BJP Karnataka: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದ ಸಿಎಂ ಬಸವರಾಜ ಬೊಮ್ಮಾಯಿ - Vistara News

ಕರ್ನಾಟಕ

BJP Karnataka: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳೂ ಜನರಿಗೆ ಮನವರಿಕೆ ಆಗುವಂತೆ ಜಾಗೃತಿ ಮೂಡಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ (BJP Karnataka) ಆರಂಭವಾಗಲಿದೆ. ಇದು ಚುನಾವಣಾ ಸಮರದ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಮಂಡಲ ಪ್ರಭಾರಿಗಳ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುತ್ತಿದ್ದು, ಗುರಿ ಮೀರಿ ಶೇ 23ರಷ್ಟು ಹೆಚ್ಚು ಕಂದಾಯ ಸಂಗ್ರಹವಾಗಿದೆ. ಬಡವರ ಪರವಾಗಿ ನಮ್ಮ ನಿಲುವಿದೆ ಎಂದು ವಿವರಿಸಿದರು. ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಹಣ ಅನುದಾನ ಕೊಟ್ಟಿದ್ದೇವೆ. ಸ್ಪಂದನಾಶೀಲ, ಜನಪರ ಬಿಜೆಪಿ ಸರಕಾರ ರಾಜ್ಯದಲ್ಲಿದೆ ಎಂದು ವಿವರಿಸಿದರು. ಕ್ಷೇತ್ರದಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ತಿಳಿಸಿದರು.

ಮಂಡಲ ಪ್ರಭಾರಿಗಳ ಮೇಲೆ ಗುರುತರವಾದ ಜವಾಬ್ದಾರಿ ಇದೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಹತ್ತು ಹಲವು ಕಾರ್ಯಕ್ರಮ ಅನುಷ್ಠಾನಕ್ಕೆ ಬಂದಿವೆ. ಕರ್ನಾಟಕದಲ್ಲಿ 2019ರಲ್ಲಿ ಯಡಿಯೂರಪ್ಪ ಅವರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೊಟ್ಟಿದ್ದಲ್ಲದೆ, ಕೋವಿಡ್ ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ನಾನು ಪ್ರವಾಹವನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಅಲ್ಲದೆ ನಮ್ಮ ರಾಜ್ಯ ಸರ್ಕಾರ ಅನೇಕ ಜನೋಪಯೋಗಿ ಕಾರ್ಯಕ್ರಮ ಜಾರಿಗೊಳಿಸಿದೆ. ಇವೆಲ್ಲವನ್ನೂ ಜನರಿಗೆ ತಿಳಿಸಬೇಕಿದೆ ಎಂದರು.

ನಕಾರಾತ್ಮಕವಾಗಿ ಮತ ಪಡೆಯಲು ಕಾಂಗ್ರೆಸ್- ಜೆಡಿಎಸ್ ಪ್ರಯತ್ನ ಮಾಡುತ್ತಿದೆ. ನಾವು ಧನಾತ್ಮಕ ರೀತಿಯಲ್ಲಿ ಜನಮತ ಪಡೆಯಲು ಮುಂದಾಗುತ್ತೇವೆ. ಜನರ ಮುಂದೆ ರಿಪೋರ್ಟ್ ಕಾರ್ಡ್ ಇಟ್ಟು ಪಕ್ಷಕ್ಕೆ ಗೆಲುವು ತಂದು ಕೊಡಬೇಕಿದೆ. ಸ್ವಾರ್ಥ, ಸ್ವಜನಪಕ್ಷಪಾತ, ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಪಕ್ಷವು ಇನ್ನೊಬ್ಬರ ಅವಹೇಳನ ಮಾಡಿ ಮತ ಪಡೆಯಲು ಮುಂದಾಗಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡಿದ್ದಾರೆ. ಕೇಂದ್ರದ ಅನುದಾನ ಬಳಸಿ ಪಡಿತರ ಅಕ್ಕಿ ಕೊಟ್ಟರೂ ಅನ್ನ ಭಾಗ್ಯ ತಾವೇ ಕೊಟ್ಟಿದ್ದಾಗಿ ಬಿಂಬಿಸಿದ್ದರು ಎಂದು ಟೀಕಿಸಿದರು.

ಜನರ ಕಣ್ಣಲ್ಲಿ ಮಣ್ಣೆರಚುವ ಕಾರ್ಯವನ್ನು ಸದಾ ಕಾಲ ಕಾಂಗ್ರೆಸ್ ಮಾಡಿತ್ತು. ಅವರ ಅವಧಿಯಲ್ಲಿ ರಾಜ್ಯವು ಎಲ್ಲ ರಂಗಗಳಲ್ಲಿ ಹಿಂದುಳಿದಿತ್ತು. ಅವರ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿತ್ತು ಎಂದು ದೂರಿದರು. ಅಕ್ಕಿ, ಎಸ್‍ಸಿ, ಎಸ್‍ಟಿ ಹಾಸ್ಟೆಲ್‍ನಲ್ಲೂ ಹಾಸಿಗೆ, ದಿಂಬಿನಲ್ಲಿ ಭ್ರಷ್ಟಾಚಾರ ಆಗಿತ್ತು. ನೀರಾವರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ, ಬಿಡಿಎದಲ್ಲಿ ರೀಡೂ ಭ್ರಷ್ಟಾಚಾರ, ಸೋಲಾರ್ ವಿದ್ಯುತ್ ವಿಚಾರದಲ್ಲೂ ಭ್ರಷ್ಟಾಚಾರ ಮಾಡಿದ್ದರು ಎಂದು ಆರೋಪಿಸಿದರು.

ಭ್ರಷ್ಟಾಚಾರ ಮುಚ್ಚಿ ಹಾಕಲು ಲೋಕಾಯುಕ್ತ ಸಂಸ್ಥೆಯನ್ನೇ ಮುಗಿಸಿಬಿಟ್ಟರು. ಎಸಿಬಿ ಮುಂದೆ ಸಿದ್ದರಾಮಯ್ಯರದೂ ಸೇರಿದಂತೆ ಸುಮಾರು 60 ಕೇಸುಗಳಿದ್ದು, ಎಲ್ಲದಕ್ಕೂ ಬಿ ರಿಪೋರ್ಟ್ ಕೊಟ್ಟಿದ್ದರು. ಕಾಂಗ್ರೆಸ್ ತಮ್ಮ ಮೇಲಿನ ಆರೋಪಗಳಿಗೆ ಮೊದಲು ಉತ್ತರಿಸಬೇಕು. ಬಣ್ಣ ಬಯಲಾಗುವ ಭೀತಿ ಕಾಂಗ್ರೆಸ್ಸಿಗರದು. ಆರೋಪಗಳ ಮೇಲೆ ಕೌದಿ ಹಾಕಿ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯರದು. ನಮ್ಮ ಮೇಲಿನ ಆರೋಪದ ದಾಖಲೆ ಕೊಟ್ಟರೆ ಅದನ್ನು ತನಿಖೆ ಮಾಡಿಸಲು ಸಿದ್ಧ ಎಂದು ಸವಾಲು ಹಾಕಿದರು.

ಇದನ್ನೂ ಓದಿ: Lingayath Politics: ಬಿಜೆಪಿಯಲ್ಲಿ ಯಡಿಯೂರಪ್ಪ ಕಡೆಗಣನೆಯೇ ಕಾಂಗ್ರೆಸ್‌ ಅಸ್ತ್ರ: ಲಿಂಗಾಯತ ನಾಯಕರ ಸಭೆಯಲ್ಲಿ ಚರ್ಚೆ

ನೀರಾವರಿ ನಿಗಮದಲ್ಲಿ 2 ಸಮಿತಿ ಇತ್ತು. ಇವೆರಡನ್ನೂ ಮುಚ್ಚಿ ಹಾಕಿದವರು ಕಾಂಗ್ರೆಸ್ಸಿಗರು. ಆ ಮೂಲಕ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿದ್ದರು. ಕಾಂಗ್ರೆಸ್ ವೈಫಲ್ಯ, ಬಿಜೆಪಿಯ ಮನೆಮನೆಗೆ ನಲ್ಲಿನೀರು ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಬೇಕು. ಮನೆ, ಕರೆಂಟ್, ಶೌಚಾಲಯ, ಉಚಿತ ಪಡಿತರ- ಹೀಗೆ ಕುಟುಂಬಗಳ ಸಶಕ್ತೀಕರಣ ನಡೆದಿದೆ. ಕಿಸಾನ್ ಸಮ್ಮಾನ್ ಯೋಜನೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮಕ್ಕಳಿಗೆ ಸೈಕಲ್, ವಿದ್ಯಾನಿಧಿಯಂಥ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದು ಮನವಿ ಮಾಡಿದರು.

ದುಡಿಯುವ ವರ್ಗಕ್ಕೆ ಬಲ ತುಂಬಲು ಕಾಯಕ ಯೋಜನೆ ಜಾರಿಗೊಳಿಸಿದ್ದೇವೆ. ಇಂಥ ಫಲಾನುಭವಿಗಳನ್ನು ಭೇಟಿ ಮಾಡಿ ನಮ್ಮ ಅಭಿಮಾನಿಗಳನ್ನು ಹೆಚ್ಚಿಸಿ. ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳವನ್ನೂ ಜನರಿಗೆ ತಿಳಿಸಬೇಕು ಎಂದು ವಿನಂತಿಸಿದರು. ಲಂಬಾಣಿ ತಾಂಡಾದ ಜನರಿಗೆ ನ್ಯಾಯ ಕೊಟ್ಟದ್ದನ್ನು ತಿಳಿಸಿಕೊಡಿ ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಅಧಯಕ್ಷ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ಪ್ರಮುಖರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

CM Siddaramaiah: ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ ಹಗರಣದ (MUDA Scam) ವಿಚಾರದಲ್ಲಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಕ್ಕೆ ರಾಜ್ಯಪಾಲರು (Governor) ನೋಟೀಸ್‌ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್‌ (Notice) ನೀಡಲಾಗಿದೆ.

ಮುಡಾ ಪ್ರಕರಣದ ಮಾಹಿತಿ ದಾಖಲೆ ಸಹಿತ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ಕಳಿಸಿದ್ದಾರೆ. ಟಿ.ಜೆ ಅಬ್ರಹಾಂ ಎಂಬ ಸಾಮಾಜಿಕ ಕಾರ್ಯಕರ್ತರು ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಕೇಳಲಾಗಿತ್ತು. ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಬಳಿಕ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ಕಳುಹಿಸಲಾಗಿದೆ. ಅಬ್ರಹಾಂ ದೂರಿಗೆ ಸಂಬಂಧಿಸಿ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಕೊಡುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಈಗಾಗಲೇ ರಾಜ್ಯಪಾಲರು ನೋಟೀಸ್‌ ಕಳುಹಿಸಬಹುದು ಎಂಬ ವದಂತಿಯ ಆಧಾರದಲ್ಲಿ ಕಾಂಗ್ರೆಸ್‌ ಮುಖಂಡರು ಸಿಡಿದೆದ್ದಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಭೈರೇಗೌಡರು, ʼರಾಜ್ಯಪಾಲರ ಮೂಲಕ ಸರಕಾರ ಅಸ್ಥಿರಗೊಳಿಸುವ ದಾರಿ ಹಿಡಿದರೆ ನಾವು ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆʼ ಎಂದು ಎಚ್ಚರಿಸಿದ್ದರು.

ಇಡಿ ಜೊತೆಗೆ ರಾಜಭವನದ ದುರುಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್‌ ಸಚಿವರು ಆರೋಪಿಸಿದ್ದರು. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಅನುಮತಿ ಕೇಳಿಲ್ಲ.

ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರಕಾರವನ್ನು ಪ್ರಶ್ನಿಸಿ: ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ ಅವರು.

ಇದನ್ನೂ ಓದಿ: Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Continue Reading

ಪ್ರಮುಖ ಸುದ್ದಿ

SSLC Exam: ನಾಳೆಯಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

SSLC Exam: ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ.

VISTARANEWS.COM


on

Students writing SSLC Exam in Examination centre
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ನಾಳೆ (ಆಗಸ್ಟ್ 2) ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ 02-08-2024ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

ಯಾರ್ಯಾರಿಗೆ ಪರೀಕ್ಷೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇವನ್ನು ಗಮನಿಸಿ

  • ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಇದಕ್ಕೆ ಮಂಡಳಿ ಜವಾಬ್ದಾರಿಯಲ್ಲ. ಹೀಗಾಗಿ ಪ್ರವೇಶ ಪತ್ರದಲ್ಲಿ ವಿದ್ಯಾರ್ತಿಯ ಫೋಟೊ ಇದೆ ಎನ್ನುವುದನ್ನು ಖಚಿತಪಡಿಸಿ. ಇಲ್ಲದಿದ್ದರೆ ಈಗಲೇ ಮಂಡಳಿಯ ಗಮನಕ್ಕೆ ತನ್ನಿ.
  • ಶಾಲಾ ಲಾಗಿನ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿ ಕೂಡಲೇ ವಿತರಿಸಬೇಕು ಮತ್ತು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸಲುತಿಳಿಸಬೇಕು.
  • ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಅಧಿಕಾರಿಗಳಿಗೆ ಕಳುಹಿಸಬೇಕು.
  • ಪ್ರವೇಶ ಪತ್ರವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: SSLC Exam 3: SSLC ಫೇಲಾದವರಿಗೆ ಮತ್ತೊಂದು ಚಾನ್ಸ್;‌ 3ನೇ ಪರೀಕ್ಷೆಯ ನೋಂದಣಿ, ಪರೀಕ್ಷೆ ದಿನಾಂಕ ಘೋಷಣೆ

Continue Reading

ಮಳೆ

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

Karnataka Weather: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ, ಮುಂಜಾಗ್ರತೆಯಿಂದ ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮನವಿ ಮಾಡಿದೆ.

VISTARANEWS.COM


on

ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕವಲುಗುಂದಿ ಗ್ರಾಮದಲ್ಲಿ 30 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಅಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
Koo

ಬೆಂಗಳೂರು: ರಾಜ್ಯದಲ್ಲಿ ಆ.1ರಂದು ಗುರುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಅಲ್ಲದೇ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಕೂಡ ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ, ಮುಂಜಾಗ್ರತೆಯಿಂದ ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮನವಿ ಮಾಡಿದೆ.

ಆ.2ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ ಆ.3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆ.5ರಂದು ಇದೇ ರೀತಿಯ ಹವಾಮಾನ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆ. 6ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ. ನಿಂದ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20-C ಆಗಿರಬಹುದು.

Continue Reading

ಕರ್ನಾಟಕ

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ.

VISTARANEWS.COM


on

Kabini Dam
Koo

ಮೈಸೂರು: ಜಿಲ್ಲೆಯ ಕಬಿನಿ ಜಲಾಶಯದ (Kabini Dam) ಬಲದಂಡೆ ನಾಲೆ ಬಳಿ ಭಾರಿ ಪ್ರಮಾಣದ ಬಿರುಕು ಉಂಟಾಗಿದ್ದು, ನಾಲೆ ಹೊಡೆದರೆ ಅಪಾರ ಪ್ರಮಾಣದ ಹಾನಿಯುಂಟಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕು ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿರುವುದು ಈಗ ಭಾರಿ ಆತಂಕ ಸೃಷ್ಟಿಸಿದೆ.

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ. ಕಾಲುವೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಬೆಳೆ ಹಾನಿಯೂ ಆಗಲಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪೋಲಾಗುತ್ತಿರುವ ನೀರು

ನಿತ್ಯ 300ರಿಂದ 500 ಕ್ಯುಸೆಕ್ ನೀರು ಪೋಲಾಗುತ್ತಿದೆ. ನೀರಾವರಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಜಲಾಶಯದ ಕೆಳಭಾಗದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2,284 ಅಡಿ ಎತ್ತರದ ಜಲಾಶಯಕ್ಕೆ ಮೂರು ದಿನಗಳ ಹಿಂದಷ್ಟೆ ಬಾಗಿನ ಅರ್ಪಣೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದರು. ಆದರೆ ಈಗ ನಾಲೆ ಬಿರುಕು ಬಿಟ್ಟಿರುವುದು ಭೀತಿ ಹೆಚ್ಚಿಸಿದೆ. ಬಲದಂಡೆ ನಾಲೆ‌ ಒಡೆದರೆ ಸರಗೂರು ತಿ.ನರಸೀಪುರ, ನಂಜನಗೂಡು ತಾಲೂಕಿನ ನಾಲೆಗಳಿಗೆ ಹಾನಿಯಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.

ವಾಹನ ಸಂಚಾರ ನಿಷೇಧ

ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾದುಹೋಗುವ ಶಿರಾಡಿ ಘಾಟ್‌ ರಸ್ತೆಯ ಮೇಲೆ ಮತ್ತೆ ಭೂಕೂಸಿತ ಉಂಟಾಗಿದೆ. ಹಾಗಾಗಿ, ಶಿರಾಡಿ ಘಾಟ್‌ (Shiradi Ghat) ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಲಾಗಿದೆ. ಈಗ ಕುಸಿದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸುವುದು ಹಾಗೂ ಮತ್ತೆ ಭೂಕುಸಿತ ಉಂಟಾಗುವ ಭೀತಿ ಇರುವುದರಿಂದ ಶಿರಾಡ್‌ ಘಾಟ್‌ನಲ್ಲಿ ಮತ್ತೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ

ಇದನ್ನೂ ಓದಿ: Snake Bite: ಮಳೆಗಾಲದಲ್ಲಿ ಹಾವುಗಳ ಕಾಟ ಹೆಚ್ಚು; ಕಚ್ಚಿದರೆ ಈ ಕ್ರಮ ಅನುಸರಿಸಿ ಅಪಾಯದಿಂದ ಪಾರಾಗಿ!

Continue Reading
Advertisement
Ismail Haniyeh
ವಿದೇಶ3 seconds ago

Ismail Haniyeh: ಇಸ್ರೇಲ್‌ ಮೇಲೆ ನಡೆಯುತ್ತಾ ಭಾರೀ ಏರ್‌ಸ್ಟ್ರೈಕ್‌? ಹನಿಯೆಹ್‌ ಹತ್ಯೆ ಪ್ರತೀಕಾರಕ್ಕೆ ಇರಾನ್‌ ಸಜ್ಜು

cm siddaramaiah MUDA scam
ಪ್ರಮುಖ ಸುದ್ದಿ21 mins ago

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

Students writing SSLC Exam in Examination centre
ಪ್ರಮುಖ ಸುದ್ದಿ45 mins ago

SSLC Exam: ನಾಳೆಯಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

Health tips Kannada
ಆರೋಗ್ಯ1 hour ago

Health tips Kannada: ವೃತ್ತಿನಿರತ ತಾಯಂದಿರೇ, ಖಿನ್ನತೆ ಆವರಿಸಿಕೊಳ್ಳುವ ಮೊದಲೇ ಎಚ್ಚೆತ್ತುಕೊಳ್ಳಿ!

Vastu Tips
Latest2 hours ago

Vastu Tips: ಮನೆ ಖರೀದಿ ಮಾಡುವಾಗ ಈ ಸಂಗತಿಗಳನ್ನು ತಪ್ಪದೇ ಗಮನಿಸಿ

World Lung Cancer Day
ಆರೋಗ್ಯ2 hours ago

World Lung Cancer Day: ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರತಿವರ್ಷ 16 ಲಕ್ಷ ಮಂದಿ ಬಲಿ; ಇದರಿಂದ ಪಾರಾಗುವುದು ಹೇಗೆ?

ಮಳೆ2 hours ago

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

Paris Olympics 2024 Day 6
ಕ್ರೀಡೆ3 hours ago

Paris Olympics 2024 Day 6: ಇಂದಿನಿಂದ ಅಥ್ಲೆಟಿಕ್ಸ್ ಆರಂಭ; ಭಾರತದ ಕ್ರೀಡಾ ಸ್ಪರ್ಧೆಗಳ ವಿವರ ಹೀಗಿದೆ

Dina Bhavishya
ಭವಿಷ್ಯ3 hours ago

Dina Bhavishya: ವಿದೇಶ ಪ್ರವಾಸಕ್ಕೆ ಕಾಯುತ್ತಿರುವ ಈ ರಾಶಿಯವರಿಗೆ ಶುಭ ಸೂಚನೆ ಸಿಗಲಿದೆ

Kabini Dam
ಕರ್ನಾಟಕ8 hours ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌