Cow Slaughter : ಹುಬ್ಬಳ್ಳಿ ಕಸಾಯಿ ಖಾನೆಗಳಲ್ಲಿ ಗೋವುಗಳ ಮಾರಣಹೋಮ ಆರೋಪ; ಕಾನೂನು ಕ್ರಮಕ್ಕೆ ಬಜರಂಗ ದಳ ಆಗ್ರಹ - Vistara News

ಕ್ರೈಂ

Cow Slaughter : ಹುಬ್ಬಳ್ಳಿ ಕಸಾಯಿ ಖಾನೆಗಳಲ್ಲಿ ಗೋವುಗಳ ಮಾರಣಹೋಮ ಆರೋಪ; ಕಾನೂನು ಕ್ರಮಕ್ಕೆ ಬಜರಂಗ ದಳ ಆಗ್ರಹ

ಹುಬ್ಬಳ್ಳಿಯ ಅಲ್ತಾಫ್‌ ನಗರದಲ್ಲಿರುವ ಕಸಾಯಿ ಖಾನೆಗಳಲ್ಲಿ ಗೋವುಗಳ ಮಾರಣಹೋಮವೇ (Cow Slaughter) ನಡೆಯುತ್ತಿದೆ. ಇದನ್ನು ತಡೆಯಬೇಕು ಎಂದು ಬಜರಂಗ ದಳ ಆಗ್ರಹಿಸಿದೆ.

VISTARANEWS.COM


on

Hubballi cow slaughter
ಹುಬ್ಬಳ್ಳಿಯ ಅಲ್ತಾಫ್‌ ನಗರದ ಕಸಾಯಿ ಖಾನೆಯ ಒಳಗಿನ ದೃಶ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಮಹಾನಗರದ ಕಸಾಯಿ ಖಾನೆಗಳಲ್ಲಿ ಗೋವುಗಳ ಮಾರಣಹೋಮ (Cow Slaughter) ನಡೆಯುತ್ತಿದ್ದು, ಇದರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಬಜರಂಗ ದಳದ ಮುಖಂಡರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಹಳೆ ಹುಬ್ಬಳ್ಳಿಯ ಅಲ್ತಾಫ್‌ ನಗರದಲ್ಲಿ ಗೋಮಾಂಸ ದಂಧೆಕೋರರು ನೂರಾರು ಗೋವುಗಳನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ಅವುಗಳನ್ನು ಅಮಾನುಷವಾಗಿ ಕೊಂದು ಮಾಂಸ ಮಾರಾಟ ಮಾಡುತ್ತಾರೆ ಎಂದು ಆರೋಪಿಸಿರುವ ಬಜರಂಗ ದಳ, ಕಸಾಯಿ ಖಾನೆಯ ವಿಡಿಯೊ ಚಿತ್ರೀಕರಿಸಿ ಪೊಲೀಸ್ ಆಯುಕ್ತರಿಗೆ ನೀಡಿದೆ.

ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿದ್ದು, ಅಪ್ರಾಪ್ತ ಮಕ್ಕಳನ್ನು ಕೂಡಾ ಗೋ ಹತ್ಯೆ ಪ್ರಕ್ರಿಯೆಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಗೋವುಗಳ ಮಾರಣಹೋಮವನ್ನು ತಡೆಯಬೇಕು. ಪೊಲೀಸರು ಕಾನೂನು ಕ್ರಮ ಕೈಗೊಳ್ಳದಿದ್ದರೆ ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಸೇರಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Dharma dangal : ರಾಯಚೂರಿಗೂ ಕಾಲಿಟ್ಟ ವ್ಯಾಪಾರ ದಂಗಲ್‌; ಗುರುಗುಂಟ ಅಮರೇಶ್ವರ ಜಾತ್ರೆಗೆ ಅನ್ಯ ಧರ್ಮದ ವ್ಯಾಪಾರಿಗಳಿಗೆ ಪ್ರವೇಶವಿಲ್ಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Murder case : ಹಾಸನದಲ್ಲಿ ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ

Murder case : ದಾಯಾದಿಗಳ ಕಲಹವು ಕೊಲೆಯಲ್ಲಿ ಅಂತ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯ ನೀರಿನಲ್ಲಿ ಸಂಪರ್ಕ ಅಳವಡಿಸುವ ಜಾಗದ ವಿಷಯಕ್ಕೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ.

VISTARANEWS.COM


on

By

murder Case in hasana
ಮೃತ ದುರ್ದೈವಿ
Koo

ಹಾಸನ: ಕ್ಷುಲ್ಲಕ ಕಾರಣಕ್ಕೆ ದಾಯಾದಿಗಳ ನಡುವೆ ಶುರುವಾದ ಜಗಳವು ಕೊಲೆಯಲ್ಲಿ (Murder case) ಅಂತ್ಯವಾಗಿದೆ. ದಯಾನಂದ್ (40) ಮೃತ ದುರ್ದೈವಿ. ಹಾಸನ ಜಿಲ್ಲೆಯ (Hasana News) ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಸಮೀಪದ ದಮ್ಮನಿಂಗಳ ಗ್ರಾಮದಲ್ಲಿ ಘಟನೆ ನಡೆದಿದೆ.

ಜಲಜೀವನ್ ಮಿಷನ್ ಯೋಜನೆಯ ನೀರಿನಲ್ಲಿ ಸಂಪರ್ಕ ಅಳವಡಿಸುವ ಜಾಗದ ವಿಷಯಕ್ಕೆ ದಯಾನಂದ್ ಹಾಗೂ ವರುಣ್ ನಡುವೆ ಜಗಳ ಆರಂಭವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು ಸಹೋದರರು ಚಾಕು ಹಾಗೂ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.

ಈ ವೇಳೆ ದಯಾನಂದ್‌ ಸ್ಥಳದಲ್ಲೇ ಮೃತಪಟ್ಟರೆ, ವರುಣ್ (36) ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ವರುಣ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯ ಪಕ್ಕದ ನಾಲ್ಕು ಅಡಿ ಜಾಗಕ್ಕಾಗಿ ಹಲವಾರು ವರ್ಷಗಳಿಂದ ವ್ಯಾಜ್ಯ ನಡೆಯುತ್ತಿತ್ತು. ಇದೇ ಜಾಗಕ್ಕಾಗಿ ಸಹೋದರರ ನಡುವೆ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.

ಸ್ಥಳಕ್ಕೆ ಅಪರ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ: Parappana Agrahara: ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲು ಸಾಗಿಸುತ್ತಿದ್ದ ಕೈದಿ; 2 ಫೋನ್‌ ಎಲ್ಲಿಟ್ಟುಕೊಂಡಿದ್ದ ಗೊತ್ತಾ?

ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್

ಚಿಕ್ಕಬಳ್ಳಾಪುರ: ಪ್ರೀತಿ ಹೆಸರಲ್ಲಿ ತನ್ನನ್ನು ಗರ್ಭಿಣಿ (Pregnant) ಮಾಡಿ ವಂಚಿಸಿ (Fraud Case) ಪ್ರಿಯಕರ ಪರಾರಿಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಆಕೆ ಗರ್ಭಿಣಿ ಆಗಿದ್ದು, ಪ್ರಿಯಕರನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಇಬ್ಬರೂ ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲಸಂದ್ರ ಗ್ರಾಮದ ನಿವಾಸಿಗಳು. ಸೂರ್ಯಪ್ರಕಾಶ್ ಪ್ರೀತಿಸಿ ಗರ್ಭಿಣಿ ಮಾಡಿ ಕೈ ಕೊಟ್ಟ ಪ್ರಿಯಕರ. ಗಗನ ಪ್ರೀತಿಯ ಹೆಸರಲ್ಲಿ ಮೋಸ ಹೋದ ಪ್ರಿಯತಮೆ. ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ!

Prajwal Revanna Case: ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

prajwal revanna case test
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಇದೀಗ ಜೈಲಿನಲ್ಲಿರುವ ಹಾಸನ (Hassan news) ಮಾಜಿ ಸಂಸದ ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

ಪ್ರತಿದಿನ ಫೋನ್‌ ಮಾಡಿ ಬೆತ್ತಲಾಗಲು ಹೇಳ್ತಿದ್ದ: ಪ್ರಜ್ವಲ್‌ ವಿರುದ್ಧ ನಾಲ್ಕನೇ ದೂರು

ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಸಿನಿಮಾ

Actor Darshan: ಇಂದು ನ್ಯಾಯಾಲಯಕ್ಕೆ ಹಾಜರಾಗ್ತಿಲ್ಲ ದರ್ಶನ್ &ಟೀಂ; ಕಾರಣವೇನು?

Actor Darshan: ಜೈಲುಪಾಲಾಗಿರುವ ನಟ ದರ್ಶನ್‌ (Actor Darshan), ಒಂದೇ ಸೆಲ್‌ನಲ್ಲಿರುವ ತನ್ನ ಶಿಷ್ಯ ವಿನಯ್‌ ಅನ್ನು ಕೂಡ ಹೆಚ್ಚು ಮಾತನಾಡಿಸುತ್ತಿಲ್ಲ, ಮೌನವಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಚೋದಿಸಿ ತನ್ನಿಂದ ಕೊಲೆ (Murder Case) ಮಾಡಿಸಿದರು ಎಂಬ ಸಿಟ್ಟೇ ಇದಕ್ಕೆ ಕಾರಣ ಎನ್ನಲಾಗಿದೆ. ಇಂದು (ಜುಲೈ 4) ಎಲ್ಲರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ದರ್ಶನ್ ಹಾಗೂ ಅವರ ಟೀಂ ಕೋರ್ಟ್​ಗೆ ಹಾಜರಾಗಬೇಕಿತ್ತು.

VISTARANEWS.COM


on

Actor Darshan Will Attend The Court Hearing From Online
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ (Actor Darshan) ಅವರು ನ್ಯಾಯಾಂಗ ಬಂಧನಲ್ಲಿದ್ದಾರೆ. ಕೊಲೆ ಮಾಡಿದ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿದೆ.ಇಂದು (ಜುಲೈ 4) ಎಲ್ಲರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ದರ್ಶನ್ ಹಾಗೂ ಅವರ ಟೀಂ ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಇಂದು ದರ್ಶನ್ ಅವರು ನೇರವಾಗಿ ಕೋರ್ಟ್​ಗೆ ಬರುತ್ತಿಲ್ಲ, ಬದಲಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಲಿದ್ದಾರೆ. ಪೊಲೀಸ್ ಕಸ್ಟಡಿ ಅಗತ್ಯವಿರದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೊಲೀಸರು ಚಾರ್ಚ್ ಶೀಟ್‌ ಸಲ್ಲಿಸಿದ ಬಳಿಕ ಜಾಮೀನು ಅರ್ಜಿಗೆ ಮನವಿ ಮಾಡುತ್ತಾರೆ. ಪೊಲೀಸರು ಚಾರ್ಚ್ ಶೀಟ್ ನಲ್ಲಿ ಯಾವೆಲ್ಲಾ ಅಂಶಗಳನ್ನ ಉಲ್ಲೇಖ ಮಾಡುತ್ತಾರೋ ಆ ಅಂಶಗಳ ಮೇಲೆ ದರ್ಶನ್ ಅರ್ಜಿ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ಆಗುವವರೆಗೂ ಕಾಯುವ ತಂತ್ರಕ್ಕೆ ವಕೀಲರು ಮೊರೆ ಹೋಗಿದ್ದಾರೆ. 90 ದಿನಗಳಲ್ಲಿ ಚಾರ್ಚ್ ಶೀಟ್ ಸಲ್ಲಿಸಲು ಪೊಲೀಸರಿಗೆ ಅವಕಾಶವಿದೆ. ಇನ್ನು ಹೆಚ್ಚು ಕಮ್ಮಿ ಎರಡು ತಿಂಗಳು ಸಮಯ ಇರುವ ಕಾರಣ. ಅಷ್ಟರ ಒಳಗೆ ಚಾರ್ಚ್ ಶೀಟ್ ಸಲ್ಲಿಸಲಿದ್ದಾರೆ ಕಾಮಾಕ್ಷಿಪಾಳ್ಯ ಪೊಲೀಸರು. ಅಲ್ಲಿಯವರೆಗೂ ನಟ ಹಾಗು ಆತನ ಗ್ಯಾಂಗ್‌ಗೆ ನ್ಯಾಯಾಂಗ ಬಂಧನವೇ ಗಟ್ಟಿ. ಸದ್ಯ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಜೈಲು ಸಿಬ್ಬಂಧಿಗಳು ಹಾಜರು ಪಡಿಸಲಿದ್ದಾರೆ.

ಪವಿತ್ರಾ ಗೌಡ ಪರ ವಕೀಲರು ಮಾಹಿತಿ ನೀಡಿದ್ದಾರೆ. ‘ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗುವುದಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ’ ಎಂದಿದ್ದಾರೆ. ಈ ಪ್ರಕರಣದಲ್ಲಿ ಸದ್ಯ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

ಜೈಲು ಸಹವಾಸಿಗಳನ್ನು ಮಾತನಾಡಿಸದ ದರ್ಶನ್‌

ಜೈಲುಪಾಲಾಗಿರುವ ನಟ ದರ್ಶನ್‌ (Actor Darshan), ಒಂದೇ ಸೆಲ್‌ನಲ್ಲಿರುವ ತನ್ನ ಶಿಷ್ಯ ವಿನಯ್‌ ಅನ್ನು ಕೂಡ ಹೆಚ್ಚು ಮಾತನಾಡಿಸುತ್ತಿಲ್ಲ, ಮೌನವಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಚೋದಿಸಿ ತನ್ನಿಂದ ಕೊಲೆ (Murder Case) ಮಾಡಿಸಿದರು ಎಂಬ ಸಿಟ್ಟೇ ಇದಕ್ಕೆ ಕಾರಣ ಎನ್ನಲಾಗಿದೆ.

ಸಹವಾಸ ಮಾಡಿ ಕೆಟ್ಟ ಮೇಲೆ ದರ್ಶನ್‌ಗೆ ಬುದ್ಧಿ ಬಂದಂತಿದೆ. ರೇಣುಕಾ ಸ್ವಾಮಿ ಮೆಸೇಜ್‌ಗಳಿಂದ ಆಕ್ರೋಶಗೊಂಡಿದ್ದ ದರ್ಶನ್‌ಗೆ ಇನ್ನಷ್ಟು ಪ್ರಚೋದನೆ ನೀಡಿದವರು ಜೊತೆಯಲ್ಲಿದ್ದ ವಿನಯ್ ಮತ್ತು ಟೀಂ. ಶೆಡ್‌ನಲ್ಲಿ ಹಲ್ಲೆ ನಡೆಸುತ್ತಿದ್ದಾಗ ʼಬಾಸ್, ಬಿಡ್ಬೇಡಿ ಬಿಡ್ಬೇಡಿʼ ಎಂದು ಗ್ಯಾಂಗ್‌ ಪ್ರಚೋದನೆ ಕೊಟ್ಟಿತ್ತು. ಇದರಿಂದಾಗಿಯೇ ಕೈಮೀರಿ ಕೊಲೆ ನಡೆಯಿತು ಎಂದು ದರ್ಶನ್‌ ಭಾವಿಸಿದಂತಿದೆ.

ತಾನು ಮಾಡಿದ್ದು ತಪ್ಪೋ, ಇವರ ಮಾತು ಕೇಳಿ ಕೆಟ್ಟೆನೋ ಎಂಬ ಚಿಂತೆಯಲ್ಲೇ ಇರುವ ದರ್ಶನ್, ಇದೇ ಕಾರಣಕ್ಕೆ ಜೊತೆಯಲ್ಲೇ ಒಂದೇ ಬ್ಯಾರಕ್‌ನಲ್ಲಿದ್ದರೂ ವಿನಯ್‌ ಅನ್ನು ಹೆಚ್ಚು ಮಾತನಾಡಿಸುತ್ತಿಲ್ಲ. ಜೊತೆಗಿರುವವರ ಸಹವಾಸ ಬಿಟ್ಟು ಹೆಚ್ಚು ಒಂಟಿಯಾಗಿದ್ದಾನೆ. ನಾನು ತಪ್ಪು ಮಾಡಿಬಿಟ್ನೋ ಅಥವಾ ಜೊತೆಯಲ್ಲಿದ್ದವರ ಮಾತು ಕೇಳಿ ಕೆಟ್ನೋ ಗೊತ್ತಿಲ್ಲ ಎಂದು ಸಿಬ್ಬಂದಿಗಳ ಬಳಿ ಆತ ಮಾತಾಡಿದ್ದು ವರದಿಯಾಗಿದೆ. ತಾಯಿ ಬಂದಾಗಲೂ, ಪತ್ನಿ ಬಂದಾಗಲೂ, ರಕ್ಷಿತಾ ಪ್ರೇಮ್ ಬಂದಾಗಲೂ ದರ್ಶನ್ ಇದೇ ಮಾತು ಹೇಳಿದ್ದಾರೆ ಎನ್ನಲಾಗಿದೆ.

Continue Reading

ಕ್ರೈಂ

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Fraud Case: ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

VISTARANEWS.COM


on

fraud case bagepalli
Koo

ಚಿಕ್ಕಬಳ್ಳಾಪುರ: ಪ್ರೀತಿ ಹೆಸರಲ್ಲಿ ತನ್ನನ್ನು ಗರ್ಭಿಣಿ (Pregnant) ಮಾಡಿ ವಂಚಿಸಿ (Fraud Case) ಪ್ರಿಯಕರ ಪರಾರಿಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಆಕೆ ಗರ್ಭಿಣಿ ಆಗಿದ್ದು, ಪ್ರಿಯಕರನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಇಬ್ಬರೂ ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲಸಂದ್ರ ಗ್ರಾಮದ ನಿವಾಸಿಗಳು. ಸೂರ್ಯಪ್ರಕಾಶ್ ಪ್ರೀತಿಸಿ ಗರ್ಭಿಣಿ ಮಾಡಿ ಕೈ ಕೊಟ್ಟ ಪ್ರಿಯಕರ. ಗಗನ ಪ್ರೀತಿಯ ಹೆಸರಲ್ಲಿ ಮೋಸ ಹೋದ ಪ್ರಿಯತಮೆ. ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಗುದದ್ವಾರದಲ್ಲಿ 2 ಮೊಬೈಲ್‌ ಇಟ್ಟುಕೊಂಡು ಜೈಲಿನೊಳಗೆ ಹೋಗಲು ಯತ್ನಿಸಿದ ಕೈದಿ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara Jail) ಜೈಲಿನಲ್ಲಿ ಕೈದಿಗಳ (Prison inmates) ಕಳ್ಳಾಟ ನಿಲ್ಲುತ್ತಿಲ್ಲ. ಕೈದಿಗಳಿಂದಲೇ ರಾಜಾರೋಷವಾಗಿ ಜೈಲಿನಲ್ಲಿ ಮೊಬೈಲ್ ಮಾರಾಟ (mobile phone sale) ನಡೆಯುತ್ತಿದ್ದು, ಜೈಲಿನಲ್ಲಿಯೇ ಇದರಿಂದ ಕೆಲವರು ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದಾರೆ. ಈ ವರದಿ ಓದಿದರೆ, ಮೊಬೈಲ್‌ ಸಾಗಿಸಲು ಇಂಥ ಹಾದಿ ಹಿಡಿಯುವವರೂ ಇರ್ತಾರಾ ಎಂದು ನಿಮಗೆ ಸೋಜಿಗ ಆಗಬಹುದು.

ಹೀಗೆ ಒಬ್ಬ ಕೈದಿ ಕದ್ದು ಮುಚ್ಚಿ ಜೈಲಿಗೆ ಮೊಬೈಲ್ ತೆಗೆದುಕೊಂಡು ಹೋಗಲು ಯತ್ನಿಸಿದ್ದು, ಈತ ಮೊಬೈಲ್ ಇಟ್ಟುಕೊಂಡ ಜಾಗ ಮಾತ್ರ ಪತ್ತೆ ಮಾಡಿದ್ದೇ ರೋಚಕ. ಕೋರ್ಟ್‌ಗೆ ಹೋಗಿ ಮರಳುತ್ತಿದ್ದ ಕೈದಿಯೊಬ್ಬನ ಗುದದ್ವಾರದಲ್ಲಿ ಎರಡು ಮೊಬೈಲ್ ಸಿಕ್ಕಿವೆ! ಜೈಲಿನ ಒಳಗೆ ಬರುವಾಗ ಸ್ಕ್ಯಾನ್ ಮಾಡಿದಾಗ ಈ ವಿಚಾರ ಪತ್ತೆಯಾಗಿದೆ. ರಘುವೀರ್ ಎಂಬ ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ ಎರಡು ಮೊಬೈಲ್ ಹಾಗೂ ಬ್ಯಾಟರಿ ಪತ್ತೆಯಾಗಿವೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದ ಪೊಲೀಸರು ವಾಪಸ್ ಬರುವಾಗ ಯಾರಿಂದಲೋ ಹೇಗೋ ಕಣ್ಣು ತಪ್ಪಿಸಿ ಈತ ಮೊಬೈಲ್ ಪಡೆದಿದ್ದ. ಶ್ರೀಕೃಷ್ಣ ಎಂಬ ಪೊಲೀಸ್ ಪೇದೆ ರಘುವೀರ್‌ನನ್ನು ಕರೆದುಕೊಂಡು ಹೋಗಿದ್ದ. ವಾಪಸ್ ಬಂದಾಗ ಜೈಲಿನ ತಪಾಸಣೆ ವೇಳೆ ಸ್ಕ್ಯಾನ್ ಸೈರನ್ ಮಾಡಿತ್ತು. ಕೂಡಲೇ ರಘುವೀರ್‌ನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದು ಎಕ್ಸರೇ ಮಾಡಿದಾಗ ಪೊಲೀಸರಿಗೇ ಶಾಕ್ ಆಗಿತ್ತು.

ಹೊಟ್ಟೆಯೊಳಗೆ ಎರಡು ಮೊಬೈಲ್ ಇದ್ದವು. ಹೊಟ್ಟೆಯೊಳಗೆ ಮೊಬೈಲ್ ಹಾಕಿಕೊಂಡು, ಸೆಲ್ಲೋ ಟೇಪ್ ಗುದದ್ವಾರದಲ್ಲಿ ಕೆಳಗೆ ಬಿಟ್ಟಿದ್ದ. ಜೈಲಿನೊಳಗೆ ಹೋಗಿ ಅದನ್ನು ತೆಗೆದು ಲಕ್ಷ ಲಕ್ಷಕ್ಕೆ ಮಾರಾಟ ಮಾಡಲು ಪ್ಲಾನ್‌ ಮಾಡಿಕೊಂಡಿದ್ದ. ಆದರೆ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ, ಆತ ಯಾರಿಗೆ ಮಾರಲು ಮೊಬೈಲ್‌ ಒಯ್ದಿದ್ದ ಎಂಬ ಕುತೂಹಲ ಮೂಡಿದೆ. ಹೈ ಪ್ರೊಫೈಲ್, ವಿಐಪಿ ಕೈದಿಗಳು ಕೂಡ ಜೈಲಿನಲ್ಲಿರುವುದರಿಂದ ಈ ಕುತೂಹಲ.

ಇದನ್ನೂ ಓದಿ: Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Continue Reading
Advertisement
Gold Rate Today
ಚಿನ್ನದ ದರ31 seconds ago

Gold Rate Today: ಕೈ ಸುಡುತಿದೆ ಚಿನ್ನದ ದರ; ಆಭರಣ ಖರೀದಿಸುವ ಮುನ್ನ ಬೆಲೆ ಚೆಕ್‌ ಮಾಡಿ

Juhi Chawla mother-in-law uninvited nearly 2000 guests her wedding
ಬಾಲಿವುಡ್9 mins ago

Juhi Chawla: ಮದುವೆಗೆ 2000 ಜನಕ್ಕೆ ನೀಡಲಾಗಿತ್ತು ಆಮಂತ್ರಣ; ಆದರೆ ಅತ್ತೆ ಹಿಂಪಡೆದರು ಎಂದ ಜೂಹಿ ಚಾವ್ಲಾ!

Karnataka Rain
ಮಳೆ19 mins ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

dengue fever mysore death
ಪ್ರಮುಖ ಸುದ್ದಿ29 mins ago

Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

Hathras Stampede
ದೇಶ33 mins ago

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Virat Kohli
ಕ್ರೀಡೆ33 mins ago

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Shiva Rajkumar Bhairavana Kone PaaTa Title announce
ಸ್ಯಾಂಡಲ್ ವುಡ್58 mins ago

Shiva Rajkumar: ‘ಭೈರವನ ಕೊನೆ ಪಾಠ’ದಲ್ಲಿ ಶಿವರಾಜ್‌ಕುಮಾರ್‌; ಹ್ಯಾಟ್ರಿಕ್ ಹೀರೊಗೆ ಹೇಮಂತ್‌ ರಾವ್‌ ಆ್ಯಕ್ಷನ್‌ ಕಟ್‌!

rain news no entry falls
ಪ್ರಮುಖ ಸುದ್ದಿ1 hour ago

Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

Tornado Effect in Udupi
ಉಡುಪಿ1 hour ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

MS Dhoni
ಕ್ರೀಡೆ1 hour ago

MS Dhoni: ಪತ್ನಿಗೆ ಕೇಕ್​ ತಿನ್ನಿಸಿ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಧೋನಿ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 mins ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ1 hour ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಟ್ರೆಂಡಿಂಗ್‌