PM Modi: ಉಕ್ರೇನ್ ವಿರುದ್ಧದ​ ಯುದ್ಧ ಕೊನೆಗಾಣಿಸುವಂತೆ ಪುಟಿನ್​​ ಮನವೊಲಿಸಲು ಪ್ರಧಾನಿ ಮೋದಿಗೆ ಸಾಧ್ಯ ಎಂದ ಅಮೆರಿಕ - Vistara News

ದೇಶ

PM Modi: ಉಕ್ರೇನ್ ವಿರುದ್ಧದ​ ಯುದ್ಧ ಕೊನೆಗಾಣಿಸುವಂತೆ ಪುಟಿನ್​​ ಮನವೊಲಿಸಲು ಪ್ರಧಾನಿ ಮೋದಿಗೆ ಸಾಧ್ಯ ಎಂದ ಅಮೆರಿಕ

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಅವರು ರಷ್ಯಾಕ್ಕೆ ತೆರಳಿ, ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ರನ್ನು ಭೇಟಿಯಾದ ಬೆನ್ನಲ್ಲೇ ಅಮೆರಿಕದಿಂದ ಇಂಥದ್ದೊಂದು ಹೇಳಿಕೆ ಹೊರಗೆ ಬಿದ್ದಿದೆ. ಈ ಹಿಂದೆಯೂ ಕೂಡ ಹಲವು ಬಾರಿ ಅಮೆರಿಕ ಇದೇ ಪ್ರಸ್ತಾಪ ಮಾಡಿತ್ತು.

VISTARANEWS.COM


on

Russia to have presidentship of BRICS 2024 and Modi congratulates putin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಉಕ್ರೇನ್​ ಮೇಲಿನ ರಷ್ಯಾ ಆಕ್ರಮಣ ತಡೆಯಬೇಕು ಎಂದು ಮೊದಲಿನಿಂದಲೂ ಪ್ರತಿಪಾದಿಸುತ್ತಿರುವ ಅಮೆರಿಕ, ಈ ಎರಡೂ ರಾಷ್ಟ್ರಗಳ ಮಧ್ಯೆಯ ಯುದ್ಧ ನಿಲ್ಲಿಸಿ, ಶಾಂತಿ ಮಾತುಕತೆ ಸಾಧ್ಯ ಮಾಡಲು ಭಾರತದ ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಂದ ಸಾಧ್ಯ ಎಂಬ ಮಾತನ್ನೂ ಆಗಾಗ ಹೇಳುತ್ತಿದೆ. ಈಗ ವೈಟ್​ಹೌಸ್​ ವಕ್ತಾರ ಜಾನ್ ಕಿರ್ಬಿ ಅವರು ಮತ್ತೊಮ್ಮೆ ಅದೇ ಮಾತುಗಳನ್ನಾಡಿದ್ದಾರೆ.

ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಾನ್ ಕಿರ್ಬಿ, ‘ಉಕ್ರೇನ್​ ವಿರುದ್ಧ ರಷ್ಯಾ ಸಾರಿರುವ ಯುದ್ಧ ನಿಲ್ಲಿಸುವಂತೆ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಮನವೊಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಾವುದೇ ಪ್ರಯತ್ನ ಮಾಡಿದರೂ ನಾವು ಅದನ್ನು ಸ್ವಾಗತಿಸುತ್ತೇವೆ’ ಎಂದು ಹೇಳಿದ್ದಾರೆ. ‘ಇನ್ನೂ ಸಮಯವಿದೆ..ಕಾಲ ಮಿಂಚಿಹೋಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಈಗಲೂ ರಷ್ಯಾ ಅಧ್ಯಕ್ಷ ಪುಟಿನ್​ಗೆ ಮನವರಿಕೆ ಮಾಡಿಕೊಡಬಹುದು. ನಾವು ಕಾಯುತ್ತೇವೆ ಮತ್ತು ಉಕ್ರೇನ್ ಮೇಲಿನ​ ಯುದ್ಧ ನಿಲ್ಲಿಸಲು ನರೇಂದ್ರ ಮೋದಿ ಯಾವುದೇ ಉಪಕ್ರಮ ತೆಗೆದುಕೊಂಡರೂ ನಾವು ಸ್ವಾಗತಿಸುತ್ತೇವೆ ಎಂದು ಜಾನ್ ಕಿರ್ಬಿ ಹೇಳಿದ್ದಾರೆ.

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಅವರು ರಷ್ಯಾಕ್ಕೆ ತೆರಳಿ, ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ರನ್ನು ಭೇಟಿಯಾದ ಬೆನ್ನಲ್ಲೇ ಅಮೆರಿಕದಿಂದ ಇಂಥದ್ದೊಂದು ಹೇಳಿಕೆ ಹೊರಗೆ ಬಿದ್ದಿದೆ. ಉಕ್ರೇನ್​ ಮೇಲೆ ರಷ್ಯಾ ಸಾರಿರುವ ಯುದ್ಧ ಕೊನೆಗಾಣಲೇಬೇಕು ಎಂದು ಯುಎಸ್​ ಬಲವಾಗಿ ಆಗ್ರಹಿಸುತ್ತಿದೆ. ಈ ಹಿಂದೆಯೂ ಹಲವು ಬಾರಿ ಅಮೆರಿಕ ಪ್ರಧಾನಿ ನರೇಂದ್ರ ಮೋದಿಯವರತ್ತಲೇ ಆಶಾಭಾವನೆಯಿಂದ ನೋಡಿತ್ತು. ಪುಟಿನ್​ ಮೇಲೆ ಮೋದಿಯವರ ಮಾತೊಂದೇ ಪ್ರಭಾವ ಬೀರಲು ಸಾಧ್ಯ ಎಂದಿತ್ತು.

ಇದನ್ನೂ ಓದಿ: Russia: ಉಕ್ರೇನ್‌-ರಷ್ಯಾ ಯುದ್ಧದ ಬಗ್ಗೆ ವರದಿ ಮಾಡುತ್ತಿದ್ದ ಅತಿ ದೊಡ್ಡ ಮಾಧ್ಯಮ ಸಂಸ್ಥೆಯನ್ನೇ ನಿಷೇಧಿಸಿದ ರಷ್ಯಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Salman Khan: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಗುಂಡಿನ ದಾಳಿಗೆ ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಹೊರಗೆ ಗುಂಡಿನ ದಾಳಿ; ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

ʼʼಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲʼʼ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿದ್ದ.

Continue Reading

ದೇಶ

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Narendra Modi:ಕಾಂಗ್ರೆಸ್‌ನವರು ನಮ್ಮನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಾ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಇದು ಮಾಜಿ ಪ್ರಧಾನಿ ದಿವಂಗತ ನೆಹರೂ ಕಾಲದಿಂದಲೂ ನಡೆಯುತ್ತಿದೆ. ತಮ್ಮನ್ನು ತಾವು ಮುಸ್ಲಿಮರ ಸ್ನೇಹಿ ಪಕ್ಷ ಎಂದು ಹೇಳುತ್ತಲೇ ಬಂದಿದೆ. ಇದರಿಂದ ಸಾಕಷ್ಟು ಲಾಭ ಪಡೆದಿದೆ. ಹೀಗಾಗಿಯೇ ಅವರು ಅನಾವಶ್ಯಕವಾಗಿ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಭಯ ಹುಟ್ಟಿಸಿ ರಾಜಕೀಯ ಲಾಭ ಪಡೆಯುವದೇ ಅವರ ಕೆಲಸವಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನು ಪ್ರತಿಪಕ್ಷಗಳು ಮುಸ್ಲಿಂ ಮತ್ತು ಇಸ್ಲಾಂ ವಿರೋಧಿ ಎಂದು ಕರೆಯುವುದು ಸರ್ವೇ ಸಾಮಾನ್ಯ ವಿಚಾರ. ಇದೀಗ ಇದೇ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ, ನಾನು ಇಸ್ಲಾಂ(Islam) ಅಥವಾ ಮುಸ್ಲಿಂ ವಿರೋಧಿ(Anti Muslim) ಅಲ್ಲ. ಮುಸ್ಲಿಂ ಸಮುದಾಯದವರು ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲಿ ಎಂಬುದನಷ್ಟೇ ನಾನು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ಆರೋಪವವನ್ನು ತಳ್ಳಿ ಹಾಕಿದ್ದಾರೆ

ಕಾಂಗ್ರೆಸ್‌ನವರು ನಮ್ಮನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಾ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಇದು ಮಾಜಿ ಪ್ರಧಾನಿ ದಿವಂಗತ ನೆಹರೂ ಕಾಲದಿಂದಲೂ ನಡೆಯುತ್ತಿದೆ. ತಮ್ಮನ್ನು ತಾವು ಮುಸ್ಲಿಮರ ಸ್ನೇಹಿ ಪಕ್ಷ ಎಂದು ಹೇಳುತ್ತಲೇ ಬಂದಿದೆ. ಇದರಿಂದ ಸಾಕಷ್ಟು ಲಾಭ ಪಡೆದಿದೆ. ಹೀಗಾಗಿಯೇ ಅವರು ಅನಾವಶ್ಯಕವಾಗಿ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಭಯ ಹುಟ್ಟಿಸಿ ರಾಜಕೀಯ ಲಾಭ ಪಡೆಯುವದೇ ಅವರ ಕೆಲಸವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಆದರೆ ಮುಸ್ಲಿಂ ಸಮುದಾಯ ಎಚ್ಚೆತ್ತುಕೊಂಡಿದೆ. ನಮ್ಮ ಸರ್ಕಾರ ತ್ರಿವಳಿ ತಲಾಖ್‌ ರದ್ದುಗೊಳಿಸಿದಾಗ ಅನೇಕ ಮುಸ್ಲಿಂ ಸಹೋದರಿಯರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು. ಅಲ್ಲದೇ ನನಗೆ ಅವರ ಬಗ್ಗೆ ನಿಜವಾದ ಕಾಳಜಿ ಎಂಬುದು ಅವರಿಗೆ ಅರ್ಥವಾಗಿತ್ತು. ನಾನು ಆಯುಷ್ಮಾನ್‌ ಯೋಜನೆ ಜಾರಿಗೊಳಿಸಿದಾಗ ಎಲ್ಲರೂ ಸಂಸತ ವ್ಯಕ್ತಪಡಿಸದ್ದರು. ಕೋವಿಡ್‌ ಲಸಿಕೆ ಎಲ್ಲರಿಗೂ ಲಭ್ಯವಾಗುವಂತೆ ಮಾಡಿದಾಗ ನಾನು ಯಾರ ಬಗ್ಗೆಯೂ ತಾರತಮ್ಯ ಹೊಂದಿಲ್ಲ ಎಂಬುದು ಎಲ್ಲರಿಗೂ ಮನವರಿಕೆ ಆಗಿತ್ತು. ಪ್ರತಿಪಕ್ಷಗಳ ಸುಳ್ಳು ಬಯಲಾಗಿರೋದೇ ಅವರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿಯೇ ಅವರು ಜನರನ್ನು ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಸುಳ್ಳುಗಳ ಮೇಲ್ ಸುಳ್ಳು ಹೇಳುತ್ತಾ ಇದ್ದಾರೆ. ನನ್ನನ್ನು ಮುಸ್ಲಿಂ ವಿರೋಧಿ ಎಂದು ಬ್ರ್ಯಾಂಡ್‌ ಮಾಡುತ್ತಿದ್ದಾರೆ ಎಂದು ಪ್ರಧಾನಿ ಟಾಂಗ್‌ ಕೊಟ್ಟರು.

ಇದನ್ನೂ ಓದಿ:Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

ನಾನು ಮಸಲ್ಮಾನರಿಗೆ ಮನವಿ ಮಾಡುವುದು ಇಷ್ಟೇ.. ಸ್ವಯಂ ಅವಲೋಕನ ಮಾಡಿಕೊಳ್ಳಿ. ದೇಶ ಪ್ರಗತಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಿಮ್ಮ ಸಮದಾಯಕ್ಕೆ ಏನಾದರೂ ಕೊರತೆ ಕಂಡು ಬಂದಲ್ಲಿ ಅದು ಏನು? ಯಾಕಾಗಿ ಕೊರತೆ ಉಂಟಾಗಿದೆ ? ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿರುವಾಗ ನಮಗೇಕೆ ಸೌಲಭ್ಯಗಳು ಸಿಗುತ್ತಿರಲಿಲ್ಲ ಎಂದು ಯೋಜನೆ ಮಾಡಿ. ನಿಮ್ಮ ಮಕ್ಕಳ ಭವಿಷ್ಯದ ಬಗೆ ಚಿಂತನೆ ಇರಲಿ. ಯಾವ ಸಮುದಾಯದ ಜನರೂ ಕಾರ್ಮಿಕರಂತೆ ಬದುಕುವುದು ನನಗೆ ಇಷ್ಟವಿಲ್ಲ. ದೇಶದಲ್ಲಿರುವ ಎಲ್ಲಾ ಸಮುದಾಯಗಳ ಬಡ ಜನರಿಗೆ ಸರ್ಕಾರದ ಎಲ್ಲಾ ಸವಲತ್ತುಗಳು, ಮೀಸಲಾತಿ ಸಿಗಲೇಬೇಕು ಎಂಬುದು ನನ್ನ ಆಶಯ. ನಾನು ಯಾವುತ್ತೂ ಮುಸ್ಲಿಮರ ಮೀಸಲಾತಿ ಕಿತ್ತು ಹಾಕುತ್ತೇನೆ ಎಂದು ಹೇಳಿಲ್ಲ. ನಾನು ಹೇಳಿರುವುದು ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡುವುದು ಸರಿಯಲ್ಲ ಎಂಬುದಷ್ಟೇ. ಸಾವಿರಾರು ವರ್ಷಗಳಿಂದ ದಲಿತರಿಗೆ ಅನ್ಯಾಯ ಆಗುತ್ತಿದೆ. ಅದಕ್ಕಾಗಿ ಅವರಿಗೆ ನಮ್ಮ ಸಂವಿಧಾನದಲ್ಲಿ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಯಾವ ಪಕ್ಷವೂ ಇದನ್ನು ವಿರೋಧಿಸಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

Continue Reading

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ಮೇ 24. ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 (Job Alert)

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ದೇಶ

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Naxal activities: ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ಬಾಂಬ್‌ ಸ್ಕ್ವಾಡ್‌ ಮತ್ತು ಪೊಲೀಸರು ಎರಡು ತಂಡಗಳು ಭಾನುವಾರ ತಿಪಗಡ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸ್ಥಳಕ್ಕೆ ತಂಡ ತಲುಪಿದಾಗ ಸ್ಫೋಟಕಗಳು ತುಂಬಿದ್ದ ಆರು ಕುಕ್ಕರ್‌ ಬಾಂಬ್‌, ಸ್ಫೋಟಕಗಳು ಮತ್ತು ಮೂರು ಕ್ಲೇಮೋರ್‌ ಕೊಳವೆಗಳು ಪತ್ತೆಯಾಗಿದ್ದವು. ಅಷ್ಟೇ ಅಲ್ಲದೇ ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ತುಂಬಿಸಿದ್ದ ಗನ್‌ ಪೌಡರ್‌, ಔಷಧಗಳು, ಕಂಬಳಿ ಹೀಗೇ ಹಲವು ವಸ್ತುಗಳು ಪತ್ತೆ ಆಗಿವೆ. ಇನ್ನು ಒಂಬತ್ತು IED ಮತ್ತು ಮೂರು ಕ್ಲೇಮೋರ್‌ ಪೈಪ್‌ಗಳನ್ನು ಸ್ಥಳದಲ್ಲೇ ನಾಶಪಡಿಸಿಲಾಗಿದೆ

VISTARANEWS.COM


on

Naxal activities
Koo

ಮಹಾರಾಷ್ಟ್ರ: ನಕ್ಸಲರು(Naxal activities) ಅಡಗಿಸಿಟ್ಟಿದ್ದ ಕುಕ್ಕರ್‌ ಬಾಂಬ್‌(Cooker Bomb), ಸ್ಫೋಟಕಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಮಹಾರಾಷ್ಟ್ರ(Maharastra)ದಲ್ಲಿ ನಡೆಯಬೇಕಿದ್ದ ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಸ್ಫೋಟಕಗಳು ತುಂಬಿದ್ದ ಆರು ಕುಕ್ಕರ್‌ ಬಾಂಬ್‌, ಸ್ಫೋಟಕಗಳು ಮತ್ತು ಮೂರು ಕ್ಲೇಮೋರ್‌ ಕೊಳವೆಗಳು ಮಹಾರಾಷ್ಟ್ರದ ಗದ್‌ಚಿರೋಳಿಯ ತಿಪಗಡ್‌ ಪ್ರದೇಶದಲ್ಲಿ ದೊರೆತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಿಂದಾಗಿ ನಕ್ಸಲರು ಮಹಾರಾಷ್ಟ್ರದಲ್ಲಿ ಐಇಡಿ ಬಾಂಬ್‌ ಸ್ಫೋಟಕ್ಕೆ ರೂಪಿಸಿದ್ದ ಸಂಚು ವಿಫಲಗೊಂಡಿದೆ.

ಘಟನೆ ಬಗ್ಗೆ ಗದ್‌ಚಿರೋಳಿ ಪೊಲೀಸ್‌ ವರಿಷ್ಠಾಧಿಕಾರಿ ನೀಲೋತ್ಪಲ್‌ ಮಾಹಿತಿ ನೀಡಿದ್ದು, ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ಬಾಂಬ್‌ ಸ್ಕ್ವಾಡ್‌ ಮತ್ತು ಪೊಲೀಸರು ಎರಡು ತಂಡಗಳು ಭಾನುವಾರ ತಿಪಗಡ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸ್ಥಳಕ್ಕೆ ತಂಡ ತಲುಪಿದಾಗ ಸ್ಫೋಟಕಗಳು ತುಂಬಿದ್ದ ಆರು ಕುಕ್ಕರ್‌ ಬಾಂಬ್‌, ಸ್ಫೋಟಕಗಳು ಮತ್ತು ಮೂರು ಕ್ಲೇಮೋರ್‌ ಕೊಳವೆಗಳು ಪತ್ತೆಯಾಗಿದ್ದವು. ಅಷ್ಟೇ ಅಲ್ಲದೇ ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ತುಂಬಿಸಿದ್ದ ಗನ್‌ ಪೌಡರ್‌, ಔಷಧಗಳು, ಕಂಬಳಿ ಹೀಗೇ ಹಲವು ವಸ್ತುಗಳು ಪತ್ತೆ ಆಗಿವೆ. ಇನ್ನು ಒಂಬತ್ತು IED ಮತ್ತು ಮೂರು ಕ್ಲೇಮೋರ್‌ ಪೈಪ್‌ಗಳನ್ನು ಸ್ಥಳದಲ್ಲೇ ನಾಶಪಡಿಸಿಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೊಡ್ಡ ಮಟ್ಟದ ಸ್ಫೋಟ ನಡೆಸಲು ನಕ್ಸಲರು ಸಂಚು ರೂಪಿಸಿದ್ದರು. ಸ್ಫೋಟಕಗಳು ಪತ್ತೆಯಾಗಿರುವ ಹಿನ್ನೆಲೆ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಗದ್‌ಚಿರೋಳಿ-ಚಿಮೂರ್‌ ಲೋಕಸಭಾ ಕ್ಷೇತ್ರದಲ್ಲಿ ಏ.19ರಂದು ಮತದಾನ ನಡೆದಿದ್ದು, ಜೂ.4ರಂದು ಫಲಿತಾಂಶ ಹೊರ ಬೀಳಲಿದೆ.

ಒಂದು ತಿಂಗಳ ಹಿಂದೆ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲ್​ ಚಟುವಟಿಕೆ ಹೆಚ್ಚಾಗಿದೆ ಎಂಬುದಾಗಿ ವರದಿಯಾಗಿತ್ತು. ದ.ಕ ಜಿಲ್ಲೆಯ ‌ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬುದಾಗಿ ಹೇಳಲಾಗಿತ್ತು. ಮೂವರಿದ್ದ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಅವರು ವಾಪಸ್​ ತೆರಳಿದ್ದರು.

ಮಳೆ ಬರುತ್ತಿದ್ದ ವೇಳೆ ಅಶೋಕ್ ಅವರ ಮನೆಗೆ ಬಂದ ಶಂಕಿತ ನಕ್ಸಲರು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಂದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದವು. ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೂ ಶಂಕಿತ ನಕ್ಸಲರು ಬಂದಿದ್ದರು. ಅವರೇ ಮತ್ತೆ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ:Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿತ್ತು. ಆದರೆ ಅವರಿಗೆ ಯಾವುದೇ ಸುಳಿವು ಲಭಿಸಿರಲಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಅಲ್ಲಿಂದ ಒಂದು ದಾರಿ ಸೋಮವಾರಪೇಟೆಗೆ ಹೋಗುತ್ತದೆ ಹಾಗೂ ಇನ್ನೊಂದು ದಾರಿ ಗಾಳಿಬೀಡು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅದೂ ಅಲ್ಲದೆ, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಪ್ರವೇಶ ಮಾಡಲು ಅವರಿಗೆ ಅವಕಾಶವಿದೆ.

Continue Reading
Advertisement
Theft Case In Bengaluru
ಬೆಂಗಳೂರು7 mins ago

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Salman Khan
ಸಿನಿಮಾ31 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Dharamsala Stadium
ಕ್ರೀಡೆ34 mins ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ35 mins ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Narendra Modi
ದೇಶ42 mins ago

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Job Alert
ಉದ್ಯೋಗ1 hour ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

LIQUID NITROGEN
ಬೆಂಗಳೂರು1 hour ago

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

IPL 2024
ಕ್ರೀಡೆ1 hour ago

IPL 2024: ಬಸ್‌ ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

prajwal ravanna case dk shivakumar poster
ಪ್ರಮುಖ ಸುದ್ದಿ2 hours ago

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Naxal activities
ದೇಶ2 hours ago

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ18 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ18 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ18 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌