Jimmy Carter: ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಅನಾರೋಗ್ಯಪಿಡೀತ ಅಮೆರಿಕ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ - Vistara News

ಪ್ರಮುಖ ಸುದ್ದಿ

Jimmy Carter: ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಅನಾರೋಗ್ಯಪಿಡೀತ ಅಮೆರಿಕ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್

ಅಮೆರಿಕದ ಮಾಜಿ ಅಧ್ಯಕ್ಷ, 98 ವರ್ಷದ ಜಿಮ್ಮಿ ಕಾರ್ಟರ್ (Jimmy Carter) ಅವರು ಕಳೆದ ಕೆಲವು ದಿನಗಳಿದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಿದ್ದೂ, ಅವರು ಆಸ್ಪತ್ರೆಯ ಬದಲಿಗೆ, ಮನೆಯಲ್ಲೇ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆಂದು ಜಿಮ್ಮಿ ಕಾರ್ಟರ್ ಸೆಂಟರ್ ಹೇಳಿದೆ.

VISTARANEWS.COM


on

former US President Jimmy Carter to receive hospice care
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್, ಅಮೆರಿಕ: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ (Jimmy Carter) ಅವರು ಮನೆಯಲ್ಲಿ ಆರೈಕೆ ಪಡೆಯುತ್ತಿದ್ದಾರೆ. 98 ವರ್ಷದ ಜಿಮ್ಮಿ ಕಾರ್ಟರ್ ಬದುಕಿರುವ ಅಮೆರಿಕ ಮಾಜಿ ಅಧ್ಯಕ್ಷರ ಪೈಕಿ ಅತ್ಯಂತ ಹಿರಿಯರಾಗಿದ್ದಾರೆ. ಅವರ ತಮ್ಮ ಉಳಿದಯ ಸಮಯವನ್ನು ತಮ್ಮ ಕುಟುಂಬದೊಂದಿಗೆ ಮನೆಯಲ್ಲಿ ಕಳೆಯಲಿದ್ದಾರೆಂದು ಕಾರ್ಟರ್ ಸೆಂಟರ್ ತಿಳಿಸಿದೆ.

ಡೆಮಾಕ್ರಟಿಕ್ ಪಕ್ಷದ ನಾಯಕರಾಗಿದ್ದ ಜಿಮ್ಮಿ ಕಾರ್ಟರ್ ಅವರು 1977ರಿಂದ 1981ರವರೆಗೆ ಅಮೆರಿಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಎರಡನೇ ಬಾರಿಗೆ ಅವರು ಸ್ಪರ್ಧಿಸಿದ್ದರು. ಆದರೆ, ರೋನಾಲ್ಡ್ ರೆಗನ್ ವಿರುದ್ಧ ಸೋಲು ಅನುಭವಿಸಬೇಕಾಯಿುತು. ಮೆದುಳು ಮತ್ತು ಯಕೃತ್ತಿನ ಮೂಲಕ ಹರಡಿದ ಮೆಲನೋಮ್ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಜಿಮ್ಮಿ ಕಾರ್ಟರ್ ಅವರು ಬಳಲುತ್ತಿದ್ದಾರೆ.

ಕಾರ್ಟರ್ ಸೆಂಟರ್ ಮಾಡಿದ ಟ್ವೀಟ್ ಇಲ್ಲಿದೆ….

ಸ್ವಲ್ಪ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಮ್ಮಿ ಕಾರ್ಟರ್ ಅವರು ಭಾನುವಾರ ತಮ್ಮ ಕುಟುಂಬದವರೊಂದಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯಲು ನಿರ್ಧರಿಸಿದರು. ಹೆಚ್ಚುವರಿ ವೈದ್ಯಕೀಯ ವ್ಯವಸ್ಥೆಯ ಬೆಂಬಲದ ಬದಲಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯಲು ಮುಂದಾಗುತ್ತಿದ್ದಾರೆ ಎಂದು ಜಿಮ್ಮಿ ಕಾರ್ಟರ್ ಸೆಂಟರ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ: China Spy Balloon: ಚೀನಾದ ಸ್ಪೈ ಬಲೂನ್‌ಅನ್ನು ಅಮೆರಿಕ ಹೊಡೆದುರುಳಿಸಿದ್ದು ಹೇಗೆ? ಇಲ್ಲಿದೆ ರೋಚಕ ವಿಡಿಯೊ

ಕಾರ್ಟರ್ ಅವರ ಮೊಮ್ಮಗ ಮತ್ತು ಮಾಜಿ ಜಾರ್ಜಿಯಾ ರಾಜ್ಯದ ಸೆನೆಟರ್, ಜೇಸನ್ ಕಾರ್ಟರ್ ಅವರು “ನಿನ್ನೆ ನನ್ನ ಅಜ್ಜಿಯರಿಬ್ಬರನ್ನು ಕಾರ್ಟರ್ ಭೇಟಿ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಾಂತಿಯಿಂದ ಇದ್ದಾರೆ ಮತ್ತು – ಯಾವಾಗಲೂ – ಅವರ ಮನೆ ಪ್ರೀತಿಯಿಂದ ತುಂಬಿದೆ. ನಿಮ್ಮ ಒಳ್ಳೆಯ ಮಾತುಗಳಿಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Hosur Airport: ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು.

VISTARANEWS.COM


on

hosur airport
Koo

ಬೆಂಗಳೂರು: ಹೊಸೂರಿನಲ್ಲಿ (Hosur) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಿಸುವುದಾಗಿ (Hosur Airport) ಘೋಷಿಸಿದ ತಮಿಳುನಾಡು ಸರ್ಕಾರ (Tamil Nadu Govt) ಇದೀಗ ಅದರ ಹೊಣೆಯನ್ನು ಬಿಐಎಎಲ್‌ಗೆ (BIAL) ವಹಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್‌ ಮಾಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Kempegowda Internationa Airport) ನಿರ್ವಹಿಸುತ್ತಿರುವ ಬಿಐಎಎಲ್‌ಗೆ ಜವಾಬ್ದಾರಿ ನೀಡಲು ಮಾತುಕತೆ ನಡೆದಿದೆ. ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು. ಬಿಐಎಎಲ್‌ ಜುಲೈ 5, 2004ರಂದು ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ದೃಷ್ಟಿಯಿಂದ 2033ರವರೆಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ತಲೆ ಎತ್ತುವಂತಿಲ್ಲ.

ಈ ತಡೆಯನ್ನು ಮೀರಲು ಸ್ಟಾಲಿನ್‌ ಸರ್ಕಾರ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಗ್ಗೆ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಟಿಡ್ಕೊದ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ಬಿಐಎಎಲ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಐಎಎಲ್‌ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಐಎಎಲ್‌ಗೆ ಹೊಸೂರು ವಿಮಾನ ನಿಲ್ದಾಣ ಟೆಂಡರ್ ಕೊಟ್ಟರೆ ಈ ಒಪ್ಪಂದ ಅನ್ವಯ ಆಗುವುದಿಲ್ಲ ಎನ್ನಲಾಗುತ್ತಿದೆ.

ಹೊಸೂರು ಕೈಗಾರಿಕಾ ವಲಯಕ್ಕೆ ಹೆಚ್ಚಿದ ಬೇಡಿಕೆ

ತಮಿಳುನಾಡು ಏರ್‌ಪೋರ್ಟ್ ಘೋಷಣೆ‌ ಬೆನ್ನಲ್ಲೇ ಹೊಸೂರು ಕೈಗಾರಿಕಾ ವಲಯಕ್ಕೆ ಬೇಡಿಕೆ ಹೆಚ್ಚಿದೆ. ಕಳೆದ ಐದು ವರ್ಷದಲ್ಲಿ ಹೊಸೂರು ಸುತ್ತ 200 ಹೊಸ ಕಂಪನಿಗಳು- ಕಾರ್ಖಾನೆಗಳು ಆರಂಭವಾಗಿವೆ. ಬೆಂಗಳೂರು ಸುತ್ತ ಅನುಷ್ಠಾನ ಆಗಬೇಕಿದ್ದ ಕಂಪನಿಗಳು ಹೊಸೂರಿಗೆ ಶಿಫ್ಟ್ ಆಗಿವೆ.

ಇದಕ್ಕೆ ಕಾರಣ, ತಮಿಳುನಾಡು ಸರ್ಕಾರ ಕೈಗಾರಿಕಾ ಕಂಪನಿಗಳಿಗೆ ಕಡಿಮೆ ಬೆಲೆಗೆ ಭೂಮಿ ನೀಡಿತ್ತು. ಮೆಟ್ರೋ ನಗರ ಬೆಂಗಳೂರಿಗೆ ಹತ್ತಿರದಲ್ಲೇ ಇರಿವುದರಿಂದ ಮೂಲಸೌಕರ್ಯಗಳಿಗೆ ಮೋಸವಿಲ್ಲ. ಇನ್ನು ಅತ್ತಿಬೆಲೆವರೆಗೂ ಮೆಟ್ರೋ ವಿಸ್ತೀರ್ಣದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅದೂ ಅನುಷ್ಠಾನಗೊಳ್ಳಲಿದೆ. ಹೊಸೂರು ಹೊಸ ಇಂಡಸ್ಟ್ರಿಗಳಿಗೆ ವರದಾನವಾಗುತ್ತಿದೆ. ಬೆಂಗಳೂರಿನ ಕಂಪನಿಗಳು ಹೊಸೂರಿಗೆ ಸ್ಥಳಾಂತರಕ್ಕೆ ಇದೂ ಕೂಡಾ ಕಾರಣ.

ಹೊಸೂರಿನಲ್ಲಿ ಕಾಸ್ಟ್ ಆಫ್ ಲಿವಿಂಗ್ ಕಡಿಮೆ, ಟ್ರಾನ್ಸ್ ಪೋರ್ಟ್ ಕನೆಕ್ಟಿವಿಟಿ ಹೆಚ್ಚು ಇದೆ. ಟ್ರಾಫಿಕ್ ಸಮಸ್ಯೆ ಕಡಿಮೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಾಗಿ ಲಭ್ಯವಿದೆ. ಹೀಗಾಗಿ ದೊಡ್ಡ ಕಂಪನಿಗಳು ಅತ್ತ ಶಿಫ್ಟ್‌ ಆಗಲು ಯೋಚಿಸುತ್ತಿವೆ. ನಗರದೊಳಗೆ ಹೆಚ್ಚುತ್ತಿರುವ ಟ್ರಾಫಿಕ್‌, ಜೀವನವೆಚ್ಚ ಜಾಗದ ಕೊರತೆಗಳು ಇದನ್ನು ಇನ್ನಷ್ಟು ಪ್ರಚೋದಿಸುತ್ತಿವೆ.

ಇದನ್ನೂ ಓದಿ: Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Continue Reading

ಕರ್ನಾಟಕ

Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Bangalore–Mysore Expressway : ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

VISTARANEWS.COM


on

Bengaluru-Mysuru highway
Koo

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್‌ಗಳು ಮತ್ತು 155 ಲೇಸರ್ ಸ್ಪೀಡ್ ಗನ್‌ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸಲಾಗುತ್ತಿದೆ.

Continue Reading

ಪ್ರಮುಖ ಸುದ್ದಿ

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

New Criminal Laws: : ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

VISTARANEWS.COM


on

New criminal law
Koo

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. . ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ.
ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ.

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ, ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್‌ಡಿ) ಈ ಹೊಸ ಕಾನೂನುಗಳಿಗೆ ತರಬೇತಿಯನ್ನು ನೀಡಿವೆ. ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳು ಸಹ ತರಬೇತಿಯನ್ನು ನೀಡಿವೆ. ನ್ಯಾಯಾಧೀಶರಿಗೂ ನ್ಯಾಯಾಂಗ ಇಲಾಖೆಯಿಂದ ತರಬೇತಿ ನೀಡಲಾಗಿದೆ.

ಹೊಸ ಕ್ರಿಮಿನಲ್ ಕಾನೂನುಗಳು ಯಾವವು?

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

ಅತ್ಯಾಚಾರ ಎಸಗುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಬೇಕಾಗುತ್ತದೆ. ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

“ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ” ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ. ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.

ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ‘ಆರ್ಥಿಕ ಅಪರಾಧಗಳನ್ನು’ ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಅಪರಾಧ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು.

Continue Reading

ಭವಿಷ್ಯ

Dina Bhavishya : ಯಾರನ್ನೂ ನಂಬಿ ಈ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಸೋಮವಾರವು ವೃಷಭ ರಾಶಿಯಲ್ಲೆ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ,ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವುದು. ಮಿಥುನ ರಾಶಿಯವರು ಬುದ್ಧಿವಂತಿಕೆಯಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 10:25 ವಾರ: ಸೋಮವಾರ
ನಕ್ಷತ್ರ: ಅಶ್ವಿನಿ 06:25 / ಭರಣಿ 29:26 ಯೋಗ: ಸುಕರ್ಮ 13:40
ಕರಣ: ವಿಷ್ಟಿ (ಭದ್ರ) 10:25 ಅಮೃತಕಾಲ: ಮಧ್ಯರಾತ್ರಿ 12:51 ರಿಂದ 02:23ರವರೆಗೆ

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 07:34ರಿಂದ 09:10
ಗುಳಿಕಕಾಲ: ಮಧ್ಯಾಹ್ನ 02:00 ರಿಂದ 03:37

ಯಮಗಂಡಕಾಲ: ಬೆಳಗ್ಗೆ 10:47 ರಿಂದ 12:24

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸಂಬಂಧಿ ಖರ್ಚು ಇರಲಿದೆ. ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾಲಹರಣ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಬುದ್ಧಿವಂತಿಕೆಯಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಗುರು ದತ್ತಾತ್ರೇಯರನ್ನು ಆರಾಧಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಬಿಡುವಿರದಂತೆ ಕೆಲಸದ ಒತ್ತಡ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸಾಧಾರಣವಾಗಿರಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ : ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಹಣಕಾಸು ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಕುಟುಂಬದ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ದೈಹಿಕವಾಗಿ ಬಳಲುವಂತೆ ಮಾಡಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ಸಂಗಾತಿಯ ಮಧುರ ಮಾತುಗಳು ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿದೆ. ಇಂದಿನ ದಿವಸ ಯಾರೊಂದಿಗೂ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಸದಸ್ಯರ ವರ್ತನೆ ಕೋಪವನ್ನು ತರಿಸುವುದು. ಆಲಸ್ಯದಿಂದ ಉತ್ತಮ ಕೆಲಸವನ್ನು ಮುಂದೂಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ:ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಖರ್ಚಿನ ವಿಷಯಗಳಿಗೆ ಕಡಿವಾಣ ಹಾಕಿ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಸಂಗಾತಿಯು ಸೃಷ್ಟಿಸುವ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ವೃತ ವಿಚಾರ ಮಾಡಿ ಕಾಲಹರಣ ಮಾಡುವ ಬದಲು ಸೃಜನಾತ್ಮಕ ಕೆಲಸ ಕಾರ್ಯಗಳಲ್ಲಿ ತೊಡಗಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Birla Opus
ವಾಣಿಜ್ಯ8 mins ago

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Kalki 2898 AD Prabhas Film Hits Jackpot 500 Cr WW In Opening
ಟಾಲಿವುಡ್22 mins ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

hosur airport
ಪ್ರಮುಖ ಸುದ್ದಿ27 mins ago

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Healthy Foods For Kidney
ಆರೋಗ್ಯ47 mins ago

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

bengal assault case
ಕ್ರೈಂ1 hour ago

Assault Case: ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

karnataka Weather Forecast
ಮಳೆ2 hours ago

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Vastu Tips
ಧಾರ್ಮಿಕ3 hours ago

Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?

Bengaluru-Mysuru highway
ಕರ್ನಾಟಕ3 hours ago

Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

New criminal law
ಪ್ರಮುಖ ಸುದ್ದಿ4 hours ago

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

dina Bhavishya
ಭವಿಷ್ಯ4 hours ago

Dina Bhavishya : ಯಾರನ್ನೂ ನಂಬಿ ಈ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗಬೇಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು20 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌