Terror Politics : ಉಗ್ರರಿಗೆ ಬೆಂಬಲ ನೀಡುವ ಕಾಂಗ್ರೆಸ್ಸೇ ಒಂದು ಭಯೋತ್ಪಾದಕ ಸಂಘಟನೆ ಎಂದ ನಳಿನ್‌ ಕುಮಾರ್‌ ಕಟೀಲ್‌ - Vistara News

ಉತ್ತರ ಕನ್ನಡ

Terror Politics : ಉಗ್ರರಿಗೆ ಬೆಂಬಲ ನೀಡುವ ಕಾಂಗ್ರೆಸ್ಸೇ ಒಂದು ಭಯೋತ್ಪಾದಕ ಸಂಘಟನೆ ಎಂದ ನಳಿನ್‌ ಕುಮಾರ್‌ ಕಟೀಲ್‌

ಭಯೋತ್ಪಾದಕರಿಗೆ ಬೆಂಬಲ ನೀಡುವ ಕಾಂಗ್ರೆಸ್‌ ಪಾರ್ಟಿ ಒಂದು ಭಯೋತ್ಪಾದಕ ಸಂಘಟನೆ ಎಂದು ಆರೋಪಿಸಿದ್ದಾರೆ ನಳಿನ್‌ ಕುಮಾರ್‌ ಕಟೀಲ್‌.

VISTARANEWS.COM


on

Nalin kumar kateel
ಕಾರವಾರದಲ್ಲಿ ಆಯೋಜನೆಯಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಪಾಲ್ಗೊಂಡರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಭಯೋತ್ಪಾದನಾ ಚಟುವಟಿಕೆ ಮಾಡುವವರಿಗೆ ಕಾಂಗ್ರೆಸ್‌ನವರು ಬೆಂಗಾವಲಾಗಿ ನಿಂತಿದ್ದಾರೆ. ಅಂಥವರ ರಕ್ಷಣೆ ಮಾಡಿದ ಪರಿಣಾಮವಾಗಿಯೇ ಗಲಭೆಗಳಾಗಿವೆ. ಹೀಗಾಗಿ ಕಾಂಗ್ರೆಸ್ಸೇ ಒಂದು ಭಯೋತ್ಪಾದನಾ ಸಂಘಟನೆ (Terror Politics) ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ಮಾಡಿದ್ದಾರೆ.

ಕಾರವಾರದಲ್ಲಿ ಆಯೋಜನೆಯಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಮತ್ತು ಮತಗಟ್ಟೆ ಪೇಜ್ ಪ್ರಮುಖರ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಇಲ್ಲಿನ ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಅತಿ ಹೆಚ್ಚು ಮತೀಯ ಗಲಭೆಗಳು ಆಗಿರುವುದು ಕಾಂಗ್ರೆಸ್ ಕಾಲದಲ್ಲಿ. ಕಾಂಗ್ರೆಸ್ ಆಡಳಿತಕ್ಕೆ ಬಂದಾಗೆಲ್ಲ ಮತೀಯ ಗಲಭೆಗಳಿಗೆ ಪ್ರಚೋದನೆ ಕೊಟ್ಟಿದೆ. ಅವರ ತುಷ್ಟೀಕರಣ ನೀತಿಯಿಂದಾಗಿ ಕಾಂಗ್ರೆಸ್ ಸಮಯದಲ್ಲಿ ಮತೀಯ ಗಲಭೆಗಳು ಹೆಚ್ಚಾಯಿತು. ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತೆ ಆಡಳಿತ ನಡೆಸಿದ ಕಾರಣದಿಂದಲೇ ಮತೀಯ ಗಲಭೆಗಳು ಹೆಚ್ಚಾಗಿದ್ದವು ಎಂದು ಆರೋಪಿಸಿದರು.

#image_title

ಅತಿ ಹೆಚ್ಚು ಹಿಂದುಗಳ ಹತ್ಯೆ ನಡೆದದ್ದು ಸಿದ್ದರಾಮಯ್ಯ ಕಾಲದಲ್ಲಿ

ʻʻಪಿಎಫ್ಐನ ಎರಡು ಸಾವಿರ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದವರು ಸಿದ್ರಾಮಣ್ಣ. ಅತಿ ಹೆಚ್ಚು ಹಿಂದೂಗಳ ಹತ್ಯೆಯಾಗಿರುವುದು ಸಿದ್ದರಾಮಯ್ಯನ ಕಾಲದಲ್ಲಿ. ಅಂದು ಅವರು ಯಾರ ಮನೆಗೂ ಹೋಗಿಲ್ಲ, ಯಾವ ಪೊಲೀಸರನ್ನೂ ಕೇಳಿಲ್ಲ, ಯಾರ ಬಂಧನವೂ ಆಗಿಲ್ಲ. ಶೃಂಗೇರಿಯಲ್ಲಿ ಗೋ ಹಂತಕನೊಬ್ಬನ ಎನ್‌ಕೌಂಟರ್ ಆದಾಗ ಅವರ ಮನೆಗೆ 10 ಲಕ್ಷ ಕೊಟ್ಟಿದ್ದರು. ಆ ಮೂಲಕ ಜನರ ಭಾವನೆಗಳನ್ನ ಕೆರಳಿಸಿ ಮತೀಯ ಗಲಭೆಗಳಿಗೆ ಅವಕಾಶ ಮಾಡಿಕೊಟ್ಟರು. ರಕ್ತಸಿಕ್ತ ಆಡಳಿತ ನಡೆಸಿದ ಉದಾಹರಣೆಯಿದ್ದರೆ ಅದು ಸಿದ್ರಾಮಣ್ಣಂದು. ಮತೀಯ ಗಲಭೆಗಳನ್ನು ಸೃಷ್ಟಿಸಿ ಅಧಿಕಾರಕ್ಕೆ ಪಡೆದಿರುವುದು ಕಾಂಗ್ರೆಸ್‌ನ ಇತಿಹಾಸʼʼ ಎಂದರು‌.

ʻʻಮಂಗಳೂರಿನ ಕುಕ್ಕರ್ ಬ್ಲಾಸ್ಟ್‌ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಕಾಂಗ್ರೆಸ್‌ನವರು ಬೆಂಬಲವಾಗಿ ನಿಂತಿದ್ದರು. ಇವರು ಭಯೋತ್ಪಾದಕರಿಗೆ ಬೆಂಬಲವಾಗಿ ನಿಂತವರು. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಯಲ್ಲಿ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಾಕಿದರು. ಇವತ್ತಿಗೂ ಕಾಂಗ್ರೆಸ್ ಅವರನ್ನು ಉಚ್ಛಾಟನೆ ಮಾಡಿಲ್ಲ. ಪಿಎಫ್ಐ, ಕೆಎಫ್ ಡಿಯನ್ನು ನಿಷೇಧ ಮಾಡಿದರೂ ಪ್ರಶ್ನಿಸುತ್ತಾರೆ. ಇವರದೇ ಶಾಸಕನ ಮೇಲೆ ಚೂರಿ ಇರಿತವಾಗಿದ್ದರೂ ಸಂಘಟನೆ ಪರವಾಗಿ ನಿಂತರುʼʼ ಎಂದರು.

ಎಚ್ಚರಿಕೆಯಿಂದ ಮಾತನಾಡಲು ಎಚ್‌ಡಿಕೆಗೆ ಸಲಹೆ

ಎಚ್.ಡಿ.ಕುಮಾರಸ್ವಾಮಿಯವರ ಪಂಚರತ್ನ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ʻʻಒಬ್ಬ ಮಾಜಿ ಮುಖ್ಯಮಂತ್ರಿ ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮಾತನಾಡಬೇಕು. ಸಮುದಾಯಗಳನ್ನ ಕೆರಳಿಸುವ, ಸಮಾಜಗಳನ್ನು ಹೀನವಾಗಿ ಕಾಣುವಂಥದ್ದು ಸರಿಯಲ್ಲ. ಗಾಂಧಿ ಕೊಲೆಯನ್ನು ಒಂದು ಸಮುದಾಯಕ್ಕೆ ಇವರು ಕಟ್ಟಿದ್ದಾರೆ. ಇವರ ಆಡಳಿತವೇ ಹಾಗೆ, ರಾಮಕೃಷ್ಣ ಹೆಗಡೆಯವರಿಗೆ ಹೊಡೆದವರು ಯಾರು? ಅವರು ರಕ್ತದಲ್ಲೇ ಬ್ರಾಹ್ಮಣ ವಿರೋಧಿ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ದಾಳಿ ಮಾಡುತ್ತಾ ಬಂದವರು. ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ, ಇಷ್ಟು ದಿನ ಕಲ್ಲಲ್ಲಿ ಹೊಡೆಯುತ್ತಿದ್ದರು. ಬ್ರಾಹ್ಮಣ ಸಮುದಾಯವನ್ನು ಕೀಳಾಗಿ ನೋಡುವ, ಸಮುದಾಯಕ್ಕೆ ಅಪಮಾನ ಮಾಡುವ, ತುಚ್ಛವಾಗಿ ಕಾಣುವುದು ಒಬ್ಬ ಮಾಜಿ ಮುಖ್ಯಮಂತ್ರಿಗೆ ಶೋಭೆಯಲ್ಲʼʼ ಎಂದರು.

ʻʻಅವರು ಮೂರು ಜಿಲ್ಲೆಗಳನ್ನಿಟ್ಟುಕೊಂಡು ಇಡೀ ರಾಜ್ಯ ಗೆಲ್ಲುವ ಕನಸು ಕಾಣುತ್ತಾರೆ. ಈ ಬಾರಿ ಕಳೆದ ಬಾರಿಯಷ್ಟೂ ಅವರು ಗೆಲ್ಲಲ್ಲ. ಕಳೆದ ಬಾರಿ ಯಾರ್ಯಾರದ್ದೋ ಸಹಾಯದಿಂದ ಗೆದ್ದಿದ್ದಾರೆ. ಈ ಬಾರಿ 20ಕ್ಕಿಂತ ಮೇಲೆ ಅವರು ಹೋಗಲ್ಲ. ಸರ್ವೆ ರಿಪೋರ್ಟ್ ನಲ್ಲಿ ಅವರಿಗೆ 20 ಸ್ಥಾನವನ್ನೂ ಮುಟ್ಟಲ್ಲ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಮಾನಸಿಕ ಚಂಚಲತೆಯಿಂದ ಮಾತನಾಡುತ್ತಿದ್ದಾರೆʼʼ ಎಂದರು‌.

ಇದನ್ನೂ ಓದಿ : Hindu Vs Hindutva : ನಾನು ಹಿಂದು ಧರ್ಮದ ಬಗ್ಗೆ ಮಾತನಾಡಿಯೇ ಇಲ್ಲ, ಅದಕ್ಕೆ ನನ್ನ ವಿರೋಧವೇ ಇಲ್ಲ: ಸಿದ್ದರಾಮಯ್ಯ ಯು ಟರ್ನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Karnataka Rain : ಭಾರಿ ಮಳೆಗೆ (Heavy Rain Alert) ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಹೋದ ರಾಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮತ್ತೊಂದು ಕಡೆ ಮನೆಯೊಂದು ನೆಲಸಮವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಮರಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಯು (Karnataka Rain) ಸಾವು-ನೋವಿಗೆ ಕಾರಣವಾಗುತ್ತಿದೆ. ಅಬ್ಬರಿಸುತ್ತಿರುವ ಮಳೆಗೆ ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗುವಾಗ ರಾಸುವೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ದಡ ತುಸು ದೂರದಲ್ಲೇ ಇದ್ದಾಗ ನದಿಗೆ ದನವೊಂದು ಬಿದ್ದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆಯಲ್ಲಿ, ಜನರ ಕಣ್ಣೇದುರೇ ಭದ್ರೆಯ ಒಡಲಲ್ಲಿ ರಾಸು ಕೊಚ್ಚಿ ಹೋಗಿದೆ.

ರಸ್ತೆಗೆ ಬಿದ್ದ ಬೃಹತ್‌ ಮರ

ಪ್ರವಾಸಿಗರ ನಿಷೇಧದಿಂದ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮುಳ್ಳಯ್ಯನಗಿರಿ ರಸ್ತೆಯ ಮೂರನೇ ತಿರುವಿನಲ್ಲಿ ಘಟನೆ ನಡೆದಿದೆ. ವಾಹನಗಳು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಗುಡ್ಡದ ಮಣ್ಣಿನ ಸಮೇತ ಮರ ಬಿದ್ದು, ಸ್ಥಳೀಯ ಗ್ರಾಮಸ್ಥರು ಓಡಾಡಲು ಪರದಾಟ ಅನುಭವಿಸಿದರು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಮರ ತೆರವು ಮಾಡಲಾಯಿತು.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆಯು ಆರ್ಭಟಿಸುತ್ತಿದ್ದು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿಯ ಉಪ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಭರ್ತಿ‌ಯಾಗಿದೆ. ಭಗಂಡೇಶ್ವರ ಸನ್ನಿದಿಯ ಮೆಟ್ಟಿಲವರೆಗೂ ನೀರು ನಿಂತಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆಯಾಗುತ್ತಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆಯು 3ನೇ ಬಾರಿಗೆ ಬಂದ್ ಆಗುತ್ತಿದೆ.

ಮಂಗಳೂರಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಂಟ್ವಾಳದ ಪಾಣೆಮಂಗಳೂರು ಆಲಡ್ಕದಲ್ಲಿ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿದ್ದ 12 ಮನೆಗಳ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಮಂಗಳೂರಲ್ಲಿ ನೇತ್ರಾವತಿ ಅಬ್ಬರ

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಬೋಳಿಯಾರ್ ಗ್ರಾಮದ ಅಮ್ಮೆಂಬಳದಲ್ಲಿ ಸಂಪರ್ಕ ಕಡಿತಗೊಂಡಿದೆ. ಅಮ್ಮೆಂಬಳ-ಜಾರದಗುಡ್ಡೆ ಸಂಪರ್ಕ ಕಡಿತವಾಗಿದೆ. ನೇತ್ರಾವತಿ ನದಿ ನೀರು ಗದ್ದೆ ಪೂರ್ತಿ ಆವರಿಸಿದೆ. ಸುಮಾರು ನೂರ ಎಪ್ಪತ್ತೈದುಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ನೆರೆ ನೀರು ಆವರಿಸಿದೆ. ಈ ಹಿನ್ನೆಲೆಯಲ್ಲಿ 7 ಕಿ.ಮೀ ಸುತ್ತುಬಳಸಿ ಹೋಗಬೇಕಿದೆ. ರಸ್ತೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಉಡುಪಿಯಲ್ಲಿ ಮನೆ ನೆಲಸಮ, ಸೋಮೇಶ್ವರದಲ್ಲಿ ಗುಡ್ಡ ಕುಸಿತ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಟ್ಟೆಗುಡ್ಡೆ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಕಡೆಕಾರು ಪಂಚಾಯತ್‌ನ ಶಾರದ ಪೂಜಾರ್ತಿ ಎಂಬುವವರ ಮನೆ ನೆಲಸಮವಾಗಿದೆ. ಸುಮಾರು 30 ವರ್ಷ ಹಳೆಯದಾದ ಮನೆಯಲ್ಲಿ ಒಟ್ಟು 10 ಮಂದಿ ವಾಸಿಸುತ್ತಿದ್ದರು. ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದು, ಮನೆ ಕುಸಿಯುವ ಮೊದಲೇ ಓಡಿ ಹೋಗಿದ್ದರಿಂದ ಅಪಾಯ ತಪ್ಪಿದೆ. ಮನೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಡುಪಿಯ ಬೈಂದೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಕ್ಕೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸೋಮೇಶ್ವರ ಗುಡ್ಡ ಕುಸಿಯುತ್ತಿದೆ. ಗುಡ್ಡದ ಮೇಲೆ ಖಾಸಗಿಯವರ ಅನಧೀಕೃತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡಕ್ಕೆ ಸಂಪರ್ಕ ಕಲ್ಪಿಸಲು ಗುಡ್ಡ ಕೊರೆದು ರಸ್ತೆ ನಿರ್ಮಿಸಿದ್ದಾರೆ. ಯಾವುದೇ ಸ್ಥಳೀಯ ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಆರೋಪವಿದೆ. ನಿರಂತರ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಳಿ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಸೋಮೇಶ್ವರ ಬೀಚ್ ರಸ್ತೆ ಬಂದ್ ಮಾಡಿದ್ದಾರೆ. ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದಂತಾಗಿದೆ. ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿ ತಾಣ ಕಣ್ಮರೆಯಾಗಲಿದೆ.

ಪಶ್ಚಿಮ ಘಟ್ಟದಲ್ಲೂ ಮಳೆ ಅಬ್ಬರ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹೆಮ್ಮಡಗಾ ಬಳಿ ಅಪಾಯದ ಮಟ್ಟ ಮೀರಿ ಹಾಲತ್ರಿ ಹಳ್ಳ ಹರಿಯುತ್ತಿದೆ. ಸೇತುವೆ ಬಂದ್‌ ಆಗಿದ್ದರಿಂದ ಇಪ್ಪತ್ತೈದು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸೇತುವೆಗೆ ತಡೆಗೋಡೆ ಇಲ್ಲದೇ ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ರಾತ್ರಿ ವೇಳೆ ಸ್ವಲ್ಪ ನೀರು ಸೇತುವೆ ಮೇಲಿದ್ದರೂ ಹಳ್ಳಕ್ಕೆ ಬೀಳುವ ಸಾಧ್ಯತೆ ಇದೆ.

ಸುತ್ತೂರು ಸೇತುವೆ ಮುಳುಗಡೆ

ಮೈಸೂರು – ಸುತ್ತೂರು ಗ್ರಾಮಕ್ಕೆ ಸಂಪರ್ಕ ಕೇಂದ್ರವಾಗಿದ್ದ ಸೇತುವೆ ಮುಳುಗಡೆ ಆಗಿದೆ. ಬೀಚನಹಳ್ಳಿಯ ಕಬಿನಿ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ 70 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಹೀಗಾಗಿ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸೇತುವೆ ಮುಳುಗಡೆಯಾಗಿ, ಸುತ್ತೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ಬಟಾಣಿಜೆಡ್ಡು ಬಳಿ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭಾರಿ ಮಳೆಗೆ ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದಿದೆ. ಜತೆಗೆ ವಿದ್ಯುತ್ ತಂತಿಗಳಿಗೂ ಸಹ ಹಾನಿಯಾಗಿದೆ. ಇದರಿಂದಾಗಿ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಮರಬಿದ್ದ ಕಾರಣ ಅರಸಾಳು ಬಳಿಯ ಬಟಾಣಿಜೆಡ್ಡು ಬಳಿ ನಿಲ್ಲುವಂತಾಯಿತು. 7.15ಕ್ಕೆ ಶಿವಮೊಗ್ಗ ತಲುಪಬೇಕಿದ್ದ ರೈಲು 9 ಗಂಟೆಗೆ ಆಗಮಿಸಿತು. ಸುಮಾರು ಎರಡು ತಾಸು ಕಾದ ಪ್ರಯಾಣಿಕರು ಹೈರಾಣಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

Uttara Kannada News: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 31ನೇ ಚಾತುರ್ಮಾಸ್ಯ ಜುಲೈ 21ರಿಂದ ಸೆಪ್ಟೆಂಬರ್ 18ರವರೆಗೆ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಳ್ಳಲಿದೆ. ʼಅನಾವರಣ ಚಾತುರ್ಮಾಸ್ಯʼ ಎಂಬ ಅಭಿದಾನದೊಂದಿಗೆ ಶ್ರೀಗಳು, ಆಷಾಢ ಶುದ್ಧ ಹುಣ್ಣಿಮೆಯಿಂದ ಬಾಧ್ರಪದ ಶುದ್ಧ ಹುಣ್ಣಿಮೆವರೆಗೆ 60 ದಿನಗಳ ಕಾಲ ವ್ರತ ಕೈಗೊಳ್ಳಲಿದ್ದಾರೆ. ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಮತ್ತು ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Raghaveshwarashree Chaturmasya at Ashoke from 21st July
Koo

ಗೋಕರ್ಣ: ಶ್ರೀಮಜ್ಜದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 31ನೇ ಚಾತುರ್ಮಾಸ್ಯ ಜುಲೈ 21ರಿಂದ ಸೆಪ್ಟೆಂಬರ್ 18ರವರೆಗೆ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಳ್ಳಲಿದೆ. ಅನಾವರಣ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಶ್ರೀಗಳು, ಆಷಾಢ ಶುದ್ಧ ಹುಣ್ಣಿಮೆಯಿಂದ ಭಾದ್ರಪದ ಶುದ್ಧ ಹುಣ್ಣಿಮೆವರೆಗೆ 60 ದಿನಗಳ ಕಾಲ ವ್ರತ ಕೈಗೊಳ್ಳಲಿದ್ದು, ವರ್ಷಾಕಾಲದಲ್ಲಿ ಲೋಕಹಿತಕ್ಕಾಗಿ ಪರಮ ಪುರುಷನ ಆರಾಧನೆ, ಅನುಷ್ಠಾನಗಳಲ್ಲಿ ನಿರತರಾಗುವರು ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಮತ್ತು ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ ಪ್ರಕಟಣೆಯಲ್ಲಿ (Uttara Kannada News) ತಿಳಿಸಿದ್ದಾರೆ.

ಚಾತುರ್ಮಾಸ್ಯದ ಪ್ರತಿದಿನವೂ ಸಮಾಜದ ವಿಶಿಷ್ಟ ವ್ಯಕ್ತಿಗಳು, ವಿಷಯಗಳು ಮತ್ತು ವಸ್ತುಗಳ ಅನಾವರಣ ಈ ಬಾರಿಯ ವಿಶೇಷ. 60 ದಿನಗಳಲ್ಲಿ ಕನಿಷ್ಠ 60 ವ್ಯಕ್ತಿ-ವಿಷಯ- ವಸ್ತುಗಳ ʼಅನಾವರಣʼಕ್ಕೆ ಈ ಚಾತುರ್ಮಾಸ್ಯ ಸಾಕ್ಷಿಯಾಗಲಿದೆ. ಸಮಾಜದಲ್ಲಿ ಎಲೆಮರೆಯ ಕಾಯಿಗಳಾಗಿ ಸೇವೆ ಸಲ್ಲಿಸುತ್ತಿರುವ, ಇದುವರೆಗೆ ಸಮಾಜಕ್ಕೆ ತೆರೆದುಕೊಳ್ಳದ ವ್ಯಕ್ತಿಗಳು, ಸಮಾಜದಲ್ಲಿ ಬೆಳಕಿಗೆ ಬರದ ಶ್ರೀಮಠದ ಭವ್ಯತೆ, ರಾಮಚಂದ್ರಾಪುರ ಮಠದ ಮಹತ್ವದ ಯೋಜನೆಗಳ ಅನಾವರಣ ಕೂಡಾ ಈ ಸಂದರ್ಭದಲ್ಲಿ ನಡೆಯಲಿದೆ.

ಚಾತುರ್ಮಾಸ್ಯಕ್ಕೆ ಪೂರ್ವಭಾವಿಯಾಗಿ ಮುನ್ನಾ ದಿನ (ಜುಲೈ 20) ಶ್ರೀಗಳು ಪುರಾತನ ಮಲ್ಲಿಕಾರ್ಜುನ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆಯುವರು. ರಾಜ್ಯದ ಮೂಲೆಮೂಲೆಗಳಿಂದ ಶಿಷ್ಯಭಕ್ತರು ಸಮರ್ಪಿಸಿದ ಸುವಸ್ತುಗಳಿಗೆ ಧಾನ್ಯಲಕ್ಷ್ಮಿಪೂಜೆಯನ್ನು ರಾಘವೇಶ್ವರ ಶ್ರೀಗಳು ನೆರವೇರಿಸುವರು. ಬಳಿಕ ಅನ್ನಪೂರ್ಣೇಶ್ವರಿ ಪೂಜೆಯೊಂದಿಗೆ ಚಾತುರ್ಮಾಸ್ಯ ಪರ್ಯಂತ ಲಕ್ಷಾಂತರ ಶಿಷ್ಯಭಕ್ತರಿಗೆ ಅನ್ನದಾನ ಆರಂಭವಾಗಲಿದೆ.

ಇದನ್ನೂ ಓದಿ: Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

ಆಷಾಢ ಶುದ್ಧ ಹುಣ್ಣಿಮೆಯಂದು ವ್ಯಾಸಪೂಜೆ ಮತ್ತು ಗುರು ಪರಂಪರೆ ಪೂಜೆಯೊಂದಿಗೆ 31ನೇ ವರ್ಷದ ವ್ರತಾರಂಭ ಮಾಡುವರು. ಜುಲೈ 24ರಂದು ಶ್ರೀವರ್ಧಂತಿ, ಆಗಸ್ಟ್ 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆಪ್ಟೆಂಬರ್ 7ರಂದು ಗಣೇಶ ಚತುರ್ಥಿಯಂಥ ವಿಶೇಷ ಕಾರ್ಯಕ್ರಮಗಳ ಜತೆಗೆ ವೈದಿಕ ಸಮಾವೇಶ, ಗುರಿಕಾರರ ಸಮಾವೇಶಗಳು ಚಾತುರ್ಮಾಸ್ಯದಲ್ಲಿ ಆಯೋಜಿತವಾಗಿವೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನೆ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಲಿದೆ. ಸೆಪ್ಟೆಂಬರ್ 18ರಂದು ಸೀಮೋಲ್ಲಂಘನೆಯೊಂದಿಗೆ ಚಾತುರ್ಮಾಸ್ಯ ಸಂಪನ್ನಗೊಳ್ಳಲಿದೆ.

ಚಾತುರ್ಮಾಸ್ಯದಲ್ಲಿ ಶ್ರೀಕರಾರ್ಚಿತ ಚಂದ್ರಮೌಳೀಶ್ವರ ದೇವರಿಗೆ ಶ್ರೀಗಳು, ಸಹಸ್ರ ಗಂಗಾಜಲ ಅಭಿಷೇಕಕ್ಕೆ ಸಂಕಲ್ಪಿಸಿದ್ದಾರೆ. ಪವಿತ್ರ ಗಂಗಾಜಲದಿಂದ ತುಂಬಿದ ಸುವರ್ಣ, ರಜತ ಮತ್ತು ತಾಮ್ರ ಕಲಶಗಳ ಸೇವೆಗೆ ಭಕ್ತರಿಗೆ ಅವಕಾಶವಿದೆ. ಚಾತುರ್ಮಾಸ್ಯದ ಅವಧಿಯಲ್ಲಿ ಶ್ರೀಕರಾರ್ಚಿತ ದೇವರಿಗೆ ಸರ್ವಸೇವೆ ಸಮರ್ಪಣೆಗೆ ಅವಕಾಶ ಇದೆ. ಅಂತೆಯೇ ಮಹಾಸೇವೆ, ತುಲಾಭಾರ ಸೇವೆ, ಸ್ವರ್ಣಪಾದುಕೆ ಭಿಕ್ಷಾಸೇವೆ, ಸ್ವರ್ಣಪಾದುಕಾ ಪೂಜೆ, ಪಾದುಕಾಪೂಜೆ, ಅನ್ನದಾನ, ಸುವಸ್ತು ಸಮರ್ಪಣೆ ಮತ್ತಿತರ ಸೇವೆಗಳನ್ನೂ ಸಲ್ಲಿಸಲು ಅವಕಾಶವಿದೆ.

ಇದನ್ನೂ ಓದಿ: Media Connect: ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

ಎರಡು ತಿಂಗಳ ಅವಧಿಯ ಚಾತುರ್ಮಾಸ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಗಣ್ಯರು, ಶಿಷ್ಯಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಅಗತ್ಯ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.

Continue Reading

ಮಳೆ

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Uttara Kannada Landslide: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದು, ಇನ್ನೂ ನಾಲ್ವರು ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಇದರೊಟ್ಟಿಗೆ ಅವಘಡ ನಡೆದ ಸ್ಥಳಕ್ಕೆ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಭೇಟಿ ನೀಡಿದೆ.

VISTARANEWS.COM


on

By

Uttara Kannada Landslide
Koo

ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ (Uttara Kannada Landslide) ಇದುವರೆಗೆ ಶಿರೂರು ಮೂಲದ ಒಂದೇ ಕುಟುಂಬದ ನಾಲ್ವರು, ಇಬ್ಬರು ಚಾಲಕರು ಸೇರಿ 6 ಮಂದಿ ಮೃತದೇಹ ಪತ್ತೆಯಾಗಿದೆ. ಮೊದಲ ದಿನ ಶಾಂತಿ ಲಕ್ಷ್ಮಣ ನಾಯ್ಕ(36) ಎಂಬುವವರ ಶವ ಪತ್ತೆಯಾಗಿತ್ತು. 2ನೇ ದಿನ ಲಕ್ಷ್ಮಣ ನಾಯ್ಕ (47), ರೋಶನ್ ಲಕ್ಷಣ ನಾಯ್ಕ(11) ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಚಿಣ್ಣನ್‌ (55) ಎಂಬುವವರ ಮೃತದೇಹ ಪತ್ತೆಯಾಗಿದೆ.

ಗುರುವಾರ ಅವಂತಿಕಾ ಲಕ್ಷ್ಮಣ ನಾಯ್ಕ(5), ಲಾರಿ ಚಾಲಕ ಮುರುಗನ್ ಶವ ಸಿಕ್ಕಿದೆ. ಮೊದಲ ನಾಲ್ಕು ಮೃತದೇಹ ಗೋಕರ್ಣದ ದುಬ್ಬನಶಶಿ ಕಡಲತೀರದಲ್ಲಿ ಪತ್ತೆಯಾದರೆ, ಅವಂತಿಕಾ ಮೃತದೇಹ ಕುಮಟಾ ತಾಲ್ಲೂಕಿನ ಗಂಗೆಕೊಳ್ಳ ಭಾಗದಲ್ಲಿ, ಚಾಲಕ ಮುರುಗನ್ ಅಂಕೋಲಾ ತಾಲ್ಲೂಕಿನ ಮಂಜಗುಣಿ ಬಳಿ‌ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಜಿಲ್ಲಾಧಿಕಾರಿ ಹೇಳುವ ಪ್ರಕಾರ ನಾಲ್ಕು ಮಂದಿ ಮಿಸ್ಸಿಂಗ್ ದೂರು ಬಂದಿದೆ. ಹೀಗಾಗಿ ಒಟ್ಟು ಸಾವಿನ ಸಂಖ್ಯೆ 10ಕ್ಕೆ ಏರುವ ಸಾಧ್ಯತೆಯೂ ಇದೆ.

ಪರಿಹಾರದ ಆದೇಶ ಪತ್ರ ವಿತರಣೆ

ಗುಡ್ಡ ಕುಸಿತದಲ್ಲಿ ಮೃತಪಟ್ಟ ಟ್ಯಾಂಕರ್ ಚಾಲಕನ ಕುಟುಂಬಸ್ಥರಿಗೆ ಪರಿಹಾರದ ಆದೇಶ ಪತ್ರವನ್ನು ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ‌.ಕೆ ವಿತರಿಸಿದರು. ಮೃತ ಚಾಲಕನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರದ ಆದೇಶ ಹಸ್ತಾಂತರ ಮಾಡಲಾಗಿದೆ. ಜುಲೈ 15 ರಂದು ಶಿರೂರು ಬಳಿ ಗುಡ್ಡ ಕುಸಿದ ಅವಘಡದಲ್ಲಿ ಕಣ್ಮರೆಯಾಗಿದ್ದ ಚಿಣ್ಣನ್ ಮರುದಿನ ಲಕ್ಷಣ ನಾಯ್ಕ ಮೃತದೇಹದೊಂದಿಗೆ ಪತ್ತೆಯಾಗಿತ್ತು. ತಮಿಳುನಾಡಿನ ನಾಮಕ್ಕಲ್ ಮೂಲದ ಗ್ಯಾಸ್ ಟ್ಯಾಂಕರ್ ಚಾಲಕ ಚಿಣ್ಣನ್, ಮಂಗಳೂರಿನಿಂದ ಗೋವಾಕ್ಕೆ ಗ್ಯಾಸ್ ಟ್ಯಾಂಕರ್ ಕೊಂಡೊಯ್ಯುತ್ತಿದ್ದಾಗ ಗುಡ್ಡ ಕುಸಿದಿತ್ತು.

ಸ್ಥಳಕ್ಕಾಗಮಿಸಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ

ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಿಂದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ ಭೇಟಿ ನೀಡಿದೆ. ಗುಡ್ಡ ಕುಸಿತ ಸ್ಥಳದಲ್ಲಿ ಕಲ್ಲು, ಮಣ್ಣು ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ಸರ್ವೆ ನಡೆಸಿ ಭೂಕುಸಿತ ಅಪಾಯವಿರುವ ಸ್ಥಳಗಳನ್ನು ಗುರುತಿಸಿತ್ತು. ಜಿಲ್ಲೆಯ ಸುಮಾರು 436 ಕಡೆ ಭೂಕುಸಿತ ಉಂಟಾಗುವ ಎಚ್ಚರಿಕೆಯನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ನೀಡಿತ್ತು. ಇದೀಗ ಎನ್‌ಎಚ್‌ಎಐ (NHAI) ಅಧಿಕಾರಿಗಳೊಂದಿಗೆ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

ಮಣ್ಣು ತೆರೆಯುವಾಗ ಮತ್ತೆ ಬರ್ಗಿ ಬಳಿ ಗುಡ್ಡ ಕುಸಿತ

ಉತ್ತರ ಕನ್ನಡದ ಕುಮಟಾದ ಬರ್ಗಿ ಬಳಿ ಮಣ್ಣು ತೆರವುಗೊಳಿಸುವಾಗಲೇ ಮತ್ತೆ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಬರ್ಗಿ ಗ್ರಾಮದ ಗುಡ್ಡ ಕುಸಿಯುವ ದೃಶ್ಯ ಬರ್ಗಿ ಗ್ರಾಮದ ನಿವಾಸಿಯೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಐಆರ್‌ಬಿ ಸಿಬ್ಬಂದಿ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದಂತೆ ಮತ್ತೆ ಗುಡ್ಡ ಕುಸಿದಿದ್ದು, ಕೂಡಲೇ ಸಿಬ್ಬಂದಿ ಜೆಸಿಬಿ ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಹೆದ್ದಾರಿ ಪಕ್ಕದ ಗುಡ್ಡಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು, ಹೆದ್ದಾರಿ ಅಗಲೀಕರಣಕ್ಕೆ ಅವೈಜ್ಞಾನಿಕ ರೀತಿಯಲ್ಲಿ ಗುಡ್ಡ ಕೊರೆದಿದ್ದೇ ಕುಸಿತಕ್ಕೆ ಕಾರಣ ಎನ್ನಲಾಗಿದೆ.

ದೇವರಬಾವಿಯಲ್ಲೂ ಗುಡ್ಡ ಕುಸಿತ ಭೀತಿ

ಇನ್ನೂ ಶಿರೂರು ಗುಡ್ಡ ಕುಸಿತ ಬೆನ್ನಲ್ಲೇ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದ ಆತಂಕ ಹೆಚ್ಚಾಗಿದೆ. ಕುಮಟಾ ತಾಲೂಕಿನ ಗೋಕರ್ಣದ ದೇವರಬಾವಿಯಲ್ಲಿ ಗುಡ್ಡ ಕುಸಿತದ ಭೀತಿ ಇದ್ದು, ಸುಮಾರು 200 ಮೀ ವ್ಯಾಪ್ತಿಯಲ್ಲಿ ಬಿರುಕು ಬಿಟ್ಟಿದೆ. ಗುಡ್ಡ ಇಬ್ಬಾಗವಾಗಿ ಧರೆಗುರುಳುವ ಆತಂಕ ಇದೆ.ಇತ್ತ ಗುಡ್ಡದ ಕೆಳಭಾಗದಲ್ಲಿ 10ಕ್ಕೂ‌ ಹೆಚ್ಚು ಮನೆಗಳಿವೆ. ವ್ಯಾಪಕ ಮಳೆ ಹಾಗೂ ಶಿರೂರು ಗುಡ್ಡ ಕುಸಿದ ಘಟನೆಯಿಂದ ಹೆದರಿ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ಸುಮಾರು 50 ಅಡಿ ಅಗಲ ಹಾಗೂ 200 ಅಡಿ ಉದ್ದದಲ್ಲಿ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಾದರೂ ಗುಡ್ಡ ಕುಸಿಯುವ ಭೀತಿ ಇದೆ.

ವರದಾ ನದಿ ಪಾತ್ರದಲ್ಲಿ ನೆರೆ ಪರಿಸ್ಥಿತಿ

ಘಟ್ಟದ ಮೇಲಿನ‌ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡದ ಶಿರಸಿ ತಾಲೂಕಿನ ಬನವಾಸಿಯಲ್ಲಿ ವರದಾ ನದಿ ಮೈದುಂಬಿ ಹರಿಯುತ್ತಿದೆ. ವರದಾ ನದಿ ಪಾತ್ರದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ಅನಾನಸ್, ಶುಂಠಿ ಹಾಗೂ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಬನವಾಸಿ ಭಾಗದ ಮೊಗವಳ್ಳಿ, ಅಜ್ಜರಣಿ ಮತ್ತು ಗುಣಿ, ಭಾಶಿ, ಯಡೂರಬೈಲ್ ಗ್ರಾಮಗಳಿಗೆ ಪ್ರವಾಹ ಭೀತಿ ಇದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕುಗಳಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ನದಿಗಳು ತುಂಬಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೆರೆ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಕುಸಿದು ಬಿದ್ದ ಮನೆಗಳು, ರಸ್ತೆ ಕಾಣದೆ ಕಂದಕ್ಕೆ ನುಗ್ಗಿದ ಕಾರು

Karnataka Rain : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆಗೆ ನಾನಾ ಅನಾಹುತಗಳೇ ನಡೆದಿದೆ. ಅಡುಗೆ ಮಾಡುವಾಗ ಗೋಡೆ ಕುಸಿದು ಬಿದ್ದರೆ, ಮಳೆಗೆ ರಸ್ತೆ ಕಾಣದೆ ಕಾರೊಂದು ಕಂದಕ್ಕೆ ನುಗ್ಗಿದೆ. ಮತ್ತೊಂದು ಕಡೆ ನೋಡನೋಡುತ್ತಿದ್ದಂತೆ ಮನೆಯೊಂದು ಕುಸಿದು ಬಿದ್ದಿದೆ. ಶೃಂಗೇರಿಯಲ್ಲಿ ನೆರೆ ಸೃಷ್ಟಿಯಾಗಿದ್ದು, ಹೆದ್ದಾರಿ ಬಿರುಕು ಬಿಟ್ಟು ಆತಂಕ ಹೆಚ್ಚಿಸಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ (Karnataka Rain) ಮುಂದುವರಿದಿದ್ದು, ಅಡುಗೆ ಮಾಡುತ್ತಿದ್ದಾಗಲೇ ಮನೆಯ ಗೋಡೆ ಕುಸಿದು ಬಿದ್ದಿದೆ. ಮಹಿಳೆಯೊಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಗುತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಮನೆಯೊಂದು ‌ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಗಿರಿಜಮ್ಮ ಎಂಬುವವರು ಸೂರು ಕಳೆದುಕೊಂಡು ಕಂಗಾಲಾಗಿದ್ದಾರೆ. ಗೋಡೆ ಜತೆಗೆ ‌ ಮನೆಯ ಚಾವಣಿಯು ಸಂಪೂರ್ಣ ನಾಶವಾಗಿದೆ.

Karnataka rain

ಕಂದಕಕ್ಕೆ ನುಗ್ಗಿದ ಕಾರು

ಭಾರಿ ಮಳೆಯಿಂದ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ನುಗ್ಗಿದೆ. ಚಿಕ್ಕಮಗಳೂರಿನ ಕಳಸ-ಬಾಳೆಹೊನ್ನೂರು ಮಾರ್ಗದಲ್ಲಿ ಘಟನೆ ನಡೆದಿದೆ. ಕಳಸ ಸಮೀಪದ ನೆಲ್ಲಿಕಾರು ಸಮೀಪ ಬಂದಾಗ ಭಾರಿ ಮಳೆಗೆ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಕಳಸ ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ನೋಡನೋಡುತ್ತಲೇ ಕುಸಿದು ಬಿದ್ದ ಮನೆ

ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೋಡ ನೋಡುತ್ತಲೇ ಮನೆಯೊಂದು ಕುಸಿದು ಬಿದ್ದಿದೆ. ಮನೆ ಕುಸಿತದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪದ ಶಾಂತಿಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇರದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ.

ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ

ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆಯಾರ್ಭಟಕ್ಕೆ ತುಂಗಾ ನದಿ ಅಬ್ಬರಿಸುತ್ತಿದ್ದು, ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಯಂಚಿನ ಗ್ರಾಮಗಳಲ್ಲಿ ತೋಟಗಳು ಜಲಾವೃತಗೊಂಡಿದೆ. ಶೃಂಗೇರಿ ತಾಲೂಕಿನ ಕೂತಗೋಡು ವ್ಯಾಪ್ತಿಯ ಬೆಟ್ಟಗೇರೆ, ಕೆರೆಮನೆ ಗ್ರಾಮಗಳಲ್ಲಿ ತುಂಗಾ ನದಿ ಉಕ್ಕಿದ ಪರಿಣಾಮ ತೋಟಗಳು ಮುಳುಗಡೆಯಾಗಿದೆ. ಜತೆಗೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನೂ ಕಳೆದ ಮೂರು ದಿನಗಳಿಂದ ತುಂಗಾ ಪ್ರವಾಹ ಕಡಿಮೆಯಾಗದ ಹಿನ್ನೆಲೆಯಲ್ಲಿ ನೆರೆ ತಗ್ಗುವಂತೆ ತುಂಗಾ ನದಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ಮತ್ತೆ ಹೆಬ್ಬಾಳೆ ಸೇತುವೆ ಮುಳುಗಡೆ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರಕ್ಕೆ ಸತತ ಮೂರನೇ ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದಾಗಿ ಕಳಸ-ಹೊರನಾಡು ಸೇರಿ ಹತ್ತಾರು ಹಳ್ಳಿಯ ಸಂಪರ್ಕ ಕಡಿತಗೊಂಡಿದೆ.

ಹೆದ್ದಾರಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸುಮಾರು 50 ಅಡಿಗೂ ಹೆಚ್ಚು ದೂರ ಬಿರುಕು ಬಿಟ್ಟಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಎಸ್ಟೇಟ್ ಬಳಿ ಘಟನೆ ನಡೆದಿದೆ. ತುಂಗಾ ನದಿ ಪಕ್ಕದಲ್ಲೇ ಬಿರುಕು ಬಿಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ 169 ಶೃಂಗೇರಿ-ಕಾರ್ಕಳ ಮಾರ್ಗದಲ್ಲಿ ನಿತ್ಯ ಹತ್ತಾರು ಬಸ್, ನೂರಾರು ವಾಹನಗಳು ಓಡಾಡುವವರು ಭೀತಿಗೊಂಡಿದ್ದಾರೆ. ಕಳಪೆ ಕಾಮಗಾರಿಯಿಂದ ಈ ಸ್ಥಿತಿ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವರ್ಷದ ಹಿಂದೆ ಇದೇ ಜಾಗದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದರು.

ಉಕ್ಕಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ಮೀನುಗಾರಿಕೆ

ಮಲೆನಾಡ ಮಳೆಗೆ ತುಂಗಾ-ಭದ್ರಾ-ಹೇಮಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲಾ ಆಡಳಿತದ ಎಚ್ಚರಿಕೆಯ ನಡುವೆಯೂ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಮೀನುಗಾರಿಕೆಗೆ ಇಳಿದಿದ್ದಾರೆ. ರುದ್ರನರ್ತನ ತಾಳಿರುವ ಭದ್ರ ನದಿಯಲ್ಲಿ ಜನರು ಮೀನು ಹಿಡಿಯುತ್ತಿರುವ ದೃಶ್ಯಗಳು ಕಂಡು ಬಂದಿದೆ. ಭದ್ರೆಯ ಒಡಲಲ್ಲಿ ತೆಪ್ಪದಲ್ಲಿ ಮೀನುಗಾರಿಕೆಗೆ ಮುಂದಾಗಿದ್ದು, ಸ್ವಲ್ಪ ಯಾಮಾರಿದರು ಅಪಾಯ ಕಟ್ಟಿಟ್ಟಬುತ್ತಿ.

ಇತ್ತ ಭದ್ರಾ ನದಿ ಅಬ್ಬರಕ್ಕೆ ಸ್ಥಳೀಯರು ಕಂಗಾಲಾಗಿದ್ದಾರೆ. ಭದ್ರಾ ನದಿ ತಟದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಳೆಹೊನ್ನೂರಿನ ನದಿ ತಟದ ಜಮೀನುಗಳು, ತೋಟಗಳು ಮುಳುಗಡೆಯಾಗಿದೆ. ಅಡಿಕೆ, ಕಾಫಿ ತೋಟಗಳು ಸಂಪೂರ್ಣ ಜಲಾವೃತಗೊಂಡಿದೆ.

ಪ್ರವಾಸಿಗರ ನಿಷೇಧ

ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನ ಹೊನ್ನಮ್ಮನ ಹಳ್ಳ ಜಲಪಾತ ರೌದ್ರಾವತಾರ ತಾಳಿದೆ. ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಹೊನ್ನಮ್ಮನ ಹಳ್ಳ ಫಾಲ್ಸ್‌ನ ಮೆಟ್ಟಿಲುಗಳನ್ನು ಆವರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಫಾಲ್ಸ್ ಬಳಿ ಪ್ರವಾಸಿಗರ ನಿಷೇಧ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shiradi Ghat
ಪ್ರಮುಖ ಸುದ್ದಿ35 seconds ago

Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Immense damage due to rain in various parts of Soraba Taluk MP BY Raghavendra visited and inspected
ಶಿವಮೊಗ್ಗ4 mins ago

Shivamogga News: ಸೊರಬದ ವಿವಿಧೆಡೆ ಮಳೆಯಿಂದ ಅಪಾರ ಹಾನಿ; ಸಂಸದ ಬಿ.ವೈ.ರಾಘವೇಂದ್ರ ಭೇಟಿ

Israel Palestine War
ವಿದೇಶ6 mins ago

Israel Palestine War: 50 ಕಿ.ಮೀ ದೂರದಿಂದಲೇ ಪ್ಯಾಲೆಸ್ತಿನ್‌ ಕಮಾಂಡರ್‌ನನ್ನು ಕೊಂದ ಇಸ್ರೇಲ್‌! ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್12 mins ago

Viral Video: ಮೂರು ಅಡಿಯ ಕುಳ್ಳನಿಗೆ ಏಳಡಿ ಎತ್ತರದ ಗರ್ಲ್ ಫ್ರೆಂಡ್! ಇವರ ಪ್ರಣಯದ ವಿಡಿಯೊ ನೋಡಿ!

Rain News;
ಪ್ರಮುಖ ಸುದ್ದಿ28 mins ago

Rain News : ಪ್ರಯಾಣಿಕರೇ ಗಮನಿಸಿ; ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

Sexual Assault case
ಕ್ರೈಂ40 mins ago

Sexual Assualt Case: ಅಶ್ಲೀಲ ವಿಡಿಯೊ ವೀಕ್ಷಿಸಿ ಉದ್ರೇಕಗೊಂಡ ಮೂವರು ಶಾಲಾ ಬಾಲಕರಿಂದ ಬಾಲಕಿಯ ಅತ್ಯಾಚಾರ, ಕೊಲೆ

International Cricket Council
ಕ್ರಿಕೆಟ್55 mins ago

International Cricket Council : ಟಿ20 ವಿಶ್ವಕಪ್ ಆಯೋಜನೆಯಲ್ಲಿ ಐಸಿಸಿಗೆ 167 ಕೋಟಿ ರೂಪಾಯಿ ನಷ್ಟ

Team India Srilanka Tour
ಪ್ರಮುಖ ಸುದ್ದಿ1 hour ago

Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

Viral Video
Latest2 hours ago

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Train Accident
ದೇಶ2 hours ago

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌