Lakkundi Festival: ಫೆ.10ರಿಂದ ಲಕ್ಕುಂಡಿ ಉತ್ಸವ; ಸಿಎಂ ಬೊಮ್ಮಾಯಿ ಚಾಲನೆ, ಕುನಾಲ ಗಾಂಜಾವಾಲ, ಅನನ್ಯಾ ಭಟ್ ರಸಮಂಜರಿ - Vistara News

ಕರ್ನಾಟಕ

Lakkundi Festival: ಫೆ.10ರಿಂದ ಲಕ್ಕುಂಡಿ ಉತ್ಸವ; ಸಿಎಂ ಬೊಮ್ಮಾಯಿ ಚಾಲನೆ, ಕುನಾಲ ಗಾಂಜಾವಾಲ, ಅನನ್ಯಾ ಭಟ್ ರಸಮಂಜರಿ

Lakkundi Festival: ಫೆ. 10ರಿಂದ 12ರ ವರೆಗೆ ಲಕ್ಕುಂಡಿ ಉತ್ಸವ ನಡೆಯಲಿದ್ದು, ಉತ್ಸವದ ಯಶಸ್ವಿಗಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ.

VISTARANEWS.COM


on

Lakkundi Festival gadaga
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಐತಿಹಾಸಿಕ ಲಕ್ಕುಂಡಿ ಉತ್ಸವವು (Lakkundi Festival) ಫೆ. 10ರಂದು ಆರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಉತ್ಸವದ ಯಶಸ್ವಿಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಫೆ. 10ರಿಂದ 12ರ ವರೆಗೆ ಮೂರು ದಿನಗಳ ಕಾಲ ಜರುಗಲಿದೆ.

ಫೆ. 10ರಂದು ಲಕ್ಕುಂಡಿ ಸರಕಾರಿ ಮಾದರಿ ಪ್ರೌಢ ಶಾಲೆಯಲ್ಲಿ ಬೆಳಗ್ಗೆ 10 ಗಂಟೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಸ್ಥಳೀಯ ಕಲಾ ತಂಡಗಳಿಂದ 25ಕ್ಕೂ ಹೆಚ್ಚು ಕಲಾ ಪ್ರಕಾರಗಳ ಜಾನಪದ ಕಲಾವಾಹಿನಿಗಳ ಮೆರವಣಿಗೆ ಮೂಲಕ ಲಕ್ಕುಂಡಿ ಉತ್ಸವ ಪ್ರಾರಂಭವಾಗುವುದು. ಅದೇ ದಿನ ಸಾಯಂಕಾಲ 6 ಗಂಟೆಗೆ ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು ಕಾರ್ಯಕ್ರಮವನ್ನು ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಉದ್ಘಾಟಿಸಲಿದ್ದಾರೆ

ನಾನಾ ಕ್ರೀಡಾ ಸ್ಪರ್ಧೆಗಳ ವೈಭವ

ಉತ್ಸವದ ಅಂಗವಾಗಿ ಲಕ್ಕುಂಡಿಯ ಬಿ.ಎಚ್.ಪಾಟೀಲ್ ಪ್ರೌಢಶಾಲೆ ಆವರಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಕ್ರೀಡಾ ಸ್ಪರ್ಧೆಗಳಿಗೆ ಬೆಳಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದೆ. ಕುಸ್ತಿ ಸ್ಪರ್ಧೆಗೆ ಲಕ್ಕುಂಡಿಯ ಅಂತಾರಾಷ್ಟ್ರೀಯ ಕುಸ್ತಿ ಪಟು ಕು. ಪ್ರೇಮಾ ಹುಚ್ಚಣ್ಣವರ, ಕಬಡ್ಡಿ ಸ್ಪರ್ಧೆಗೆ ಅರ್ಜುನ ಪ್ರಶಸ್ತಿ ಪುರಸ್ಕೃತ ಅತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಡಾ. ಸಿ.ಹೊನ್ನಪ್ಪಗೌಡ ಚಾಲನೆ ನೀಡುವರು.

ಕ್ರೀಡಾ ಸ್ಪರ್ಧೆಗಳಲ್ಲಿ ಕುಸ್ತಿ, ಕಬಡ್ಡಿ, ಮಲ್ಲಕಂಬ, ಯೋಗ, ಚಿತ್ರಕಲಾ ಸ್ಪರ್ಧೆ, ಬೋಟಿಂಗ್, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ನೀರಗ್ನಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಸಿರಿಧಾನ್ಯಗಳ ಮಹತ್ವ ಸಾರುವ ಸದುದ್ದೇಶದಿಂದ ಪಾರಂಪರಿಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಪ್ರಧಾನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಮಂಗಲ ವಾದ್ಯ, ತತ್ವಪದ, ನೃತ್ಯ, ದೊಡ್ಡಾಟ ಪದ, ಹಿಂದೂಸ್ತಾನಿ ಸಮೂಹ ನೃತ್ಯ, ಡೊಳ್ಳಿನ ಪದ, ಜನಪದ ನೃತ್ಯ, ಶಾಸ್ತ್ರೀಯ ಸಂಗೀತ, ಮಲ್ಲಕಂಬ, ದೀಪನೃತ್ಯ, ಯಕ್ಷಗಾನ ಸೇರಿದಂತೆ ವಿವಿಧ ಕಲಾಪ್ರಕಾರಗಳ ಅನಾವರಣಗೊಳ್ಳಲಿದೆ. ಗದಗ ಜಿಲ್ಲೆಯ ಪ್ರಮುಖವಾಗಿ ಲಕ್ಕುಂಡಿಯ ಐತಿಹಾಸಿಕ ಹಾಗೂ ಪಾರಂಪರಿಕ ಹಿನ್ನೆಲೆಯನ್ನು ಗಮನದಲ್ಲಿರಿಸಿಕೊಂಡು ವಿಶೇಷ ಲೇಸರ್ ಶೋ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

#image_title

ವೀರ ರಾಣಿ ಕಿತ್ತೂರ ಚನ್ನಮ್ಮ ನಾಟಕ

ಬಿ.ಎಚ್.ಪಾಟೀಲ್ ಪ್ರೌಢ ಶಾಲೆಯ ಆವರಣದಲ್ಲಿ ಫೆ.10 ರಂದು ರಾತ್ರಿ 9 ಗಂಟೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನಾಟಕ ಪ್ರದರ್ಶನ ನಡೆಯಲಿದೆ. ಧಾರವಾಡದ ರಂಗಾಯಣ ತಂಡದಿಂದ ರಚಿಸಲಾದ ಈ ನಾಟಕವು ರಾಣಿ ಚೆನ್ನಮ್ಮಳ ಸಾಹಸ ಯುದ್ಧ ಕಲೆ ಹಾಗೂ ಸ್ವಾತಂತ್ರ್ಯ ಹೋರಾಟದ ವಿವಿಧ ಹಂತಗಳನ್ನು ತೆರೆದಿಡಲಿದೆ. ‌ ಬ್ರಿಟಿಷರ ಸೊಕ್ಕಡಗಿಸಿ ಸ್ವಾತಂತ್ರ್ಯದ ಕಹಳೆ ಊದುವಲ್ಲಿ ಚೆನ್ನಮ್ಮನ ಸಾಹಸ ಗಾಥೆ ಬಿಂಬಿಸುವ ನಾಟಕ ಪ್ರದರ್ಶನದಲ್ಲಿ 250ಕ್ಕೂ ಹೆಚ್ಚು ಕಲಾವಿದರು ಸಜೀವ ಆನೆ, ಕುದುರೆ, ಒಂಟೆಗಳೊಂದಿಗೆ ನಾಟಕವು ಜನಮನ ರಂಜಿಸಲಿದೆ.

ಇದನ್ನೂ ಓದಿ: ಯುವನಟ ಅನೂಪ್ ರೇವಣ್ಣ ಜನುಮದಿನದಂದು ‘ಹೈಡ್ ಆ್ಯಂಡ್ ಸೀಕ್’ ಪೋಸ್ಟರ್ ಲಾಂಚ್

ನಾಲ್ಕು ವೈವಿಧ್ಯಮಯ ಗೋಷ್ಠಿಗಳು

ಮುಖವಾಗಿ ನಾಲ್ಕು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.11 ರಂದು ಬೆಳಗ್ಗೆ 10 ಗಂಟೆಗೆ ಲಕ್ಕುಂಡಿಯ ಇತಿಹಾಸ ಕುರಿತು ವಿಚಾರ ಗೋಷ್ಠಿ ಜರುಗಲಿದೆ. ಕನ್ನಡ ಪ್ರಭ ದಿನ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಮಲ್ಲಿಕಾರ್ಜುನ ಸಿದ್ಧಣ್ಣವರ ಗೋಷ್ಠಿ ಉದ್ಘಾಟಿಸಿ ಆಶಯ ನುಡಿಗಳನ್ನಾಡಲಿದ್ದಾರೆ.

ಡಾ. ಎಸ್.ವೈ.ಸೋಮಶೇಖರ, ಡಾ. ಅಪ್ಪಣ್ಣ ಹಂಜೆ ವಿಷಯ ಮಂಡಿಸಲಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ವಿ. ಬಡಿಗೇರ ಕವಿಗೋಷ್ಠಿಯ ಆಶಯ ನುಡಿಗಳನ್ನಾಡುವರು. ಹಿರಿಯ ವಿಮರ್ಶಕ ಶ್ಯಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸುವ ಈ ಗೋಷ್ಠಿಯಲ್ಲಿ ಜಿಲ್ಲೆಯ 15 ಕ್ಕೂ ಅಧಿಕ ಕವಿಗಳು ಪಾಲ್ಗೊಳ್ಳುವರು.

ಫೆ.12ರಂದು ಬೆಳಗ್ಗೆ 10 ಗಂಟೆಗೆ ಕೃಷಿ ಗೋಷ್ಠಿ ಜರುಗಲಿದ್ದು ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಅಶೋಕ ಆಲೂರ ಆಶಯ ನುಡಿಗಳನ್ನಾಡುವರು. ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಈಶ್ವರಪ್ಪ ಹಂಚಿನಾಳ ಅಧ್ಯಕ್ಷತೆ ವಹಿಸುವರು. ಕೃಷಿ ಸಾಧಕಿ ಕವಿತಾ ಮಿಶ್ರಾ, ಪ್ರಗತಿ ಪರ ಕೃಷಿಕ ನಾಗರಾಜ ಕುಲಕರ್ಣಿ ವಿಷಯ ಮಂಡಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಖ್ಯಾತ ಹೃದ್ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ ಆಶಯ ನುಡಿಗಳನ್ನಾಡುವರು. ಲಕ್ಕುಂಡಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಗದಗಿನ ಅಧ್ಯಕ್ಷತೆ ವಹಿಸುವರು. ಸಂಶೋಧಕಿ ಡಾ. ಸಂಧ್ಯಾ ವಿ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಪಾಟೀಲ್ ಉಪನ್ಯಾಸ ನೀಡುವರು. ನಗರಸಭೆ ಅಧ್ಯಕ್ಷೆ ಉಷಾ ದಾಸರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಇದನ್ನೂ ಓದಿ: Viral Video : ʼಇವರೇ ನೋಡಿ ಫಾದರ್‌ ಆಫ್‌ ದಿ ಇಯರ್‌ʼ ಎನ್ನುತ್ತಿದ್ದಾರೆ ನೆಟ್ಟಿಗರು; ವೈರಲ್‌ ಆಗಿದೆ ವಿಡಿಯೊ

ಸಾಂಸ್ಕೃತಿಕ ಕಾರ್ಯಕ್ರಮಗಳು

ಫೆ.11 ರಂದು ರಾತ್ರಿ 10 ಗಂಟೆಗೆ ಸೋಜುಗದ ಸೂಜಿ ಮಲ್ಲಿಗೆ, ಕಾಂತಾರದ ಸಿಂಗಾರ ಸಿರಿಯೇ ಹಾಡಿಗೆ ಧ್ವನಿ ನೀಡಿದ ಖ್ಯಾತ ಗಾಯಕಿ ಕು.ಅನನ್ಯ ಭಟ್ ಮತ್ತು ತಂಡದವರಿಂದ ರಸಮಂಜರಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನಲ್ಲಿ ಮೆಚ್ಚುಗೆಗೆ ಪಾತ್ರವಾದ ಗದುಗಿನ ಕಾ.ವೆಂ.ಶ್ರೀ ತಂಡದಿಂದ ಯಕ್ಷಗಾನ, ಭಗವದ್ಗೀತೆ ರೂಪಕ ಮೂಡಿ ಬರಲಿದೆ. ಅತ್ತಿಮಬ್ಬೆ ನಾಟಕ, ಸರಿಗಮಪ ತಂಡದ ಜ್ಞಾನೇಶ, ಮೆಹಬೂಬ ಸಾಬ ಅವರಿಂದ ಜುಗಲ್ ಬಂದಿ, ಮಿಮಿಕ್ರಿ ಗೋಪಿ ಹಾಗೂ ಕಾರ್ತಿಕ ಪತ್ತಾರ ಅವರಿಂದ ಹಾಸ್ಯ ಕಾರ್ಯಕ್ರಮ, ಕ್ಲಾಸಿಕಲ್ ಇವೆಂಟ್, ದೀಪ ನೃತ್ಯ, ಜನಮನ ಸೆಳೆಯಲಿವೆ.

ಫೆ.12 ರಂದು ಸಂಜೆ 4 ರಿಂದ ವಿವಿಧ ಕಲಾ ಪ್ರಕಾರಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹಲವು ಕನ್ನಡ ಪ್ರಸಿದ್ಧ ಗಾಯನಗಳ ಮುಖಾಂತರ ಖ್ಯಾತಿಗೊಂಡ ಮುಂಬಯಿಯ ಪ್ರಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಅವರಿಂದ ಅದ್ಭುತ ರಸಮಂಜರಿ ಕಾರ್ಯಕ್ರಮ ಮೂಡಿಬರಲಿದೆ.

ಉಮೇಶ ಕಿನ್ನಾಳ ಹಾಗೂ ತಂಡದಿಂದ ಹಾಸ್ಯ ಕಾರ್ಯಕ್ರಮ, ಪದ್ಮಶ್ರೀ ವೆಂಕಟೇಶ ಕುಮಾರ್ ಅವರಿಂದ ಹಿಂದೂಸ್ತಾನಿ ಸಂಗೀತ, ಕನ್ನಡದ ಪುಟಾಣಿ ಕೋಗಿಲೆ ಮಹನ್ಯಾ ಪಾಟೀಲ್ ಅವರಿಂದ ರಸಮಂಜರಿ ಕಾರ್ಯಕ್ರಮ, ಪ್ರಭಾತ ಕಲಾತಂಡದಿಂದ ನೃತ್ಯ ರೂಪಕ ನೆರೆದ ಜನರನ್ನು ಮನರಂಜಿಸಲಿವೆ.

ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಕೃಷಿ, ಮಹಿಳಾ, ಕೈಮಗ್ಗ, ನೈರ್ಮಲ್ಯ ಇಲಾಖೆಗಳ ಮಳಿಗೆಗಳು ಕಾರ್ಯನಿರ್ವಹಿಸಲಿವೆ.

ಸಮಾರೋಪ

ಫೆ.12 ರ ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ಸಚಿವರುಗಳಾದ ಬಿ.ಸಿ.ಪಾಟೀಲ್, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬೈರತಿ ಬಸವರಾಜ ಗೌರವ ಉಪಸ್ಥಿತಿ ವಹಿಸುವರು. ವಿಶ್ವವಾಣಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಸಮಾರೋಪ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಪ್ರಮುಖ ಅಧಿಕಾರಿಗಳು ಹಾಜರಿರುವರು.

ಇದನ್ನೂ ಓದಿ: Teddybear day: ಕ್ಯೂಟಾಗಿ ಲವ್‌ ಯೂ ಹೇಳಲು ಬಂತು ಮುದ್ದುಮುದ್ದಾದ ಕಲರ್‌ಫುಲ್‌ ಟೆಡ್ಡಿ ಬೇರ್ಸ್

ಉಚಿತ ಸಾರಿಗೆ ವ್ಯವಸ್ಥೆ

ಗದಗ ನಗರದಿಂದ ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರೆಲ್ಲರಿಗೂ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆ.ಎಸ್.ಆರ್.ಟಿ.ಸಿಯ 10 ಬಸ್ ಗಳು ಗದಗ ಹೊಸ ಹಾಗೂ ಹಳೆಯ ಬಸ್‌ ನಿಲ್ದಾಣಗಳಿಂದ ನಿರಂತರವಾಗಿ ಸಂಚರಿಸಲಿದ್ದು ಉತ್ಸವಕ್ಕೆ ಆಗಮಿಸುವ ಕಲಾವಿದರು, ಅತಿಥಿಗಳು ಹಾಗೂ ಸಾರ್ವಜನಿಕರೆಲ್ಲರಿಗೂ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಚಿವ ಸಿ.ಸಿ.ಪಾಟೀಲ್ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪ‌ ವಿಭಾಗಾಧಿಕಾರಿ ಅನ್ನಪೂರ್ಣ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: INDvsAUS : ಟೆಸ್ಟ್​ ಪಂದ್ಯದ ಮೊದಲ ದಿನ ಭಾರತದ ಮೇಲುಗೈ; ಇನಿಂಗ್ಸ್​ ಮುನ್ನಡೆ ಹಾದಿಯಲ್ಲಿ ರೋಹಿತ್​ ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Cauvery Dispute: ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು.

VISTARANEWS.COM


on

cauvery dispute
Koo

ನವದೆಹಲಿ: ಕರ್ನಾಟಕದಲ್ಲಿ ಬರಗಾಲವಿದ್ದರೂ ಕಾವೇರಿ ನದಿ ನೀರು (Cauvery Dispute) ವಿಚಾರದಲ್ಲಿ ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳುನಾಡಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಭಾರಿ ಮುಖಭಂಗವಾಗಿದೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿಯು ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಭಾರಿ ಮುಖಭಂಗವಾಗಿದೆ.

ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು 2023-24ನೇ ಜಲವರ್ಷದ ಅಂತಿಮ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಖಡಕ್‌ ಆದೇಶ ನೀಡಿದೆ. “ಕರ್ನಾಟಕದಲ್ಲಿ ತೀವ್ರ ಬರಗಾಲ ಇರುವುದರಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರನ್ನು ಬಳಸಿಕೊಳ್ಳಿ” ಎಂಬುದಾಗಿ ತಮಿಳುನಾಡಿಗೆ ಸೂಚನೆ ನೀಡಿದೆ. ಮೇ 21ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಲಿದ್ದು, ಅಲ್ಲೂ ತಮಿಳುನಾಡು ತನ್ನ ಮೊಂಡುವಾದ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ.

Cauvery water CWRC order

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿದೆ.

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆ ಬರುತ್ತಿದೆ. ಇಷ್ಟಾದರೂ ಅಣೆಕಟ್ಟುಗಳು ತುಂಬಿಲ್ಲ. ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Continue Reading

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading
Advertisement
Karnataka weather Forecast
ಮಳೆ52 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ2 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ7 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ8 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ8 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ8 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು8 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ8 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ52 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ17 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು20 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌