ಟರ್ಕಿ ಭೂಕಂಪದ ಭೀಕರತೆ; ಎಲ್ಲೆಲ್ಲೂ ಶವಗಳು ಕೊಳೆತ ವಾಸನೆ, 94 ತಾಸು ತನ್ನ ಮೂತ್ರವನ್ನೇ ಕುಡಿದು ಬದುಕಿದ್ದ ಯುವಕ - Vistara News

ವಿದೇಶ

ಟರ್ಕಿ ಭೂಕಂಪದ ಭೀಕರತೆ; ಎಲ್ಲೆಲ್ಲೂ ಶವಗಳು ಕೊಳೆತ ವಾಸನೆ, 94 ತಾಸು ತನ್ನ ಮೂತ್ರವನ್ನೇ ಕುಡಿದು ಬದುಕಿದ್ದ ಯುವಕ

ಕಳೆದ ನಾಲ್ಕು ದಿನಗಳಿಂದ ಅವಶೇಷಗಳಡಿಯಲ್ಲೇ ಸಿಲುಕಿದ್ದ 17 ವರ್ಷದ ಹುಡುಗನೊಬ್ಬನನ್ನು ಈಗ ಹೊರತೆಗೆದು ರಕ್ಷಿಸಲಾಗಿದೆ. ಈ ಹುಡುಗ ನಾಲ್ಕು ದಿನ ಹೇಗಿದ್ದ ಎಂಬುದನ್ನು ಕೇಳಿದರೆ, ನಿಜಕ್ಕೂ ಮನಸಿಗೆ ಖೇದ ಅನ್ನಿಸುತ್ತದೆ.

VISTARANEWS.COM


on

Turkey Syria Earthquake Teenager Drank Urine Under Debris 4 Days
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟರ್ಕಿ-ಸಿರಿಯಾ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಸಾವಿರಕ್ಕೆ ಏರಿಕೆಯಾಗಿದೆ. ಸೋಮವಾರ (ಫೆ.6) ಟರ್ಕಿ ಮತ್ತು ಸಿರಿಯಾದಲ್ಲಿ 24ಗಂಟೆಯಲ್ಲಿ ಮೂರು ಬಾರಿ ಭೂಮಿ ಕಂಪಿಸಿತ್ತು (Turkey Earthquake). ದೊಡ್ಡದೊಡ್ಡ ಅಪಾರ್ಟ್​ಮೆಂಟ್​ಗಳು ಕುಸಿದಿವೆ. ಭೂಮಿ ಬಾಯ್ಬಿಟ್ಟಿದೆ. ಕುಸಿದ ಮನೆಗಳ ಅವಶೇಷಗಳಡಿ ಸಿಲುಕಿದ ಜನರು ಅಲ್ಲಲ್ಲೇ ಪ್ರಾಣಬಿಡುತ್ತಿದ್ದಾರೆ. ಇಷ್ಟರ ಮಧ್ಯೆ ಕೆಲವರು ಜೀವ ಹಿಡಿದುಕೊಂಡು ಅಲ್ಲೇ ಮಲಗಿದ್ದಾರೆ. ಅಂಥವರನ್ನು ರಕ್ಷಿಸುವ ಕಾರ್ಯಾಚರಣೆಯೂ ಭರದಿಂದ ಸಾಗುತ್ತಿದೆ. ಟರ್ಕಿ-ಸಿರಿಯಾದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದಲೂ ರಕ್ಷಣಾ ತಂಡಗಳು ತೆರಳಿವೆ. ಈಗೀಗ ಟರ್ಕಿ-ಸಿರಿಯಾದ ಭೂಕಂಪದ ಭೀಕರತೆ ಮತ್ತಷ್ಟು ಗೋಚರವಾಗುತ್ತಿದೆ. ಎಲ್ಲಿ ನೋಡಿದರೂ ಶವ ಕೊಳೆತ ವಾಸನೆ. ಕಲ್ಲುಮಣ್ಣುಗಳಡಿ ಸಿಕ್ಕಿ, ಅಲ್ಲಿಯೇ ಉಸಿರು ಚೆಲ್ಲಿರುವವರ ಮೃತದೇಹಗಳು ಕೊಳೆಯಲು ಪ್ರಾರಂಭಿಸಿದೆ.

ಟರ್ಕಿ-ಸಿರಿಯಾ ಭೂಕಂಪದ ಕರಾಳತೆ ತೋರಿಸುವ ಹಲವು ಫೋಟೋ-ವಿಡಿಯೊಗಳು, ಸುದ್ದಿಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿವೆ. ಕಳೆದ ನಾಲ್ಕು ದಿನಗಳಿಂದ ಅವಶೇಷಗಳಡಿಯಲ್ಲೇ ಸಿಲುಕಿದ್ದ 17 ವರ್ಷದ ಹುಡುಗನೊಬ್ಬನನ್ನು ಈಗ ಹೊರತೆಗೆದು ರಕ್ಷಿಸಲಾಗಿದೆ. ಈ ಹುಡುಗ ನಾಲ್ಕು ದಿನ ಹೇಗಿದ್ದ ಎಂಬುದನ್ನು ಕೇಳಿದರೆ, ನಿಜಕ್ಕೂ ಮನಸಿಗೆ ಖೇದ ಅನ್ನಿಸುತ್ತದೆ. ಹೊರಗೆ ಬಂದ ಬಳಿಕ ಮಾತನಾಡಿದ ಅವನು ‘ನಾನು ಈ ನಾಲ್ಕೂ ದಿನ ಜೀವ ಹಿಡಿದಿಟ್ಟುಕೊಳ್ಳುವ ಸಲುವಾಗಿ, ನನ್ನ ಮೂತ್ರವನ್ನೇ ನಾನು ಕುಡಿಯುತ್ತಿದ್ದೆ’ ಎಂದು ತಿಳಿಸಿದ್ದಾನೆ.

ಈ ಯುವಕನ ಹೆಸರು ಅದ್ನಾನ್​ ಮುಹಮ್ಮಟ್​ ಕೋರ್ಕುಟ್​. ಸೋಮವಾರ ರಾತ್ರಿ ತನ್ನ ಮನೆಯಲ್ಲಿ ಮಲಗಿದ್ದ. ಭೂಮಿ ನಡುಗಿ, ಮನೆಯೆಲ್ಲ ಕುಸಿದು ಬಿದ್ದಾಗ ಅವನಿಗೆ ಎಚ್ಚರವಾಯಿತು. ಆದರೆ ಅವನು ಸಿಮೆಂಟ್​-ಕಲ್ಲು, ಮಣ್ಣುಗಳಡಿ ಸಿಲುಕಿದ್ದ. ಥೇಟ್​ ಗರ್ಭದಲ್ಲಿ ಮಗು ಯಾವ ಸ್ಥಿತಿಯಲ್ಲಿ ಮಲಗಿರುತ್ತದೆಯೋ, ಅದೆ ಸ್ಥಿತಿಯಲ್ಲೇ ಮಲಗಿದ್ದ. ಅದೃಷ್ಟಕ್ಕೆ ಅವನ ಮೊಬೈಲ್​ಗೆ ಹಾನಿಯಾಗಿರಲಿಲ್ಲ. ಎರಡು ದಿನಗಳ ಕಾಲ ಅದರಲ್ಲಿ ಅವನು ಪ್ರತಿ 25ನಿಮಿಷಕ್ಕೆ ಒಮ್ಮೆ ಅಲಾರಾಂ ಬೆಲ್​ ಆಗುವಂತೆ ಮಾಡಿಕೊಂಡಿದ್ದ. ತಾನು ಸಂಪೂರ್ಣ ನಿದ್ದೆಗೆ ಜಾರಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿದ್ದ. ಆದರೆ ಮೂರನೇ ದಿನಕ್ಕೆ ಮೊಬೈಲ್ ಬ್ಯಾಟರಿ ಖಾಲಿ ಆಗಿ ಅದೂ ಕೂಡ ಆಫ್​ ಆಯಿತು. 94 ತಾಸು ಹೀಗೆ ಇದ್ದವನನ್ನು ಈಗ ರಕ್ಷಣಾ ಪಡೆಗಳು ಹೊರಗೆ ಕರೆತಂದಿವೆ. ಸದ್ಯ ಅವನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

US Mass Shooting: ಅಮೆರಿಕದ ಪಾರ್ಕ್‌ನಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿ; ಒಬ್ಬ ವ್ಯಕ್ತಿ ಬಲಿ, 6 ಜನಕ್ಕೆ ಗಾಯ

US Mass Shooting: ರಾಚೆಸ್ಟರ್‌ನಲ್ಲಿರುವ ಮ್ಯಾಪಲ್‌ವುಡ್‌ ಉದ್ಯಾನದಲ್ಲಿ ಭಾನುವಾರ ಸಂಜೆ ನೂರಾರು ಜನ ಸೇರಿದ್ದರು. ಇದೇ ವೇಳೆ ಗುಂಪನಲ್ಲೇ ಗುಂಡಿನ ಮೊರೆತ ಶುರುವಾಗಿದೆ. ಇದರಿಂದಾಗಿ ಗಲಿಬಿಲಿಗೊಂಡ ಜನ ಓಡಿಹೋಗಿದ್ದಾರೆ. ಮೃತ ವ್ಯಕ್ತಿ ಹಾಗೂ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಕುರಿತು ಇದುವರೆಗೆ ಪೊಲೀಸರಿಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

VISTARANEWS.COM


on

US Mass Shooting
Koo

ವಾಷಿಂಗ್ಟನ್:‌ ಅಮೆರಿಕದಲ್ಲಿ ನಡೆಯುತ್ತಿರುವ ಸಾಮೂಹಿಕ ಗುಂಡಿನ ದಾಳಿಗಳ ಕುರಿತು ಜಾಗತಿಕವಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ನ್ಯೂಯಾರ್ಕ್‌ನಲ್ಲಿ ಭಾನುವಾರ (ಜುಲೈ 28) ನಡೆದ ಸಾಮೂಹಿಕ ಗುಂಡಿನ ದಾಳಿಗೆ (US Mass Shooting) ಒಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ನ್ಯೂಯಾರ್ಕ್‌ನ ರಾಚೆಸ್ಟರ್‌ ಪಾರ್ಕ್‌ನಲ್ಲಿ (Rochester Park) ಗುಂಡಿನ ದಾಳಿ ನಡೆಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಆರು ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದ್ದರೆ, ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ರಾಚೆಸ್ಟರ್‌ನಲ್ಲಿರುವ ಮ್ಯಾಪಲ್‌ವುಡ್‌ ಉದ್ಯಾನದಲ್ಲಿ ಭಾನುವಾರ ಸಂಜೆ ನೂರಾರು ಜನ ಸೇರಿದ್ದರು. ಇದೇ ವೇಳೆ ಗುಂಪನಲ್ಲೇ ಗುಂಡಿನ ಮೊರೆತ ಶುರುವಾಗಿದೆ. ಇದರಿಂದಾಗಿ ಗಲಿಬಿಲಿಗೊಂಡ ಜನ ಓಡಿಹೋಗಿದ್ದಾರೆ. ಆದರೂ, ಗುಂಡಿನ ದಾಳಿಗೆ ಒಬ್ಬ ಯುವಕ ಮೃತಪಟ್ಟಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮೃತ ವ್ಯಕ್ತಿ ಹಾಗೂ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಕುರಿತು ಇದುವರೆಗೆ ಪೊಲೀಸರಿಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಒಬ್ಬನೇ ಗುಂಡಿನ ದಾಳಿ ನಡೆಸಿದ್ದಾನೋ ಅಥವಾ ಹಲವು ಜನ ದಾಳಿ ನಡೆಸಿದ್ದಾರೋ ಎಂಬುದು ಕೂಡ ಗೊತ್ತಾಗಿಲ್ಲ. ಭಾನುವಾರದ ಹಿನ್ನೆಲೆಯಲ್ಲಿ ಮಕ್ಕಳು ಸೇರಿ ಪಾರ್ಕ್‌ನಲ್ಲಿ ಹೆಚ್ಚಿನ ಜನ ಸೇರಿದ್ದರು ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿಗಳು ಸಾಮಾನ್ಯ ಎಂಬಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಕಳೆದ ತಿಂಗಳಷ್ಟೇ ಲಾಸ್‌ ವೇಗಾಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದರು. ವ್ಯಕ್ತಿಯೊಬ್ಬ ಎರಡು ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದ. ಕೃತ್ಯ ಎಸಗಿದವನನ್ನು 47 ವರ್ಷದ ಎರಿಕ್ ಆಡಮ್ಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 13 ವರ್ಷದ ಬಾಲಕಿ ಗಂಭೀರ ಗಾಯಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿತ್ತು.

ಅಮೆರಿಕದ ಮೈನ್‌ ಪ್ರದೇಶದ ಲೆವಿಸ್ಟನ್‌ ಎಂಬಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ನಡೆಸಿದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದರು. ಸುಮಾರು 60 ಜನರು ಗಾಯಗೊಂಡಿದ್ದರು. ಈ ವೇಳೆ ಬಾರ್‌ ಮತ್ತು ರೆಸ್ಟೋರೆಂಟ್‌ನ ಎರಡು ಕಡೆ ದಾಳಿ ನಡೆದಿತ್ತು. ಬಂದೂಕು ಸಂಸ್ಕೃತಿ ವ್ಯಾಪಕವಾಗಿರುವ ಅಮೆರಿಕದಲ್ಲಿ ಕಳೆದ ವರ್ಷ 500ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿ ನಡೆದಿತ್ತು.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Continue Reading

ದೇಶ

India Maldives: ದುರಹಂಕಾರ ಬಿಟ್ಟು ಭಾರತಕ್ಕೆ ಧನ್ಯವಾದ ತಿಳಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು!

India Maldives: ಭಾರತದ ಜತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಭರವಸೆ ಇದೆ ಎಂದು ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಹೇಳಿದ್ದಾರೆ. ಕಳೆದ ತಿಂಗಳು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದಲ್ಲೂ ಮೊಹಮ್ಮದ್‌ ಮುಯಿಜು ಭಾಗವಹಿಸಿದ್ದರು.

VISTARANEWS.COM


on

India Maldives
Koo

ನವದೆಹಲಿ: ಕೆಲ ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲಕ್ಷದ್ವೀಪಕ್ಕೆ ಭೇಟಿ ಕೊಟ್ಟು, ಪ್ರವಾಸೋದ್ಯಮದ ಉತ್ತೇಜನಕ್ಕೆ ಕರೆ ಕೊಟ್ಟ ಬಳಿಕ ಉದ್ಧಟತನ ತೋರಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಕೊನೆಗೂ ದುರಹಂಕಾರ ಮರೆತು, ಭಾರತದ ಜತೆ ಕೈಜೋಡಿಸಲು ಮುಂದಾಗಿದ್ದಾರೆ. ಸಾಲ ಮರುಪಾವತಿ ನಿಯಮಗಳಲ್ಲಿ ಭಾರತವು ಸಡಿಲಿಕೆ ಮಾಡಿರುವುದರಿಂದ ಮೊಹಮ್ಮದ್‌ ಮುಯಿಜು ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ. ಹಾಗೆಯೇ, ಭಾರತದ ಜತೆ ಮುಕ್ತ ವ್ಯಾಪಾರ ಒಪ್ಪಂದ (India Maldives) ಮಾಡಿಕೊಳ್ಳುವ ಆಸಕ್ತಿ ತೋರಿದ್ದಾರೆ.

ಕಳೆದ ಶುಕ್ರವಾರ (ಜುಲೈ 26) ಮಾಲ್ಡೀವ್ಸ್‌ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೊಹಮ್ಮದ್‌ ಮುಯಿಜು ಮಾತನಾಡಿದರು. “ವಿದೇಶಾಂಗ ನೀತಿಯಲ್ಲಿ ಮಾಲ್ಡೀವ್ಸ್‌ ಉತ್ತಮ ಸುಧಾರಣೆ ಕಾಣುತ್ತಿದೆ. ಬೇರೆ ದೇಶಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳು ಚೆನ್ನಾಗಿವೆ” ಎಂದು ಹೇಳಿದರು. ಇದೇ ವೇಳೆ ಅವರು, “ಮಾಲ್ಡೀವ್ಸ್‌ ಸಾಲ ಮರುಪಾವತಿ ಕುರಿತು ನಿಯಮ ಸಡಿಲಿಸಿದ ಭಾರತಕ್ಕೆ ಧನ್ಯವಾದಗಳು. ಭಾರತದ ಜತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಭರವಸೆ ಇದೆ” ಎಂದು ಹೇಳಿದ್ದಾರೆ. ಕಳೆದ ತಿಂಗಳು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದಲ್ಲೂ ಮೊಹಮ್ಮದ್‌ ಮುಯಿಜು ಭಾಗವಹಿಸಿದ್ದರು.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಮೊಹಮ್ಮದ್‌ ಮುಯಿಜು ಚೀನಾ ಪರ ನಿಲುವು

ಚೀನಾ ಸರ್ಕಾರದಿಂದ ತೀವ್ರ ಸಾಲ ತಂದಿರುವ ಮಾಲ್ಡೀವ್ಸ್‌ನ ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಚೀನಾ ಪರ ಒಲವುಳ್ಳ ನಾಯಕ ಎಂದು ಗುರುತಿಸಿಕೊಂಡಿದ್ದಾರೆ. ಈ ಹಿಂದಿನ ಸರ್ಕಾರವು ಚೀನಾದಿಂದ ಸಾಕಷ್ಟು ಸಾಲವನ್ನು ಪಡೆದುಕೊಂಡಿದೆ. ಈಗ ಚೀನಾಗೆ ತೆರಳಿರುವ ಮೊಹಮ್ಮದ್‌ ಮುಯಿಜು, 50 ದಶಲಕ್ಷ ಡಾಲರ್‌ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಸಾಲ, ವ್ಯಾಪಾರದ ಆಸೆ ತೋರಿಸುತ್ತಿರುವ ಚೀನಾ, ಪಾಕಿಸ್ತಾನದಂತೆ ಮಾಲ್ಡೀವ್ಸ್‌ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ, ಮೊಹಮ್ಮದ್‌ ಮುಯಿಜು ಅವರು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಮಾಲ್ಡೀವ್ಸ್‌ ಸಚಿವರು ಭಾರತದ ವಿರುದ್ಧ ಆರೋಪ ಮಾಡಿರುವುದು ಕೂಡ ಓಲೈಕೆಯ ಸಂಕೇತ ಎನ್ನಲಾಗಿತ್ತು. ಆದರೆ, ಈಗ ಎಲ್ಲವನ್ನು ಮರೆತು ಭಾರತದ ಜತೆ ಒಪ್ಪಂದ ಮಾಡಿಕೊಳ್ಳಲು ಮುಯಿಜು ಮುಂದಾಗಿದ್ದಾರೆ.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಅನುದಾನದಲ್ಲಿ ಭಾರೀ ಕಡಿತ! ನೆರೆಯ ರಾಷ್ಟ್ರಗಳಿಗೆ ಎಷ್ಟೆಷ್ಟು ನೆರವು ಘೋಷಣೆ?

Continue Reading

ದೇಶ

India Pakistan War: ಭಾರತಕ್ಕೆ ನುಗ್ಗಿದ ಪಾಕ್‌ನ 600 ಕಮಾಂಡೋಗಳು; ನಡೆಯುತ್ತಾ ಮತ್ತೊಂದು ಯುದ್ಧ?

India Pakistan War: ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದು ಭಾರತ ಹಾಗೂ ಪಾಕಿಸ್ತಾನದ ನಡುವಿನ ಮತ್ತೊಂದು ಯುದ್ಧಕ್ಕೆ ಮುನ್ನುಡಿಯಂತಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

India Pakistan War
Koo

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 1947-48ರಿಂದ ಇದುವರೆಗೆ ಪಾಕಿಸ್ತಾನವು ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ (India Pakistan War) ಮಾಡಿದೆ ಹಾಗೂ ನಾಲ್ಕು ಬಾರಿಯೂ ಸೋತು ಸುಣ್ಣವಾಗಿದೆ. ಇಷ್ಟಾದರೂ, ಗಡಿಯಲ್ಲಿ ಉದ್ಧಟತನ ಮಾಡುವುದು, ಉಗ್ರರನ್ನು ಛೂ ಬಿಡುವುದನ್ನು ಮಾತ್ರ ಕುತಂತ್ರಿ ಪಾಕಿಸ್ತಾನ ಬಿಟ್ಟಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಈಗ ಪಾಕಿಸ್ತಾನದ 600 ಕಮಾಂಡೋಗಳು ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾರ್ಗಿಲ್‌ (Kargil War) ಮಾದರಿಯಲ್ಲೇ ಉಭಯ ದೇಶಗಳ ಮಧ್ಯೆ ಮತ್ತೊಂದು ಯುದ್ಧ ಆರಂಭವಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಹೌದು, ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಸ್ಫೋಟಕ ಮಾಹಿತಿ ನೀಡಿರುವುದು ಇಂತಹದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದೆ. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದಾರೆ.

“ಕಣಿವೆಯ ಸ್ಥಳೀಯ ಜಿಹಾದಿ ಹೋರಾಟಗಾರರು ಪಾಕಿಸ್ತಾನದ ಪರವಾಗಿ ಹೋರಾಡಲು ಸಜ್ಜಾಗಿದ್ದಾರೆ. ಜಮ್ಮುವಿನಲ್ಲಿ ನಡೆಯುತ್ತಿರುವ ದಾಳಿಯ ಉಸ್ತುವಾರಿಯನ್ನು ಪಾಕಿಸ್ತಾನದ ಲೆಫ್ಟಿನೆಂಟ್‌ ಕರ್ನಲ್‌ ಶಾಹಿದ್‌ ಸಲೀಮ್‌ ಜಂಜುವಾ ವಹಿಸಿಕೊಂಡಿದ್ದಾನೆ. ಭಾರತೀಯ ಸೇನೆಯ 15 ಕಾರ್ಪ್ಸ್‌ ಯೋಧರೇ ಅವರ ಗುರಿಯಾಗಿದ್ದಾರೆ. ಇನ್ನೂ ಎರಡು ಬೆಟಾಲಿಯನ್‌ಗಳು ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಲು ಮುಂದಾಗಿದ್ದಾರೆ” ಎಂದು ಎಚ್ಚರಿಸಿದ್ದಾರೆ. ಇದು ಈಗ ಆತಂಕದ ವಾತಾವರಣ ನಿರ್ಮಾಣವಾಗಲು ಕಾರಣವಾಗಿದೆ.

ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ವಾರ್ನಿಂಗ್‌ ಕೊಟ್ಟಿರುವ ಮೋದಿ

ಜುಲೈ 26ರ ಕಾರ್ಗಿಲ್‌ ವಿಜಯ ದಿವಸದಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. “ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ. ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಇದನ್ನೂ ಓದಿ: ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Continue Reading

ವೈರಲ್ ನ್ಯೂಸ್

ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Indo-Pak Romance: ಪಾಕಿಸ್ತಾನದ ಮೆಹ್ವಿಶ್ ಎಂಬ ಮಹಿಳೆ ಗಡಿಯನ್ನು ದಾಟಿ, ಫೇಸ್‌ಬುಕ್‌ನಲ್ಲಿ ಪರಿಚಯವಾದ ತನ್ನ ವಿವಾಹಿತ ಪ್ರೇಮಿ ರೆಹಮಾನ್‌ನೊಂದಿಗೆ ಬಾಳಲು ರಾಜಸ್ಥಾನದ ಬಿಕಾನೇರ್ ಜಿಲ್ಲೆಗೆ ಆಗಮಿಸಿದ್ದಾರೆ. ವಿಶೇಷ ಎಂದರೆ ಮೆಹ್ವಿಶ್ ಮತ್ತು ರೆಹಮಾನ್‌ಗೆ ಈಗಾಗಲೇ ಬೇರೆ ಬೇರೆ ಮದುವೆಯಾಗಿದ್ದು ತಲಾ ಇಬ್ಬರು ಮಕ್ಕಳಿದ್ದಾರೆ. ಈ ಪೈಕಿ ಮೆಹ್ವಿಶ್ ವಿಚ್ಛೇಧನ ಪಡೆದುಕೊಂಡಿದ್ದರೆ ಸದ್ಯ ರೆಹಮಾನ್‌ ಪತ್ನಿ ಠಾಣೆ ಮೆಟ್ಟಿಲೇರಿದ್ದಾರೆ.

VISTARANEWS.COM


on

Indo-Pak Romance
Koo

ಜೈಪುರ: ಪ್ರೀತಿಗೆ ಕಣ್ಣಿಲ್ಲ ಎನ್ನುವ ಮಾತಿದೆ. ಜತೆಗೆ ಗಡಿಯ ಹಂಗೂ ಇಲ್ಲ. ಈಗಾಗಲೇ ಎರಡು ದೇಶಗಳ ಪ್ರೇಮಿಗಳು ಭಾಷೆ, ಧರ್ಮದ ಗಡಿಯನ್ನು ಮೀರಿ ಒಂದಾಗಿರುವುದನ್ನು ನೋಡಿದ್ದೇನೆ. ಬಹುತೇಕ ಸಂದರ್ಭದಲ್ಲಿ ಇದಕ್ಕೆ ಸೋಷಿಯಲ್‌ ಮೀಡಿಯಾವೇ ತಳಹದಿ ಎನ್ನುವುದು ವಿಶೇಷ. ಇಷ್ಟೆಲ್ಲ ಪೀಠಿಕೆ ಯಾಕೆಂದರೆ ಪಾಕಿಸ್ತಾನದ ಮಹಿಳೆ, ಎರಡು ಮಕ್ಕಳ ತಾಯಿ ಫೇಸ್‌ಬುಕ್‌ನಲ್ಲಿ ಪರಿಚಯವಾದ ತನ್ನ ಪ್ರಿಯತಮನ್ನು ಹುಡುಕಿಕೊಂಡು ರಾಜಸ್ಥಾನಕ್ಕೆ ಆಗಮಿಸಿದ್ದಾರೆ (Indo-Pak Romance). ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ಆನ್‌ಲೈನ್‌ ಪಬ್‌ ಜಿ ಗೇಮ್‌ ಆಡುವಾಗ ಪರಿಚಯವಾದ ಗ್ರೇಟರ್‌ ನೊಯ್ಡಾದ ಸಚಿನ್‌ ಮೀನಾ ಎಂಬ ಯುವಕನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್‌ ವರ್ಷಗಳ ಹಿಂದೆ ಸಂಚಲನ ಮೂಡಿಸಿದ್ದರು. ಇದು ಕೂಡ ಅದನ್ನೇ ಹೋಲುವ ಘಟನೆ. ಇದೀಗ ಭಾರತಕ್ಕೆ ಬಂದ ಮಹಿಳೆಯ ಹೆಸರು 25 ವರ್ಷದ ಮೆಹ್ವಿಶ್. ಮೆಹ್ವಿಶ್ ಗಡಿಯನ್ನು ದಾಟಿ, ಫೇಸ್‌ಬುಕ್‌ನಲ್ಲಿ ಪರಿಚಯವಾದ ತನ್ನ ವಿವಾಹಿತ ಪ್ರೇಮಿ ರೆಹಮಾನ್‌ನೊಂದಿಗೆ ಬಾಳಲು ರಾಜಸ್ಥಾನದ ಬಿಕಾನೇರ್ ಜಿಲ್ಲೆಗೆ ಬಂದಿರುವುದು ಮತ್ತೊಮ್ಮೆ ಸದ್ದು ಮಾಡುತ್ತಿದೆ.

ಲಾಹೋರ್‌ ಮೂಲದ ಮೆಹ್ವಿಶ್ ಮಾಧ್ಯಮಗಳೊಂದಿಗೆ ತಮ್ಮ ಲವ್‌ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ. ಮೆಹ್ವಿಶ್‌ಗೆ 2 ವರ್ಷ ತುಂಬುವಷ್ಟರಲ್ಲಿ ತಾಯಿ ನಿಧನ ಹೊಂದಿದ್ದರು. 10ನೇ ವರ್ಷದಲ್ಲಿ ಅವರು ತಂದೆಯನ್ನು ಕಳೆದುಕೊಂಡರು. ಬಳಿಕ ಅವರು ಇಸ್ಲಾಮಾಬಾದ್‌ಗೆ ತೆರಳಿ ಸಹೋದರಿ ಶಹಿಮಾ ಅವರೊಂದಿಗೆ ವಾಸಿಸತೊಡಗಿದರು. ಬ್ಯೂಟಿ ಪಾರ್ಲರ್‌ ಕೋರ್ಸ್‌ ಮಾಡಿರುವ ಅವರು ಕಳೆದ ಒಂದು ದಶಕದಿಂದ ಸ್ವಂತ ಉದ್ಯಮ ನಡೆಸುತ್ತಿದ್ದಾರೆ.

ಇಬ್ಬರು ಮಕ್ಕಳು

ಅಚ್ಚರಿ ಎಂದರೆ ಮೆಹ್ವಿಶ್‌ ವಿವಾಹಿತೆ. ಬಾದಮಿ ಬಾಘ್‌ ಎನ್ನುವವರನ್ನು ಅವರು ಕೆಲವು ವರ್ಷಗಳ ಹಿಂದೆ ವರಿಸಿದ್ದರು. ಈ ದಂಪತಿಗೆ 12 ಮತ್ತು 7 ವರ್ಷದ ಇಬ್ಬರು ಮಕ್ಕಳಿದ್ದಾರೆ. 2018ರಲ್ಲಿ ಈ ದಂಪತಿ ವಿಚ್ಚೇಧನ ಪಡೆದುಕೊಂಡಿದ್ದು, ಬಾದಮಿ ಬಾಘ್‌ ಮರುಮದುವೆಯಾಗಿದ್ದಾರೆ. ಬಳಿಕ ಮೆಹ್ವಿಶ್‌ಗೆ ಫೇಸ್‌ಬುಕ್‌ನಲ್ಲಿ ರೆಹಮಾನ್‌ ಪರಿಚಯವಾಗಿತ್ತು. 2022ರಂದು ಮೆಹ್ವಿಶ್‌ ತನ್ನ ಸಹೋದರಿಯೊಂದಿಗೆ ಚರ್ಚೆ ನಡೆಸಿ ಕುವೈತ್‌ನಲ್ಲಿ ಕೆಲಸ ಮಾಡುವ ರೆಹಮಾನ್‌ ಬಳಿ ಮದುವೆಯ ಪ್ರಸ್ತಾವ ಇಟ್ಟಿದ್ದರು. 2022ರ ಮಾರ್ಚ್‌ 16ರಂದು ಇಬ್ಬರು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿವಾಹಿತರಾಗಿದ್ದರು. ನಂತರ ಅವರು 2023ರಲ್ಲಿ ಉಮ್ರಾ ತೀರ್ಥಯಾತ್ರೆಯ ಸಮಯದಲ್ಲಿ ಮೆಕ್ಕಾದಲ್ಲಿ ಭೇಟಿಯಾಗಿ ತಮ್ಮ ಮದುವೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದರು.

ಸ್ವಾಗತ

ಮೆಹ್ವಿಶ್ ಜುಲೈ 25ರಂದು ತನ್ನ ಕುಟುಂಬದೊಂದಿಗೆ ಇಸ್ಲಾಮಾಬಾದ್‌ನಿಂದ ವಾಘಾ ಗಡಿಗೆ ಆಗಮಿಸಿದರು. ಪಾಕಿಸ್ತಾನ ಮತ್ತು ಭಾರತೀಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ ನಂತರ 45 ದಿನಗಳ ಪ್ರವಾಸಿ ವೀಸಾದಲ್ಲಿ ಅವರು ಭಾರತ ಪ್ರವೇಶಿಸಿದ್ದರು. ರೆಹಮಾನ್ ಕುಟುಂಬವು ಆಕೆಯನ್ನು ಪಿಥಿಸರ್ ಗ್ರಾಮಕ್ಕೆ ಅದ್ದೂರಿಯಾಗಿ ಸ್ವಾಗತಿಸಿದೆ.

ಮೆಹ್ವಿಶ್ ಆಗಮನವು ಎಲ್ಲೆಡೆ ಸುದ್ದಿಯಾದ ಹಿನ್ನೆಲೆಯಲ್ಲಿ ಗುಪ್ತಚರ ಮತ್ತು ಭದ್ರತಾ ಸಂಸ್ಥೆಗಳ ಅಧಿಕಾರಿಗಳು ತನಿಖೆ ನಡೆಸುತ್ತಿವೆ. ಸ್ಥಳೀಯ ಪೊಲೀಸರು ಕೂಡ ಪ್ರಶ್ನಿಸಿದ್ದಾರೆ ಹಾಗೂ ಪಾಸ್‌ಪೋರ್ಟ್‌ ಮತ್ತು ವೀಸಾವನ್ನು ಪರಿಶೀಲಿಸಿದ್ದಾರೆ. ರೆಹಮಾನ್‌ 2011ರಲ್ಲಿ ಭದ್ರಾ ಮೂಲದ ಫರೀದಾ ಎಂಬಾಕೆಯನ್ನು ವಿವಾಹವಾಗಿದ್ದು, ಈತನಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು, ಫರೀದಾ ತನ್ನ ಮಕ್ಕಳೊಂದಿಗೆ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಕಾನೂನು ಪ್ರಕಾರ ಇವರು ವಿಚ್ಛೇಧನ ಪಡೆದುಕೊಂಡಿಲ್ಲ. ಇದೀಗ ತನ್ನ ಗಂಡನ ಪ್ರಿಯತಮೆ ಪಾಕಿಸ್ತಾನದಿಂದ ಬಂದಿರುವುದನ್ನು ತಿಳಿದು ಫರೀದಾ ಆಕೆಯ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಮೆಹ್ವಿಶ್ ಗೂಢಚಾರಿಯಾಗಿರಬಹುದು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಈ ಘಟನೆ ಸಿನಿಮಾ ಕಥೆಯನ್ನು ಹೋಲುತ್ತದೆ ಎಂದಿದ್ದಾರೆ ನೆಟ್ಟಿಗರು.

ಇದನ್ನೂ ಓದಿ: Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಚಾರಿಕೆಯೋ?

Continue Reading
Advertisement
shiradi landslide railway track
ಪ್ರಮುಖ ಸುದ್ದಿ20 mins ago

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

US Mass Shooting
ವಿದೇಶ38 mins ago

US Mass Shooting: ಅಮೆರಿಕದ ಪಾರ್ಕ್‌ನಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿ; ಒಬ್ಬ ವ್ಯಕ್ತಿ ಬಲಿ, 6 ಜನಕ್ಕೆ ಗಾಯ

Janhvi Kapoor interview Kamiya Jani trolled for calling idli-chicken curry weird combination
ಬಾಲಿವುಡ್43 mins ago

Janhvi Kapoor: ಇಡ್ಲಿ- ಚಿಕನ್ ಕರಿ ಕಾಂಬಿನೇಶನ್‌ಗೆ ಮುಖ ಕಿವುಚಿಕೊಂಡ ಖ್ಯಾತ ಯುಟ್ಯೂಬರ್‌; ತಿನ್ನಲು ಕೈ ಬಳಸಿ ಎಂದ ಜಾಹ್ನವಿ ಕಪೂರ್!

mukesh bollywood ರಾಜಮಾರ್ಗ ಅಂಕಣ
ಅಂಕಣ53 mins ago

ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

ವೈರಲ್ ನ್ಯೂಸ್55 mins ago

Viral Video: 7ನೇ ಡಿವೋರ್ಸ್‌ಗೆ ಕೋರ್ಟ್‌ಗೆ ಬಂದ ಮಹಿಳೆ; ಈಕೆಯ ಕುತಂತ್ರ ಕಂಡು ಜಡ್ಜ್‌ಗೆ ಶಾಕ್‌!

Tourist Place
Latest1 hour ago

Tourist Place in Tamilnadu : ತಮಿಳುನಾಡಿಗೆ ಹೋದರೆ ಈ ಅದ್ಭುತ ತಾಣಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಡಿ!

Kalika Temple
ದೇಶ1 hour ago

Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ

Kannada New Movie powder Movie release date announce
ಸ್ಯಾಂಡಲ್ ವುಡ್1 hour ago

Kannada New Movie: ‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್: ತೆರೆಗೆ ಯಾವಾಗ?

14 hours work protest
ಪ್ರಮುಖ ಸುದ್ದಿ2 hours ago

14 Hours Work: 14 ಗಂಟೆಗಳ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್‌ 3ರಂದು ಐಟಿ ಉದ್ಯೋಗಿಗಳ ಪ್ರತಿಭಟನೆ

India Maldives
ದೇಶ2 hours ago

India Maldives: ದುರಹಂಕಾರ ಬಿಟ್ಟು ಭಾರತಕ್ಕೆ ಧನ್ಯವಾದ ತಿಳಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ16 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ18 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ20 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ21 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌