Viral Video: ಹೇ ಅಲ್ಲಾ, ನಮಗೆ ಮೋದಿಯನ್ನು ಕೊಡು, ಅವರೇ ಈ ದೇಶವನ್ನು ಸರಿ ಮಾಡಲಿ ಎಂದು ಬೇಡಿಕೊಂಡ ಪಾಕಿಸ್ತಾನಿ ಯುವಕ - Vistara News

ವಿದೇಶ

Viral Video: ಹೇ ಅಲ್ಲಾ, ನಮಗೆ ಮೋದಿಯನ್ನು ಕೊಡು, ಅವರೇ ಈ ದೇಶವನ್ನು ಸರಿ ಮಾಡಲಿ ಎಂದು ಬೇಡಿಕೊಂಡ ಪಾಕಿಸ್ತಾನಿ ಯುವಕ

1947ರಲ್ಲಿ ಭಾರತದಿಂದ ಪಾಕಿಸ್ತಾನ ಪ್ರತ್ಯೇಕವಾಗದೆ ಇದ್ದರೆ, ಇಂದು ನಾವೂ ಕೂಡ 20 ರೂಪಾಯಿಗೆ ಕೆಜಿ ಟೊಮ್ಯಾಟೋ, 150 ರೂಪಾಯಿಗೆ ಕೆಜಿ ಚಿಕನ್ ಖರೀದಿ ಮಾಡುತ್ತಿದ್ದೆವು ಎಂದು ಆ ಯುವಕ ಹೇಳಿದ್ದಾನೆ.

VISTARANEWS.COM


on

Economic Crisis in Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಕಿಸ್ತಾನದಲ್ಲಿ ಆರ್ಥಿಕತೆ ತೀವ್ರ ಹದಗೆಟ್ಟಿದೆ. ಬಹುತೇಕ ದಿವಾಳಿ ಸ್ಥಿತಿ (Economic Crisis in Pakistan) ತಲುಪಿದ್ದು, ಅಲ್ಲಿನ ಜನರಿಗೆ ಎರಡು ಹೊತ್ತಿನ ಊಟವೂ ಸರಿಯಾಗಿ ಸಿಗುತ್ತಿಲ್ಲ. ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನದಾಚೆ ತಲುಪಿ, ಕೈಗೆಟುಕದಂತಾಗಿವೆ. ಐಎಂಎಫ್​, ವಿಶ್ವ ಬ್ಯಾಂಕ್​​ಗಳೂ ಕೂಡ ಪಾಕಿಸ್ತಾನಕ್ಕೆ ಸಾಲ ಕೊಡಲು ನಿರಾಕರಿಸಿವೆ. ಹೀಗಿರುವಾಗ ಪಾಕಿಸ್ತಾನದ ಯುವಕನೊಬ್ಬ, ಅಲ್ಲಿನ ಮಾಧ್ಯಮವೊಂದರ ಜತೆ ಮಾತನಾಡುತ್ತ ‘ನಮಗೆ ಪ್ರಧಾನಿ ನರೇಂದ್ರ ಮೋದಿಯವರು ಬೇಕು, ಅವರೊಬ್ಬರೇ ಪಾಕಿಸ್ತಾನವನ್ನು ಉಳಿಸಬಲ್ಲರು’ ಎಂದು ಹೇಳಿದ್ದಾನೆ. ಹಾಗೇ, ಭಾರತದ ಪ್ರಧಾನಿಯನ್ನು ಯುವಕ ಹೊಗಳಿದ ವಿಡಿಯೊ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಪಾಕಿಸ್ತಾನದ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಸನಾ ಅಮ್ಜದ್​ ಎಂಬ ಪತ್ರಕರ್ತೆ ಪಾಕ್​​ ನಿವಾಸಿಗಳ ಬಳಿ ಇಲ್ಲಿನ ಆರ್ಥಿಕತೆ ಬಗ್ಗೆ ಪ್ರಶ್ನಿಸಿದರು. ಹಾಗೇ, ಯುವಕನೊಬ್ಬನ ಬಳಿ ಬಂದು, ‘ಪಾಕಿಸ್ತಾನದಲ್ಲಿ ಇಂಥ ಪರಿಸ್ಥಿತಿ ಇರುವಾಗ, ಅನೇಕರು ಭಾರತದಲ್ಲಿ ಆಶ್ರಯ ಪಡೆದರೂ ಸರಿ, ಪಾಕಿಸ್ತಾನದಿಂದ ಓಡಿ ಹೋಗಿ ಜೀವ ಉಳಿಸಿಕೊಳ್ಳಿ’ ಎಂಬ ಘೋಷಣೆ ಕೂಗುತ್ತ ಅನೇಕರು ರಸ್ತೆಗಳಲ್ಲಿ ಮೆರವಣಿಗೆ ಸಾಗುತ್ತಿರುವುದು ಯಾಕೆ ಎಂದು ಕೇಳಿದರು. ಅದಕ್ಕೆ ಉತ್ತರಿಸಿದ ಯುವಕ ‘ಆ ಘೋಷಣೆ ಸರಿಯಾಗಿಯೇ ಇದೆ, ನಾನೂ ಪಾಕಿಸ್ತಾನದಲ್ಲಿ ಹುಟ್ಟಬಾರದಿತ್ತು ಎಂದೇ ಅನ್ನಿಸುತ್ತಿದೆ’ ಎಂದು ಮೊದಲು ಹೇಳಿದ್ದಾನೆ.

‘1947ರಲ್ಲಿ ಭಾರತದಿಂದ ಪಾಕಿಸ್ತಾನ ಪ್ರತ್ಯೇಕವಾಗದೆ ಇದ್ದರೆ, ಇಂದು ನಾವೂ ಕೂಡ 20 ರೂಪಾಯಿಗೆ ಕೆಜಿ ಟೊಮ್ಯಾಟೋ, 150 ರೂಪಾಯಿಗೆ ಕೆಜಿ ಚಿಕನ್​, ​ 50 ರೂಪಾಯಿಗೆ ಲೀಟರ್​ ಪೆಟ್ರೋಲ್​ ಖರೀದಿಸಬಹುದಿತ್ತು. ಆಗ ನಾವು ಒಂದು ಇಸ್ಲಾಂ ರಾಷ್ಟ್ರವನ್ನೇನೋ ಪಡೆದೆವು. ಆದರೆ ದುರದೃಷ್ಟಕ್ಕೆ ಇಲ್ಲಿ ಇಸ್ಲಾಂ ಧರ್ಮವನ್ನು ಸ್ಥಾಪಿಸಲು ಸಾಧ್ಯವೇ ಆಗಲಿಲ್ಲ. ಭಾರತದ ಪ್ರಧಾನಿ ನರೇಂದ್ರ ಮೋದಿ ನಿಜಕ್ಕೂ ಅತ್ಯುತ್ತಮ ಆಡಳಿತಗಾರರು. ಅವರ ದೇಶದ ಜನರು ಅವರನ್ನು ತುಂಬ ಗೌರವಿಸುತ್ತಾರೆ. ಅವರು ಹೇಳಿದ್ದನ್ನು ಅನುಸರಿಸುತ್ತಾರೆ. ನಮಗೆ ಮೋದಿಯವರು ಸಿಕ್ಕಿದ್ದರೆ, ಇಮ್ರಾನ್ ಖಾನ್​, ಶರೀಫ್​, ಫರ್ವೇಜ್​ ಮುಷರಫ್​ ಯಾರೂ ಬೇಡವಾಗಿತ್ತು. ಈಗಾದರೂ ಸರಿ, ನಮಗೆ ನರೇಂದ್ರ ಮೋದಿಯ ಅಗತ್ಯವಿದೆ. ಅವರು ಮಾತ್ರ ಈ ದೇಶವನ್ನು ಮತ್ತೊಮ್ಮೆ ಸರಿಪಡಿಸಬಹುದು. ಅಭಿವೃದ್ಧಿಗೊಳಿಸಬಹುದು’ ಎಂದು ಆ ಯುವಕ ಹೇಳಿದ್ದಾನೆ.

ಇದನ್ನೂ ಓದಿ: Javed Akhtar: 26/11 ಮುಂಬೈ ದಾಳಿಕೋರರು ಇನ್ನೂ ನಿಮ್ಮಲ್ಲೇ ಇದ್ದಾರೆ! ಪಾಕಿಸ್ತಾನಕ್ಕೆ ಅಖ್ತರ್ ಖಡಕ್ ಉತ್ತರ

‘ನಾವು ಮೋದಿ ಆಡಳಿತದಡಿಯಲ್ಲಿ ಬದುಕಲು ಸಿದ್ಧರಿದ್ದೇವೆ. ಮೋದಿ ಮಹಾನ್​ ನಾಯಕರು. ಅವರು ಕೆಟ್ಟವರಲ್ಲ. ಯಾವಾಗ ನಾವು ನಮ್ಮ ಮಕ್ಕಳ ಹೊಟ್ಟೆ ತುಂಬಿಸಲೂ ವಿಫಲರಾಗುತ್ತೇವೋ, ಆಗ ನಾವಿರುವ ನಮ್ಮ ದೇಶಕ್ಕೇ ಶಾಪ ಹಾಕಲು ಶುರು ಮಾಡುತ್ತೇವೆ. ದಯವಿಟ್ಟು ಮೋದಿಯನ್ನು ನಮಗೆ ಕೊಡು, ಅವರು ನಮ್ಮ ದೇಶವನ್ನು ಆಳುವಂತೆ ಮಾಡು ಎಂದು ನಾವು ಅಲ್ಲಾನನ್ನು ಬೇಡಿಕೊಳ್ಳುತ್ತೇವೆ’ ಎಂದು ಆ ಯುವಕ ಕಣ್ತುಂಬಿಕೊಂಡು ಹೇಳಿರುವದನ್ನು ವಿಡಿಯೊದಲ್ಲಿ ನೋಡಬಹುದಾಗಿದೆ.

ಪತ್ರಕರ್ತೆಯೊಂದಿಗೆ ಪಾಕಿಸ್ತಾನಿ ಯುವಕನ ಮಾತು:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

America:ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮೊಹಮ್ಮದ್ ಇಕ್ಬಾಲ್ ಬರೆದ ದೇಶಭಕ್ತಿ ಗೀತೆಯನ್ನು ವಾರ್ಷಿಕ ಕಾರ್ಯಕ್ರಮಕ್ಕೆ ಅಧ್ಯಕ್ಷರಿಂದ ಆಹ್ವಾನಿಸಲ್ಪಟ್ಟ ಭಾರತೀಯ ಅಮೆರಿಕನ್ನರ ಕೋರಿಕೆಯ ಮೇರೆಗೆ ಶ್ವೇತಭವನದ ಮೆರೈನ್ ಬ್ಯಾಂಡ್ ಎರಡು ಬಾರಿ ನುಡಿಸಿತು. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವು ಭಾರತೀಯರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

America
Koo

ವಾಷಿಂಗ್ಟನ್‌: ಅಮೆರಿಕ(America)ದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತದ ದೇಶಭಕ್ತಿಗೀತೆ ಸಾರಾ ಜಹಾನ್‌ ಸೇ ಅಚ್ಛಾ ಹಾಡು ಮೊಳಗಿದೆ. ಶ್ವೇತಭವನದಲ್ಲಿ ಆಯೋಜನೆಗೊಂಡಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ (AANHPI) ಪಾರಂಪರ್ಯ ಮಾಸಾಚರಣೆ(Heritage Month) ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌(Joe Biden) ಮತ್ತು ಉಪಾಧ್ಯಕ್ಷ ಕಮಲಾ ಹ್ಯಾರೀಸ್‌(Kamala Harris) ಭಾಗಿಯಾಗಿದ್ದರು. ಈ ವೇಳೆ ಶ್ವೇತಭವನದ ಮೆರೈನ್ ಬ್ಯಾಂಡ್ ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ(Sare Jahan Se Achha Hindustan Hamara) ಹಾಡನ್ನು ಹಾಡಿ ಎಲ್ಲರನ್ನು ರಂಜಿಸಿದೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮೊಹಮ್ಮದ್ ಇಕ್ಬಾಲ್ ಬರೆದ ದೇಶಭಕ್ತಿ ಗೀತೆಯನ್ನು ವಾರ್ಷಿಕ ಕಾರ್ಯಕ್ರಮಕ್ಕೆ ಅಧ್ಯಕ್ಷರಿಂದ ಆಹ್ವಾನಿಸಲ್ಪಟ್ಟ ಭಾರತೀಯ ಅಮೆರಿಕನ್ನರ ಕೋರಿಕೆಯ ಮೇರೆಗೆ ಶ್ವೇತಭವನದ ಮೆರೈನ್ ಬ್ಯಾಂಡ್ ಎರಡು ಬಾರಿ ನುಡಿಸಿತು. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವು ಭಾರತೀಯರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಶ್ವೇತಭವನದ ರೋಸ್‌ ಗಾರ್ಡನ್‌ ಪ್ರದೇಶದಲ್ಲಿ AANHPI ಪಾರಂಪರಿಕ ಮಾಸಾಚರಣೆಯನ್ನು ಬಹಳ ಅದ್ಭುತವಾಗಿ ಆಚರಣೆ ಮಾಡಲಾಗಿತ್ತು. ಅತ್ಯುತ್ತಮ ಭಾಗವೆಂದರೆ, ನಾನು ಶ್ವೇತಭವನಕ್ಕೆ ಕಾಲಿಟ್ಟಾಗ, ಸಂಗೀತಗಾರರು ನನ್ನನ್ನು ‘ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ’ ನುಡಿಸುತ್ತಾ ಸ್ವಾಗತಿಸಿದರು. ಇಡೀ ವಿಶ್ವಕ್ಕಿಂತ ಉತ್ತಮವಾದುದು ನಮ್ಮ ಹಿಂದೂಸ್ತಾನ್” ಎಂದು ಭಾರತೀಯ ಅಮೆರಿಕನ್ ಸಮುದಾಯದ ನಾಯಕ ಅಜಯ್ ಜೈನ್ ಭುಟೋರಿಯಾ ರೋಸ್ ಗಾರ್ಡನ್ ಸ್ವಾಗತದ ನಂತರ ಮಾಧ್ಯಮಗಳಿಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದರು. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಬಾರಿ ಶ್ವೇತಭವನದಲ್ಲಿ ಜನಪ್ರಿಯ ಭಾರತೀಯ ದೇಶಭಕ್ತಿ ಗೀತೆಯನ್ನು ನುಡಿಸಲಾಗಿದೆ. ಕಳೆದ ವರ್ಷ ಜೂನ್ 23 ರಂದು ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಅಮೆರಿಕ ಭೇಟಿಯ ಸಮಯದಲ್ಲಿ ದೇಶಭಕ್ತಿಗೀತೆಯನ್ನು ಹಾಡಲಾಗಿತ್ತು.

ಇದನ್ನೂ ಓದಿ:Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

ಇನ್ನು ಅಜಯ್‌ ಜೈನ್‌ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಕೂಡ ಮಾಡಿದ್ದು, ಶ್ವೇತಭವನದಲ್ಲಿ ಜೋ ಬೈಡೆನ್‌ ಮತ್ತು ಕಮಲಾ ಹ್ಯಾರಿಸ್‌ ಇದ್ದ ಕಾರ್ಯಕ್ರಮದಲ್ಲಿ ಭಾರತೀಯ ದೇಶಭಕ್ತಿಗೀತೆ ಸಾರಾ ಜಹಾನ್‌ ಸೇ ಅಚ್ಛಾ ಗೀತೆಯನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ದೇಶೀಯ ಆಹಾರವಾದ ಪಾನಿಪುರಿ ಮತ್ತು ಖೋಯಾಗಳನ್ನು ಸರ್ವ್‌ ಮಾಡಲಾಯಿತು. ಭಾರತ ಮತ್ತು ಅಮೆರಿಕದ ನಂಟು ಭದ್ರವಾಗಿದೆ ಎಂದು ಹೇಳಿದರು.

Continue Reading

ವಿದೇಶ

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

US sanction: ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿದೆ.

VISTARANEWS.COM


on

US Sanction
Koo

ವಾಷಿಂಗ್ಟನ್‌: ಇರಾನ್‌(Iran) ಜೊತೆಗೆ ಭಾರತ ಚಬಾಹರ್‌ ಬಂದರು(Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿದೆ. ಇರಾನ್‌ ಜೊತೆಗೆ ವ್ಯಾಪಾರ-ವಹಿವಾಟಿಗಳನ್ನು ಮುಂದುವರೆಸಿದರೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಅಮೆರಿಕ ಎಲ್ಲಾ ದೇಶಗಳಿಗೆ ಎಚ್ಚರಿಸಿದೆ. ಸ್ಟೇಟ್‌ ಡಿಪಾರ್ಟ್‌ಮೆಂಟ್‌ ಉಪ ವಕ್ತಾರ ವೇದಾಂತ್‌ ಪಟೇಲ್‌(State Department Deputy Spokesperson Vedant Patel) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಚಬಾಹರ್‌ ಬಂದರಿಗೆ ಸಂಬಂಧಿಸಿದಂತೆ ಭಾರತ-ಇರಾನ್‌ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಇರಾನ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ತನ್ನದೇ ಆದ ವಿದೇಶಾಂಗ ನೀತಿ ಅನುಸರಿಸಲು ಭಾರತ ಮುಕ್ತವಾಗಿದೆ. ಆದರೆ ಇರಾನ್‌ ಮೇಲೆ ಅಮೆರಿಕ ನಿರ್ಬಂಧ ಹೇರಿರುವುದನ್ನು ಭಾರತ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿದೆ.

ಎರಡು ವಾರಗಳ ಹಿಂದೆ ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿತ್ತು. ಇದರಲ್ಲಿ ಭಾರತ ಮೂರು ಕಂಪನಿಗಳು(Indian based firms) ಸೇರಿದ್ದವು. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿತ್ತು.

ಇನ್ನು ಇರಾನ್‌ನ ಸಾಗರೋತ್ತರ ವ್ಯಾಪಾರ ವಹಿವಾಟು ನೋಡಿಕೊಳ್ಳುತ್ತಿರುವ ಕಂಪನಿಗಳಲ್ಲಿ ಸಹರಾ ಥಂಡರ್‌ ಪ್ರಮುಖವಾಗಿದೆ. ಈ ಕಂಪನಿಗೆ ಭಾರತೀಯ ಮೂಲದ ಮೂರು ಕಂಪನಿಗಳು ಸಹಾಯ ನೀಡುತ್ತಿವೆ. ಹೀಗಾಗಿ ಭಾರತೀಯ ಮೂಲದ ಜೆನ್‌ ಶಿಪ್ಪಿಂಗ್‌, ಪೋರ್ಟ್‌ ಇಂಡಿಯಾ ಪ್ರೈವೆಟ್‌ ಲಿಮಿಟೆಡ್‌ ಮತ್ತು ಸೀ ಆರ್ಟ್‌ ಶಿಪ್‌ ಮ್ಯಾನೇಜ್‌ಮೆಂಟ್‌(OPC) ಪ್ರೈವೆಟ್‌ ಲಿಮಿಟೆಡ್‌ಗೆ ಅಮೆರಿಕ ನಿರ್ಬಂಧ ವಿಧಿಸಿದೆ.

ಸಹಾರಾ ಥಂಡರ್‌ ಕಂಪನಿ ಇರಾನ್‌ ಸೇನೆಯ ಪರವಾಗಿ ಇರಾನಿಯನ್‌ ಸರಕುಗಳನ್ನು ಚೀನಾ, ರಷ್ಯಾ ಮತ್ತು ವೆನೆಜುವೆಲಾಗಳಿಗೆ ಸಾಗಾಟ ಮಾಡುತ್ತಿದೆ. ಇದೀಗ ಈ ಕಂಪನಿ ಯುಎಇ ಮೂಲದ ಸೇಫ್ ಸೀಸ್ ಶಿಪ್ ಮ್ಯಾನೇಜ್‌ಮೆಂಟ್ ಎಫ್‌ಜೆಇನ ಕುಕ್ ಐಲ್ಯಾಂಡ್ಸ್-ಫ್ಲ್ಯಾಗ್ಡ್ ನೌಕೆ CHEM (IMO 9240914) ಗಾಗಿ ಭಾರತ ಮೂಲದ ಝೆನ್ ಶಿಪ್ಪಿಂಗ್ ಮತ್ತು ಪೋರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಭಾರತ ಮೂಲದ ಸೀ ಆರ್ಟ್ ಶಿಪ್ ಮ್ಯಾನೇಜ್‌ಮೆಂಟ್ (OPC) ಪ್ರೈವೇಟ್ ಲಿಮಿಟೆಡ್ ಮತ್ತು ಯುಎಇ ಮೂಲದ ಕಂಪನಿ ಟ್ರಾನ್ಸ್ ಗಲ್ಫ್ ಏಜೆನ್ಸಿ LLC ಸಹಾರಾ ಥಂಡರ್‌ಗೆ ಬೆಂಬಲವಾಗಿ ಹಡಗು ನಿರ್ವಹಣಾ ಸೇವೆಗಳನ್ನು ಒದಗಿಸಲು ಒಟ್ಟಾಗಿ ಕೆಲಸ ಮಾಡಿದೆ ಎಂದು ಅಮೆರಿಕ ಹೇಳಿದೆ.

ಇದನ್ನೂ ಓದಿ:Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

ರಷ್ಯಾ-ಉಕ್ರೇನ್‌ ಯುದ್ಧದ ಸಂದರ್ಭದಲ್ಲಿ ಇರಾನ್‌, ರಷ್ಯಾಗೆ ತನ್ನ ಬೆಂಬಲ ಸೂಚಿಸಿತ್ತು. ಅಲ್ಲದೇ ಇದೀಗ ಇಸ್ರೇಲ್‌ ಮೇಲೂ ದಾಳಿ ಮಾಡುವ ಮೂಲಕ ತನ್ನ ಉದ್ದಟತನ ಮೆರೆದಿದೆ. ಡ್ರೋನ್‌, ಯುದ್ಧ ಸಾಮಾಗ್ರಿಗಳು ಉಗ್ರರ ಕೈಗೆ ಸುಲಭವಾಗಿ ಸಿಗುವಂತೆ ಮಾಡುವ ಮೂಲಕ ವಿನಾಶಕಾರಿಯಾಗಿ ಇರಾನ್‌ ಬೆಳೆಯುತ್ತಿದೆ ಎಂದು ಅಮೆರಿಕ ಆತಂಕ ವ್ಯಕ್ತಪಡಿಸಿದೆ.

Continue Reading

ವಿದೇಶ

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

Israel-Hamas Conflict: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಈ ಮಧ್ಯೆ ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Israel-Hamas Conflict
Koo

ಗಾಜಾ: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ (Israel-Hamas Conflict) ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಇಸ್ರೇಲ್‌ ಸತತವಾಗಿ ದಾಳಿ ನಡೆಸಿ, ಉಗ್ರರನ್ನು ಸದೆಬಡಿಯುತ್ತಿದೆ. ಈ ಮಧ್ಯೆ ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

ʼʼಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಗಾಜಾದಲ್ಲಿ ಮೊದಲ ಬಾರಿ ವಿಶ್ವಸಂಸ್ಥೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ರಫಾದ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಅವರಿದ್ದ ವಾಹನ ಅಪಘಾತಕ್ಕೆ ಈಡಾಗಿ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಮತ್ತೊಬ್ಬ ಡಿಎಸ್ಎಸ್ ಸಿಬ್ಬಂದಿ ಗಾಯಗೊಂಡಿದ್ದಾರೆʼʼ ಎಂದು ವರದಿಯೊಂದು ತಿಳಿಸಿದೆ.

ಸಂತಾಪ

ಘಟನೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ʼʼವಿಶ್ವಸಂಸ್ಥೆಯ ಸುರಕ್ಷತಾ ಮತ್ತು ಭದ್ರತಾ ಇಲಾಖೆಯ ಸಿಬ್ಬಂದಿಯೊಬ್ಬರು ಸೋಮವಾರ ಬೆಳಿಗ್ಗೆ ರಾಫಾದ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಮೃತಪಟ್ಟಿದ್ದಾರೆ ಎನ್ನುವ ವಿಚಾರ ತಿಳಿದು ತೀವ್ರ ದುಃಖವಾಗಿದೆʼʼ ಎಂದು ಬರೆದುಕೊಂಡು ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ವಿಶ್ವಸಂಸ್ಥೆಯ ಸಿಬ್ಬಂದಿಯ ಮೇಲಿನ ಎಲ್ಲ ದಾಳಿಗಳನ್ನು ಗುಟೆರೆಸ್ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಜಾದಲ್ಲಿನ ಸಂಘರ್ಷವು ನಾಗರಿಕರ ಮೇಲೆ ಮಾತ್ರವಲ್ಲದೆ ಮಾನವೀಯ ಕಾರ್ಯಕರ್ತರ ಮೇಲೂ ಭಾರಿ ಹಾನಿಯನ್ನುಂಟು ಮಾಡುತ್ತಿರುವುದು ಖಂಡನೀಯ. ಮಾನವೀಯ ಕದನ ವಿರಾಮಕ್ಕಾಗಿ ಮತ್ತು ಎಲ್ಲ ಒತ್ತೆಯಾಳುಗಳ ಬಿಡುಗಡೆಗಾಗಿ ಆಗ್ರಹಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2023ರ ಅಕ್ಟೋಬರ್ 7ರಂದು ಆರಂಭವಾದ ಸಂಘರ್ಷದಲ್ಲಿ ಇದುವರೆಗೆ ಇಸ್ರೇಲ್‌ನಲ್ಲಿ 33 ಮಕ್ಕಳು ಸೇರಿದಂತೆ 1,200ಕ್ಕೂ ಹೆಚ್ಚು ಇಸ್ರೇಲಿಗಳು ಮತ್ತು ವಿದೇಶಿ ಪ್ರಜೆಗಳು ಸಾವನ್ನಪ್ಪಿದ್ದಾರೆ. ಜತೆಗೆ ಗಾಜಾದಲ್ಲಿ ಕನಿಷ್ಠ 35,091 ಪ್ಯಾಲೆಸ್ತೀನ್‌ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 78,827 ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (Coordination of Humanitarian Affairs) ತಿಳಿಸಿದೆ. 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್‌ಗೆ ನುಗ್ಗಿದಾಗ ಗಾಜಾದಲ್ಲಿ ಯುದ್ಧ ಪ್ರಾರಂಭವಾಗಿತ್ತು. ಹಮಾಸ್‌ ಉಗ್ರರು 1,200 ಜನರನ್ನು ಕೊಂದು 253 ಒತ್ತೆಯಾಳುಗಳನ್ನು ವಶಪಡಿಸಿಕೊಂಡಿದೆ ಎಂದು ಇಸ್ರೇಲ್‌ ಹೇಳಿದೆ.

ಇದನ್ನೂ ಓದಿ: Israel Palestine War: ಗಾಜಾದಲ್ಲಿ ರಕ್ತದೋಕುಳಿ; ಆಹಾರಕ್ಕಾಗಿ ಬಂದವರ ಮೇಲೆ ದಾಳಿ; ಕನಿಷ್ಠ 104 ಮಂದಿ ಸಾವು

ಅಪೌಷ್ಟಿಕತೆ

ಗಾಜಾ ಪಟ್ಟಿಯಾದ್ಯಂತ ಜನಸಂಖ್ಯೆಯ ಕಾಲು ಭಾಗದಷ್ಟು ಜನರು- ವಿನಾಶಕಾರಿ ಮಟ್ಟದ ಆಹಾರ ಅಭದ್ರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಕ್ಷಾಮದ ಅಪಾಯದಲ್ಲಿದ್ದಾರೆ. ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳಲ್ಲಿ ಒಬ್ಬರು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಎಂದು ವಿಶ್ವಸಂಸ್ಥೆಯ ಹಿರಿಯ ನೆರವು ಅಧಿಕಾರಿಯೊಬ್ಬರು ಈ ಹಿಂದೆ ಎಚ್ಚರಿಸಿದ್ದರು.

Continue Reading

ದೇಶ

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Maldives: ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲ ತಿಂಗಳ ಹಿಂದೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇಷ್ಟಾದರೂ, ಚೀನಾ ಯೋಜನೆ, ದುಡ್ಡಿನ ಮುಲಾಜಿನಿಂದಾಗಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ವಾಪಸ್‌ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, “ಭಾರತವು ಮಾಲ್ಡೀವ್ಸ್‌ಗೆ ನೀಡಿರುವ ಮೂರು ಯುದ್ಧವಿಮಾನಗಳನ್ನು ನಿರ್ವಹಿಸುವ ಪೈಲಟ್‌ಗಳೇ ನಮ್ಮಲ್ಲಿಲ್ಲ” ಎಂಬುದಾಗಿ ಮಾಲ್ಡೀವ್ಸ್‌ ತಿಳಿಸಿದೆ. ಇದು ಮಾಲ್ಡೀವ್ಸ್‌ (Maldives) ಸೇನೆಯ ಅದಕ್ಷತೆಗೆ ನಿದರ್ಶನ ಎಂದು ಹೇಳಲಾಗುತ್ತಿದೆ.

ಮಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಸ್ಸನ್‌ ಮೌಮೂನ್‌, “ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸುವ ಕೌಶಲವು ನಮ್ಮ ಪೈಲಟ್‌ಗಳಿಗೆ ಇಲ್ಲ. ಅಂತಹ ಪರವಾನಗಿ ಹೊಂದಿರುವ ಪೈಲಟ್‌ಗಳು ಮಾಲ್ಡೀವ್ಸ್‌ ಸೇನೆಯಲ್ಲಿ ಇಲ್ಲ” ಎಂದು ಹೇಳಿದ್ದಾರೆ. ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Continue Reading
Advertisement
Money Guide
ಮನಿ-ಗೈಡ್9 mins ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ18 mins ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

DK Shivakumar hits back at HD Kumaraswamy
ರಾಜಕೀಯ37 mins ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು43 mins ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ44 mins ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ1 hour ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ1 hour ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ1 hour ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ1 hour ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ1 hour ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ4 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು5 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ12 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ22 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ22 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ23 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ23 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌