Sunday Read: ಹೊಸ ಪುಸ್ತಕ: ಸಾಕೇತ್‌ ರಾಜನ್‌ ಶವ ಪಡೆಯಲು ಕುಟುಂಬಸ್ಥರು ಯಾಕೆ ಒಪ್ಪಲಿಲ್ಲ? - Vistara News

ಕಲೆ/ಸಾಹಿತ್ಯ

Sunday Read: ಹೊಸ ಪುಸ್ತಕ: ಸಾಕೇತ್‌ ರಾಜನ್‌ ಶವ ಪಡೆಯಲು ಕುಟುಂಬಸ್ಥರು ಯಾಕೆ ಒಪ್ಪಲಿಲ್ಲ?

ಧರ್ಮ ಸಿಂಗ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಗುಪ್ತಚರ ದಳದ ಮುಖ್ಯಸ್ಥರಾಗಿದ್ದ ಹಿರಿಯ ಅಧಿಕಾರಿ ಡಾ.ಡಿ.ವಿ ಗುರುಪ್ರಸಾದ್‌ ಅವರು ಆ ದಿನಗಳನ್ನು ಈ ಕೃತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಧರ್ಮ ಸಿಂಗ್‌ ಅವರ ಆಪ್ತ ವ್ಯಕ್ತಿ ಚಿತ್ರವನ್ನು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಆ ಪುಸ್ತಕದಿಂದ ಆಯ್ದ ಒಂದು ಭಾಗ ಇಲ್ಲಿದೆ.

VISTARANEWS.COM


on

dharmatma book
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
DV Guruprasad

| ಡಾ. ಡಿ. ವಿ. ಗುರುಪ್ರಸಾದ್‌ (ನಿವೃತ್ತ ಡಿಜಿಪಿ)

ಫೆಬ್ರವರಿ 6ರಂದು ಚಿಕ್ಕಮಗಳೂರು ಜಿಲ್ಲೆಯ ಮೆಣಸಿನಹಾಡ್ಯ ಎಂಬಲ್ಲಿ ಪೊಲೀಸ್ ಎನ್‌ಕೌಂಟರ್ ನಡೆದು ಇಬ್ಬರು ನಕ್ಸಲರು ಹತ್ಯೆಗೀಡಾದರೆಂದೂ ಅವರಲ್ಲಿ ಒಬ್ಬ ಕರ್ನಾಟಕ ರಾಜ್ಯದ ನಕ್ಸಲ್ ಸಂಘಟನೆಯ ಮುಖ್ಯಸ್ಥ ಸಾಕೇತ್ ರಾಜನ್ ಎಂದು ಚಿಕ್ಕಮಗಳೂರಿನ ಎಸ್.ಪಿ ಬಿ.ಕೆ.ಸಿಂಗ್ ನನಗೆ ದೂರವಾಣಿ ಮೂಲಕ ತಿಳಿಸಿದಾಗ, ಕೂಡಲೇ ಈ ವಿಷಯವನ್ನು ನಾನು ಮುಖ್ಯಮಂತ್ರಿಗೆ ತಿಳಿಸಿದೆ.

ನಮ್ಮ ರಾಜ್ಯದಲ್ಲಿ 1970ರಿಂದಲೇ ನಕ್ಸಲ್ ಚಟುವಟಿಕೆಗಳು ಗರಿಗೆದರತೊಡಗಿದ್ದ ಬಗ್ಗೆ ಈಗಾಗಲೇ ಹಿಂದಿನ ಅಧ್ಯಾಯದಲ್ಲಿ ಪ್ರಸ್ತಾಪಿಸಿದ್ದೇನೆ. ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಬಂದ ನಕ್ಸಲರು ಗುಲ್ಬರ್ಗಾ, ರಾಯಚೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೊದಲಿಗೆ ಕಾಣತೊಡಗಿದರು. 19ನೇ ಜೂನ್ 1999ರಂದು ರಾಯಚೂರು ನಗರದ ಅಕ್ಕೂರ ಸಿದ್ಧನಗೌಡ ಎಂಬ ಶ್ರೀಮಂತನನ್ನು ರಮೇಶ್ ಎನ್ನುವವನ ಮುಂದಾಳತ್ವದ ಆರು ಜನರ ನಕ್ಸಲರ ಗುಂಪು ಹಾಡಹಗಲೇ ಕೊಲೆ ಮಾಡಿದ್ದರು. ಈ ಪ್ರಕರಣದ ಆರೋಪಿ ರಮೇಶ್‌ನ ಪತ್ನಿ ಪಾರ್ವತಿ 2003ರ ನವೆಂಬರ್‌ನಲ್ಲಿ ಉಡುಪಿ ಜಿಲ್ಲೆಯಲ್ಲಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಳು. ಈ ಎರಡೂ ಘಟನೆಗಳಿಂದ ನಕ್ಸಲ್ ಸಂಘಟನೆ ರಾಜ್ಯದ ಈಶಾನ್ಯ ಜಿಲ್ಲೆಗಳಿಂದ ಮಲೆನಾಡು ಪ್ರದೇಶಕ್ಕೆ ಕಾಲಿಟ್ಟಿದ್ದು ವಿದಿತವಾಗಿತ್ತು.

2000ರ ಆದಿಯ ವೇಳೆಗೆ ಕುಂಟುತ್ತಾ ಸಾಗುತ್ತಿದ್ದ ನಕ್ಸಲ್ ಚಳುವಳಿಗೆ ಹೊಸ ಆಯಾಮವನ್ನು ಕೊಟ್ಟವನೇ ಸಾಕೇತ್ ರಾಜನ್. ಮೈಸೂರಿನ ಬ್ರಾಹ್ಮಣ ಕುಟುಂಬವೊಂದರಲ್ಲಿ ಜನಿಸಿದ ರಾಜನ್ ದೆಹಲಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿ, 1985ರ ಸುಮಾರಿಗೆ ಸಂಪೂರ್ಣವಾಗಿ ನಕ್ಸಲೀಯ ಚಟುವಟಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ. ಈತ
ಚರಿತ್ರೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದು ಕರ್ನಾಟಕದಲ್ಲಿ ನಕ್ಸಲೀಯರು ಆಂಧ್ರ ಪ್ರದೇಶದ ಗಡಿಭಾಗವನ್ನು ಮರೆತು ಮಲೆನಾಡಿನ ಬಗ್ಗೆ ಆಸಕ್ತಿ ವಹಿಸಬೇಕು ಎಂದು ಪ್ರತಿಪಾದಿಸಿದ. ಮಲೆನಾಡಿನ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಬಗ್ಗೆ ವಿದ್ವತ್ಪೂರ್ಣ ಗ್ರಂಥವೊಂದನ್ನು ಬರೆದ ಅವನ ಪ್ರಯತ್ನದ ಫಲವಾಗಿ ನಕ್ಸಲ್ ಚಟುವಟಿಕೆ ಮಲೆನಾಡಿನಲ್ಲಿ ಕೇಂದ್ರೀಕೃತವಾಯಿತು.

ಮಿತಭಾಷಿ ಹಾಗೂ ನಾಚಿಕೆ ಸ್ವಭಾವದವನಾಗಿದ್ದ ಸಾಕೇತ್ ರಾಜನ್ ಬಂದೂಕು ಹಿಡಿಯುವ ತಂಡದ ನಾಯಕ ಹೇಗೆ ಆದ ಎನ್ನುವುದೇ ಅವನ ಸ್ನೇಹಿತರಿಗೆ ಆಶ್ಚರ್ಯ ತರಿಸಿತ್ತು. ರಾಜ್ಯದ ಅನೇಕ ಪತ್ರಕರ್ತರು ಸಾಕೇತ್ ರಾಜನ್‌ರ ಮಿತ್ರರಾಗಿದ್ದರು. ಒಮ್ಮೆ ಸಾಕೇತ್ ರಾಜನ್ ಬೆಂಗಳೂರಿನ ಪತ್ರಕರ್ತರ ತಂಡವೊಂದನ್ನು ತಾನು ನಡೆಸುತ್ತಿದ್ದ ನಕ್ಸಲ್ ತರಬೇತಿ ಶಿಬಿರಕ್ಕೆ ಕರೆದೊಯ್ದ ಬಗ್ಗೆ ಗುಪ್ತಚರ ಇಲಾಖೆಗೆ ವರದಿ ಬಂದಿತ್ತು. ಸಾಕೇತ್ ರಾಜನ್ ಮಿತ್ರರಲ್ಲಿ ಗೌರಿ ಲಂಕೇಶ್ ಸಹ ಒಬ್ಬರಾಗಿದ್ದರು ಎನ್ನುವುದು ನಮಗೆ ತಿಳಿದಿತ್ತು. ನಕ್ಸಲ್ ಸಂಘಟನೆಯಲ್ಲಿ ರಾಜನ್‌ಗೆ ಪ್ರೇಮ್ ಎಂಬ ಅನ್ವರ್ಥನಾಮವಿತ್ತು.

ರಾಜ್ಯದ ನಕ್ಸಲರ ಹಿರಿಯ ನಾಯಕನ ಸಾವಿನಿಂದ ಕರ್ನಾಟಕ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳು ಹಿನ್ನಡೆಯನ್ನು ಕಾಣುತ್ತವೆ ಎಂದು ನಾನು ಊಹಿಸಿ ಅದೇ ರೀತಿಯಾಗಿ ವರದಿಯನ್ನು ನೀಡಿದೆ. ಫೆಬ್ರವರಿ 6ರ ಮಧ್ಯಾಹ್ನವೇ ಮುಖ್ಯಮಂತ್ರಿ ಧರ್ಮಸಿಂಗ್ ಸಮಾರಂಭವೊಂದಕ್ಕಾಗಿ ಮಂಗಳೂರಿಗೆ ಹೊರಟಿದ್ದರಿಂದ ನಾನೂ ಅವರ ಜೊತೆ ವಿಮಾನದಲ್ಲಿ ಮಂಗಳೂರಿಗೆ ಹೋದೆ. ಅಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸತೀಶನನ್ನು ಭೇಟಿ ಮಾಡಿದೆ. ಸತೀಶನ ತೊಡೆಯಿಂದ ಎರಡು ಗುಂಡುಗಳನ್ನು ವೈದ್ಯರು ಹೊರತೆಗೆದಿದ್ದರು. ಎನ್‌ಕೌಂಟರ್ ಹೇಗೆ ನಡೆಯಿತು ಎಂದು ನಾನು ಅವನನ್ನು ವಿಚಾರಿಸಿದೆ.

“ಸರ್, ಮೆಣಸಿನಹಾಡ್ಯದಲ್ಲಿ ಶೇಷಪ್ಪ ಎನ್ನುವವನ ಮನೆಗೆ ನಕ್ಸಲರು ಬರುತ್ತಾರೆ ಎಂಬ ಸುದ್ದಿ ನಮಗೆ ಬಂದಿತು. ಹೀಗಾಗಿ ಡಿವೈ.ಎಸ್.ಪಿ ಶಿವಕುಮಾರ್‌ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ನಕ್ಸಲರಿಗಾಗಿ ಹೊಂಚು ಹಾಕಿ ಕುಳಿತಿದ್ದೆವು. ನಾನು ನಮ್ಮ ಇನ್ಸ್ಪೆಕ್ಟರ್ ಶ್ರೀನಿಧಿ ಇವರ ಪಕ್ಕದಲ್ಲಿ ಕುಳಿತಿದ್ದೆ. ಇನ್ನೇನು ಬೆಳಕು ಹರಿಯಬೇಕು ಎನ್ನವಷ್ಟರಲ್ಲಿ ಎದುರಿನ ಗುಡ್ಡದಲ್ಲಿ ಕೆಲವರು ವ್ಯಕ್ತಿಗಳು ಶಸ್ತ್ರಗಳನ್ನು ಹಿಡಿದುಕೊಂಡು ಒಬ್ಬರ ಹಿಂದೆ ಒಬ್ಬರು ನಡೆದು ಹೋಗುತ್ತಿರುವುದು ಕಾಣಿಸಿತು. ನಾವು ಅವರಿಗೆ ನಿಲ್ಲಲು ಹೇಳಿದೆವು. ಉತ್ತರವಾಗಿ ಅವರು ನಮ್ಮ ಮೇಲೆ ಗುಂಡು ಹಾರಿಸಿದರು. ನನಗೆ ಗುಂಡೇಟು ಬಡಿದು ಪ್ರಜ್ಞೆ ತಪ್ಪಿತು. ಮುಂದೇನಾಯಿತು ಎನ್ನುವುದು ನನಗೆ ಗೊತ್ತಿಲ್ಲ” ಎಂದ. ಅವನಿಗೆ ಶೀಘ್ರ ಗುಣಮುಖವಾಗಲೆಂದು ಹಾರೈಸಿ ಆ ರಾತ್ರಿ ಕುದುರೆಮುಖಕ್ಕೆ ಹೋಗಿ ವಾಸ್ತವ್ಯ ಮಾಡಿದೆ.

ಮಾರನೆಯ ಬೆಳಿಗ್ಗೆಯೇ ಎನ್‌ಕೌಂಟರ್ ನಡೆದ ಜಾಗಕ್ಕೆ ಹೋಗಿ ಅಲ್ಲಿ ಹಾಜರಿದ್ದ ಎಸ್.ಪಿಯವರೊಡನೆ ಎನ್‌ಕೌಂಟರ್‌ನ ವಿವರಗಳನ್ನು ಪಡೆದೆ. ನಾನು ಸ್ಥಳಕ್ಕೆ ಹೋಗುವಷ್ಟರಲ್ಲಿ ಮೃತರಾಗಿದ್ದ ಸಾಕೇತ್ ರಾಜನ್ ಹಾಗೂ ಶಿವಲಿಂಗು (ಈತ ರಾಯಚೂರಿನವನು) ಇವರ ದೇಹಗಳನ್ನು ಎರಡನೆಯ ಮರಣೋತ್ತರ ಪರೀಕ್ಷೆಗೆಂದು ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಕಳುಹಿಸಲಾಗಿತ್ತು.

ಮಂಗಳೂರಿಗೆ ಹಿಂತಿರುಗಿ ಮುಖ್ಯಮಂತ್ರಿ ಧರ್ಮಸಿಂಗ್‌ರವರ ಜೊತೆಯೇ ಬೆಂಗಳೂರಿಗೆ ವಾಪಸ್ ಬಂದೆ. ಹಾದಿಯಲ್ಲಿ ಅವರಿಗೆ ನಾನು ಎನ್‌ಕೌಂಟರ್ ಬಗ್ಗೆ ವಿವರಗಳನ್ನು ನೀಡಿದೆ. ಬೆಂಗಳೂರಿನಲ್ಲಿ ವಿಮಾನದಿಂದ ಇಳಿದ ಕೂಡಲೇ ನಾವಿಬ್ಬರೂ ಮಲ್ಯ ಆಸ್ಪತ್ರೆಗೆ ಹೋದೆವು. ಈ ಆಸ್ಪತ್ರೆಯಲ್ಲಿ ಇನ್ಸ್‌ಪೆಕ್ಟರ್ ಶ್ರೀನಿಧಿಯವರನ್ನು ದಾಖಲು ಮಾಡಲಾಗಿತ್ತು. ಮುಖ್ಯಮಂತ್ರಿ ಶ್ರೀನಿಧಿಯಿಂದ ಎನ್‌ಕೌಂಟರ್ ಬಗ್ಗೆ ವಿವರಗಳನ್ನು ಕೇಳಿ ಅವರಿಗೆ ಶೀಘ್ರ ಗುಣಮುಖರಾಗಲು ಹಾರೈಸಿದರು. ನಾವಿಬ್ಬರೂ ಆಸ್ಪತ್ರೆಯಿಂದ ವಿಧಾನಸೌಧಕ್ಕೆ ಬಂದ ನಂತರ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದರು. ಇದಕ್ಕಿದ್ದ ಕಾರಣ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಫೆಬ್ರವರಿ 11ನೇ ತಾರೀಖಿನಂದು ಬೆಂಗಳೂರಿಗೆ ಬರುವವರಿದ್ದರು. ಅವರಿಗೆ ಭದ್ರತೆಯ ಬಗ್ಗೆ ಚರ್ಚೆ ನಡೆಸಬೇಕಾಗಿತ್ತು. ಇದಲ್ಲದೇ ನಕ್ಸಲ್ ಎನ್‌ಕೌಂಟರ್‌ನಿಂದಾಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಬೇಕಾಗಿತ್ತು.

ಫೆಬ್ರವರಿ 8ರಂದು ಹತ ನಕ್ಸಲರ ದೇಹಗಳ ಮೇಲೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಎರಡನೆಯ ಮರಣೋತ್ತರ ಪರೀಕ್ಷೆ ನಡೆಯಿತು (ಪ್ರತಿ ಎನ್‌ಕೌಂಟರ್‌ ಪ್ರಕರಣದಲ್ಲಿಯೂ ಎರಡು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸೂಚಿಸಿದೆ). ಮರಣೋತ್ತರ ಪರೀಕ್ಷೆ ನಡೆದ ನಂತರ ʻಸಿಟಿಜನ್ ಇನಿಷಿಯೇಟಿವ್ ಫಾರ್ ಪೀಸ್’ ಎನ್ನುವ ಸಂಘಟನೆಯೊಂದು ಗೌರಿ ಲಂಕೇಶ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೃತ ನಕ್ಸಲರ ದೇಹಗಳನ್ನು ಅಂತ್ಯಕ್ರಿಯೆಗಾಗಿ ತಮಗೆ ಒಪ್ಪಿಸಿಬೇಕು ಎಂದು ಕೋರಿತು. ಧರ್ಮಸಿಂಗ್ ಈ ಕೋರಿಕೆಗೆ ಒಪ್ಪಿದರು. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಈ ನಿಲುವು ಒಪ್ಪಿಗೆಯಾಗಲಿಲ್ಲ. ಕಾನೂನಿನ ಅನ್ವಯ ಮೃತ ದೇಹಗಳನ್ನು ಅವುಗಳ
ವಾರಸುದಾರರಿಗೆ ಕೊಡಬಹುದೇ ಹೊರತು ಇತರರಿಗಲ್ಲ. ಗೌರಿ ಲಂಕೇಶ್ ಮೃತ ನಕ್ಸಲರ ರಕ್ತಸಂಬಂಧಿಯಲ್ಲ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಯಾವ ಕಾರಣಕ್ಕಾಗಿಯೂ ಮೃತ ದೇಹಗಳನ್ನು ಅಂತ್ಯಸಂಸ್ಕಾರಕ್ಕಾಗಿ ಬೇರೆಯವರಿಗೆ ಕೊಡಲು ಬರುವುದೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಉತ್ತರದಿಂದ ಧರ್ಮಸಿಂಗ್‌ರಿಗೆ ಕೋಪ ಬಂದಿತು. ಪೊಲೀಸ್‌ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲು ಅವರು ನನ್ನನ್ನು ಕೋರಿದರು. ಆಗ ನಾನು ಮುಖ್ಯಮಂತ್ರಿಗಳಿಗೆ ಪ್ರಕರಣದ ಸೂಕ್ಷ್ಮತೆಯ ಅರಿವು ಮಾಡಿಕೊಟ್ಟು ಮೃತ ದೇಹಗಳನ್ನು ಅವುಗಳ ವಾರಸುದಾರರಿಗೆ ಮಾತ್ರ ಅಂತ್ಯಕ್ರಿಯೆಗಾಗಿ ಕೊಡಬಹುದಾಗಿದ್ದು ಅಧಿಕಾರಿಗಳು ತೆಗೆದುಕೊಂಡಿರುವ ನಿಲುವು ಸರಿಯಾಗಿಯೇ ಇದೆ ಎಂದು ಸ್ಪಷ್ಟಿಕರಿಸಿದೆ.

“ಹಾಗಾದರೆ ಮುಂದಿನ ದಾರಿ ಏನು?” ಎಂದು ಕೇಳಿದರು ಧರ್ಮಸಿಂಗ್. “ಒಂದು ವೇಳೆ ಎರಡೂ ದೇಹಗಳನ್ನು ತಮ್ಮ ವಶಕ್ಕೆ ಅವುಗಳ ವಾರಸುದಾರರು ಪಡೆದು ಆನಂತರ ಅವನ್ನು ಬೇರಾರಿಗಾದರೂ ಅಂತ್ಯಕ್ರಿಯೆ ಮಾಡಲು ಒಪ್ಪಿಸಿದರೆ ಆಗ ಮಾತು ಬೇರೆಯಾಗಬಹುದೇನೋ” ಎಂದೆ. ಧರ್ಮಸಿಂಗ್ ನಾನು ಹೇಳಿದ ಇದೇ ಮಾತನ್ನೇ ಗೌರಿ ಲಂಕೇಶ್‌ಗೆ ತಿಳಿಸಿದರು. ಆಕೆ ಸಾಕೇತ್ ರಾಜನ್ ತಾಯಿ ರಾಜಲಕ್ಷ್ಮಿ ಮೈಸೂರಿನಲ್ಲಿ ವಾಸಿಸುತ್ತಿದ್ದು, ಶಿವಲಿಂಗುರವರ ಮಾತಾಪಿತರು ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದು ಅವರಿಗೆ ಸಂಬಂಧಪಟ್ಟ ಶವಗಳನ್ನು ಹಸ್ತಾಂತರಿಸಲು ತಮ್ಮ ಅಡ್ಡಿ ಇಲ್ಲ ಎಂದರು.

ಇದನ್ನೂ ಓದಿ: ಹೊಸ ಪುಸ್ತಕ: Sunday read: ಹಿಂದೂ ಮಹಾಸಾಗರದ ಮೇಲೊಂದು ಮಹಾಜಾಲಕ್ಕೆ ನಾಂದಿ

ಇದಾದ ನಂತರ ಡಿ.ಜಿ.ಪಿ ಬೋರ್ಕರ್ ಮೈಸೂರು ಪೊಲೀಸ್ ಆಯುಕ್ತ ಕೆಂಪಯ್ಯನವರೊಡನೆ ಮಾತನಾಡಿ ಸಾಕೇತ್ ರಾಜನ್ ತಾಯಿಯವರ ಜತೆ ಈ ವಿಷಯ ಪ್ರಸ್ತಾಪಿಸಿ ಎಂದು ಆದೇಶಿಸಿದರು. ಎರಡೇ ಗಂಟೆಗಳ ನಂತರ ವರದಿ ನೀಡಿದ ಕೆಂಪಯ್ಯ, “ಸಾಕೇತ್ ರಾಜನ್‌ರ ತಾಯಿಗೆ ತಮ್ಮ ಪುತ್ರನ ಶವ ಬೇಕಾಗಿಲ್ಲ. ಮಗ ಮನೆಬಿಟ್ಟು ಹೋಗಿ ಎರಡು ದಶಕಗಳೇ ಆಗಿವೆ. ಅವನಿಗೂ ನಮಗೂ ಸಂಬಂಧ ಕಡಿದಿದೆ ಎಂಬ ಉತ್ತರ ನೀಡಿದ್ದಾರೆ” ಎಂದರು. ಸಾಕೇತ್ ರಾಜನ್‌ಗೆ ಬೇರೆ ಯಾರೂ ಹತ್ತಿರದ ಬಂಧುಗಳು ಇರದಿದ್ದರಿಂದ ಆತನ ಶವದ ಅಂತಿಮ ಸಂಸ್ಕಾರವನ್ನು ಪೊಲೀಸ್/ ಸರ್ಕಾರಿ ಅಧಿಕಾರಿಗಳೇ ಮಾಡುವುದು ಎಂಬ ತೀರ್ಮಾನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬಂದರು.

ಇದಾದ ಕೆಲ ಸಮಯದ ನಂತರ ಗೌರಿ ಲಂಕೇಶ್ ಮತ್ತೊಮ್ಮೆ ಧರ್ಮಸಿಂಗ್‌ರನ್ನು ಭೇಟಿ ಮಾಡಿ ಶವಗಳನ್ನು ಇನ್ನೇನು ಅಂತಿಮ ಸಂಸ್ಕಾರಕ್ಕೆ ಒಯ್ಯಲಾಗುತ್ತಿದೆ. ತಾವು ಶೀಘ್ರ ಮಧ್ಯ ಪ್ರವೇಶಿಸಿ ಶವಗಳಿಗೆ ಅಂತಿಮ ಸಂಸ್ಕಾರ ಮಾಡಲು ನಮಗೆ ಹಸ್ತಾಂತರಿಸಲು ಆದೇಶ ನೀಡಿ ಎಂದು ಕೋರಿದರು. ಈ ಕೋರಿಕೆಗೆ ಮಣಿದ ಧರ್ಮಸಿಂಗ್ ಹಿರಿಯ ಪೊಲೀಸ್ ಪೊಲೀಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದರು. ಆದರೆ ಯಾರೂ ದೂರವಾಣಿಗೆ ಸಿಗಲಿಲ್ಲ. ಅಷ್ಟರಲ್ಲಾಗಲೇ ಅಂತಿಮ ಸಂಸ್ಕಾರವೇ ಮುಗಿದು ಹೋಗಿತ್ತು.

ಫೆಬ್ರವರಿ 9ರಂದು ʻಸಿಟಿಜನ್ ಇನಿಷಿಯೇಟವ್ ಫಾರ್ ಪೀಸ್‌’ನ ಕಾರ್ಯಕರ್ತರು ಮೃತ ನಕ್ಸಲ್ ಶವಗಳಿಗೆ ಪೊಲೀಸರೇ ಅಂತ್ಯ ಸಂಸ್ಕಾರ ಮಾಡಿದ ಕ್ರಮವನ್ನು ವಿರೋಧಿಸಿ ಬೆಂಗಳೂರು ನಗರದಲ್ಲಿ ಮೆರವಣಿಗೆ ತೆಗೆದುಕೊಂಡು ಹೋಗಲು ಉದ್ದೇಶಿಸಿದರು. ನಗರ ಪೊಲೀಸ್ ಆಯುಕ್ತರು ಈ ಮೆರವಣಿಗೆಗೆ ಅನುಮತಿ ನೀಡದೇ ಹೋದುದ್ದರಿಂದ ಈ ಸಂಘಟನೆಯ ಕೆಲವು ನಾಯಕರು ಮುಖ್ಯಮಂತ್ರಿ ಧರ್ಮಸಿಂಗ್‌ರನ್ನು ಭೇಟಿ ಮಾಡಲು ಅವರ ಗೃಹ ಕಚೇರಿ ಕೃಷ್ಣಾಗೆ ಬಂದರು. ಭೇಟಿ ಮಾಡಲು ಬಂದ ನಿಯೋಗದಲ್ಲಿ ಆಂಧ್ರ ಪ್ರದೇಶದ ಕ್ರಾಂತಿಕಾರಿ ಕವಿ ವರವರರಾವ್, ಕ್ರಾಂತಿಕಾರಿ ಗಾಯಕ ಗದ್ದರ್, ಗೌರಿ ಲಂಕೇಶ್, ಪ್ರೊ. ಜಿ.ರಾಮಕೃಷ್ಣ, ಮನು ಚಕ್ರವರ್ತಿ ಮುಂತಾದವರು ಇದ್ದರು. ಮುಖ್ಯಮಂತ್ರಿಯವರ ಆದೇಶವನ್ನು ಪಾಲಿಸದೇ ಮೃತ ನಕ್ಸಲರಿಗೆ ಅಂತ್ಯ ಸಂಸ್ಕಾರ ಮಾಡಿದ ಕಾರಣಕ್ಕಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಬೋರ್ಕರ್ ಇವರನ್ನು ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಹಾಗೂ ಈ ಬಗ್ಗೆ ವಿವರವಾದ ತನಿಖೆ ನಡೆಯಬೇಕು ಎಂಬ ಬೇಡಿಕೆಯನ್ನು ನಿಯೋಗ ಇಟ್ಟಿತು. ಮಾತುಕತೆಯ ಸಮಯದಲ್ಲಿ ಗದ್ದರ್ ತಮ್ಮ ಜೊತೆ ನಕ್ಸಲರ ಅಸ್ತಿ (ಬೂದಿ) ಇದ್ದ ಕಳಶವೊಂದನ್ನು ತಂದಿದ್ದನ್ನು ನಾನು ನೋಡಿದೆ. ಮುಖ್ಯಮಂತ್ರಿ ಈ ನಿಯೋಗಕ್ಕೆ ಯಾವುದೇ ಆಶ್ವಾಸನೆಯನ್ನು ನೀಡಲಿಲ್ಲ.

ಇದನ್ನೂ ಓದಿ: ಹೊಸ ಪುಸ್ತಕ | ಮಾಯ ಮತ್ತು ಜೋಗದ ಬೆಳಕಿನಲ್ಲಿ | ಕಾಂತಾರದ ದಂತಕತೆ ಮತ್ತು ಮಾಯವಾಗುವ ದೈವಗಳು

ಮೃತ ನಕ್ಸಲರ ದೇಹಗಳನ್ನು ʻಸಿಟಿಜನ್ ಇನಿಷಿಯೇಟಿವ್ ಫಾರ್ ಪೀಸ್’ ನಾಯಕರಿಗೆ ಒಪ್ಪಿಸುವಂತಹ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದು ಅವರನ್ನು ಸಾಕಷ್ಟು ಟೀಕೆಗೆ ಗುರಿಮಾಡಿತು. ರಾಜ್ಯದಲ್ಲಿನ ಬಹಳಷ್ಟು ಜನರಿಗೆ ಧರ್ಮಸಿಂಗ್ ನಕ್ಸಲೀಯರ ಬಗ್ಗೆ ಮೃದು ಭಾವನೆ ತಳೆದಿದ್ದರೆಂದು ಅನಿಸಿದ್ದು ಸತ್ಯವೇ.

ಕೃತಿ: ಧರ್ಮಾತ್ಮ (ನಾ ಕಂಡಂತೆ ಧರ್ಮಸಿಂಗ್)‌
ಲೇಖಕ: ಡಾ.ಡಿ.ವಿ ಗುರುಪ್ರಸಾದ್‌ (ನಿವೃತ್ತ ಡಿಜಿಪಿ)
ಪ್ರಕಾಶನ: ವಿಕ್ರಂ ಪ್ರಕಾಶನ
ಬೆಲೆ: 200/-

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಮೈಸೂರು

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Book Release: ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Ithichanda Ramesh Uthappaʼs Four books to be released in Mysore on May 9
Koo

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

ಬಿಡುಗಡೆಯಾಗಲಿರುವ ಕೃತಿಗಳು

  • ಕಾಡು ಹೇಳಿದ ಕಥೆ: ವೈಲ್ಡ್‌ ಲೈಫ್ ರಿಪೋರ್ಟಿಂಗ್
  • ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
  • ಆನೆ: ಬದಲಾದ ವರ್ತನೆ
  • ಅರ್ಜುನ ನಿನ್ನ ಮರೆಯಲೆಂತು ನಾ..!
Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading
Advertisement
Yogi Adityanath
ದೇಶ19 mins ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Dolly Dhananjay Koti Movie Kannada First song will out
ಸ್ಯಾಂಡಲ್ ವುಡ್22 mins ago

Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

esim cyber safety column
ಅಂಕಣ41 mins ago

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

Nijjar Killing Case
ವಿದೇಶ53 mins ago

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

HD Revanna
ಪ್ರಮುಖ ಸುದ್ದಿ53 mins ago

HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

Maggi Tragedy
ದೇಶ1 hour ago

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Viral News
ವೈರಲ್ ನ್ಯೂಸ್2 hours ago

Viral News: ಲಾರಿಗೆ ಡಿಕ್ಕಿ ಹೊಡೆಯಿತು ಕಂತೆ ಕಂತೆ ನಗದು ಸಾಗಿಸುತ್ತಿದ್ದ ವ್ಯಾನ್‌; ನೋಟಿನ ರಾಶಿ ಹೇಗಿದೆ ನೋಡಿ

Morning Tips
ಲೈಫ್‌ಸ್ಟೈಲ್3 hours ago

Morning Tips: ಬೆಳಗ್ಗೆ 7 ಗಂಟೆಯೊಳಗೆ ನೀವು ಈ 7 ಕೆಲಸಗಳನ್ನು ಮಾಡುತ್ತೀರಾ?

Karnataka Weather Forecast
ಮಳೆ3 hours ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Solar
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು19 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌