ವಿಸ್ತಾರ TOP 10 NEWS : ಜನಸಾಮಾನ್ಯನ ಬಜೆಟ್‌ ನಿರೀಕ್ಷೆಯಿಂದ, ಬಿಲಿಯನೇರ್‌ ಪಟ್ಟಿಯಿಂದ ಅದಾನಿ ಔಟ್‌ವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS : ಜನಸಾಮಾನ್ಯನ ಬಜೆಟ್‌ ನಿರೀಕ್ಷೆಯಿಂದ, ಬಿಲಿಯನೇರ್‌ ಪಟ್ಟಿಯಿಂದ ಅದಾನಿ ಔಟ್‌ವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-union budget expectations to adani out of billionaire list and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Budget 2023: ಸಂಸತ್ತಿನಲ್ಲಿ ಬುಧವಾರ ಕೇಂದ್ರ ಬಜೆಟ್‌ ಮಂಡನೆ, ಜನಪರ ಘೋಷಣೆ ನಿರೀಕ್ಷೆ
ಕೇಂದ್ರ ಸರ್ಕಾರ ಫೆಬ್ರವರಿ 1ರಂದು ಬಹು ನಿರೀಕ್ಷಿತ 2023-24ರ ಸಾಲಿನ ಕೇಂದ್ರ ಬಜೆಟ್‌ ಅನ್ನು ಬುಧವಾರ ಮಂಡಿಸಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬೆಳಗ್ಗೆ 11 ಗಂಟೆಗೆ ಮುಂಗಡಪತ್ರ ಮಂಡಿಸಲಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕೊನೆಯ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದ್ದು, ಜನಪರ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Budget 2023: ಬಜೆಟ್ ಅಧಿವೇಶನ ಉದ್ದೇಶಿಸಿ ಮುರ್ಮು ಭಾಷಣ, ಬಸವಣ್ಣನ ‘ಕಾಯಕವೇ ಕೈಲಾಸ’ ಸ್ಮರಿಸಿದ ರಾಷ್ಟ್ರಪತಿ
ಹೆಚ್ಚಿನ ಓದಿಗಾಗಿ: Budget 2023: ಜನ ಸಾಮಾನ್ಯರ ಪರ ಬಜೆಟ್:‌ ಪ್ರಧಾನಿ ನರೇಂದ್ರ ಮೋದಿ ಭರವಸೆ

2. IMF Report : ಭಾರತ 2023ರಲ್ಲಿ ಪ್ರಬಲ ಆರ್ಥಿಕತೆಯಾಗಲಿದೆ: ಐಎಂಎಫ್‌ ಭವಿಷ್ಯ
ಭಾರತ ಮತ್ತು ಚೀನಾ 2023ರಲ್ಲಿ ಪ್ರಬಲ ಆರ್ಥಿಕತೆಗಳಾಗಿ ನಿರ್ಣಾಯಕ ಪಾತ್ರ ವಹಿಸಲಿದೆ. ಜಾಗತಿಕ ಬೆಳವಣಿಗೆಯಲ್ಲಿ 50% ಪಾಲನ್ನು ವಹಿಸಲಿವೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್‌ (IMF) ತನ್ನ ವರದಿಯಲ್ಲಿ ತಿಳಿಸಿದೆ. ಅಮೆರಿಕ ಮತ್ತು ಯುರೋಪ್‌ ಕೇವಲ 10ರಲ್ಲಿ ಒಂದು ಭಾಗವನ್ನು ಮಾತ್ರ ವಹಿಸಲಿವೆ ಎಂದಿರುವುದು ಗಮನಾರ್ಹ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Economic Survey 2023: ಜಿಡಿಪಿ ಪ್ರಗತಿ 2023-24ರಲ್ಲಿ 6%ರಿಂದ 6.8% ಸಂಭವ: ಆರ್ಥಿಕ ಸಮೀಕ್ಷೆ ಬಹಿರಂಗ

3. BBC Documentary: ‘ಸ್ವತಂತ್ರ ನೀತಿ ವಿರುದ್ಧ ಮಾಹಿತಿ ಸಮರ’, ಬಿಬಿಸಿ ಡಾಕ್ಯುಮೆಂಟರಿ ವಿರುದ್ಧ ರಷ್ಯಾ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಅವಹೇಳನಕಾರಿಯಾಗಿ ಚಿತ್ರಿಸಿರುವ ಬಿಬಿಸಿಯ ಇಂಡಿಯಾ: ದಿ ಮೋದಿ ಕ್ವಶ್ಚನ್‌ (India: The Modi Question) ಡಾಕ್ಯುಮೆಂಟರಿ (BBC Documentary) ಕುರಿತು ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಸೇರಿ ಹಲವು ಸಂಸದರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ರಷ್ಯಾ ಕೂಡ ಸಾಕ್ಷ್ಯಚಿತ್ರದ ವಿರುದ್ಧ ಮಾತನಾಡಿದ್ದು, “ಸ್ವತಂತ್ರ ನೀತಿ ಹೊಂದಿರುವ ರಾಷ್ಟ್ರಗಳ ವಿರುದ್ಧ ಬಿಬಿಸಿ ಮಾಹಿತಿ ಸಮರ ಸಾರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Ramesh Jarkiholi : ಸಿಡಿ ಪ್ರಕರಣವನ್ನು ಸಿಬಿಐಗೆ ನೀಡುತ್ತಾರ ಸಿಎಂ?: ರಮೇಶ್‌ ಜಾರಕಿಹೊಳಿ ಭೇಟಿ ಕುತೂಹಲ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮಾಡಿರುವ ಆರೋಪದ ನಂತರ ಪ್ರಕರಣವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಿಬಿಐಗೆ ವಹಿಸುತ್ತಾರೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಮಂಗಳವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಆಗಮಿಸಿದ ರಮೇಶ್‌ ಜಾರಕಿಹೊಳಿ ಸಾಕಷ್ಟು ಹೊತ್ತು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. KS Eshwarappa : ಸಿದ್ದರಾಮಯ್ಯ ಜೀವಂತ ಇದ್ದಾಗಲೇ ಬಿಜೆಪಿಗೆ ಸೇರಿಸಲ್ಲ, ಹೆಣಾನ ನಾಯಿ ಕೂಡ ಮೂಸಲ್ಲ ಎಂದ ಈಶ್ವರಪ್ಪ
 ʻಸತ್ರೂ ಬಿಜೆಪಿ ಸೇರಲ್ಲʼ ಎಂಬ ಹೇಳಿಕೆಗೆ ಪ್ರತಿಯಾಗಿ ಕಮಲ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಮೇಲೆ ಮುಗಿಬಿದ್ದಿದ್ದಾರೆ. ಸೋಮವಾರ ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಿದರೆ, ಮಂಗಳವಾರ ಮತ್ತೊಬ್ಬ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ (KS Eshwarappa) ವಾಗ್ದಾಳಿ ನಡೆಸಿದ್ದಾರೆ. ʻʻಸಿದ್ದರಾಮಯ್ಯ ಜೀವಂತ ಇದ್ದಾಗಲೇ ಬಿಜೆಪಿಗೆ ಸೇರಿಸ್ಕೊಳ್ಳೊಲ್ಲ. ಇನ್ನು ಅವರ ಹೆಣ ತಗೊಂಡು ಏನು ಮಾಡೋದು? ಅವರ ಹೆಣಾನ ನಾಯಿ ಕೂಡ ಮೂಸಲ್ಲʼʼ ಎಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Gautam Adani : ವಿಶ್ವದ ಟಾಪ್‌ 10 ಬಿಲಿಯನೇರ್‌ ಪಟ್ಟಿಯಿಂದ ಹೊರ ಬಿದ್ದ ಗೌತಮ್‌ ಅದಾನಿ, ರ‍್ಯಾಂಕ್ 11ಕ್ಕೆ ಕುಸಿತ
ವಿಶ್ವದ ಟಾಪ್‌ 10 ಶ್ರೀಮಂತರ ಪಟ್ಟಿಯಿಂದ ಬಿಲಿಯನೇರ್‌ಗಳ ಪಟ್ಟಿಯಿಂದ ಗೌತಮ್‌ ಅದಾನಿ (Gautam Adani) ಹೊರಬಿದ್ದಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಕಂಪನಿಗಳ ಷೇರುಗಳ ಮಾರುಕಟ್ಟೆ ಮೌಲ್ಯದಲ್ಲಿ 5 ಲಕ್ಷ ಕೋಟಿ ರೂ.ಗೂ ಹೆಚ್ಚು ಕುಸಿದ ಬಳಿಕ ಅದಾನಿಯವರ ನಿವ್ವಳ ಸಂಪತ್ತಿನಲ್ಲೂ ಇಳಿಕೆಯಾಗಿದೆ. ಇದರ ಪರಿಣಾಮ ಮೂರನೇ ಸ್ಥಾನದಲ್ಲಿದ್ದ ಅದಾನಿ ಈಗ 11ಕ್ಕೆ ಕುಸಿದಿದ್ದಾರೆ ಎಂದು ಬ್ಲೂಮ್‌ ಬರ್ಗ್‌ ಬಿಲಿಯನೇರ್‌ ಇಂಡೆಕ್ಸ್‌ ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Indira Gandhi: ಬಿಂದ್ರನ್‌ವಾಲೆ ಉಗ್ರನಾಗಲು ಇಂದಿರಾ ಗಾಂಧಿ ಕಾರಣ, ನಿವೃತ್ತ ಲೆ.ಜ. ಕೆ.ಎಸ್‌. ಬ್ರಾರ್‌ ಹೇಳಿಕೆ
1984ರಲ್ಲಿ ಅಮೃತಸರದ ಸ್ವರ್ಣಮಂದಿರದಲ್ಲಿದ್ದ ಖಲಿಸ್ತಾನಿ ಉಗ್ರರನ್ನು ಸದೆಬಡಿಯಲು ನಡೆಸಿದ ಆಪರೇಷನ್‌ ಬ್ಲ್ಯೂ ಸ್ಟಾರ್‌ನಲ್ಲಿ ಹತನಾದ ಉಗ್ರ ಜರ್ನೈಲ್‌ ಸಿಂಗ್‌ ಬಿಂದ್ರನ್‌ವಾಲೆಯ ಕುರಿತು ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಕುಲದೀಪ್‌ ಸಿಂಗ್‌ ಬ್ರಾರ್‌ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಬಿಂದ್ರನ್‌ವಾಲೆಯು ಉಗ್ರಗಾಮಿಯಾಗಿ ಬೆಳೆಯಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi)” ಅವರೇ ಕಾರಣ” ಎಂದು ಎಎನ್‌ಐ ಪಾಡ್‌ಕಾಸ್ಟ್‌ನಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Janardhana Reddy : ಬಳ್ಳಾರಿಯ ಕಣದಲ್ಲಿ ರೆಡ್ಡಿ ಪತ್ನಿ ಅರುಣಾಲಕ್ಷ್ಮಿ V/S ಸೋಮಶೇಖರ್‌ ರೆಡ್ಡಿ; ಜನಾರ್ದನ ರೆಡ್ಡಿ ಘೋಷಣೆ
ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಚುನಾವಣೆಯನ್ನು ತುಂಬ ಗಂಭೀರವಾಗಿ ಸ್ವೀಕರಿಸಿದ್ದು, ಸ್ವತಃ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾಲಕ್ಷ್ಮಿ ಅವರೇ ಬಳ್ಳಾರಿ ನಗರ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಈ ವಿಚಾರವನ್ನು ಜನಾರ್ದನ ರೆಡ್ಡಿ (Janardhana Reddy) ಅವರೇ ಘೋಷಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ‌ ಆನೆಗೊಂದಿಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಲ್ಯಾಣ ರಥ ಯಾತ್ರೆಯಲ್ಲಿ ರೆಡ್ಡಿ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಬಳ್ಳಾರಿ ನಗರದಲ್ಲಿ ಈಗ ರೆಡ್ಡಿ ಅವರ ಸೋದರ ಸೋಮಶೇಖರ ರೆಡ್ಡಿ ಬಿಜೆಪಿ ಶಾಸಕರಾಗಿದ್ದಾರೆ. ಇದರೊಂದಿಗೆ ಬಳ್ಳಾರಿ ನಗರ ಕೌಟುಂಬಿಕ ಹೋರಾಟಕ್ಕೆ ಅಣಿಯಾಗಬೇಕಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. LIC WhatsApp Services: ವಾಟ್ಸಾಪ್‌ನಲ್ಲೇ ನಿಮ್ಮ ಎಲ್ಐಸಿ ಪ್ರೀಮಿಯಂ ಮಾಹಿತಿ ತಿಳಿದುಕೊಳ್ಳಿ! ನೋಂದಣಿ ಹೇಗೆ?
ಜೀವ ವಿಮಾನ ನಿಗಮ(Life Insurance Corporation Of India-LIC) ವಿಮೆಗೆ ಸಂಬಂಧಿಸಿದ ಸೇವೆಗಳನ್ನು ನೀವು ಪಡೆಯಬೇಕಿದ್ದರೆ, ಹತ್ತಿರದ ವಿಮಾ ಶಾಖೆ ಕಚೇರಿಗೆ ಹೋಗಬೇಕಿತ್ತು. ಇಲ್ಲವೇ ಇಂಟರ್ನೆಟ್‌ನಲ್ಲಿ ಸೇವೆಗಳನ್ನು ಪಡೆಯಬೇಕಿತ್ತು. ಈಗ ಎಲ್ಐಸಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವಾಟ್ಸಾಪ್‌ನಲ್ಲಿ ಹಲವು ಸೇವೆಗಳನ್ನು ಒದಗಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ಮತ್ತು ವಿಮಾ ಕಂಪನಿಗಳು ತಮ್ಮ ಗ್ರಾಹಕರಿಗೆ ವಾಟ್ಸಾಪ್ ಮೂಲಕ ಹಲವು ಸೇವೆಗಳನ್ನು ಒದಗಿಸುತ್ತಿವೆ. ಈ ಸಾಲಿಗೆ ಈಗ ಎಲ್ಐಸಿ ಕೂಡ ಸೇರ್ಪಡೆಯಾದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Brahmin cookies: ಬಿಸ್ಕಿಟ್​ ಮೇಲೆ ಬ್ರಾಹ್ಮಣ ವಟುವನ್ನು ಚಿತ್ರಿಸಿದ ಬೇಕರಿ; ಜಾತಿ ಇಲ್ಲೂ ಬಂತಾ ಎಂದು ನೆಟ್ಟಿಗರ ಅಸಮಾಧಾನ
ವಿಶೇಷ ಬಿಸ್ಕಿಟ್​​ಗಳ ತಯಾರಿಕೆಗೇ ಹೆಸರಾದ ಫ್ರೆಡ್ಡಿ ಬೇಕಿಂಗ್ ಎಂಬ ಬೇಕರಿ ಈಗ ಒಂದು ವಿವಾದ ಹುಟ್ಟುಹಾಕಿದೆ. ಬ್ರಾಹ್ಮಣ ಕುಟುಂಬವೊಂದು ಮನೆ ಮಗನ ಉಪನಯನಕ್ಕಾಗಿ ಬಿಸ್ಕಿಟ್​ ತಯಾರು ಮಾಡಿಕೊಡುವಂತೆ ಬೇಕರಿಗೆ ಆರ್ಡರ್​ ಕೊಟ್ಟಿತ್ತು. ಅದರಂತೆ ಫ್ರೆಡ್ಡಿ ಬೇಕಿಂಗ್ ಬಿಸ್ಕಿಟ್​ ತಯಾರು ಮಾಡಿ, ಅವರಿಗೆ ಕೊಟ್ಟಿದೆ. ಆದರೆ ಈ ಬಿಸ್ಕಿಟ್​​ಗಳಲ್ಲಿ ಮೂಡಿದ್ದ ಚಿತ್ರ ಅನೇಕರ ಕಣ್ಣುಕೆಂಪಾಗಿಸಿವೆ. ಅದು ಉಪನಯನಕ್ಕೆ ಬೇಕಾದ ಬಿಸ್ಕಿಟ್​ ಆಗಿದ್ದರಿಂದ ಅದರ ಮೇಲೆ ‘ಬ್ರಾಹ್ಮಣ ವಟು’ ವಿನ ಚಿತ್ರ ರೂಪಿಸಿದ್ದರು. ಬ್ರಾಹ್ಮಣ ಕುಕ್ಕೀಸ್​ ಎಂದೇ ಅದನ್ನು ಹೆಸರಿಸಿದ್ದರು. ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. Asaram Bapu: ಅತ್ಯಾಚಾರ ಪ್ರಕರಣದಲ್ಲಿ ಆಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ, ಜತೆಗೆ 50 ಸಾವಿರ ರೂ. ದಂಡ
  2. ಆಂಧ್ರಪ್ರದೇಶದ ಹೊಸ ರಾಜಧಾನಿ ವಿಶಾಖಪಟ್ಟಣಂ; ಮುಖ್ಯಮಂತ್ರಿ ಜಗನ್ ಮೋಹನ್​​ ರೆಡ್ಡಿ ಘೋಷಣೆ
  3. Social Media: ಸಾಮಾಜಿಕ ಮಾಧ್ಯಮಗಳು ಮಕ್ಕಳಿಗೆ ಯಾವ ವಯಸ್ಸಿನಿಂದ ಸೂಕ್ತ?
  4. Video blackmail : ಬೆತ್ತಲೆ ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ಮೇಲ್‌; ಹಣ ಹೊಂದಿಸಲಾಗದೆ ಯುವಕ ಆತ್ಮಹತ್ಯೆ
  5. Social Media: ಸಾಮಾಜಿಕ ಮಾಧ್ಯಮಗಳು ಮಕ್ಕಳಿಗೆ ಯಾವ ವಯಸ್ಸಿನಿಂದ ಸೂಕ್ತ?
  6. ದಶಮುಖ ಅಂಕಣ: ಅದಲು ಬದಲು ಕಂಚಿ ಕದಲು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Stray dogs attack: ಬೀದಿನಾಯಿಗಳು ದಾಳಿ ನಡೆಸಿ, ನಾಲ್ಕು ಮಕ್ಕಳು ಹಾಗೂ ಓರ್ವ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರದ 12 ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಜರುಗಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.

VISTARANEWS.COM


on

Stray dogs attack in Shira 4 children one woman injured
Koo

ಶಿರಾ: ಬೀದಿನಾಯಿಗಳು ದಾಳಿ (Stray Dogs Attack) ನಡೆಸಿ, ನಾಲ್ಕು ಮಕ್ಕಳು ಹಾಗೂ ಒಬ್ಬ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ಮಕ್ಕಳ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.

ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು.

ರಿಹಾನ್ (7), ತಾಸ್ಮಿಯ (13), ಜಿಯಾ ಉಲ್ಲಾಖಾನ್ (7), ಇಬದುಲ್ಲಾ ಖಾನ್ (1) ಹಾಗೂ ಶಾಹಿನ (45) ಅವರಿಗೆ ಗಾಯಗಳಾಗಿದ್ದು, ಶಿರಾ ನಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ 4 ಮಕ್ಕಳು ಹಾಗೂ ಮಹಿಳೆಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ನಗರಸಭೆಯ ಆಯುಕ್ತ ಕೆ. ರುದ್ರೇಶ್‌, ನಗರಸಭೆ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಭೆ ತೀರ್ಮಾನ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡವಾಯಿತು. ಸದ್ಯದಲ್ಲೇ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದ ತಿಳಿಸಿದರು.

Continue Reading

ಪ್ರಮುಖ ಸುದ್ದಿ

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bangalore Rain: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ.

VISTARANEWS.COM


on

Bangalore rain
Koo

ಬೆಂಗಳೂರು: ರಾಜಧಾನಿಯ ವಿವಿಧೆಡೆ ಶನಿವಾರ ಸಂಜೆ ಭರ್ಜರಿ ಮಳೆ (Bangalore Rain) ಸುರಿದಿದ್ದು, ಹಲವೆಡೆ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಗರದ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ವೀರಸಂದ್ರ ಸಿಗ್ನಲ್ ಬಳಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಇನ್ನು ನಗರದ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರತಿ ಬಾರಿ ಮಳೆ ಬಂದಾಗ ಹೆದ್ದಾರಿ ಕೆರೆಯಂತಾಗುತ್ತದೆ. ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತವಾಗುತ್ತದೆ. ಹೆದ್ದಾರಿಯಲ್ಲಿ ನಾಲ್ಕೈದು ಅಡಿಗಳಷ್ಟು ಮಳೆ ನೀರು ನಿಂತಿದ್ದರಿಂದ ಹೆದ್ದಾರಿಯ ಅವ್ಯವಸ್ಥೆಯಿಂದ ಹಲವು ವಾಹನಗಳು ಕೆಟ್ಟುನಿಂತಿವೆ. ಇನ್ನು ಜಲಾವೃತವಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ಸಿಲಿಕಾನ್ ಸಿಟಿಯ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿ ನಗರ, ಕೋರಮಂಗಲ, ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿ ನಗರದ ಹಲವೆಡೆ ಭರ್ಜರಿ ಮಳೆಯಾಗಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಿದರು.

ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ವೇಳೆ ಭಾರಿ ಮಳೆ ಬಿದ್ದಿದ್ದರಿಂದ ವಾಹನ ಸವಾರರು ಬಸ್ ನಿಲ್ದಾಣಗಳು, ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರು. ಮಳೆ ನೀರಿನಿಂದ ಸಹಕಾರ ನಗರದ ಜಿ ಬ್ಲಾಕ್ ರಸ್ತೆಗಳು ಹಳ್ಳದಂತಾಗಿ ಬದಲಾಗಿದ್ದವು. ಇನ್ನು ಕೆಎಸ್ ಗಾರ್ಡನ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.

ಸಂಜೆ ಸುರಿದ ಮಳೆಯಿಂದ ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಪರದಾಡಿದರು. ಮಳೆ ಬಂದರೆ ಇಲ್ಲಿನ ಜನ ಭಯದಲ್ಲೇ ದಿನ ಕಳೆಯುವ ಸ್ಥಿತಿ ಇದೆ. ಇನ್ನು ಮನೆಯ ಮುಂದೆ ಅಧಿಕಾರಿಗಳು ಗುಂಡಿ ತೆಗೆದು ಮುಚ್ಚದ ಹಿನ್ನೆಲೆಯಲ್ಲಿ ವಾಹನ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಧರೆಗುರುಳಿದ ಮರ

ಮಳೆಯಿಂದಾಗಿ ಯಲಹಂಕ ವಲಯದಲ್ಲಿನ ಜಕ್ಕೂರು ಬಳಿ ಮರ ಧರೆಗುರುಳಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಮರ ತೆರವುಗೊಳಿಸಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕೇರಳ ಪ್ರವೇಶಿಸಿರುವ ಮುಂಗಾರು, ನಂತರ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಇನ್ನು ರಾಜ್ಯದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಮಾನ ಇಲಾಖೆ‌ ಅಲರ್ಟ್‌ ನೀಡಿದ್ದುಮ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನ ಮಳೆ ಇರಲಿದೆ. ಗುಡುಗು – ಮಿಂಚು ಸಹಿತ ಬೀರುಗಾಳಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

Continue Reading

ದೇಶ

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Exit Poll 2024: ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Exit Poll 2024
Koo

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಬಹುತೇಕ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿ ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಮೀಕ್ಷೆ ಹೇಗಿದೆ?

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4

Continue Reading

ಕರ್ನಾಟಕ

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Prajwal Revanna Case: ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ (Prajwal Revanna Case) ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಅವರು ಶನಿವಾರವೂ ಪ್ರತ್ಯಕ್ಷವಾಗಿಲ್ಲ. ಭವಾನಿ ರೇವಣ್ಣ (Bhavani Revanna) ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರ ನಿವಾಸದ ಎದುರು ಸತತ 7 ಗಂಟೆ ಕಾದು ವಾಪಸ್‌ ಆಗಿದ್ದಾರೆ.

ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಮನೆ ಬಳಿ ತೆರಳಿದ್ದ ಎಸ್‌ಐಟಿ ಟೀಂನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಇನ್ಸ್‌ಪೆಕ್ಟರ್ ತೆರಳಿದ್ದರು. ಎಷ್ಟು ಕಾದರೂ ಭವಾನಿ ರೇವಣ್ಣ ಬಾರದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆ ನಡುವೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಬಂಧನ ಭೀತಿಯಿಂದ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.

ಇದನ್ನೂ ಓದಿ | Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

ಭವಾನಿ ರೇವಣ್ಣಗೆ ನ್ಯಾಯಾಲಯದ ಬಗ್ಗೆ ಗೌರವವಿದೆ: ವಕೀಲೆ ಸುಮಾ

ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಪರ ವಕೀಲೆ ಸುಮಾ ಮಾತನಾಡಿ, ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಇಲ್ಲ. ಹೆಣ್ಣುಮಕ್ಕಳು ಮೇಡಂ ಪರವಾಗಿ ಕಷ್ಟದಲ್ಲೂ ಇರುತ್ತೇವೆ, ಸುಖದಲ್ಲೂ ಇರುತ್ತೇವೆ. ಆದರೆ ನಾನು ಇಂದು ಬಂದಿದ್ದು ವಕೀಲಳಾಗಿ. ಭವಾನಿ ರೇವಣ್ಣ ಅವರಿಗೆ ಆರೋಗ್ಯ ಸರಿಯಿಲ್ಲ, ಎರಡು ಮಂಡಿ ಆಪರೇಷನ್ ಆಗಿದೆ. ಅವರ ಅಣ್ಣ ಸಾವನ್ನಪ್ಪಿದ್ದು, ಆ ನೋವಿನಲ್ಲೂ ಇದ್ದಾರೆ. ಖಂಡಿತವಾಗಿಯೂ ತನಿಖೆಗೆ ಹಾಜರಾಗುತ್ತಾರೆ. ಕಾನೂನು ಬಗ್ಗೆ ಮೇಡಂಗೆ ಗೌರವವಿದೆ. ಅವರಿಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಆದಷ್ಟು ಬೇಗ ಬರ್ತಾರೆ, ತನಿಖೆ ಎದುರಿಸುತ್ತಾರೆ, ನಿರ್ದೊಷಿಯಾಗಿ ಬರ್ತಾರೆ ಎಂದು ಹೇಳಿದರು.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ4 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ4 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ4 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ5 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ5 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ6 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ6 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ6 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ6 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ7 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು11 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌