20 ತಿಂಗಳ ಮಗುವಿನ ಹೃದಯ 3 ತಾಸು ನಿಂತೇ ಹೋಗಿತ್ತು; ಆಮೇಲೆ ನಡೆದಿದ್ದು ಪವಾಡ ! - Vistara News

ವಿದೇಶ

20 ತಿಂಗಳ ಮಗುವಿನ ಹೃದಯ 3 ತಾಸು ನಿಂತೇ ಹೋಗಿತ್ತು; ಆಮೇಲೆ ನಡೆದಿದ್ದು ಪವಾಡ !

ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಹುಡುಗ ಡೇ ಕೇರ್​​ನ ಸ್ವಿಮ್ಮಿಂಗ್​ ಪೂಲ್​​ಗೆ ಬಿದ್ದಿದ್ದ. ಹೀಗೆ ಬಿದ್ದವನು ಸುಮಾರು 5 ನಿಮಿಷಗಳ ಕಾಲ ಅಲ್ಲಿಯೇ ಇದ್ದ. ಅತಿಯಾದ ಚಳಿಯಿಂದ ಅವನು ಎಚ್ಚರ ತಪ್ಪಿದ್ದ.

VISTARANEWS.COM


on

Toddler Heart Stopped for 3 hours and Doctors Saved Him in Canada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಿಯುಗದಲ್ಲೂ ಕೆಲವೊಮ್ಮೆ ಪವಾಡವೇ ನಡೆಯುತ್ತದೆ. ಅಂಥ ಘಟನೆಯ ಬಗ್ಗೆ ಕೇಳಿದಾಗೆಲ್ಲ ನಾವು ಹುಬ್ಬೇರಿಸಿದ್ದಿದೆ. ಈಗ ಅಂಥದ್ದೇ ಒಂದು ಪವಾಡ ಸದೃಶ ಘಟನೆ ಕೆನಡಾದ ನೈಋತ್ಯ ಒಂಟಾರಿಯೊದಲ್ಲಿರುವ ಪೆಟ್ರೋಲಿಯಾದಿಂದ ವರದಿಯಾಗಿದೆ. 20 ತಿಂಗಳ ಮಗುವೊಂದರ ಹೃದಯ ಬಡಿತ ಮೂರು ತಾಸು ನಿಂತೇ ಹೋಗಿತ್ತು, ಇನ್ನೇನು ಆ ಮಗು ಕೈತಪ್ಪಿತು ಎಂದುಕೊಂಡು ಪಾಲಕರು, ಕುಟುಂಬವೆಲ್ಲ ನೋವಲ್ಲಿ ಒದ್ದಾಡುತ್ತಿರುವಾಗಲೇ ಆ ಪುಟ್ಟ ಜೀವ ಮತ್ತೆ ಕಣ್ಣುಬಿಟ್ಟಿದೆ. ಇದು ವೈದ್ಯರ ತಂಡವೇ ಮಾಡಿದ ಪವಾಡ !

ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಹುಡುಗ ಡೇ ಕೇರ್​​ನ ಸ್ವಿಮ್ಮಿಂಗ್​ ಪೂಲ್​​ಗೆ ಬಿದ್ದಿದ್ದ. ಹೀಗೆ ಬಿದ್ದವನು ಸುಮಾರು 5 ನಿಮಿಷಗಳ ಕಾಲ ಅಲ್ಲಿಯೇ ಇದ್ದ. ಅತಿಯಾದ ಚಳಿಯಿಂದ ಅವನು ಎಚ್ಚರ ತಪ್ಪಿದ್ದ. ಮೈಯೊಳಗೆ ನೀರು ಸೇರಿಹೋಗಿತ್ತು. ಬಳಿಕ ಮಗುವನ್ನು ಅಲ್ಲಿಂದ ತೆಗೆದು, ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಗುವಿನ ಸ್ಥಿತಿ ಗಂಭೀರವಾಗಿತ್ತು. ಹೃದಯ ಬಡಿತ ನಿಂತು ಹೋಗಿತ್ತು. ಪೆಟ್ರಾಲಿಯಾದಲ್ಲಿರುವ ಈ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ಯಾರೂ ಇರಲಿಲ್ಲ. ಹಾಗೇ, ಚಿಕಿತ್ಸೆಗೆ ಅಗತ್ಯವಿರುವ ಕೆಲವು ಸಾಮಗ್ರಿಗಳ ಕೊರತೆಯೂ ಇತ್ತು. ಮುದ್ದಾದ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ದಾದಿಯರು, ಲ್ಯಾಬ್​ ಸಿಬ್ಬಂದಿ ಎಲ್ಲರೂ ತಮ್ಮತಮ್ಮ ಕೆಲಸ ನಿಲ್ಲಿಸಿ ಮಗುವಿನ ಚಿಕಿತ್ಸೆಯಲ್ಲಿ ತೊಡಗಿಕೊಂಡರು. ಪುಟ್ಟ ಮಗುವಿಗೆ ಉಸಿರು ಕೊಡುವ ಕಾಯಕದಲ್ಲಿ ಸಹಕರಿಸಲು ಪ್ರಾರಂಭಿಸಿದರು. ಸುಮಾರು 3 ತಾಸು ಪರ್ಯಾಯವಾಗಿ ಮಗುವಿಗೆ ಸಿಪಿಆರ್ (cardiopulmonary resuscitation) ಚಿಕಿತ್ಸೆ ನೀಡಿದರು. ಪರಿಣಾಮವಾಗಿ ಮಗುವಿನ ಹೃದಯ ಮತ್ತೆ ಬಡಿಯಲು ಶುರುವಾಯಿತು. ಮತ್ತೊಂದು ಮುಖ್ಯವಿಷಯವೆಂದರೆ, ಲಂಡನ್​​ನ ವೈದ್ಯರ ತಂಡವೊಂದು ಫೋನ್​​ನಲ್ಲಿ ಇವರಿಗೆ ಚಿಕಿತ್ಸೆ ಕುರಿತು ಮಾರ್ಗದರ್ಶನ ನೀಡುತ್ತಿತ್ತು.

ಇದನ್ನೂ ಓದಿ: 3 ವರ್ಷದಿಂದ ಮನೆಯೊಳಗೇ ಲಾಕ್​ ಆಗಿದ್ದ ಮಹಿಳೆ ಮತ್ತು ಅವಳ ಮಗ; ಪತಿಯ ಗೋಳು ನೋಡಲಾಗದೆ ಬಾಗಿಲು ಒಡೆದ ಪೊಲೀಸ್​

ವೇಲಾನ್​ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ. ಆತನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಪಾಲಕರು ತಾವೂ ಮನೆಯಲ್ಲೇ ಇದ್ದು ವೇಲಾನ್​​ ಜತೆ ಕಾಲಕಳೆಯುತ್ತಿದ್ದಾರೆ. ವೇಲಾನ್​ ಮತ್ತೆ ಬದುಕಿದ್ದು ಪವಾಡದಂತೆ ಭಾಸವಾಗುತ್ತಿದೆ ಎಂದು ಚಿಕಿತ್ಸೆ ಕೊಟ್ಟ ವೈದ್ಯ ಡಾ. ಟಿಜ್ಸೆನ್​ ಕೂಡ ಹೇಳಿದ್ದಾರೆ. ನಾವೆಲ್ಲರೂ ಒಂದು ತಂಡವಾಗಿ ಕೆಲಸ ಮಾಡಿದೆವು. ಅದ್ಭುತ ಪ್ರಯತ್ನಕ್ಕೆ, ಅಷ್ಟೇ ಅದ್ಭುತ ಫಲಿತಾಂಶ ಸಿಕ್ಕಿತು ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ಹೆಲಿಕಾಪ್ಟರ್ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿರುವ ಕಾರಣ ಹುಡುಕಾಟ ನಡೆಯುತ್ತಲೇ ಇದೆ. ಇದುವರೆಗೆ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕವೂ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಸುಮಾರು 40 ತಂಡಗಳು ಶೋಧ ಕಾರ್ಯ ನಡೆಸುತ್ತಲೇ ಇವೆ. ಇಷ್ಟಾದರೂ ಹೆಲಿಕಾಪ್ಟರ್‌ ಪತ್ತೆಯಾಗಿರುವ ಕಾರಣ ಇಬ್ರಾಹಿಂ ರೈಸಿ ಸೇರಿ ಹಲವರ ಪ್ರಾಣಕ್ಕೆ ಕುತ್ತುಂಟಾಗಿರುವ ಸಾಧ್ಯತೆ ಇದೆ ಎಂದು ಇರಾನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್‌ ಪತನಗೊಂಡಿರುವ ಕಾರಣ ಶೋಧ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಹಲವು ಸಿಬ್ಬಂದಿ ಇರುವ ಸುಮಾರು 40 ತಂಡಗಳನ್ನು ಇರಾನ್‌ ರಚಿಸಿದೆ. ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯು ಎಡೆಬಿಡದೆ ಶೋಧ ಕಾರ್ಯ ಕೈಗೊಂಡರೂ ಮುನ್ನಡೆ ಸಿಗುತ್ತಿಲ್ಲ. ಹೆಲಿಕಾಪ್ಟರ್‌ ಪತನದ ಬಳಿಕ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಬದುಕುಳಿಯುವ ಸಾಧ್ಯತೆ ತೀರಾ ಕ್ಷೀಣ ಎಂದು ಹೇಳಲಾಗುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದೆ ಎಂಬುದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನವಾಗಿದೆ ಎಂಬುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದರೆ, ಇನ್ನೂ ಕೆಲವು ಮಾಧ್ಯಮಗಳು ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ ಎಂದು ವರದಿ ಮಾಡಿವೆ. ಹಾಗಾಗಿ, ಹೆಲಿಕಾಪ್ಟರ್‌ ಪತನವಾಗಿದೆಯೋ, ತುರ್ತು ಲ್ಯಾಂಡ್‌ ಆಗಿದೆಯೋ ಎಂಬ ಮಾಹಿತಿ ನಿಖರವಾಗಿ ಲಭ್ಯವಾಗಿಲ್ಲ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ. ಆದಾಗ್ಯೂ, ಇರಾನ್‌ ಸರ್ಕಾರದಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇರಾನ್‌ ಬೆಂಗಾವಲು ಪಡೆ ಇದ್ದ ಹೆಲಿಕಾಪ್ಟರ್‌ ಪತನಗೊಂಡಿದೆ. ಅದರಲ್ಲಿ, ಇಬ್ರಾಹಿಂ ರೈಸಿ ಅವರು ಇದ್ದರೋ, ಇಲ್ಲವೋ ಎಂಬುದರ ಮಾಹಿತಿ ನಿಖರವಾಗಿಲ್ಲ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳುತ್ತಿದೆ ಎಂಬುದಾಗಿ ಸಚಿವರೊಬ್ಬರು ತಿಳಿಸಿದ್ದಾರೆ ಎಂಬುದಾಗಿ ಬಿಬಿಸಿ ವರದಿ ತಿಳಿಸಿದೆ. ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶದಲ್ಲಿ ಪತನಗೊಂಡಿರುವುದಾಗಿ ವರದಿಗಳು ಮಾಹಿತಿ ನೀಡಿವೆ. ಪತನಗೊಂಡಿರುವ ಹೆಲಿಕಾಪ್ಟರ್‌ ಪತ್ತೆಹಚ್ಚಲು ಸಿಬ್ಬಂದಿಯು ಹರಸಾಹಸ ಪಡುತ್ತಿದೆ ಎಂದು ಕೂಡ ತಿಳಿದುಬಂದಿದೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ತುರ್ತು ಭೂಸ್ಪರ್ಶ ಮಾಡಿದ ಕಾರಣದಿಂದಾಗಿ ಯಾರಿಗೂ ಅಪಾಯವಾಗಿಲ್ಲ ಎಂದು ಮತ್ತೊಂದಿಷ್ಟು ಮೂಲಗಳು ತಿಳಿಸಿವೆ.

ಇದನ್ನೂ ಓದಿ: US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Continue Reading

ಪ್ರವಾಸ

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಭಾರತೀಯರು ರಷ್ಯಾಕ್ಕೆ ವೀಸಾ ಇಲ್ಲದೇ (Russia Tourism) ತೆರಳಬಹುದು. ಈ ಕುರಿತು ಮಾತುಕತೆ ಜೂನ್‌ನಲ್ಲಿ ಪ್ರಾರಂಭವಾಗಲಿದೆ. ರಷ್ಯಾ ಮತ್ತು ಭಾರತವು ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯದ ಮೂಲಕ ಪ್ರವಾಸೋದ್ಯಮ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

By

Russia Tourism
Koo

ವಿಶ್ವವನ್ನು ಸುತ್ತಬೇಕು (world tour) ಎನ್ನುವ ಆಸೆ ಉಳ್ಳ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು (indians) ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ (Russia Tourism) ಮಾಡಬಹುದು. ಪ್ರವಾಸೋದ್ಯಮ ಕ್ಷೇತ್ರವನ್ನು ಹೆಚ್ಚಿಸಲು ಎರಡೂ ದೇಶಗಳು ಪ್ರಯಾಣದ ಪರಿಸ್ಥಿತಿಗಳನ್ನು ಸರಾಗಗೊಳಿಸಲು ಯೋಜನೆ ರೂಪಿಸುತ್ತಿವೆ.

ರಷ್ಯಾ ಮತ್ತು ಭಾರತ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಮಾನದಂಡಗಳನ್ನು ಅಂತಿಮಗೊಳಿಸಲು ಸಮಾಲೋಚನೆಗಳನ್ನು ಜೂನ್‌ ನಿಂದ ಪ್ರಾರಂಭಿಸಲಿದೆ. ವೀಸಾ ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸಿದ ಅನಂತರ ಭಾರತೀಯರು ರಷ್ಯಾಕ್ಕೆ ಸುಲಭವಾಗಿ ಪ್ರಯಾಣಿಸಬಹುದು.

ರಷ್ಯಾದ ಆರ್ಥಿಕ ಅಭಿವೃದ್ಧಿ ಸಚಿವಾಲಯದ ಬಹುಪಕ್ಷೀಯ ಆರ್ಥಿಕ ಸಹಕಾರ ಮತ್ತು ವಿಶೇಷ ಯೋಜನೆಗಳ ವಿಭಾಗದ ನಿರ್ದೇಶಕಿ ನಿಕಿತಾ ಕೊಂಡ್ರಾಟ್ಯೆವ್, ಭಾರತವು ಆಂತರಿಕ ರಾಜ್ಯ ಸಮನ್ವಯದ ಅಂತಿಮ ಹಂತದಲ್ಲಿದೆ ಎಂದು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ರಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ವಿಚಾರಗಳಿವೆ.

ರಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

ರಷ್ಯಾ ಮತ್ತು ಭಾರತದ ನಡುವಿನ ಮಾತುಕತೆಗಳು ಇನ್ನೂ ನಡೆಯುತ್ತಿವೆ ಮತ್ತು ಜೂನ್‌ನಲ್ಲಿ ಪ್ರಯಾಣವನ್ನು ಸರಾಗಗೊಳಿಸುವ ದ್ವಿಪಕ್ಷೀಯ ಒಪ್ಪಂದದ ಕುರಿತು ಉಭಯ ರಾಷ್ಟ್ರಗಳು ಸಮಾಲೋಚನೆಗಳನ್ನು ಪ್ರಾರಂಭಿಸುತ್ತವೆ. ಅಂತಿಮಗೊಳಿಸುವಿಕೆಯ ಅನಂತರ ರಷ್ಯಾ ಮತ್ತು ಭಾರತವು ಒಟ್ಟಾಗಿ ವೀಸಾ- ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸುತ್ತದೆ ಎಂದು ರಷ್ಯಾದ ಸಚಿವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.


ಯಾವಾಗ ಸಾಧ್ಯವಾಗುತ್ತದೆ?

ಕಜಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆ “ರಷ್ಯಾ- ಇಸ್ಲಾಮಿಕ್ ವರ್ಲ್ಡ್: ಕಜಾನ್‌ಫೋರಮ್ 2024” ಭಾಗದಲ್ಲಿ ಸಚಿವರು ಈ ವರ್ಷದ ಅಂತ್ಯದ ವೇಳೆಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

“ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯ ಕೇಂದ್ರಗಳನ್ನು ಪ್ರಾರಂಭಿಸಲು ಸಜ್ಜಾಗುತ್ತಿರುವಂತೆ ರಷ್ಯಾ ಮತ್ತು ಭಾರತವು ತಮ್ಮ ಪ್ರವಾಸೋದ್ಯಮ ಸಂಬಂಧಗಳನ್ನು ಬಲಪಡಿಸಲು ಸಜ್ಜಾಗಿದೆ. ಎರಡು ರಾಷ್ಟ್ರಗಳ ನಡುವಿನ ಮೊದಲ ಸುತ್ತಿನ ಸಮಾಲೋಚನೆಯನ್ನು ಜೂನ್‌ನಲ್ಲಿ ನಿಗದಿಪಡಿಸಲಾಗಿದೆ. ಇದು ದ್ವಿಪಕ್ಷೀಯ ಒಪ್ಪಂದವನ್ನು ಅಂತಿಮಗೊಳಿಸುವ ಗುರಿಯನ್ನು ಹೊಂದಿದೆ.


ಪ್ರಸ್ತುತ ಯಾರಿಗಿದೆ ಅವಕಾಶ?

ರಷ್ಯಾ ಈಗ ಚೀನಾ ಮತ್ತು ಇರಾನ್‌ನ ಜನರಿಗೆ ತನ್ನ ವೀಸಾ ಮುಕ್ತ ಪ್ರವಾಸಿ ವಿನಿಮಯ ಕಾರ್ಯಕ್ರಮದ ಮೂಲಕ ವೀಸಾ ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡುತ್ತದೆ. ಸಚಿವರ ಪ್ರಕಾರ, ಕಾರ್ಯಕ್ರಮದ ಯಶಸ್ಸನ್ನು ಭಾರತದೊಂದಿಗೆ ಪುನರಾವರ್ತಿಸುವ ಗುರಿಯನ್ನು ದೇಶ ಹೊಂದಿದೆ. ರಷ್ಯಾ ಮತ್ತು ಚೀನಾ ನಡುವೆ ಮತ್ತು ರಷ್ಯಾ ಮತ್ತು ಇರಾನ್ ನಡುವೆ ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯವು 2023ರ ಆಗಸ್ಟ್ 1ರಂದು ಪ್ರಾರಂಭವಾಯಿತು.

Continue Reading

ದೇಶ

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

VISTARANEWS.COM


on

Constitution
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ನಾಯಕರ ಹೇಳಿಕೆಗಳು ಮೊನಚಾಗಿವೆ. ಆರೋಪ, ಪ್ರತ್ಯಾರೋಪ, ವಾಗ್ದಾಳಿ, ವಾಗ್ಬಾಣಗಳ ಜತೆಗೆ ವೈಯಕ್ತಿಕ ನಿಂದನೆ, ಆರೋಪಗಳು ಕೂಡ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್‌ ಗಾಂಧಿ ಅವರು ಸಭೆ-ಸಮಾವೇಶಗಳಲ್ಲಿ ಜನರಿಗೆ ಚೀನಾ ಸಂವಿಧಾನ ಪ್ರದರ್ಶಿಸುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.

“ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ. ರಾಹುಲ್‌ ಗಾಂಧಿ ಅವರು ಚೀನಾ ಸಂವಿಧಾನವನ್ನು ಜನರಿಗೆ ಪ್ರದರ್ಶಿಸುತ್ತಿದ್ದಾರೆಯೇ? ಈ ಕುರಿತು ಪರಿಶೀಲನೆ ಆಗಬೇಕು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಪೋಸ್ಟ್‌ ಮಾಡಿದ್ದಾರೆ.

“ನಮ್ಮ ಸಂವಿಧಾನವು ನೀಲಿ ಕವರ್‌ ಹೊಂದಿದ್ದು, ಮೂಲಭೂತ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂಬುದಾಗಿ ಮೂಲಭೂತ ಕರ್ತವ್ಯವು ತಿಳಿಸುತ್ತದೆ. ಆದರೆ, ರಾಹುಲ್‌ ಗಾಂಧಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ಚೀನಾ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಿರಬಹುದು” ಎಂದು ಕೂಡ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಕಾಂಗ್ರೆಸ್‌ ಶಾಸಕ ಅಬ್ದುಲ್‌ ರಶೀದ್‌ ಮೊಂಡಲ್‌ ತಿರುಗೇಟು ನೀಡಿದ್ದಾರೆ. “ಭಾರತ ಸಂವಿಧಾನದ ಕವರ್‌ಗಳ ಬಣ್ಣವು ಬೇರೆ ಬೇರೆ ಇದೆ. ಕವರ್‌ ಬಣ್ಣ ಬೇರೆಯಾದರೂ ಸಂವಿಧಾನದ ಆಶಯಗಳು ಒಂದೇ ಆಗಿವೆ. ಅಷ್ಟಕ್ಕೂ ನಾವು ಬಣ್ಣವನ್ನು ಓದುವುದಿಲ್ಲ. ಸಂವಿಧಾನದ ಆಶಯ, ಉದ್ದೇಶಗಳನ್ನು ಪಾಲಿಸುತ್ತೇವೆ” ಎಂದಿದ್ದಾರೆ. “ಭಾರತ ಸಂವಿಧಾನದ ಪಾಕೆಟ್‌ ಎಡಿಷನ್‌ನ ಪ್ರತಿಯು ನೀಲಿ ಬಣ್ಣದ ಕವರ್‌ ಹೊಂದಿದೆ” ಎಂದು ಕೂಡ ಕೆಲ ಜಾಲತಾಣಿಗರು ಹಿಮಂತ ಬಿಸ್ವಾ ಶರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Continue Reading
Advertisement
Pralhad Joshi
ಕರ್ನಾಟಕ4 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ5 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ5 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ6 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ6 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ7 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ13 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌