ಉಡುಪಿ
ಕಡಲ ಮಕ್ಕಳ ಹುಮ್ಮಸ್ಸಿಗೆ ತಣ್ಣೀರು; ಸ್ಥಗಿತವಾಯ್ತು ಮೀನುಗಾರಿಕೆ ಚಟುವಟಿಕೆ
ಕರಾವಳಿ ಮೀನುಗಾರರ ಲೆಕ್ಕಾಚಾರ ಕೈ ಮೀರಿದೆ. ಅನಿರೀಕ್ಷಿತ ಚಂಡಮಾರುತದ ಪರಿಣಾಮವಾಗಿ ಮುಂಗಾರಿಗೆ ಮೊದಲೇ ಮೀನುಗಾರಿಕೆ ಲಯ ತಪ್ಪಿತ್ತು. ಈಗ ಮುಂಗಾರು ಮಳೆ ಆರಂಭದ ಕಾರಣ ಮೀನುಗಾರಿಕೆ ಸ್ತಬ್ಧವಾಗಿದೆ.
ಉಡುಪಿ: ಬೇಸಿಗೆ ಕಾಲ ಮುಗಿದು ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆದಾಯ ಮೂಲದಲ್ಲಿ ಒಂದಾದ ಸಮುದ್ರ ಮೀನುಗಾರಿಕೆ ನಿಂತಿದೆ. ಮುಂಗಾರು ಆರಂಭಕ್ಕೂ ಮೊದಲು ಕಾಡಿದ ಚಂಡಮಾರುತ ಪ್ರಭಾವದಿಂದಾಗಿ ಕೊನೆಯ ಹಂತದ ಭರ್ಜರಿ ಮೀನುಗಾರಿಕೆ ಮಾಡಿ ಲಾಭ ಗಳಿಸುವ ಕಡಲ ಮಕ್ಕಳ ಹುಮ್ಮಸ್ಸಿಗೆ ತಣ್ಣೀರು ಬಿದ್ದಿದೆ. ಈ ಬಾರಿಯ ಮೀನುಗಾರಿಕೆ ಋತು ಮಾತ್ರ ನಷ್ಟದಲ್ಲೆ ಕಳೆದು ಹೋಗಿದೆ. ಈ ವೃತ್ತಿ ನಂಬಿದ ಮಂದಿಗೆ ಮೀನುಗಾರಿಕೆ ಸ್ಥಗಿತದಿಂದ ಇನ್ನಷ್ಟೂ ಸಂಕಷ್ಟ ಎದುರಿಸುವಂತಾಗಿದೆ.
ಇದನ್ನೂ ಓದಿ | ಮಳೆಗಾಲದಲ್ಲಿ ಡೇಂಜರ್: ಮಲ್ಪೆ ಬೀಚ್‌ಗೆ ತಡೆ ಬೇಲಿ ಹಾಕಿದ ಉಡುಪಿ ಜಿಲ್ಲಾಡಳಿತ
ಉಡುಪಿಯ ಮಲ್ಪೆ ಬಂದರು ಸರ್ವ ಋತು ಬಂದರು. ವರ್ಷವಿಡೀ ಮೀನುಗಾರಿಕೆ ನಡೆಸಲು ಅನುಕೂಲವಾಗಿದೆ. ಮಲ್ಪೆಗೆ ಏಷ್ಯಾದ ಅತೀ ದೊಡ್ಡ ಸರ್ವಋತು ಮೀನುಗಾರಿಕೆ ಬಂದರು ಎಂಬ ಹೆಗ್ಗಳಿಕೆಯೂ ಇದೆ. ಮಂಗಳೂರು ಹಾಗೂ ಕಾರವಾರ ನಡುವೆ ಇರುವ ಈ ಬಂದರಿನಲ್ಲಿ ಬಹುಕೋಟಿಯ ಮೀನುಗಾರಿಕೆ ನಡೆಯುತ್ತದೆ. ಡಿಸೇಲ್ ಸಮಸ್ಯೆ, ಆಳ ಮೀನುಗಾರಿಕೆಯ ಸವಾಲಿನ ನಡುವೆ ಮತ್ತೊಂದು ಸಮಸ್ಯೆ ಮೀನುಗಾರನ್ನು ಕಾಡುತ್ತಿದೆ. ಸದ್ಯ ಮಳೆಗಾಲ ಆರಂಭವಾದ ಹಿನ್ನಲೆಯಲ್ಲಿ ಬೋಟ್‌ಗಳು ಬಂದರು ಸೇರಿವೆ. ಇನ್ನೂ ಈ ಬಾರಿ ಮೀನುಗಾರಿಕೆ ಲಾಭಕ್ಕಿಂತ ಹೆಚ್ಚು ನಷ್ಟದ ರುಚಿ ನೋಡುವಂತೆ ಮಾಡಿತ್ತು. ಪ್ರತಿಕೂಲ ಹವಾಮಾನ, ಸೂಕ್ತ ಕಾಲದಲ್ಲಿ ತೂಫಾನ್ ಅಗದೆ ಇರುವುದು ಕೂಡ ಮೀನುಗಾರರನ್ನು ಈ ಬಾರಿ ಬಿಡದೆ ಬಾಧಿಸಿತ್ತು ಅಂತಾರೆ ಮೀನುಗಾರ ಮುಖಂಡ ಶಿವರಾಮ ಕುಂದರ್.
ದಿನಕ್ಕೆ 5-6 ಕೋಟಿ ರೂ. ಮೌಲ್ಯದ ಮೀನುಗಾರಿಕೆ ಮಲ್ಪೆಯಲ್ಲಿ ನಡೆಯುತ್ತದೆ. ಸುಮಾರು 2 ಸಾವಿರಕ್ಕೂ ಅಧಿಕ ಬೋಟ್ ಗಳು ಇಲ್ಲಿವೆ. ಆದರೆ ಉಡುಪಿಯ ಮಲ್ಪೆ ಬಂದರಿನಲ್ಲಿ 1 ಸಾವಿರ ಬೋಟ್ ಗಳು ನಿಲ್ಲುವುದಕ್ಕೆ ಮಾತ್ರ ಅವಕಾಶವಿದೆ. ಹೀಗಾಗಿ ಬೋಟ್ ದಡ ಸೇರಿಸುವ ತರಾತುರಿಯಿಂದ ಮೀನುಗಾರಿಕೆ ನಿಲ್ಲಿಸಿ ಬೋಟ್ ಕಟ್ಟುವುದಕ್ಕೆ ಮೀನುಗಾರು ಸ್ಫರ್ಧೆಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರನೇ ಹಂತದ ಬಂದರು ಕಾಮಗಾರಿ ಪೂರ್ಣಗೊಂಡರೆ ಪ್ರತಿ ವರ್ಷದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ. ಆದರೆ ರಾಜ್ಯ ಸರ್ಕಾರ ಹಾಗೂ ಮೀನುಗಾರಿಕಾ ಇಲಾಖೆ ಈ ಕಡೆಗೆ ಗಮನ ಹರಿಸಿಲ್ಲ. ಸ್ಥಳೀಯ ಜನಪ್ರತಿನಿಧಿಗಳೂ ಈ ಕುರಿತ ಆಸಕ್ತಿ ಹೊಂದಿಲ್ಲ. ಹೀಗಾಗಿ ನಷ್ಟವನ್ನು ಎದುರಿಸುವ ಪರಿಸ್ಥಿತಿ ಉಂಟಾಗಿದೆ ಅಂತ ಮೀನುಗಾರ ಚಂದ್ರಕಾಂತ್ ಅಳಲು ತೋಡಿಕೊಂಡಿದ್ದಾರೆ.
ಸದ್ಯ, ಉಡುಪಿ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟ್ ನಿಲುಗಡೆ ಜಾಗ ಮಾಡಿಕೊಳ್ಳುವುದಕ್ಕೆ ಒದ್ದಾಡುವ ಸ್ಥಿತಿ ಮೀನುಗಾರರದ್ದು. ಮೂರನೇ ಹಂತದ ಕಾಮಗಾರಿ ಪೂರ್ಣಗೊಳ್ಳಿಸಿ ನಾಲ್ಕನೇ ಹಂತದ ಕಾಮಗಾರಿ ಕೈಗೆತ್ತಿಕೊಂಡ್ರೆ ಸಾವಿರಾರು ಕೋಟಿನಷ್ಟ ತಪ್ಪಿಸಿ ಮೀನುಗಾರ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಇದನ್ನೂ ಓದಿ | ಉಡುಪಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ಭೇಟಿ, ಕುಂದುಕೊರತೆ ಪರಿಶೀಲನೆ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ಮಳೆ
Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ
Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ಮಳೆ
Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್!
Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.
ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.
ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.
ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.
ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.
ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.
ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.
ಮಳೆ
Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ
Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮಳೆ
Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ
ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.
ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ನೀರು ನಿಂತಿದೆ.
ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.
ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.
5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ
ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕೆರೆಗಳು ಭರ್ತಿ
ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಮಲೆನಾಡಿನಂತಾದ ಹೊಸಪೇಟೆ ಪಟ್ಟಣ
ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.