Astrology Answers : ಮಗಳ ಮದುವೆ ವಿಳಂಬವಾಗುತ್ತಿದೆ, ಪರಿಹಾರ ತಿಳಿಸಿ ಗುರೂಜಿ - Vistara News

ಪ್ರಮುಖ ಸುದ್ದಿ

Astrology Answers : ಮಗಳ ಮದುವೆ ವಿಳಂಬವಾಗುತ್ತಿದೆ, ಪರಿಹಾರ ತಿಳಿಸಿ ಗುರೂಜಿ

ಇದು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್‌. ದ್ವಾರಕನಾಥ್‌ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ನೀವೂ ಪ್ರಶ್ನೆ ಕೇಳಬಹುದು.

VISTARANEWS.COM


on

ಭವಿಷ್ಯ ಪ್ರಶ್ನೋತ್ತರ rajaguru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಶ್ನೆ: ಮಗಳಿಗೆ ಮದುವೆ ಮಾಡಬೇಕೆಂದುಕೊಂಡಿದ್ದೇವೆ. ಎಲ್ಲೂ ಸಂಬಂಧ ಕೂಡಿ ಬರುತ್ತಿಲ್ಲ. ಮದುವೆ ವಿಳಂಬವಾಗುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ ಗುರೂಜಿ.
ರಾಶಿ: ಕನ್ಯಾ ನಕ್ಷತ್ರ: ಹಸ್ತಾ

ಪರಿಹಾರ: ನಿಮ್ಮ ಮಗಳ ಜಾತಕದ ಪ್ರಕಾರ ಲಗ್ನಾತ್ ಗುರು ಏಕಾದಶದಲ್ಲಿ ಇರುವುದರಿಂದ ಅವಳಿಗೆ ಈಗ ಕಂಕಣ ಭಾಗ್ಯ ಕೂಡಿ ಬಂದಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನದಿಂದ ಮಗಳಿಗೆ ಉತ್ತಮವಾದ ವರನು ಸಿಕ್ಕಿ ಮದುವೆ ನಿಶ್ಚಯವಾಗುವುದು. ಈ ಬಗ್ಗೆ ನೀವು ಬಹಳ ಚಿಂತೆ ಮಾಡುವ ಅಗತ್ಯವಿಲ್ಲ. ಸಾಧ್ಯವಾದಲ್ಲಿ ಶೃಂಗೇರಿ ಶಾರದೆಯ ದರ್ಶನ ಮಾಡಿ, ಗುರುದ್ವಯರ ಆಶೀರ್ವಾದ ಪಡೆದುಕೊಂಡು ಬನ್ನಿ. ಮದುವೆಯ ನಂತರ ಗಿರಿಜಾ ಕಲ್ಯಾಣ ಮಾಡಿಸುತ್ತೇವೆ ಎಂಹ ಹರಕೆ ಇರಿಸಿ. ಶೀಘ್ರವೇ ಕಲ್ಯಾಣ ಏರ್ಪಡುವುದು. ಮದುವೆಗೆ ನಮ್ಮನ್ನು ಕರೆಯಲು ಮರೆಯಬೇಡಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ : Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hathras Stampede: ಹತ್ರಾಸ್‌ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 116ಕ್ಕೆ ಏರಿಕೆ; ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

Hathras Stampede: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಮಂಗಳವಾರ ನಡೆದ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮೃತರ ಸಂಖ್ಯೆ 116ಕ್ಕೆ ತಲುಪಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಮಂಗಳವಾರ ನಡೆದ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, ಮೃತರ ಸಂಖ್ಯೆ 116ಕ್ಕೆ ತಲುಪಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ʼʼಭೋಲೆ ಬಾಬಾ ಅವರಿಗಾಗಿ ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತಾದರೂ ಅವರು ಕ್ಯಾಂಪಸ್ ಒಳಗೆ ಕಂಡುಬಂದಿಲ್ಲʼʼ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ತಿಳಿಸಿದರು.

ಸತ್ಯಂಗ ಮುಗಿಸಿ ಭೋಲೆ ಬಾಬಾ ಅವರು ಅಪರಾಹ್ನ 3.30ರ ಸುಮಾರಿಗೆ ಸ್ಥಳದಿಂದ ಹೊರಡುವಾಗ ಕಾಲ್ತುಳಿತ ಸಂಭವಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಈಗಾಗಲೇ ಆದೇಶಿಸಿದ್ದಾರೆ. ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

“ಒಟ್ಟು 23 ಶವಗಳನ್ನು ಅಲಿಗಢಕ್ಕೆ ತರಲಾಗಿದೆ. ಹತ್ರಾಸ್ ಘಟನೆಯಲ್ಲಿ ಗಾಯಗೊಂಡ ಮೂವರು ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಸ್ಥಿರವಾಗಿದ್ದರೆ, ಒಬ್ಬರ ಸ್ಥಿತಿ ಗಂಭೀರವಾಗಿದೆ. ನಾವು ಆಸ್ಪತ್ರೆಯ ಆಡಳಿತದೊಂದಿಗೆ ಮಾತನಾಡಿದ್ದೇವೆʼʼ ಎಂದು ಅಲಿಗಢ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ವಿಶಾಕ್ ಜಿ. ಅಯ್ಯರ್ ಮಾಹಿತಿ ನೀಡಿದರು.

ಈವರೆಗೆ ಒಟ್ಟು 116 ಮಂದಿ ಮೃತಪಟ್ಟಿದ್ದಾರೆ. 19 ಶವಗಳನ್ನು ಗುರುತಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆʼʼ ಎಂದು ಹತ್ರಾಸ್ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಮಂಜೀತ್ ಸಿಂಗ್ ಹೇಳಿದರು.

ಹೆಣಗಳ ರಾಶಿ ನೋಡಿ ಪೊಲೀಸ್‌ಗೆ ಹೃದಯಾಘಾತ; ಸಾವು

ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್ ಎಂಬ ಪೊಲೀಸ್‌ ಕಾನ್ಸ್‌ಟೇಬಲ್‌ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಟಾಹ್ ಮೆಡಿಕಲ್ ಕಾಲೇಜಿನಲ್ಲಿ ತುರ್ತು ಕರ್ತವ್ಯದಲ್ಲಿದ್ದ ರಜನೀಶ್ ಮೃತದೇಹಗಳ ರಾಶಿಯನ್ನು ನೋಡಿ ಆಘಾತಗೊಂಡು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಘಟನೆ?

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ಭೋಲೆ ಬಾಬಾ ನೇತೃತ್ವದಲ್ಲಿ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ. ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್​ನಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಆಯೋಜನೆಗೆ ಮುನ್ನ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಅಲ್ಲದೆ ಕಾರ್ಯಕ್ರಮ ನಡೆದ ಜಾಗ ಇಕ್ಕಟ್ಟಿನಿಂದ ಕೂಡಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Continue Reading

ಪ್ರಮುಖ ಸುದ್ದಿ

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS Transfer: ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

VISTARANEWS.COM


on

IPS transfer
Koo

ಬೆಂಗಳೂರು: ರಾಜ್ಯದ 25 ಐಪಿಎಸ್‌ ಅಧಿಕಾರಿಗಳನ್ನು (IPS Officers) ನಾನಾ ಕಡೆಗಳಿಗೆ ವರ್ಗಾವಣೆ (IPS Transfer) ಮಾಡಿ ಸರ್ಕಾರ (Karnataka Govt) ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ:

ಲಾಭೂರಾಮ್ : ಐಜಿಪಿ ಕೇಂದ್ರ ವಲಯ
ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ)
ಡಾ.ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್ : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್‌ಪಿ ಬೆಂಗಳೂರು ಗ್ರಾಮಾಂತರ.
ಎನ್ ವಿಷ್ಣುವರ್ಧನ್ : ಎಸ್‌ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್.
ಸಿ.ಬಿ ರಿಷ್ಯಂತ್: ಎಸ್ ಪಿ ವೇರ್ ಲೆಸ್ .
ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ( Arunngshu giri ) SP ,CID
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

ಇದನ್ನೂ ಓದಿ: BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Continue Reading

ಭವಿಷ್ಯ

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಬುಧವಾರವೂ ಮಿಥುನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವೃಷಭ ರಾಶಿಯವರು ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕಟಕ ರಾಶಿಯವರು ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (3-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 07:09 ವಾರ: ಬುಧವಾರ
ನಕ್ಷತ್ರ: ರೋಹಿಣಿ 28:06 ಯೋಗ: ಶೂಲ 09:00
ಕರಣ: ತೈತುಲ 07:09 ಅಮೃತಕಾಲ: ಮಧ್ಯರಾತ್ರಿ 01:00 ರಿಂದ 02:33 ರವರೆಗೆ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00

ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ‌ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯದ ಬೇಡಿಕೆ. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ. ತಾಳ್ಮೆ ಅವಶ್ಯಕವಾಗಿದೆ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ ಸಿಗಲಿದೆ. ಆರ್ಥಿಕವಾಗಿ ಬಲಿಷ್ಠವಾಗಿ ಇರುವಿರಿ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ದೈಹಿಕ ಆರೋಗ್ಯ ಉತ್ತಮವಾಗಿರಲಿದೆ, ಮಾನಸಿಕ ಆರೋಗ್ಯಕ್ಕೆ ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Aditya L1: ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ.

VISTARANEWS.COM


on

Aditya L1
Koo

ನವದೆಹಲಿ: ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್ ಆಗಿರುವ ಆದಿತ್ಯ ಎಲ್‌1 (Aditya L1) ಬಾಹ್ಯಾಕಾಶ ನೌಕೆಯು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ ನಿಷ್ಕ್ರಿಯವಾಗುವ ‘ಲ್ಯಾಗ್ರೇಂಜ್‌ ಪಾಯಿಂಟ್‌’ನ (L1) ಪ್ರಭಾವಲಯದ (Halo) ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಕಕ್ಷೆ ಸೇರಿದ (ಇದೇ ವರ್ಷದ ಜನವರಿ 6ರಂದು ಕಕ್ಷೆ ಸೇರಿದೆ) 178 ದಿನಗಳ ಬಳಿಕ ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದಂತಾಗಿದೆ.

ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಎರಡನೇ ಸುತ್ತಿನತ್ತ ಆದಿತ್ಯ ಎಲ್‌ 1 ಮಿಷನ್‌ ದಾಪುಗಾಲು ಇಟ್ಟಿದೆ” ಎಂಬುದಾಗಿ ಇಸ್ರೋ ತಿಳಿಸಿದೆ. ಇದು ಸೂರ್ಯನ ಕುರಿತು ಅಧ್ಯಯನ ಮಾಡುವಲ್ಲಿ ಇಸ್ರೋಗೆ ಸಿಕ್ಕ ಮಹತ್ವದ ಮುನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌ 1 ಮಿಷನ್‌ ಉಡಾವಣೆಯಾಗಿದ್ದು, ಸೆಪ್ಟೆಂಬರ್‌ 3ರಂದು ಮೊದಲ ಕಕ್ಷೆ ಬದಲಾವಣೆಯನ್ನು ಯಶಸ್ವಿಯಾಗಿ ಪೂರೈಸಿತು. ಸೆಪ್ಟೆಂಬರ್‌ 5ರಂದು ಎರಡನೇ ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡಿತು. ಒಟ್ಟು ಐದು ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡ ನಂತರ ಅಧ್ಯಯನ ನಡೆಸಲು ಉದ್ದೇಶಿಸಿರುವ ಲ್ಯಾಂಗ್ರೇಜ್‌ ಪಾಯಿಂಟ್‌ನತ್ತ (L1 Point) ಆದಿತ್ಯ ಎಲ್‌ 1 ಮಿಷನ್‌ ಸಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಮಿಷನ್‌ ಹೊತ್ತುಕೊಂಡು ಪಿಎಸ್‌ಎಲ್‌ವಿ-ಸಿ 57 (PSLV-C57 ) ರಾಕೆಟ್‌ 2023ರ ಸೆಪ್ಟೆಂಬರ್‌ 2ರಂದು ನಭಕ್ಕೆ ಹಾರಿದೆ. ನಭಕ್ಕೆ ನೆಗೆದ ಕೆಲವೇ ನಿಮಿಷಗಳಲ್ಲಿ ರಾಕೆಟ್‌ನಿಂದ ಆದಿತ್ಯ ಎಲ್‌ 1 ಮಿಷನ್‌ ಬೇರ್ಪಟ್ಟಿದೆ. ಸೂರ್ಯನ ಮೇಲ್ಮೈನಲ್ಲಿ ಮಾತ್ರ ಆದಿತ್ಯ ಎಲ್‌ 1 ಮಿಷನ್‌ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ ಸೂರ್ಯನ ದಿಕ್ಕಿನಲ್ಲಿ 15 ಲಕ್ಷ ಕಿಲೋಮೀಟರ್‌ ಸಂಚರಿಸಿ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ 15 ಲಕ್ಷ ಕಿಲೊಮೀಟರ್‌ ಅಂದರೆ, ಭೂಮಿಯಿಂದ ಸೂರ್ಯನಿಗಿರುವ ದೂರದಲ್ಲಿ ಶೇ.1ರಷ್ಟು ಮಾತ್ರ ಕ್ರಮಿಸಿದಂತೆ.

ಇದನ್ನೂ ಓದಿ: Pushpak Launch: ‘ಪುಷ್ಪಕ್‌’ ರಾಕೆಟ್ ಹ್ಯಾಟ್ರಿಕ್‌ ಉಡಾವಣೆ ಯಶಸ್ವಿ-ಇಸ್ರೋದಿಂದ ಮಹತ್ವದ ಮೈಲಿಗಲ್ಲು

Continue Reading
Advertisement
Hathras Stampede
ಪ್ರಮುಖ ಸುದ್ದಿ9 mins ago

Hathras Stampede: ಹತ್ರಾಸ್‌ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 116ಕ್ಕೆ ಏರಿಕೆ; ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

krishna river drowned death
ಕ್ರೈಂ24 mins ago

Drowned: ಪೊಲೀಸರಿಂದ ತಪ್ಪಿಸಿಕೊಳ್ಳಹೋಗಿ ನೀರುಪಾಲು; ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 1 ಸಾವು, ಇಬ್ಬರ ರಕ್ಷಣೆ, ಇನ್ನೂ ಐವರು ನಾಪತ್ತೆ

IPS transfer
ಪ್ರಮುಖ ಸುದ್ದಿ1 hour ago

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

karnataka weather Forecast
ಮಳೆ1 hour ago

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Dharamshala Tour
ಪ್ರವಾಸ2 hours ago

Dharamshala Tour: ಪರಿಪೂರ್ಣ ಪ್ರವಾಸದ ಅನುಭವ ಕೊಡುವ ಧರ್ಮಶಾಲಾ

Vastu Tips
ಧಾರ್ಮಿಕ2 hours ago

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

Sour Curd
ಆರೋಗ್ಯ3 hours ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ3 hours ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್6 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ8 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ13 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌