Murder case: ಶೀಲ ಶಂಕಿಸಿ ಪತ್ನಿಯನ್ನು ಕೊಂದು ಕೋಲ್ಕತ್ತಾಗೆ ಪರಾರಿಯಾದ ಪತಿಯ ಸೆರೆ - Vistara News

ಕ್ರೈಂ

Murder case: ಶೀಲ ಶಂಕಿಸಿ ಪತ್ನಿಯನ್ನು ಕೊಂದು ಕೋಲ್ಕತ್ತಾಗೆ ಪರಾರಿಯಾದ ಪತಿಯ ಸೆರೆ

ಪತ್ನಿ ಮೋನಿಷಾ (30) ಅವರನ್ನು ಕೊಲೆಗೈದು ಪರಾರಿಯಾಗಿದ್ದ ಪತಿ ಶೇಕ್ ಮಜೀದ್ ಅಲಿ ಎಂಬಾತನನ್ನು ವರ್ತೂರು ಪೊಲೀಸರು ಬೆನ್ನಟ್ಟಿ ಬಂಧಿಸಿದ್ದಾರೆ. ಈ ದಂಪತಿ ಕೋಲ್ಕತ್ತಾ ಮೂಲದವರಾಗಿದ್ದು, ಬೆಂಗಳೂರಲ್ಲಿ ವಾಸಿಸುತ್ತಿದ್ದರು.

VISTARANEWS.COM


on

murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವರ್ತೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾದ ಪ್ರಕರಣದಲ್ಲಿ ಕೊಲೆಗಾರನ್ನು ಪೊಲೀಸರು ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ.

ಪತ್ನಿ ಮೋನಿಷಾ (30) ಅವರನ್ನು ಕೊಲೆಗೈದು ಪರಾರಿಯಾಗಿದ್ದ ಪತಿ ಶೇಕ್ ಮಜೀದ್ ಅಲಿ ಎಂಬಾತನನ್ನು ವರ್ತೂರು ಪೊಲೀಸರು ಬೆನ್ನಟ್ಟಿ ಬಂಧಿಸಿದ್ದಾರೆ. ಈ ದಂಪತಿ ಕೋಲ್ಕತ್ತಾ ಮೂಲದವರಾಗಿದ್ದು, ಬೆಂಗಳೂರಲ್ಲಿ ವಾಸಿಸುತ್ತಿದ್ದರು.

ಫೆಬ್ರವರಿ 5ರಂದು ಪಂಚಮುಖಿ ದೇವಸ್ಥಾನ ರಸ್ತೆಯ ಮನೆಯೊಂದರಲ್ಲಿ ಘಟನೆ ನಡೆದಿತ್ತು. ಫೆಬ್ರವರಿ 7ರಂದು ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಆರೋಪಿ ಕೊಲೆ‌‌ ಮಾಡಿ ಕೋಲ್ಕತ್ತಾಗೆ ರಸ್ತೆ ಮಾರ್ಗವಾಗಿ ಓಡಿಹೋಗಿದ್ದ. ಅದಾಗಲೇ ವಿಮಾನದ ಮೂಲಕ ಕೊಲ್ಕತ್ತಾ ತಲುಪಿದ ಪೊಲೀಸರು ಆತನನ್ನು ಕೊಲ್ಕತ್ತಾದಿಂದ 150 ಕಿ.ಮೀ. ದೂರದಲ್ಲಿರುವ ಹಳ್ಳಿಯೊಂದರಲ್ಲಿ ಸೆರೆ ಹಿಡಿದಿದ್ದಾರೆ.

ಪತಿ-ಪತ್ನಿ ನಡುವೆ ಫೆಬ್ರವರಿ ಐದರಂದು ಜಗಳವಾಗಿದೆ. ಈ ವೇಳೆ ಟವಲ್‌ನಿಂದ ಆಕೆಯ ಕುತ್ತಿಗೆ ಬಿಗಿದು ಮಜೀದ್‌ ಹತ್ಯೆ ಮಾಡಿದ್ದ. ಮನೆಯಲ್ಲಿ ಮೃತದೇಹ ಲಾಕ್ ಮಾಡಿ ಎಸ್ಕೇಪ್ ಆಗಿದ್ದ. ಇಬ್ಬರು ಮದುವೆಯಾಗಿ 10 ವರ್ಷವಾಗಿದ್ದು 3 ವರ್ಷದಿಂದ ಕೌಟುಂಬಿಕ ಕಲಹ ಇತ್ತು. ದಂಪತಿಗೆ 6 ವರ್ಷದ ಒಂದು ಮಗು ಇದ್ದು, ಮಗುವನ್ನು ಊರಲ್ಲೇ ಬಿಟ್ಟು ಬಂದಿದ್ದರು.

ಇದನ್ನೂ ಓದಿ: Murder Case: ಮೈಸೂರಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ಪತಿ; ಪ್ರಿಯಕರನ ಜತೆ ಸೇರಿ ಕೊಂದೇಬಿಟ್ಟಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

Murder Case : ಓವರ್‌ ಟೇಕ್‌ ಮಾಡುವ ವಿಚಾರಕ್ಕೆ ಶುರುವಾದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿದೆ. ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನೊಬ್ಬ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

murder Case
Koo

ಹೊಸಕೋಟೆ: ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದನ್ನು ಪ್ರಶ್ನೆ (Murder Case) ಮಾಡಿದ್ದಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ. ನವೀನ್‌ ನಾಯಕ್‌ ಮೃತ (27) ದುರ್ದೈವಿ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 75 ಡಾಬ ಬಳಿ ಘಟನೆ ನಡೆದಿದೆ.

ನವೀನ್ ನಾಯಕ್ ಗಂಗಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಭಾನುವಾರ ಬೆಳಗಿನ ಜಾವ ತರಕಾರಿ ವ್ಯಾಪಾರಕ್ಕೆ ಕಾರೊಂದರಲ್ಲಿ ಹೋಗುತ್ತಿದ್ದಾಗ, ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದವರನ್ನು ನವೀನ್‌ ನಾಯಕ್‌ ಪ್ರಶ್ನೆ ಮಾಡಿದ್ದ. ಈ ವೇಳೆ ಕಾರಿನಲ್ಲಿದ್ದವರಿಗೂ ನವೀನ್‌ ನಡುವೆ ಗಲಾಟೆ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

murder case
ಮೃತ ನವೀನ್‌ ನಾಯಕ್‌

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಡಿವೈಎಸ್‌ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓವರ್‌ ಟೇಕ್‌ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಾರಣಾಂತಿಕವಾಗಿ ನಾಲ್ವರು ಹಲ್ಲೆ ನಡೆಸಿದ್ದಾರೆ. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ನವೀನ್‌ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.

ರಸ್ತೆ ಬದಿಯಲ್ಲಿ ಬಿದ್ದಿದ್ದ ನವೀನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಹಂತಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

murder Case
ಕುಟುಂಬಸ್ಥರ ಆಕ್ರಂದನ

ಇದನ್ನೂ ಓದಿ: Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ (Murder Case) ನಡೆದಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಸಮೀಪವೇ ಈ ಕೃತ್ಯ ನಡೆದಿದೆ. ಶೇಖರ್ ಎಂಬಾತ ಕೊಲೆಯಾದವನು. ಶಿವಕುಮಾರ್ (35) ಕೊಲೆಗೈದ ಆರೋಪಿಯಾಗಿದ್ದಾನೆ.

ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಡುರಸ್ತೆಯಲ್ಲಿ ಶೇಖರ್‌ ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿ ಶಿವಕುಮಾರ್ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೇಖರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಶಿವಕುಮಾರ್‌ ಪತ್ತೆಗೆ ಚಿಕ್ಕಬಳ್ಳಾಪುರ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Vijayanagara News : ಕೆಲಸಕ್ಕೆ ಚೆಕ್ಕರ್ ಹಾಕಿ ಸಂಬಳಕ್ಕೆ ಮಾತ್ರ ಹಾಜರಾಗುವ ಪಿಡಿಓ ಅಧಿಕಾರಿ (PDO Officer) ವಿರುದ್ಧ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದರು. ನಾಪತ್ತೆಯಾಗುತ್ತಿರುವ ಪಿಡಿಓ ಅಧಿಕಾರಿಯನ್ನು ಹುಡುಕಿಕೊಡಿ ಎಂದು ಬಿತ್ತಿ ಪತ್ರಗಳನ್ನು ಅಂಟಿಸಿದ್ದರು.

VISTARANEWS.COM


on

By

Vijayanagara News
Koo

ವಿಜಯನಗರ: ಕೆಲಸಕ್ಕೆ ಮಾತ್ರ ಕರೀಬೇಡಿ, ಸಂಬಳಕ್ಕೆ ಮಾತ್ರ ಮರಿಲೇಬೇಡಿ. ಇದು ವಿಜಯನಗರದ (Vijayanagara News) ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮ ಪಂಚಾಯತ್‌ನ ಪಿಡಿಓ ಕಥೆ. ಗ್ರಾ.ಪಂ ಪಿಡಿಓ ವೀರೇಶ್ (PDO Officer) ಬೆಳಗ್ಗೆ ಹಾಜರಿ ಬುಕ್‌ನಲ್ಲಿ ಸಹಿ ಹಾಕಿ ಹೋದರೆ ಕಚೇರಿಗೆ ವಾಪಸ್ ಮರುದಿನ ಬೆಳಗ್ಗೆಯೇ ಬರುವುದು.

ಕೆಲಸಕ್ಕೆ ಚೆಕ್ಕರ್ ಹಾಕಿ ಸಂಬಳಕ್ಕೆ ಮಾತ್ರ ಹಾಜರಾಗುವ ಪಿಡಿಓ ಅಧಿಕಾರಿ ವಿರುದ್ಧ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದರು. ಕಳೆದ ಆರು ತಿಂಗಳಿನಿಂದ ಕೆಲಸಕ್ಕೆ ಬಾರದೇ ಶೋಕಿ ಗ್ರಾ.ಪಂ ಪಿಡಿಓ ವೀರೇಶ್ ಶೋಕಿ ಮಾಡುತ್ತಿದ್ದನಂತೆ.

ಹೀಗಾಗಿ ಪಂಚಾಯ್ತಿಯತ್ತ ಸುಳಿಯದ ಪಿಡಿಓಗಾಗಿ ಗ್ರಾಮಸ್ಥರಿಂದಲೇ ಹುಡುಕಾಟ ನಡೆದಿದೆ. ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾ. ಪಂಚಾಯತ್ ಎದುರು ಬಿತ್ತಿ ಪತ್ರಗಳು, ಬ್ಯಾನರ್ ಪ್ರದರ್ಶನ ಮಾಡಿ ನಾಪತ್ತೆ ಆಗಿದ್ದಾನೆ. ಆದರೆ ಆರು ತಿಂಗಳಿಂದ ಕೆಲಸಕ್ಕೆ ಬಾರದಿದ್ದರೂ ಹಾಜರಾತಿ ಬುಕ್‌ನಲ್ಲಿ ಸಹಿ ಹಾಕಿದ್ದಾರೆ ಎಂದು ಆಕ್ರೋಶಿಸಿ ವಿನೂತನ ಪ್ರತಿಭಟನೆ ನಡೆಸಿದರು.

vijayanagara News

ಆರು ತಿಂಗಳಲ್ಲಿ ಒಂದೂ ಅಭಿವೃದ್ಧಿ ಕೆಲಸವೂ ಆಗಿಲ್ಲ ಯಾವ ಸಭೆಗಳನ್ನು ನಡೆಸಿಲ್ಲ. ಜನಸಾಮಾನ್ಯರ ಕೆಲಸ ಆಗುತ್ತಿಲ್ಲ, ಇಂತಹ ಪಿಡಿಓ ನಮ್ಮ ಪಂಚಾಯತಿಗೆ ಬೇಡ. ಬೆಳಗ್ಗೆ ಜನ ಕಚೇರಿಗೆ ಬರುವ‌ ಮೊದಲೇ ಸಹಿ ಹಾಕಿ ಹರಪನಹಳ್ಳಿಗೆ ಹೋಗುತ್ತಾರೆ. ಜನರು ಪಿಡಿಓ ವೀರೇಶ್‌ಗಾಗಿ ಕಾದು, ಕಾದು ಮನೆಗೆ ಹೋಗುತ್ತಾರೆ. ಕೂಡಲೆ ಬೇರೆ ಪಿಡಿಓ ಬದಲವಾವಣೆಗೆ ಅನುಮತಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ‌ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Actor Darshan: ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ ಎಂದರು.

VISTARANEWS.COM


on

Actor Darshan teacher Addanda Cariappa sad on arrested darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಬಗ್ಗೆ ಮೈಸೂರಿನ ರಂಗಾಯಣದ ಅಡ್ಡಂಡ ಕಾರ್ಯಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ʻʻದರ್ಶನ್‌ಗೆ ಶನಿಯಾಗಿ ಬಂದಿದ್ದು ಪವಿತ್ರಾ ಗೌಡ. ರೇಣುಕಾಸ್ವಾಮಿ ಪತ್ನಿ ಅನಾಥವಾಗಿದ್ದಾಳೆʼʼಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮವೊಂದರಲ್ಲಿ ಅಡ್ಡಂಡ ಕಾರ್ಯಪ್ಪ ಮಾತನಾಡಿ ʻʻದರ್ಶನ್‌ ಮೆಜಿಸ್ಟಿಕ್‌ ಸಿನಿಮಾ ಹಿಟ್‌ ಆದ ಬಳಿಕ ನನ್ನ ಹತ್ರ ಬಂದಿದ್ದ. ನನ್ನ ಮನೆಗೆ ಬಂದು ನನ್ನ ಕಾಲಿಗೆ ಬಿದ್ದು ನಿಮ್ಮ ಆಶೀರ್ವಾದ ಎಂದ. ಅಲ್ಲಿಂದ ಅವನು ಬೆಳೆಯುತ್ತ ಹೋದ. ಹಲವು ವಿಡಿಯೊಗಳಲ್ಲಿ ಅವನ ಬಾಡಿ ಲಾಂಗ್ವೇಜ್‌ ನೋಡಿದ್ದೆ. ಅಕ್ಕನ್‌…ಅಮ್ಮನ್‌.. ಈ ರೀತಿ ಹೊಲಸು ಮಾತುಗಳು. ಅದನ್ನು ನೋಡಿ ನನಗೆ ಊಹಿಸಲು ಆಗಿಲ್ಲ. ಇವನ ನಡವಳಿಕೆ ಬರಬರುತ್ತ ತುಂಬ ಚೇಂಜ್‌ ಆಯ್ತು. ಎಜುಕೇಶನ್‌ ಕೊರತೆ ಅವನಿಗೆ ಇದೆʼʼಎಂದರು.

ಬದುಕು ಮತ್ತು ಸಿನಿಮಾ ಬೇರೆ ಬೇರೆ

ʻʻಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ. ದರ್ಶನ್‌ಗೆ ಒಂದು ಪಾಠ ಇದು. ಅವನ ಜೀವನ ಇಲ್ಲಿಗೆ ಮುಗಿದಿಲ್ಲ. ರೇಣುಕಾಸ್ವಾಮಿ ಏನೋ ಸತ್ತ. ಆದರೆ ಅವನ ಹೆಂಡತಿ ಕಥೆ ಏನು? ದರ್ಶನ್‌ ಅಭಿಮಾನಿಗಳಿಗೆ ನಾನು ಹೇಳುವುದು ಇಷ್ಟೇ. ನಿಮಗೆ ದರ್ಶನ್‌ ಎಷ್ಟು ಮುಖ್ಯವೋ. ಅದೇ ರೀತಿ ರೇಣುಕಾ ಸ್ವಾಮಿ ಹೆಂಡತಿ ಕೂಡ ಅಷ್ಟೇ ಮುಖ್ಯ. ರೇಣುಕಾಸ್ವಾಮಿ ತಪ್ಪು ಮಾಡಿದ್ದಾರೆ. ಆತನ ಹೆಂಡತಿಗೆ ಸಾಂತ್ವನ ಹೇಳಿʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ!

ʻʻಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಸುದೀಪ್‌ಗೆ ಹಾಗೆ ಫ್ರೆಂಡ್ಸ್ ಮಾಡಿಕೊಳ್ಳೋಕೆ ಆಗಲ್ಲ. ಯಾಕಂದ್ರೆ, ಸುದೀಪ್ ವಿದ್ಯಾವಂತ. ಸಹವಾಸ ದೋಷ, ಹೆಂಡ, ಮೊದಲ ಹೆಂಡತಿಗೆ ಚಿತ್ರಹಿಂಸೆ ಕೊಟ್ಟಿದ್ದು, ಹಾಗೇ ಮೀಡಿಯಾದವರು ಅವನನ್ನ 2 ವರ್ಷ ಬ್ಯಾನ್ ಮಾಡಿದರು. ರಾಜ್‌ಕುಮಾರ್ ಅವರ ವಿನೀತತೆಯನ್ನ ನೋಡಿ ದರ್ಶನ್ ಕಲಿತುಕೊಳ್ಳಲಿಲ್ಲ’’ ಎಂದು ಅಡ್ಡಂಡ ಕಾರ್ಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಮಾಹಿತಿ ಕಲೆ

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

Continue Reading

ಚಿಕ್ಕಮಗಳೂರು

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Electric shock :ಶಾಲಾ ಆವರಣದಲ್ಲಿದ್ದ ಮರವೇರಿ ನೇರಳೆ ಹಣ್ಣು ಕೀಳುವಾಗ ಕರೆಂಟ್‌ ಶಾಕ್‌ ಹೊಡೆದು, ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದ. ಸದ್ಯ ಪ್ರಕರಣ ಸಂಬಂಧ ಎಂಟು ಮಂದಿಯನ್ನು ಅಮಾನತು ಮಾಡಲಾಗಿದೆ.

VISTARANEWS.COM


on

By

Electric shock
Koo

ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯುತ್ ಶಾಕ್‌ನಿಂದ (Electric shock) 7ನೇ ತರಗತಿ ವಿದ್ಯಾರ್ಥಿ ಆಕಾಶ್ (13) ಎಂಬಾತ ಶನಿವಾರ ಮೃತಪಟ್ಟಿದ್ದ. ಈ ಪ್ರಕರಣ ಸಂಬಂಧ 8 ಮಂದಿಯನ್ನು ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಜವಾಬ್ದಾರಿಯನ್ನು ನಿರ್ವಹಿಸಬೇಕಿದ್ದ ಸಿಬ್ಬಂದಿ ಕರ್ತವ್ಯ ಲೋಪದಿಂದ ಬಾಲಕ ಮೃತಪಟ್ಟಿದ್ದಾಗಿ ಮೇಲ್ನೋಟಕ್ಕೆ ಕಂಡು ಬಂದಿದ.

ಹೀಗಾಗಿ ಪ್ರಭಾರ ಪ್ರಾಂಶುಪಾಲರು, ಬೋಧಕತರ, ನಿಲಯ ಪಾಲಕ ಸೇರಿ 8 ಮಂದಿಯನ್ನು ಅಮಾನತು ಮಾಡಿ ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರವೀಣ್ ಬಿ ಬಾಗೇವಾಡಿಯಿಂದ ಆದೇಶ ಹೊರಡಿಸಿದ್ದಾರೆ. ಸಿಬ್ಬಂದಿ ಬೇಜವಾಬ್ದಾರಿಯಿಂದ ಬಾಲಕ ಮೃತಪಟ್ಟಿದ್ದರಿಂದ ಅಮಾನತು ಮಾಡಲಾಗಿದೆ. ಪ್ರಾಂಶುಪಾಲ ಧನರಾಜು, ನಿಲಯಪಾಲಕರಾದ ಗೀತಾಂಜಲಿ, ಶಿಕ್ಷಕರಾದ ಗಾಯತ್ರಿ, ಶಿವರಾಜ ನಾಯ್ಕ, ಕಾವ್ಯ, ಸುರೇಶ್‌ ಬೀಳಗಿ ಹಾಗೂ ವಿಶಾಲಕ್ಷಿ, ಬಿಂದು ಅವರನ್ನು ಅಮಾನತು ಮಾಡಲಾಗಿದೆ.

ಇನ್ನೂ ಶಾಲೆಯ ಪ್ರಭಾರ ಪ್ರಾಂಶುಪಾಲರ ಅಮಾನತ್ತಿನಿಂದ ತೆರವಾದ ಜಾಗಕ್ಕೆ ಚಿಕ್ಕಮಗಳೂರಿನ ಮೂಡಿಗೆರೆಯ ಕೋಳೂರು ಶಾಲೆಯ ಪ್ರಾಂಶುಪಾಲರಾದ ಶೈಲ ಕೆ.ಪಿ ಅವರನ್ನು ನಿಯೋಜನೆ ಮಾಡಲಾಗಿದೆ.

Electric shock

ಇದನ್ನೂ ಓದಿ: Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ನೇರಳೆ ಹಣ್ಣು ಕೀಳುವಾಗ ಕರೆಂಟ್‌ ಶಾಕ್‌

ನಿನ್ನೆ ಜೂನ್‌ 15ರಂದು ವಿದ್ಯುತ್ ಶಾಕ್‌ನಿಂದ (Electric shock) 7ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿತ್ತು. ಆಕಾಶ್ (13) ಮೃತ ದುರ್ದೈವಿ.

ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಆಕಾಶ್ ಮರ ಹತ್ತಿದ್ದ. ಈತನ ಜತೆಗೆ ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಹಣ್ಣು ಕೀಳುವಾಗ ಆಕಾಶ್‌ ಮರದಿಂದ ಜಾರಿ ಬೀಳುತ್ತಿದ್ದ. ಈ ವೇಳೆ ಅಚಾನಕ್‌ ಆಗಿ ವಿದ್ಯುತ್ ತಂತಿ ಹಿಡಿದಿದ್ದಾನೆ.

ವಿದ್ಯುತ್‌ ತಂತಿ ಹಿಡಿಯುತ್ತಿದ್ದಂತೆ ಕರೆಂಟ್‌ ಶಾಕ್‌ನಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಅಲ್ಲಿದ್ದವರು ಆಕಾಶ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕಾಶ್ ಮೃತಪಟ್ಟಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
murder Case
ಬೆಂಗಳೂರು ಗ್ರಾಮಾಂತರ4 mins ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ9 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್28 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್41 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ54 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್60 mins ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ1 hour ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ1 hour ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್1 hour ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು2 hours ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ54 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌