Union Budget 2023 : ಮನೆ ಖರೀದಿದಾರರಿಗೆ ಗುಡ್​ ನ್ಯೂಸ್​, ಆವಾಸ್​ ಯೋಜನೆಗೆ 79,000 ಕೋಟಿ ರೂ. ಅನುದಾನ - Vistara News

ಪ್ರಮುಖ ಸುದ್ದಿ

Union Budget 2023 : ಮನೆ ಖರೀದಿದಾರರಿಗೆ ಗುಡ್​ ನ್ಯೂಸ್​, ಆವಾಸ್​ ಯೋಜನೆಗೆ 79,000 ಕೋಟಿ ರೂ. ಅನುದಾನ

ಮನೆ ಖರೀದಿ ಮಾಡುವವರಿಗೆ ಪ್ರಧಾನ ಮಂತ್ರಿ ಆವಾಸ್​ ಯೋಜನೆ ಅನುದಾನ ಹೆಚ್ಚಳ ಮಾಡಲಾಗಿದೆ.

VISTARANEWS.COM


on

PMYS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಹೊಸ ಮನೆ ಕಟ್ಟುವವರಿಗೆ 2022-23ರ ಅವಧಿಯ ಬಜೆಟ್​ನಲ್ಲಿ (Union Budget 2023) ಶುಭ ಸುದ್ದಿ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್​ ಯೋಜನೆಗಾಗಿ 79 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದು ಶೇಕಡಾ 66 ಹೆಚ್ಚಳ ಎಂಬುದಾಗಿ ಹೇಳಿದ್ದಾರೆ.

2022-23ನೇ ಬಜೆಟ್​ನಲ್ಲಿ ನಿರ್ಮಲಾ ಸೀತರಾಮನ್​ ಅವರು ಎಲ್ಲರಿಗೂ ಮನೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ 48 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದರು. ಇದೇ ವೇಳೆ ಅವರು ಇದುವರೆಗೆ 80 ಲಕ್ಷ ಮಂದಿಗೆ ಯೋಜನೆಯ ಲಾಭ ಲಭಿಸಿದೆ ಎಂದು ಹೇಳಿದರು.

ಇದನ್ನೂ ಓದಿ : Union Budget 2023: ನಿರ್ಮಲಾ ಸೀತಾರಾಮನ್‌ ತಂಡದಲ್ಲಿ ಇರುವವರು ಇವರೇ ನೋಡಿ

ಕೇಂದ್ರ ಸರಕಾರ ನೀಡಿರುವ 2022ರ ಸೆಪ್ಟೆಂಬರ್​ 29ರಂದು ನೀಡಿದ ಮಾಹಿತಿ ಪ್ರಕಾರ 2 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ್ವೇ ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಸೋಮವಾರ ಸಂಜೆ 05:27ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 17:55 ವಾರ: ಸೋಮವಾರ
ನಕ್ಷತ್ರ: ಭರಣಿ 10:54 ಯೋಗ: ಗಂಡ 17:53
ಕರಣ: ತೈತುಲ 06:38 ಅಮೃತಕಾಲ: ಬೆಳಗ್ಗೆ 06:17 ರಿಂದ 07:50
ದಿನದ ವಿಶೇಷ: ರಾಮೇಶ್ವರಿ ಜಾತ್ರೆ

ಸೂರ್ಯೋದಯ : 06:05   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 07:40 ರಿಂದ 09:15
ಗುಳಿಕಕಾಲ: ಮಧ್ಯಾಹ್ನ 02:01
ರಿಂದ 03:37
ಯಮಗಂಡಕಾಲ: ಬೆಳಗ್ಗೆ 10:51 ರಿಂದ 12:26

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ:ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ, ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ, ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IND vs SL T20 : ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ, ಸರಣಿ ಕೈವಶ

IND vs SL T20 : ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಂತೆಯೇ ಭಾರತ ರನ್ ಮಾಡಲು ಆರಂಭಿಸಿ 6 ರನ್ ಬಾರಿಸಿದ್ದಾಗ ಮಳೆ ಶುರುವಾಯಿತು. ತುಂಬಾ ಹೊತ್ತು ನಷ್ಟವಾದ ಕಾರಣ ಭಾರತಕ್ಕೆ 8 ಓವರ್​ಗಳಲ್ಲಿ 76 ರನ್ ಸವಾಲು ನೀಡಲಾಯಿತು. ಭಾರತ ಇನ್ನೂ 3 ಎಸೆತ ಬಾಕಿ ಇರುವಾಗ 3 ವಿಕೆಟ್​ ನಷ್ಟಕ್ಕೆ 81 ರನ್ ಬಾರಿಸಿ ಗೆಲುವು ಕಂಡಿತು.

VISTARANEWS.COM


on

IND vs SL T20
Koo

ಪಲ್ಲೆಕೆಲೆ: : ಶ್ರೀಲಂಕಾ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ (IND vs SL T20) ಭಾರತ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದೆ. ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಸೂರ್ಯಕುಮಾರ್ ಯಾದವ್ ಇದರೊಂದಿಗೆ ಭರ್ಜರಿ ಆರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್​ ಕೂಡ ಮೊದಲ ಯಶಸ್ಸು ಸಾಧಿಸಿದ್ದಾರೆ. ಮಳೆಯಿಂದ ಬಾಧಿತವಾತ ಪಂದ್ಯದಲ್ಲಿ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಂತೆಯೇ ಭಾರತ ರನ್ ಮಾಡಲು ಆರಂಭಿಸಿ 6 ರನ್ ಬಾರಿಸಿದ್ದಾಗ ಮಳೆ ಶುರುವಾಯಿತು. ತುಂಬಾ ಹೊತ್ತು ನಷ್ಟವಾದ ಕಾರಣ ಭಾರತಕ್ಕೆ 8 ಓವರ್​ಗಳಲ್ಲಿ 76 ರನ್ ಸವಾಲು ನೀಡಲಾಯಿತು. ಭಾರತ ಇನ್ನೂ 3 ಎಸೆತ ಬಾಕಿ ಇರುವಾಗ 3 ವಿಕೆಟ್​ ನಷ್ಟಕ್ಕೆ 81 ರನ್ ಬಾರಿಸಿ ಗೆಲುವು ಕಂಡಿತು.

ಮೊದಲು ಬ್ಯಾಟ್ ಮಾಡಿದ ಲಂಕಾ ಪವರ್​ ಪ್ಲೇನಲ್ಲಿ 54 ರನ್ ಗಳಿಸಿತು. ಪಥುಮ್ ನಿಸ್ಸಾಂಕಾ ಉತ್ತಮವಾಗಿ ಆಡಿದರು. ಕುಸಾಲ್ ಮೆಂಡಿಸ್ ಅವರ ವಿಕೆಟ್ ಕಳೆದುಕೊಂಡರು. ನಿಸ್ಸಾಂಕಾ 24 ಎಸೆತಗಳಲ್ಲಿ 32 ರನ್ ಗಳಿಸಿ ರವಿ ಬಿಷ್ಣೋಯ್ ಬೌಲಿಂಗ್​ಗೆ ಔಟಾದರು. ಬಳಿಕ ಕುಸಾಲ್ ಪೆರೆರಾ ಅತ್ಯುತ್ತಮ ಪ್ರದರ್ಶನ ನೀಡಿದರು. ಮಧ್ಯಮ ಓವರ್ಗಳಲ್ಲಿ ಇನ್ನಿಂಗ್ಸ್​ಗೆ ವೇಗ ನೀಡಿದ ಅವರು 34 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ ನೊಂದಿಗೆ 53 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 16ನೇ ಓವರ್ನಲ್ಲಿ ಪೆರೆರಾ ಮತ್ತು ಕಮಿಂಡು ಮೆಂಡಿಸ್ ಅವರನ್ನು ಒಂದೇ ಓವರ್​ನಲ್ಲಿ ಔಟ್ ಮಾಡಿದರು.

ಪೆರೆರಾ ಔಟಾದ ನಂತರ ಶ್ರೀಲಂಕಾ ಕೊನೆಯ ನಾಲ್ಕು ಓವರ್ ಗಳಲ್ಲಿ ಕೇವಲ 22 ರನ್ ಗಳಿಸಿತು. ದಸುನ್ ಶನಕಾ ಮತ್ತು ವನಿಂದು ಹಸರಂಗ ಗೋಲ್ಡನ್ ಡಕ್​ ಔಟಾದರ. ಭಾರತದ ಪರ ಬಿಷ್ಣೋಯ್ ತಮ್ಮ 4 ಓವರ್​ಗಳ ಸ್ಪೆಲ್​ನಲ್ಲಿ 3 ವಿಕೆಟ್ ಪಡೆದರು. ಅರ್ಷ್ದೀಪ್ ಸಿಂಗ್ 2 ವಿಕೆಟ್ ಉರುಳಿಸಿದರು.

ಸೂರ್ಯಕುಮಾರ್, ಜೈಸ್ವಾಲ್ ಗೆಲುವು ತಂದುಕೊಟ್ಟರು

ಭಾರತದ ರನ್ ಚೇಸ್ ನ ಮೊದಲ ಓವರ್ ನಲ್ಲಿ ಮಳೆ ಬಂತು. ಆದರೆ ಅಂತಿಮವಾಗಿ ಭಾರತಕ್ಕೆ 8 ಓವರ್ಗಳಲ್ಲಿ 78 ರನ್​ಗಳ ಪರಿಷ್ಕೃತ ಗುರಿ ನೀಡಲಾಯಿತು. ಗಿಲ್​ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಆಡಲು ಬಂದ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ಔಟಾದರು. ಹೀಗಾಗಿ ಭಾರತ ಅವರು ಆರಂಭಿಕ ತೊಂದರೆಯಲ್ಲಿ ಸಿಲುಕಿತು.

ಇದನ್ನೂ ಓದಿ: Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಅಬ್ಬರಿಸಿದರು. ಭಾರತವು ರನ್​ಗಳಿಕೆಯಲ್ಲಿ ಹಿಂದೆ ಬೀಳದಂತೆ ನೋಡಿಕೊಂಡರು. 12 ಎಸೆತಗಳಲ್ಲಿ 26 ರನ್ ಗಳಿಸಿದ ಸೂರ್ಯಕುಮಾರ್ ಮಥೀಶಾ ಪತಿರಾನಾ ಎಸೆತಕ್ಕೆ ಔಟಾದರು. ಜೈಸ್ವಾಲ್ 15 ಎಸೆತಗಳಲ್ಲಿ 30 ರನ್ ಗಳಿಸಿದರು.

ಡೆತ್ ಓವರ್​ಗಳಲ್ಲಿ ಭಾರತಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಹಾರ್ದಿಕ್ ಪಾಂಡ್ಯ ಎಲ್ಲಾ ಪ್ರಯತ್ನ ಮಾಡಿದರು. ಅವರು ಒಂಬತ್ತು ಎಸೆತಗಳಲ್ಲಿ 22 ರನ್ ಗಳಿಸಿ ಔಟಾಗದೆ ಉಳಿದರು.

Continue Reading

ಪ್ರಮುಖ ಸುದ್ದಿ

Women Suicide : ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಲೈವ್​ ವಿಡಿಯೊ ಮಾಡುತ್ತಾ ನೇಣು ಹಾಕಿಕೊಂಡು ಆತ್ಮಹತ್ಯೆ

Women Suicide : ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Women Suicide
Koo

ಬೆಂಗಳೂರು: ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ (Women Suicide) ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.

ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್​ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಮಹಿಳೆಯೊಬ್ಬಳ ಕೊಲೆ (Murder case) ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ರಾಜ್ ಕುಮಾರ್ ಬಂಧಿತ ಆರೋಪಿ ಆಗಿದ್ದಾನೆ.

ಇದನ್ನೂ ಓದಿ: Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

ರಾಜ್‌ಕುಮಾರ್‌ ಊಟ ಕೊಡಿಸುವ ನೆಪದಲ್ಲಿ ಬಸ್ಸಮ್ಮ ಎಂಬಾಕೆಯನ್ನು ಕರೆದೊಯ್ದು ಕೊಲೆ ಮಾಡಿದ್ದ. ಕೊಲೆ ಬಳಿಕ ಪೆಟ್ರೋಲ್ ಹಾಕಿ ಸುಟ್ಟು ರಸ್ತೆ ಬದಿಯಲ್ಲಿ ಶವ ಹೂತಿಟ್ಟು ಎಸ್ಕೇಪ್ ಆಗಿದ್ದ. ಬಸ್ಸಮ್ಮ ಈ ರಾಜಕುಮಾರ್ ಬಳಿ ಚಿನ್ನಾಭರಣವನ್ನು ಅಡವಿಟ್ಟಿದ್ದಳು ಜತೆಗೆ ಹಣವನ್ನು ಕೊಟ್ಟಿದ್ದಳು. ಬಸ್ಸಮ್ಮ ಕೊಟ್ಟ ಚಿನ್ನವನ್ನು ರಾಜುಕುಮಾರ್‌ ಮತ್ತೊಬ್ಬರ ಬಳಿ ಅಡವಿಟ್ಟಿದ್ದ. ಕೆಲ ದಿನಗಳ ಬಳಿಕ ಬಸ್ಸಮ್ಮ, ರಾಜಕುಮಾರ್‌ಗೆ ಚಿನ್ನಾಭರಣ ಹಾಗೂ ಹಣವನ್ನು ನೀಡುವಂತೆ ಕೇಳಿದ್ದಳು.

ಆದರೆ ಬೇರೊಬ್ಬರ ಬಳಿ ಚಿನ್ನ ಅಡವಿಟ್ಟ ಕಾರಣಕ್ಕೆ ರಾಜಕುಮಾರ್‌, ಬಸ್ಸಮ್ಮಳನ್ನು ಕೊಂದು ಮುಗಿಸಲು ಸ್ಕೆಚ್‌ ಹಾಕಿದ್ದ. ಅದರಂತೆ ಜುಲೈ 14 ರಂದು ಮಾರ್ಕೆಟ್‌ನಿಂದ ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಗುರುತು ಸಿಗದಂತೆ ಸುಟ್ಟು ಹಾಕಿ ಎಸ್ಕೇಪ್ ಆಗಿದ್ದ.

ಜಮೀನಿನಲ್ಲಿ ಪತ್ತೆಯಾಗಿದ್ದ ಶವ

ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Found) ಪತ್ತೆಯಾಗಿತ್ತು. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Continue Reading

ಪ್ರಮುಖ ಸುದ್ದಿ

HD kumaraswamy : ಆಸ್ಪತ್ರೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್

HD kumaraswamy : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು.

VISTARANEWS.COM


on

HD kumaraswamy
Koo

ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸಾಗಿದ್ದಾರೆ. ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು.

ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.

ಯಾರಿಗೂ ಆತಂಕ ಬೇಡ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು.

ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು ಅವರು.

ಇದನ್ನೂ ಓದಿ: Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ. 92 ವರ್ಷಗಳ ದೇವೇಗೌಡರು ನಾಳೆಯ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ‌ ಇರಬೇಕು ಎಂದು ಕೇಂದ್ರ ಸಚಿವರು ಹೇಳಿದರು.

ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದ ಅವರು; ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಇದ್ದರು.

Continue Reading
Advertisement
Nonstick Pans
ಆರೋಗ್ಯ34 mins ago

Nonstick Pans: ನಾನ್‌ಸ್ಟಿಕ್‌ ಪಾತ್ರೆಗಳ ತಪ್ಪು ಬಳಕೆಯಿಂದಲೂ ಜ್ವರ ಬಾಧಿಸುತ್ತದೆ!

karnataka Weather Forecast
ಮಳೆ34 mins ago

Karnataka Weather : ಒಳನಾಡಿನಲ್ಲಿ ಬ್ರೇಕ್‌ ಕೊಟ್ಟು, ಕರಾವಳಿ- ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ್ವೇ ಬೇಡ

IND vs SL T20
ಪ್ರಮುಖ ಸುದ್ದಿ6 hours ago

IND vs SL T20 : ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ, ಸರಣಿ ಕೈವಶ

Women Suicide
ಪ್ರಮುಖ ಸುದ್ದಿ6 hours ago

Women Suicide : ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಲೈವ್​ ವಿಡಿಯೊ ಮಾಡುತ್ತಾ ನೇಣು ಹಾಕಿಕೊಂಡು ಆತ್ಮಹತ್ಯೆ

HD kumaraswamy
ಪ್ರಮುಖ ಸುದ್ದಿ7 hours ago

HD kumaraswamy : ಆಸ್ಪತ್ರೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್

Viral Video
ಪ್ರಮುಖ ಸುದ್ದಿ7 hours ago

Viral Video : 25 ವರ್ಷದ ಕನ್ಯೆಯನ್ನು ಮದುವೆಯಾದ 70 ವರ್ಷದ ಮುದುಕ ಕಲೀಮುಲ್ಲಾ!

Tamil Nadu News
ದೇಶ7 hours ago

Tamil Nadu News : ತಮಿಳುನಾಡಿನಲ್ಲಿ 24 ಗಂಟೆಯೊಳಗೆ ಇಬ್ಬರು ಪ್ರತಿಪಕ್ಷ ನಾಯಕರ ಕಗ್ಗೊಲೆ

School Teacher
ಪ್ರಮುಖ ಸುದ್ದಿ8 hours ago

School Teacher : ಶಾಲಾ ಕೊಠಡಿಯಲ್ಲೇ ಚಾಪೆ ಹಾಸಿ, ಮಕ್ಕಳಿಗೆ ಗಾಳಿ ಹಾಕಲು ಹೇಳಿ ಗಡದ್ದಾಗಿ ನಿದ್ದೆ ಹೊಡೆದ ಟೀಚರ್​!

ಪ್ರಮುಖ ಸುದ್ದಿ8 hours ago

Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ12 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ14 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ16 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ17 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ1 day ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌