Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶುಭಕೃತ ನಾಮ ಸಂವತ್ಸರ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ಚತುರ್ದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (19-02-2023)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ.

ತಿಥಿ: ಚತುರ್ದಶಿ 16:17 ವಾರ: ಭಾನುವಾರ
ನಕ್ಷತ್ರ: ಶ್ರವಣ 14:42 ಯೋಗ: ವರಿಯಾನ 15:17
ಕರಣ: ಶಕುನಿ 16:17 ಇಂದಿನ ವಿಶೇಷ: ಶಿವಾಜಿ ಮಹಾರಾಜರ ಜಯಂತಿ, ಸರ್ವ ಶರಣರ ದಿನ.
ಅಮೃತಕಾಲ: ಮಧ್ಯರಾತ್ರಿ 02 ಗಂಟೆ 39 ನಿಮಿಷದಿಂದ ಬೆಳಗ್ಗೆ 04 ಗಂಟೆ 03 ನಿಮಿಷದವರೆಗೆ.

ಸೂರ್ಯೋದಯ: 06 : 41   ಸೂರ್ಯಾಸ್ತ: 0೬ : 26

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ-ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯ ಉತ್ತಮ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಎಂದೂ ಇರದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣ. ಬದುಕಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಭರವಸೆಯ ಹೊಸ ಅವಕಾಶಗಳು ನಿಮಗೊದಗಿ ಬರಲಿವೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಇಂದು ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಇಂದು ನೀವು ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹಣಕಾಸು ಪ್ರಗತಿ ಉತ್ತಮ. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿವೆ. ಬಾಯಿ ತಪ್ಪಿ ಆಡಿದ ಮಾತುಗಳಿಂದ ಬಂಧುಗಳ ನಡುವೆ ಬಿರುಕು ಮೂಡುವ ಸಾಧ್ಯತೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಇಂದು ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ನಿಮಗೆ ಮರಳುವ ಸಾಧ್ಯತೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ, ಹಾಗಾಗಿ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಇರುವುದು. ಕೌಟುಂಬಿಕವಾಗಿ ಇಂದು ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸ ಕಾರ್ಯಗಳ ಬಗ್ಗೆ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಆಕ್ಷೇಪಣೆ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Prerane : ಧ್ಯಾನದಿಂದ ಮಾತ್ರ ಮೃತ್ಯು ಭಯ ದಾಟಲು ಸಾಧ್ಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

IND vs PAK : 024ರ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನವು ಭಾರತವನ್ನು ಎದುರಿಸಲಿದ್ದು, ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಬಾಬರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ನಾಯಕನನ್ನು ಭಾರತದ ಸ್ಟಾರ್ ಬ್ಯಾಟರ್​ಗಳಿಗೆ ಕೊಹ್ಲಿಗೆ ಹೋಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

IND vk PAK
Koo

ಬೆಂಗಳೂರು : 2024 ರ ಟಿ 20 ವಿಶ್ವಕಪ್ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ 44 ರನ್ ಗಳಿಸಿದ್ದ ಪಾಕ್​ ತಂಡದ ನಾಯಕ ಬಾಬರ್ ಅಜಮ್ (Babar Azam) ಟಿ 20 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದಿದ್ದಾರೆ. ಪಾಕಿಸ್ತಾನಿಗಳು ಮತ್ತು ಅವರ ಅಭಿಮಾನಿಗಳು ಈ ಮೈಲಿಗಲ್ಲಿನ ಬಗ್ಗೆ ಸಂಭ್ರಮದಲ್ಲಿದ್ದಾರೆ. ಆದರೆ, ಬಾಬರ್ ಸ್ಕೋರ್ ಮಾಡಿರುವುದೆಲ್ಲ ಸಣ್ಣಪುಟ್ಟ ತಂಡಗಳ ಜತೆ ಎಂಬುದು ಹಲವರ ಅಭಿಪ್ರಾಯ. ಬಾಬರ್ ಪಾಕಿಸ್ತಾನದ ಸ್ಟಾರ್ ಬ್ಯಾಟರ್​​ ಆಗಿದ್ದು, ತವರಿನಲ್ಲಿ ಮಾತ್ರ ಸಾಕಷ್ಟು ಪ್ರಭಾವ ಹೊಂದಿದ್ದಾರೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ (IND vs PAK) ನಡುವಿನ ಪಂದ್ಯದ ವೇಳೆ ಈ ಚರ್ಚೆ ಮುನ್ನೆಲೆಗೆ ಬಂದಿದೆ.

2024ರ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನವು ಭಾರತವನ್ನು ಎದುರಿಸಲಿದ್ದು, ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಬಾಬರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ನಾಯಕನನ್ನು ಭಾರತದ ಸ್ಟಾರ್ ಬ್ಯಾಟರ್​ಗಳಿಗೆ ಕೊಹ್ಲಿಗೆ ಹೋಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕನೇರಿಯಾ ಅವರು ಭಾರತೀಯ ದಂತಕಥೆಗೆಗೆ ಬಾಬರ್ ಕನಿಷ್ಠ ಹತ್ತರವೂ ಇಲ್ಲ ಎಂದು ವ್ಯಂಗ್ಯವಾಡಿದರು. 30 ವರ್ಷದ ಕನೇರಿಯಾ ಯುಎಸ್ಎ ಬೌಲಿಂಗ್ ಲೈನ್ಅಪ್ ವಿರುದ್ಧ ಬಾಬರ್​ ಹೇಗೆ ಹೆಣಗಾಡಿದ್ದರು ಎಂಬುದನ್ನು ಬೊಟ್ಟು ಮಾಡಿ ತೋರಿಸಿದ್ದಾರೆ.

ಇದನ್ನೂ ಓದಿ: INDvsPAK : ಪಾಕ್​ ಮತ್ತು ಭಾರತ ಪಂದ್ಯದ ಕುರಿತು ನಟ ಕಮಲ್​ ಹಾಸನ್​ ನೀಡಿರುವ ಹೇಳಿಕೆಯ ವಿಡಿಯ ಇಲ್ಲಿದೆ

ಬಾಬರ್ ಅಜಮ್ ಶತಕ ಬಾರಿಸಿದ ಕೂಡಲೇ ನೀವು ವಿರಾಟ್ ಕೊಹ್ಲಿಯೊಂದಿಗೆ ಹೋಲಿಕೆಗಳನ್ನು ಮಾಡಲಾಗುತ್ತಿದೆ. ಬಾಬಾರ್ ಅಜಂ ವಿರಾಟ್ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಎಂದು ಕನೇರಿಯಾ ಹೇಳಿದ್ದಾರೆ. ದೊಡ್ಡ ಬೌಲರ್​ಗಳನ್ನು ಎದುರಿಸುವ ಸಾಮರ್ಥ್ಯ ಇಲ್ಲ. ಉತ್ತಮ ಬೌಲರ್​ಗಳಿಗೆ ರನ್​ ಗಳಿಸಲು ಸಾಧ್ಯವಾಗುವುದಿಲ್ಲ. ಅಮೆರಿಕದ ಬಲಿಷ್ಠ ಬೌಲಿಂಗ್ ವಿರುದ್ಧವೇ 40 ರನ್​ಗೆ ಔಟಾಗಿದ್ದಾರೆ. ಕೊಹ್ಲಿಯ ರೀತಿ ಉತ್ತಮ ಆಟಗಾರನಾಗಿದ್ದರೆ ಕ್ರೀಸ್​ನಲ್ಲಿ ಉಳಿದು ಆಟವನ್ನು ಗೆಲ್ಲಬೇಕಾಗಿತ್ತು. ಪಾಕಿಸ್ತಾನ ಏಕಪಕ್ಷೀಯವಾಗಿ ಪಂದ್ಯವನ್ನು ಗೆಲ್ಲಬೇಕಿತ್ತು, “ಎಂದು ಕನೇರಿಯಾ ಹೇಳಿದ್ದಾರೆ.

ಭಾರತ ತಂಡವು ಪಾಕಿಸ್ತಾನವನ್ನು ಕೆಟ್ಟದಾಗಿ ಸೋಲಿಸುತ್ತದೆ. ಪಾಕಿಸ್ತಾನ ಭಾರತವನ್ನು ಸೋಲಿಸುವ ಸಾಮರ್ಥ್ಯ ಹೊಂದಿಲ್ಲ. ಪಾಕಿಸ್ತಾನ ವಿಶ್ವಕಪ್​ಗೆ ಬಂದಾಗಲೆಲ್ಲಾ ತಮ್ಮ ಬೌಲಿಂಗ್ ಘಟಕವನ್ನು ಶ್ಲಾಘಿಸುತ್ತಲೇ ಇರುತ್ತಾರೆ. ಅದರೆ, ಅವರ ಬೌಲಿಂಗ್ ಅನ್ನು ಸಲೀಸಾಗಿ ಎದುರಿಸಲು ಸಾಧ್ಯ, “ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಜಯ ಅನಿವಾರ್ಯ

ಪಾಕಿಸ್ತಾನದ ಟಿ 20 ವಿಶ್ವಕಪ್ ಅಭಿಯಾನದ ಬಗ್ಗೆ ಮಾತನಾಡುವುದಾದರೆ, ಮೆನ್ ಇನ್ ಗ್ರೀನ್ ತಂಡವು ಜೂನ್ 9 ರಂದು ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದೆ. ತಂಡಕ್ಕೆ ಗೆಲುವಿನ ಅವಶ್ಯಕತೆಯಿದೆ. ಯುಎಸ್ಎ ವಿರುದ್ಧದ ಸೋಲನ್ನು ಟಿ 20 ವಿಶ್ವಕಪ್ ಇತಿಹಾಸದ ಅತಿದೊಡ್ಡ ಅವಮಾನ ಎಂದು ಕರೆಯಲಾಗುತ್ತಿದೆ. ನಿರ್ಣಾಯಕ ಪಂದ್ಯಕ್ಕೆ ಮೊದಲು ತಂಡದ ನೈತಿಕ ಸ್ಥೈರ್ಯವು ಕೆಳಮಟ್ಟಕ್ಕೆ ಕುಸಿದಿದೆ. ಹಿಂದಿನ ಆವೃತ್ತಿಯಲ್ಲಿ ಫೈನಲ್ ತಲುಪಿದ ಮಾಜಿ ಚಾಂಪಿಯನ್ಸ್ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

Continue Reading

ದೇಶ

VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

VK Pandian: ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಲೋಕಸಭೆ ಕ್ಷೇತ್ರಗಳಲ್ಲೂ ಬಿಜೆಡಿ ಹಿನ್ನಡೆ ಅನುಭವಿಸಿದೆ. ಹಾಗಾಗಿ, ವಿ.ಕೆ.ಪಾಂಡಿಯನ್‌ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

VK Pandian
Koo

ಭುವನೇಶ್ವರ: ಒಡಿಶಾ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜು ಜನತಾದಳ ಪಕ್ಷವು (BJD) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆಪ್ತ, ಬಿಜೆಡಿ ನಾಯಕ ವಿ.ಕೆ. ಪಾಂಡಿಯನ್‌ (VK Pandian) ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಅವರಿಗೆ ವಿ.ಕೆ. ಪಾಂಡಿಯನ್‌ ಅವರೇ ಉತ್ತರಾಧಿಕಾರಿಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ವಿ.ಕೆ.ಪಾಂಡಿಯನ್‌ ಅವರು ಸಕ್ರಿಯ ರಾಜಕಾರಣದಿಂದ ದೂರ ಸರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ.

“ನವೀನ್‌ ಪಟ್ನಾಯಕ್‌ ಅವರಿಗೆ ನೆರವು ನೀಡಬೇಕು, ಅವರ ಜತೆ ನಿಲ್ಲಬೇಕು ಎಂಬ ಒಂದೇ ಕಾರಣದಿಂದ ನಾನು ರಾಜಕೀಯ ಪ್ರವೇಶಿಸಿದೆ. ಆದರೆ, ನಾನೀಗ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ. ನನ್ನ ರಾಜಕೀಯ ಪಯಣದಲ್ಲಿ ಯಾರಿಗಾದರೂ ನೋವುಂಟು ಮಾಡಿದ್ದರೆ, ಅದಕ್ಕೆ ಕ್ಷಮೆಯಾಚಿಸುತ್ತೇನೆ. ಚುನಾವಣೆ ಪ್ರಚಾರದಲ್ಲಿ ನನ್ನ ವಿರುದ್ಧ ಅಭಿಯಾನ ಶುರುವಾಗಿ, ಅದು ಪಕ್ಷದ ಸೋಲಿಗೆ ಕಾರಣವಾಗಿದ್ದರೆ ಅದಕ್ಕೂ ಕ್ಷಮೆಯಾಚಿಸುತ್ತೇನೆ. ಬಿಜು ಪರಿವಾರಕ್ಕೂ ನಾನು ಕ್ಷಮೆ ಕೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನವೀನ್ ಪಟ್ನಾಯಕ್‌ ಅವರಿಗೆ ವಿ.ಕೆ. ಪಾಂಡಿಯನ್‌ ಅವರು ತುಂಬ ಆಪ್ತರಾಗಿದ್ದರು. ನವೀನ್‌ ಪಟ್ನಾಯಕ್‌ ಅವರ ವಯಸ್ಸಿನ ಕಾರಣದಿಂದಾಗಿ ವಿ.ಕೆ.ಪಾಂಡಿಯನ್‌ ಅವರೇ ಬಿಜೆಡಿಯ ಉತ್ತರಾಧಿಕಾರಿಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ನರೇಂದ್ರ ಮೋದಿ ಅವರು ಒಡಿಶಾದಲ್ಲಿ ಚುನಾವಣೆ ಪ್ರಚಾರದ ವೇಳೆ, ಬಿಜೆಪಿ ಗೆದ್ದರೆ ಒಡಿಶಾ ಮೂಲದವರೇ ಸಿಎಂ ಆಗುತ್ತಾರೆ ಎಂದಿದ್ದರು. ವಿ.ಕೆ.ಪಾಂಡಿಯನ್‌ ಅವರು ತಮಿಳು ಮೂಲದವರಾದ ಕಾರಣ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದರು.

ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಒಡಿಶಾದ 21 ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಡಿಯು ತೀವ್ರ ಮುಖಭಂಗ ಅನುಭವಿಸಿದೆ. 21 ಕ್ಷೇತ್ರಗಳ ಪೈಕಿ ಬಿಜೆಪಿಯು 20 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್‌ 1 ಕ್ಷೇತ್ರದಲ್ಲಿ ಗೆದ್ದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಡಿ ಈ ಬಾರಿ ಒಂದೂ ಕ್ಷೇತ್ರ ಗೆದ್ದಿಲ್ಲ.

ಇದನ್ನೂ ಓದಿ: Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Continue Reading

ಕ್ರೀಡೆ

INDvsPAK : ಪಾಕ್​ ಮತ್ತು ಭಾರತ ಪಂದ್ಯದ ಕುರಿತು ನಟ ಕಮಲ್​ ಹಾಸನ್​ ನೀಡಿರುವ ಹೇಳಿಕೆಯ ವಿಡಿಯ ಇಲ್ಲಿದೆ

INDvsPAK : ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಮುಖಾಮುಖಿಯ ಎರಡೂ ರಾಷ್ಟ್ರವನ್ನು ಏಕೀಕರಿಸುತ್ತವೆ. ಈ ಶಕ್ತಿಯು ಪರಸ್ಪರ ಚರ್ಚೆಗೆ ಕಾರಣವಾಗುತ್ತವೆ. ಎರಡೂ ದೇಶಗಳ ಆಟಗಾರರು ಹಾಗೂ ಅಭಿಮಾನಿಗಳು ಪರಸ್ಪರ ತಮ್ಮ ದೇಶಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ಹೊರಡುತ್ತಾರೆ.

VISTARANEWS.COM


on

INDvsPAK
Koo

ಬೆಂಗಳೂರು: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (INDvsPAK) ನಡುವಿನ ಪಂದ್ಯಕ್ಕೆ ಮೊದಲು ಕುತುಹೂಲ ನಿರೀಕ್ಷಿತ. ಇಂತಹ ಪಂದ್ಯಗಳಿಗೆ ಬಗ್ಗೆ ಕ್ರಿಕೆಟ್​ ಪಂಡಿತರ ವಿಶ್ಲೇಷಣೆಗಳು, ಮಾಜಿ ಕ್ರಿಕೆಟಿಗರ ಚರ್ಚೆಗಳನ್ನು ಒಳಗೊಂಡ ವಿಶೇಷ ಪಾಡ್​ಕಾಸ್ಟ್​​ಗಳನ್ನು ಮತ್ತು ಎರಡೂ ದೇಶಗಳ ಮಾಜಿ ಆಟಗಾರರೊಂದಿಗಿನ ಸಂದರ್ಶನಗಳಿಗೆ ಈಗ ಹೆಚ್ಚು ಚಲಾವಣೆಯಲ್ಲಿದೆ. ಹೆಚ್ಚುವರಿಯಾಗಿ, ಟೂರ್ನಿಗೆ ಮೊದಲು ನಿರಂತರ ಜಾಹೀರಾತುಗಳು ಪ್ರಸಾರವಾಗುತ್ತಿವೆ. ಅದರಲ್ಲೊಂದು ಕಮಲ್ ಹಾಸನ್ (INDvsPAK) ಹೇಳಿಕೆ ಗಮನ ಸೆಳೆದಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಮುಖಾಮುಖಿಯ ಎರಡೂ ರಾಷ್ಟ್ರವನ್ನು ಏಕೀಕರಿಸುತ್ತವೆ. ಈ ಶಕ್ತಿಯು ಪರಸ್ಪರ ಚರ್ಚೆಗೆ ಕಾರಣವಾಗುತ್ತವೆ. ಎರಡೂ ದೇಶಗಳ ಆಟಗಾರರು ಹಾಗೂ ಅಭಿಮಾನಿಗಳು ಪರಸ್ಪರ ತಮ್ಮ ದೇಶಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ಹೊರಡುತ್ತಾರೆ. ಆದರೆ ಇವೆಲ್ಲದರ ನಡುವೆ ಕೆಲವೊಂದು ಸಂದರ್ಶನಗಳು ಹಚ್ಚು ಗಮನ ಸೆಳೆಯುತ್ತವೆ. ಈ ಎಲ್ಲದರ ನಡುವೆ ಪ್ರತಿಭಾವಂತ ನಟ ಮತ್ತು ಚಲನಚಿತ್ರ ನಿರ್ದೇಶಕ ಕಮಲ್ ಹಾಸನ್ ಅವರು ಬಹುನಿರೀಕ್ಷಿತ ಪಂದ್ಯದ ಮುನ್ನಾದಿನದಂದು ಸ್ಟಾರ್ ಸ್ಪೋರ್ಟ್ಸ್ ಮಾಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಹಿನ್ನೆಲೆಯ ಮೇಲೆ ಸಂಪೂರ್ಣ ಬಿಳಿ ಬೆಳಕಿನಿಂದ ರಚಿಸಿದ ಫ್ರೇಮ್ ಮೇಲೆ ಕಮಲ್​ ಹಾಸನ್​ ಕ್ರಿಕೆಟ್​ ಪ್ರೇಮಿಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ. ಅದಕ್ಕಿಂತ ಮೊದಲು ಅವರು ಕೈಮುಗಿದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: IND vs PAK: ನಂ.1 ಬ್ಯಾಟರ್​ ಆಗಿದ್ದರೆ ಪಾಕ್​ ವಿರುದ್ಧ ಆಡಿ ತೋರಿಸು; ಸೂರ್ಯಕುಮಾರ್​ಗೆ ಸವಾಲೆಸೆದ ಪಾಕ್​ ಆಟಗಾರ

“ನಮಸ್ತೆ ಇಂಡಿಯಾ, ಯೇ ಟೈಮ್ ಹೈ ಸಿರ್ಫ್ ಖುದ್ಕಿ ಆವಾಜ್ ನಹೀ, ದೇಶ್ ಕಿ ಆವಾಜ್ ಬನ್ನೆ ಕಾ (ನನ್ನ ಸಹ ಭಾರತೀಯರಿಗೆ ಶುಭಾಶಯಗಳು, ಇದು ನಮ್ಮ ಸ್ವಂತ ಧ್ವನಿಯಾಗಲು ಮಾತ್ರವಲ್ಲ, ಭಾರತದ ಬೆನ್ನೆಲುಬಾಗಲು ಸೂಕ್ತ ಸಮಯವಾಗಿದೆ). ಯೇ ಟೈಮ್ ಹೈ ಗಾವ್, ಶಹರ್, ಔರ್ ಪ್ರದೇಶ್ ಕೋ ಛೋಡ್ಕರ್, ದೇಶ್ ಬನ್ನೆ ಕಾ (ಇದು ಹಳ್ಳಿಗಳು, ಪಟ್ಟಣಗಳು ಮತ್ತು ರಾಜ್ಯಗಳನ್ನು ಒಟ್ಟಿಗೆ ಒಗ್ಗೂಡಿಸುವ ಮತ್ತು ಒಂದು ರಾಷ್ಟ್ರವಾಗಿ ಒಂದೇ ಘಟಕವನ್ನು ರಚಿಸುವ ಪರಿಪೂರ್ಣ ಯುಗವಾಗಿದೆ). ಯೇ ಟೈಮ್ ಹೈ ಅನೆಕ್ ಇಂಡಿಯನ್ಸ್ ಸೇ ಏಕ್ ಇಂಡಿಯನ್ ಬನ್ನೆ ಕಾ (ಈ ಬಾರಿ ಅನೇಕ ಭಾರತೀಯರಲ್ಲಿ ಒಬ್ಬರಾಗುವ ಸಮಯವಾಗಿದೆ ). ಸಂಜೆ 7:52 (ಭಾರತೀಯ ಸಮಯ ವಲಯಕ್ಕೆ ಅನುಗುಣವಾಗಿ ಭಾರತದ ಎಲ್ಲಾ ಪಂದ್ಯಗಳಿಗೆ ರಾಷ್ಟ್ರಗೀತೆ ಪ್ರಾರಂಭವಾಗುವ ಸಮಯವಾಗಿದೆ.), ಇಂಡಿಯಾ ಕೆ ಹರ್ ಮ್ಯಾಚ್ ಮೇನ್ ಇಂಡಿಯಾ ಕೆ ಸಾಥ್ ಖಾದಾ ರಹೇಗಾ ಯೇ ಇಂಡಿಯನ್ (ಈ ಭಾರತೀಯರು ತಮ್ಮ ಪ್ರತಿಯೊಂದು ಪಂದ್ಯದಲ್ಲೂ ಟೀಮ್ ಇಂಡಿಯಾದ ಬೆನ್ನೆಲುಬಾಗಿರುತ್ತಾರೆ)” ಎಂದು ಕಮಲ್ ಹಾಸನ್ ತಮ್ಮ ಉತ್ಸಾಹದ ಧ್ವನಿಯಲ್ಲಿ ಹೇಳಿದ್ದಾರೆ.

Continue Reading

ಉದ್ಯೋಗ

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆಗೆ ಜೂ. 13 ಕೊನೆಯ ದಿನ

Job Alert: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ. ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ (UPSC Specialist Grade III, Assistant Director Grade-II & Other Recruitment 2024). ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13. ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ ಜೂನ್‌ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪ ಅಧೀಕ್ಷಕ ಪುರಾತತ್ವ ರಸಾಯನ ಶಾಸ್ತ್ರಜ್ಞ – 4 ಹುದ್ದೆ, ವಿದ್ಯಾರ್ಹತೆ- ಪದವಿ / ಸ್ನಾತಕೋತ್ತರ ಪದವಿ (ರಸಾಯನ ಶಾಸ್ತ್ರ)
ಉಪ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ – 67 ಹುದ್ದೆ, ವಿದ್ಯಾರ್ಹತೆ- ಪಿಜಿ (ಪುರಾತತ್ವಶಾಸ್ತ್ರ / ಭಾರತೀಯ ಇತಿಹಾಸ)
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್‌ಕ್ವಾರ್ಟಸ್‌ (ನೌಕಾಪಡೆ) – 4 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್) – 6 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಮೆಡಿಸಿನ್) – 61 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ) – 39 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ) 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್) – 23 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್-3 (ಅನಸ್ತೇಶಿಯಾಲಜಿ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಕುಷ್ಠರೋಗ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಮೆಡಿಸಿನ್) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಸರ್ಜರಿ) – 7 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ರಸೂತಿ ಮತ್ತು ಜ್ಞಾನಶಾಸ್ತ್ರ) – 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ನೇತ್ರಶಾಸ್ತ್ರ) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಆರ್ಥೋಪೆಡಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 ಓಟೊ-ರೈನೋ-ಲಾರಿಂಗಲಜಿ (ಕಿವಿ, ಮೂಗು ಮತ್ತು ಗಂಟಲು) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪೀಡಿಯಾಟ್ರಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ಯಾಥಾಲಜಿ) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಸೈಕಿಯಾಟ್ರಿ) – 1 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೋಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (ಡಿಸಿಐಒ / ಟೆಕ್) 9 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸಹಾಯಕ ನಿರ್ದೇಶಕರು (ತೋಟಗಾರಿಕೆ) 4 ಹುದ್ದೆ, ವಿದ್ಯಾರ್ಹತೆ ಎಂಎಸ್‌ಸಿ ತೋಟಗಾರಿಕೆ
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಕೆಮಿಕಲ್) 5 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಭಾಗ)/ ಪಿಜಿ (ರಸಾಯನಶಾಸ್ತ್ರ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಆಹಾರ) 19 ಹುದ್ದೆ, ವಿದ್ಯಾರ್ಹತೆ: ಪದವಿ (ಫುಡ್ ಟೆಕ್ನಾಲಜಿ)/ ಪಿಜಿ ಡಿಪ್ಲೋಮಾ (ಫ್ರೂಟ್ಸ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಹೊಸೇರಿ) 12 ಹುದ್ದೆ, ವಿದ್ಯಾರ್ಹತೆ: ಪದವಿ (ಟೆಕ್ಸ್ ಟೈಲ್ ಟೆಕ್ನಾಲಜಿ ಅಥವಾ ಹೋಸಿಯರಿ ಟೆಕ್ನಾಲಜಿ ಅಥವಾ ನೈಟಿಂಗ್‌ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಲೆದರ್ & ಪಾದರಕ್ಷೆ) – 8 ಹುದ್ದೆ, ವಿದ್ಯಾರ್ಹತೆ: ಪದವಿ (ಲೆದರ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಮೆಟಲ್ ಫಿನಿಶಿಂಗ್) – 2 ಹುದ್ದೆ, ವಿದ್ಯಾರ್ಹತೆ: ಪದವಿ (ಕೆಮಿಕಲ್)
ಟೆಕ್ನಾಲಜಿ ಅಥವಾ ಕೆಮಿಕಲ್ ಎಂಜಿನಿಯರಿಂಗ್) / ಪಿಜಿ (ಕೆಮಿಸ್ಟ್ರಿ)
ಎಂಜಿನಿಯರ್ ಮತ್ತು ಹಡಗು ಸರ್ವೇಯರ್ ಕಮ್-ಡೆಪ್ಯುಟಿ ಡೈರೆಕ್ಟರ್ ಜನರಲ್ (ಟೆಕ್ನಿಕಲ್) – 2 ಹುದ್ದೆ, ವಿದ್ಯಾರ್ಹತೆ: ಮೆರೈನ್ ಎಂಜಿನಿಯರ್ ಆಫೀಸರ್ ಕ್ಲಾಸ್ -1ರ ಪ್ರಮಾಣ ಪತ್ರ
ತರಬೇತಿ ಅಧಿಕಾರಿ (ಮಹಿಳಾ ತರಬೇತಿ)- ಉಡುಪು ತಯಾರಿಕೆ – 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ತರಬೇತಿ ಅಧಿಕಾರಿ (ಮಹಿಳಾ ತರಬೇತಿ) – ಎಲೆಕ್ಟ್ರಾನಿಕ್ ಮಕಾನಿಕ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ಅಸಿಸ್ಟೆಂಟ್‌ ಫೊಫೆಸರ್‌ – 1 ಹುದ್ದೆ, ವಿದ್ಯಾರ್ಹತೆ: ಎಂ.ಸಿ.ಎಚ್. ಯುರಾಲಜಿ ಅಥವಾ ಡಿಎನ್‌ಬಿ (ಯುರಾಲಜಿ)

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿ 25 ರೂ. ಪಾವತಿಸಬೇಕು. ಮೀಸಲಾತಿ ಹೊಂದಿರುವವರಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading
Advertisement
Kannada New Movie Chilli Chicken Official Trailer
ಸ್ಯಾಂಡಲ್ ವುಡ್10 mins ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

IND vk PAK
ಕ್ರಿಕೆಟ್10 mins ago

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

Champions Trophy 2025
ಕ್ರೀಡೆ13 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಮುಹೂರ್ತ ಫಿಕ್ಸ್​; ಪಾಕ್​ಗೆ ತೆರಳಲಿದೆಯೇ ಭಾರತ?

Killer Python
ಕ್ರೈಂ16 mins ago

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

Dupatta Selection Tips
ಫ್ಯಾಷನ್21 mins ago

Dupatta Selection Tips: ಪರ್ಫೆಕ್ಟ್ ದುಪಟ್ಟಾ ಸೆಲೆಕ್ಷನ್‌ಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

Viral Video
ಕ್ರೈಂ22 mins ago

Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

Dharwad News The monkey sat on the corpse during the funeral
ಧಾರವಾಡ22 mins ago

Dharwad News : ಅಗ್ನಿ ಸ್ಪರ್ಶ ಮಾಡುವಾಗಲೇ ಶವದ ಮೇಲೆ ಹಾರಿ ಕುಳಿತ ಮಂಗ! ಮುಂದೇನಾಯಿತು?

Kalki 2898 AD Deepika Padukone looks poster
South Cinema31 mins ago

Kalki 2898 AD: ʼಕಲ್ಕಿ 2898 ಎಡಿʼ ಚಿತ್ರದಿಂದ ಹೊಸ ಪೋಸ್ಟರ್‌ ಔಟ್; ಗಾಬರಿ ಲುಕ್‌ನಲ್ಲಿ ದೀಪಿಕಾ!

VK Pandian
ದೇಶ1 hour ago

VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

INDvsPAK
ಕ್ರೀಡೆ1 hour ago

INDvsPAK : ಪಾಕ್​ ಮತ್ತು ಭಾರತ ಪಂದ್ಯದ ಕುರಿತು ನಟ ಕಮಲ್​ ಹಾಸನ್​ ನೀಡಿರುವ ಹೇಳಿಕೆಯ ವಿಡಿಯ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌