತು ಆರ್ಥಿಕ ಭದ್ರತೆಗೆ ಸಂಬಂಧಿಸಿದಂತೆ ಭಾರತದೊಂದಿಗೆ ಉತ್ತಮ ಬಾಂದವ್ಯ ಹೊಂದುವ ಬಗ್ಗೆ ಸ್ಟಾರ್ಮರ್‌ ತಮ್ಮ ಭಾಷಣದಲ್ಲಿ ಆಗಾಗ ಪ್ರಸ್ತಾಪಿಸುತ್ತಿರುತ್ತಾರೆ. ಚುನಾವಣಾ ಭಾಷಣದಲ್ಲಿ ಮಾತನಾಡುತ್ತಾ ಅವರು, ನಮ್ಮ ಲೇಬರ್‌ ಪಕ್ಷ ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ. ಅಲ್ಲದೇ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್‌ಟಿಎ) ಬಯಸುತ್ತದೆ. ಜಾಗತಿಕ ಭದ್ರತೆ, ಹವಾಮಾನ ಭದ್ರತೆ, ಆರ್ಥಿಕ ಭದ್ರತೆಗಾಗಿ ಹೊಸ ಕಾರ್ಯತಂತ್ರದ ಪಾಲುದಾರಿಕೆಯನ್ನು ಸಹ ಹಂಚಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: UK Election: ಯುಕೆ ಎಲೆಕ್ಷನ್‌ನಲ್ಲಿ ಹೀನಾಯ ಸೋಲು; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Continue Reading

Latest

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Viral News: ಗುರುವೆಂದರೆ ಗುರಿ ತೋರಿಸುವವರು ಎಂಬ ನಂಬಿಕೆ. ಆದರೆ ಇಲ್ಲೊಬ್ಬಳು ಶಿಕ್ಷಕಿ ಪಾಠ ಮಾಡುವ ಬದಲು ವಿದ್ಯಾರ್ಥಿಗಳೊಂದಿಗೆ ಕಾಮದಾಟವಾಡಿ ಈಗ ಗರ್ಭಿಣಿಯಾಗಿದ್ದಾಳೆ. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Viral News
Koo

ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸುವವರು ಎಂದು ಹೇಳುತ್ತಾರೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಜೈಲು ಪಾಲಾಗಿದ್ದಳು. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಈಗ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ರೆಬೆಕಾ ಜಾಯ್ನೆಸ್ (30) ಜೈಲು ಶಿಕ್ಷೆಗೆ ಒಳಗಾದ ಶಿಕ್ಷಕಿ. ಈಕೆ ಇಬ್ಬರು ಹುಡುಗರಿಗೆ ಸೋಶಿಯಲ್ ಮೀಡಿಯಾದಲ್ಲಿ ಮೆಸೇಜ್ ಮಾಡುವ ಮೂಲಕ ಅವರ ಪರಿಚಯ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾಳೆ. ಈ ಹಿಂದೆ ಈ ಶಿಕ್ಷಕಿಗೆ ಒಬ್ಬ ಬಾಲಕನ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ಕೋರ್ಟ್ ಶಿಕ್ಷೆ ವಿಧಿಸಿತ್ತು. ಆದರೆ ಜಾಮೀನಿನ ಮೇಲೆ ಹೊರಬಂದ ಶಿಕ್ಷಕಿ ಮತ್ತೆ ಇನ್ನೊಬ್ಬ ಬಾಲಕನೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದು, ಇದರಿಂದ ಗರ್ಭಿಣಿಯಾಗಿದ್ದಾಳೆ.

ಅಲ್ಲದೇ ಶಿಕ್ಷಕಿಯ ಜೊತೆಗಿನ ಲೈಂಗಿಕ ಸಂಬಂಧವನ್ನು ನಿರಾಕರಿಸಿದರೂ ಆಕೆ ತಮ್ಮನ್ನು ಬಲವಂತವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಳೆ. ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾಳೆ. ಹಾಗೇ ತಮ್ಮನ್ನು ಮಾನಸಿಕವಾಗಿ ನಿಂದಿಸಿದ್ದಾಳೆ. ಈ ಘಟನೆಯಿಂದ ಹೊರಬರಲು ತಾವು ಹೆಣಗಾಡುತ್ತಿರುವುದಾಗಿ ಬಾಲಕರು ಶಿಕ್ಷಕಿಯ ಮೇಲೆ ಆರೋಪ ಮಾಡಿದ್ದರು.

ಹಾಗಾಗಿ ವಾಯವ್ಯ ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಕ್ರೌನ್ ನ್ಯಾಯಾಲಯದ ನ್ಯಾಯಾಧೀಶರು ಆಕೆಯ ನಡವಳಿಕೆ ಆಕ್ಷೇಪಕಾರಿ ಆಗಿದೆ. ವಯಸ್ಕಳಾಗಿದ್ದೂ ಎಲ್ಲಾ ತಿಳಿವಳಿಕೆ ಹೊಂದಿದ್ದೂ ತನ್ನನ್ನು ತಾನು ನಿಯಂತ್ರಿಸಿಕೊಳ್ಳಬೇಕಿತ್ತು. ಆದರೆ ಅದರ ಬದಲಾಗಿ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನ್ನ ಲೈಂಗಿಕ ದಾಹವನ್ನು ತೀರಿಸಿಕೊಳ್ಳಲು ಇಂತಹ ಘೋರ ತಪ್ಪು ಮಾಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆಕೆಗೆ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಶಿಕ್ಷಕಿಗೆ ನ್ಯಾಯಾಲಯ ಈ ಹಿಂದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದದಂತೆ ಎಚ್ಚರಿಕೆ ನೀಡಿದರೂ ಅದನ್ನು ನಿರ್ಲಕ್ಷ್ಯ ಮಾಡಿ ಮತ್ತೊಂದು ಬಾಲಕನೊಂದಿಗೆ ಸಂಬಂಧ ಹೊಂದಿದ್ದಾಳೆ. ಹಾಗಾಗಿ ಶಿಕ್ಷೆಗೆ ಒಳಗಾದ ಶಿಕ್ಷಕಿಯು ಜನ್ಮ ನೀಡಿದ ಮಗುವನ್ನು ಆಕೆಯಿಂದ ತೆಗೆದುಕೊಂಡು ಆಕೆಯನ್ನು ಜೈಲಿಗೆ ಹಾಕಲಾಗಿದೆ.

ಈ ಘಟನೆ ನೋಡಿದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಮಾತ್ರ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿಲ್ಲ. ಜೊತೆಗೆ ಪುರುಷರು ಹಾಗೂ ಮಕ್ಕಳೂ ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ.

Continue Reading
Advertisement
Cheating Case
ಪ್ರಮುಖ ಸುದ್ದಿ1 hour ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್1 hour ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Mohammed Siraj
ಪ್ರಮುಖ ಸುದ್ದಿ2 hours ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ2 hours ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ2 hours ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ3 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ3 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ3 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ4 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ4 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ7 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ9 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ9 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ11 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ13 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು14 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು14 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ19 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌