BBC Documentary: ದೆಹಲಿಯ ಇನ್ನೊಂದು ವಿಶ್ವವಿದ್ಯಾಲಯದಲ್ಲಿ ಇಂದು ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ - Vistara News

ದೇಶ

BBC Documentary: ದೆಹಲಿಯ ಇನ್ನೊಂದು ವಿಶ್ವವಿದ್ಯಾಲಯದಲ್ಲಿ ಇಂದು ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ಈಗೆರಡು ದಿನಗಳ ಹಿಂದೆ ಜೆಎನ್​ಯು (Jawaharlal Nehru University) ಕ್ಯಾಂಪಸ್​​ನಲ್ಲಿ ದೊಡ್ಡ ಪರದೆ ಮೇಲೆ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು. ಆಗ ಮಧ್ಯದಲ್ಲೇ ಕರೆಂಟ್ ಹೋಗಿತ್ತು.

VISTARANEWS.COM


on

BBC Documentary to screen in Delhi University Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಗುಜರಾತ್​​ನ ಗೋದ್ರಾದಲ್ಲಿ ನಡೆದಿದ್ದ ಹತ್ಯಾಕಾಂಡದಲ್ಲಿ ಅಂದಿನ ಗುಜರಾತ್​ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ (PM Modi)ಯವರು ತಪ್ಪಿತಸ್ಥರು ಎಂಬರ್ಥದಲ್ಲಿ ಬಿಂಬಿಸಿ, ಚಿತ್ರಿಸಲಾದ ಬಿಬಿಸಿ ಡಾಕ್ಯುಮೆಂಟರಿ (BBC Documentary)ಯನ್ನು ಈಗೆರಡು ದಿನಗಳ ಹಿಂದೆ ಜೆಎನ್​ಯು (Jawaharlal Nehru University) ಕ್ಯಾಂಪಸ್​​ನಲ್ಲಿ ದೊಡ್ಡ ಪರದೆ ಮೇಲೆ ಪ್ರದರ್ಶನ ಮಾಡಲಾಯಿತು. ಆದರೆ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನದ ವೇಳೆಯೇ ವಿದ್ಯುತ್​ ಕಟ್​ ಆಗಿರುವ ಕಾರಣಕ್ಕೆ, ದೊಡ್ಡ ಗಲಾಟೆಯೇ ನಡೆದುಹೋಯಿತು. ಜವಾಹರ್​ ಲಾಲ್​ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರು. ಬಳಿಕ ತಮ್ಮ ಮೊಬೈಲ್​, ಲ್ಯಾಪ್​ಟಾಪ್​​ನಲ್ಲಿ ಡಾಕ್ಯುಮೆಂಟರಿ ನೋಡಿದರು.

ಈಗ ದೆಹಲಿಯ ಇನ್ನೊಂದು ವಿಶ್ವವಿದ್ಯಾಲಯ ಡಾಕ್ಯುಮೆಂಟರಿ ಪ್ರದರ್ಶನಕ್ಕೆ ಮುಂದಾಗಿದೆ. ‘ದೆಹಲಿ ಯೂನಿವರ್ಸಿಟಿ’ (DU)ಯಲ್ಲಿ ಇಂದು ಸಂಜೆ 5ಗಂಟೆಗೆ ‘ಇಂಡಿಯಾ-ದಿ ಮೋದಿ ಕ್ವಶ್ಚನ್​’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ನಡೆಯಲಿದೆ. ಕಾಂಗ್ರೆಸ್​​ನ ವಿದ್ಯಾರ್ಥಿ ವಿಭಾಗವಾದ ನ್ಯಾಶನಲ್​ ಸ್ಟುಡೆಂಟ್ಸ್​ ಯೂನಿಯನ್ ಆಫ್​ ಇಂಡಿಯಾ (NSUI), ಭೀಮ್​ ಆರ್ಮಿ ಮತ್ತು ಇನ್ನಿತರ ಕೆಲವು ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ, ದೆಹಲಿ ಯೂನಿವರ್ಸಿಟಿಯಲ್ಲಿ ಈ ವಿವಾದಿತ ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶನ ಆಯೋಜಿಸಿವೆ. ಯೂನಿವರ್ಸಿಟಿ ಕ್ಯಾಂಪಸ್​ನ ಉತ್ತರ ಭಾಗದಲ್ಲಿರುವ ಆರ್ಟ್​ ಫ್ಯಾಕಲ್ಟಿಯ ಗೇಟ್​ ಬಳಿ ದೊಡ್ಡ ಪರದೆ ಮೇಲೆ ‘ಇಂಡಿಯಾ-ದಿ ಮೋದಿ ಕ್ವಶ್ಚನ್​’ ಡಾಕ್ಯುಮೆಂಟರಿ ಪ್ರದರ್ಶನಗೊಳ್ಳಲಿದೆ. ಹೆಚ್ಚೆಚ್ಚು ಮಂದಿ ಬಂದು ವೀಕ್ಷಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಕರೆಕೊಟ್ಟಿವೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಆಕ್ಷೇಪಾರ್ಹ ಸಂಗತಿಗಳು ಇರುವ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್​​ಗಳನ್ನು ನಿರ್ಬಂಧಿಸುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಿಗೂ ಸೂಚಿಸಿದೆ. ಹಾಗಿದ್ದಾಗ್ಯೂ ಕಾಂಗ್ರೆಸ್​ ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಡಾಕ್ಯುಮೆಂಟರಿ ಪ್ರದರ್ಶನವನ್ನು ಮುಂದುವರಿಸುತ್ತಿವೆ. ಇದು ಕೇಂದ್ರ ಸರ್ಕಾರದ ಕೆಂಗಣ್ಣಿಗೂ ಗುರಿಯಾಗಿದೆ.

ಇದನ್ನೂ ಓದಿ: ಮೋದಿ ಕುರಿತು ಬಿಬಿಸಿ ಡಾಕ್ಯುಮೆಂಟರಿ ಖಂಡಿಸಿ ದೇಶದ ನಿವೃತ್ತ ಜಡ್ಜ್‌ಗಳು, ಕನ್ನಡಿಗರು ಸೇರಿ 300 ಗಣ್ಯರಿಂದ ಪತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

VISTARANEWS.COM


on

pm narendra modi nomination varanasi
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು, 12 ರಾಜ್ಯಗಳ ಸಿಎಂಗಳು ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು ಅವರೊಂದಿಗೆ ಭಾಗವಹಿಸುತ್ತಿದ್ದಾರೆ.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದ ಹಿರಿಯ ನಾಯಕ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading

ದೇಶ

Narendra Modi: ವಾರಾಣಸಿಯಲ್ಲಿ ನಮೋ ನಾಮಿನೇಶನ್‌; ಹ್ಯಾಟ್ರಿಕ್‌ ಗೆಲುವಿನ ಹುಮ್ಮಸ್ಸಿನಲ್ಲಿ ಮೋದಿ

Narendra Modi:ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಿದ್ದರು.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ(Lok Sabha Election 2024) ರಂಗೇರಿದ್ದು, ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಲಭೈರವನಿಗೆ ಪೂಜೆ ಸಲ್ಲಿಸಿದ ಬಳಿಕ ನೇರವಾಗಿ ವಾರಾಣಸಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಧಾನಿ, ನಾಮಪತ್ರ ಸಲ್ಲಿಸಿದರು. ಪ್ರಧಾನಿ ಸತತ 3ನೇ ಅವಧಿಗೆ ವಾರಣಾಸಿ(Varanasi)ಯಿಂದಲೇ ಸ್ಪರ್ಧಿಸುತ್ತಿದ್ದು, ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಸುವ ವೇಳೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಜೊತೆಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವರು, ಬಿಜೆಪಿ ನಾಯಕರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 25ಕ್ಕೂ ಅಧಿಕ ನಾಯಕರು ಪ್ರಧಾನಿ ಮೋದಿಗೆ ಸಾಥ್‌ ಕೊಟ್ಟರು.

ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಿದ್ದು, ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಇದನ್ನೂ ಓದಿ: PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

Continue Reading

ದೇಶ

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Narendra Modi: ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಮೂರನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಕೆಲವೇ ಕ್ಷಣಗಳಲ್ಲಿ ವಾರಾಣಸಿ(Varanasi)ಯಲ್ಲಿ ನಾಮಪತ್ರ(Nomination Filing) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

Continue Reading

ದೇಶ

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

Viral News:ಕಳೆದ ತಿಂಗಳು ಹೈದರಾಬಾದ್‌ನಿಂದ ದಿಲ್ಲಿಗೆ ವಿಮಾನಯಾನ ನಡೆಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ 7ಲಕ್ಷ ಮೌಲ್ಯದ ಚಿನ್ನ ಕಳುವಾಗಿತ್ತು. ಇದಾದ ಬೆನ್ನಲ್ಲೇ ಅಮೆರಿಕ ಮೂಲಕದ ವ್ಯಕ್ತಿಯೊಬ್ಬ ಕೂಡ ತನ್ನ ಬ್ಯಾಗ್‌ನಲ್ಲಿದ್ದ 20ಲಕ್ಷ ರೂ. ಕಳುವಾಗಿದೆ ಎಂದು ದೂರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದಿಲ್ಲಿ, ಅಮೃತಸರ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾಜೇಶ್‌ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಆತನನ್ನು ಅರೆಸ್ಟ್‌ ಮಾಡಿದಾಗ ಈತನ ಕೈಚಳಕದ ಬಗ್ಗೆ ಮಾಹಿತಿ ಹೊರಬಿದ್ದಿದೆ.

VISTARANEWS.COM


on

Viral News
Koo

ನವದೆಹಲಿ: ಈತ ಒಂದೇ ವರ್ಷದಲ್ಲಿ 200 ವಿಮಾನ(200 Flights) ಗಳನ್ನು ಹತ್ತಿ ಇಳಿದಿದ್ದಾನೆ. ಸಾವಿರಾರು ಕಿಲೋಮೀಟರ್‌ ವಿಮಾನದಲ್ಲೇ ದೇಶದೊಳಗೆ ಪ್ರಯಾಣ ಬೆಳೆಸಿದ್ದಾನೆ. ಸುಮಾರು ನೂರಕ್ಕೂ ಅಧಿಕ ದಿನಗಳ ಕಾಲ ವಿಮಾನಯಾನವನ್ನೇ ಮಾಡಿದ್ದಾನೆ. ಅಬ್ಬಾ.. ಹಾಗಾದ್ರೆ ಈತ ದೊಡ್ಡ ಉದ್ಯಮಿ ಅಥವಾ ಟ್ರಾವೆಲರ್ ಆಗಿರಲೇಬೇಕು ಎಂದು ನಾವು ಭಾವಿಸಿದರೆ ಅದು ನಮ್ಮ ತಪ್ಪು ಕಲ್ಪನೆ. ಈತ ವಿಮಾನ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ದೋಚುವ ಹೈ ಟೆಕ್‌ ಕಳ್ಳ(Viral News) ವಿಮಾನದಲ್ಲೇ ಪ್ರಯಾಣಿಸುವ ಈತ ಕಳ್ಳತನವೇ ಈತನ ಫುಲ್‌ ಟೈಂ ಜಾಬ್‌ ಆಗಿದೆ. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು ರಾಜೇಶ್‌ ಕಪೂರ್‌(Rajesh Kapoor) ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ದಿಲ್ಲಿಯ ಪಹಾರ್‌ಗಂಜ್‌ ಇಂದ ಅರೆಸ್ಟ್‌ ಮಾಡಲಾಗಿದೆ.

ಖತರ್ನಾಕ್‌ ಕಳ್ಳ ಬಲೆಗೆ ಬಿದ್ದಿದ್ದು ಹೇಗೆ?

ಕಳೆದ ತಿಂಗಳು ಹೈದರಾಬಾದ್‌ನಿಂದ ದಿಲ್ಲಿಗೆ ವಿಮಾನಯಾನ ನಡೆಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ 7ಲಕ್ಷ ಮೌಲ್ಯದ ಚಿನ್ನ ಕಳುವಾಗಿತ್ತು. ಇದಾದ ಬೆನ್ನಲ್ಲೇ ಅಮೆರಿಕ ಮೂಲಕದ ವ್ಯಕ್ತಿಯೊಬ್ಬ ಕೂಡ ತನ್ನ ಬ್ಯಾಗ್‌ನಲ್ಲಿದ್ದ 20ಲಕ್ಷ ರೂ. ಕಳುವಾಗಿದೆ ಎಂದು ದೂರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದಿಲ್ಲಿ, ಅಮೃತಸರ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾಜೇಶ್‌ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಆತನನ್ನು ಅರೆಸ್ಟ್‌ ಮಾಡಿದಾಗ ಈತನ ಕೈಚಳಕದ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಕಳ್ಳತನ ಹೇಗೆ ಮಾಡುತ್ತಿದ್ದ?

ದಿಲ್ಲಿ ಡೆಪ್ಯೂಟಿ ಪೊಲೀಸ್‌ ಕಮಿಷನರ್‌ ಉಷಾ ರಂಗ್ರಾಣಿ ಪ್ರತಿಕ್ರಿಯಿಸಿದ್ದು, ರಾಜೇಶ್‌ ವಿಚಾರಣೆ ವೇಳೆ ತನ್ನ ಕುಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅವರು ಹೇಗೆ ಕಳ್ಳತನ ಮಾಡುತ್ತಿದ್ದ, ಹೇಗೆ ಎಸ್ಕೇಪ್‌ ಆಗುತ್ತಿದ್ದ ಎಂಬ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಹೇಳಿದರು. ಅವರು ಹೇಳುವ ಪ್ರಕಾರ ಆತ ಕನೆಕ್ಟಿಂಗ್‌ ಫ್ಲೈಟ್ಸ್‌ ಅಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ. ಆ ಮಹಿಳೆ ಏಪ್ರಿಲ್‌ನಲ್ಲಿ ಹೈದರಾಬಾದ್‌ನಿಂದ ದಿಲ್ಲಿಗೆ ಬಂದು, ಅಲ್ಲಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಳು. ಅದೇ ರೀತಿ ಅಮೆರಿಕ ಮೂಲದ ಆ ವ್ಯಕ್ತಿಯೂ ಅಮೃತಸರದಿಂದ ದಿಲ್ಲಿಗೆ ಬಂದು ಅಲ್ಲಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದ. ಇಂತವರನ್ನೇ ಗುರಿಯನ್ನಾಗಿಸಿಕೊಳ್ಳುವ ರಾಜೇಶ್‌, ಪ್ರಯಾಣಿಕರ ಚಲನವಲನ, ವರ್ತನೆ ಮೇಲೆ ತೀವ್ರ ನಿಗಾ ಇರಿಸಿಕೊಳ್ಳುತ್ತಾನೆ. ಅವರ ಬ್ಯಾಗ್‌ ಮೇಲಿರುವ ಸ್ಲಿಪ್‌ನಿಂದಾಗಿ ಅವನಿಗೆ ಅವರ ಬ್ಯಾಗ್‌ನಲ್ಲಿ ಏನಿದೆ ಎಂಬುದು ತಿಳಿಯುತ್ತಿತ್ತು. ಬೋರ್ಡಿಂಗ್‌ ಗೇಟ್‌ ಬಳಿ ಈತ ಅವರ ಜೊತೆ ಮಾತುಕತೆ ನಡೆಸುತ್ತಾನೆ. ಇದಾದ ಬಳಿಕ ವಿಮಾನದಲ್ಲಿ ತನ್ನ ಸೀಟು ಬಲಿಸಿಕೊಡುವಂತೆ ವಿಮಾನ ಸಿಬ್ಬಂದಿಯನ್ನು ಕೇಳುತ್ತಾನೆ. ಹೇಗಾದರೂ ಮಾಡಿ ತಾನು ಟಾರ್ಗೆಟ್‌ ಮಾಡಿರುವ ವ್ಯಕ್ತಿಯ ಪಕ್ಕವೇ ಸೀಟು ಸಿಗುವಂತೆ ಮಾಡುತ್ತಾನೆ. ಆಗ ತನ್ನ ಕೈಚಳಕ ತೋರಿಸಿ ಚಿನ್ನ, ನಗದು ದೋಚಿದ್ದಾನೆ.

ಇದನ್ನೂ ಓದಿ: Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಹುತೇಕ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ಕದಿಯುತ್ತಿದ್ದ ಈತ ಪಹಾರ್‌ಗಂಜ್‌ನಲ್ಲಿ ಸ್ವಂತ ಗೆಸ್ಟ್‌ ಹೌಸ್‌ವೊಂದನ್ನು ಹೊಂದಿದ್ದಾನೆ. ಅಲ್ಲದೇ ಮನಿ ಎಕ್ಸ್‌ಚೇಂಜ್‌ ಉದ್ಯಮ ಮತ್ತು ಮೊಬೈಲ್‌ ಅಂಗಡಿಗಳನ್ನು ಈತ ಹೊಂದಿದ್ದಾನೆ ಎನ್ನಲಾಗಿದೆ. ಇನ್ನು ತಾನು ಕದ್ದ ಚಿನ್ನಾಭರಣಗಳನ್ನು ಸ್ಥಳೀಯ ಚಿನ್ನದ ಅಂಗಡಿ ಮಾಲೀಕ ಶರದ್‌ ಜೈನ್‌ಗೆ ಮಾರುತ್ತಿದ್ದ ಎನ್ನಲಾಗಿದೆ.

Continue Reading
Advertisement
pm narendra modi nomination varanasi
ಪ್ರಮುಖ ಸುದ್ದಿ23 mins ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು31 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್33 mins ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್43 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ44 mins ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Narendra Modi
ದೇಶ1 hour ago

Narendra Modi: ವಾರಾಣಸಿಯಲ್ಲಿ ನಮೋ ನಾಮಿನೇಶನ್‌; ಹ್ಯಾಟ್ರಿಕ್‌ ಗೆಲುವಿನ ಹುಮ್ಮಸ್ಸಿನಲ್ಲಿ ಮೋದಿ

bomb hoax bengaluru
ಕ್ರೈಂ1 hour ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್1 hour ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ2 hours ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ2 hours ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು31 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ17 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ18 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ18 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ19 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌