ಲ್ಯಾಟಿನ್​ ಅಮೆರಿಕದಲ್ಲೂ ಹಾರುತ್ತಿದೆ ಚೀನಾದ ಬೇಹುಗಾರಿಕಾ ಬಲೂನ್​​; ಅಮೆರಿಕದತ್ತ ಬರುತ್ತಿಲ್ಲ ಎಂದ ಪೆಂಟಗನ್​ - Vistara News

ವಿದೇಶ

ಲ್ಯಾಟಿನ್​ ಅಮೆರಿಕದಲ್ಲೂ ಹಾರುತ್ತಿದೆ ಚೀನಾದ ಬೇಹುಗಾರಿಕಾ ಬಲೂನ್​​; ಅಮೆರಿಕದತ್ತ ಬರುತ್ತಿಲ್ಲ ಎಂದ ಪೆಂಟಗನ್​

ಚೀನಾ-ಅಮೆರಿಕ ಆಂತರಿಕ ಸಮರ ನಿನ್ನೆಮೊನ್ನೆಯದಲ್ಲ. ಯಾವಾಗಲೂ ಕುತಂತ್ರ ಮಾರ್ಗದಲ್ಲೇ ಹೋರಾಟ ನಡೆಸುವ ಚೀನಾ ಈ ಸಲ ಅಮೆರಿಕದ ಮೇಲ್ಭಾಗದಲ್ಲಿ ಬೇಹುಗಾರಿಕಾ ಬಲೂನ್​ ಹಾರಿಸುತ್ತಿದೆ ಎನ್ನಲಾಗಿದೆ.

VISTARANEWS.COM


on

China Spy Balloon Detected in Latin America
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮೆರಿಕದ ಮೊಂಟಾನಾದಲ್ಲಿರುವ ಮಾಲ್ಮ್​ಸ್ಟ್ರೋಮ್​ ಏರ್​ಫೋರ್ಸ್​​​ನಲ್ಲಿರುವ ಅಣ್ವಸ್ತ್ರ ಕ್ಷಿಪಣಿ ಉಡಾವಣಾ ನೆಲೆಯ ಮೇಲ್ಭಾಗದಲ್ಲಿ ಚೀನಾದ ಪತ್ತೆದಾರಿ ಬಲೂನ್​ವೊಂದು ಹಾರಾಡುತ್ತಿರುವ ಬಗ್ಗೆ ಅಮೆರಿಕದ ರಕ್ಷಣಾ ವಿಭಾಗ ಪೆಂಟಗನ್​ ಫೆ.2ರಂದು ಹೇಳಿತ್ತು. ಅದರ ಬೆನ್ನಲ್ಲೇ ಈಗ ಲ್ಯಾಟಿನ್​ ಅಮೆರಿಕ ಪ್ರಾಂತ್ಯದ ಆಕಾಶದಲ್ಲೂ ಚೀನಾದ ಪತ್ತೇದಾರಿ ಬಲೂನ್​ ಹಾರಾಡುತ್ತಿರುವುದು ವರದಿಯಾಗಿದೆ.

ಲ್ಯಾಟಿನ್ ಅಮೆರಿಕ ಪ್ರಾಂತ್ಯದ ಆಕಾಶದಲ್ಲಿ ಬಲೂನ್​ ಒಂದು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಅದನ್ನೂ ಕೂಡ ಟ್ರ್ಯಾಕ್​ ಮಾಡಲು ಪ್ರಯತ್ನಿಸಲಾಗುತ್ತಿದೆ. ಆದರೆ ಈ ಬಲೂನ್​ ಯಾವ ದೇಶದ ಮೇಲ್ಭಾಗದಲ್ಲಿದೆ ಎಂದು ಗೊತ್ತಾಗಿಲ್ಲ ಎಂದು ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಬ್ರಿಗ್ ಜನರಲ್ ಪ್ಯಾಟ್ರಿಕ್ ರೈಡರ್ ತಿಳಿಸಿದ್ದಾರೆ. ಹಾಗೇ, ಲ್ಯಾಟಿನ್​ ಅಮೆರಿಕ ಆಕಾಶದಲ್ಲಿ ಕಾಣಿಸಿಕೊಂಡ ಚೀನಾ ಬಲೂನ್​, ಯುನೈಟೆಡ್​ ಸ್ಟೇಟ್ಸ್​​ನತ್ತ ಹಾರಿ ಬರುತ್ತಿಲ್ಲ ಎಂಬುದೂ ಸ್ಪಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪ್ಯಾಟ್ರಿಕ್​ ರೈಡರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೇಹುಗಾರಿಕೆಗಾಗಿ ಅಮೆರಿಕಕ್ಕೆ ಬಲೂನ್​ ಬಿಟ್ಟ ಚೀನಾ; ಹೊಡೆದುರುಳಿಸಲು ಹಿಂದೇಟು ಹಾಕುತ್ತಿರುವ ಪೆಂಟಗನ್​!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

Kenya Violence: ತೆರಿಗೆಗಳನ್ನು ಹೆಚ್ಚಿಸಲು ಪ್ರಸ್ತಾಪಿಸುವ ವಿವಾದಾತ್ಮಕ ಮಸೂದೆಯನ್ನು ಕೀನ್ಯಾ ಸಂಸತ್ತಿನಲ್ಲಿ ಅಂಗೀಕರಿಸಿದ ನಂತರ ದೇಶದಲ್ಲಿ ಹಿಂಸೆ ಭುಗಿಲೆದ್ದಿದ್ದು, ನೈರೋಬಿಯಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯರಿಗೆ ಎಚ್ಚರಿಕೆ ನೀಡಿದೆ. ಕ್ಷಣ ಕ್ಷಣದ ಮಾಹಿತಿಗಾಗಿ ಸ್ಥಳೀಯ ನ್ಯೂಸ್‌ ಚಾನಲ್‌ ನೋಡುವಂತೆ ಮತ್ತು ವೆಬ್‌ಸೈಟ್‌, ಸೋಷಿಯಲ್‌ ಮೀಡಿಯಾ ಗಮನಿಸುವಂತೆ ಸಲಹೆ ನೀಡಿದೆ. ಸುಮಾರು 20,000 ಭಾರತೀಯರು ಪ್ರಸ್ತುತ ಕೀನ್ಯಾದಲ್ಲಿ ವಾಸಿಸುತ್ತಿದ್ದಾರೆ.

VISTARANEWS.COM


on

Kenya Violence
Koo

ನೈರೋಬಿ: ತೆರಿಗೆಗಳನ್ನು ಹೆಚ್ಚಿಸಲು ಪ್ರಸ್ತಾಪಿಸುವ ವಿವಾದಾತ್ಮಕ ಮಸೂದೆಯನ್ನು ಕೀನ್ಯಾ ಸಂಸತ್ತಿನಲ್ಲಿ ಅಂಗೀಕರಿಸಿದ ನಂತರ ದೇಶದಲ್ಲಿ ಹಿಂಸೆ ಭುಗಿಲೆದ್ದಿದ್ದು (Kenya Violence), ನೈರೋಬಿಯಲ್ಲಿರುವ ಭಾರತೀಯ ಹೈಕಮಿಷನ್ (Indian high commission) ಭಾರತೀಯರಿಗೆ ಎಚ್ಚರಿಕೆ ನೀಡಿದೆ.

“ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೀನ್ಯಾದಲ್ಲಿರುವ ಎಲ್ಲ ಭಾರತೀಯರಿಗೆ ಅತ್ಯಂತ ಎಚ್ಚರಿಕೆ ವಹಿಸಲು ಸೂಚಿಸುತ್ತಿದ್ದೇವೆ. ಅನಿವಾರ್ಯವಲ್ಲದ ಹೊರತಾಗಿ ಯಾರೂ ಓಡಾಡಬೇಡಿ. ಪರಿಸ್ಥಿತಿ ತಿಳಿಯಾಗುವವರೆಗೆ ಪ್ರತಿಭಟನೆ ಮತ್ತು ಹಿಂಸಾಚಾರದಿಂದ ಬಾಧಿತವಾದ ಪ್ರದೇಶಗಳಿಂದ ದೂರವಿರಿʼʼ ಎಂದು ಹೈ ಕಮಿಷನ್ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಭಾರತೀಯರಿಗೆ ಮನವಿ ಮಾಡಿದೆ.

ಜತೆಗೆ ಕ್ಷಣ ಕ್ಷಣದ ಮಾಹಿತಿಗಾಗಿ ಸ್ಥಳೀಯ ನ್ಯೂಸ್‌ ಚಾನಲ್‌ ನೋಡುವಂತೆ ಮತ್ತು ವೆಬ್‌ಸೈಟ್‌, ಸೋಷಿಯಲ್‌ ಮೀಡಿಯಾ ಗಮನಿಸುವಂತೆ ಸಲಹೆ ನೀಡಿದೆ. ಸುಮಾರು 20,000 ಭಾರತೀಯರು ಪ್ರಸ್ತುತ ಕೀನ್ಯಾದಲ್ಲಿ ವಾಸವಾಗಿದ್ದಾರೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ನೈರೋಬಿಯ ಸಂಸತ್ ಕಟ್ಟಡಕ್ಕೆ ಪ್ರವೇಶಿಸಲು ಪ್ರಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಒಂದು ದಿನದ ನಂತರ ಹೈಕಮಿಷನ್ ಈ ಹೇಳಿಕೆ ನೀಡಿದೆ. ರೊಚ್ಚಿಗೆದ್ದ ಪ್ರತಿಭಟನಾಕಾರರು ಸಂಸತ್ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದ್ದರು. ಅಶ್ರವಾಯು ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಅವರನ್ನು ಚದುರಿಸಲಾಯಿತು. ಹಿಂಸಾಚಾರವನ್ನು ಪ್ರಚೋದಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷ ವಿಲಿಯಂ ರುಟೊ ಎಚ್ಚರಿಕೆ ನೀಡಿದ್ದಾರೆ.

13 ಮಂದಿ ಸಾವು

ಇನ್ನು ಕೀನ್ಯಾದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಈಗಾಗಲೇ 13 ಮಂದಿ ಬಲಿಯಾಗಿದ್ದಾರೆ. ಮಂಗಳವಾರ ಕೀನ್ಯಾ ಸಂಸತ್ತಿಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಅಶ್ರುವಾಯು ಮತ್ತು ಜಲ ಫಿರಂಗಿ ಬಳಸಿ ಜನರನ್ನು ಚದುರಿಸಲು ವಿಫಲವಾದ ನಂತರ ಪೊಲೀಸರು ಅನಿವಾರ್ಯವಾಗಿ ಗುಂಡು ಹಾರಿಸಿದ್ದರು.

ಕೋವಿಡ್-19 ಸಾಂಕ್ರಾಮಿಕ ರೋಗ, ಉಕ್ರೇನ್‌ನಲ್ಲಿನ ಯುದ್ಧ, ಸತತ ಎರಡು ವರ್ಷಗಳ ಬರಗಾಲ ಮತ್ತು ಕರೆನ್ಸಿಯ ಮೌಲ್ಯ ಕುಸಿತದಿಂದಾಗಿ ಉಂಟಾದ ಹಲವಾರು ಆರ್ಥಿಕ ಆಘಾತಗಳನ್ನು ನಿಭಾಯಿಸಲು ಸಾಧ್ಯವಾಗದೆ ಕೀನ್ಯಾದವರು ಹೆಣಗಾಡುತ್ತಿದ್ದಾರೆ. ಈ ಮಧ್ಯೆ ತೆರಿಗೆಗಳನ್ನು ಹೆಚ್ಚಿಸಲು ಪ್ರಸ್ತಾಪ ಅವರನ್ನು ರೊಚ್ಚಿಗೆಬ್ಬಿಸಿದ್ದು, ಅಧ್ಯಕ್ಷ ವಿಲಿಯಂ ರುಟೊ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರವು ಈಗಾಗಲೇ ಕೆಲವು ರಿಯಾಯಿತಿಗಳನ್ನು ನೀಡಿದ್ದು, ಬ್ರೆಡ್, ಅಡುಗೆ ಎಣ್ಣೆ, ಕಾರು ಮಾಲೀಕತ್ವ ಮತ್ತು ಹಣಕಾಸಿನ ವಹಿವಾಟುಗಳ ಮೇಲಿನ ಪ್ರಸ್ತಾವಿತ ಹೊಸ ತೆರಿಗೆಗಳನ್ನು ರದ್ದುಗೊಳಿಸುವ ಭರವಸೆ ನೀಡಿದೆ. ಅದಾಗ್ಯೂ ಪ್ರತಿಭಟನೆಯ ಕಿಚ್ಚು ಕಡಿಮೆಯಾಗಿಲ್ಲ.

ಇದನ್ನೂ ಓದಿ: Vijay Mallya: ದಿವಾಳಿಯೆಂದು ಪರಾರಿಯಾಗಿದ್ದ ವಿಜಯ್ ಮಲ್ಯಗೆ ಲಂಡನ್‌ನಲ್ಲಿದೆ 117 ಕೋಟಿಯ ಬಂಗಲೆ!

”ಕೀನ್ಯಾದಾದ್ಯಂತ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳಿಂದ ಉಂಟಾದ ಭದ್ರತಾ ತುರ್ತುಸ್ಥಿತಿಯನ್ನು ನಿಯಂತ್ರಿಸಲು ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆʼʼ ಎಂದು ಕ್ಯಾಬಿನೆಟ್ ಕಾರ್ಯದರ್ಶಿ ಅಡೆನ್ ಬೇರ್ ಡ್ಯುಯಲ್ ತಿಳಿಸಿದ್ದಾರೆ. ಹಿಂಸಾಚಾರದ ಬಗ್ಗೆ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳ ಕಳವಳ ವ್ಯಕ್ತಪಡಿಸಿವೆ. ಕೆನಡಾ, ಜರ್ಮನಿ, ಬ್ರಿಟನ್ ಮತ್ತು ಅಮೆರಿಕ ಸೇರಿದಂತೆ 13 ದೇಶಗಳ ರಾಯಭಾರ ಕಚೇರಿಗಳು ಮತ್ತು ರಾಜತಾಂತ್ರಿಕ ನಿಯೋಗಗಳು ಜಂಟಿ ಹೇಳಿಕೆಯಲ್ಲಿ ಆಘಾತ ವ್ಯಕ್ತಪಡಿಸಿವೆ.

Continue Reading

ವಿದೇಶ

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿಯ ಪ್ರಕರಣ ನಡೆದಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉತ್ತರ ಲಾಸ್ ವೇಗಾಸ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎರಡು ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ 13 ವರ್ಷದ ಬಾಲಕಿ ಗಂಭೀರ ಗಾಯಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

VISTARANEWS.COM


on

Mass Shooting
Koo

ವಾಷಿಂಗ್ಟನ್‌: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ (Mass Shooting)ಯ ಪ್ರಕರಣ ನಡೆದಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉತ್ತರ ಲಾಸ್ ವೇಗಾಸ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎರಡು ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೃತ್ಯ ಎಸಗಿದವನನ್ನು 47 ವರ್ಷದ ಎರಿಕ್ ಆಡಮ್ಸ್ (Eric Adams) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 13 ವರ್ಷದ ಬಾಲಕಿ ಗಂಭೀರ ಗಾಯಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ.

ಘಟನೆ ವಿವರ

ಸೋಮವಾರ ರಾತ್ರಿ ಕಾಸಾ ನಾರ್ಟೆ ಡ್ರೈವ್‌ನ ಅಪಾರ್ಟ್‌ಮೆಂಟ್‌ ಸಂಕೀರ್ಣದಲ್ಲಿ ಗುಂಡಿನ ದಾಳಿ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಕರೆಯೊಂದು ಬಂದಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆ ಗುಂಡೇಟಿನಿಂದ ಗಾಯಗೊಂಡ 40 ಮತ್ತು 50 ವರ್ಷ ಆಸುಪಾಸಿನ ಇಬ್ಬರು ಮಹಿಳೆಯರು ಕಂಡು ಬಂದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ʼʼಪಕ್ಕದ ಅಪಾರ್ಟ್‌ಮೆಂಟ್‌ ಆವರಣದಲ್ಲಿ ಇನ್ನೂ ಇಬ್ಬರ ಶವ ಪತ್ತೆಯಾಗಿದೆ. ಇದರಲ್ಲಿ 20-30 ವರ್ಷ ಆಸುಪಾಸಿನ ಮಹಿಳೆ ಮತ್ತು ಪುರುಷ ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ 13 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆʼʼ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರಿಗೆ ಕೃತ್ಯ ಎಸಗಿರುವುದು ಆಡಮ್ಸ್ ಎನ್ನುವ ವಿಚಾರ ತಿಳಿದು ಬಂತು ಮತ್ತು ಆತನ ಪತ್ತೆಗಾಗಿ ಯೋಧ ಕಾರ್ಯ ಆರಂಭಿಸಿದರು. ಕೊನೆಗೆ ಆತನನ್ನು ಸುತ್ತುವರಿದ ಪೊಲೀಸರು ಬಂದೂಕು ಕೆಳಗಿಳಿಸುವಂತೆ ಸೂಚನೆ ನೀಡಿದರು. ಆದರೆ ಆತ ಇದನ್ನು ನಿರ್ಲಕ್ಷಿಸಿ ಸ್ವತಃ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಸಿಎನ್‌ಎನ್‌ ತಿಳಿಸಿದೆ. ಈಸ್ಟ್ ಲೇಕ್ ಮೀಡ್ ಬೌಲೆವಾರ್ಡ್‌ನಲ್ಲಿ ವ್ಯಾಪಾರಿಯಾಗಿರುವ ಆಡಮ್ಸ್ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mass Shooting: ಗುಂಡಿನ ದಾಳಿ ನಡೆಸಿದ ಬಂಧೂಕುದಾರಿಯನ್ನೇ ನೆಲಕ್ಕೆ ಕೆಡವಿದರು; ವಿಡಿಯೊ ಇಲ್ಲಿದೆ

ಹಿಂದೆಯೂ ನಡೆದಿತ್ತು

ಅಮೆರಿಕದ ಮೈನ್‌ ಪ್ರದೇಶದ ಲೆವಿಸ್ಟನ್‌ ಎಂಬಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ನಡೆಸಿದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದರು. ಸುಮಾರು 60 ಜನರು ಗಾಯಗೊಂಡಿದ್ದರು. ಈ ವೇಳೆ ಬಾರ್‌ ಮತ್ತು ರೆಸ್ಟೋರೆಂಟ್‌ನ ಎರಡು ಕಡೆ ದಾಳಿ ನಡೆದಿತ್ತು. ಬಂದೂಕು ಸಂಸ್ಕೃತಿ ವ್ಯಾಪಕವಾಗಿರುವ ಅಮೆರಿಕದಲ್ಲಿ ಕಳೆದ ವರ್ಷ 500ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿ ನಡೆದಿತ್ತು.

ರಷ್ಯಾದ ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಬಂಧೂಕುದಾರಿಗಳು

ಮಾಸ್ಕೋ: ಈ ಮಧ್ಯೆ ರಷ್ಯಾದ ಉತ್ತರ ಕಾಕಸಸ್ ಪ್ರದೇಶದ ಡಾಗೆಸ್ತಾನ್‌ನಲ್ಲಿ ಭಾನುವಾರ ಅಪರಿಚಿತ ಬಂಧೂಕುದಾರಿಗಳು ಅಪ್ರಚೋದಿತವಾಗಿ ಎರಡು ಚರ್ಚ್‌ ಮತ್ತು ಪೊಲೀಸ್ ಪೋಸ್ಟ್ ಮೇಲೆ ಗುಂಡು ಹಾರಿಸಿದ್ದು, ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ದಾಳಿಯ ಹಿಂದೆ ಭಯೋತ್ಪಾದಕರ ಕೈವಾಡದ ಶಂಕೆ ವ್ಯಕ್ತವಾಗಿದೆ.

Continue Reading

ವಿದೇಶ

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

Sunita Williams: ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ತಂಡ ಆರಂಭದಲ್ಲಿ ಜೂನ್ 14 ಕ್ಕೆ ವಾಪಸಾಗುತ್ತದೆ ಎಂದು ಹೇಳಲಾಗಿತ್ತು. ನಂತರ ಜೂನ್ 26ಕ್ಕೆ ಮುಂದೂಡಲಾಯಿತು. ಆದಾಗ್ಯೂ, ನಿಲ್ದಾಣವು ಎರಡು ಯೋಜಿತ ನಡಿಗೆಗಳನ್ನು ಜೂನ್ 24 ರಂದು ಮತ್ತು ಇನ್ನೊಂದು ಜುಲೈ 2 ರಂದು ನಡೆಯಬೇಕಾಗಿರುವುದರಿಂದ ಯೋಜನೆಯನ್ನು ಬದಲಾಯಿಸಲಾಗಿದೆ. ನಾವು ನಮ್ಮ ಸಮಯವನ್ನು ತೆಗೆದುಕೊಳ್ಳುತ್ತಿದ್ದೇವೆ ಮತ್ತು ನಮ್ಮ ಸ್ಟ್ಯಾಂಡರ್ಡ್ ಮಿಷನ್ ಮ್ಯಾನೇಜ್ಮೆಂಟ್ ತಂಡದ ಪ್ರಕ್ರಿಯೆಯನ್ನು ಅನುಸರಿಸುತ್ತಿದ್ದೇವೆ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್:‌ ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಮತ್ತು ಅವರ ತಂಡ ಬಾಹ್ಯಾಕಾಶದಲ್ಲೇ ಸಿಲುಕಿದ್ದಾರೆ. ತಾಂತ್ರಿಕ ಸಮಸ್ಯೆಯಿಂದಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಿಂದ ಭೂಮಿಗೆ ಮರಳಬೇಕಿದ್ದ ಬೋಯಿಂಗ್ ಸ್ಟಾರ್‌ಲೈನರ್(Boeing Starliner) ಅನ್ನು ತಾಂತ್ರಿಕ ಸಮಸ್ಯೆ ಕಾರಣ ನಾಸಾ ಮತ್ತೆ ಮುಂದೂಡಿದೆ. ಹೀಗಾಗಿಯೇ ಸುನೀತಾ ಭೂಮಿಗೆ ಮರಳುವುದು ತಡವಾಗಿದೆ.

ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ತಂಡ ಆರಂಭದಲ್ಲಿ ಜೂನ್ 14 ಕ್ಕೆ ವಾಪಸಾಗುತ್ತದೆ ಎಂದು ಹೇಳಲಾಗಿತ್ತು. ನಂತರ ಜೂನ್ 26ಕ್ಕೆ ಮುಂದೂಡಲಾಯಿತು. ಆದಾಗ್ಯೂ, ನಿಲ್ದಾಣವು ಎರಡು ಯೋಜಿತ ನಡಿಗೆಗಳನ್ನು ಜೂನ್ 24 ರಂದು ಮತ್ತು ಇನ್ನೊಂದು ಜುಲೈ 2 ರಂದು ನಡೆಯಬೇಕಾಗಿರುವುದರಿಂದ ಯೋಜನೆಯನ್ನು ಬದಲಾಯಿಸಲಾಗಿದೆ. ನಾವು ನಮ್ಮ ಸಮಯವನ್ನು ತೆಗೆದುಕೊಳ್ಳುತ್ತಿದ್ದೇವೆ ಮತ್ತು ನಮ್ಮ ಸ್ಟ್ಯಾಂಡರ್ಡ್ ಮಿಷನ್ ಮ್ಯಾನೇಜ್ಮೆಂಟ್ ತಂಡದ ಪ್ರಕ್ರಿಯೆಯನ್ನು ಅನುಸರಿಸುತ್ತಿದ್ದೇವೆ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದ್ದಾರೆ.

ಇನ್ನು ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಕೇವಲ 27ದಿನಗಳ ಇಂಧನ ಹೊಂದಿದ್ದು, ಅಷ್ಟರೊಳಗೆ ತಾಂತ್ರಿಕ ಸಮಸ್ಯೆ ನಿವಾರಿಸಬೇಕಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಜೂನ್‌ 6 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಇಳಿದಿತ್ತು. ಈ ವೇಳೆ ಸುನೀತಾ ವಿಲಿಯಮ್ಸ್‌ ಅವರು ಇತರ ಏಳು ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಜತೆಗೆ ಡ್ಯಾನ್ಸ್‌ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ (Viral Video) ಆಗಿತ್ತು.

ಐಎಸ್ಎಸ್‌ನ ಸಂಪ್ರದಾಯದಂತೆ ಗಂಟೆ ಬಾರಿಸುವ ಮೂಲಕ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸ್ವಾಗತಿಸಲಾಯಿತು. ಡ್ಯಾನ್ಸ್‌ ಮಾಡುತ್ತಲೇ ಅವರು ಕಾಲಿಟ್ಟರು. ಸುನೀತಾ ವಿಲಿಯಮ್ಸ್ ʼಡ್ಯಾನ್ಸ್ ಪಾರ್ಟಿʼ ಬಗ್ಗೆ ಮಾತನಾಡುತ್ತಾ, ತಮ್ಮ ಸಿಬ್ಬಂದಿಯನ್ನು ʼಮತ್ತೊಂದು ಕುಟುಂಬʼ ಎಂದು ಕರೆದಿದ್ದಾರೆ. ಅಂತಹ ದೊಡ್ಡ ಸ್ವಾಗತಕ್ಕಾಗಿ ಧನ್ಯವಾದ ಅರ್ಪಿಸಿದರು.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಉಡಾವಣೆಯಾದ ಸುಮಾರು 26 ಗಂಟೆಗಳ ನಂತರ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಲ್ಲಿ ಇಳಿಯಿತು. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶದಲ್ಲಿ ಒಂದು ವಾರ ಕಳೆಯಲಿದ್ದಾರೆ ಮತ್ತು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು.

ಇದನ್ನೂ ಓದಿ: Hajj Pilgrims: 98 ಭಾರತೀಯ ಹಜ್‌ ಯಾತ್ರಿಕರು ಸಾವು- ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ

Continue Reading

ವಿದೇಶ

Vijay Mallya: ದಿವಾಳಿಯೆಂದು ಪರಾರಿಯಾಗಿದ್ದ ವಿಜಯ್ ಮಲ್ಯಗೆ ಲಂಡನ್‌ನಲ್ಲಿದೆ 117 ಕೋಟಿಯ ಬಂಗಲೆ!

ಸಾಲ ಮಾಡಿ ವಂಚಿಸಿ ಭಾರತದಿಂದ ಓಡಿ ಹೋಗಿರುವ ಉದ್ಯಮಿ ವಿಜಯ ಮಲ್ಯ (Vijay Mallya) ಅವರು ಯುಕೆಯಲ್ಲಿ 14 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 117 ಕೋಟಿ ಬೆಲೆ ಬಾಳುವ ಎಸ್ಟೇಟ್ ಅನ್ನು ಭಾರತದಿಂದ ಓಡಿ ಹೋಗುವ ಕೆಲವು ತಿಂಗಳ ಮೊದಲು ಖರೀದಿ ಮಾಡಿದ್ದು, ಇದು ಹೇಗಿದೆ ಗೊತ್ತೇ? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Vijay Mallya
Koo

ಸಾಲ ಮಾಡಿ ಭಾರತದಿಂದ (india) ಓಡಿ ಹೋಗಿರುವ ಉದ್ಯಮಿ (businessman) ವಿಜಯ ಮಲ್ಯ (Vijay Mallya) ಅವರ ಪುತ್ರ ಸಿದ್ದಾರ್ಥ್ ಮಲ್ಯ (Siddharth Mallya ) ಮತ್ತು ಜಾಸ್ಮಿನ್ (Jasmine) ವಿವಾಹ ಕ್ರಿಶ್ಚಿಯನ್ ಸಂಪ್ರದಾಯದಂತೆ ಇತ್ತೀಚೆಗೆ ಲಂಡನ್ ನಲ್ಲಿರುವ (london) ವಿಜಯ ಮಲ್ಯ ಅವರ 14 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 117 ಕೋಟಿ ಬೆಲೆ ಬಾಳುವ ಭವನದಲ್ಲಿ ಅದ್ಧೂರಿಯಾಗಿ ನೆರವೇರಿದೆ. ವಿವಾಹಕ್ಕಿಂತ ಹೆಚ್ಚಾಗಿ ಮಲ್ಯ ಅವರ ಎಸ್ಟೇಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಪ್ರಾರಂಭವಾಗಿದೆ.

ಹರ್ಟ್‌ಫೋರ್ಡ್‌ಶೈರ್‌ನ (Hertfordshire) ಟೆವಿನ್‌ನ ಸ್ಲೀಪಿ ಹಳ್ಳಿಯ ಲೇಡಿವಾಕ್ ಸಿದ್ಧಾರ್ಥ ಮಲ್ಯ ಮತ್ತು ಜಾಸ್ಮಿನ್‌ ಅವರ ವಿವಾಹಕ್ಕೆ ಸಾಕ್ಷಿಯಾಯಿತು. ವಿಸ್ತಾರವಾದ ಲೇಡಿವಾಕ್ ಎಸ್ಟೇಟ್ ಅನ್ನು ವಿಜಯ್ ಮಲ್ಯ ಅವರು ಭಾರತದಿಂದ ಯುಕೆಗೆ ಪಲಾಯನ ಮಾಡುವ ಕೆಲವೇ ತಿಂಗಳುಗಳ ಮೊದಲು 2015ರಲ್ಲಿ ಖರೀದಿಸಿದ್ದರು.

68 ವರ್ಷದ ಮಲ್ಟಿ ಮಿಲಿಯನೇರ್ ವಿಜಯ್‌ ಮಲ್ಯ ಪ್ರಸ್ತುತ ಯುಕೆಯಲ್ಲಿದ್ದಾರೆ. 900 ಕೋಟಿಗೂ ಹೆಚ್ಚು ಸಾಲ ವಂಚನೆ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದಾರೆ. ಇಡಿ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಈ ಬಗ್ಗೆ ತನಿಖೆ ನಡೆಸುತ್ತಿದೆ.


ವಿಜಯ್ ಮಲ್ಯ ಅವರು ಎಫ್1 ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್ ಅವರ ತಂದೆ ಆಂಥೋನಿ ಹ್ಯಾಮಿಲ್ಟನ್ ಅವರಿಂದ ಹರ್ಟ್‌ಫೋರ್ಡ್‌ಶೈರ್‌ನಲ್ಲಿರುವ ಲೇಡಿವಾಕ್ ಎಸ್ಟೇಟ್ ಅನ್ನು ಖರೀದಿಸಿದ್ದರು. 2021ರ ರೆಡಿಫ್ ವರದಿಯ ಪ್ರಕಾರ ಸ್ವ-ಘೋಷಿತ ‘ಕಿಂಗ್ ಆಫ್ ಗುಡ್ ಟೈಮ್ಸ್’ ಒಡೆತನದ ಎಲ್ಲಾ ಲಕ್ಷಣಗಳನ್ನು ಈ ಆಸ್ತಿ ಹೊಂದಿದೆ.

ಇಲ್ಲಿರುವ ದೊಡ್ಡ ನಿವಾಸವು 30 ಎಕರೆ ಭೂಮಿಯಲ್ಲಿದೆ. ಮೂರು-ಮನೆಗಳ ಎಸ್ಟೇಟ್ ಅನೇಕ ಔಟ್‌ಹೌಸ್‌ಗಳು, ಈಜುಕೊಳಗಳು, ಕಾರಂಜಿಗಳು ಮತ್ತು ಟೆನ್ನಿಸ್ ಕೋರ್ಟ್‌ಗಳನ್ನು ಹೊಂದಿದೆ. ಜೊತೆಗೆ ಮಲ್ಯ ಅವರ ದುಬಾರಿ ಕಾರುಗಳ ದೊಡ್ಡ ಫ್ಲೀಟ್ ಅನ್ನು ನಿರ್ವಹಿಸಲು ಸಮರ್ಥವಾಗಿರುವ ಗ್ಯಾರೇಜ್ ಅನ್ನು ಒಳಗೊಂಡಿದೆ.


ಸಿದ್ಧಾರ್ಥ ಮಲ್ಯ ಮತ್ತು ಜಾಸ್ಮಿನ್ ಅವರ ವಿವಾಹದಲ್ಲಿ ಅತಿಥಿಯೊಬ್ಬರು ಪೋಸ್ಟ್ ಮಾಡಿದ ದೃಶ್ಯಗಳು ಮದುವೆಗೆ ಅತಿಥಿಗಳಿಂದ ತುಂಬಿರುವ ಹರ್ಟ್‌ಫೋರ್ಡ್‌ಶೈರ್ ಭವನವನ್ನು ತೋರಿಸುತ್ತವೆ. ಇದರಲ್ಲಿ ಅಂದಗೊಳಿಸಲಾದ ಹುಲ್ಲುಹಾಸು ಮತ್ತು ಸಸ್ಯಾಲಂಕಾರವನ್ನು ಈ ಬೃಹತ್ ನಿವಾಸವು ಒಳಗೊಂಡಿದೆ.


ಹರ್ಟ್‌ಫೋರ್ಡ್‌ಶೈರ್‌ನಲ್ಲಿ ಲೇಡಿವಾಕ್

ವಿಜಯ್ ಮಲ್ಯ ಲೇಡಿವಾಕ್ ಎಸ್ಟೇಟ್ ಅನ್ನು 11.5 ಮಿಲಿಯನ್ ಪೌಂಡ್ ಗೆ ಖರೀದಿಸಿದ್ದಾರೆ. ಎರಡು ವರ್ಷಗಳಲ್ಲಿ ಭಾರೀ ಭದ್ರತೆಯ ಲೇಡಿವಾಕ್ ಎಸ್ಟೇಟ್‌ನಲ್ಲಿ ವ್ಯಾಪಕವಾದ ನವೀಕರಣಗಳನ್ನು ಕೈಗೊಳ್ಳಲಾಯಿತು.

ಇದನ್ನೂ ಓದಿ: T20 world Cup 2024 : ವೆಸ್ಟ್​ ಇಂಡೀಸ್​​ನಲ್ಲೂ ಮನೆಯೂಟ ಮಾಡುತ್ತಿರುವ ಸೂರ್ಯಕುಮಾರ್​, ಹಾರ್ದಿಕ್ ಪಾಂಡ್ಯ!

ಮಲ್ಯ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡ ಅನಂತರ ಬಿಲ್ಡರ್‌ಗಳು, ವಾಸ್ತುಶಿಲ್ಪಿಗಳು, ಡೆಕೋರೇಟರ್‌ಗಳು ಮತ್ತು ಲ್ಯಾಂಡ್‌ಸ್ಕೇಪ್ ಕಲಾವಿದರ ನಿರಂತರ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಇವರ ಈ ಎಸ್ಟೇಟ್ ಹಲವು ಸಿಸಿಟಿವಿ ಕೆಮರಾಗಳು, ಕಬ್ಬಿಣದ ಗೇಟ್‌ ಮತ್ತು ಬಹು ಭದ್ರತಾ ಸಿಬ್ಬಂದಿಗಳೊಂದಿಗೆ ಹೆಚ್ಚು ಕಾವಲುಗಾರರನ್ನು ನೇಮಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ. ಮಲ್ಯ ಕುಟುಂಬ ಇಲ್ಲಿಗೆ ಬರುವಾಗ ತಮ್ಮೊಂದಿಗೆ ಹೆಚ್ಚಿನ ಸಂಖ್ಯೆಯ ಕಾರುಗಳು ಮತ್ತು ಸಿಬ್ಬಂದಿಯನ್ನು ಕರೆತಂದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

Continue Reading
Advertisement
Bhaavaramayana Ramavatarana book release programme on June 29 in Bengaluru
ಕರ್ನಾಟಕ2 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ5 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Hijab Ban
ದೇಶ6 mins ago

Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

honey trap harish gowda
ಕ್ರೈಂ12 mins ago

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Kangana Ranaut Chirag Paswan In Parliament
ಬಾಲಿವುಡ್24 mins ago

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Viral Video
Latest41 mins ago

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Terrorist Killed
ದೇಶ42 mins ago

Terrorist Killed: ಮುಂದುವರಿದ ಉಗ್ರರ ಬೇಟೆ; ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Viral Video
Latest45 mins ago

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

AFG vs SA Semi Final
ಕ್ರೀಡೆ53 mins ago

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ59 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌