Indus River Treaty: ಸಿಂಧೂ ನದಿ ಒಪ್ಪಂದ ಬದಲಾಯಿಸಿ, ಪಾಕಿಸ್ತಾನಕ್ಕೆ ಭಾರತ ಖಡಕ್‌ ಎಚ್ಚರಿಕೆ - Vistara News

ದೇಶ

Indus River Treaty: ಸಿಂಧೂ ನದಿ ಒಪ್ಪಂದ ಬದಲಾಯಿಸಿ, ಪಾಕಿಸ್ತಾನಕ್ಕೆ ಭಾರತ ಖಡಕ್‌ ಎಚ್ಚರಿಕೆ

Indus River Treaty: ಪಾಕಿಸ್ತಾನವು ಜಲ ಒಪ್ಪಂದದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಮೊಂಡುತನ ಪ್ರದರ್ಶಿಸುತ್ತಿದೆ. ಇದರಿಂದಾಗಿಯೇ, ಸಿಂಧೂ ನದಿ ಕಮಿಷನರ್‌ ಮೂಲಕ ನೆರೆ ರಾಷ್ಟ್ರಕ್ಕೆ ನೋಟಿಸ್‌ ನೀಡಿದೆ.

VISTARANEWS.COM


on

Indus River Treaty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 1960ರಲ್ಲಿ ಮಾಡಿಕೊಂಡ ಸಿಂಧೂ ನದಿ ಒಪ್ಪಂದದ ಜಾರಿಗೆ (Indus River Treaty) ಹೊಂದಾಣಿಕೆ ಮಾಡಿಕೊಳ್ಳದೆ ಉದ್ಧಟತನ ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ನೋಟಿಸ್‌ ಜಾರಿ ಮಾಡಿದೆ. ಒಪ್ಪಂದದ ಮಾರ್ಪಾಡಿಗೆ ಒಪ್ಪದ ಕಾರಣ ಸಿಂಧೂ ನದಿ ನೀರು ಕಮಿಷನರ್‌ ಮೂಲಕ ಪಾಕಿಸ್ತಾನಕ್ಕೆ ನೋಟಿಸ್‌ ನೀಡಿದೆ.

ಕಿಶನ್‌ ಗಂಗಾ ಮತ್ತು ರತಲೆ ಜಲವಿದ್ಯುತ್‌ ಯೋಜನೆಗಳಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಒಪ್ಪಿಗೆ ಸೂಚಿಸುತ್ತಿಲ್ಲ. ಜಲ ಒಪ್ಪಂದದಲ್ಲಿ ಮಾರ್ಪಾಡು ಮಾಡಿಕೊಳ್ಳಲು ಪಾಕಿಸ್ತಾನ ಮೊಂಡುತನ ಪ್ರದರ್ಶಿಸುತ್ತಿದೆ. ಇದರಿಂದಾಗಿ ಭಾರತವು ಕಮಿಷನರ್‌ ಮೂಲಕ ನೋಟಿಸ್‌ ಜಾರಿ ಮಾಡಿ, ಖಡಕ್‌ ಎಚ್ಚರಿಕೆ ನೀಡಿದೆ.

ನೋಟಿಸ್‌ ಅವಧಿಯು 90 ದಿನದ್ದಾಗಿರುತ್ತದೆ. 90 ದಿನಗಳೊಳಗೆ ಪಾಕಿಸ್ತಾನವು ಮಾತುಕತೆ ಕುರಿತು ತೀರ್ಮಾನ ತೆಗೆದುಕೊಳ್ಳಬೇಕು. ಇದೇ ಕಾರಣಕ್ಕಾಗಿ ನೋಟಿಸ್‌ ನೀಡಿದೆ.

ಇದನ್ನೂ ಓದಿ: Pakistan Economy: ಅಧಃಪತನದತ್ತ ನೆರೆರಾಷ್ಟ್ರ, ಡಾಲರ್‌ ಎದುರು 262ಕ್ಕೆ ಕುಸಿದ ಪಾಕಿಸ್ತಾನದ ರೂಪಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

Lok Sabha Election : ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಿಗದಿಯಾಗಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನ ಹತ್ತಿರ ಬಂದ ಬಳಿಕವೂ ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಇರುತ್ತವೆ . ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ ಎಂಬ ಪ್ರಶ್ನೆ ಖಂಡಿತಾ ಇರುತ್ತದೆ. ಹಾಗಾದರೆ ಈ ಸಂದರ್ಭದಲ್ಲಿ ನೀವು ಏನು ಮಾಡಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ

Continue Reading

ದೇಶ

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

ಯಾವಾಗ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಇದೇ ವೇಳೆ ಮೋದಿ ಅವರು ತಮ್ಮ ಬಗ್ಗೆ ಮಾಡಲಾದ ಟ್ರೋಲ್‌ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಸೋಷಿಯಲ್‌ ಮೀಡಿಯಾ ಜಮಾನದಲ್ಲಿ ಗಣ್ಯರ ಕುರಿತು ಟ್ರೋಲ್‌ (Troll) ಮಾಡುವುದು, ಮೀಮ್‌ಗಳ (Meme) ಮೂಲಕ ಅವರ ಕಾಲೆಳೆಯುವುದು ಸಾಮಾನ್ಯ. ವಿಡಿಯೊ ಅಥವಾ ರೀಲ್ಸ್‌ ನೋಡಿ, ನಕ್ಕು, ಮುಂದೆ ಹೋಗುವಂತಹ ಟ್ರೋಲ್‌ಗಳು ವೈರಲ್‌ (Viral Video) ಆಗುತ್ತವೆ. ಆದರೆ, ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ ಮೂಲಕ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಟ್ರೋಲ್‌ ಮಾಡಿದ್ದಕ್ಕೆ ಇಬ್ಬರು ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಪಶ್ಚಿಮ ಬಂಗಾಳ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ತಮ್ಮ ಬಗ್ಗೆ ಮಾಡಿದ ಟ್ರೋಲ್‌ ವಿಡಿಯೊವನ್ನು ಮೆಚ್ಚಿಕೊಂಡಿದ್ದಾರೆ.

ಸಾವಿರಾರು ಜನರ ಮಧ್ಯೆ ವ್ಯಕ್ತಿಯೊಬ್ಬ ಅತ್ಯುತ್ಸಾಹದಿಂದ ಬಂದು ಡಾನ್ಸ್‌ ಮಾಡುತ್ತಾನೆ. ಆ ವ್ಯಕ್ತಿಯ ಬದಲಿಗೆ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಮೋದಿ ಅವರು ಡಾನ್ಸ್‌ ಮಾಡುವಂತೆ ಎಡಿಟ್‌ ಮಾಡಲಾಗಿದೆ. ಈ ಟ್ರೋಲ್‌ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ ವ್ಯಕ್ತಿಯೊಬ್ಬ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾನೆ. “ಸರ್ವಾಧಿಕಾರಿ ನರೇಂದ್ರ ಮೋದಿ ಅವರು ಈ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದಕ್ಕೆ ನನ್ನನ್ನು ಬಂಧಿಸಲಿಕ್ಕಿಲ್ಲ” ಎಂದು ಕ್ರಿಪ್ಟಿಕ್‌ ಆಗಿ ಪೋಸ್ಟ್‌ ಮಾಡಿದ್ದಾನೆ. ಆದರೆ, ಆ ವಿಡಿಯೊವನ್ನೇ ಶೇರ್‌ ಮಾಡಿದ ಮೋದಿ, ಅದನ್ನು ಮೆಚ್ಚಿಕೊಂಡಿದ್ದಾರೆ.

ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

“ನಿಮ್ಮಂತೆ, ನಾನು ಕೂಡ ನಾನೇ ನೃತ್ಯ ಮಾಡಿದಂತೆ ಬಿಂಬಿಸಿರುವ ವಿಡಿಯೊವನ್ನು ನೋಡಿ ಎಂಜಾಯ್‌ ಮಾಡಿದ್ದೇನೆ. ಇಂತಹ ಕ್ರಿಯೇಟಿವಿಯಿಂದ ಕೂಡಿರುವ ಟ್ರೋಲ್‌ಗಳು ಚುನಾವಣೆ ಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿವೆ” ಎಂದು ಹೇಳುವ ಮೂಲಕ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮಾಡಿದ ಟ್ರೋಲ್‌ಅನ್ನು ಕೂಡ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಸಕಾರಾತ್ಮಕ ಮನೋಭಾವ, ಮೀಮರ್‌ಗಳನ್ನು ಕೂಡ ಹೊಗಳುವ ರೀತಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೋಲ್‌ ಸಹಿಸದ ದೀದಿ

ನರೇಂದ್ರ ಮೋದಿ ಅವರು ಡಾನ್ಸ್‌ ಮಾಡುವ ರೀತಿ ಬಿಂಬಿಸಿದ ರೀತಿಯೇ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಮೊದಲು ಹಂಚಿಕೊಳ್ಳಲಾಗಿತ್ತು. ತಮಾಷೆಗಾಗಿ ಮಾಡಿದ ವಿಡಿಯೊ ಕಂಡ ಪಶ್ಚಿಮ ಬಂಗಾಳ ಪೊಲೀಸರು, ಪೋಸ್ಟ್‌ ಮಾಡಿದ ಇಬ್ಬರಿಗೆ ಕಠಿಣ ಕ್ರಮದ ಎಚ್ಚರಿಕೆ ಜತೆಗೆ ನೋಟಿಸ್‌ ನೀಡಿದ್ದಾರೆ.

ಯಾವಾಗ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಆ ಮೂಲಕ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ದೇಶ

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

Maldives: ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಫೆಬ್ರವರಿ 1ರಂದು ಮಂಡಿಸಿದ ಬಜೆಟ್‌ನಲ್ಲೂ ಘೋಷಿಸಲಾಗಿದೆ. “ದೇಶದ ಪ್ರವಾಸೋದ್ಯಮಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಂದರು ಸಂಪರ್ಕ, ಪ್ರವಾಸೋದ್ಯಮ ಮೂಲ ಸೌಕರ್ಯಗಳ ಅಭಿವೃದ್ಧಿ, ಲಕ್ಷದ್ವೀಪ ಸೇರಿ ದೇಶದ ಎಲ್ಲ ದ್ವೀಪಗಳನ್ನು ಅಭಿವೃದ್ಧಿಗೊಳಿಸಲಾಗುವುದು” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದರು. ಭಾರತದ ಆಂತರಿಕ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸಿದ್ದ ಮಾಲ್ಡೀವ್ಸ್‌ಗೆ ಇದರಿಂದ ಭಾರಿ ಹಿನ್ನಡೆಯಾಗಿದೆ. ಹಾಗಾಗಿ, ಮಾಲ್ಡೀವ್ಸ್‌ ಈಗ ಭಾರತೀಯರ ಮನವೊಲಿಸಲು ಯತ್ನಿಸುತ್ತಿದೆ.

VISTARANEWS.COM


on

Narendra Modi
Koo

ನವದೆಹಲಿ/ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್‌ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಶುರುವಾದ ಕಾರಣ ಆ ದೇಶಕ್ಕೆ ತೆರಳುವವರ ಸಂಖ್ಯೆ ಭಾರಿ ಕುಸಿದಿದೆ. ಭಾರತೀಯರ ಬಾಯ್ಕಾಟ್‌ ಏಟಿಗೆ ಈಗ ಮಾಲ್ಡೀವ್ಸ್‌ ಥಂಡಾ ಹೊಡೆದಿದ್ದು, “ಭಾರತೀಯರೇ, ದಯಮಾಡಿ ಮಾಲ್ಡೀವ್ಸ್‌ ಪ್ರವಾಸಕ್ಕೆ ಬನ್ನಿ” ಎಂದು ಅಲ್ಲಿನ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್‌ (Ibrahim Faisal) ಮನವಿ ಮಾಡಿದ್ದಾರೆ.

“ಭಾರತ ಹಾಗೂ ಮಾಲ್ಡೀವ್ಸ್‌ ಸಂಬಂಧಕ್ಕೆ ಉತ್ತಮ ಇತಿಹಾಸವಿದೆ. ನಮ್ಮ ನೂತನ ಸರ್ಕಾರವೂ ಭಾರತದ ಜತೆ ಕೆಲಸ ಮಾಡಲು ಬಯಸುತ್ತದೆ. ನಾವು ಎಂದಿಗೂ ಸ್ನೇಹಯುತ ವಾತಾವರಣ, ಸಂಬಂಧ ಇಟ್ಟುಕೊಳ್ಳಲು ಬಯಸುತ್ತೇವೆ. ಹಾಗಾಗಿ, ಭಾರತೀಯರನ್ನು ನಮ್ಮ ಸರ್ಕಾರ ಹಾಗೂ ಇಲ್ಲಿನ ಜನರು ಆತ್ಮೀಯವಾಗಿ ಸ್ವಾಗತಿಸುತ್ತಾರೆ. ನಾನೊಬ್ಬ ಪ್ರವಾಸೋದ್ಯಮ ಸಚಿವನಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ, ದಯಮಾಡಿ ಮಾಲ್ಡೀವ್ಸ್‌ಗೆ ಬನ್ನಿ. ಮಾಲ್ಡೀವ್ಸ್‌ ಪ್ರವಾಸೋದ್ಯಮದ ಭಾಗವಾಗಿ” ಎಂಬುದಾಗಿ ಅಂಗಲಾಚಿಕೊಂಡಿದ್ದಾರೆ.

narendra modi maldives president mohammed Muizzu

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives Minister: ಭಾರತದ ತಿರಂಗಾಕ್ಕೆ ಅವಮಾನ; ಕ್ಷಮೆ ಕೇಳಿದ ಮಾಲ್ಡೀವ್ಸ್‌ ಸಚಿವೆ!

Continue Reading

ದೇಶ

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Bomb Threat: ಕೆಲ ದಿನಗಳ ಹಿಂದಷ್ಟೇ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು. ಇದಕ್ಕೂ ಮೊದಲು ಕರ್ನಾಟಕದ ಬೆಂಗಳೂರಿನಲ್ಲೂ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು.

VISTARANEWS.COM


on

Bomb Threat
Koo

ನವದೆಹಲಿ: ಕರ್ನಾಟಕ, ದೆಹಲಿ, ಗುಜರಾತ್‌ ಸೇರಿ ದೇಶದ ಹಲವೆಡೆ ಶಾಲೆಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ದಾಳಿ ಬೆದರಿಕೆ ಒಡ್ಡಲಾಗಿದೆ. ಇದರಿಂದ ಶಾಲೆಗಳ (Schools) ಆಡಳಿತ ಮಂಡಳಿಗಳು ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಿದ, ಪೋಷಕರು ಆತಂಕ್ಕಕೀಡಾದ ಪ್ರಕರಣಗಳು ಹೆಚ್ಚಾಗಿವೆ. ಇನ್ನು, ಬಳಿಕ ಇವು ಹುಸಿ ಬಾಂಬ್ ಕರೆಗಳು (Hoax Bomb Threats) ಎಂದು ಪೊಲೀಸರು ತನಿಖೆ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ, ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡುವುದನ್ನು ತಡೆಯುವ ದಿಸೆಯಲ್ಲಿ ಕೇಂದ್ರ ಸರ್ಕಾರವು (Central Government) ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿದೆ. ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಶಾಲೆಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಅವುಗಳ ಮೇಲೆ ನಿಗಾ ಇರಿಸುವುದು, ಶಾಲೆಗಳ ಇ-ಮೇಲ್‌ ವಿಳಾಸಗಳನ್ನು ಪದೇಪದೆ ಪರಿಶೀಲಿಸುವುದು ಸೇರಿ ಹಲವು ಸೂಚನೆಗಳನ್ನು ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರು ಸಭೆ ನಡೆಸಿ, ಹುಸಿ ಬಾಂಬ್‌ ಬೆದರಿಕೆ ಕರೆ, ಇ-ಮೇಲ್‌ಗಳನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಿದ ಬಳಿಕ ಸೂಚನೆ ನೀಡಲಾಗಿದೆ. ದೆಹಲಿ ಶಾಲೆಗಳಿಗೆ ಬೆದರಿಕೆ

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಇದನ್ನೂ ಓದಿ: Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Continue Reading
Advertisement
Lok Sabha Election 2024
Lok Sabha Election 20241 min ago

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ

Lok Sabha Election
ಪ್ರಮುಖ ಸುದ್ದಿ19 mins ago

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

karnataka weather Forecast
ಮಳೆ19 mins ago

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Lok Sabha Election
ಪ್ರಮುಖ ಸುದ್ದಿ29 mins ago

Lok Sabha Election 2024: ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ; ಅದೃಷ್ಟ ಪರೀಕ್ಷೆಗಿಳಿದ 227 ಅಭ್ಯರ್ಥಿಗಳು

Lok Sabha Election-2024
ಕರ್ನಾಟಕ49 mins ago

ಇಂದು 2ನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

SSLC exam results to be announced soon
ಕರ್ನಾಟಕ49 mins ago

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

Lemon picking⁠
ಲೈಫ್‌ಸ್ಟೈಲ್49 mins ago

Tips To Find The Juiciest Lemon: ಜ್ಯೂಸಿಯಾದ ನಿಂಬೆಹಣ್ಣನ್ನು ಮಾರುಕಟ್ಟೆಯಿಂದ ಆರಿಸಿ ತರುವುದೂ ಒಂದು ಕಲೆ! ಇಲ್ಲಿವೆ ಟಿಪ್ಸ್

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಕಂಟಕ; ಕುಟುಂಬದಲ್ಲಿ ಕಲಹ

Bengaluru Rain
ಕರ್ನಾಟಕ7 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ7 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ12 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ12 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ13 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌