NPS News : ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ - Vistara News

ನೌಕರರ ಕಾರ್ನರ್

NPS News : ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ (NPS News) ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

VISTARANEWS.COM


on

NPS News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ (NPS News) ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಮತ್ತೊಮ್ಮೆ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ರಾಯಭಾಗದ ಶಾಸಕ ಐಹೊಳೆ ಡಿ. ಮಹಾಲಿಂಗಪ್ಪ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು ದೇಶದ ಹಲವು ರಾಜ್ಯಗಳು ಈ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವುದು ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ವಿಧಾನಸಭೆಗೆ ನೀಡಿರುವ ಉತ್ತರ ಇಲ್ಲಿದೆ ನೋಡಿ;

ಹಳೆ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿಗಳ ಈ ಉತ್ತರದಿಂದ ಮತ್ತೆ ನಿರಾಸೆಯಾಗಿದೆ.

ಸಭೆಯೂ ನಡೆಯಲಿಲ್ಲ, ಚರ್ಚೆಯೂ ಇಲ್ಲ

ಹಳೆಯ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರ ಸಂಘದ ನೇತೃತ್ವದಲ್ಲಿ ಎನ್‌ಪಿಎಸ್‌ ಸರ್ಕಾರಿ ನೌಕರರು ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ಸಂದರ್ಭದಲ್ಲಿ ಎನ್‌ಪಿಎಸ್‌ ರದ್ದುಪಡಿಸುವ ವಿಷಯದ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ಧರಣಿ ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ್ದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌, ಎನ್‌ಪಿಎಸ್‌ ರದ್ದಿನ ಕುರಿತು ಮುಖ್ಯಮಂತ್ರಿಗಳೇ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಮತ್ತು ಈ ವಿಷಯವನ್ನು ಮುಂದಿನ ಬಜೆಟ್‌ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸುವ ಕುರಿತು ತೀರ್ಮಾನಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ಧರಣಿಯನ್ನು ಸ್ಥಗಿತಗೊಳಿಸಿ ಎಂದು ಕೋರಿದ್ದರು. ಸಚಿವರ ಮಾತನ್ನು ನಂಬಿದ ಎನ್‌ಪಿಎಸ್‌ ನೌಕರರು ಧರಣಿಯನ್ನು ಸ್ಥಗಿತಗೊಳಿಸುವ ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಇದುವರೆಗೂ ಸರ್ಕಾರ ಸಭೆ ನಡೆಸಿಲ್ಲ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಅಲ್ಲದೆ, ಬಜೆಟ್‌ ಅಧಿವೇಶನದಲ್ಲಿ ವಿಸ್ತೃತವಾಗಿ ಈ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಕೂಡ ಈ ಅಧಿವೇಶನದಲ್ಲಿ ಚರ್ಚೆ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಚರ್ಚೆಗೆ ಮುಂದಾದಾಗ, ಈ ಕುರಿತು ಸದನದಲ್ಲಿ ಪ್ರತ್ಯೇಕವಾಗಿ ಚರ್ಚೆ ನಡೆಯಬೇಕಾಗಿದೆ. ಆ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಪ್ರಕಟಿಸಿದ್ದರು. ಕಳೆದ ಅಧಿವೇಶನದಲ್ಲಿ ವಿಶೇಷ ಚರ್ಚೆಗೆಂದು ಈ ವಿಷಯ ನಿಗದಿಯಾಗಿತ್ತಾದರೂ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿಯೂ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆಗಳಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದನ್ನೂ ಓದಿ : NPS News : ಎನ್‌ಪಿಎಸ್‌ ರದ್ದಿನಿಂದ ಸರ್ಕಾರಕ್ಕೆ ಹೊರೆಯಾಗದು; ವೇತನ ಆಯೋಗದ ಮುಂದೆ NPS ನೌಕರರ ವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ ಗೈಡ್

EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳ ಭವಿಷ್ಯ ನಿಧಿ ಖಾತೆ ಹೊಂದಿರುವ ಸದಸ್ಯರ ಮರಣದ ಬಳಿಕ ಅವರ ಆಧಾರ್ ದೃಢೀಕರಣ ಇಲ್ಲದೆಯೂ ಡೆತ್ ಕ್ಲೈಮ್ ಸೆಟ್ಲ್ ಮೆಂಟ್ (EPF Death Claim) ಮಾಡಿಕೊಳ್ಳಬಹುದು. ಇದಕ್ಕಾಗಿ ಇಪಿಎಫ್‌ಒ ಪ್ರಮುಖ ಬದಲಾವಣೆಯನ್ನು ಮಾಡಿದೆ. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

EPF Death Claim
Koo

ಉದ್ಯೋಗಿಗಳ ಭವಿಷ್ಯ ನಿಧಿ (Employees Provident Fund) ಖಾತೆ ಹೊಂದಿರುವ ಸದಸ್ಯರ ಮರಣದ ಬಳಿಕ ಆಧಾರ್ ( Aadhaar) ದೃಢೀಕರಣಕ್ಕೆ ಸಂಬಂಧಿಸಿ ಎದುರಾಗಿರುವ ಪ್ರಮುಖ ಸವಾಲುಗಳ ಹಿನ್ನೆಲೆಯಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಡೆತ್ ಕ್ಲೈಮ್ (EPF Death Claim) ಮಾಡುವ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಇದು ಆಧಾರ್ ಲಿಂಕ್ ಮಾಡದ ಹಲವಾರು ಸದಸ್ಯರಿಗೆ ಅನುಕೂಲವಾಗಲಿದೆ.

ಮೇ 17ರಂದು ಹೊರಡಿಸಲಾದ ಸುತ್ತೋಲೆಯಲ್ಲಿ ಈ ಪ್ರಕಟಣೆ ಹೊರಡಿಸಲಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಇ- ಆಫೀಸ್ ಫೈಲ್ ಮೂಲಕ ಪ್ರಭಾರ ಅಧಿಕಾರಿಯಿಂದ (OIC) ಅನುಮೋದನೆ ಪಡೆದ ಬಳಿಕವೇ ಈ ಸೌಲಭ್ಯ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ಸತ್ತವರ ಸದಸ್ಯತ್ವ ಮತ್ತು ಹಕ್ಕುದಾರರ ನ್ಯಾಯಸಮ್ಮತತೆಯನ್ನು ದೃಢೀಕರಿಸಲು ಕೈಗೊಂಡ ಪರಿಶೀಲನಾ ಕಾರ್ಯವಿಧಾನಗಳನ್ನು ಕಡತವು ಸೂಕ್ಷ್ಮವಾಗಿ ದಾಖಲಿಸಬೇಕು. ಇದರಲ್ಲಿ ವಂಚನೆಯ ಅಪಾಯವನ್ನು ಕಡಿಮೆ ಮಾಡಲು ಒಐಸಿ ನಿರ್ದೇಶಿಸಿದಂತೆ ಈ ಪ್ರೋಟೋಕಾಲ್ ಅನ್ನು ಎಚ್ಚರಿಕೆಯಿಂದ ಕಾರ್ಯಗತಗೊಳಿಸಲಾಗುವುದು ಎಂದು ಇಪಿಎಫ್‌ಒ ತಿಳಿಸಿದೆ.

ಯುಎಎನ್ ನಲ್ಲಿ ಸದಸ್ಯರ ವಿವರಗಳು ನಿಖರವಾಗಿದ್ದರೂ ಯುಐಡಿ ಡೇಟಾಬೇಸ್‌ನಲ್ಲಿ ನಿಖರವಾಗಿಲ್ಲದ ಸಂದರ್ಭಗಳಲ್ಲಿ ಮಾತ್ರ ಈ ನಿರ್ದೇಶನಗಳು ಅನ್ವಯಿಸುತ್ತವೆ ಎಂದು ಸೂಚನೆಯು ಉಲ್ಲೇಖಿಸುತ್ತದೆ.

ಸಮಸ್ಯೆಗಳು ಏನು?

ಇಪಿಎಫ್‌ಒ ಸುತ್ತೋಲೆಯಲ್ಲಿ ಉಲ್ಲೇಖಿಸಿರುವಂತೆ ಸಾವಿನ ಸಂದರ್ಭದಲ್ಲಿ ಆಧಾರ್‌ನ ದೃಢೀಕರಣದ ಕುರಿತು ಕ್ಷೇತ್ರ ಕಚೇರಿಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿವೆ. ಇವುಗಳಲ್ಲಿ ಕೆಲವು ಆಧಾರ್ ದಾಖಲೆಯಲ್ಲಿನ ಅಸಮರ್ಪಕತೆ ಮತ್ತು ಅಪೂರ್ಣ ವಿವರಗಳು, ಆಧಾರ್ ಅನುಷ್ಠಾನದ ಮೊದಲು ವಿವರಗಳ ಅಲಭ್ಯತೆ, ನಿಷ್ಕ್ರಿಯಗೊಳಿಸಿದ ಖಾತೆಗಳು ಮತ್ತು ಆಧಾರ್ ಮೌಲ್ಯೀಕರಿಸುವಲ್ಲಿ ತಾಂತ್ರಿಕ ಸಮಸ್ಯೆಗಳು ಸೇರಿವೆ.

ಈ ಸಮಸ್ಯೆಗಳು ಉಲ್ಲೇಖಿಸಲಾದ ಕ್ಲೈಮ್‌ಗಳನ್ನು ಪ್ರಕ್ರಿಯೆಗೊಳಿಸುವಲ್ಲಿ ಅನಗತ್ಯ ವಿಳಂಬವನ್ನು ಉಂಟು ಮಾಡುತ್ತವೆ. ಅವುಗಳನ್ನು ಪರಿಹರಿಸಲು ಇಪಿಎಫ್‌ಒ ಈಗ ಈ ಷರತ್ತುಗಳೊಂದಿಗೆ ಆಧಾರ್ ಅನ್ನು ಸೀಡಿಂಗ್ ಮಾಡದೆಯೇ ಭೌತಿಕ ಇಪಿಎಫ್‌ ಕ್ಲೈಮ್‌ಗಳನ್ನು ಪಡೆದುಕೊಳ್ಳಲು ಅನುಮತಿಸುತ್ತದೆ.

ಇದನ್ನೂ ಓದಿ: Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

ಪರಿಹಾರ ಹೇಗೆ?

ಇಪಿಎಫ್‌ ಹೊಂದಿರುವ ಸದಸ್ಯನ ಸಾವಿನ ಸಂದರ್ಭದಲ್ಲಿ ಆಧಾರ್ ದೃಢೀಕರಣಕ್ಕೆ ಇಲ್ಲದೆ ಭೌತಿಕ ಕ್ಲೈಮ್‌ ಗಳ ಮೂಲಕ ತಾತ್ಕಾಲಿಕ ಭತ್ಯೆಯನ್ನು ಒದಗಿಸಲು ಒಐಸಿ ಅನುಮೋದನೆ ಕಡ್ಡಾಯವಾಗಿದೆ. ಮೃತರ ಸದಸ್ಯತ್ವ ಮತ್ತು ಹಕ್ಕುದಾರರ ದೃಢೀಕರಣವನ್ನು ಖಚಿತಪಡಿಸಲು ವಿವರವಾದ ಪರಿಶೀಲನೆಯು ಮುಖ್ಯವಾಗಿದೆ. ವಂಚನೆಯನ್ನು ತಡೆಗಟ್ಟಲು ಒಐಸಿ ನಿರ್ದೇಶನದಂತೆ ಸರಿಯಾದ ಕ್ರಮ ಕೈಗೊಳ್ಳಲಾಗುವುದು.

ಆಧಾರ್ ಇಲ್ಲದೇ ಇದ್ದರೆ ಏನು ಮಾಡಬಹುದು?

ಇಪಿಎಫ್‌ಒ ವೆಬ್‌ಸೈಟ್ ಮಾಹಿತಿ ಪ್ರಕಾರ, ಆಧಾರ್ ಇಲ್ಲದ ಸದಸ್ಯರ ಮರಣದ ಸಂದರ್ಭದಲ್ಲಿ ನಾಮಿನಿಯ ಆಧಾರ್ ವಿವರಗಳನ್ನು ದಾಖಲಿಸಲಾಗುತ್ತದೆ ಮತ್ತು ಅವನು ಅಥವಾ ಅವಳು ಜೆಡಿ ಫಾರ್ಮ್‌ಗೆ ಸಹಿ ಮಾಡಬೇಕು. ಇತರ ಪ್ರಕ್ರಿಯೆಗಳು ಒಂದೇ ಆಗಿರುತ್ತವೆ. ನಾಮನಿರ್ದೇಶನವು ಗೈರುಹಾಜರಾಗಿದ್ದರೆ ಕುಟುಂಬದ ಸದಸ್ಯರು ಅಥವಾ ಕಾನೂನುಬದ್ಧ ಉತ್ತರಾಧಿಕಾರಿಗಳು ಜೆಡಿಗೆ ದೃಢೀಕರಿಸಬಹುದು ಮತ್ತು ಅವರ ವಿವರಗಳನ್ನು ಸಲ್ಲಿಸಬೇಕು.

Continue Reading

ಉದ್ಯೋಗ

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

PSI Exam: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

VISTARANEWS.COM


on

Exam date announced for recruitment of 4000 posts including PSI exam
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ – Karnataka Examination Authority) ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೇಮಕಾತಿ ಪರೀಕ್ಷೆಗಳ (PSI Exam) ದಿನಾಂಕಗಳನ್ನು ಪ್ರಕಟಿಸಿದೆ. ಇಲ್ಲಿ ಆಯಾ ಇಲಾಖೆಗಳ ಪರೀಕ್ಷೆಯನ್ನು ಯಾವ ದಿನಾಂಕದಲ್ಲಿ ಮಾಡಲಾಗುವುದು ಎಂಬ ಮಾಹಿತಿಯನ್ನು ನೀಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

ಪಿಎಸ್ಐ) ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ‌ಪ್ರಕಟಿಸಲಾಗಿದೆ. ಪೋಲಿಸ್ ಇಲಾಖೆಯ 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ತಿಳಿಸಿದೆ.

Exam date announced for recruitment of 4000 posts including PSI exam

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.
Continue Reading

ಕರ್ನಾಟಕ

KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

KPTCL Recruitment: ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ, ಕೆಪಿಟಿಸಿಎಲ್‌ ನೇಮಕಾತಿ ಆದೇಶ ನೀಡಲಾಗಿದೆ.

VISTARANEWS.COM


on

KPTCL Recruitment
Koo

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ (KPTCL Recruitment) ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಎಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರಾಗಿದ್ದಾರೆ.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. 902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Reservation in Outsourcing: ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ.

VISTARANEWS.COM


on

Reservation in outsourcing
Koo

ಬೆಂಗಳೂರು: ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ (Reservation in Outsourcing) ಅಳವಡಿಸಲು ಒಪ್ಪಿಗೆ ನೀಡಲಾಗಿತ್ತು. ಇದೀಗ ಅಧಿಕೃತವಾಗಿ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್‌. ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ. 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಆದ್ದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ:

  1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  2. ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
  3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  4. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
  5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
  9. ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ನಾಯತ್ತ ಸಂಸ್ಥೆಗಳು | ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ | Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

ಈ ಹಿಂದೆ ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ ಇರಲಿಲ್ಲ. ಆದರೆ, ಮೀಸಲಾತಿ ನೀಡಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ರಾಜ್ಯ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದೆ.

Continue Reading
Advertisement
Prajwal Revanna Case
ಕರ್ನಾಟಕ31 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ55 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌