Fire Accident: ಮಂತ್ರಿ ಮಾಲ್ ಪಕ್ಕದ ಮನೆಯಲ್ಲಿ ಅಗ್ನಿ ದುರಂತ: ಗ್ಯಾಸ್‌ ಸ್ಟವ್‌ನಿಂದ ಹರಡಿದ ಬೆಂಕಿ, ಮಹಿಳೆ ಸಜೀವ ದಹನ - Vistara News

ಕರ್ನಾಟಕ

Fire Accident: ಮಂತ್ರಿ ಮಾಲ್ ಪಕ್ಕದ ಮನೆಯಲ್ಲಿ ಅಗ್ನಿ ದುರಂತ: ಗ್ಯಾಸ್‌ ಸ್ಟವ್‌ನಿಂದ ಹರಡಿದ ಬೆಂಕಿ, ಮಹಿಳೆ ಸಜೀವ ದಹನ

Fire Accident: ಅಡುಗೆ ಮಾಡುವಾಗ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ (Fire Accident) ನಡೆದಿದೆ.

VISTARANEWS.COM


on

Fire breaks out in mantri mall back house; Woman dies of grievous injuries
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಡುಗೆ ಮಾಡುವಾಗ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ (Fire Accident) ನಡೆದಿದೆ.

ಮೇರಿ (55) ಮೃತ ಮಹಿಳೆ. ಮಂಗಳವಾರ ಮೇರಿ ಅವರ ಮೈದುನನ ತಿಂಗಳ ಕಾರ್ಯ ಇತ್ತು. ಹೀಗಾಗಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಏಕಾಏಕಿ ಗ್ಯಾಸ್ ಸ್ಟವ್‌ನಲ್ಲಿ ಬೆಂಕಿ ಪ್ರಮಾಣ ಹೆಚ್ಚಾಗಿದೆ. ಈ ವೇಳೆ ಪಕ್ಕದಲ್ಲೇ ಇಟ್ಟಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲಾ ವ್ಯಾಪಿಸಿದೆ. ಈ ವೇಳೆ ಅಡುಗೆ ಮನೆಯಿಂದ ಹೊರಬರಲಾಗದೆ ಮೇರಿ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೇರಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Heart Attack: ತೆಂಗಿನ ಮರ ಏರಿದವನಿಗೆ ನಿಂತು ಹೋಯ್ತು ಹೃದಯದ ಬಡಿತ; ಮರದಲ್ಲೇ ಹೃದಯಾಘಾತವಾಗಿ ಸಾವು

ಸಾಫ್ಟ್‌ವೇರ್ ಕಂಪನಿ ಕಟ್ಟಡದಲ್ಲಿ ಬೆಂಕಿ

ಯಲಹಂಹ ಸಮೀಪದ ಜಕ್ಕೂರು ಏರೋಡ್ರಮ್ ಬಳಿ ಸಾಫ್ಟ್‌ವೇರ್ ಕಂಪನಿ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳಲ್ಲಿ ಸಿಬ್ಬಂದಿ ಧಾವಿಸಿ, ಬೆಂಕಿಯನ್ನು ನಂದಿಸಿದರು. ಕಟ್ಟಡದ ಮೇಲ್ಭಾಗದಲ್ಲಿ ಮಂಗಳವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆವರಿಸುತ್ತಿದ್ದಂತೆ ಜನರನ್ನು ಸಿಬ್ಬಂದಿ ಖಾಲಿ ಮಾಡಿಸಿದರು. ಅದೃಷ್ಟವಶಾತ್‌ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

VSK Media Awards 2024: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ಬೆಂಗಳೂರು ನಗರದ ಬಸವನಗುಡಿಯ ಬಿ.ಎಂ.ಎಸ್‌. ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಇದೇ ಜೂ.30 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿಎಸ್‌ಕೆ ಮೀಡಿಯಾ ಅವಾರ್ಡ್ಸ್‌ (VSK Media Awards) ಮಾಧ್ಯಮ ಪ್ರಶಸ್ತಿ 2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

VISTARANEWS.COM


on

VSK Media Awards 2024 Programme in Bengaluru on June 30
Koo

ಬೆಂಗಳೂರು: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ಬೆಂಗಳೂರು ನಗರದ ಬಸವನಗುಡಿಯ ಬಿ.ಎಂ.ಎಸ್‌. ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಇದೇ ಜೂ.30 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿಎಸ್‌ಕೆ ಮೀಡಿಯಾ ಅವಾರ್ಡ್ಸ್‌ (VSK Media Awards 2024) ಮಾಧ್ಯಮ ಪ್ರಶಸ್ತಿ 2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ಕಾರ್ಯಕ್ರಮದಲ್ಲಿ ಆರ್ಗನೈಸರ್‌ ಪತ್ರಿಕೆಯ ಸಂಪಾದಕ ಪ್ರಫುಲ್ಲ ಕೇತ್ಕರ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಸಂಘಚಾಲಕ ಡಾ. ಪಿ. ವಾಮನ್‌ ಶೆಣೈ ಉಪಸ್ಥಿತರಿರುವರು.

ಪ್ರಶಸ್ತಿ ಪುರಸ್ಕೃತರು

ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಸುದರ್ಶನ್‌ ಚನ್ನಂಗಿಹಳ್ಳಿ, ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ಸುವರ್ಣ ನ್ಯೂಸ್ ಸಂಪಾದಕ ಅಜಿತ್‌ ಹನುಮಕ್ಕನವರ್‌, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಗೆ ಶೋಭಾ ಎಚ್‌.ಜಿ., ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಪ್ರೊ. ಪ್ರೇಮಶೇಖರ, ವಿ.ಎಸ್.ಕೆ. ಡಿಜಿಟಲ್‌ ಮಾಧ್ಯಮ ಪ್ರಶಸ್ತಿಗೆ ಡಾ. ಪೂರ್ವಿ ಜಯರಾಮ್‌ ಭಾಜನರಾಗಿದ್ದಾರೆ.

ಇದನ್ನೂ ಓದಿ: Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Prajwal Revanna Case: ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ (Prajwal Revanna Case) ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು‌ ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಇನ್ನು ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್‌ 26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ವಜಾಗೊಳಿಸಿದ್ದರು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

ಬೆಂಗಳೂರು: ವಾಲ್ಮೀಕಿ ನಿಗಮ ಬಹುಕೋಟಿ ಹಗರಣದಲ್ಲಿ (Valmiki Corporation Scam) ಇನ್ನು 10 ಕೋಟಿ‌ ರೂ.ಗಳನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಬಾರ್‌ಗಳು, ಚಿನ್ನದ‌ ಅಂಗಡಿಗಳಿಗೆ ವರ್ಗಾವಣೆ ಆಗಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ, ಆಂಧ್ರದಲ್ಲಿನ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಚುರುಕಗೊಳಿಸಿದೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡಲಾಗುತ್ತಿದೆ. ದೊಡ್ಡ ಮೊತ್ತದ ಹಣವನ್ನು ಸಿಐಡಿ ಕಚೇರಿಯಲ್ಲಿಡುವುದು ಕಷ್ಟ. ಭದ್ರತಾ ದೃಷ್ಟಿಯಿಂದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕೋರ್ಟ್ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ಜಮಾ ಮಾಡಿದ್ದಾರೆ. ನೆನ್ನೆಯಿಂದ ದಿನಕ್ಕೆ ನಾಲ್ಕು ಕೋಟಿಯಂತೆ ಹಣ ಜಮೆ ಮಾಡಲಾಗುತ್ತಿದೆ. ಇದುವರೆಗೂ ಸುಮಾರು 28 ಕೋಟಿ ಹಣ ರಿಕವರಿ ಆಗಿದೆ.

28 ಕೋಟಿ ಹಣವಮ್ನ ಒಟ್ಟಿಗೆ ಜಮೆ ಮಾಡೋದು ಕಷ್ಟ. ಹೀಗಾಗಿ ಅಷ್ಟು ಹಣ ಎಣಿಕೆ ಮಾಡಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ದಿನಕ್ಕೆ ನಾಲ್ಕು ಕೋಟಿ ಹಣವನ್ನು ಮಾತ್ರ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತಿದೆ.

ಮಾರ್ಚ್ 30ರಂದು ನವೀನ್ ಜಿ ಮಾಲೀಕತ್ವದ ಜಿ.ಎನ್ ಇಂಡಸ್ಟ್ರೀಸ್ ಕಂಪನಿ ಹೆಸರಲ್ಲಿ 4.42 ಕೋಟಿ ವರ್ಗಾವಣೆ ಆಗಿತ್ತು. ವಿಜಯ್ ಕೃಷ್ಣ ಆರ್ ಮಾಲೀಕತ್ವದ ರಾಮ್ ಎಂಟರ್ ಪ್ರೈಸಸ್ ಖಾತೆಗೆ 5.7 ಕೋಟಿ ಹಣ, ರಾಘವೇಂದ್ರ ಅವರ ನೋವೆಲ್ ಸೆಕ್ಯೂರಿಟಿ ಸರ್ವಿಸಸ್ ಪ್ರೈ.ಲಿ.ಕಂಪನಿ ಹೆಸರಿನ ಖಾತೆಗೆ 4 ಕೋಟಿ ಹಣ ವರ್ಗಾವಣೆಯಾಗಿತ್ತು. ರೇಖಾ ಎಂಬುವವರ ಮಾಲೀಕತ್ವದ ಸುಜಲ್ ಎಂಟರ್ ಪ್ರೈಸಸ್ ಹೆಸರಿನ ಖಾತೆಗೆ 5.63 ಕೋಟಿ ಹಣ ವರ್ಗಾವಣೆಯಾಗಿತ್ತು.

ಇದನ್ನೂ ಓದಿ | Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಎಲ್ಲಾ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆಗೆದು ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಖಾತೆ ಓಪನ್ ಮಾಡಿದ್ದ ಆಸಾಮಿಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಖಾತೆಗಳಿಗೆ ಹಣ ಜಮೆ ಮಾಡಿಸಿಕೊಂಡಿದ್ದಾರೆ.

Continue Reading

ಕ್ರೈಂ

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Road Accident : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಬಿದ್ದರೆ, ಇತ್ತ ಶಿರಾಡಿಘಾಟ್‌ನಲ್ಲಿ ರಾಜಹಂಸ ಹಾಗೂ ಐರಾವತ ನಡುವೆ ಅಪಘಾತ ಸಂಭವಿಸಿದೆ. ಎರಡು ಅಪಘಾತದಲ್ಲಿ ಪ್ರಯಾಣಿಕರು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Road Accident
Koo

ಮಂಡ್ಯ/ಮಂಗಳೂರು: ಶನಿವಾರ ಒಂದೇ ದಿನ ಹಲವೆಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದೆ. ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ದಾಟಿ ಸರ್ವಿಸ್ ರಸ್ತೆಯ ಹಳ್ಳಕ್ಕೆ ಉರುಳಿದ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‌ ವೇಗವಾಗಿ ಬಂದು ನೋಡನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಹತ್ತಿದೆ. ಬಳಿಕ ಸರ್ವಿಸ್ ರಸ್ತೆಗೆ ಬಂದು ಹಳ್ಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರು ಬೇರೆ ಬಸ್‌ ಮುಖಾಂತರ ತೆರಳಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದ ಬಿದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಬಸ್‌ಗಳನ್ನು ತೆರವುಗೊಳಿಸಿದ್ದರು.

ಇದನ್ನೂ ಓದಿ: Road Accident: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಸುಟ್ಟು ಕರಕಲಾದ ಬಸ್‌ಗಳು

ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಅಗ್ನಿ ಅವಘಡ ಸಂಭವಿಸಿದೆ. ಖಾಸಗಿ ನರ್ಸಿಂಗ್ ಕಾಲೇಜಿನ ಐದು ಬಸ್‌ಗಳಿಗೆ ಬೆಂಕಿ ತಗುಲಿದ್ದು, ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಕರೆಂಟ್‌ ಶಾಕ್‌ಗೆ ಮೊಸಳೆ ಸಾವು

ವಿದ್ಯುತ್ ತಗುಲಿ ಮೊಸಳೆಯೊಂದು ಮೃತಪಟ್ಟಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ದೂಧಗಂಗಾ ನದಿಯಲ್ಲಿ ಘಟನೆ ನಡೆದಿದೆ. ದೂಧಗಂಗಾ ನದಿಯಲ್ಲಿ ವಿದ್ಯುತ್‌ ಸ್ಪರ್ಶದಿಂದಾಗಿ ಸುಮಾರು 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ.

ರಿಪೇರಿಗೆ ತಂದಿದ್ದ ಮೊಬೈಲ್ ಬ್ಯಾಟರಿ ಬ್ಲಾಸ್ಟ್

ರಿಪೇರಿಗೆ ತಂದಿದ್ದ ಮೊಬೈಲ್ ಬ್ಯಾಟರಿ ಬ್ಲಾಸ್ಟ್ ಆಗಿದೆ. ಕೊಪ್ಪಳ ನಗರದ ಜಗದಂಬಾ ಮೊಬೈಲ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ಶಾಪ್‌ನಲ್ಲಿ ಗ್ರಾಹಕರೊಬ್ಬರು ರಿಪೇರಿಗೆಂದು ಮೊಬೈಲ್‌ ಕೊಟ್ಟು ಹೋಗಿದ್ದರು. ರಿಪೇರಿ ಮಾಡುವಾಗ ಏಕಾಏಕಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Kannada New Movie: ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಏಳು ಮಿಲಿಯನ್‌ಗೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ.

VISTARANEWS.COM


on

Chinnamma song from Krishnam Pranaya Sakhi is at 3rd position in All India YouTube trending list
Koo

ಬೆಂಗಳೂರು: ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಇತ್ತೀಚಿಗೆ ಬಿಡುಗಡೆಯಾಗಿತ್ತು. ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ “ಚಿನ್ನಮ್ಮ” ಹಾಡು ಬಿಡುಗಡೆಯಾದ (Kannada News Movie) 4 ದಿನಗಳಲ್ಲಿ ಏಳು ಮಿಲಿಯನ್‌ಗೂ ಅಧಿಕ ವೀಕ್ಷಣೆಗೊಂಡು 3ನೇ ಸ್ಥಾನದಲ್ಲಿದೆ.

ಕವಿರಾಜ್ ಅವರು ಬರೆದು ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ.

ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ “ಚಿನ್ನಮ್ಮ” ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಏಳು ಮಿಲಿಯನ್‌ಗೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಮೊದಲ ಸ್ಥಾನದಲ್ಲಿ ದಳಪತಿ ವಿಜಯ್ ಅವರ “ಗ್ರೇಟೆಸ್ಟ್ ಆಫ್ ಆಲ್ ಟೈಮ್” ಚಿತ್ರದ “ಚಿನ್ನ ಚಿನ್ನ ಕಣ್ಗಳ್” ಹಾಗೂ ಎರಡನೇ ಸ್ಥಾನದಲ್ಲಿ ಪ್ರಭಾಸ್ ನಟನೆಯ “ಕಲ್ಕಿ 2898 AD” ಚಿತ್ರದ “ಥೀಮ್ ಆಫ್ ಕಲ್ಕಿ” ಹಾಡು ಇದೆ. ಇದೇ ವೇಗದಲ್ಲಿ ವೀಕ್ಷಣೆಯಾಗುತ್ತಿದ್ದರೆ “ಚಿನ್ನಮ್ಮ” ಹಾಡು ಮೊದಲ ಸ್ಥಾನಕ್ಕೆ ಬರುವ ಸಾಧ್ಯತೆ ಇದೆ.

Continue Reading
Advertisement
VSK Media Awards 2024 Programme in Bengaluru on June 30
ಕರ್ನಾಟಕ2 seconds ago

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

Prajwal Revanna Case
ಪ್ರಮುಖ ಸುದ್ದಿ16 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Stabbing
ದೇಶ17 mins ago

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

IND vs SA Final
ಕ್ರೀಡೆ21 mins ago

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

Road Accident
ಕ್ರೈಂ26 mins ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ52 mins ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

OTT Release
Latest57 mins ago

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Chinnamma song from Krishnam Pranaya Sakhi is at 3rd position in All India YouTube trending list
ಕರ್ನಾಟಕ1 hour ago

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Kanguva vs Alia Bhatt Kanguva finally set a date
ಕಾಲಿವುಡ್1 hour ago

Kanguva vs Alia Bhatt: ಕಂಗುವ- ಮಾರ್ಟಿನ್‌ ಜತೆ ಆಲಿಯಾ ಭಟ್‌ ಸಿನಿಮಾ ಕೂಡ ಕ್ಲ್ಯಾಶ್‌!

DCET 2024
ಬೆಂಗಳೂರು1 hour ago

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌